Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 58 ಜನರಿಗೆ ಕೋವಿಡ್ ಪಾಸಿಟಿವ್ ಅಂತ ವರದಿಯಲ್ಲಿ ತಿಳಿದು ಬಂದಿದೆ. ಅಲ್ಲದೇ ಸೋಂಕಿನಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿ ಸಿ ಆರ್ ಮೂಲಕ 354, ರಾಟ್ ಮೂಲಕ 66 ಸೇರಿದಂತೆ 420 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 58 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದಿದೆ. ಇಂದು 53 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ಸಕ್ರೀಯ ಪ್ರಕರಣಗಳ ಸಂಖ್ಯೆ 238ಕ್ಕೆ ತಲುಪಿದೆ. ಹೋಂ ಐಸೋಲೇಷನ್ ನಲ್ಲಿ 225 ಸೋಂಕಿತರಿದ್ದರೇ, 6 ಮಂದಿ ಖಾಸಗಿ, 6 ಮಂದಿ ಸರ್ಕಾರಿ ಆಸ್ಪತ್ರೆಯಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ. ಕೊರೋನಾ ಸೋಂಕಿಗೆ ಒಳಗಾಗಿದ್ದಂತ ಬೆಂಗಳೂರಿನ 63 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬುದಾಗಿ ಹೇಳಿದೆ. https://kannadanewsnow.com/kannada/hindu-activists-arrested-with-the-help-of-congress-leaders-bjp-state-president-b-y-vijayendra-lashes-out/…

Read More

ಮಂಡ್ಯ : ಇತ್ತಿಚೆಗೆ ಮಂಗಳೂರಿನಲ್ಲಿ ಮುಸ್ಲಿಂ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ರಾಜ್ಯ ಸರ್ಕಾರ, ಕಾಂಗ್ರೆಸ್ ಪುಢಾರಿಗಳ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತರ ಬಂಧನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು. ಮದ್ದೂರು ಬಿಜೆಪಿ ಮಂಡಲ ಕಛೇರಿಗೆ ಶನಿವಾರ ಭೇಟಿ ನೀಡಿದ ಅವರು ಮನ್ ಮುಲ್ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಮತ್ತು ಬಿಜೆಪಿ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ನಡೆಯುತ್ತಿರುವ ಕೋಮುಗಲಭೆಯ ವಿಷಯದಲ್ಲಿ ಕಾಂಗ್ರೆಸ್ ಪಕ್ಷವೇ ಅದನ್ನು ಹತ್ತಿಕ್ಕುವ ಬದಲು ಬೆಂಕಿ ಹಚ್ಚುವ ಕೆಲಸವನ್ನು ಮಾಡುವ ಮೂಲಕ ಅದನ್ನು ಹೆಚ್ಚೆಚ್ಚು ಮಾಡಲು ಪಿತೂರಿ ಮಾಡುತ್ತಿದೆ ಹಾಗೂ ರಾಜ್ಯದ ಹಲವೆಡೆ ಕೋಮುಗಲಭೆಗಳಿಗೆ ಪ್ರಚೋದನೆ ನೀಡಿ ಕುಮ್ಮಕ್ಕು ನೀಡುತ್ತಿದ್ದಾರೆ ಅದು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಚೆನ್ನಾಗಿ ಗೊತ್ತಿದೆ ಎಂದು ಆರೋಪಿಸಿದರು. ಮಂಗಳೂರಿನಲ್ಲಿ ಮುಸ್ಲಿಂ ಹತ್ಯೆ ಆಗಿದೆ, ಇವರ ಇಂಟಲಿಜೆನ್ಸ್ ಎಲ್ಲಿ ಹೋಗಿತ್ತು. ಸುಹಾಸ್ ಶೆಟ್ಟಿ ಹತ್ಯೆಯಾದ ಸಂದರ್ಭದಲ್ಲಿ ಯಾವ ರೀತಿ ಮಹಿಳೆಯರು…

Read More

ಮಂಡ್ಯ : ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ನಡೆದಿರುವ ದಲಿತ ಯುವಕನ ಸಾವಿಗೆ ಪೋಲೀಸರ ವೈಫಲ್ಯವೇ ಕಾರಣವಾಗಿದೆ ಎಂದು ಆರೋಪಿಸಿ ಮದ್ದೂರು ತಾಲೂಕು ಕಛೇರಿ ಎದುರು ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿದರು. ಮದ್ದೂರು ಪಟ್ಟಣದ ಪುರಸಭೆ ಮುಂಭಾಗವಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ತಾಲೂಕು ಕಛೇರಿ ಎದುರು ಜಮಾಯಿಸಿದ ದಲಿತ ಮುಖಂಡರು ಜಿಲ್ಲಾ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ಮಾತನಾಡಿ, ಕತ್ತರಘಟ್ಟ ಗ್ರಾಮದ ಯುವಕ ಜಯಕುಮಾರ್ ಸಾವು ವಿದ್ರಾವಕ ಘಟನೆಯಾಗಿದ್ದು, ಜಮೀನಿನ ವಿಚಾರವಾಗಿ ಗಲಾಟೆಯಾಗಿತ್ತು. ಜಯಕುಮಾರ್ ಸಾಯುವ ಮುನ್ನಾ ದಿನ ಪೋಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ವಹಿಸಲಿಲ್ಲ ಹೀಗಾಗಿ ಈ ಕೃತ್ಯಕ್ಕೆ ಪೋಲಿಸರೇ ನೇರ ಕಾರಣರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು. ಸಂಬಂಧ ಪುಟ್ಟ ಪೋಲೀಸ್…

Read More

ಶಿವಮೊಗ್ಗ : ಪೌರ ಕಾರ್ಮಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ದುಶ್ಚಟಗಳಿಂದ ದೂರವಿದ್ದು ಉತ್ತಮ ಆರೋಗ್ಯ ಹೊಂದುವ ಮೂಲಕ ಕುಟುಂಬ ನಿರ್ವಹಣೆಯನ್ನು ಯಶಸ್ವಿಯಾಗಿ ಮಾಡಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕಾರ್ಗಲ್ ಪಟ್ಟಣದಲ್ಲಿ ಸುಮುಖ ಆಸ್ಪತ್ರೆಯಿಂದ ಪೌರ ಕಾರ್ಮಿಕರಿಗೆ ಹಮ್ಮಿಕೊಂಡಿದ್ದಂತ ಮೆಘಾ ಹೆಲ್ತ್ ಕ್ಯಾಂಪ್ ಉದ್ಘಾಟಿಸಿದರು. ಅಲ್ಲದೇ ವೈದ್ಯ ಅರುಣ ಕುಮಾರ್ ಅವರನ್ನು ಅಭಿನಂದಿಸಿ ಮಾತನಾಡಿದಂತ ಅವರು, ಊರಿನ ಸ್ವಚ್ಚತೆ ನಿರ್ವಹಿಸುವಲ್ಲಿ ಪೌರ ಕಾರ್ಮಿಕರ ಪಾತ್ರ ಪ್ರಮುಖವಾಗಿದೆ. ಕೆಲಸದ ಒತ್ತಡ, ಸೇವಿಸುವ ಆಹಾರ ಇನ್ನಿತರೆಗಳಿಂದ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಗಲ್ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಜನರ ಆರೋಗ್ಯ ರಕ್ಷಣೆ ಮಾಡುವ ಪೌರ ಕಾರ್ಮಿಕರ ಆರೋಗ್ಯ ಕಾಪಾಡುವ ಕೆಲಸಕ್ಕೆ ಮುಂದಾಗಿರುವುದು ಆಡಳಿತದ ಕಾರ್ಯಕ್ಷಮತೆಗೆ ಸಾಕ್ಷಿಯಾಗಿದೆ ಎಂದರು. ರಾಜ್ಯ ಸರ್ಕಾರ ಪೌರ ಕಾರ್ಮಿಕರ ಆರೋಗ್ಯ ರಕ್ಷಣೆಗೆ ಅಗತ್ಯ ಯೋಜನೆ ರೂಪಿಸಿದೆ. ಇದರ…

Read More

ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಪೊಲೀಸ್ ( Karnataka Lokayukta Police ) ವಿಭಾಗದ ಬೆಳಗಾವಿ-1, ಬಾಗಲಕೋಟೆ-1, ಬಳ್ಳಾರಿ-1, ದಾವಣಗೆರೆ-1, ಉಡುಪಿ-1, ಗದಗ-1 ಮತ್ತು ಧಾರವಾಡ-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 7 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಿಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ. ಈ ದಿನ ದಿನಾಂಕ: 31.05.2025 ರಂದು ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಛೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 33 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧನಾ ಕಾರ್ಯ ಕೈಗೊಂಡಿದ್ದು, ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಅಸಮತೋಲನ ಆಸ್ತಿ ಹೊಂದಿದ್ದ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ. 1) ಸಿದ್ದಲಿಂಗಪ್ಪ ನಿಂಗಪ್ಪ ಬನಸಿ, ಜಿಲ್ಲಾ ವ್ಯವಸ್ಥಾಪಕರು, ಡಿ ದೇವರಾಜ ಅರಸ್ ಅಭಿವೃದ್ದಿ ನಿಗಮ, ಸುವರ್ಣ ಸೌಧ, ಬೆಳಗಾವಿ. ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 3 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು…

Read More

ನವದೆಹಲಿ: ಜೂನ್ 1 ರಿಂದ ಕೆಲವು ಐಫೋನ್‌ಗಳು ಮತ್ತು ಆಂಡ್ರಾಯ್ಡ್ ಸಾಧನಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಲಿದೆ. ಈ ಹಿಂದೆ, ಈ ಕ್ರಮವು ಮೇ 2025 ರಲ್ಲಿ ಜಾರಿಗೆ ಬರಲಿದೆ ಎಂದು ಕಂಪನಿ ಹೇಳಿತ್ತು. ಆದಾಗ್ಯೂ, ಸ್ವಲ್ಪ ವಿಳಂಬವು ಬಳಕೆದಾರರು ತಮ್ಮ ಫೋನ್‌ಗಳನ್ನು ಬದಲಾಯಿಸಲು ಹೆಚ್ಚಿನ ಸಮಯವಾಯಿತು. ನಾಳೆಯಿಂದ, iOS 15 ಅಥವಾ ಹಿಂದಿನ ಆವೃತ್ತಿಗಳಲ್ಲಿ ಚಾಲನೆಯಲ್ಲಿರುವ ಐಫೋನ್‌ಗಳು ವಾಟ್ಸಾಪ್ ಅನ್ನು ಬೆಂಬಲಿಸಲು ಸಾಧ್ಯವಾಗುವುದಿಲ್ಲ. ಮೆಸೇಜಿಂಗ್ ಅಪ್ಲಿಕೇಶನ್ ಆಂಡ್ರಾಯ್ಡ್ 5.0 ಅಥವಾ ಅದಕ್ಕಿಂತ ಹಿಂದಿನ ಬೆಂಬಲವನ್ನು ಸಹ ಹಿಂತೆಗೆದುಕೊಳ್ಳುತ್ತಿದೆ. ಯಾವ ಫೋನ್‌ಗಳನ್ನು ಗುರಿಯಾಗಿಸಲಾಗುತ್ತಿದೆ ಎಂಬುದನ್ನು ಇಲ್ಲಿ ನೋಡೋಣ. ಇನ್ನು ಮುಂದೆ WhatsApp ಅನ್ನು ಬೆಂಬಲಿಸದ iPhones ಮತ್ತು Android ಗಳ ಪಟ್ಟಿ — iPhone 5s — iPhone 6 — iPhone 6 Plus — iPhone 6s — iPhone 6s Plus — iPhone SE (1 ನೇ ಜನ್) — Samsung Galaxy S4 — Samsung…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿಗೆ ಬಿಗ್ ಶಾಕ್ ಎನ್ನುವಂತೆ ರಾಜ್ಯ ಸಚಿವ ಸ್ಥಾನ ಹಾಗೂ ರಾಜ್ಯ ಸಚಿರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ಹಿಂಪಡೆದು ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು,  ನಾಡೋಜ ಡಾ: ಮಹೇಶ್‌ ಜೋಶಿ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಇವರಿಗೆ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 49 ಶಿಸನೇ 2022 ದಿನಾಂಕ: 03.08.2022 ಹಾಗೂ ಸಿಆಸುಇ 01 ಶಿಸನೇ 2023 ದಿನಾಂಕ: 05.01.2023 ರಲ್ಲಿ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ತಿಳಿಸಿದೆ. https://kannadanewsnow.com/kannada/icc-introduces-new-criket-rules-ahed-of-world-test-championship-final/ https://kannadanewsnow.com/kannada/shocking-chamarajanagar-a-young-mans-body-was-found-in-a-state-of-being-trapped-in-the-compound-wall/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿಗೆ ಬಿಗ್ ಶಾಕ್ ಎನ್ನುವಂತೆ ಸಂಪುಟ ದರ್ಜೆಯ ಸ್ಥಾನಮಾನ ಹಿಂಪಡೆದು ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು,  ನಾಡೋಜ ಡಾ: ಮಹೇಶ್‌ ಜೋಶಿ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಇವರಿಗೆ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 49 ಶಿಸನೇ 2022 ದಿನಾಂಕ: 03.08.2022 ಹಾಗೂ ಸಿಆಸುಇ 01 ಶಿಸನೇ 2023 ದಿನಾಂಕ: 05.01.2023 ರಲ್ಲಿ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ತಿಳಿಸಿದೆ. https://kannadanewsnow.com/kannada/icc-introduces-new-criket-rules-ahed-of-world-test-championship-final/ https://kannadanewsnow.com/kannada/shocking-chamarajanagar-a-young-mans-body-was-found-in-a-state-of-being-trapped-in-the-compound-wall/

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (International Cricket Council -ICC)) ಮುಂದಿನ ತಿಂಗಳಿನಿಂದ ಹೊಸ ಆಟದ ನಿಯಮಗಳನ್ನು ಜಾರಿಗೆ ತರಲಿದ್ದು, ಏಕದಿನ ಪಂದ್ಯಗಳಲ್ಲಿ ಏಕ ಚೆಂಡಿನ ನಿಯಮಕ್ಕೆ ಮರಳಲಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಜೂನ್‌ನಿಂದ ಹೊಸ ಆಟದ ನಿಯಮಗಳು ಜಾರಿಗೆ ಬರಲಿದ್ದು, ಜುಲೈನಿಂದ ಬಿಳಿ ಚೆಂಡಿನ ಸ್ವರೂಪದಲ್ಲಿ ಅವು ಜಾರಿಗೆ ಬರಲಿವೆ. ಗಮನಾರ್ಹವಾಗಿ, ಅಸ್ತಿತ್ವದಲ್ಲಿರುವ ನಿಯಮಗಳು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅನ್ವಯಿಸುತ್ತವೆ, ಏಕೆಂದರೆ ಮಾರ್ಪಡಿಸಿದ ಬದಲಾವಣೆಗಳು ಮುಂದಿನ WTC ಚಕ್ರದಿಂದ ಜಾರಿಗೆ ಬರುತ್ತವೆ. ಶ್ರೀಲಂಕಾ vs ಬಾಂಗ್ಲಾದೇಶ ಟೆಸ್ಟ್ ಸರಣಿಯಿಂದ ಪ್ರಾರಂಭವಾಗುತ್ತದೆ. ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವಿನ ಬಿಳಿ ಚೆಂಡಿನ ಸರಣಿಯಿಂದ ಬಿಳಿ ಚೆಂಡಿನ ಸ್ವರೂಪದಲ್ಲಿ ಬದಲಾವಣೆಗಳು ಜಾರಿಗೆ ಬರಲಿವೆ. ಹೊಸ ನಿಯಮಗಳೇನು? ಐಸಿಸಿ ಏಕದಿನ ಕ್ರಿಕೆಟ್‌ನಲ್ಲಿ ಏಕ ಚೆಂಡಿನ ನಿಯಮದ ಮೇಲೆ ಕೇಂದ್ರೀಕರಿಸಿದೆ. ಐಸಿಸಿ ತನ್ನ ಸದಸ್ಯರಿಗೆ ತಿಳಿಸಿರುವ ನಿಯಮಗಳ ಪ್ರಕಾರ, “1 ರಿಂದ 34 ಓವರ್‌ಗಳವರೆಗಿನ ಓವರ್‌ಗಳಿಗೆ ಎರಡು ಹೊಸ ಚೆಂಡುಗಳು ಇರುತ್ತವೆ. 34 ಓವರ್‌ಗಳು…

Read More

ಬೆಂಗಳೂರು: : ಸಾಗರದ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ಪತ್ರಕರ್ತ ಮಹೇಶ್ ಹೆಗಡೆ ಅವರಿಗೆ ಜೀವ ಬೆದರಿಕೆ ಹಾಕಿ, ಹಲ್ಲೆಗೆ ಯತ್ನಿಸಿದ ರಿಯಲ್ ಎಸ್ಟೆಟ್ ಉದ್ಯಮಿ ರವೀಂದ್ರ ಕಾಮತ್ ಮತ್ತು ಪ್ರದೀಪ್ ಎಂಬುವವರ ವಿರುದ್ದ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಶನಿವಾರ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಡಿವೈಎಸ್‌ಪಿ ಅವರಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನ್ಯೂ ಬಿ.ಎಚ್.ರಸ್ತೆಯ ಸ್ವಾತಿ ವೆಜ್ ಹೋಟೆಲ್‌ಗೆ ಶನಿವಾರ ಮಹೇಶ್ ಹೆಗಡೆ ಅವರು ತಮ್ಮ ಸ್ನೇಹಿತರ ಜೊತೆ ಹೋಗಿದ್ದಾಗ ರವೀಂದ್ರ ಕಾಮತ್, ಪ್ರದೀಪ್ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಾರೆ. ಸಾಗರ ತಾಲ್ಲೂಕು ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ಮಹೇಶ್ ಹೆಗಡೆ ಅಕ್ರಮ ಜಮೀನು ಒತ್ತುವರಿ ಸೇರಿದಂತೆ ಬೇರೆಬೇರೆ ವಿಷಯಗಳ ಕುರಿತು ನಿಷ್ಪಕ್ಷಪಾತವಾಗಿ ವರದಿ ಮಾಡುತ್ತಿದ್ದಾರೆ. ರಿಯಲ್ ಎಸ್ಟೆಟ್ ದಂಧೆ ನಡೆಸುತ್ತಿರುವ ರವೀಂದ್ರ ಕಾಮತ್ ಮತ್ತು ವಿಜಯೇಂದ್ರ ನಮ್ಮ ವಿರುದ್ದ ಸುದ್ದಿ ಬರೆಯುತ್ತೀಯಾ, ನಿನ್ನನ್ನು ಮುಗಿಸಿ ಬಿಡುತ್ತೇವೆ…

Read More