Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆಯಿಂದ ಪ್ರಾಯೋಗಿಕ ಸಂಚಾರದ ಮೂಲಕ ಪರೀಕ್ಷೆಗಳನ್ನು ಆರಂಭಿಸಲಾಗಿದೆ. ಹೀಗಾಗಿ 2 ವಾರದಲ್ಲಿ ಪೂರ್ಣಗೊಂಡು ಡಿಸೆಂಬರ್ ನಲ್ಲಿ ವಾಣಿಜ್ಯ ಸಂಚಾರ ಆರಂಭವಾಗುವ ಸಾಧ್ಯತೆ ಇದೆ. ಬಿಎಂಆರ್ ಸಿಎಲ್ ಮಾಹಿತಿ ಹಂಚಿಕೊಂಡಿದ್ದು, ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆ (ಆರ್ಡಿಎಸ್ಒ) ಪ್ರಾಯೋಗಿಕ ಸಂಚಾರದ ಮೂಲಕ ಪರೀಕ್ಷೆಗಳನ್ನು ಸೋಮವಾರ ಆರಂಭಿಸಿದೆ. 2 ವಾರದಲ್ಲಿ ಆರ್ಡಿಎಸ್ಒ ಪರೀಕ್ಷೆ ಪೂರ್ಣಗೊಳ್ಳಲಿದೆ ಎಂದಿದೆ. ಬೊಮ್ಮನಹಳ್ಳಿಯಿಂದ ಆರ್.ವಿ.ರಸ್ತೆ ನಡುವಿನ 18.82 ಕಿ.ಮೀ. ದೂರದ ಈ ಮಾರ್ಗದಲ್ಲಿ ಪ್ರಮುಖ ರಸ್ತೆಗಳನ್ನು ಆರಂಭಿಸಲಾಗಿದೆ. 12 ರಿಂದ 14 ದಿನ ವಿವಿಧ ಪರೀಕ್ಷೆಗಳನ್ನು ತಾಂತ್ರಿಕ ಪರಿಣಿತರು ನಡೆಸಲಿದ್ದಾರೆ. https://twitter.com/KarnatakaVarthe/status/1833448330312974638 https://kannadanewsnow.com/kannada/state-govt-approves-start-of-english-medium-classes-in-373-primary-schools/ https://kannadanewsnow.com/kannada/applications-invited-for-nomination-for-development-journalism-and-environmental-journalism-award/ https://kannadanewsnow.com/kannada/big-update-good-news-for-the-owners-1-months-grihalakshmi-money-finally-deposited-in-the-account/
ಬೆಂಗಳೂರು: ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ, 373 ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ (ದ್ವಿಭಾಷಾ) ವಿಭಾಗಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. 2024-25ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿ ಅನುಮತಿ ನೀಡಲಾಗಿತ್ತು. ಬೇಡಿಕೆ ಪರಿಗಣಿಸಿ ಕನಿಷ್ಠ 100 ವಿದ್ಯಾರ್ಥಿಗಳಿರುವ 373 ಶಾಲೆಗಳಿಗೆ ಅನುಮತಿ ನೀಡಲಾಗಿದೆ. ಬೆಂಗಳೂರು ದಕ್ಷಿಣ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಗದಗ, ಹಾವೇರಿ, ಉತ್ತರ ಕನ್ನಡ, ಶಿರಸಿ, ಮೈಸೂರು, ಹಾಸನ, ವಿಜಯಪುರ ಮತ್ತು ಚಿಕ್ಕಮಗಳೂರಿನ ಶಾಲೆಗಳಿಗೆ ಅನುಮತಿ ನೀಡಲಾಗಿದೆ. ಒಟ್ಟಾರೆಯಾಗಿ ರಾಜ್ಯ ಸರ್ಕಾರದಿಂದ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದಂತೆ 373 ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ಶಾಲೆಗಳನ್ನು ಆರಂಭಿಸುವುದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. https://twitter.com/KarnatakaVarthe/status/1833470602075635960 https://kannadanewsnow.com/kannada/applications-invited-for-ganga-kalyana-yojana/ https://kannadanewsnow.com/kannada/applications-invited-for-nomination-for-development-journalism-and-environmental-journalism-award/ https://kannadanewsnow.com/kannada/big-update-good-news-for-the-owners-1-months-grihalakshmi-money-finally-deposited-in-the-account/
ಬೆಂಗಳೂರು: ಪರಿಶಿಷ್ಟ ಜಾತಿಯವರಿಗಾಗಿ ರಾಜ್ಯ ಸರ್ಕಾರದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಕೊರೆದು, ಪಂಪ್ ಸೆಟ್ ಅಳವಡಿಸಿ, ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸುವ ಗಂಗಾ ಕಲ್ಯಾಣ ಯೋಜನೆಗೆ ಎಸ್ಸಿ ಸಮುದಾಯದವರಿಗೆ ಅರ್ಜಿ ಆಹ್ವಾನಿಸಿರುವುದಾಗಿ ತಿಳಿಸಿದೆ. ಗಂಗಾ ಕಲ್ಯಾಣ ಯೋಜನೆಯಡಿ ಎಸ್ಸಿ ಸಮುದಾಯದವರಿಗೆ 4.75 ಲಕ್ಷ, 3.75 ಲಕ್ಷ ನೀಡಲಾಗುತ್ತದೆ. ಇದರಲ್ಲಿ 50000 ಸಾಲವೂ ಸೇರಿರುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-10-2024 ಆಗಿರುತ್ತದೆ. ಅರ್ಜಿಗಳನ್ನು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳ ಮೂಲಕ ಸಲ್ಲಿಸಬಹುದು ಎಂದು ಹೇಳಿದೆ. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು. https://twitter.com/KarnatakaVarthe/status/1833458824218329459 https://kannadanewsnow.com/kannada/good-news-for-landless-sc-women-in-the-state-applications-invited-for-land/ https://kannadanewsnow.com/kannada/big-update-good-news-for-the-owners-1-months-grihalakshmi-money-finally-deposited-in-the-account/
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು / ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಾಗೂ ಪರಿಸರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ನೀಡಲು 2001ರಲ್ಲಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿತು. ಅದರಂತೆ 2001ರಿಂದ 2016ರ ವರೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಅರ್ಹ ಪತ್ರಕರ್ತರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ. 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅರ್ಹ ಪತ್ರಕರ್ತರಿಗೆ ಈ ಪ್ರಶಸ್ತಿಗಳನ್ನು ನೀಡುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಪರಿಸರ ಹಾಗೂ ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಅನುಪಮ ಕೊಡುಗೆ ನೀಡಿರುವ ಹಾಗೂ…
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಯವರಿಗೆ ಗುಡ್ ನ್ಯೂಸ್ ಎನ್ನುವಂತೆ ಭೂ ಚೇತನ ಯೋಜನೆಯಡಿ 25 ಲಕ್ಷದ ವರೆಗೆ ಶೇ.6ರ ಬಡ್ಡಿದರದಲ್ಲಿ ಸಹಾಯಧನದ ಮೂಲಕ ಜಮೀನು ಖರೀದಿಸಿ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಕೈಗೊಳ್ಳಲಾಗಿದೆ ಎಂದಿದೆ. ಪರಿಶಿಷ್ಟ ಜಾತಿಯವರಿಗಾಗಿ ಭೂ ಒಡೆತನ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕೃಷಿ ಜಮೀನು ಖರೀದಿಸಿ ನೀಡಲಾಗುವುದು ಎಂದಿದೆ. 20 ರಿಂದ 25 ಲಕ್ಷದವರೆಗೆ ಘಟಕದ ವೆಚ್ಚವಾಗಿದೆ. ಇದಕ್ಕಾಗಿ ಶೇ.50ರಷ್ಟು ಸಹಾಯಧನ ನೀಡಲಾಗುತ್ತದೆ. ಶೇ.50ರಷ್ಟು ಸಹಾಯ ಧನಕ್ಕೆ ಶೇ.6ರ ಬಡ್ಡಿದರವಾಗಿದೆ ಎಂದಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್.10, 2024 ಕೊನೆ ದಿನವಾಗಿದೆ. ಆಸಕ್ತ ಪರಿಶಿಷ್ಟ ಜಾತಿಯವರು ಸಮೀಪದ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9482300400ಗೆ ಕರೆ ಮಾಡಿ ಪಡೆಯಬಹುದಾಗಿದೆ ಎಂದಿದೆ. https://twitter.com/KarnatakaVarthe/status/1833454703364981217 https://kannadanewsnow.com/kannada/manipur-violence-curfew-imposed-internet-snapped-for-5-days/ https://kannadanewsnow.com/kannada/special-train-between-hubballi-and-kochuveli-on-the-occasion-of-onam-festival/ https://kannadanewsnow.com/kannada/big-update-good-news-for-the-owners-1-months-grihalakshmi-money-finally-deposited-in-the-account/
ಮಣಿಪುರ: ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಈ ಕಾರಣದಿಂದಾಗಿ ಸೋಷಿಯಲ್ ಮೀಡಿಯಾ ಬಳಕೆಗೆ ನಿರ್ಬಂಧ ಹೇರುವ ಸಲುವಾಗಿ ಇಂಟರ್ನೆಟ್ ಸೇವೆಯನ್ನು ಐದು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಗಲಭೆ ಪೀಡಿತ ಪ್ರದೇಶಗಳಲ್ಲಿ ಕರ್ಪ್ಯೂ ಜಾರಿಗೊಳಿಸಲಾಗಿದೆ. ಈ ತಿಂಗಳ ಆರಂಭದಿಂದ ಹಿಂಸಾಚಾರದ ಹೊಸ ಉಲ್ಬಣದ ಹಿನ್ನೆಲೆಯಲ್ಲಿ ಮಣಿಪುರದಲ್ಲಿ ಮೊಬೈಲ್ ಇಂಟರ್ನೆಟ್, ಬ್ರಾಡ್ಬ್ಯಾಂಡ್ ಮತ್ತು ವಿಪಿಎನ್ಗಳನ್ನು ಐದು ದಿನಗಳವರೆಗೆ ನಿಷೇಧಿಸಲಾಗಿದೆ. ಮಣಿಪುರ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕೆಲವು ಸಮಾಜ ವಿರೋಧಿ ಶಕ್ತಿಗಳು ಸಾರ್ವಜನಿಕರ ಭಾವನೆಗಳನ್ನು ಪ್ರಚೋದಿಸುವ ಚಿತ್ರಗಳು, ದ್ವೇಷ ಭಾಷಣ ಮತ್ತು ದ್ವೇಷದ ವೀಡಿಯೊ ಸಂದೇಶಗಳನ್ನು ಪ್ರಸಾರ ಮಾಡಲು ಸಾಮಾಜಿಕ ಮಾಧ್ಯಮವನ್ನು ವ್ಯಾಪಕವಾಗಿ ಬಳಸಬಹುದು ಎಂಬ ಆತಂಕವಿದೆ. ಇದು ಮಣಿಪುರ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮಗಳನ್ನು ಬೀರಬಹುದು ಎಂದು ಮಣಿಪುರ ಸರ್ಕಾರದ ಗೃಹ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ. ಪ್ರಚೋದನಕಾರಿ ವಿಷಯಗಳು ಮತ್ತು ಸುಳ್ಳು ವದಂತಿಗಳ ಪರಿಣಾಮವಾಗಿ ಜೀವಹಾನಿ ಮತ್ತು / ಅಥವಾ ಸಾರ್ವಜನಿಕ /…
ಬೆಂಗಳೂರು: ಓಣಂ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಹುಬ್ಬಳ್ಳಿ ಮತ್ತು ಕೇರಳದ ಕೊಚುವೇಲಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ಓಣಂ ವಿಶೇಷ ರೈಲು ಸೇವೆಯನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಅವುಗಳ ವಿವರ ಈ ಕೆಳಗಿನಂತಿವೆ: ರೈಲುಗಳ ಸಂಖ್ಯೆ 07333/07334 ಎಸ್ಎಸ್ಎಸ್ ಹುಬ್ಬಳ್ಳಿ-ಕೊಚುವೇಲಿ-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ (1 ಟ್ರಿಪ್) ರೈಲು ಸಂಖ್ಯೆ 07333 ಸೆಪ್ಟೆಂಬರ್ 13, 2024 ರಂದು ಬೆಳಿಗ್ಗೆ 06:55 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಬೆಳಿಗ್ಗೆ 06:45 ಕ್ಕೆ ಕೊಚುವೇಲಿ ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 07334 ಸೆಪ್ಟೆಂಬರ್ 14, 2024 ರಂದು ಮಧ್ಯಾಹ್ನ 12:50 ಗಂಟೆಗೆ ಕೊಚುವೇಲಿಯಿಂದ ಹೊರಟು, ಮರುದಿನ ಮಧ್ಯಾಹ್ನ 12:50 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ. ಈ ರೈಲು ಎರಡೂ ದಿಕ್ಕುಗಳಲ್ಲಿ ಎಸ್ಎಂಎಂ ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಎಸ್ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು,…
ಬೆಂಗಳೂರು: ಪಿಎಸ್ಐ ಪರೀಕ್ಷೆಯನ್ನು ಮುಂದೂಡಲು ಒತ್ತಾಯಿಸಿದ್ದು, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ವಹಿಸುವ ಪ್ರಯತ್ನ ಮಾಡುವುದಾಗಿ ಗೃಹ ಸಚಿವರು ತಿಳಿಸಿದ್ದಾಗಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ ಸರಕಾರಿ ನಿವಾಸಕ್ಕೆ ಭೇಟಿ ನೀಡಿ ಪಿಎಸ್ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಪರೀಕ್ಷೆ ಮುಂದೂಡುವ ವಿಶ್ವಾಸವಿದೆ ಎಂದ ಅವರು, 402 ಹುದ್ದೆ ಪೈಕಿ 102 ಜನರು ಹಾಲ್ ಟಿಕೆಟ್ ಹೊಂದಿದವರು ಯುಪಿಎಸ್ಸಿ ಮೈನ್ಸ್ ಗೆ ಆಯ್ಕೆಯಾಗಿದ್ದಾರೆ. ಈ ಸಂಖ್ಯೆ ಇನ್ನೂ ಹೆಚ್ಚಾಗಿರುವ ಸಾಧ್ಯತೆ ಇದೆ. ಯುಪಿಎಸ್ಸಿ ಮೈನ್ಸ್ ಗೆ ಆಯ್ಕೆಯಾದವರು ಪಿಎಸ್ಐ ಪರೀಕ್ಷೆಯಲ್ಲಿ 100ಕ್ಕೆ ನೂರು ಆಯ್ಕೆ ಆಗಿಯೇ ಆಗುತ್ತಾರೆ. ಅವರಿಗೆ ಅನ್ಯಾಯ ಆಗಬಾರದು ಎಂದು ನುಡಿದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ)…
ಬೆಂಗಳೂರು: ನಕಲಿ ಪೊಲೀಸ್ ವೆರಿಫಿಕೇಷನ್ ಕೊಟ್ಟಿದ್ದಂತ ’ಗುತ್ತಿಗೆದಾರರನ್ನು ಪಾಲಿಕೆಯ ಯಾವುದೇ ಟೆಂಡರ್ ಗಳಲ್ಲಿ ಭಾಗವಹಿಸದಂತೆ 03 ವರ್ಷಗಳ ಅವಧಿಗೆ ಡಿಬಾರ್ ಮಾಡಿ ಬಿಬಿಎಂಪಿ ಆದೇಶಿಸಿದೆ. ಈ ಮೂಲಕ ನಕಲಿ ಸರ್ಟಿಫಿಕೇಟ್ ಕೊಟ್ಟಂತ ಗುತ್ತಿಗೆದಾರನಿಗೆ ಬಿಗ್ ಶಾಕ್ ನೀಡಲಾಗಿದೆ. ಈ ಕುರಿತಂತೆ ಬಿಬಿಎಂಪಿ ಆದೇಶ ಹೊರಡಿಸಿದ್ದು, ಶ್ರೀ ಭುವನೇಶ್ವರಿ ಎಂಟರ್ ಪ್ರೈಸಸ್ ಸಂಸ್ಥೆಯ ಮಾಲೀಕರಾದ ಎ.ವಿ.ಗಿರೀಶ್ ಗುತ್ತಿಗೆದಾರರು ಸರ್ಕಾರದ ಒಳಾಡಳಿತ ಇಲಾಖೆಗೆ ನಕಲಿ ಪೊಲೀಸ್ ವೆರಿಫಿಕೇಷನ್ ಸರ್ಟಿಫಿಕೇಟ್ ಅನ್ನು ನೀಡಿ ಪ್ರಸಾರ ಪರವಾನಗಿಯನ್ನು ಪಡೆದುಕೊಂಡಿರುವುದು ಹಾಗೆಯೇ ಸದರಿ ಪ್ರಸಾರ ಪರವಾನಗಿಯನನ್ಉ ಉಪಯೋಗಿಸಿಕೊಂಡು ಪಾಲಿಕೆಯ ಹಲವು ಟೆಂಡರ್ಗಳಲ್ಲಿ ಪಾಲ್ಗೊಂಡು ಕಾರ್ಯಾದೇಶಗಳು ಮತ್ತು ಬಿಲ್ಲುಗಳನ್ನು ಪಡೆದುಕೊಂಡಿರುವುದು ಪಾಲಿಕೆಯ ಗಮನಕ್ಕೆ ಬಂದಿರುತ್ತದೆ ಎಂದಿದೆ. ಮುಂದುವರೆದು, ಪ್ರಸಾರ ಪರವಾನಗಿ ಪಡೆಯಲು ಸಲ್ಲಿಸಿರುವ ಪೊಲೀಸ್ ವೆರಿಫಿಕೇಶನ್ ಸರ್ಟಿಫಿಕೇಟ್ ನಕಲಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರವರ ವರದಿಯಂತೆ ದಿನಾಂಕ:15-06-2024ರಲ್ಲಿ ಸರ್ಕಾರದಿಂದ ಮಂಜೂರು ಮಾಡಿರುವ ಪ್ರಸಾರ ಪರವಾನಗಿಯನ್ನು ರದ್ದುಗೊಳಿಸಿ ಆದೇಶಿಸಿದೆ. ಮೇಲ್ಕಂಡ ಕಾರಣಗಳಿಂದ ಪಾಲಿಕೆಯ ದಕ್ಷಿಣ ಮತ್ತು ಪಶ್ಚಿಮ ವಲಯದ ಹಿರಿಯ ಸಹಾಯಕ ತೋಟಗಾರಿಕೆ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೂತನವಾಗಿ ಜಾಹೀರಾತು ಪರಿಶೀಲನಾ ಸಮಿತಿಯನ್ನು ರಚಿಸಿ ಆದೇಶಿಸಿದ್ದಾರೆ. ಈ ಸಮಿತಿಯ ಅಧ್ಯಕ್ಷರಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಮುಖ್ಯಸ್ಥರಾದಂತ ರಮೇಶ್ ಬಾಬು ಅವರನ್ನು ನೇಮಕ ಮಾಡಿದೆ. ಇಂದು ಸಿಎಂ ಸಿದ್ಧರಾಮಯ್ಯ ಅವರು ಟಿಪ್ಪಣಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದು, ಇಲಾಖೆಯಲ್ಲಿ ನೂತನವಾಗಿ ಜಾಹೀರಾತು ಪರಿಶೀಲನಾ ಸಮಿತಿಯನ್ನು ರಚಿಸಿ, ಸದರಿ ಸಮಿತಿಗೆ ಈ ಕೆಳಕಂಡವರನ್ನು ಮುಂದಿನ ಆದೇಶದವರೆಗೆ ಅಧ್ಯಕ್ಷರು, ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದಿದ್ದಾರೆ. ನೂತನ ಜಾಹೀರಾತು ಪರಿಶೀಲನಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಅವರನ್ನು ನೇಮಕ ಮಾಡಲಾಗಿದೆ. ಇನ್ನೂ ಸದಸ್ಯರನ್ನಾಗಿ ಕೆಪಿಸಿಸಿಯ ಜನರಲ್ ಸೆಕ್ರೇಟರಿ ಎಂ ರಾಮಚಂದ್ರಪ್ಪ, ನಹೀದ್ ಅತಾವುಲ್ಲಾ ಅವರನ್ನು ನೇಮಕ ಮಾಡಲಾಗಿದೆ. ಸದಸ್ಯ ಕಾರ್ಯದರ್ಶಿಯನ್ನಾಗಿ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಆಯುಕ್ತರನ್ನು ಮಾಡಲಾಗಿದೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/good-news-for-iti-passouts-hal-invites-applications-for-apprentice-training/ https://kannadanewsnow.com/kannada/big-update-good-news-for-the-owners-1-months-grihalakshmi-money-finally-deposited-in-the-account/ https://kannadanewsnow.com/kannada/hoysala-keladi-chennamma-gallantry-award-invited/