Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಈ ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ ಮಾಡಿರುವುದಕ್ಕೆ ಶಾಸಕರನ್ನೇ ಅಮಾನತು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ ಪುಸ್ತಕದಲ್ಲಿ ಬಹಳ ಸುಳ್ಳುಗಳಿವೆ. ಸಿಎಂ ಕಚೇರಿಯಲ್ಲಿ ಕೆಲಸ ಮಾಡುವವರು ಗ್ಯಾರಂಟಿಯನ್ನು ಹೊಗಳಿದ್ದನ್ನು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಅಧಿವೇಶನದಲ್ಲಿ ಚರ್ಚೆ ಮಾಡಿದ ಎಲ್ಲ ವಿಷಯಗಳನ್ನ ಜನರ ಮುಂದೆ ಇಡಲಿದ್ದೇವೆ. ಜನರ ನ್ಯಾಯಾಲಯದಲ್ಲಿ ಸರ್ಕಾರದ ಬಗ್ಗೆ ಜನರೇ ತೀರ್ಮಾನ ಮಾಡಲಿದ್ದಾರೆ ಎಂದರು. ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟಿಸಲಾಗಿದೆ. ಸಿಎಂ ಸಿದ್ದರಾಮಯ್ಯ ವೀಲ್ ಚೇರ್ನಲ್ಲಿದ್ದರೆ, ಸರ್ಕಾರ ಇನ್ನೂ ತೆವಳುತ್ತಿದೆ. 18 ಶಾಸಕರನ್ನು ಸ್ಪೀಕರ್ ಯು.ಟಿ.ಖಾದರ್ ಅಮಾನತು ಮಾಡಿದ್ದಾರೆ. ಮಾನಗೇಡಿ ಕಾಂಗ್ರೆಸ್ನವರು ವಿಧಾನಪರಿಷತ್ನಲ್ಲಿ ಸಭಾಪತಿ ಸ್ಥಾನದಲ್ಲಿ ಕುಳಿತಿದ್ದ ಎಸ್.ಎಲ್.ಧರ್ಮೇಗೌಡ ಅವರನ್ನು ಎಳೆದು ಅಪಮಾನ ಮಾಡಿದ್ದರು. ಆದರೂ ಬಿಜೆಪಿ ಧರಣಿ ಮಾಡಿದ್ದೇ ತಪ್ಪು ಎನ್ನುತ್ತಿದ್ದಾರೆ.…
ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅವರ ಮಾತೃ ನ್ಯಾಯಾಲಯವಾದ ಅಲಹಾಬಾದ್ ಹೈಕೋರ್ಟ್ಗೆ ವರ್ಗಾಯಿಸಲು ಶಿಫಾರಸು ಮಾಡುವ ನಿರ್ಣಯವನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಹೊರಡಿಸಿದೆ. ನ್ಯಾಯಮೂರ್ತಿ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್ಗೆ ವರ್ಗಾಯಿಸುವ ಸುಪ್ರೀಂ ಕೋರ್ಟ್ ಕೊಲಿಜಿಯಂ ನಿರ್ಧಾರದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್ ಆಕ್ಷೇಪ ವ್ಯಕ್ತಪಡಿಸಿತ್ತು. https://twitter.com/ANI/status/1904130068752027801 https://kannadanewsnow.com/kannada/phone-tapping-of-all-opposition-leaders-including-me-is-taking-place-r-ashoka/ https://kannadanewsnow.com/kannada/in-march-next-year-the-government-will-organise-a-mass-screening-programme-for-3000-women/
BREAKING NEWS: ಶೇ.24ರಷ್ಟು ಸಂಸದರು, ಮಾಜಿ ಸಂಸದರ ವೇತನ, ಪಿಂಚಣಿ ಹೆಚ್ಚಿಸಿ ಅಧಿಸೂಚನೆ ಹೊರಡಿಸಿದ ‘ಕೇಂದ್ರ ಸರ್ಕಾರ’
ನವದೆಹಲಿ: ಸಂಸತ್ ಸದಸ್ಯರ (ಸಂಸದರ) ಮಾಸಿಕ ವೇತನವನ್ನು ₹1 ಲಕ್ಷದಿಂದ ₹1.24 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಇದು ಅವರ ವೇತನ ಮತ್ತು ಭತ್ಯೆಗಳಲ್ಲಿನ ವ್ಯಾಪಕ ಪರಿಷ್ಕರಣೆಯ ಭಾಗವಾಗಿದೆ. ಸಂಸದೀಯ ಸಮಿತಿಯ ಶಿಫಾರಸುಗಳನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೆಚ್ಚುತ್ತಿರುವ ಜೀವನ ವೆಚ್ಚ ಮತ್ತು ಹಣದುಬ್ಬರವನ್ನು ಲೆಕ್ಕಹಾಕುವ ಗುರಿಯನ್ನು ಹೊಂದಿದೆ. ವೇತನ ಹೆಚ್ಚಳದ ಜೊತೆಗೆ, ಸಂಸತ್ತಿನ ಅಧಿವೇಶನಗಳು ಮತ್ತು ಅಧಿಕೃತ ಕರ್ತವ್ಯಗಳ ಸಮಯದಲ್ಲಿ ಆಗುವ ವೆಚ್ಚಗಳನ್ನು ಸರಿದೂಗಿಸಲು ಉದ್ದೇಶಿಸಲಾದ ಸಂಸದರ ದೈನಂದಿನ ಭತ್ಯೆಯನ್ನು ದಿನಕ್ಕೆ ₹2,000 ರಿಂದ ₹2,500 ಕ್ಕೆ ಹೆಚ್ಚಿಸಲಾಗಿದೆ. ಇದರ ಜೊತೆಗೆ, ಹಾಲಿ ಮತ್ತು ಮಾಜಿ ಸಂಸದರ ಮಾಸಿಕ ಪಿಂಚಣಿಯನ್ನು ₹25,000 ರಿಂದ ₹31,000 ಕ್ಕೆ ಪರಿಷ್ಕರಿಸಲಾಗಿದೆ. ಈ ಪರಿಷ್ಕರಣೆಯನ್ನು ಲೋಕಸಭೆ ಸಚಿವಾಲಯ ಅನುಮೋದಿಸಿದ್ದು, ತಕ್ಷಣದಿಂದ ಜಾರಿಗೆ ಬರಲಿದೆ. ಹಲವಾರು ವರ್ಷಗಳ ಹಿಂದೆ ಮಾಡಿದ ಕೊನೆಯ ಮಹತ್ವದ ಪರಿಷ್ಕರಣೆಯನ್ನು ಪರಿಗಣಿಸಿ, ಆವರ್ತಕ ಪರಿಶೀಲನೆಯ ನಂತರ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. https://twitter.com/ANI/status/1904125547007107265 ಸಂಸದರು, ಮಾಜಿ ಸಂಸದರಿಗೆ ಎಷ್ಟು ವೇತನ…
ನವದೆಹಲಿ: ಏಪ್ರಿಲ್ 1, 2023 ರಿಂದ ಜಾರಿಗೆ ಬರುವಂತೆ ಸಂಸದರು ಮತ್ತು ಮಾಜಿ ಸಂಸದರ ವೇತನ ಮತ್ತು ಇತರ ಭತ್ಯೆಗಳನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಸೋಮವಾರ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ. ಸಂಸದರ ಮಾಸಿಕ ವೇತನವನ್ನು 1 ಲಕ್ಷ ರೂ.ಗಳಿಂದ 1.24 ಲಕ್ಷ ರೂ.ಗಳಿಗೆ ಮತ್ತು ದೈನಂದಿನ ಭತ್ಯೆಯನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗಿದೆ. ಸಂಸದರು ಮತ್ತು ಮಾಜಿ ಸಂಸದರ ಮಾಸಿಕ ಪಿಂಚಣಿಯನ್ನು 25,000 ರೂ.ಗಳಿಂದ 31,000 ರೂ.ಗೆ ಪರಿಷ್ಕರಿಸಲಾಗಿದೆ. ಆದಾಯ ತೆರಿಗೆ ಕಾಯ್ದೆ, 1961 ರ ಅಡಿಯಲ್ಲಿ ವೆಚ್ಚ ಹಣದುಬ್ಬರ ಸೂಚ್ಯಂಕವನ್ನು ಆಧರಿಸಿ ಈ ಪರಿಷ್ಕರಣೆ ಮಾಡಲಾಗಿದೆ. ಮಾರ್ಚ್ 21 ರಂದು ಸರ್ಕಾರದ ಅಧಿಸೂಚನೆ ಹೊರಡಿಸಲಾಗಿದ್ದರೂ, ಪರಿಷ್ಕೃತ ವೇತನ ಮತ್ತು ಭತ್ಯೆಗಳು ಏಪ್ರಿಲ್ 1, 2023 ರಿಂದ ಅನ್ವಯವಾಗುತ್ತವೆ. “ಸಂಸತ್ ಸದಸ್ಯರ ವೇತನ, ಭತ್ಯೆಗಳು ಮತ್ತು ಪಿಂಚಣಿ ಕಾಯ್ದೆ, 1954 (1954 ರ 30) ರ ಸೆಕ್ಷನ್ 3 ರ ಉಪ-ವಿಭಾಗ (2) ಮತ್ತು ಸೆಕ್ಷನ್ 8 ಎ ಯ…
ಬೆಂಗಳೂರು : “ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುವೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮುಸ್ಲಿಮರಿಗೆ ಮೀಸಲು ನೀಡಲು ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ್ದೀರಿ ಎಂದು ಬಿಜೆಪಿಯವರು ಟ್ವಿಟರ್ ನಲ್ಲಿ ಹಾಗೂ ಸಂಸತ್ ನಲ್ಲಿ ಟೀಕೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ನಾನು ಹಾಗೆ ಹೇಳಿಯೇ ಇಲ್ಲ. ನನ್ನ ಹೇಳಿಕೆಯನ್ನು ಬಿಜೆಪಿ ತಿರುಚಿದೆ. ಕಳೆದ 36 ವರ್ಷಗಳಿಂದ ಶಾಸಕನಾಗಿ ವಿಧಾನಸಭೆಯಲ್ಲಿದ್ದೇನೆ. ನನಗೂ ಸಾಮಾನ್ಯ ಜ್ಞಾನವಿದೆ. ಇಂತಹ ವಿಚಾರದಲ್ಲಿ ಜೆ.ಪಿ ನಡ್ಡಾ ಅವರಿಗಿಂತಲೂ ನಾನು ಉತ್ತಮ ಸೂಕ್ಷ್ಮತೆ ಇರುವ ರಾಜಕಾರಣಿ. ಆದರೆ ಬಿಜೆಪಿ ಜನಸಾಮಾನ್ಯರ ದಾರಿ ತಪ್ಪಿಸುತ್ತಿದೆ. ನಮ್ಮದು ರಾಷ್ಟ್ರೀಯ ಪಕ್ಷ. ಸುಳ್ಳು ಹೇಳಿಕೆ ಸೃಷ್ಟಿಸಿ, ನನ್ನ ಹೆಸರನ್ನು ಎಳೆದು ತರಲಾಗುತ್ತಿದೆ. ನಾನು ಈ…
ಬೆಂಗಳೂರು : “ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುವೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮುಸ್ಲಿಮರಿಗೆ ಮೀಸಲು ನೀಡಲು ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ್ದೀರಿ ಎಂದು ಬಿಜೆಪಿಯವರು ಟ್ವಿಟರ್ ನಲ್ಲಿ ಹಾಗೂ ಸಂಸತ್ ನಲ್ಲಿ ಟೀಕೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ನಾನು ಹಾಗೆ ಹೇಳಿಯೇ ಇಲ್ಲ. ನನ್ನ ಹೇಳಿಕೆಯನ್ನು ಬಿಜೆಪಿ ತಿರುಚಿದೆ. ಕಳೆದ 36 ವರ್ಷಗಳಿಂದ ಶಾಸಕನಾಗಿ ವಿಧಾನಸಭೆಯಲ್ಲಿದ್ದೇನೆ. ನನಗೂ ಸಾಮಾನ್ಯ ಜ್ಞಾನವಿದೆ. ಇಂತಹ ವಿಚಾರದಲ್ಲಿ ಜೆ.ಪಿ ನಡ್ಡಾ ಅವರಿಗಿಂತಲೂ ನಾನು ಉತ್ತಮ ಸೂಕ್ಷ್ಮತೆ ಇರುವ ರಾಜಕಾರಣಿ. ಆದರೆ ಬಿಜೆಪಿ ಜನಸಾಮಾನ್ಯರ ದಾರಿ ತಪ್ಪಿಸುತ್ತಿದೆ. ನಮ್ಮದು ರಾಷ್ಟ್ರೀಯ ಪಕ್ಷ. ಸುಳ್ಳು ಹೇಳಿಕೆ ಸೃಷ್ಟಿಸಿ, ನನ್ನ ಹೆಸರನ್ನು ಎಳೆದು ತರಲಾಗುತ್ತಿದೆ. ನಾನು ಈ…
ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಘೋಷಿಸಿದರು. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ 3000 ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಗರ್ಭಿಣಿಯರಿಗೆ ಸೀಮಂತ ಮಾಡುವುದೆಂದರೆ ಅದು ನಮ್ಮ ಭಾರತೀಯ ಸಂಸ್ಕೃತಿಯ ಭಾಗವಾಗಿದೆ. ಭಾರತೀಯ ಸಂಸ್ಕೃತಿ ಮಹಿಳೆಗೆ ಅತ್ಯಂತ ಉನ್ನತ ಸ್ಥಾನವನ್ನು ಕೊಟ್ಟಿದೆ ಎಂದರು. ಮಾತೃತ್ವ ಎನ್ನುವುದು ಅತ್ಯಂತ ಶ್ರೇಷ್ಟವಾದ ಮೌಲ್ಯ. ಹಿಂದಿನಿಂದಲೂ ಮಾತೃದೇವೋಭವ ಎನ್ನುತ್ತೇವೆ, ಜನನಿ ತಾನೆ ಮೊದಲ ಗುರುವು ಎನ್ನುತ್ತೇವೆ. ಅದು ಸೀಮಂತ ದಿಂದ ಆರಂಭವಾಗಿ…
ಬೆಂಗಳೂರು : ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಯವರು ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ನಡೆದ ಸಭೆ ಬಳಿಕ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಇದನ್ನು ಹೇಳಿದ್ದೇವೆ. ಎಂಪೆರಿಕಲ್ ಡೇಟಾ ನಿರ್ಧಿಷ್ಟವಾದ ಅಭಿಪ್ರಾಯ ಬರುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಸಭೆಯಲ್ಲಿ ತಿಳಿಸಿದ್ದಾರೆ ಎಂದರು. ಸಚಿವರುಗಳ ಮತ್ತು ಶಾಸಕರ ಫೋನ್ ಕದ್ದಾಲಿಕೆ ಆರೋಪದ ಬಗ್ಗೆ ಈವರೆಗೆ ಯಾವುದೇ ದೂರು ದಾಖಲಾಗಿಲ್ಲ. ದೂರು ಬಂದರೆ ಪರಿಶೀಲಿಸಿ, ಕದ್ದಾಲಿಕೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ನಾನು ಅಥವಾ ಸಿಎಂ…
ಕಲ್ಬುರ್ಗಿ: ಸಂವಿಧಾನ ಬದಲಿಸುವ ಕುರಿತ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯು ಪ್ರಜಾಪ್ರಭುತ್ವ ವಿರೋಧಿ ಹಾಗೂ ಸಂವಿಧಾನ ವಿರೋಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಇಲ್ಲಿ ಮಾತನಾಡಿದ ಅವರು, ಸಂವಿಧಾನ ಬದಲಿಸಲು ಬಿಜೆಪಿ ಮತ್ತು ನರೇಂದ್ರ ಮೋದಿ ಜೀ ಅವರು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು. ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಖಂಡಿಸುವುದಾಗಿ ಹೇಳಿದರು. ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷವು ಮುಸ್ಲಿಮರನ್ನು ಮತಬ್ಯಾಂಕ್ ಆಗಿ ಮಾಡಿಕೊಂಡಿದೆ. ರಾಜ್ಯದ- ದೇಶದ ಶೋಷಿತ, ಪೀಡಿತ ಸಮುದಾಯಗಳನ್ನು ಮತಬ್ಯಾಂಕಾಗಿ ಮಾಡಿಕೊಂಡು ಅವರನ್ನು ದುರುಪಯೋಗ ಪಡಿಸಿಕೊಂಡಿತ್ತು. ಇದು ಪದೇಪದೇ ಗೊತ್ತಾಗುತ್ತಿದೆ. ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಕೇವಲ ಅವರ ವೈಯಕ್ತಿಕವಲ್ಲ; ರಾಹುಲ್ ಗಾಂಧಿಯವರ, ಈ ರಾಜ್ಯದ ಮುಖ್ಯಮಂತ್ರಿಗಳ ಮನಸ್ಥಿತಿಯನ್ನೇ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ ಎಂದು ವಿಶ್ಲೇಷಿಸಿದರು. ಡಾ. ಬಾಬಾಸಾಹೇಬ ಅಂಬೇಡ್ಕರರಿಗೆ ಗೌರವ ಕೊಡುವ ಪಕ್ಷ ಬಿಜೆಪಿ. ಡಾ. ಅಂಬೇಡ್ಕರರಿಗೆ ಮತ್ತು ಸಂವಿಧಾನಕ್ಕೆ ಗೌರವ ಕೊಡುವವರು ಮಹಾನ್ ವ್ಯಕ್ತಿ ದೇಶದ ಹೆಮ್ಮೆಯ…
ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ರೈಲ್ವೆ ಮಂಡಳಿಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಕಾರ್ಯಾಚರಣೆಗೆ ಅನುಮೋದನೆ ನೀಡಿದೆ. ಈ ವಿಶೇಷ ರೈಲು ಸೇವೆಗಳ ವಿವರಗಳು ಈ ಕೆಳಗಿನಂತಿವೆ: 1. ರೈಲು ಸಂಖ್ಯೆ 06511/06512 ಎಸ್ಎಂವಿಟಿ ಬೆಂಗಳೂರು-ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು: ರೈಲು ಸಂಖ್ಯೆ 06511 ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್ ಪ್ರೆಸ್ ರೈಲು ಮಾರ್ಚ್ 28, 2025 ರಂದು ಸಂಜೆ 7:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 07:30ಕ್ಕೆ ಬೆಳಗಾವಿಯನ್ನು ತಲುಪಲಿದೆ. ರೈಲು ಸಂಖ್ಯೆ 06512 ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ಮಾರ್ಚ್ 29, 2025 ರಂದು ಸಂಜೆ 5:00 ಗಂಟೆಗೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗಿನ ಜಾವ 04:30ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. 2. ರೈಲು ಸಂಖ್ಯೆ 06513/06514 ಎಸ್ಎಂವಿಟಿ…