Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಾಳೆ ನಗರದಲ್ಲಿ ಬೆಸ್ಕಾಂ ಇಲಾಖೆಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸೆ.17ರ ನಾಳೆ ಬೆಂಗಳೂರಿನ ಕೆಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಈ ಕುರಿತಂತೆ ಬೆಸ್ಕಾಂನಿಂದ ( BESCOM ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 17.09.2024 (ಮಂಗಳವಾರ) ಬೆಳಗ್ಗೆ 11:00 ಗಂಟೆಯಿAದ ಮದ್ಯಾಹ್ನ 04:00 ಗಂಟೆಯವರೆಗೆ “220/66/11 ಕೆ.ವಿ ಹೆಬ್ಬಾಳ ಸ್ವೀಕರಣಾ ಕೇಂದ್ರ” ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಜಯಮಹಲ್ ವಿಸ್ತರಣೆ, ನಂದಿ ದರ್ಗ, ದೂರರ್ಶನ, ಜಯಮಹಲ್ ರಸ್ತೆ, ಮುನಿರೆಡ್ಡಿ ಪಾಳ್ಯ, ಜೆ.ಸಿ.ನಗರ, ಮಾರಪ್ಪ ಗರ್ಡನ್, ಚಿನಪ್ಪ ಗರ್ಡನ್, ಎನ್.ಡಿ.ರಸ್ತೆ, ಏರ್ ಟೆಲ್, ದೂರರ್ಶನ” ಪ್ರದೇಶದಲ್ಲಿ ಕರೆಂಟ್ ಇರೋದಿಲ್ಲ ಎಂದು ತಿಳಿಸಿದೆ. ಸಾರ್ವಜನಿಕರು ವಿದ್ಯುತ್ ವ್ಯತ್ಯಯಕ್ಕಾಗಿ ಸಹಕರಿಸುವಂತೆ ಮನವಿ ಮಾಡಿದೆ. ಅಲ್ಲದೇ ವಿದ್ಯುತ್ ದೂರಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಗೆ ಸಂಪರ್ಕಿಸವಂತೆ ಕೋರಿದೆ. https://kannadanewsnow.com/kannada/after-10-years-cm-siddaramaiah-to-chair-state-cabinet-meeting-in-kalaburagi-tomorrow/…
ಕಲಬುರ್ಗಿ: ನಾಳೆ ಕಲ್ಯಾಣ ನಾಡಿನ ಹೆಬ್ಬಾಗಿಲೆಂದೇ ಖ್ಯಾತಿ ಪಡೆದಂತ ಕಲಬುರ್ಗಿಯ ಮಹಾನಗರದ ವಿಕಾಸ ಸೌಧದಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಸಂಜೆ.4 ಗಂಟೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯಲಿದೆ. ಸಿದ್ಧರಾಮಯ್ಯರಿಂದ ನಡೆಸಲಾಗುತ್ತಿರುವಂತ 2ನೇ ಸಂಪುಟ ಸಭೆ ಇದಾಗಿದ್ದರೇ, 10 ವರ್ಷಗಳ ಬಳಿಕ ನಡೆಯುತ್ತಿರುವಂತ ರಾಜ್ಯ ಸಚಿವ ಸಂಪುಟ ಸಭೆ ದಾಗಿದೆ. ಹೌದು ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಇದು ಸಿದ್ದರಾಮಯ್ಯ ಸರ್ಕಾರದ 2024ನೇ ಸಾಲಿನ 19ನೇ ಸಂಪುಟ ಸಭೆಯಾಗಿದೆ. ನವೆಂಬರ್.18, 2014ರಲ್ಲಿ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿಯೇ ಕಲಬುರ್ಗಿಯಲ್ಲಿ ಮೊದಲ ಸಂಪುಟ ಸಭೆಯನ್ನು ನಡೆಸಿ, ಗಮನ ಸೆಳೆದಿದ್ದರು. ಈಗ ಒಂದು ದಶಕದ ಬಳಿಕ ಸಿದ್ದರಾಮಯ್ಯ ನೇತೃತ್ವದಲ್ಲಿ 2ನೇ ಸಂಪುಟ ಸಭೆಯು ನಾಳೆ ಕಲಬುರ್ಗಿಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕಲಬುರ್ಗಿ, ಬೀದರ್, ರಾಯಚೂರು, ಯಾದಗಿರಿ, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ವ್ಯಾಪ್ತಿಯ ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಗಳಿಗೆ…
ಮಂಗಳೂರು: ಜಿಲ್ಲೆಯ ಬಂಟ್ವಾಳದ ಬಿ.ಸಿ ರಸ್ತೆಯಲ್ಲಿ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ಭಾರೀ ಹೈಡ್ರಾಮಾವೇ ನಡೆಯುತ್ತಿದೆ. ಬಿಸಿ ರೋಡ್ ಚಲೋದಲ್ಲಿ ಭಾರೀ ಸಂಖ್ಯೆಯ ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣದಿಂದ ಕೂಡಿದೆ. ಮಂಗಳೂರಿನ ಬಂಟ್ವಾಳದ ಬಿ.ಸಿ ರಸ್ತೆಯಲ್ಲಿ ಇಂದು ಬಿಸಿ ರೋಡ್ ಚಲೋಗೆ ಹಿಂದೂ ಪರ ಸಂಘಟನೆಗಳ ಮುಖಂಡರು ಕರೆ ನೀಡಿದ್ದರು. ಈ ಚಲೋಗೆ ನೂರಾರು ಸಂಖ್ಯೆಯ ಆರ್ ಎಸ್ ಎಸ್ ಹಾಗೂ ವಿ ಹೆಚ್ ಪಿ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಹಿಂದೂ ಕಾರ್ಯಕರ್ತರು, ಪೊಲೀಸರ ನಡುವೆ ತಳ್ಳಾಟ, ನೂಕಾಟ ಕೂಡ ಉಂಟಾಗಿದ್ದೂ, ಭಾರೀ ಹೈಡ್ರಾಮಾವೇ ನಡೆಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಸಿ ರಸ್ತೆಯಲ್ಲಿ ಹೈ ಅಲರ್ಟ್ ನೀಡಲಾಗಿದೆ. ಎಲ್ಲೆಲ್ಲೂ ಪೊಲೀಸರ ಭಿಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇನ್ನೂ ಬಿಸಿ ರೋಡ್ ಮೂಲಕವೇ ಇಂದು ಈದ್ ಮಿಲಾದ್ ಮೆರವಣಿಗೆ ಸಾಗಲಿದೆ. ಹೀಗಾಗಿ ಮತ್ತಷ್ಟು ಬಿಗುವಿನ ವಾತಾವರಣಕ್ಕೆ ಕಾರಣವಾಗುವ ಮುನ್ನವೇ ಪೊಲೀಸರು ಹಲವು ಹಿಂದೂಪರ ಮುಖಂಡರು, ಕಾರ್ಯಕರ್ತರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಇದರ ನಡುವೆ ಪರಿಸ್ಥಿತಿ…
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಯೋಜನೆಯಡಿ ಮಹಿಳೆಯರನ್ನು ಆರ್ಥಿಕ ಸಬಲೀಕರಿಸುವಂತ ಉದ್ಯೋಗಿನಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ ಎಸ್ಸಿ, ಎಸ್ಟಿ, ಸಾಮಾನ್ಯ ವರ್ಗದ ಮಹಿಳೆಯರಿಗೆ 3 ಲಕ್ಷದವರೆಗೆ ಸಬ್ಸಿಡಿ ಸಹಿತ ಸಾಲಸೌಲಭ್ಯವನ್ನು ನೀಡಲಾಗುತ್ತದೆ. ಆ ಬಗ್ಗೆ ಮುಂದೆ ಓದಿ. ಏನಿದು ಉದ್ಯೋಗಿನಿ ಯೋಜನೆ? ನಿರುದ್ಯೋಗಿಗಳು ಸ್ವಯಂ ಉದ್ಯೋಗಿಗಳಾಗಲು ಮತ್ತು ಸ್ವಾವಲಂಬಿಗಳಾಗಲು ಸಹಾಯ ಮಾಡಲು ಕರ್ನಾಟಕ ಸರ್ಕಾರ ಸಾಕಷ್ಟು ಕಲ್ಯಾಣ ಯೋಜನೆಗಳನ್ನು ಪ್ರಾರಂಭಿಸಿದೆ. 2015-2016 ರಲ್ಲಿ, ಕರ್ನಾಟಕ ಸರ್ಕಾರವು ರಾಜ್ಯದ ಮಹಿಳೆಯರಿಗಾಗಿ ವಿಶೇಷವಾಗಿ ಉದ್ಯೋಗಿನಿ ಯೋಜನೆಯನ್ನು ಪ್ರಾರಂಭಿಸಿತು. ಉದ್ಯೋಗಿನಿ ಯೋಜನೆಯು ಕರ್ನಾಟಕದ ಮಹಿಳೆಯರಿಗೆ ಸ್ವಯಂ ಉದ್ಯೋಗ ಸೃಷ್ಟಿ ಚಟುವಟಿಕೆ ಬೆಂಬಲ ಯೋಜನೆಯಾಗಿದೆ. ಕರ್ನಾಟಕದಲ್ಲಿ ಉದ್ಯೋಗಿನಿ ಯೋಜನೆಯನ್ನು ಪ್ರಾರಂಭಿಸುವ ಹಿಂದಿನ ಮುಖ್ಯ ಉದ್ದೇಶವೆಂದರೆ ಮಹಿಳೆಯರು ತಮ್ಮದೇ ಆದ ವ್ಯವಹಾರ ಅಥವಾ ಆದಾಯ ಉತ್ಪಾದನಾ ಚಟುವಟಿಕೆಯನ್ನು ಪ್ರಾರಂಭಿಸಲು ಪ್ರೋತ್ಸಾಹಿಸುವುದು ಮತ್ತು ಅವರು ಲೇವಾದೇವಿಗಾರರಿಂದ ಹೆಚ್ಚಿನ ಬಡ್ಡಿದರದಲ್ಲಿ ಹಣವನ್ನು ಸಾಲ ಪಡೆಯುವುದನ್ನು ತಡೆಯುವುದು. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಈ ಯೋಜನೆಯ ಅನುಷ್ಠಾನ ಸಂಸ್ಥೆಯಾಗಿದೆ.…
ಬೆಂಗಳೂರು: ಉದ್ಯಮಿಯೊಬ್ಬರ ಕಂಪನಿ ಮೇಲೆ ದಾಳಿ ನಡೆಸಿ, ಅವರಿಂದ ಹಣ ಸುಲಿಗೆ ಮಾಡಿದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದಂತ ಜಿಎಸ್ಟಿ ಇಲಾಖೆಯ ಬೆಂಗಳೂರಿನ ನಾಲ್ವರು ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ. ಜಿಎಸ್ಟಿ ಗುಪ್ತಚರ ವಿಭಾಗದ ಮಹಾ ನಿರ್ದೇಶನಾಲಯದ ಬೆಂಗಳೂರು ಪ್ರಾದೇಶಿಕ ಕಚೇರಿ ವ್ಯಾಪ್ತಿಯ ದಕ್ಷಿಣ ವಲಯದ ಅಧೀಕ್ಷಕ ಅಭಿಷೇಕ್, ಹಿರಿಯ ಗುಪ್ತಚರ ಅಧಿಕಾರಿ ಮನೋಜ್ ಸೈನಿ, ನಾಗೇಶ್ ಬಾಬೂ ಹಾಗೂ ಸೋನಾಲಿ ಸಹಾಯ್ ಅವರನ್ನು ಕೇಂದ್ರ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿಯು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಈ ನಾಲ್ವರು ಬೆಂಗಳೂರಿನ ಜಿಎಸ್ಟಿ ಅಧಿಕಾರಿಗಳು ಉದ್ಯಮಿ ಕೇಶವ್ ತಕ್ ಅವರಿಂದ 1.5 ಕೋಟಿ ರೂ ಸುಲಿಗೆ ಮಾಡಿದ್ದರು. ಈ ಸಂಬಂಧ ಸೆ.11ರಂದು ಸಿಸಿಬಿ ಮತ್ತು ಪೂರ್ವ ವಿಭಾಗದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ನಾಲ್ವರನ್ನು ಬಂಧಿಸಲಾಗಿತ್ತು. ಆ ಬಳಿಕ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. https://kannadanewsnow.com/kannada/fir-filed-against-sharan-pumpwell-puneet-attavar/ https://kannadanewsnow.com/kannada/actor-darshan-made-another-demand-in-ballari-jail-officials-refuse-to-give-him/
ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿ ಬಳ್ಳಾರಿ ಜೈಲು ಸೇರಿರುವಂತ ನಟ ದರ್ಶನ್, ಮತ್ತೊಂದು ಬೇಡಿಕೆಯನ್ನು ಜೈಲು ಅಧಿಕಾರಿಗಳಿಗೆ ಇಟ್ಟಿದ್ದಾರೆ. ಆದರೇ ಜೈಲು ಅಧಿಕಾರಿಗಳು ಮಾತ್ರ ಅವರ ಬೇಡಿಕೆ ಈಡೇರಿಸಲು ನಿರಾಕರಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿ ಇರುವಂತ ನಟ ದರ್ಶನ್ ಗೆ ಅವರ ಪತ್ನಿ ವಿಜಯಲಕ್ಷ್ಮಿ ಅವರು ವಿಟಮಿನ್ ಮಾತ್ರೆಗಳನ್ನು ನೀಡುವಂತೆ ಜೈಲು ಅಧಿಕಾರಿಗಳಿಗೆ ನೀಡಿದ್ದರು. ಆದರೇ ಅದನ್ನು ನಟ ದರ್ಶನ್ ಅವರಿಗೆ ಜೈಲು ಅಧಿಕಾರಿಗಳು ನೀಡಿರಲಿಲ್ಲ. ಪತ್ನಿ ತಂದುಕೊಟ್ಟಿರುವಂತ ವಿಟಮಿನ್ ಮಾತ್ರೆಗಳನ್ನು ನೀಡುವಂತೆ ನಟ ದರ್ಶನ್ ಜೈಲು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ನಟ ದರ್ಶನ್ ಮನವಿಯನ್ನು ಪುರಸ್ಕರಿಸದೇ ಜೈಲು ಅಧಿಕಾರಿಗಳು ಮಾತ್ರ ಬಿಲ್ ಖುಲ್ ನೋ ಎಂದಿದ್ದಾರೆ. ಕಾರಣ, ಆ ಮಾತ್ರಗಳನ್ನು ಕೊಲೆ ಆರೋಪಿ ದರ್ಶನ್ ಗೆ ನೀಡಬೇಕೇ ಬೇಡವೇ ಎನ್ನುವ ಬಗ್ಗೆ ಜೈಲಿನ ವೈದ್ಯರ ಸಲಹೆಯ ನಂತ್ರ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅಂದಹಾಗೇ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದ ವಿಜಯಲಕ್ಷ್ಮಿ, ಡ್ರೈಪ್ರೂಟ್ಸ್ ಸೇರಿದಂತೆ ನಾನಾ…
ಸೂರ್ಯಗ್ರಹಣ, ಚಂದ್ರಗ್ರಹಣ ನಡೆದಾಗಲೆಲ್ಲಾ ಇದು ವ್ಯಕ್ತಿಗಳ ರಾಶಿಯ ಮೇಲೆ ಕೆಲ ಶುಭ ಮತ್ತು ಅಶುಭ ಪರಿಣಾಮ ಬೀರಲಿದೆ ಎಂಬ ನಂಬಿಕೆ ಇದೆ. ಈ ಬಾರಿಯ ಚಂದ್ರಗ್ರಹಣವು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತರಲಿದೆ ಎಂದು ನೋಡೋಣ ಬನ್ನಿ. ಸೂರ್ಯಗ್ರಹಣದ ನಂತರ ಸೆಪ್ಟೆಂಬರ್ 18 ರಂದು ಅಂದರೆ ನಾಳೆ, ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ಈ ಒಂದು ಚಂದ್ರಗ್ರಹಣ ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಗೋಚರಿಸಲಿದೆ. ಈ ವರ್ಷ ಚಂದ್ರಗ್ರಹಣವು ಅಶ್ವಿನ್ ಮಾಸದ ಶುಭ ಶರದ್ ಪೂರ್ಣಿಮೆಯಲ್ಲಿ ಸಂಭವಿಸಲಿದೆ. ವಿಜ್ಞಾನ ಸಚಿವಾಲಯದ ಅಧಿಕೃತ ಬಿಡುಗಡೆಯ ಪ್ರಕಾರ, 17-18 , ಸೆಪ್ಟೆಂಬರ್ 2024 ರಂದು ಭಾಗಶಃ ಚಂದ್ರಗ್ರಹಣ ಸಂಭವಿಸುತ್ತದೆ. ಸೆಪ್ಟೆಂಬರ್ 17ರ ಮಧ್ಯರಾತ್ರಿಯಲ್ಲಿ ಚಂದ್ರನು ಪೆನಂಬ್ರಾವನ್ನು ಪ್ರವೇಶಿಸಿದರೂ, ಸೆಪ್ಟೆಂಬರ್ 18 ರ ಮುಂಜಾನೆಯಲ್ಲಿ ಅಂಬ್ರಲ್ ಹಂತವು ಪ್ರಾರಂಭವಾಗುತ್ತದೆ ಎಂದು ತಿಳಿಸಿದೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ…
ಮಂಗಳೂರು: ಜಿಲ್ಲೆಯಲ್ಲಿ ಕೋಮು ಸೌಹಾರ್ಧತೆ ಕದಡುವಂತ ಪೋಸ್ಟ್ ಹಾಕಿದಂತ ಶರಣ್ ಪಂಪವೇಲ್ ಹಾಗೂ ಪುನೀತ್ ಅತ್ತಾವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಶರಣ್ ಪಂಪ್ ವೇಲ್ ಹಾಗೂ ಪುನೀತ್ ಅತ್ತಾವರ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿ, ಕೋಮು ಗಲಭೆಗೆ ಪ್ರಚೋದನೆ ನೀಡುವಂತೆ ಮಾಡಿದ್ದರು. ಅಲ್ಲದೇ ಮುಸ್ಲೀಂ ಮುಖಂಡರೊಬ್ಬರ ಜೊತೆಗೆ ಮಾತನಾಡಿದ್ದಂತ ಆಡಿಯೋವೊಂದನ್ನು ಹಾಕಿ, ವೈರಲ್ ಮಾಡಿದ್ದರು. ಈ ಹಿನ್ನಲೆಯಲ್ಲಿ ಮಂಗಳೂರಿನ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಶರಣ್ ಪಂಪ್ ವೇಲ್, ಪುನೀತ್ ಅತ್ತಾವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮತ್ತೊಂದೆಡೆ ಮುಸ್ಲೀಂ ಮುಖಂಡರ ಚಾಲೆಂಡ್ ಸ್ವೀಕರಿಸಿ, ಇಂದು ಆರ್ ಎಸ್ ಎಸ್, ಭಜರಂಗದಳದಿಂದ ಬಿಸಿ ರೋಡ್ ಜಾಥಾಗೆ ಕರೆ ನೀಡಲಾಗಿದೆ. ಅದಕ್ಕೆ ಪೊಲೀಸರು ಅವಕಾಶ ನೀಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. https://kannadanewsnow.com/kannada/bjp-fact-finding-team-visits-untoward-incident-in-nagamangala-today/ https://kannadanewsnow.com/kannada/eid-milad-un-nabi-to-be-celebrated-today-it-is-mandatory-to-follow-these-guidelines-of-the-police-department-in-bengaluru/
ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಮಾಜಿ ಸಚಿವರು ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಭೈರತಿ ಬಸವರಾಜ್, ಮಾಜಿ ಸಚಿವರಾದ ಕೆ.ಸಿ. ನಾರಾಯಣಗೌಡ, ಬಿಜೆಪಿ ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ಒಳಗೊಂಡ ಬಿಜೆಪಿ ಸತ್ಯಶೋಧನಾ ತಂಡವು ಇಂದು ಬೆಳಿಗ್ಗೆ 10.00 ಗಂಟೆಗೆ ನಾಗಮಂಗಲದ ಅಹಿತಕರ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಮಾಜಿ ಡಿಸಿಎಂ ಡಾ.ಸಿಎನ್ ಅಶ್ವತ್ಥನಾರಾಯಣ ಅವರು, ಬಿಜೆಪಿ ಸತ್ಯಶೋಧನಾ ಸಮಿತಿಯು ಇಂದು ನಾಗಮಂಗಲಕ್ಕೆ ಭೇಟಿ ಕೊಡಲಿದೆ. ಅಲ್ಲಿನ ಮಾಹಿತಿಯನ್ನು ಪಡೆಯಲಿದೆ ಎಂದು ತಿಳಿಸಿದರು. ನನ್ನ ನೇತೃತ್ವದಲ್ಲಿ ಬಿಜೆಪಿ ಸತ್ಯಶೋಧನಾ ಸಮಿತಿಯನ್ನು ರಚಿಸಿದ್ದು, ಮಾಜಿ ಸಚಿವರು ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಭೈರತಿ ಬಸವರಾಜ್, ಮಾಜಿ ಸಚಿವ ಕೆ.ಸಿ. ನಾರಾಯಣಗೌಡ, ಬಿಜೆಪಿ ರಾಜ್ಯ ಕಾರ್ಯದರ್ಶಿ ಶ್ರೀಮತಿ ಲಕ್ಷ್ಮೀ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ಸಮಿತಿ ಒಳಗೊಂಡಿದೆ ಎಂದರು. ನಾಗಮಂಗಲದಲ್ಲಿ ಗಣೇಶೋತ್ಸವ…
ಬೆಂಗಳೂರು: ನಾಗಮಂಗಲ ಗಲಭೆಯ ನಂತ್ರ ಪೊಲೀಸ್ ಇಲಾಖೆ ಬೆಂಗಳೂರಲ್ಲಿ ಅಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಿದೆ. ಈ ಹಿನ್ನಲೆಯಲ್ಲೇ ಬೆಂಗಳೂರಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರು ಅನುಸರಿಸಬೇಕಾದಂತ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಿದೆ. ಇಂದು ಈದ್ ಮಿಲಾದ್ ವೇಳೆಯಲ್ಲಿ ಈ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ:16/09/2024 ರಂದು ಬೆಂಗಳೂರು ನಗರಾದ್ಯಂತ ಮುಸ್ಲಿಮರು ಈದ್ಮಿಲಾದ್ ಹಬ್ಬವನ್ನು ಆಚರಿಸುವ ಪ್ರಯುಕ್ತ, ಮಸೀದಿಗಳಲ್ಲಿ ಪ್ರಾರ್ಥನೆ ಮುಗಿಸಿ ನಂತರ, ಮೆರವಣಿಗೆಯಲ್ಲಿ ಸ್ಥಬ್ಧ ಚಿತ್ರಗಳು, ಧ್ವನಿವರ್ಧಕಗಳನ್ನು ಉಪಯೋಗಿಸಿಕೊಂಡು, ನಡಿಗೆಯಲ್ಲಿ ವೈ.ಎಂ.ಸಿ.ಎ. ಮೈದಾನ, ಮಿಲ್ಲರ್ರಸ್ತೆ ಖುದ್ದು ಸಾಬ್ ಇದ್ದಾ ಮೈದಾನ, ಶಿವಾಜಿನಗರ ಛೋಟಾ ಮೈದಾನ, ಭಾರತೀನಗರದ ಸುಲ್ತಾನ್ಜೀ ಗುಂಟಾ ಮೈದಾನಗಳಲ್ಲಿ ಹಾಗೂ ಇತರೆಡೆಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಸಂಬಂಧ ಹಬ್ಬದ ದಿನದಂದು ಈ ಕೆಳಕಂಡ ಸೂಚನೆಗಳನ್ನು ಅನುಸರಿಸಲು ಸೂಚಿಸಲಾಗಿದೆ. 1. ಮೆರವಣಿಗೆ ಸಾಗುವ ಹಾದಿಯಲ್ಲಿ ಸಾರ್ವಜನಿಕರಿಗೆ ಆಡಚಣೆ ಉಂಟಾಗದಂತೆ ಸ್ವಯಂಸೇವಕರು…