Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಸಹಕಾರ ಸಂಘಗಳಿಂದ ಮಾತ್ರ ಸಾಧ್ಯವಾಗಲಿದೆ ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಮಂಡ್ಯ ಜಿಲ್ಲಾ ಸಹಕಾರ ಒಕ್ಕೂಟ, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ತೈಲೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಶ್ರಯದಲ್ಲಿ ಮದ್ದೂರು ನಗರದ ಟಿಎಪಿಸಿಎಂಎಸ್ ಆವರಣದಲ್ಲಿ ಆಯೋಜಿಸಿದ್ದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತಿಚಿನ ದಿನಗಳಲ್ಲಿ ಸಹಕಾರ ಕ್ಷೇತ್ರದಲ್ಲಿ ಸಂಘಗಳ ಪಾತ್ರ ಅಪಾರವಾಗಿದ್ದು, ರೈತರ ಜೀವನಾಡಿಯಾಗುತ್ತಿವೆ. ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನಗಳಿಂದ ಅಸಾಧ್ಯವಾಗಿದ್ದು, ಸಹಕಾರ ಸಂಘಗಳಿಂದ ಮಾತ್ರ ಸಾಧ್ಯವಾಗಲಿದೆ. ರೈತರಿಗೆ ಕಾಲ ಕಾಲಕ್ಕೆ ಸಾಲ ಸೌಲಭ್ಯ ನೀಡಿ ರೈತರ ಬೆನ್ನೆಲುಬಾಗಿ ನಿಂತಿರುವುದರಿಂದ ರೈತರ ಬದುಕು ಕೂಡ ಹಸನಾಗುತ್ತಿದೆ. ಸಹಕಾರ ಸಂಸ್ಥೆಗಳು ಇನ್ನಷ್ಟು ಅಭಿವೃದ್ಧಿಯಾಗಬೇಕು ಇದರಿಂದ ರೈತರ ಬದುಕು ಸುಧಾರಣೆಗೊಳ್ಳಲಿದ್ದು, ತಾಲೂಕಿನ ಸಹಕಾರ…
ಬೆಂಗಳೂರು: ಸಾರ್ವಜನಿಕ ಮಹತ್ತ್ವದ ಯೋಜನೆಗಳಿಗೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಗಳು ಪೂರ್ವಾನ್ವಯವಾಗುವಂತೆ ಅನುಮೋದನೆಗಳನ್ನು ನೀಡಬಾರದೆಂದು ಈ ವರ್ಷದ ಮೇ ತಿಂಗಳಲ್ಲಿ ತಾನು ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಹಿಂಪಡೆದುಕೊಂಡಿರುವುದು ಸ್ವಾಗತಾರ್ಹವಾಗಿದೆ. ಇದರಿಂದಾಗಿ, ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ಇದ್ದ ಅಡೆತಡೆ ಬಹುಮಟ್ಟಿಗೆ ನಿವಾರಣೆಯಾಗಿದ್ದು, ನಿರೀಕ್ಷೆಯಂತೆ ಎಲ್ಲವೂ ಸುಗಮವಾಗಿ ನಡೆದರೆ ಯುಗಾದಿ ವೇಳೆಗೆ ಈ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡುವ ವಿಶ್ವಾಸ ಇದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಬಗ್ಗೆ ಮಂಗಳವಾರ ಪ್ರತಿಕ್ರಿಯಿಸಿರುವ ಅವರು, `ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿ ನಿಂತಿದೆ. ಆದರೆ, ಸುಪ್ರೀಂಕೋರ್ಟಿನಲ್ಲಿದ್ದ ಪರಿಸರ ಸಂಬಂಧಿ ಪ್ರಕರಣದಿಂದಾಗಿ ಏನೂ ಮಾಡುವಂತಿರಲಿಲ್ಲ. ಸುಪ್ರೀಂಕೋರ್ಟಿನ ನಿರ್ಧಾರದಿಂದ ಈಗ ಒಂದು ಹೆಜ್ಜೆ ಮುಂದಕ್ಕೆ ಬಂದಿದ್ದೇವೆ. ಈ ವಿಚಾರ ಈಗಲೂ ನ್ಯಾಯಾಂಗದ ವಿಚಾರಣೆಯಲ್ಲಿದೆ ಎನ್ನುವ ಅರಿವಿದೆ. ಆದರೂ ಇವತ್ತಿನ ನಿಲುವು ನಮ್ಮ ಕಿತ್ತೂರು ಕರ್ನಾಟಕ ಭಾಗಕ್ಕೆ ನಿರಾಳತೆ ತಂದಿದೆ ‘ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ವಿಜಯಪುರ ವ್ಯಾಪಾರಿಗಳ ಒಕ್ಕೂಟದ…
ತುಮಕೂರು: ಬಾಕಿ ಇರುವಂತ ಸೆಪ್ಟೆಂಬರ್, ಅಕ್ಟೋಬರ್ ಎರಡು ತಿಂಗಳ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಇನ್ನೂ ಸೆಪ್ಟೆಂಬರ್, ಅಕ್ಟೋಬರ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಿಲ್ಲ. ಆದಷ್ಟು ಬೇಗ ಗೃಹಲಕ್ಷ್ಮೀ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದರು. ನಮ್ಮ ಗೃಹ ಲಕ್ಷ್ಮಿಯನ್ನು ಕಾಪಿ ಮಾಡಿ, ಬಿಜೆಪಿಯವರು ಎಲ್ಲಾ ಕಡೆ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ಕರ್ನಾಟಕ ರೋಲ್ ಮಾಡಲ್ ಮಾಡಿಕೊಂಡು ಹೋಗುತ್ತಿದ್ದಾರೆ ಎಂದರು. https://kannadanewsnow.com/kannada/pocso-case-against-murughashree-of-chitradurga-court-verdict-announced-on-nov-26/ https://kannadanewsnow.com/kannada/priyank-kharge-is-limitless-in-telling-lies-cheater-narayanaswamy/
ಚಿತ್ರದುರ್ಗ: ಜಿಲ್ಲೆಯ ಮುರುಘಾಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಮುಕ್ತಾಯಗೊಂಡಿದೆ. ಹೀಗಾಗಿ ನವೆಂಬರ್.26ರಂದು ಮುರುಘಾಶ್ರೀ ಪ್ರಕರಣದ ತೀರ್ಪನ್ನು ಕೋರ್ಟ್ ಪ್ರಕಟಿಸಲಿದೆ. ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಸಂಬಂಧ ಜೈಲು ಪಾಲು ಆಗಿದ್ದರು. ಪ್ರಕರಣದ ವಿಚಾರಣೆಯನ್ನು ಚಿತ್ರದುರ್ಗದ 2ನೇ ಅಪರ ಸೆಷನ್ಸ್ ಕೋರ್ಟ್ ನಡೆಸಿತ್ತು. ವಾದ-ಪ್ರತಿವಾದ ಆಲಿಸಿದ್ದಂತ ಕೋರ್ಟ್, ನವೆಂಬರ್.26ರಂದು ತೀರ್ಪು ಪ್ರಕಟಿಸುವುದಾಗಿ ದಿನಾಂಕ ನಿಗದಿ ಪಡಿಸಿದೆ. ಸರ್ಕಾರಿ ವಕೀಲ ಜಗದೀಶ್ ಅವರಿಂದ ಪ್ರತಿ ವಾದ ಮಂಡನೆ ಮುಕ್ತಾಯಗೊಂಡ ಹಿನ್ನಲೆಯಲ್ಲಿ, ತೀರ್ಪನ್ನು ನ್ಯಾಯಮೂರ್ತಿ ಗಂಗಾಧರಪ್ಪ ಚನ್ನಬಸಪ್ಪ ಹಡಪದ್ ಅವರು ಕಾಯ್ದಿರಿಸಿದ್ದಾರೆ. ನವೆಂಬರ್.26ರಂದು ಮುರುಘಾಶ್ರೀ ವಿರುದ್ಧದ ಪೋಕ್ಸೋ ಕೇಸ್ ತೀರ್ಪು ಪ್ರಕಟಿಸಲಿದ್ದಾರೆ. https://kannadanewsnow.com/kannada/minister-lakshmi-hebbalkars-good-news-for-anganwadi-workers-honorarium-increased-by-1000/ https://kannadanewsnow.com/kannada/priyank-kharge-is-limitless-in-telling-lies-cheater-narayanaswamy/
ಬೆಂಗಳೂರು: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಎನ್ನುವಂತೆ ಮುಂದಿನ ಬಜೆಟ್ ನಲ್ಲಿ 1,000 ಗೌರವಧನ ಹೆಚ್ಚಳ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಬಾರಿ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ 1,000 ಗೌರವಧನ ಹೆಚ್ಚಳ ಮಾಡಲಾಗಿದೆ. ಮತ್ತೆ ಮುಂದಿನ ಬಜೆಟ್ ನಲ್ಲಿ ಗೌರವಧನವನ್ನು 1,000 ಹೆಚ್ಚಳ ಮಾಡುವುದಾಗಿ ತಿಳಿಸಿದರು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವಧನ ಹೆಚ್ಚಳದ ಬಗ್ಗೆ ಈಗಾಗಲೇ ಸಿಎಂ ಸಿದ್ಧರಾಮಯ್ಯ ಜೊತೆಗೆ ಚರ್ಚೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದಾರೆ ಎಂದರು. https://kannadanewsnow.com/kannada/new-government-to-be-formed-in-bihar-on-nov-20-nitish-takes-oath-as-cm-for-10th-time/ https://kannadanewsnow.com/kannada/priyank-kharge-is-limitless-in-telling-lies-cheater-narayanaswamy/
BREAKING: ನ.20ರಂದು ಬಿಹಾರದಲ್ಲಿ ಹೊಸ ಸರ್ಕಾರ ಅಸ್ಥಿತ್ವಕ್ಕೆ: 10ನೇ ಬಾರಿಗೆ ಸಿಎಂ ಆಗಿ ನಿತೀಶ್ ಪ್ರಮಾಣವಚನ ಸ್ವೀಕಾರ
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಭರ್ಜರಿ ಗೆಲುವು ಸಾಧಿಸಿತ್ತು. ಈ ಬೆನ್ನಲ್ಲೇ ನವೆಂಬರ್.20ರಂದು ಬಿಹಾರದಲ್ಲಿ ಹೊಸ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ. ಸತತ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಹಾರದಲ್ಲಿ ನವೆಂಬರ್.20ರಂದು ಬೆಳಗ್ಗೆ 11ರಿಂದ 12ರವರೆಗೆ ನೂತನ ಸರ್ಕಾರ ಪದಗ್ರಹಣ ಸಮಾರಂಭ ನಡೆಯಲಿದೆ. ಬಿಹಾರದ ಪಾಟ್ನಾದ ಗಾಂಧಿ ಮೈದಾನದಲ್ಲಿ 10ನೇ ಬಾರಿ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನವೆಂಬರ್.20ರಂದು ಬಿಹಾರದಲ್ಲಿ ನೂತನ ಸರ್ಕಾರ ಅಸ್ಥಿತ್ವದ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. https://kannadanewsnow.com/kannada/shivamogga-if-the-cooperative-society-is-not-preserved-the-lives-of-farmers-will-be-barren-mla-gopalakrishna-belur/ https://kannadanewsnow.com/kannada/priyank-kharge-is-limitless-in-telling-lies-cheater-narayanaswamy/
ಶಿವಮೊಗ್ಗ : ಸಹಕಾರಿ ಸಂಸ್ಥೆಗಳಿಗೆ ನಂಬಿಕೆ ಜೀವಾಳ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರನ್ನು ರಕ್ಷಣೆ ಮಾಡಬೇಕು. ರೈತರ ಮೊಗದಲ್ಲಿ ಸಂತಸವಿದ್ದಾಗ ಮಾತ್ರ ದೇಶ ಸುಭೀಕ್ಷವಾಗಿರುತ್ತದೆ. ಒಂದು ವೇಳೆ ಸಹಕಾರಿ ಸಂಸ್ಥೆಗಳನ್ನು ಉಳಿಸಿಕೊಳ್ಳದಿದ್ದರೇ ರೈತರ ಬದುಕೇ ಬರಡಾಗಲಿದೆ ಎಂಬುದಾಗಿ ಶಾಸಕ ಹಾಗೂ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಶೃಂಗೇರಿ ಶಂಕರಮಠದಲ್ಲಿ ಮಂಗಳವಾರ ಜಿಲ್ಲಾ ಸಹಕಾರಿ ಯೂನಿಯನ್, ಸಹಕಾರ ಮಹಾಮಂಡಲ ಸೇರಿ ವಿವಿಧ ಸಹಕಾರಿ ಸಂಘಟನೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಪ್ರಪಂಚದಲ್ಲಿ ಭಾರತ ಸಹಕಾರಿ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚು ಸಶಕ್ತವಾಗಿದೆ. ರಾಜ್ಯದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಂ. 1 ಸ್ಥಾನ ಗಳಿಸಿದೆ ಎಂದರು. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ಅವರ ನೇತೃತ್ವದಲ್ಲಿ ಸಂಸ್ಥೆ ಅತಿಹೆಚ್ಚು ಲಾಭ ಗಳಿಸುತ್ತಿದೆ. ತಾಲ್ಲೂಕಿನಲ್ಲಿ ಅನೇಕ ಸಹಕಾರಿ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದೆ. ಹೊಸ ಕಟ್ಟಡ ನಿರ್ಮಾಣ, ರಿಪೇರಿಗೆ ಡಿಸಿಸಿ…
ಉತ್ತರ ಕನ್ನಡ: ಜಿಲ್ಲೆಯಲ್ಲಿ ಎಥೆನಾಲ್ ಗ್ಯಾಸ್ ತುಂಬಿಕೊಂಡು ತೆರಳುತ್ತಿದ್ದಂತ ಟ್ಯಾಂಕರ್ ಉರುಳಿ ಬಿದ್ದಿದೆ. ಈ ಹಿನ್ನೆಯಲ್ಲಿ ಕಂಚಿನ ಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52ರ ವ್ಯಾಪ್ತಿಯಲ್ಲಿ 1 ಕಿ.ಮೀ ದೂರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅವರು ಆದೇಶ ಹೊರಡಿಸಿದ್ದು, ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಕಂಚಿನ ಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಗುಜರಾತ್ ನಿಂದ ಉಡುಪಿ ಕಡೆಗೆ ತೆರಳುತ್ತಿದ್ದಂತ ಗ್ಯಾಸ್ ಟ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದೆ. ಹೀಗಾಗಿ ಗ್ಯಾಸ್ ಸೋರಿಕೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದಾಗಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಗ್ಯಾಸ್ ಟ್ಯಾಂಕರ್ ತಜ್ಞರು ಬರುವಂತೆ ಡಿಸಿ ಸೂಚಿಸಿದ್ದಾರೆ. ಗ್ಯಾಸ್ ಟ್ಯಾಂಕರ್ ಪಲ್ಟಿಯಿಂದಾಗಿ ಲಾರಿ ಚಾಲಕನ ಸ್ಥಿತಿ ಗಂಭೀರಗೊಂಡಿದೆ. ಅಂಕೋಲಾ ತಹಶೀಲ್ದಾರ್ ಚಿಕ್ಕಪ್ಪ ನಾಯಕ್ ಅವರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. https://kannadanewsnow.com/kannada/hindu-jagarana-vedike-leader-arrested-for-making-provocative-speech-during-protest/ https://kannadanewsnow.com/kannada/priyank-kharge-is-limitless-in-telling-lies-cheater-narayanaswamy/
ಉಡುಪಿ: ದೆಹಲಿಯ ಕೆಂಪುಕೋಟೆಯಲ್ಲಿ ಕಾರು ಸ್ಪೋಟ ಕೃತ್ಯ ಖಂಡಿಸಿ ಪ್ರತಿಭಟನೆಯನ್ನು ಹಿಂದೂ ಜಾಗರಣ ವೇದಿಕೆಯ ಮುಖಂಡ ನಡೆಸಿದ್ದರು. ಆ ಬಳಿಕ ಪ್ರಚೋದನಕಾರಿ ಭಾಷಣೆ ಮಾಡಿದ್ದರಿಂದಾಗಿ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ್ ಅಮೀನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರತ್ನಾಕರ್ ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಆಜೆಕಾರಿನ ನಿವಾಸಿಯಾಗಿದ್ದಾರೆ. ದೆಹಲಿ ಸ್ಪೋಟ ಖಂಡಿಸಿ ಪ್ರತಿಭಟನೆಯನ್ನು ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ್ ಅಮೀನ್ ನಡೆಸಿದ್ದರು. ಪ್ರತಿಭಟನೆಯ ವೇಳೆಯಲ್ಲಿ ಪ್ರಚೋದನಕಾರಿ ಭಾಷಣವನ್ನು ಮಾಡಿದಂತ ಆರೋಪದಡಿ ಅವರ ವಿರುದ್ಧ ದೂರು ದಾಖಲಾಗಿತ್ತು. ಮದರಸ, ಮಸೀದಿಯಲ್ಲಿ ಹಿಂದೂಗಳ ಹತ್ಯೆಗೆ ಪ್ರಚೋದನೆ ಎಂಬ ಹೇಳಿಕೆ ನೀಡಿದ್ದರು. ದ್ವೇಷ ಅಸೂಯೆ ಉಂಟುಮಾಡುವ ಹೇಳಿಕೆ ಬಗ್ಗೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದರು. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ರತ್ನಾಕರ್ ವಿರುದ್ಧ ಕೇಸ್ ದಾಖಲಾಗಿತ್ತು. ಇಂದು ಈ ಪ್ರಕರಣದಲ್ಲಿ ಅವರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/priyank-kharge-is-limitless-in-telling-lies-cheater-narayanaswamy/ https://kannadanewsnow.com/kannada/priyank-kharge-is-limitless-in-telling-lies-cheater-narayanaswamy/
ಬೆಂಗಳೂರು: ಪ್ರಿಯಾಂಕ್ ಖರ್ಗೆಯವರು ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮರಾಗಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ಅವರು ಹೇಳಿರುವ ಮಾತುಗಳೆಲ್ಲವೂ ಅಪ್ಪಟ ಸುಳ್ಳು ಎಂದು ಟೀಕಿಸಿದರು. ತಮ್ಮ ಕ್ಷೇತ್ರ ಚಿತ್ತಾಪುರದಲ್ಲಿ ಪಥ ಸಂಚಲನ ಆಗಲು ಬಿಡುವುದಿಲ್ಲ ಎಂದು ಹೇಳಿದ್ದರು. ಆದರೆ, ಇವತ್ತು ಪಥ ಸಂಚಲನ ನಡೆದಿದೆ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದರು. ನನ್ನ ಕೈಯಲ್ಲಿ ಅಧಿಕಾರವಿದ್ದರೆ ಇವತ್ತೇ ಆರೆಸ್ಸೆಸ್ ನಿಷೇಧಿಸುವುದಾಗಿ ಪ್ರಿಯಾಂಕ್ ಹೇಳಿದ್ದರು. ಅದು ಅವರಿಗೆ ಈ ಜನ್ಮದಲ್ಲಿ ಆಗಲಾರದ ವಿಷಯ ಎಂದು ಸವಾಲೆಸೆದರು. ನೀವು ಅನುಮತಿ ಕೊಟ್ಟಿದ್ದಾಗಿ ಹೇಳಿದ್ದೀರಿ; ಅದು ನಿಮ್ಮ ಅನುಮತಿಯಲ್ಲ; ಅದು ನ್ಯಾಯಾಲಯದಿಂದ ಸಿಕ್ಕಿದೆ ಎಂದು ಗಮನಕ್ಕೆ ತಂದರು. ಸರಣಿ ಸುಳ್ಳು ಹೇಳುವ ಸುಳ್ಳುಗಾರ ಇದ್ದರೆ ಅದು ಪ್ರಿಯಾಂಕ್ ಖರ್ಗೆ ಎಂದರು. ಇರಲಾರದೆ ಇರುವೆ ಬಿಟ್ಟುಕೊಂಡು ಈಗ ಕಚ್ಚಿಸಿಕೊಂಡು ಓಡಾಡುತ್ತಿದ್ದಾರೆ; ಅವರಿಗೆ ಇರುವೆ ಬಹಳ…














