Author: kannadanewsnow09

ಬೆಂಗಳೂರು: ಕೆಪಿಎಸ್ಸಿಯಿಂದ ನಾಳೆ, ನಾಡಿದ್ದು ಗ್ರೂಪ್-ಬಿ ಹುದ್ದೆಗಳಿಗೆ ಸಂಬಂಧಿಸಿದಂತ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ನಿಗದಿ ಪಡಿಸಲಾಗಿತ್ತು. ಇಂತಹ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಆಯೋಗದ ಅಧಿಸೂಚನೆ ಸಂಖ್ಯೆ : ಪಿಎಸ್ ಸಿ 1 ಆರ್ ಟಿ ಬಿ 1/2023, ದಿ:13-03-2024ರನ್ವಯ ಅಧಿಸೂಚಿಸಿರುವ ಉಳಿಕೆ ಮೂಲ ವೃಂದದಲ್ಲಿನ ವಿವಿಧ ಗ್ರೂಪ್ – ಬಿ ಹುದ್ದೆಗಳಿಗೆ ದಿನಾಂಕ:14-09-2024 ಮತ್ತು 15-09-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿತ್ತು ಎಂದಿದೆ. ಈ ಮಧ್ಯೆ ದಿನಾಂಕ: 10-09-2024ರ ಕರ್ನಾಟಕ ಸರ್ಕಾರದ ನಡವಳಿಗಳಲ್ಲಿ ಈ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ…

Read More

ಅಮರಾವತಿ: ಆಂಧ್ರಪ್ರದೇಶದಲ್ಲಿ ಶುಕ್ರವಾರ ಆರ್ಟಿಸಿ ಬಸ್ ಮತ್ತು ಎರಡು ಲಾರಿಗಳು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. 33 ಜನರು ಗಾಯಗೊಂಡಿದ್ದಾರೆ. ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮೊಘಲಿ ಘಾಟ್ ರಸ್ತೆಯಲ್ಲಿ ಎರಡು ಲಾರಿಗಳಿಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಚಿತ್ತೂರು ಜಿಲ್ಲೆಯ ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದರು. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಲಾಗುತ್ತಿದೆ. ತನಿಖೆ ಆರಂಭಿಸಲು ಪ್ರಕರಣ ದಾಖಲಿಸಲಾಗಿದೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಏತನ್ಮಧ್ಯೆ, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪರಿಸ್ಥಿತಿಯನ್ನು ಪರಿಶೀಲಿಸಿದರು ಮತ್ತು ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. https://kannadanewsnow.com/kannada/ex-gram-panchayat-member-shot-dead-in-broad-daylight-in-kalaburagi/ https://kannadanewsnow.com/kannada/thalapathy-vijays-69th-film-revealed-producers-share-this-video-for-fans/ https://kannadanewsnow.com/kannada/big-news-sc-granted-bail-to-kejriwal-a-travesty-to-centre-siddaramaiah/

Read More

ಕೆಎನ್ಎನ್ ಸಿನಿಮಾ ಡೆಸ್ಕ್: ಸೆಪ್ಟೆಂಬರ್ 13 ರ ಶುಕ್ರವಾರ ತಲಪತಿ 69ರ ತಯಾರಕರು ವಿಜಯ್ ಮತ್ತು ಅವರ ಅಭಿಮಾನಿಗಳಿಗೆ ಅರ್ಪಿಸಿದ ಹೃದಯಸ್ಪರ್ಶಿ ವೀಡಿಯೊವನ್ನು ಬಿಡುಗಡೆ ಮಾಡಿದರು. ಈ ಮೂಲತ ಕಮ್ಮ 69ನೇ ಚಿತ್ರದ ಬಗ್ಗೆ ವಿಷಯವನ್ನು ರಿವೀಲ್ ಮಾಡಿದರು. ತಮಿಳು ಸೂಪರ್ಸ್ಟಾರ್ ತಮ್ಮ ಜೀವನವನ್ನು ಸಂಪೂರ್ಣವಾಗಿ ರಾಜಕೀಯಕ್ಕೆ ಅರ್ಪಿಸುವ ಮೊದಲು ಕೆವಿಎನ್ ಪ್ರೊಡಕ್ಷನ್ಸ್ನೊಂದಿಗೆ ತಮ್ಮ ಕೊನೆಯ ಚಿತ್ರವನ್ನು ಪ್ರಾರಂಭಿಸಲಿದ್ದಾರೆ ಮತ್ತು ವೀಡಿಯೊ ಅವರ ನಿರ್ಧಾರಕ್ಕೆ ಭಾವನಾತ್ಮಕ ಗೌರವದಂತೆ ತೋರುತ್ತದೆ. ಅವರ ಪೋಸ್ಟ್ನ ಶೀರ್ಷಿಕೆಯಲ್ಲಿ ಉಲ್ಲೇಖಿಸಿದಂತೆ, ಚಿತ್ರದ ಬಗ್ಗೆ ಹೆಚ್ಚಿನದನ್ನು ಶನಿವಾರ ಸಂಜೆ 5 ಗಂಟೆಗೆ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸಲಾಗುವುದು. ತಲಪತಿ 69 ಅನ್ನು ತೆರೆಯ ಮೇಲೆ ವಿಜಯ್ ಅವರ ‘ಕೊನೆಯ ನೃತ್ಯ’ ಎಂದು ಪರಿಗಣಿಸಲಾಗಿದೆ ಮತ್ತು ಚಿತ್ರದ ಸುತ್ತಲಿನ ಅಭಿಮಾನಿಗಳ ಉತ್ಸಾಹಕ್ಕೆ ಮಿತಿಯಿಲ್ಲ. ಎಕ್ಸ್ ನಲ್ಲಿ ಹಂಚಿಕೊಳ್ಳಲಾದ ಹೊಸ ವೀಡಿಯೊ ನಟನ ಮೇಲಿನ ಪ್ರೀತಿ ಮತ್ತು ಅವರ ಉಪಸ್ಥಿತಿಯು ದೊಡ್ಡ ಪರದೆಯ ಮೇಲೆ ಸೃಷ್ಟಿಸುವ ಭಾರಿ ಕ್ರೇಜ್ ಅನ್ನು ಸಂಪೂರ್ಣವಾಗಿ ಸೆರೆಹಿಡಿಯುತ್ತದೆ.…

Read More

ಕಲಬುರ್ಗಿ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನನ್ನು ಹಾಡಹಗಲೇ ಗುಂಡಿಕ್ಕಿ ಹತ್ಯೆಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವಂತ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಅಳಂದ ತಾಲ್ಲೂಕಿನ ಖಾನಾಪುರದ ಬಳಿಯಲ್ಲಿ ಇಂದು ಗ್ರಾಮ ಪಂಚಾಯ್ತಿ ಮಾಜಿ ಸದಸ್ಯರಾಗಿದ್ದಂತ ವಿಶ್ವನಾಥ ಜಮಾದಾರ್ (50) ಎಂಬುವರನ್ನು ಬೈಕ್ ನಲ್ಲಿ ಬಂದಂತ ಇಬ್ಬರು ಮೂರು ಬಾರಿ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಮೂರು ಬಾರಿ ಗುಂಡಿನ ದಾಳಿಯಿಂದಾಗಿ ವಿಶ್ವನಾಥ ಅವರು ಸ್ಥಳದಲ್ಲೇ ತೀವ್ರ ರಕ್ತಸ್ತ್ರಾವದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪಡಸಾವಳಿಯಿಂದ ಅಳಂದ ಪಟ್ಟಣಕ್ಕೆ ವಿಶ್ವನಾಥ ತೆರಳುತ್ತಿದ್ದಾಗ ಈ ಹತ್ಯೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಕಲಬುರ್ಗಿ ಎಸ್ಪಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/state-govt-to-take-major-steps-to-reduce-gram-panchayat-power-burden-installation-of-solar-street-lights/ https://kannadanewsnow.com/kannada/big-news-sc-granted-bail-to-kejriwal-a-travesty-to-centre-siddaramaiah/ https://kannadanewsnow.com/kannada/cm-siddaramaiah-announces-hike-in-nandini-milk-prices-soon/

Read More

ದಿನವೂ ಈ ಸಮಯದಲ್ಲಿ ಕಸಗುಡಿಸುವುದರಿಂದ ಎಲ್ಲಕ್ಕಿಂತ ಅಧಿಕ ಲಾಭ ಸಿಗುತ್ತದೆ ಲಕ್ಷ್ಮೀದೇವಿ ಆಶೀರ್ವಾದ ನಿಮಗೆ ಸಿಗುತ್ತದೆ ನಮ್ಮ ಜೀವನದಲ್ಲಿ ತಿಳಿಯದೇಯೊ ತಿಳಿದೊ ಕೆಲವೊಂದು ತಪ್ಪುಗಳು ಆಗಿ ಹೋಗುತ್ತದೆ. ಅವುಗಳ ಪ್ರಭಾವ ನಮ್ಮ ಮನೆಯವರ ಮೇಲೆ ಕುಟುಂಬದ ಮೇಲೆ ಬೀಳುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ…

Read More

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ ಇರಿಸಲು ಹಾಗೂ ವಿದ್ಯುತ್‌ ವೆಚ್ಚ ಕಡಿಮೆ ಮಾಡಲು ರಾಜ್ಯದ 50 ಗ್ರಾಮ ಪಂಚಾಯತಿಗಳಲ್ಲಿ ಸೋಲಾರ್‌ ಬೀದಿ ದೀಪಗಳನ್ನು ಅಳವಡಿಸುವ ʼಹೊಂಬೆಳಕುʼ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಈ ವರ್ಷದ ಆಯವ್ಯಯದಲ್ಲಿ ಘೋಷಿಸಿದ್ದಂತೆ ಹೊಂಬೆಳಕು ಕಾರ್ಯಕ್ರಮವನ್ನು ಜಾರಿಗೆ ತರಲಾಗುತ್ತಿದ್ದು, ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ 25 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದೆಂದು ಸಚಿವರು ಹೇಳಿದ್ದು, ಸೌರ ಬೀದಿ ದೀಪಗಳು ಪರಿಸರ ಸ್ನೇಹಿಯಾಗಿದ್ದು, ಇಂಧನ ಬಳಕೆಯಾಗದಿರುವುದರಿಂದ ಗ್ರಾಮ ಪಂಚಾಯತಿಗಳಿಗೆ ವಿದ್ಯುತ್‌ ವೆಚ್ಚದ ಹೊರೆ ಕಡಿಮೆಯಾಗಲಿದೆ ಎಂದು ತಿಳಿಸಿದ್ದಾರೆ. ಅಳವಡಿಸಲಾಗುತ್ತಿರುವ ಸೌರ ಬೀದಿ ದೀಪಗಳು ಎಲ್.ಇ.ಡಿ ತಂತ್ರಜ್ಞಾನವನ್ನು ಹೊಂದಿದ್ದು ದೀರ್ಘ ಕಾಲ ಬಾಳಿಕೆ ಬರಬಹುದೆಂದು ನಿರೀಕ್ಷಿಸಲಾಗಿದೆ, ಈ ವರ್ಷ ಸುಮಾರು 16,500 ಸೋಲಾರ್‌ ಬೀದಿ ದೀಪಗಳನ್ನು ಅಳವಡಿಸುವ ಗುರಿ ಹೊಂದಲಾಗಿದೆ, ಗ್ರಾಮೀಣ ಜನರು ಪ್ರಖರ ಬೆಳಕನ್ನು ಪಡೆಯುವುದರೊಂದಿಗೆ ವಿದ್ಯುತ್‌ ವೆಚ್ಚದ ಮಿತವ್ಯಯದಿಂದ…

Read More

ಬೆಂಗಳೂರು: ಜೆಡಿಎಸ್ ಪಕ್ಷದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 3ನೇ ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳಿಂದ 1691 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಮಾಜಿ ಸಂಸದ ಪ್ರಜ್ವರ್ ರೇವಣ್ಣ ವಿರುದ್ಧ ದಾಖಲಾಗಿದ್ದಂತ 3ನೇ ಅತ್ಯಾಚಾರ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಬರೋಬ್ಬರಿ 1691 ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಜಿಲ್ಲಾ ಪಂಚಾಯ್ತಿ ಸದಸ್ಯ ದೂರಿನ ಪ್ರಕರಣದ ಸಂಬಂಧಿಸಿದಂತ ಚಾರ್ಜ್ ಶೀಟ್ ಇದಾಗಿದೆ. ಈ ಚಾರ್ಜ್ ಶೀಟ್ ನಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಸಂತ್ರಸ್ತೆಯ ಸೀರೆಯನ್ನು ಪ್ರಮುಖ ಸಾಕ್ಷಿಯನ್ನಾಗಿ ಎಸ್ಐಟಿ ಅಧಿಕಾರಿಗಳು ಮಾಡಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/port-blair-renamed-sri-vijaya-puram/ https://kannadanewsnow.com/kannada/big-news-sc-granted-bail-to-kejriwal-a-travesty-to-centre-siddaramaiah/

Read More

ನವದೆಹಲಿ: ಪೋರ್ಟ್ ಬ್ಲೇರ್ ಹೆಸರನ್ನು ‘ಶ್ರೀ ವಿಜಯ ಪುರಂ’ ಎಂದು ಮರುನಾಮಕರಣ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪ್ರಕಟಿಸಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ರಾಜಧಾನಿಯನ್ನು ಮರುನಾಮಕರಣ ಮಾಡುವ ನಿರ್ಧಾರವು ಭಾರತವನ್ನು “ವಸಾಹತುಶಾಹಿ ಮುದ್ರೆಗಳಿಂದ” ಮುಕ್ತಗೊಳಿಸುವ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನದಿಂದ ಸ್ಫೂರ್ತಿ ಪಡೆದಿದೆ ಎಂದು ಅವರು ಹೇಳಿದರು. “ಪ್ರಧಾನಿ ನರೇಂದ್ರ ಮೋದಿ ಜಿ ಅವರ ದೃಷ್ಟಿಕೋನದಿಂದ ಪ್ರೇರಿತರಾಗಿ, ದೇಶವನ್ನು ವಸಾಹತುಶಾಹಿ ಮುದ್ರೆಗಳಿಂದ ಮುಕ್ತಗೊಳಿಸಲು, ಇಂದು ನಾವು ಪೋರ್ಟ್ ಬ್ಲೇರ್ ಅನ್ನು “ಶ್ರೀ ವಿಜಯ ಪುರಂ” ಎಂದು ಮರುನಾಮಕರಣ ಮಾಡಲು ನಿರ್ಧರಿಸಿದ್ದೇವೆ” ಎಂದು ಶಾ ಟ್ವೀಟ್ ಮಾಡಿದ್ದಾರೆ. https://twitter.com/AmitShah/status/1834555334490554789 https://kannadanewsnow.com/kannada/mla-munirathna-threatens-contractor-what-happened-to-renukaswamy/ https://kannadanewsnow.com/kannada/big-news-sc-granted-bail-to-kejriwal-a-travesty-to-centre-siddaramaiah/

Read More

ಬೆಂಗಳೂರು: ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗಲಿದೆ ಎಂಬುದಾಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಗುತ್ತಿಗೆದಾರರೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದಂತ ಬಿ.ದಯಾನಂದ ಅವರನ್ನು ಭೇಟಿಯಾಗಿ ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರು ದೂರು ನೀಡಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗುತ್ತಿಗೆಯಲ್ಲಿ ಕಮೀಷನ್ ಕೇಳಿದ್ದಾರೆ. ನಾನು ನನ್ನ ಬಳಿಯಲ್ಲಿ 1 ಲಕ್ಷವಿದೆ ತಗೊಳ್ಳಿ ಅಂತ ಕೊಡೋಕೆ ಹೋದ್ರೆ ಎಲ್ಲಾ ಒಟ್ಟಿಗೆ ಕೊಡು ಅಂತ ಅವಾಜ್ ಹಾಕಿದರು ಎಂದರು. ನನಗೆ ಶಾಸಕ ಮುನಿರತ್ನ ಬೆದರಿಕೆ ಹಾಕಿದ್ದಾರೆ. 20 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಹಣ ಕೊಡದೇ ಇದ್ದರೇ ರೇಣುಕಾಸ್ವಾಮಿಗೆ ಆದಂತ ಗತಿಯೇ ನಿನಗೆ ಆಗಲಿದೆ ಎಂಬುದಾಗಿ ಬೆದರಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಮಾಡಿದ್ದೇ ನನ್ನ ಅಕ್ಕನ ಮಗ ಎಂಬುದಾಗಿಯೂ ಎಚ್ಚರಿಸಿದ್ದಾರೆ ಎಂಬುದಾಗಿ…

Read More

ಬೆಂಗಳೂರು; ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು ಹೊರವಲಯದ ಐದು ಕಡೆಗಳಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಲಾಗುವುದು ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಗೃಹಮಂಡಳಿ ಕಚೇರಿಯಲ್ಲಿ ಶಾಸಕರ ಜತೆ ಈ ಸಂಬಂಧ ಸಭೆ ನಡೆಸಿದ ವಸತಿ ಸಚಿವ ಜಮೀರ್ ಅಹಮದ್ ಖಾನ್, ಟೌನ್ ಶಿಪ್ ನಿರ್ಮಾಣ ಕ್ಕೆ ಜಮೀನು ಸ್ವಾಧೀನ ಸಂಬಂಧ ರೈತರ ಅದಾಲತ್ ನಡೆಸಿ ಅವರ ಒಪ್ಪಿಗೆ ಪಡೆದ ನಂತರ ಮುಂದಿನ ಪ್ರಕ್ರಿಯೆ ನಡೆಸಲು ನಿರ್ಧರಿಸಲಾಯಿತು. ದಾಬಸ್ ಪೇಟೆ, ಸೋಲೂರು, ಹೊಸಕೋಟೆ, ಬಿಡದಿ, ರಾಮನಗರ ಭಾಗದಲ್ಲಿ ಜಮೀನು ಲಭ್ಯತೆ ಆಧಾರದಲ್ಲಿ ಟೌನ್ ಶಿಪ್ ನಿರ್ಮಾಣ ಕ್ಕೆ ತೀರ್ಮಾನ ಮಾಡಲಾಗಿದ್ದು, ಪೂರ್ವಭಾವಿಯಾಗಿ ರೈತರ ಅದಾಲತ್ ನಡೆಸೋಣ ನಂತರ ಶಾಸಕರ ಸಮ್ಮುಖದಲ್ಲಿ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳೋಣ ಎಂದು ತಿಳಿಸಿದರು. ಸಭೆಯಲ್ಲಿ ಹಾಜರಿದ್ದ ಶಾಸಕರಾದ ಶರತ್ ಬಚ್ಚೆಗೌಡ, ಮಾಗಡಿ ಬಾಲಕೃಷ್ಣ, ನೆಲಮಂಗಲ ಶ್ರೀನಿವಾಸ್, ದೊಡ್ಡಬಳ್ಳಾಪುರ ಧೀರಜ್ ಮುನಿರಾಜು, ರೈತರು ಜಮೀನು ಕೊಡಲು ಸ್ವಯಂ ಪ್ರೇರಿತ ರಾಗಿ…

Read More