Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ. ಅರಣ್ಯ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿನ ಹುತತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ರಾಜ್ಯದಲ್ಲಿ ಅನುಪಾತಕ್ಕೆ ತಕ್ಕಷ್ಟು ಅರಣ್ಯವಿಲ್ಲ. ಆದ್ದರಿಂದ ಅರಣ್ಯೀಕರಣ ಹೆಚ್ಚಾಗಬೇಕು. ಕಾಡು ಮತ್ತು ವನ್ಯ ಪ್ರಾಣಿ ಸಂಪತ್ತಿನ ರಕ್ಷಣೆ ಕೇವಲ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯ ಎಂದರೆ ನಾವು ನಮ್ಮ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಂತಾಗುತ್ತದೆ ಎಂದರು. ರಾಜ್ಯದಲ್ಲಿ ಆನೆ, ಹುಲಿಗಳ ಸಂಖ್ಯೆ ಹೆಚ್ಚುತ್ತಿರುವುದು ಸಂತೋಷದ ಸಂಗತಿ. ಆದರೆ ಪ್ರಾಣಿ-ಮನುಷ್ಯ ಸಂಘರ್ಷ ತಪ್ಪಿಸಿ ಮಾನವ, ಪ್ರಾಣಿ ಸಂಪತ್ತನ್ನು ಕಾಪಾಡುವ ದಿಕ್ಕಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕೆಲಸಗಳು ಆಗಬೇಕಿದೆ. ಇದಕ್ಕಾಗಿ ಲಭ್ಯ ಇರುವ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು. ಅರಣ್ಯ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 30 ರಿಂದ…
ನವದೆಹಲಿ: ರಿಕ್ಟರ್ ಮಾಪಕದಲ್ಲಿ 5.8 ರಷ್ಟು ಭೂಕಂಪನವು ಪಾಕಿಸ್ತಾನದಲ್ಲಿ ಸಂಭವಿಸಿದ್ದು, ದೆಹಲಿ ಮತ್ತು ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಲಘು ನಡುಕ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದ ಕೇಂದ್ರ ಬಿಂದು ಪಾಕಿಸ್ತಾನದ ಕರೋರ್ನಿಂದ ನೈಋತ್ಯಕ್ಕೆ 25 ಕಿ.ಮೀ ದೂರದಲ್ಲಿ 10 ಕಿ.ಮೀ ಆಳದಲ್ಲಿತ್ತು. ಇಸ್ಲಾಮಾಬಾದ್ ಮತ್ತು ಲಾಹೋರ್ ಸೇರಿದಂತೆ ಪಾಕಿಸ್ತಾನದ ಪ್ರಮುಖ ನಗರಗಳಲ್ಲಿಯೂ ಭೂಕಂಪನದ ಅನುಭವವಾಗಿದೆ. ಭೂಕಂಪನ ಚಟುವಟಿಕೆಯು ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದಂತಹ ವಿವಿಧ ರಾಜ್ಯಗಳಿಗೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿತು. https://twitter.com/NCS_Earthquake/status/1833773467663261975 https://kannadanewsnow.com/kannada/police-canteens-for-forest-staff-to-be-provided-minister-ishwar-khandre/ https://kannadanewsnow.com/kannada/loan-facility-up-to-rs-5-lakh-from-central-government-if-you-have-these-documents-apply-immediately/ https://kannadanewsnow.com/kannada/siddaramaiah-will-be-cm-for-next-three-and-a-half-years-minister-ishwar-khandre/
ಬೆಂಗಳೂರು : ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್ ಕ್ಯಾಂಟೀನ್ ಸೌಲಭ್ಯ ಬಳಸಿಕೊಳ್ಳಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿಂದು ರಾಷ್ಟ್ರೀಯ ಹುತಾತ್ಮರ ದಿನದ ಅಂಗವಾಗಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿದ ತರುವಾಯ ಮಾತನಾಡಿದ ಅವರು, ಕಾಡ್ಗಿಚ್ಚು ನಂದಿಸುವಾಗ, ಮಾನವ-ವನ್ಯಜೀವಿ ಸಂಘರ್ಷ ತಡೆಯುವ ಸಂದರ್ಭದಲ್ಲಿ ಮತ್ತು ಒತ್ತುವರಿದಾರರು ಮತ್ತು ಕಾಡುಗಳ್ಳರ ಆಕ್ರೋಶಕ್ಕೆ ಗುರಿಯಾಗಿ ಈವರೆಗೆ 61 ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಈ ಎಲ್ಲರ ಕುಟುಂಬದೊಂದಿಗೆ ಇಲಾಖೆ ನಿಂತಿದೆ ಎಂದರು. ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಹುತಾತ್ಮರ ಕುಟುಂಬಕ್ಕೆ ಪರಿಹಾರ ನೀಡುವ ಘೋಷಣೆ ಮಾಡಿದರು, 30 ಲಕ್ಷ ರೂ. ಇದ್ದ ಪರಿಹಾರದ ಮೊತ್ತವನ್ನು ಈಗ ೫೦ ಲಕ್ಷಕ್ಕೆ ಹೆಚ್ಚಿಸುವ ಕಾರ್ಯವನ್ನೂ ಅವರೆ ಮಾಡಿದ್ದಾರೆ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಇಲಾಖೆಯ ಎಲ್ಲ ಕಾರ್ಯಕ್ರಮದಲ್ಲೂ ಭಾಗಿಯಾಗಿ ಮಾರ್ಗದರ್ಶನ ಮಾಡುತ್ತಾರೆ. ಅವರು ಗಟ್ಟಿ ನಿರ್ಧಾರ ಕೈಗೊಂಡು, ಗಟ್ಟಿಯಾಗಿ ಸರ್ಕಾರ ನಡೆಸುತ್ತಿದ್ದಾರೆ. ಮುಂದಿನ ಮೂರೂ ಮುಕ್ಕಾಲು ವರ್ಷವೂ ಅವರೇ ಮುಖ್ಯಮಂತ್ರಿಯಾಗಿ ಮಾರ್ಗದರ್ಶನ ಮಾಡುತ್ತಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿಂದು ರಾಷ್ಟ್ರೀಯ ಹುತಾತ್ಮರ ದಿನದ ಅಂಗವಾಗಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿದ ತರುವಾಯ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟ ನುಡಿಗಳಲ್ಲಿ ತಿಳಿಸಿದರು. https://kannadanewsnow.com/kannada/5-8-magnitude-earthquake-hits-delhi-ncr-people-shaken/ https://kannadanewsnow.com/kannada/loan-facility-up-to-rs-5-lakh-from-central-government-if-you-have-these-documents-apply-immediately/
ನವದೆಹಲಿ: ಪಾಕಿಸ್ತಾನದಲ್ಲಿ ಬುಧವಾರ ಭೂಕಂಪ ಸಂಭವಿಸಿದ್ದರಿಂದ ದೆಹಲಿ ಎನ್ಸಿಆರ್ ಮತ್ತು ಚಂಡೀಗಢ ಸೇರಿದಂತೆ ಉತ್ತರ ಭಾರತದ ವಿವಿಧ ಭಾಗಗಳಲ್ಲಿ ನಡುಕ ಉಂಟಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಪಾಕಿಸ್ತಾನದ ಮುಲ್ತಾನ್ ಬಳಿ 33 ಕಿಲೋಮೀಟರ್ ಆಳದಲ್ಲಿ ಮಧ್ಯಾಹ್ನ 12:58 ಕ್ಕೆ ಸಂಭವಿಸಿದೆ. ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://twitter.com/NCS_Earthquake/status/1833773467663261975 https://kannadanewsnow.com/kannada/class-8-boy-dies-of-heart-attack/ https://kannadanewsnow.com/kannada/good-news-for-farmers-rs-25-lakh-for-sheep-poultry-and-piggery-50-subsidy/
ರಾಯಚೂರು: ಈವರೆಗೆ ವಯಸ್ಕರು, ವಯೋವೃದ್ಧರಲ್ಲಿ ಕಾಣಿಸಿಕೊಳ್ಳುತ್ತಿದ್ದಂತ ರಕ್ತದೊತ್ತಡ, ಈಗ ಮಕ್ಕಳಲ್ಲೂ ಆರಂಭಗೊಂಡಿದೆ. ಶಾಕಿಂಗ್ ಎನ್ನುವಂತೆ 8ನೇ ತರಗತಿ ಬಾಲಕನೊಬ್ಬ ಲೋ ಬಿಪಿಯಾಗಿ ಶಾಲೆಯಲ್ಲೇ ಕುಸಿದು ಬಿದ್ದು, ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯುತ್ತಿರುವ ವೇಳೆ ಸಾವನ್ನಪ್ಪಿರುವಂತ ಘಟನೆ ರಾಯಚೂರಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿರಿವಾರ ಪಟ್ಟಣದಲ್ಲಿನ ಖಾಸಗಿ ಶಾಲೆಯೊಂದರಲ್ಲಿ 8ನೇ ತರಗತಿಯನ್ನು ಬಾಲಕ ತರುಣ್ ಅತ್ತನೂರು(14) ಓದುತ್ತಿದ್ದನು. ಎಂದಿನಂತೆ ಶಾಲೆಗೆ ತೆರಳಿದ್ದಂತ ತರುಣ್ ಗೆ ಲೋ ಬಿಪಿಯಾಗಿ, ಏಕಾಏಕಿ ಶಾಲೆಯಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಶಿಕ್ಷಕರು ಆತನನ್ನು ಸಿರಿವಾರ ಪಟ್ಟಣದ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಲು ಮಾಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ, ತೀವ್ರ ಅಸ್ವಸ್ಥಗೊಂಡಿದ್ದಂತ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿಗೆ ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಮಾರ್ಗಮಧ್ಯದಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಸಿರಿವಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/loan-facility-up-to-rs-5-lakh-from-central-government-if-you-have-these-documents-apply-immediately/ https://kannadanewsnow.com/kannada/good-news-for-farmers-rs-25-lakh-for-sheep-poultry-and-piggery-50-subsidy/
ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ರಾಜ್ಯ ಸಿವಿಲ್ ಸೇವೆಗಳ ಗ್ರೂಪ್-ಬಿ ಹಾಗೂ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ಒಂದು ಬಾರಿಗೆ 3 ವರ್ಷಗಳು ಸಡಿಲಿಸಿ ಆದೇಶಿಸಿದೆ. ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿ, ಕರ್ನಾಟಕ ರಾಜ್ಯದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ಮತ್ತು ಇತರೆ ಕಾರಣದಿಂದ ಮತ್ತು ಪದೇ ಪದೇ ಲಾಕ್ ಡೌನ್ ಆಗಿದ್ದರಿಂದ ವಿವಿಧ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಯನ್ನು ಸರ್ಕಾರವು ಮುಂದೂಡುತ್ತಾ ಬಂದಿರುತ್ತದೆ. ಇದರಿಂದ ಅಭ್ಯರ್ಥಿಗಳ ವಯೋಮಿತಿ ಹೆಚ್ಚಾಗಿದ್ದು ಹುದ್ದೆಗಳ ನೇಮಕಾತಿಯಿಂದ ವಂಚಿತರಾಗಿ ನಿರುದ್ಯೋಗಿಗಳಾಗಿರುವುದರಿಂದ ರಾಜ್ಯ ಸರ್ಕಾರದ ನೇರ ನೇಮಕಾತಿಯಲ್ಲಿ ಪ್ರಸ್ತುತ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಸಡಿಲಿಸುವಂತೆ ಕೋರಿರುತ್ತಾರೆ ಎಂದಿದ್ದಾರೆ. ಗರಿಷ್ಠ ವಯೋಮಿತಿಯನ್ನು ಹೆಚ್ಚಿಸುವ ಕುರಿತು ಸ್ವೀಕರಿಸಲಾಗಿರುವ ಮನವಿಗಳನ್ನು ಪರಿಶೀಲಿಸಿದ್ದು ರಾಜ್ಯ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಭೂ ಒಡೆತನ ಯೋಜನೆಯ ಅಡಿಯಲ್ಲಿ ಕೃಷಿ ಭೂಮಿ ಇಲ್ಲದಂತ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕೃಷಿ ಜಮೀನು ಖರೀದಿಸಿ, ಸ್ವಾವಲಂಬಿ ಜೀವನ ನಡೆಸೋದಕ್ಕೆ ಸಾಲಸೌಲಭ್ಯಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಮೂಲಕ ಪರಿಶಿಷ್ಟ ಜಾತಿ ಸಮುದಾಯದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಭೂ ಒಡೆತನ ಯೋಜನೆಯು ಸಮಾಜ ಕಲ್ಯಾಣ ಇಲಾಖೆಯಿಂದ ಜಾರಿಗೊಳಿಸಿದಂತ ಯೋಜನೆಯಾಗಿದೆ. ಕೃಷಿ ಭೂಮಿ ಇಲ್ಲದಂತ ಮಹಿಳೆಯರಿಗೆ ಜಮೀನು ಖರೀದಿಗೆ ಸಬ್ಸಿಡಿ ದರದಲ್ಲಿ ಸಹಾಯ ಧನ ಸೌಲಭ್ಯವನ್ನು ಕಲ್ಪಿಸುವಂತ ಯೋಜನೆಯಾಗಿದೆ. ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ ಆಧಾರ್ ಕಾರ್ಡ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಭೂ ರಹಿತ ಕೃಷಿ ಕಾರ್ಮಿಕರ ಪ್ರಮಾಣಪತ್ರ ರೇಷನ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ನಕಲು ಪ್ರತಿ ಪೋಟೋ ಈ ಹಂತ ಅನುಸರಿಸಿ, ಅರ್ಜಿ ಸಲ್ಲಿಸಿ 2023-24ನೇ ಸಾಲಿನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆದರೇ…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಲಾಗಿದೆ. ರಾಜ್ಯ ಸರ್ಕಾರದಿಂದ ಇದಕ್ಕಾಗಿ ಮಸೂದೆಯನ್ನು ತಿದ್ದುಪಡಿ ಮಾಡಲಾಗಿದ್ದು, ಅದಕ್ಕೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ಹೀಗಾಗಿ ಇನ್ಮುಂದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದವರಿಗೆ 10 ಕೋಟಿ ದಂಡ ಹಾಗೂ 10 ವರ್ಷ ಜೈಲು ಶಿಕ್ಷೆ ಫಿಕ್ಸ್ ಆದಂತೆ ಆಗಿದೆ. ಸರ್ಕಾರ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಎಸಗುವವರಿಗೆ ₹10 ಕೋಟಿ ದಂಡ ಮತ್ತು 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸುವ ಕರ್ನಾಟಕ ಸಾರ್ವಜನಿಕ ಪರೀಕ್ಷಾ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ಮಸೂದೆ – 2023ಕ್ಕೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅನುಮೋದನೆ ನೀಡಿದ್ದಾರೆ. ಒಟ್ಟಾರೆಯಾಗಿ ಕರ್ನಾಟಕ ಸಾರ್ವಜನಿಕ ಪರೀಕ್ಷಾ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ಮಸೂದೆ-2023ಕ್ಕೆ ರಾಜ್ಯಪಾಲರು ಅಂಕಿತ ಮುದ್ರೆ ಒತ್ತಿದ್ದಾರೆ. ಈ ಮಸೂದೆಯಂತೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗುವವರಿಗೆ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಲಾಗಿದೆ. ರಾಜ್ಯ ಸಿವಿಲ್ ಸೇವೆಗಳಿಗೆ ಸಂಬಂಧಿಸಿದಂತ ಗ್ರೂಪ್-ಬಿ ಹಾಗೂ ಸಿ ವೃಂದದ ನೇಮಕಾತಿಯ ವೇಳೆಯಲ್ಲಿ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷ ವಯೋಮಿತಿಯನ್ನು ಸಡಿಲಿಸಿ ಆದೇಶಿಸಿದೆ. ಇಂದು ರಾಜ್ಯ ಸರ್ಕಾರದಿಂದ ಈ ಬಗ್ಗೆ ಆದೇಶ ಹೊರಡಿಸಿದ್ದು, ಕೋವಿಡ್-19 ಸಮಯದಲ್ಲಿ ನೇಮಕಾತಿಗಳು ಸರಿಯಾಗಿ ನಡೆದಿರಲಿಲ್ಲ. ಹಲವು ನೇಮಕಾತಿಗಳನ್ನು ಮುಂದೂಡುತ್ತಾ ಬರಲಾಗಿತ್ತು. ಹೀಗಾಗಿ ಅನೇಕ ಉದ್ಯೋಗ ಆಕಾಂಕ್ಷಿಗಳು ವಯೋಮಿತಿಯನ್ನು ಮೀರುವಂತೆ ಆಗಿತ್ತು. ಅವರೆಲ್ಲರೂ ವಯೋಮಿತಿ ಸಡಿಲಿಕೆಗೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಮನವಿಯ ಹಿನ್ನಲೆಯಲ್ಲಿ 3 ವರ್ಷ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಮಾಡಿರುವುದಾಗಿ ತಿಳಿಸಿದೆ. ರಾಜ್ಯ ಸರ್ಕಾರ ಹೊರಡಿಸಿದ ಆದೇಶದಲ್ಲಿ ಏನಿದೆ.? ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿ, ಕರ್ನಾಟಕ ರಾಜ್ಯದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ಮತ್ತು ಇತರೆ ಕಾರಣದಿಂದ ಮತ್ತು ಪದೇ ಪದೇ…