Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ನೀರು ಸರಬರಾಜು ವಿಭಾಗದ ಮೂಲಕ ಚಾಮರಾಜನಗರ ತಾಲ್ಲೂಕಿನ 166 ಗ್ರಾಮಗಳು ಮತ್ತು ಗುಂಡ್ಲುಪೇಟೆ ತಾಲ್ಲೂಕಿನ 163 ಗ್ರಾಮಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ 95 ಗ್ರಾಮಗಳಲ್ಲಿ ಬಹುಗ್ರಾಮ ನೀರು ಸರಬರಾಜು ಯೋಜನೆಯಡಿ ಮನೆ ಮನೆಗೆ ನೀರು ಪೂರೈಸುವ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಚಾಮರಾಜನಗರ ತಾಲ್ಲೂಕಿನ 166 ತಾಲ್ಲೂಕುಗಳ ಯೋಜನೆಗೆ 33.04 ಕೋಟಿ ರೂ., ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ 131 ಗ್ರಾಮಗಳು ಹಾಗೂ ಮತ್ತು ಮಾರ್ಗ ಮಧ್ಯದ 32 ಗ್ರಾಮಗಳ ಯೋಜನೆಗೆ 27.38 ಕೋಟಿ ರೂ., ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಸರವಾಡಿ ಹಾಗೂ ಇತರ 95 ಗ್ರಾಮಗಳ ಯೋಜನೆಗೆ 16.70 ಕೋಟಿ ರೂ ವೆಚ್ಚದಲ್ಲಿ ಬಹುಗ್ರಾಮ ನೀರು…

Read More

ಬೆಂಗಳೂರು: ಸಾರಿಗೆ ಬಸ್ ಪ್ರಯಾಣಿಕರಿಗೆ ಸಿಹಿಸುದ್ದಿ ಎನ್ನುವಂತೆ ಕೆ ಎಸ್ ಆರ್ ಟಿ ಸಿಯ ಪ್ರತಿಷ್ಠಿತ ಬಸ್ಸುಗಳ ದರದಲ್ಲಿ ಭಾರೀ ರಿಯಾಯಿತಿಯನ್ನು ಘೋಷಣೆ ಮಾಡಲಾಗಿದೆ. ಸಾರ್ವಜನಿಕ ಪ್ರಯಾಣಿಕರಿಗೆ ಕರಾರಸಾ ನಿಗಮವು ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುತ್ತಿದ್ದು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮದ ವತಿಯಿಂದ ಆಯ್ದ ಮಾರ್ಗಗಳಾದ ಬೆಂಗಳೂರು-ಮಂಗಳೂರು, ಬೆಂಗಳೂರು-ಕುಂದಾಪುರ, ಬೆಂಗಳೂರು-ಉಡುಪಿ, ಬೆಂಗಳೂರು-ಧರ್ಮಸ್ಥಳ, ಬೆಂಗಳೂರು-ಕುಕ್ಕೆಸುಬ್ರಮಣ್ಯ, ಬೆಂಗಳೂರು-ಪುತ್ತೂರು, ಬೆಂಗಳೂರು-ಮಡಿಕೇರಿ/ವಿರಾಜಪೇಟೆ. ಬೆಂಗಳೂರು-ದಾವಣಗೆರೆ, ಬೆಂಗಳೂರು-ಶಿವಮೊಗ್ಗ/ಸಾಗರ, ಬೆಂಗಳೂರು-ಚೆನ್ನೈ, ಬೆಂಗಳೂರು-ಹೈದರಾಬಾದ್/ಸಿಕಂದರಾಬಾದ್, ಬೆಂಗಳೂರು-ತಿರುಪತಿ, ಬೆಂಗಳೂರು-ಮಂತ್ರಾಲಯ, ಬೆಂಗಳೂರು-ಪೂನಾ/ಮುಂಬೈ, ಬೆಂಗಳೂರು-ವಿಜಯವಾಡ, ಬೆಂಗಳೂರು-ಎರ್ನಾಕುಲಂ, ಬೆಂಗಳೂರು-ಮದುರೈ, ಬೆಂಗಳೂರು-ಕೋಯಿಮತ್ತೂರು, ಬೆಂಗಳೂರು-ತಿಶ್ರೂರು ಇನ್ನು ಕೆಲವು ಆಯ್ದ ಮಾರ್ಗಗಳಲ್ಲಿ ಕಾರ್ಯಾಚರಣೆ ಮಾಡುತ್ತಿರುವ ಪ್ರತಿಷ್ಠಿತ ಸಾರಿಗೆಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಎಸಿ ಸ್ಲೀಪರ್, ಮಲ್ಟಿ ಆಕ್ಸೆಲ್ ಎಸಿ ಸ್ಲೀಪರ್ ಮಾದರಿಯ ಸಾರಿಗೆಗಳ ಪ್ರಯಾಣದರಗಳಲ್ಲಿ ಶೇಕಡ 5 ರಿಂದ 15 ರವರೆಗೆ ರಿಯಾಯಿತಿ ನೀಡಲಾಗಿದೆ. ಸದರಿ ರಿಯಾಯಿತಿಯು ದಿನಾಂಕ:05.01.2026 ರಿಂದ ಜಾರಿಗೆ ಬರಲಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ ksrtc.in ಗೆ ಭೇಟಿ ನೀಡಿ. ಸಾರ್ವಜನಿಕ ಪ್ರಯಾಣಿಕರು…

Read More

ಮೈಸೂರು: ಹೆಜ್ಜಾಲ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ನಡೆಯುತ್ತಿರುವ ರೈಲ್ವೆ ಕಾಮಗಾರಿಯ ಕಾರಣದಿಂದ, ಕೆಳಕಂಡ ರೈಲುಗಳನ್ನು ನಿಯಂತ್ರಣ ಮಾಡಲಾಗುತ್ತದೆ: 1. ರೈಲು ಸಂಖ್ಯೆ 16021 ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ – ಅಶೋಕಪುರಂ ಎಕ್ಸಪ್ರೇಸ್, 08.01.2026ರಂದು ಪ್ರಯಾಣ ಆರಂಭಿಸುವ ಈ ರೈಲು ಮಾರ್ಗ ಮಧ್ಯೆ 20 ನಿಮಿಷ ನಿಯಂತ್ರಿಸಲಾಗುತ್ತದೆ. 2. ರೈಲು ಸಂಖ್ಯೆ 16021 ಎಂ.ಜಿ.ಆರ್. ಚೆನ್ನೈ – ಅಶೋಕಪುರಂ ಎಕ್ಸಪ್ರೆಸ್, 22.01.2026ರಂದು ಪ್ರಯಾಣ ಆರಂಭಿಸುವ ಈ ರೈಲು ಮಾರ್ಗ ಮಧ್ಯೆ 35 ನಿಮಿಷ ನಿಯಂತ್ರಿಸಲಾಗುತ್ತದೆ. 3. ರೈಲು ಸಂಖ್ಯೆ 16220 ತಿರುಪತಿ – ಚಾಮರಾಜನಗರ ಎಕ್ಸಪ್ರೆಸ್, 22.01.2026ರಂದು ಪ್ರಯಾಣ ಆರಂಭಿಸುವ ಈ ರೈಲು ಮಾರ್ಗ ಮಧ್ಯೆ 15 ನಿಮಿಷ ನಿಯಂತ್ರಿಸಲಾಗುತ್ತದೆ. 4. ರೈಲು ಸಂಖ್ಯೆ 16586 ಮುರ್ಡೇಶ್ವರ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸಪ್ರೆಸ್, 29.01.2026ರಂದು ಪ್ರಯಾಣ ಆರಂಭಿಸುವ ಈ ರೈಲು ಮಾರ್ಗ ಮಧ್ಯೆ 30 ನಿಮಿಷ ನಿಯಂತ್ರಿಸಲಾಗುತ್ತದೆ. 5. ರೈಲು ಸಂಖ್ಯೆ 16021 ಎಂ.ಜಿ.ಆರ್. ಚೆನ್ನೈ – ಅಶೋಕಪುರಂ…

Read More

ಶಿವಮೊಗ್ಗ: ಸಾಗರ ನಗರದಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನಲೆಯಲ್ಲಿ ಜನವರಿ.9ರ ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 09.01.2026 ಶುಕ್ರವಾರದಂದು ಸಾಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್ ಕಂಬಗಳ ಸ್ಥಳಾಂತರಿಸುವ ಹಮ್ಮಿಕೊಂಡಿರುವುದರಿಂದ ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್ ಫೀಡ‌ ಮಾರ್ಗದಿಂದ ವಿದ್ಯುತ್‌ ಸಂಪರ್ಕ ಪಡೆದಿರುವ ನೆಹರೂ ನಗರ, ಜೋಸೆಫ್ ನಗರ, ಅರಳೀಕೊಪ್ಪ, ಜನ್ನತ್‌ಗಲ್ಲಿ, ಸಿಗಂದೂರು ಮಾರ್ಕೆಟ್ ರಸ್ತೆ, ಬಿ.ಹೆಚ್ ರಸ್ತೆ, ಅಶೋಕ ರಸ್ತೆ, ಕೃಷ್ಣ ಗ್ಯಾರೇಜ್, ಎಲ್.ಐ.ಸಿ ಆಫೀಸ್ ಹತ್ತಿರ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಬೆಳಗ್ಗೆ: 10:00 ಘಂಟೆಯಿಂದ ಸಂಜೆ: 06:00 ಘಂಟೆಯವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಕೋರಿದೆ. ವರದಿ; ವಸಂತ ಬಿ ಈಶ್ವರಗೆರೆ… ಸಂಪಾದಕರು.. https://kannadanewsnow.com/kannada/all-b-accounts-in-the-state-will-get-a-accounts-important-decision-in-the-cabinet-meeting/

Read More

ಬೆಂಗಳೂರು: ರಾಜ್ಯದ ಎಲ್ಲಾ ಬಿ-ಖಾತಾಗಳಿಗೂ ಎ-ಖಾತಾ ನೀಡಲು ಇಂದಿನ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಬೆಂಗಳೂರು ಬಳಿಕ ಸ್ಥಳೀಯ ಸಂಸ್ಥೆಗಳಿಗೂ ಎ-ಖಾತಾ ಭಾಗ್ಯವನ್ನು ಸರ್ಕಾರ ವಿಸ್ತರಿಸಿದೆ. ಈ ಮೂಲಕ ರಾಜ್ಯದ ಎಲ್ಲಾ ಬಿ-ಖಾತಾ ಆಸ್ತಿ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು ರಾಜ್ಯದ ಎಲ್ಲಾ ಬಿ-ಖಾತಾಗಳಿಗೂ ಎ-ಖಾತಾ ನೀಡೋದಕ್ಕೆ ಇಂದಿನ ಸಂಪುಟ ಸಭೆಯಲ್ಲ ನಿರ್ಧರಿಸಲಾಗಿದೆ ಎಂದರು. ರಾಜ್ಯದ ಬಿ-ಖಾತಾ ನಿವೇಶನ, ಕಟ್ಟಡ, ಫ್ಲ್ಯಾಟ್ ಗಳಿಗೆ ಎ-ಖಾತಾ ನೀಡಲು ನಿರ್ಧರಿಸಲಾಗಿದೆ. ರಾಜ್ಯಾಧ್ಯಂತ 10 ಲಕ್ಷ ಕಟ್ಟಡಗಳಿಗೆ ಇದರಿಂದ ಲಾಭವಾಗಲಿದೆ. ಬೆಂಗಳೂರು ಬಳಿಕ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೂ ಇದನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

Read More

ಬೆಂಗಳೂರು: ರಾಜ್ಯದ ಬಿ-ಖಾತಾ ಆಸ್ತಿ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ ಎನ್ನುವಂತೆ, ಎಲ್ಲಾ ಬಿ-ಖಾತಾಗಳಿಗೂ ಎ-ಖಾತಾ ಭಾಗ್ಯ ನೀಡಲು ಇಂದಿನ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು ರಾಜ್ಯದ ಎಲ್ಲಾ ಬಿ-ಖಾತಾಗಳಿಗೂ ಎ-ಖಾತಾ ನೀಡೋದಕ್ಕೆ ಇಂದಿನ ಸಂಪುಟ ಸಭೆಯಲ್ಲ ನಿರ್ಧರಿಸಲಾಗಿದೆ ಎಂದರು. ರಾಜ್ಯದ ಬಿ-ಖಾತಾ ನಿವೇಶನ, ಕಟ್ಟಡ, ಫ್ಲ್ಯಾಟ್ ಗಳಿಗೆ ಎ-ಖಾತಾ ನೀಡಲು ನಿರ್ಧರಿಸಲಾಗಿದೆ. ರಾಜ್ಯಾಧ್ಯಂತ 10 ಲಕ್ಷ ಕಟ್ಟಡಗಳಿಗೆ ಇದರಿಂದ ಲಾಭವಾಗಲಿದೆ. ಬೆಂಗಳೂರು ಬಳಿಕ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೂ ಇದನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

Read More

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್ಸುಗಳಲ್ಲಿ ಪ್ರಯಾಣಿಸುವಾಗ ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ರಕ್ಷಣೆಗೆ ಅಗತ್ಯವಿರುವ ಹಲವಾರು ಸುರಕ್ಷತಾ ವ್ಯವಸ್ಥೆಗಳನ್ನು ಒದಗಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದೆ. ತುರ್ತು ಪರಿಸ್ಥಿತಿಯಲ್ಲಿ ಪ್ರಯಾಣಿಕರು ತೆಗೆದುಕೊಳ್ಳಬೇಕಾದ ಕ್ರಮಗಳು: ಎಲ್ಲಾ ಬಸ್ಸುಗಳ ಒಳಭಾಗದಲ್ಲಿ ಪ್ಯಾನಿಕ್ ಬಟನ್ಗಕಳನ್ನು ಅಳವಡಿಸಲಾಗಿದೆ. ಅಗ್ನಿ ಅವಘಡ, ವೈದ್ಯಕೀಯ ತುರ್ತು ಪರಿಸ್ಥಿತಿ, ಪ್ರಯಾಣಿಕರ ಸುರಕ್ಷತೆಗೆ ಅಪಾಯ ಈ ತುರ್ತು ಸಂದರ್ಭಗಳಲ್ಲಿ ಮಾತ್ರ ಪ್ಯಾನಿಕ್ ಬಟನ್ ಒತ್ತಬೇಕು. ಪ್ಯಾನಿಕ್ ಬಟನ್ ಒತ್ತಿದ ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ತಲುಪುತ್ತದೆ. ಅಗ್ನಿ ನಂದಕ (ಫೈರ್ ಎಕ್ಸಿಂಗ್ಲಿಷರ್): ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿ ಅಗ್ನಿ ನಂದಕಗಳನ್ನು ಒದಗಿಸಲಾಗಿದೆ. ಅಗ್ನಿ ಅವಘಡ ಸಂಭವಿಸಿದಲ್ಲಿ ತಕ್ಷಣ ಚಾಲಕರಿಗೆ ಮಾಹಿತಿ ನೀಡಬೇಕು. ತರಬೇತಿ ಪಡೆದಿದ್ದರೆ ಅಗ್ನಿ ನಂದಕವನ್ನು ಸಿಬ್ಬಂದಿಯ ಸೂಚನೆಗಳನ್ನು ಶಾಂತವಾಗಿ ಅನುಸರಿಸಬೇಕು. ತುರ್ತು ನಿರ್ಗಮನ ದ್ವಾರ: ತುರ್ತು ನಿರ್ಗಮನ ದ್ವಾರಗಳನ್ನು ಸ್ಪಷ್ಟವಾಗಿ ಗುರುತಿಸಲಾಗಿದೆ. ಸಾಮಾನ್ಯ ಬಾಗಿಲುಗಳು ತೆರೆಯಲು ಆಗದಿದ್ದಾಗ ಅಥವಾ ಸೂಚನೆ ದೊರೆತಾಗ ಮಾತ್ರ ತುರ್ತು ನಿರ್ಗಮನ ದ್ವಾರವನ್ನು…

Read More

ಬೆಂಗಳೂರು : ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮೊಬೈಲ್ ಆಧಾರಿತ ಹಾಜರಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಇಲಾಖೆಯು ಈಗಾಗಲೇ ಚಾಲ್ತಿಯಲ್ಲಿದ್ದ ಬಯೋಮೆಟ್ರಿಕ್ ಹಾಜರಾತಿಯನ್ನು ರದ್ದುಗೊಳಿಸಿ, ಮೊಬೈಲ್ ಆಧಾರಿತ ಹಾಜರಾತಿಯ (ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ) ಮೂಲಕ ಕಡ್ಡಾಯವಾಗಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಾತಿ ನೀಡಬೇಕೆಂದು ಎಂದು ಸೂಚಿಸಿದೆ. ಈ ಹೊಸ ಹಾಜರಾತಿ ವ್ಯವಸ್ಥೆಯನ್ನು ಅನುಸರಿಸದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವೇತನವನ್ನು ಕಡಿತಗೊಳಿಸುವುದರ ಜೊತೆಗೆ ನಡತೆ ನಿಯಮದ ಉಲ್ಲಂಘನೆ ಎಂದು ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಧಾನ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ “ಸಖಿ” ಒನ್ ಸ್ಟಾಪ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸಲು ಗುತ್ತಿಗೆ ಆಧಾರ ಮೇಲೆ ಘಟಕ ಆಡಳಿತಾಧಿಕಾರಿಗಳು 03 ಹುದ್ದೆ, ಆಪ್ತ ಸಮಾಲೋಚಕರ 03 ಹುದ್ದೆ, ಸಮಾಜ ಸೇವಾ ಕಾರ್ಯಕರ್ತರ / ಕೇಸ್ ವರ್ಕರ್ 07 ಹುದ್ದೆ, ಕಾನೂನು ಸಲಹೆಗಾರರು, ವಕೀಲರು (ಪ್ಯಾರಾ ಲೀಗಲ್ ) 03 ಹುದ್ದೆ ಮತ್ತು ವಿವಿದೋದ್ದೇಶ ಸ್ವಚ್ಛತಗಾರರು / ಸೆಕ್ಯೂರಿಟಿ 08 ಹುದ್ದೆಗೆ ಆಯ್ಕೆ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ : ಘಟಕ ಆಡಳಿತಾಧಿಕಾರಿಗಳು ಹುದ್ದೆಗೆ ಎಂ.ಎಸ್ ಡಬ್ಲೂ., ಸ್ನಾತಕೋತ್ತರ ಕಾನೂನು ಪದವಿ., ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವೆಲಪ್ ಮೆಂಟ್ & ಫ್ಯಾಮಿಲಿರಿಲೇಷನ್) ಎಂ.ಎಸ್.ಸಿ. ಸೈಕಾಲಜಿ., ಎಂ.ಎಸ್.ಸಿ ಸೈಕಿಯಾಟ್ರಿ ಹೊಂದಿರಬೇಕು. ಸರ್ಕಾರಿ / ಸ್ವಯಂ ಸೇವಾಸಂಸ್ಥೆಗಳಲ್ಲಿ ಕನಿಷ್ಠ 05 ವರ್ಷಗಳ ಸಮಾಲೋಚನ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ, ಕನ್ನಡ / ಇಂಗ್ಲೀಷ್ ಬೆರಳಚ್ಚು, ಗೂಗಲ್ ಶೀಟ್ ಎಂ.ಎಸ್. ಆಫೀಸ್ ಹಾಗೂ ಪಿ.ಪಿ.ಟಿ ಯಲ್ಲಿ…

Read More

ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26ನೆ ಸಾಲಿನ ಸಾಧನೆ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ವಿಕಲಚೇತರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 31, 2026 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತ ವಿಕಲೇಚತನ ಫಲಾನುಭವಿಗಳು ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಮತ್ತು ಸೇವಾ ಸಿಂಧು ಪೋರ್ಟಲ್ (https://sevasindhu.karnataka.gov.in/sevasindhu/DepartmentServices) ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ-560029 ಅಥವಾ ದೂರವಾಣಿ ಸಂಖ್ಯೆ-080-29752324 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More