Author: kannadanewsnow09

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಪಪ್ರಚಾರದ ನಡುವೆಯೂ ಬಿಹಾರ ರಾಜ್ಯದಲ್ಲಿ ಎನ್‍ಡಿಎ ಐತಿಹಾಸಿಕ ಗೆಲುವು ದಾಖಲಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ನಿನ್ನೆ ಬಿಹಾರ ರಾಜ್ಯದ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ- ಜೆಡಿಯು ಒಳಗೊಂಡ ಎನ್‍ಡಿಎ ಕೂಟ ಪ್ರಚಂಡ ಜಯಭೇರಿ ಬಾರಿಸಿದೆ ಎಂದು ವಿಶ್ಲೇಷಿಸಿದರು. ನರೇಂದ್ರ ಮೋದಿಜೀ ಅವರ ಜನಪ್ರಿಯತೆ, ಬಿಹಾರ ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ನೋಡಿ ಬಿಹಾರ ರಾಜ್ಯದ ಮತದಾರರು ಮತ್ತೊಮ್ಮೆ ಎನ್‍ಡಿಎ ಕೂಟಕ್ಕೆ ಆಶೀರ್ವಾದ ಮಾಡಿದ್ದಾರೆ ಎಂದು ತಿಳಿಸಿದರು. ಚುನಾವಣಾ ಚಾಣಕ್ಯ ಅಮಿತ್ ಶಾ ಜೀ ಅವರ ಕಾರ್ಯತಂತ್ರ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜೀ ಅವರ ನೇತೃತ್ವ, ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಪ್ರಯತ್ನ, ಎರಡೂ ಪಕ್ಷಗಳ ಕಾರ್ಯಕರ್ತರ ಪರಿಶ್ರಮ- ಇದೆಲ್ಲದರ ಪರಿಣಾಮವಾಗಿ ಒಂದು ಐತಿಹಾಸಿಕ ಗೆಲುವು ದಾಖಲಾಗಿದೆ ಎಂದು ವಿವರಿಸಿದರು. ರಾಹುಲ್ ಗಾಂಧಿಯವರು ಮತಗಳ್ಳತನದ ಕುರಿತು ಬಿಹಾರ ರಾಜ್ಯದ…

Read More

ಬೆಂಗಳೂರು: ಬಿ.ವೈ. ವಿಜಯೇಂದ್ರ ಅವರು ಕರ್ನಾಟಕ ರಾಜ್ಯದ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರಾಗಿ ಇಂದಿಗೆ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುತ್ತಾರೆ. ಈ ಸಂದರ್ಭದಲ್ಲಿ ಜಗನ್ನಾಥ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪಕ್ಷದ ಹಿರಿಯರ ಸಮ್ಮುಖದಲ್ಲಿ ಗೌರವಿಸಿ ಶುಭಕೋರಲಾಯಿತು. ಬಿ.ವೈ. ವಿಜಯೇಂದ್ರ ಅವರು ತಮ್ಮ ಅಧ್ಯಕ್ಷತೆಯ ಜವಾಬ್ದಾರಿಯನ್ನು ಬೂತ್ ಅಧ್ಯಕ್ಷರ ಮನೆಗೆ ಭೇಟಿ ಪ್ರಾರಂಭಿಸಿದ್ದರು. ಕರ್ನಾಟಕ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ತಳಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಕಳೆದ 2ವರ್ಷಗಳಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ಈಗಾಗಲೇ ಭೇಟಿ ನೀಡಿರುತ್ತಾರೆ. ಅವರ ನೇತೃತ್ವದಲ್ಲಿ ಕೈಗೊಂಡ ಮೈಸೂರು ಮುಡಾ ಹಗರಣದ ಪಾದಯಾತ್ರೆ, ವಾಲ್ಮೀಕಿ ಹಗರಣ ಕುರಿತಾದ ಹೋರಾಟ, ಬೆಲೆ ಏರಿಕೆ ಖಂಡಿಸಿ ನಡೆಸಿದ ಅಹೋರಾತ್ರಿ ಧರಣಿ, ಬೆಲೆ ಏರಿಕೆ ವಿರುದ್ಧ ರಾಜ್ಯಾದ್ಯಂತ ಕೈಗೊಂಡ ಜನಾಕ್ರೋಶ ಯಾತ್ರೆ, ಕಬ್ಬು ಬೆಳೆಗಾರರ ಹೋರಾಟ, ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನದ ದುರ್ಬಳಕೆಯ ವಿರುದ್ಧ ಹೋರಾಟ, ರಾಜ್ಯ ಸರ್ಕಾರದ ಶೂನ್ಯ ಅಭಿವೃದ್ಧಿಯ ವಿರುದ್ಧ ನಡೆಸಿದ ಹೋರಾಟಗಳ…

Read More

ನವದೆಹಲಿ: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್‌ನಲ್ಲಿ ಮೊದಲ ಬಾರಿ ಗೆದ್ದಿದ್ದ ತಮ್ಮ ತಂಡದ ಪ್ರಮುಖ ಆಟಗಾರರ ಪೈಕಿ ಹೆಚ್ಚಿನವರನ್ನು ಮಿನಿ ಹರಾಜಿನ ಮೊದಲು ಉಳಿಸಿಕೊಂಡಿದೆ. ಆರ್‌ಸಿಬಿ 17 ಆಟಗಾರರನ್ನು ಉಳಿಸಿಕೊಂಡಿದ್ದು, ನವೆಂಬರ್ 15 ರಂದು ಎಂಟು ಆಟಗಾರರನ್ನು ಉಳಿಸಿಕೊಂಡಿದೆ. 2025 ರ ಹರಾಜಿನಲ್ಲಿ 8.75 ಕೋಟಿ ರೂ.ಗೆ ಆಯ್ಕೆಯಾದ ಇಂಗ್ಲೆಂಡ್ ಆಲ್‌ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಮತ್ತು 1 ಕೋಟಿ ರೂ.ಗೆ ಆಯ್ಕೆಯಾದ ಲುಂಗಿ ಎನ್‌ಗಿಡಿ ಪ್ರಮುಖ ಆಟಗಾರರಾಗಿದ್ದಾರೆ. ಬಿಡುಗಡೆಯಾದ ಇತರ ಆಟಗಾರರು ಮಾಯಾಂಕ್ ಅಗರ್ವಾಲ್, ಸ್ವಸ್ತಿಕ್ ಚಿಕಾರ, ಟಿಮ್ ಸೀಫರ್ಟ್, ಮನೋಜ್ ಭಂಡಗೆ, ಬ್ಲೆಸ್ಸಿಂಗ್ ಮುಜರಬಾನಿ ಮತ್ತು ಮೋಹಿತ್ ರಾಥೀ. ಆರ್‌ಸಿಬಿ ಎಂಟು ಆಟಗಾರರನ್ನು ಬಿಡುಗಡೆ ಮಾಡಿದ್ದರೂ, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಜಿತೇಶ್ ಶರ್ಮಾ ಮತ್ತು ಕೃನಾಲ್ ಪಾಂಡ್ಯ ಮುಂತಾದ ಪ್ರಮುಖ ಆಟಗಾರರನ್ನು ಉಳಿಸಿಕೊಂಡಿದೆ. ಹಾಲಿ ಚಾಂಪಿಯನ್‌ಗಳು ಹರಾಜಿನಲ್ಲಿ 16.4 ಕೋಟಿ ರೂ.ಗಳೊಂದಿಗೆ ಭಾಗವಹಿಸುತ್ತಾರೆ. RCB ಬಿಡುಗಡೆ ಮಾಡಿದ ಆಟಗಾರರ ಪಟ್ಟಿ: ಲಿಯಾಮ್ ಲಿವಿಂಗ್‌ಸ್ಟೋನ್, ಲುಂಗಿ…

Read More

ಮಂಡ್ಯ: ರಾಜ್ಯದಲ್ಲಿ ಸರ್ಕಾರಿ ಸಭೆ, ಸಮಾರಂಭ, ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿ ಬಳಸುವಂತಿಲ್ಲ. ಬದಲಾಗಿ ಪರಿಸರ ಸ್ನೇಹಿಯಾದಂತ ವಸ್ತುಗಳನ್ನು ಬಳಕೆ ಮಾಡುವಂತೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದರು. ಆದರೇ ಸರ್ಕಾರದ ಆದೇಶಕ್ಕೆ ಅಧಿಕಾರಿಗಳು ಡೋಂಟ್ ಕೇರ್ ಎನ್ನುವಂತೆ ಮಂಡ್ಯದಲ್ಲಿ ಕೆಡಿಪಿ ಸಭೆಯಲ್ಲೇ ಪ್ಲಾಸ್ಟಿಕ್ ನೀರಿನ ಬಾಟಲಿ ಬಳಕೆ ಮಾಡಿರುವುದು ಕಂಡು ಬಂದಿದೆ. ಹೌದು ಮಂಡ್ಯದ ಮದ್ದೂರಿನ ಪ್ರವಾಸಿ ಮಂದಿರದಲ್ಲಿ ಕೆಡಿಪಿ ಸಭೆಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟೆಲ್ ಬಳಕೆ ಮಾಡಲಾಗಿದೆ. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆಯುತ್ತಿರುವ ಸಭೆ ಇದಾಗಿದೆ. ಮದ್ದೂರು ಶಾಸಕ ಕೆ.ಎಂ.ಉದಯ್ ಹಾಗೂ ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಅವರ ನೇತೃತ್ವದಲ್ಲಿ ನಡೆದಂತ ಕೆಡಿಪಿ ಸಭೆಯಲ್ಲೇ ಪ್ಲಾಸ್ಟಿಕ್ ನೀರಿನ ಬಾಟಲಿ ಬಳಕೆ ಮಾಡಲಾಗಿದೆ. ಸರ್ಕಾರಿ ಸಭೆ, ಸಮಾರಂಭ ಹಾಗೂ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಿರುವ ಸರ್ಕಾರ ಆದೇಶಿಸಿತ್ತು. ಇದೀಗ ಸರ್ಕಾರದ ಆದೇಶಕ್ಕೂ ಕ್ಯಾರೆ ಎನ್ನದ ಅಧಿಕಾರಿಗಳು ಸರ್ಕಾರಿ ಸಭೆಯಲ್ಲೇ ಪ್ಲಾಸ್ಟಿಕ್ ನೀರಿನ ಬಳಕೆ ಮಾಡಿದ್ದಾರೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/congress-high-command-gives-green-signal-for-state-cabinet-reshuffle-8-to-12-ministers-out/ https://kannadanewsnow.com/kannada/114-trees-will-be-planted-at-114-places-in-honor-of-the-tree-of-the-same-name-minister-ishwar-khandre/

Read More

ಬೆಂಗಳೂರು : 114ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ 114 ಸಸಿ ನೆಟ್ಟು ಪೋಷಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ನಿನ್ನೆ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ ಮಹಾನ್ ಪರಿಸರ ಪ್ರೇಮಿಗೆ ಅಂತಿಮ ನಮನ ಸಲ್ಲಿಸಿದ ತರುವಾಯ ಮಾತನಾಡಿದ ಅವರು, ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಬೆಳೆಸಿ ವಿಶ್ವಕ್ಕೇ ವೃಕ್ಷಗಳ ಮಹತ್ವ ಸಾರಿದ ಸಾಲುಮರದ ತಿಮ್ಮಕ್ಕ ಅವರ ಹೆಸರಲ್ಲಿ ಸಸಿನೆಡುವ ಮೂಲಕ ಅರಣ್ಯ ಇಲಾಖೆ ಗೌರವ ಸಲ್ಲಿಸಲಿದೆ ಎಂದರು. ಇಲಾಖೆ ಅವರನ್ನು ಪರಿಸರ ರಾಯಭಾರಿಯಾಗಿ ಪುರಸ್ಕರಿಸಿತ್ತು. ಅಜ್ಜಿಯ ಪ್ರೇರಣೆಯಿಂದ ನೂರಾರು ಜನರು ತಮ್ಮ ಕೈಲಾದಷ್ಟು ಸಸಿ ನೆಟ್ಟು ಪೋಷಿಸುತ್ತಿದ್ದಾರೆ. ಲಕ್ಷಾಂತರ ಪರಿಸರ ಪ್ರೇಮಿಗಳಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕ ಅವರ ನಿಧನದಿಂದ ರಾಜ್ಯ ನಿಷ್ಠಾವಂತ ಪರಿಸರ ಕಾಳಜಿಯ ಮಹಾಜೀವಿಯನ್ನು ಕಳೆದುಕೊಂಡಿದೆ ಎಂದು ದುಃಖ ವ್ಯಕ್ತಪಡಿಸಿದರು. ಸಾಲುಮರದ ತಿಮ್ಮಕ್ಕ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಈಶ್ವರ ಬಿ ಖಂಡ್ರೆ  ತಿಳಿಸಿದರು. https://kannadanewsnow.com/kannada/19-deer-die-in-belgaum-zoo-minister-ishwar-khandre-orders-investigation/…

Read More

ಬೆಂಗಳೂರು : ಬೆಳಗಾವಿ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ವ್ಯಾಕುಲ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಪ್ರಾಥಮಿಕ ವರದಿಗಳ ರೀತ್ಯ ಈ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಮೃಗಾಲಯದ ಬೇರೆ ಯಾವುದೇ ಪ್ರಾಣಿಗೆ ಸೋಂಕು ತಗುಲದಂತೆ ಎಲ್ಲ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಜಿಂಕೆಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೆಕ್ಕು ಇತ್ಯಾದಿ ಸಾಕು ಪ್ರಾಣಿಗಳಿಂದ ಈ ಕಾಯಿಲೆ ಹರಡಿದೆಯೇ ಎಂಬ ಬಗ್ಗೆ ಒಂದು ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಮೃಗಾಲಯದಲ್ಲಿರುವ ಪ್ರಾಣಿಗಳು ಈ ರೀತಿ ಸಾವಿಗೀಡಾಗುವುದು ಆತಂಕದ ವಿಚಾರವಾಗಿದ್ದು, ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಈಶ್ವರ ಖಂಡ್ರೆ ಆದೇಶ ನೀಡಿದ್ದಾರೆ. https://kannadanewsnow.com/kannada/congress-high-command-gives-green-signal-for-state-cabinet-reshuffle-8-to-12-ministers-out/…

Read More

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವತಿಯಿಂದ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನ.16ರಂದು ಭಾನುವಾರ ಸಂಜೆ 6ಕ್ಕೆ ಮಂಡ್ಯದಲ್ಲಿ ರಾಷ್ಟ್ರೀಯ ಮಾಧ್ಯಮ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಪತ್ರಕರ್ತರಾದ ಅಂಶಿ ಪ್ರಸನ್ನಕುಮಾರ್ ಅವರು ಉಪನ್ಯಾಸ ನೀಡಲಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ. https://kannadanewsnow.com/kannada/deepak-sagar-appointed-as-the-secretary-of-shivamogga-district-karnataka-working-journalists-association/ https://kannadanewsnow.com/kannada/minister-madhu-bangarappas-janaspandan-program-at-sagars-talaguppa-on-november-18th-solution-to-your-problem-on-the-spot/

Read More

ಬೆಂಗಳೂರು: ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಂಪುಟ ಪುನಾರಚನೆಗೆ ಚರ್ಚಿಸಿದರು. ಈ ವೇಳೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಅವರ ಜೊತೆಗೆ ಚರ್ಚಿಸಿ ಪುನಾರಚನೆ ಮಾಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗೋದು ಫಿಕ್ಸ್ ಆದಂತೆ ಆಗಿದೆ. ಜೊತೆ ಜೊತೆಗೆ 8 ರಿಂದ 12 ಸಚಿವರು ಹೊರಗೆ ಹೋಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಹಾರ ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂಬ ಸುದ್ದಿ ಹಬ್ಬಿತ್ತು. ಬಿಹಾರದಲ್ಲಿ ಮಹಾಘಟಬಂಧನ್ ಹೀನಾಯ ಸೋಲು ಕಂಡ ಬಳಿಕ ಇದಕ್ಕೆ ಅವಕಾಶವಿಲ್ಲ ಎಂದೇ ಹೇಳಲಾಗುತ್ತಿತ್ತು. ಆದರೇ ಇತ್ತೀಚಿನ ಮಾಹಿತಿಯಂತೆ ಸಿಎಂ ಸಿದ್ಧರಾಮಯ್ಯ ಅವರು ರಾಹುಲ್ ಗಾಂಧಿ ಭೇಟಿಯ ವೇಳೆಯಲ್ಲಿ ರಾಜ್ಯ ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ.ಸಿ ವೇಣುಗೋಪಾಲ್…

Read More

ನವದೆಹಲಿ: ಕರ್ನಾಟಕ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಬಿಹಾರ ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್ ಸಚಿವ ಸಂಪುಟ ಪುನಾರಚನೆಗೊಳ್ಳಲಿದೆ ಎನ್ನುವುದು ಖಚಿತಗೊಂಡಂತೆ ಆಗಿದೆ. ಹೌದು ರಾಜ್ಯ ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಖರ್ಗೆ ಜೊತೆಗೆ ಚರ್ಚಿಸಿ ಪುನಾರಚನೆ ಮಾಡಿ ಎಂಬುದಾಗಿ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹೇಳಿರುವುದಾಗಿ ತಿಳಿದು ಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಜೊತೆಗೆ ಸಿಎಂ ಸಿದ್ಧರಾಮಯ್ಯ ಚರ್ಚಿಸಿ ಸಂಪುಟ ಪುನಾರಚನೆ ಮಾಡಲಿದ್ದಾರೆ. ಚರ್ಚೆ ಬಳಿಕ ಯಾರಿಗೆ ಸಚಿವ ಸ್ಥಾನ ನೀಡಬೇಕು. ಯಾರನ್ನು ತೆಗೆದು ಹಾಕಬೇಕು ಎನ್ನುವ ಅಂತಿಮ ಲೀಸ್ಟ್ ಕಾಂಗ್ರೆಸ್ ಹೈಕಮಾಂಡ್ ಗೆ ಸಿಎಂ ಸಿದ್ಧರಾಮಯ್ಯ ಸಲ್ಲಿಸೋ ಸಾಧ್ಯತೆ ಇದೆ. ರಾಜ್ಯ ಸಂಪುಟದ ಹಾಲಿ 8 ರಿಂದ 12 ಸಚಿವರನ್ನು ಬದಲಾವಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಯಾರು ಔಟ್, ಯಾರು ಇನ್ ಆಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.…

Read More

ಶಿವಮೊಗ್ಗ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ನ. 18 ರಂದು ಮಧ್ಯಾಹ್ನ 1.30ಕ್ಕೆ ಸಾಗರ ತಾಲೂಕು ತಾಳಗುಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಸಮಸ್ಯೆಗಳ ಕುರಿತು ಪರಿಹಾರ ನೀಡಲು “ಜನಸ್ಪಂದನಾ “ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸಾಗರ ತಾಲೂಕು ಮಟ್ಟದ ಅಧಿಕಾರಿಗಳು ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಅಗತ್ಯ ಮಾಹಿತಿಯೊಂದಿಗೆ ತಮ್ಮ ಕಚೇರಿಯ ಯಾವುದೇ ಪ್ರತಿನಿಧಿಯನ್ನು ನಿಯೋಜಸದೆ ತಾವೇ ಖುದ್ದಾಗಿ ತಪ್ಪದೇ ಹಾಜರಿದ್ದು ತಮ್ಮ ಇಲಾಖೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿಯನ್ನು ನೀಡುವಂತೆ ಸಾಗರ ತಾಲೂಕು ತಹಶೀಲ್ದಾರ್‌ರವರು ಪ್ರಕಟಣೆಯಲ್ಲಿ ತಿಳಿಸಿದೆ. ಭದ್ರಾವತಿ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಭದ್ರಾವತಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ 19 ಕಾರ್ಯಕರ್ತೆಯರು ಮತ್ತು 59 ಸಹಾಯಕಿಯರ ಹುದ್ದೆಗಳನ್ನು…

Read More