Author: kannadanewsnow09

ಬೆಂಗಳೂರು: ಧಾರ್ಮಿಕ ಕ್ಷೇತ್ರವಾದ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಉಪಸ್ಥಿತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಅರ್ಚಕರು, ಜಾಲತಾಣಗಳಲ್ಲಿ ಛಾಯಾಚಿತ್ರ ಹರಿದಾಟ- ವಿಚಾರಣೆ ನಡೆಸಿ ಕ್ರಮ ಜರುಗಿಸಲು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ. ಅಲ್ಲದೇ ಆ‌ ಸಂದರ್ಭದಲ್ಲಿ ‌ಯಾವುದೇ ಅನ್ಯ ಧರ್ಮೀಯರು ಭಾಗವಹಿಸಿರುವುದಿಲ್ಲ, ವಿನಾಕಾರಣ ಸುಳ್ಳು‌, ಅಪಪ್ರಚಾರಗಳನ್ನು ಹರಡುವವರ ಬಗ್ಗೆ ಸಚಿವರು ಕಿಡಿಕಾರಿದ್ದಾರೆ. ಕರ್ನಾಟಕ ಸರ್ಕಾರ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಾಲಯವಾದ ಸುಬ್ರಹ್ಮಣ್ಯಸ್ವಾಮಿ ದೇವಾಲಯ, ಹಲಸೂರಿನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಾನಕಿ ರಾಮ್ ರೆಡ್ಡಿ, ಪ್ರಧಾನ ಅರ್ಚಕರಾದ ಸುಂದರ್ ದಿಕ್ಷೀತ್ ಮತ್ತು ಸಹಾಯಕ ಆರ್ಚಕರಾದ ಎಸ್.ಸುರೇಶ್ ದೀಕ್ಷಿತ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದು, ಸಹಾಯಕ ಅರ್ಚಕರ ಜನ್ಮ ದಿನವಾಗಿದ್ದರಿಂದ ದಿನಾಂಕ:23/09/2025ರಂದು ದೇವಾಲಯದ ಆವರಣದೊಳಗೆ,‌ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಂಭ್ರಮಾಚರಣೆಯನ್ನು ಮಾಡಿರುತ್ತಾರೆ. ದೇವಾಲಯದ ಆವರಣದೊಳಗೆ ಯಾವುದೇ ವ್ಯಕ್ತಿಯ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಮಾಡಲು ಅವಕಾಶವಿರುವುದಿಲ್ಲ. ಆದರೆ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಛಾಯಾಚಿತ್ರಗಳು ವಾಟ್ಸಪ್‌ಗಳಲ್ಲಿ ಹರಿದಾಡಿದೆ. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು…

Read More

ಬೆಂಗಳೂರು: ಗ್ರೇಟರ್ ಬೆಂಗಳೂರು ಅಥಾರಿಟಿ ರಚನೆಯೇ ಬೆಂಗಳೂರು ನಗರ ಜನರಿಗೆ ಮಾರಕವಾಗಿದ್ದು, ಈಗ ವಾರ್ಡ್‌ʼಗಳ ವಿಂಗಡಣೆಯೂ ದೋಷಪೂರಿತವಾಗಿದೆ. ಇದನ್ನು ತಕ್ಷಣವೇ ಸರಿಪಡಿಸಬೇಕು ಎಂದು ಜೆಡಿಎಸ್‌ ನಗರ ಘಟಕದ ಅಧ್ಯಕ್ಷ, ಮಾಜಿ ಶಾಸಕ ಹೆಚ್.ಎಂ. ರಮೇಶ್‌ ಗೌಡ ಅವರು ರಾಜ್ಯ ಸರಕಾರವನ್ನು, ಮುಖ್ಯ ಆಯುಕ್ತರನ್ನು ಒತ್ತಾಯ ಮಾಡಿದರು. ವಾರ್ಡ್ʼಗಳ ವಿಭಜನೆಯಲ್ಲಿನ ನ್ಯೂನ್ಯತೆಗಳ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಜಿಬಿಎ ಚುನಾವಣೆಗೆ ಜೆಡಿಎಸ್ ಪಕ್ಷದ ಆಕಾಂಕ್ಷಿಗಳ ಪಟ್ಟಿ ಸಿದ್ಧತೆ ಮಾಡುವ ವಿಚಾರವಾಗಿ ಶನಿವಾರ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರಕಾರವು ತನ್ನ ಮೂಗಿನ ನೇರಕ್ಕೆ, ಕಾಂಗ್ರೆಸ್‌ ಪಕ್ಷಕ್ಕೆ ರಾಜಕೀಯ ಲಾಭ ಆಗುವ ರೀತಿಯಲ್ಲಿ ವಾರ್ಡ್‌ ವಿಂಗಡಣೆ ಮಾಡಿದೆ. ಈ ವಿಂಗಡಣೆ ಸಾಕಷ್ಟು ನ್ಯೂನತೆಗಳಿಂದ ಕೂಡಿದ್ದು, ಬೆಂಗಳೂರು ಅಭಿವೃದ್ಧಿಗೆ ಮಾರಕವಾಗಿರುತ್ತದೆ. ಹೀಗಾಗಿ ಅದನ್ನು ಸರಿಪಡಿಸಬೇಕು ಎಂದು ಅವರು ಒತ್ತಾಯ ಮಾಡಿದರು. ಅಲ್ಲದೆ, ಈಗಿನಿಂದಲೇ ಜಿಬಿಎ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಹಾಗೂ…

Read More

ಮಂಡ್ಯ : ರೋಲ್ ಕಾಲ್ ಮಾಡುವ ಬ್ರಹ್ಮಾಂಡ ಗುರೂಜಿಯಿಂದ ಕಾಂಗ್ರೆಸ್ ಪಕ್ಷದ ಭವಿಷ್ಯ ನಿರ್ಧಾರವಾಗಲ್ಲ. ಈ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಬೇಕೆಂದು ನಾಡಿನ ಜನರು ತೀರ್ಮಾನ ಮಾಡ್ತಾರೆ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಬ್ರಹ್ಮಾಂಡ ಗುರೂಜಿ ವಿರುದ್ದ ಹರಿಹಾಯ್ದರು. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರುವುದು ಇದೇ ಕೊನೆ. ಮತ್ತೆಂದು ಅಧಿಕಾರಕ್ಕೆ ಬರೋದಿಲ್ಲ. ಮುಂದಿನ ದಿನಗಳಲ್ಲಿ ದೇಶದಲ್ಲಿ ಒಬ್ಬ ಸನ್ಯಾಸಿಗೆ ಪ್ರಧಾನಿಯಾಗುವ ಯೋಗವಿದೆ ಎಂದು ಬ್ರಹ್ಮಾಂಡ ಗುರೂಜಿ ಶುಕ್ರವಾರ ಭವಿಷ್ಯ ನುಡಿದಿದ್ದರು. ಈ ಹೇಳಿಕೆ ಕುರಿತು ಮದ್ದೂರಿನಲ್ಲಿ ಶನಿವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಶಾಸಕ ಉದಯ್, ಕಾಂಗ್ರೆಸ್ ಪಕ್ಷ ತನ್ನದೇ ಆದ ತತ್ವ ಸಿದ್ಧಾಂತಗಳನ್ನು ಹೊಂದಿದೆ. ಅದನ್ನು ನೋಡಿ ಜನರು ಆಶೀರ್ವಾದ ಮಾಡಿಕೊಂಡು ಬರುತ್ತಿದ್ದಾರೆ. ಮುಂದೆಯೂ ಸಹ ಪಕ್ಷಕ್ಕೆ ಜನರು ಆಶೀರ್ವಾದ ಮಾಡುತ್ತಾರೆ ಎಂಬ ಧೃಡ ಸಂಕಲ್ಪವಿದೆ. ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ರಾಜ್ಯದ ಜನತೆ ನಿರ್ಧರಿಸುತ್ತಾರೆ ಎಂದು ಕಿಡಿಕಾರಿದರು. ಈ ರೋಲ್ ಕಾಲ್ ಬ್ರಹ್ಮಾಂಡ ಗುರೂಜಿಯ ಹಿನ್ನೆಲೆ ಏನಂತ…

Read More

ಮಂಡ್ಯ : ಮಳೆಯಿಂದ ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ರಾಷ್ಟ್ರೀಯ ವಿಪತ್ತು ನಿಧಿಯಿಂದ ಸೂಕ್ತ ಪರಿಹಾರ ನೀಡುವಂತೆ ತಾಲೂಕು ಆಡಳಿತಕ್ಕೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು. ಮದ್ದೂರು ತಾಲೂಕಿನ ವಳಗೆರೆಹಳ್ಳಿ, ಸೊಳ್ಳೆಪುರ, ಸಿಎ ಕೆರೆ ಹೋಬಳಿಯ ಮುಟ್ಟನಹಳ್ಳಿ, ಬೋರಾಪುರ ಹಾಗೂ ಇನ್ನಿತರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಮದ್ದೂರು ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ನಿಲುವಾಗಿಲು ಗ್ರಾಮದಲ್ಲಿ 15 ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಹಾನಿಯಾಗಿದೆ. ಅಲ್ಲದೆ ರೈತರ ಜಮೀನುಗಳಲ್ಲಿ ಬೆಳೆದಿದ್ದ ಭತ್ತ, ಕಬ್ಬು ಹಾಗೂ ತೋಟಗಾರಿಕೆ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ ಈ ಬಗ್ಗೆ ಪರಿಶೀಲನೆ ನಡೆಸಿ ರಾಷ್ಟೀಯ ವಿಪತ್ತು ನಿಧಿಯಿಂದ ಸೂಕ್ತ ಪರಿಹಾರ ನೀಡುವಂತೆ ಕಂದಾಯ, ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಸರ್ಕಾರದಿಂದ ವೈಜ್ಞಾನಿಕ ಪರಿಹಾರ ಒದಗಿಸಿ…

Read More

ಹಾವೇರಿ: ರಾಜ್ಯ ಕಾಂಗ್ರೆಸ್ ನಲ್ಲಿನ ಅಧಿಕಾರ ಹಂಚಿಕೆಯ ಆಂತರಿಕ ಗೊಂದಲದಿಂದ ರಾಜ್ಯದ ಆಡಳಿತ ಕುಂಠಿತ ವಾಗಿದ್ದು ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟತೆ ಇಲ್ಲದಿರುವುದರಿಂದ ರಾಜ್ಯದ ಜನರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಮಾಣ ವಚನ ಸ್ವೀಕಾರ ಮಾಡಿದ ದಿನದಿಂದ ಅಧಿಕಾರ ಹಸ್ತಾಂತರ, ಹಂಚಿಕೆ ಮೊದಲನೇ ದಿನದಿಂದ ಇದೆ. ಯಾವ ಹೈಕಮಾಂಡ್ ಹೇಳಿದರು ಅಷ್ಟೇ, ‌ಲೋ‌ ಕಮಾಂಡ್ ಹೇಳಿದರು ಅಷ್ಟೇ. ಯಾವುದು ಕೂಡಾ ನಿಂತಿಲ್ಲ. ಸಿ.ಎಂ ಕಡೆಯವರು ಅವರೇ 5 ವರ್ಷ ಮುಂದುವರೆಯುತ್ತಾರೆ ಅಂತಾರೆ. ಡಿ.ಕೆ ಶಿವಕುಮಾರ್ ಕಡೆಯವರು ಡಿ.ಕೆ. ಶಿವಕುಮಾರ್ ಸಿ.ಎಂ ಆಗುತ್ತಾರೆ ಅಂತಾರೆ. ನನಗೆ ಅನಿಸುತ್ತದೆ ಹೈಕಮಾಂಡ್ ಇದರಲ್ಲಿ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಆಗುತ್ತಿಲ್ಲ‌‌. ಅಲ್ಲಿಯೂ ಎರಡು ಗುಂಪು ಆಗಿವೆ. ಹೀಗಾಗಿ ಹೈಕಮಾಂಡ್ ಪುಲ್ ಸ್ಟಾಪ್ ಇಡಲು ಆಗುತ್ತಿಲ್ಲ. ಒಂದು ಗುಂಪು ಸಿಎಂಗೆ ಸಪೋರ್ಟ್ ಮಾಡುತ್ತದೆ. ಇನ್ನೊಂದು ಗುಂಪು ಡಿಕೆ ಶಿವಕುಮಾರ್…

Read More

ಶಿವಮೊಗ್ಗ: ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಹೊಸ ಆಡಳಿತ ಮಂಡಳಿಯನ್ನು ನೇಮಕ ಮಾಡುವಂತೆ ಕೋರ್ಟ್ ಸೂಚಿಸಿತ್ತು. ಆದರೇ ಕೋರ್ಟ್ ಆದೇಶವನ್ನು ಪಾಲಿಸದ ಕಾರಣಕ್ಕೆ ಇದೀಗ ಹಾಲಿ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಆಡಳಿತ ಮಂಡಳಿಯ ಎಲ್ಲರಿಗೂ ಕಾನೂನು ಸಂಕಷ್ಟ ಎದುರಾಗಲಿದೆ ಎನ್ನಲಾಗುತ್ತಿದೆ. ದಿನಾಂಕ 11-07-2025ರಂದೇ ಕೋರ್ಟ್ ಮಹತ್ವದ ಆದೇಶ ಸಾಗರದ ಮಾರಿಕಾಂಬ ದೇವಸ್ಥಾನಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕಾತಿ ಸೇರಿದಂತೆ ವಿವಿಧ ವಿಷಯಗಳನ್ನು ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಮೂರ್ತಿ ಮಂಜುನಾಥ ನಾಯಕ್ ಅವರು 11-07-2025ರಂದು ತೀರ್ಪು ಪ್ರಕಟಿಸಿದ್ದರು. ಶಿವಮೊಗ್ಗ ಜಿಲ್ಲಾ ಪ್ರದಾನ ಮತ್ತು ಸತ್ರ ನ್ಯಾಯಾಲಯ ನೀಡಿದ್ದಂತ ತೀರ್ಪಿನಲ್ಲಿ ಈ ತೀರ್ಪು ಪ್ರಕಟಗೊಂಡ ದಿನಾಂಕದಿಂದ 3 ತಿಂಗಳ ಒಳಗಾಗಿ ಹೊಸ ಆಡಳಿತ ಸಮಿತಿಯನ್ನು ರಚಿಸಿ, ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಬೇಕು ಎಂದಿತ್ತು. ಕೋರ್ಟ್ ಆದೇಶದ ನಂತ್ರ ಮಾರಿಕಾಂಬ ದೇವಸ್ಥಾನದ ಹಾಲಿ ಸಮಿತಿಯವರು ಸುದ್ದಿಗೋಷ್ಠಿ…

Read More

ಬೆಂಗಳೂರು: ನಗರದಲ್ಲಿ ಘೋರ ದುರಂತವೊಂದು ನಡೆದು ಹೋಗಿದೆ. ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿರುವಂತ ಬೆಳ್ಳಂದೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ಡಿ ಎನ್ ಆರ್ ಅರಿಸ್ಟಾ ಎನ್ನುವಂತ ಕಟ್ಟಡವೊಂದನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಕಟ್ಟಡದ 13ನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದಂತ ಪಶ್ಚಿಮ ಬಂಗಾಳ ಮೂಲದ ಅಮೀರ್ ಹುಸೇನ್ (33) ಹಾಗೂ ಮುಮ್ತಾಜ್ ಆಲಿ ಮೊಲ್ಲ(28) ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಇಂದು ಪ್ರಕರಣ ಬೆಳಕಿಗೆ ಬಂದಿದೆ. ಸಾವನ್ನಪ್ಪಿದಂತ ಇಬ್ಬರು ಕಾರ್ಮಿಕರು ಇಂಪ್ರಿಯಲ್ ಬಿಲ್ಡ್ ಟೆಕ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಟ್ಟಡದ ಕನ್ಟ್ರಕ್ಷನ್ ಕಾರ್ಯದಲ್ಲಿ ತೊಡಗಿದ್ದರು. ಈ ಸಂಬಂಧ ಈ ಕಂಪನಿಯ ಅಧಿಕಾರಿಗಳು, ಸೈಟ್ ಇಂಜಿನಿಯರ್ ವಿರುದ್ಧ ಬೆಂಗಳೂರಿನ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/in-the-state-nhm-employees-of-the-health-department-have-not-received-their-salaries-for-2-months/ https://kannadanewsnow.com/kannada/daughter-runs-away-with-her-lover-father-puts-up-a-tribute-banner-and-arranges-a-feast-for-the-entire-village/

Read More

ಬೆಂಗಳೂರು: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಗುತ್ತಿಗೆ ನೌಕರರಾಗಿ ಸಾವಿರಾರು ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗೆ ಕಾರ್ಯನಿರ್ವಹಿಸುತ್ತಿರುವಂತ NHM ಸಿಬ್ಬಂದಿಗಳಿಗೆ ಎರಡು ತಿಂಗಳು ಕಳೆದರು ವೇತನ ಪಾವತಿಯಾಗಿಲ್ಲ. ಹೀಗಾಗಿ ವೇತನವಿಲ್ಲದೇ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರು ಸಂಕಷ್ಟ ಎದುರಿಸುವಂತೆ ಆಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ NHM ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷರಾದಂತ ಶ್ರೀಕಾಂತ ಸ್ವಾಮಿ ಅವರು, ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗಳಿಗೆ ಆಗಸ್ಟ್ ತಿಂಗಳಿಂದ ಈ ವರೆಗೂ ವೇತನವೇ ಆಗಿಲ್ಲ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಜುಲೈ ತಿಂಗಳಿಂದ ವೇತನ ಆಗದೇ ಸಿಬ್ಬಂದಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ಈ ಬಾರಿ ಸರ್ಕಾರವು ಎನ್ ಹೆಚ್ ಎಂ ನೌಕರರಿಗೆ ವೇತನ ಪಾವತಿಸದ ಕಾರಣ, ದೀಪಾವಳಿ ಹಬ್ಬವನ್ನು ಕತ್ತಲ ಬದುಕಿನಲ್ಲಿ ಆಚರಿಸುವಂತೆ ಆಗಿದೆ. ರಾಜ್ಯ ಸರ್ಕಾರವು ಕೂಡಲೇ ಇತ್ತ ಗಮನ ಹರಿಸಬೇಕು. ದೀಪಾವಳಿ…

Read More

ಶಿವಮೊಗ್ಗ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಬಿ.ಎಸ್ಸಿ, ಅರಣ್ಯ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವಂತೆ ಬಿಎಸ್ಸಿ ಅರಣ್ಯ ಶಾಸ್ತ್ರ ವ್ಯಾಸಂಗ ನಿರತ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಆನಂದಪುರ ಬಳಿಯ ಕೆಳದಿ ಶಿವಪ್ಪ ನಾಯಕ ತೋಟಗಾರಿಕೆ ಮತ್ತು ವಿಜ್ಞಾನಗಳ ವಿವಿಯ ವಿದ್ಯಾರ್ಥಿಗಳು ಅರಣ್ಯ ಇಲಾಖೆಯಲ್ಲಿರುವ ಎಲ್ಲಾ ಹುದ್ದೆಗಳಿಗೂ ಅರಣ್ಯ ಪದವಿಯನ್ನೆ ಕನಿಷ್ಠ ವಿದ್ಯಾರ್ಹತೆ ಮಾಡುವಂತೆ ಒತ್ತಾಯಿಸಿ ಅನಿರ್ದಿಷ್ಟವಧಿ ಮುಸ್ಕರವನ್ನು ನಡೆಸಿದರು. ಈ ವೇಳೆ ವಿದ್ಯಾರ್ಥಿಗಳು ಕರ್ನಾಟಕ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರರ ಸಂಘ ಸಲ್ಲಿಸುವ ಮನವಿ ಏನೆಂದರೆ, ವೃತ್ತಿಪರ (ಅರಣ್ಯಶಾಸ್ತ್ರ) ಪದವೀಧರರ ಸಾಮರ್ಥ್ಯ ಮತ್ತು ಅಗತ್ಯವನ್ನು ಅರಿತುಕೊಂಡ ಕರ್ನಾಟಕ ಸರ್ಕಾರವು 2003 ರಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ವಲಯ ಅರಣ್ಯಾಧಿಕಾರಿ ಹುದ್ದೆಗೆ ಶೇಕಡ 50 ರಷ್ಟು ಮೀಸಲಾತಿಯನ್ನು ಒದಗಿಸಿದ ನಂತರ 2012 ರಲ್ಲಿ ವಲಯ ಅರಣ್ಯಾಧಿಕಾರಿ ಹುದ್ದೆಗೆ ಶೇ.75ರಷ್ಟು ಹೆಚ್ಚಿಸಲಾಯಿತು (ಸಂಖ್ಯೆ : FEE366:FNG2010 ಬೆಂಗಳೂರು,…

Read More

ಬೆಂಗಳೂರು: ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ. ಸಾರ್ವಜನಿಕ ಭೇಟಿಯ ಸಂದರ್ಭದಲ್ಲಿ ಕೆಲವರು ಕೇಳಿದ ಪ್ರಶ್ನೆಯನ್ನು ಕೆಲವು ಮಾಧ್ಯಮಗಳು ತಿರುಚಿ ವರದಿ ಮಾಡಿ ವಿವಾದ ಸೃಷ್ಟಿಸುತ್ತಿರುವುದು ಬೇಸರ ತಂದಿದೆ ಎಂದು ಹೇಳಿದ್ದಾರೆ. ನನಗೆ ನನ್ನ ಗುರಿ ಗೊತ್ತಿದೆ, ನನಗೆ ಯಾವ ಆತುರವೂ ಇಲ್ಲ, ಈ ರೀತಿ ಹೇಳುವ ಅವಶ್ಯಕತೆಯೂ ಇಲ್ಲ. ನಾನು ಯಾವುದೇ ಹುದ್ದೆಗಾಗಿ ಆತುರದಲ್ಲಿಲ್ಲ. ರಾಜ್ಯದ ಜನರ ಸೇವೆ ಮತ್ತು ಬೆಂಗಳೂರು ನಾಗರಿಕರಿಗೆ ಉತ್ತಮ ಆಡಳಿತ ನೀಡುವುದೇ ನನ್ನ ಉದ್ದೇಶ. ನಾನು ಸಾರ್ವಜನಿಕರ ಸೇವೆಗಾಗಿಯೇ ಹಗಲು-ರಾತ್ರಿ ಶ್ರಮಿಸುತ್ತಿದ್ದೇನೆ. ಸತ್ಯವನ್ನು ತಿರುಚಿ, ದಾರಿ ತಪ್ಪಿಸುವ ವರದಿಗಳಿಂದ ದೂರವಿರುವಂತೆ ಮಾಧ್ಯಮ ಮಿತ್ರರಲ್ಲಿ ಮನವಿ ಮಾಡಿದ್ದಾರೆ. https://twitter.com/DKShivakumar/status/1976896359929422214 https://kannadanewsnow.com/kannada/five-accused-arrested-within-24-hours-of-kidnapping-young-woman-who-refused-marriage-in-bengaluru/ https://kannadanewsnow.com/kannada/daughter-runs-away-with-her-lover-father-puts-up-a-tribute-banner-and-arranges-a-feast-for-the-entire-village/

Read More