Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ಸಲಹಾ ಸಮಿತಿಯನ್ನು ರಚಿಸಿ ಆದೇಶಿಸಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಈ ಕೆಳಕಂಡ ಆಯ್ಕೆ ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಚಿಸಿ ಆದೇಶಿಸಿದ್ದಾರೆ. 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ರಚಿಸಿದಂತ ಸಲಹಾ ಸಮಿತಿಯ ಅಧ್ಯಕ್ಷರನ್ನಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರನ್ನು ನೇಮಿಸಿದ್ದರೇ, ಸದಸ್ಯರನ್ನಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ, ಸಮಾಜ ಸೇವೆ ಕ್ಷೇತ್ರದಿಂದ ಬೀದರಿನ ಮಾರುತಿ ಬೌದ್ಧೆ, ಉಡುಪಿಯ ಕೆ.ಪಿ ಸುರೇಶ್, ಕೊಪ್ಪಳದ ಇಟಿ ರತ್ನಕರ್ ತಳವಾರ ಅವರನ್ನು ನೇಮಕ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರದಿಂದ ಸದಸ್ಯರನ್ನಾಗಿ ಧಾರವಾಡದ ಡಾ.ಮಾಲತಿ ಪಟ್ಟಣಶೆಟ್ಟಿ, ಬೆಂಗಳೂರಿನ ಪ್ರೊ.ಜಿ.ಅಬ್ದುಲ್ ಬಷೀರ್, ಕೋಲಾರದ ಚಂದ್ರಶೇಖರ ನಂಗ್ಲಿ,…
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಮಹತ್ವದ ವಿಷಯಗಳನ್ನು ಕೇಂದ್ರೀಕರಿಸಿ, ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಟಾನದಲ್ಲಿ ಪಾರದರ್ಶಕತೆ, ಆಡಳಿತವನ್ನು ಜನಸ್ನೇಹಿಯಾಗಿಸುವ ಹಾಗೂ ಪ್ರಾಮಾಣಿಕ ಪ್ರಯತ್ನದ ಭಾಗವಾಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಸರ್ಕಾರಿ ಪತ್ರಗಳನ್ನು ಸಂಕ್ಷಿಪ್ತಗೊಳಿಸಿ, ಸರ್ಕಾರಿ ಪಾರಿಭಾಷಿಕ ಪದಗಳನ್ನು ಸರಳೀಕರಣ ಮಾಡಿ ಜನಸಾಮಾನ್ಯರಿಗೆ ಅರ್ಥೈಸುವ ನಿಟ್ಟಿನಲ್ಲಿ ‘ಗ್ರಾಮದನಿ’ ಪಾಡ್‌ಕಾಸ್ಟ್ ಕಾರ್ಯ ನಿರ್ವಹಿಸುತ್ತದೆ. ಮಾಧ್ಯಮದ ಇಂದಿನ ಯುಗದಲ್ಲಿ, ಸಮುದಾಯಕ್ಕೆ ಮಾಹಿತಿ ಮತ್ತು ಅರಿವು ಮೂಡಿಸುವುದು, ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ, ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಾಹಿತಿ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ, ತಂತ್ರಜ್ಞಾನದ ಸಮರ್ಪಕ ಬಳಕೆ ನೆರವಾಗಬಲ್ಲದು. ‘ಗ್ರಾಮದನಿ’ ಅಕ್ಷರಶಃ ‘ಗ್ರಾಮೀಣ ಕರ್ನಾಟಕದ ಧ್ವನಿ’ಯಾಗಲಿದ್ದು, ಇದು ಕೇವಲ ಮಾಹಿತಿ ನೀಡುವ ವೇದಿಕೆಯಾಗಿರದೆ ಶಕ್ತಿಯುತ ಅರಿವಿನ ಮಾಧ್ಯಮವಾಗಿದೆ. ಸಾಮರ್ಥ್ಯಾಭಿವೃದ್ಧಿ ಮತ್ತು ಜ್ಞಾನಾರ್ಜನೆ ಈ ಪಾಡ್‌ಕಾಸ್ಟ್ ನ ಪ್ರಮುಖ ಉದ್ದೇಶಗಳಾಗಿದ್ದು, ಪ್ರಮುಖವಾಗಿ ಚುನಾಯಿತ ಪ್ರತಿನಿಧಿಗಳು, ಕ್ಷೇತ್ರ ಸಿಬ್ಬಂದಿಗಳು/ ಅಧಿಕಾರಿಗಳು ಹಾಗೂ ಜನಸಾಮಾನ್ಯರ ಸಾಮರ್ಥ್ಯವನ್ನು ವೃದ್ಧಿಸಲು ಮತ್ತು ಅವರಿಗೆ ಅಗತ್ಯವಾದ ಜ್ಞಾನವನ್ನು ಸುಲಭವಾಗಿ ತಲುಪಿಸಲು…
ನವದೆಹಲಿ: ಜಿಯೋ ಅಧ್ಯಕ್ಷ ಆಕಾಶ್ ಅಂಬಾನಿ ಅವರು ಆನ್‌ಲೈನ್ ಗೇಮಿಂಗ್ ಉದ್ಯಮವನ್ನು ಸಂಪೂರ್ಣವಾಗಿ ಪರಿವರ್ತಿಸಲು ಮುಂದಾಗಿದ್ದಾರೆ. ಹೈ-ಅನಿಮೇಟೆಡ್ ಅಥವಾ ಹೈ-ಎಂಡ್, ಇಂಟರ್ ಆಕ್ಟಿವ್ ಗೇಮ್ ಗಳನ್ನು ಆಡಲು ಇನ್ನು ಮುಂದೆ ದುಬಾರಿ ಗ್ಯಾಜೆಟ್‌ಗಳು ಅಗತ್ಯ ಇರುವುದಿಲ್ಲ. ಜಿಯೋ ಕ್ಲೌಡ್ ಗೇಮಿಂಗ್ ತಂತ್ರಜ್ಞಾನದ ಮೂಲಕ ಆನ್‌ಲೈನ್‌ನಲ್ಲಿ ಕ್ಲೌಡ್ ಗೇಮ್ ಗಳನ್ನು ಆಡಲು, ಬಳಕೆದಾರರಿಗೆ ಉತ್ತಮ ಇಂಟರ್ನೆಟ್ ಸಂಪರ್ಕ ಮತ್ತು ಜಿಯೋಗೇಮ್ಸ್ ಅಪ್ಲಿಕೇಷನ್ ಇದ್ದರೆ ಸಾಕು. ಲ್ಯಾಪ್‌ಟಾಪ್‌ಗಳು, ಪಿಸಿಗಳು, ಸ್ಮಾರ್ಟ್‌ಫೋನ್‌ಗಳು, ಜಿಯೋ ಸೆಟ್-ಟಾಪ್ ಬಾಕ್ಸ್‌ಗಳು ಮತ್ತು ವೆಬ್ ಬ್ರೌಸರ್‌ಗಳಲ್ಲಿ ಗೇಮಿಂಗ್ ಮಾಡಬಹುದು ಮತ್ತು ಇವೆಲ್ಲಕ್ಕೂ ಏನನ್ನೂ ಡೌನ್‌ಲೋಡ್ ಮಾಡುವ ಅಗತ್ಯ ಇಲ್ಲ. ಕೇವಲ ಒಂದು ಗೇಮ್ ಆಯ್ಕೆ ಮಾಡಿ ಮತ್ತು ಆಡಲು ಪ್ರಾರಂಭಿಸಿ. ಟೆಕ್ಕನ್ 7, ಎಲ್ಡನ್ ಮತ್ತು ರಿಂಗ್‌ನಂತಹ ಟ್ರಿಪಲ್-ಎ ಟೈಟಲ್ ಗಳನ್ನು ಈಗ ಜಿಯೋ ಕ್ಲೌಡ್ ತಂತ್ರಜ್ಞಾನದ ಮೂಲಕ ಸುಲಭವಾಗಿ ಆಡಬಹುದು. ಗೇಮರ್ ಗಳು ರೂ. 298ಕ್ಕೆ ಜಿಯೋಗೇಮ್ಸ್ ಅಪ್ಲಿಕೇಷನ್ ಪ್ಲಾನ್ ಪಡೆಯಬಹುದು. 28 ದಿನಗಳ ಮಾನ್ಯತೆಯೊಂದಿಗೆ ಅವರು ಜಿಯೋಗೇಮ್ಸ್‌ನಲ್ಲಿ ಲಭ್ಯವಿರುವ…
ಬೆಂಗಳೂರು: ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಯುತ್ತಿದೆ. ಇಂದಿನವರೆಗೆ ರಾಜ್ಯ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮೀಕ್ಷೆಯ ಪ್ರಗತಿ ಎಷ್ಟು ಸಾಧಿಸಲಾಗಿದೆ ಎನ್ನುವಂತ ಅಂಕಿ-ಅಂಶದ ವಿವರ ಮುಂದಿದೆ ಓದಿ. ರಾಜ್ಯದ ಪ್ರಗತಿ: 10/10/2025 ಒಟ್ಟು ಮನೆಗಳ ಗುರಿ:1,47,88,831 ಮನೆಗಳ ಸಮೀಕ್ಷೆ ನೆನ್ನೆಯವರೆಗೆ ಪ್ರಗತಿ: 1,25,14,685 ಮನೆಗಳ ಸಮೀಕ್ಷೆ ಇಂದಿನ ಪ್ರಗತಿ: 2,09,824 ಒಟ್ಟು ಮನೆಗಳ ಸಮೀಕ್ಷೆ ಪ್ರಗತಿ: 1,27,24,509 ಶೇಕಡಾವಾರು ಪ್ರಗತಿ: 85.89% ಒಟ್ಟು ಜನಸಂಖ್ಯೆ: 4,73,03,431 GBA(ಗ್ರೇಟರ್ ಬೆಂಗಳೂರು)ಪ್ರಗತಿ ಒಟ್ಟು ಮನೆಗಳ ಗುರಿ:39,82,335 ಮನೆಗಳ ಸಮೀಕ್ಷೆ ನೆನ್ನೆಯವರೆಗೆ ಪ್ರಗತಿ: 7,67,807 ಮನೆಗಳ ಸಮೀಕ್ಷೆ ಇಂದಿನ ಪ್ರಗತಿ:1,47,431 ಒಟ್ಟು ಮನೆಗಳ ಸಮೀಕ್ಷೆ ಪ್ರಗತಿ: 9,15,238 ಒಟ್ಟು ಜನಸಂಖ್ಯೆ: 24,68,925 ಶೇಕಡಾವಾರು ಪ್ರಗತಿ: 19.62% https://kannadanewsnow.com/kannada/two-officials-assigned-to-hassanamba-jatra-mahotsavakka-suspended/ https://kannadanewsnow.com/kannada/mla-gopalakrishna-belur-inaugurated-the-new-royal-enfield-showroom-of-rbd-motors/
ಹಾಸನ: ಹಾಸನಾಂಬ ದೇವಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಹಲವು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹೀಗೆ ನಿಯೋಜಿಸಲಾಗಿದ್ದಂತ ಇಬ್ಬರು ಅಧಿಕಾರಿಗಳು ತಮಗೆ ನೀಡಿದ್ದಂತ ಐಡಿ ಕಾರ್ಡ್ ದುರ್ಬಳಕೆ ಮಾಡಿಕೊಂಡಿದ್ದರು. ಇಂತಹ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಹಾಸನ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಹಾಸನಾಂಬ ದೇವಿ ದರ್ಶನ, ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ನಿಯೋಜಿಸಿದ್ದ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದರು. ಕರ್ತವ್ಯದ ಸಲುವಾಗಿ ನೀಡಿದ್ದ ಗುರುತಿನ ಚೀಟಿ ದುರ್ಬಳಕೆ ಮಾಡಿಕೊಂಡಿದ್ದಂತ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ದೇವರ ದರ್ಶನಕ್ಕೆ ತಮ್ಮ ಐಡಿ ನೀಡಿದ್ದಂತ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ವಾರ್ಡನ್ ಗಳಾದಂತ ರಮೇಶ್, ಆನಂದ್ ಎಂಬುವರನ್ನು ಅಮಾನತುಗೊಳಿಸಿ ಹಾಸನ ಡಿಸಿ ಕೆ.ಎಸ್ ಲತಾ ಕುಮಾರಿ ಆದೇಶಿಸಿದ್ದಾರೆ. https://kannadanewsnow.com/kannada/mla-gopalakrishna-belur-inaugurated-the-new-royal-enfield-showroom-of-rbd-motors/ https://kannadanewsnow.com/kannada/survey-of-9-15-lakh-families-in-greater-bengaluru-authority/
ಶಿವಮೊಗ್ಗ: ವಿದ್ಯಾರ್ಥಿಗಳು ನಿಮ್ಮ ಉನ್ನತಿಗಾಗಿ ಶ್ರಮಿಸುತ್ತಿರುವ ಪೋಷಕರನ್ನ ಗೌರವಿಸಬೇಕು. ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ನಾಗರಿಕರಾಗಿ ಬದುಕು ಕಟ್ಟಿಕೊಳ್ಳಲು ಅಣಿಯಾಗಬೇಕು ಎಂಬುದಾಗಿ ಹೊಸನಗರ ತಾಲ್ಲೂಕು ಕೆಡಿಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ನಿಟ್ಟೂರಿನ ಪ್ರಜ್ಞಾಭಾರತಿ ವಿದ್ಯಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಿಟ್ಟೂರು ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದಂತ ಹೋಬಳಿ ಮಟ್ಟದ 17 ವರ್ಷದೊಳಗಿನ ಪ್ರೌಢ ಶಾಲಾ ಕ್ರೀಡಾಕೂಟವನ್ನು ಕೆಡಿಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ಉದ್ಘಾಟಿಸಿದ ಮಾತನಾಡಿದಂತ ಅವರು, ಕ್ರೀಡೆಯು ದೈಹಿಕ ಹಾಗೂ ಮಾನಸಿಕ ಪರಿಣಾಮಗಳನ್ನು ಹೇಗೆ ಬೀರುತ್ತದೆ ಎಂಬುದನ್ನು ಮನಮುಟ್ಟುವಂತೆ ತಿಳುಹಿಸಿಕೊಟ್ಟರು. ನಿಟ್ಟೂರು ಗ್ರಾಮ ಪಂಚಾಯತ್ ಸದಸ್ಯ ನಾಗೋಡಿ ವಿಶ್ವನಾಥ್ ಮಾತನಾಡಿ ಈ ಭಾಗದ ಯುವಕರ ಹಾಗೂ ವಿದ್ಯಾರ್ಥಿಗಳ ಬಹುದಿನದ ಕನಸಾಗಿರುವ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣದ ಕುರಿತು ಶಾಸಕ ಗೋಪಾಲಕೃಷ್ಣ ಬೇಳೂರು ಅವರೊಂದಿಗೆ ಮಾತನಾಡಿ ಅನುದಾನ ತರುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು. ಈ ಉದ್ಘಾಟನಾ ಸಮಾರಂಭದಲ್ಲಿ ನಿಟ್ಟೂರು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಾವತಿ…
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಸಮೀಕ್ಷೆ ಪ್ರಾರಂಭದಿಂದ ಈವರೆಗೆ 9.15 ಲಕ್ಷ ಮನೆಗಳ ಸಮೀಕ್ಷೆ ನಡೆಸಲಾಗಿದೆ. ಇಂದು 10-10-2025 ರಂದು 5 ನಗರ ಪಾಲಿಕೆಗಳಲ್ಲಿ ರಾತ್ರಿ 08.00 ಗಂಟೆಯವರೆಗೆ 1,47,369 ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ. ಜಿಬಿಎ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸಿದ ಮನೆಗಳ ವಿವರ: 1. ಕೇಂದ್ರ ನಗರ ಪಾಲಿಕೆ : 19,330 2. ಪೂರ್ವ ನಗರ ಪಾಲಿಕೆ : 22,124 3. ಉತ್ತರ ನಗರ ಪಾಲಿಕೆ : 35,244 4. ದಕ್ಷಿಣ ನಗರ ಪಾಲಿಕೆ : 27,713 5. ಪಶ್ಚಿಮ ನಗರ ಪಾಲಿಕೆ : 42,958 ಕಳೆದ 7 ದಿನಗಳಲ್ಲಿ ಜಿ.ಬಿ.ಎ ವ್ಯಾಪ್ತಿ ಸಮೀಕ್ಷೆಯಾದ ಒಟ್ಟು ಮನೆಗಳು: 9,15,176 ನಾಗರಿಕರಲ್ಲಿ ವಿನಂತಿ: ಸಮೀಕ್ಷಾದಾರರು ನಿಮ್ಮ ಮನೆಗಳಿಗೆ ಬರುವ ವೇಳೆ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಸಹಕರಿಸಲು ಮತ್ತು ಭಾಗವಹಿಸಲು ಎಲ್ಲಾ ನಾಗರಿಕರಲ್ಲಿ ವಿನಂತಿಸಿದೆ. ನಾಗರಿಕರು…
ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದಂತ ವೇಳೆಯಲ್ಲಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಂತ ಇಬ್ಬರು ಆರೋಪಿಗಳಿಗೆ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ದಂಡವನ್ನು ವಿಧಿಸಿ ಪ್ರಧಾನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 2021ರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸದ್ಗುರು ಲೇಔಟ್ ನಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ದಾಳಿಯ ಸಂದರ್ಭದಲ್ಲಿ ಬರೋಬ್ಬರಿ 1.60 ಕೆಜಿ ಒಣ ಗಾಂಜಾ, 800 ರೂಪಾಯಿ ಹಣ ಹಾಗೂ ಮಾರುತಿ ಒಮಿನಿ ಕಾರನ್ನು ಜಪ್ತಿ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸಾಗರದ ಇಮ್ರಾನ್(25) ಹಾಗೂ ಇಮ್ತಿಯಾಜ್(28) ಎಂಬಾತನನ್ನು ಬಂಧಿಸಲಾಗಿತ್ತು. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ತಿಯನ್ನು ಪಿಎಸ್ಐ ಸಾಗರ್ ಕರ್ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಪ್ರಧಾನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಮೂರ್ತಿ ಮಂಜುನಾಥ ನಾಯಕ್ ಅವರು, ಆರೋಪಿಗಳ ವಿರುದ್ಧದ ಆರೋಪ ಸಾಭೀತಾದ…
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಈ ಹಿಂದೆ ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿತ್ತು. ಇದೀಗ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಅಂದರೆ ಎಂಎಸ್ಎಂಇ ಮತ್ತು ಗಣಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಿಸಿ ಸರ್ಕಾರ ಆದೇಶಿಸಿದೆ. ಇಂದು ಈ ಸಂಬಂಧ ವರ್ಗಾವಣೆ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದ್ದು, ಸಮೀರ್ ಶುಕ್ಲಾ, ಐಎಎಸ್ (ಕೆಎನ್: 2005), ಸರ್ಕಾರದ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ (ಎಂಎಸ್‌ಎಂಇ ಮತ್ತು ಗಣಿ), ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಸರ್ಕಾರದ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಆಗಿ ನಿಯೋಜಿಸಲಾಗಿದೆ. ಸಮೀರ್ ಶುಕ್ಲಾ, ಐಎಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಕರ್ನಾಟಕ ಭವನದ ಕಾರ್ಯದರ್ಶಿ (ಸಮನ್ವಯ) ಹುದ್ದೆಯ ಸಹವರ್ತಿ ಪ್ರಭಾರದಲ್ಲಿ ಇರಿಸಲಾಗಿದೆ. ರೋಹಿಣಿ ಸಿಂಧೂರಿ ದಾಸರಿ, ಐಎಎಸ್ (ಕೆಎನ್: 2009), ಹುದ್ದೆಗಾಗಿ ಕಾಯುತ್ತಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ…
ಶಿವಮೊಗ್ಗ : ಗಣಪತಿ ದೇವಸ್ಥಾನವನ್ನು ಸರ್ಕಾರ ಮತ್ತು ಸಾರ್ವಜನಿಕರ ಸಹಾಯಧನದೊಂದಿಗೆ ಮಾದರಿಯಾಗಿ ನಿರ್ಮಿಸಲಾಗುತ್ತದೆ. ದೇವಾಲಯದ ಮೂಲಭೂತ ಸೌಕರ್ಯಗಳಿಗೆ ಪ್ರಮುಖ ಅಧ್ಯಯನ ನೀಡಲಾಗುತ್ತದೆ ಗಣಪತಿ ದೇವಸ್ಥಾನಕ್ಕೆ ಬೇಕಾದ ಅನುದಾವನ್ನು ಸರ್ಕಾರದಿಂದ ತರಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಗಣಪತಿ ದೇವಸ್ಥಾನ ಆವರಣದಲ್ಲಿ ಗುರುವಾರ ಮುಜರಾಯಿ ಇಲಾಖೆ ವತಿಯಿಂದ ಗಣಪತಿ ದೇವಸ್ಥಾನ ಅಭಿವೃದ್ದಿಗೆ ಸಂಬoಧಿಸಿದoತೆ ಕರೆಯಲಾಗಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದಂತ ಅವರು, ಸಾಗರಕ್ಕೆ ಗಣಪತಿ ದೇವಸ್ಥಾನ ಮತ್ತು ಮಾರಿಕಾಂಬಾ ದೇವಸ್ಥಾನ ಪ್ರಮುಖ ಶ್ರದ್ಧಾಭಕ್ತಿಯ ಕೇಂದ್ರವಾಗಿದೆ. ಅನೇಕ ಪ್ರವಾಸಿಗರು ಬಂದಾಗ ಇಲ್ಲಿಗೆ ಭೇಟಿ ನೀಡುತ್ತಾರೆ. ಗಣಪತಿ ದೇವಸ್ಥಾನವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ದಿ ಮಾಡುವುದು ನನ್ನ ಆದ್ಯತಾ ವಿಷಯಗಳಲ್ಲಿ ಪ್ರಮುಖವಾಗಿದೆ. ಈಗಾಗಲೆ ಮುಜರಾಯಿ ಇಲಾಖೆಯಿಂದ 55 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಹೆಚ್ಚುವರಿಯಾಗಿ 1.,07 ಕೋಟಿ ರೂ. ಬಿಡುಗಡೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಸಮಗ್ರ ಅಭಿವೃದ್ದಿಗೆ ಮಾಸ್ಟರ್…













