Author: kannadanewsnow09

ಪಂಜಾಬ್: ಇಲ್ಲಿನ ಫಿರೋಜ್ ಪುರದಲ್ಲಿ ಪಾಕಿಸ್ತಾನ ಹಾರಿಸಿದಂತ ಡ್ರೋನ್, ಮನೆಯೊಂದರ ಮೇಲೆ ಅಪ್ಪಳಿಸಿದೆ. ಈ ದಾಳಿಯಲ್ಲಿ 2-3 ಜನರಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಇಂದು ಪಾಕಿಸ್ತಾನದಿಂದ ಮತ್ತೆ ಭಾರತದ ಮೇಲೆ ಡ್ರೋನ್ ದಾಳಿ ನಡೆಸಲಾಗಿದೆ. ಜಮ್ಮು-ಕಾಶ್ಮೀರ ಸೇರಿದಂತೆ ವಿವಿಧ ಸ್ಥಳಗಳ ಮೇಲೆ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯನ್ನು ಭಾರತೀಯ ಸೇನೆಯು ಡಿಫೆನ್ಸ್ ಸಿಸ್ಟಮ್ ಆನ್ ಮಾಡುವ ಮೂಲಕ ಧ್ವಂಸಗೊಳಿಸಿದೆ. ಪಾಕಿಸ್ತಾನಕ್ಕೆ ‘ಐಎಂಎಫ್ ಬೇಲ್ ಔಟ್ ಪ್ಯಾಕೇಜ್’ಗೆ ಭಾರತ ಆಕ್ಷೇಪ ನವದೆಹಲಿ: ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ ಪಾಕಿಸ್ತಾನಕ್ಕೆ ಬೇಲ್ ಔಟ್ ಪ್ಯಾಕೇಜ್ ಗೆ ಭಾರತ ಶುಕ್ರವಾರ ಆಕ್ಷೇಪ ವ್ಯಕ್ತಪಡಿಸಿದ್ದು, ದೇಶವು ಕಳಪೆ ದಾಖಲೆಯನ್ನು ಹೊಂದಿದೆ ಮತ್ತು ರಾಜ್ಯ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಗೆ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ. https://twitter.com/ANI/status/1920871717410418797 ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ವಿಸ್ತೃತ ನಿಧಿ ಸೌಲಭ್ಯ (ಇಎಫ್ಎಫ್) ಸಾಲ ಕಾರ್ಯಕ್ರಮವನ್ನು (1 ಬಿಲಿಯನ್ ಡಾಲರ್) ಪರಿಶೀಲಿಸಿತು ಮತ್ತು ಪಾಕಿಸ್ತಾನಕ್ಕೆ ಹೊಸ ಸ್ಥಿತಿಸ್ಥಾಪಕತ್ವ ಮತ್ತು ಸುಸ್ಥಿರತೆ ಸೌಲಭ್ಯ…

Read More

ನವದೆಹಲಿ: ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ ಪಾಕಿಸ್ತಾನಕ್ಕೆ ಬೇಲ್ ಔಟ್ ಪ್ಯಾಕೇಜ್ ಗೆ ಭಾರತ ಶುಕ್ರವಾರ ಆಕ್ಷೇಪ ವ್ಯಕ್ತಪಡಿಸಿದ್ದು, ದೇಶವು ಕಳಪೆ ದಾಖಲೆಯನ್ನು ಹೊಂದಿದೆ ಮತ್ತು ರಾಜ್ಯ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಗೆ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ. https://twitter.com/ANI/status/1920871717410418797 ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ವಿಸ್ತೃತ ನಿಧಿ ಸೌಲಭ್ಯ (ಇಎಫ್ಎಫ್) ಸಾಲ ಕಾರ್ಯಕ್ರಮವನ್ನು (1 ಬಿಲಿಯನ್ ಡಾಲರ್) ಪರಿಶೀಲಿಸಿತು ಮತ್ತು ಪಾಕಿಸ್ತಾನಕ್ಕೆ ಹೊಸ ಸ್ಥಿತಿಸ್ಥಾಪಕತ್ವ ಮತ್ತು ಸುಸ್ಥಿರತೆ ಸೌಲಭ್ಯ (ಆರ್ಎಸ್ಎಫ್) ಸಾಲ ಕಾರ್ಯಕ್ರಮವನ್ನು (1.3 ಬಿಲಿಯನ್ ಡಾಲರ್) ಪರಿಗಣಿಸಿತು. https://twitter.com/ANI/status/1920871978627723723 ಸಕ್ರಿಯ ಸದಸ್ಯ ರಾಷ್ಟ್ರವಾಗಿ, ಪಾಕಿಸ್ತಾನಕ್ಕೆ ಸಂಬಂಧಿಸಿದಂತೆ ಐಎಂಎಫ್ ಕಾರ್ಯಕ್ರಮಗಳ ಪರಿಣಾಮಕಾರಿತ್ವದ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿತು, ಅದರ ಕಳಪೆ ದಾಖಲೆ ಮತ್ತು ರಾಜ್ಯ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಗೆ ಸಾಲ-ಹಣಕಾಸು ಹಣವನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ. ಭಾರತದ ಹೇಳಿಕೆಗಳು ಮತ್ತು ಮತದಾನದಿಂದ ದೂರ ಉಳಿದಿರುವುದನ್ನು ಐಎಂಎಫ್ ಗಮನಿಸಿದೆ.

Read More

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿದಂತ ಮಗುವನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಂತ ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ. ಬಾಲಕೃಷ್ಣ ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಕೈಗೊಂಡಿದೆ. ಡಾ|| ಜಿ.ಎಸ್.ಬಾಲಕೃಷ್ಣ, ಪ್ರಸೂತಿ ತಜ್ಞರು, ಸಾರ್ವಜನಿಕ ಆಸ್ಪತ್ರೆ ಕೊಪ್ಪ, ಚಿಕ್ಕಮಗಳೂರು ಜಿಲ್ಲೆ ಇವರು ಕುಮಾರಿ. ಕಲ್ಪನ ಎಂಬ ಗರ್ಭಿಣಿಗೆ ದಿ:14.03.2020 ರಂದು ಹೆರಿಗೆ ಮಾಡಿಸಿ, ಅವರಿಗೆ ಜನಿಸಿದ ಹೆಣ್ಣು ಮಗುವನ್ನು ರೂ.50,000/- ಗಳಿಗೆ ಶ್ರೀಮತಿ ಪ್ರೇಮಲತಾ ಎಂಬುವವರಿಗೆ ಮಾರಾಟ ಮಾಡಿ, ಶ್ರೀಮತಿ. ಪ್ರಮಲತಾ ಎಂಬುವವರಿಗೆ ಹೆರಿಗೆಯಾದಂತೆ ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿರುವ ಆರೋಪಕ್ಕಾಗಿ ಇವರ ವಿರುದ್ಧ ನಡೆಸಲಾದ ಇಲಾಖಾ ವಿಚಾರಣೆಯಲ್ಲಿ ದುರ್ನಡತೆಯ ಆರೋಪವು ಸಾಬೀತಾಗಿರುವುದರಿಂದ, ಇವರನ್ನು ಕೆಸಿಎಸ್ (ಸಿಸಿಎ) ನಿಯಮಗಳು 1957ರ ನಿಯಮ 8(vi) ರಡಿಯಲ್ಲಿ ಸರ್ಕಾರಿ ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸುವ ದಂಡನೆಯನ್ನು ವಿಧಿಸಲು; ಸಚಿವ ಸಂಪುಟ ನಿರ್ಧರಿಸಿದೆ ಎಂದು ಮಾನ್ಯ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ವಿವರಿಸಿದರು. ಪ್ರಸ್ತಾಪಿತ ಪ್ರಕರಣದಲ್ಲಿ…

Read More

ನವದೆಹಲಿ: ಇಂದು ಮತ್ತೆ ಜಮ್ಮು-ಕಾಶ್ಮೀರ ಸೇರಿದಂತೆ ವಿವಿಧ ಸ್ಥಳಗಳ ಮೇಲೆ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯನ್ನು ಅಷ್ಟೇ ತೀವ್ರವಾಗಿ ಭಾರತೀಯ ಸೇನೆ ಪ್ರತ್ಯುತ್ತರ ನೀಡಿ, ಎಲ್ಲಾ ಡ್ರೋನ್ ಗಳನ್ನು ಹೊಡೆದುರುಳಿಸಿದೆ. ಇಂದು ಪಾಕಿಸ್ತಾನ ಭಾರತದ ಮೂರು ರಾಜ್ಯಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿಯ ಪ್ರಯತ್ನ ನಡೆಸಿದೆ. ಜಮ್ಮು-ಕಾಶ್ಮೀರ, ಪಂಜಾಬ್, ರಾಜಸ್ಥಾನದ ವಿವಿಧ ನಗರಗಳನ್ನು ಟಾರ್ಗೆಟ್ ಮಾಡಿ ಡ್ರೋನ್ ದಾಳಿ ನಡೆಸಿದೆ. ಪಾಕಿಸ್ತಾನ ಹಾರಿಸಿದ್ದ ಎಲ್ಲಾ ಡ್ರೋನ್ ಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ರಾಜಸ್ಥಾನದ ಜೈಸಲ್ಮೇರ್, ಪ್ರೋಖ್ರಾನ್ ಮೇಲೆಯೂ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿದೆ. ಜಮ್ಮು-ಕಾಶ್ಮೀರದ ರಚೌರಿ, ಪೂಂಚ್, ಸಾಂಬಾ, ನೌಗಾಮ್ ಮೇಲೆ ದಾಳಿ ಮಾಡಿದ್ದು, ಭಾರತೀಯ ವಾಯುಪಡೆಯ ಡಿಫೆನ್ಸ್ ಸಿಟ್ಟಂ ಎಲ್ಲವನ್ನು ಧ್ವಂಸಗೊಳಿಸಿದೆ.

Read More

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಗಡಿ ಉದ್ವಿಗ್ನತೆಯ ಮಧ್ಯೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಪಿಎಸ್ಎಲ್ 2025 ರ ಉಳಿದ ಎಂಟು ಪಂದ್ಯಗಳನ್ನು ಮುಂದೂಡುವುದಾಗಿ ಘೋಷಿಸಿದೆ.  ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅನ್ನು ಒಂದು ವಾರದವರೆಗೆ ಅಮಾನತುಗೊಳಿಸಿದ ಕೆಲವೇ ಗಂಟೆಗಳ ನಂತರ ಮತ್ತು ಉಳಿದ ಪಿಎಸ್ಎಲ್ 2025 ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸುವ ಉದ್ದೇಶವನ್ನು ಪಿಸಿಬಿ ಬಹಿರಂಗಪಡಿಸಿದ ಸ್ವಲ್ಪ ಸಮಯದ ನಂತರ ಈ ಪ್ರಕಟಣೆ ಹೊರಬಿದ್ದಿದೆ. “ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಎಚ್ಬಿಎಲ್ ಪಿಎಸ್ಎಲ್ ಎಕ್ಸ್ನ ಉಳಿದ ಎಂಟು ಪಂದ್ಯಗಳನ್ನು ಮುಂದೂಡುವುದಾಗಿ ಘೋಷಿಸಿದೆ. ಕಳೆದ 24 ಗಂಟೆಗಳಲ್ಲಿ ಎಲ್ಒಸಿಯಲ್ಲಿ ಪರಿಸ್ಥಿತಿ ಹದಗೆಟ್ಟಿದೆ, 78 ಡ್ರೋನ್ಗಳ ಒಳನುಸುಳುವಿಕೆ ಹೆಚ್ಚಾಗಿದೆ ಮತ್ತು ಭಾರತದಿಂದ ಮೇಲ್ಮೈಯಿಂದ ಮೇಲ್ಮೈ ಕ್ಷಿಪಣಿಗಳನ್ನು ಹಾರಿಸಲಾಗಿದೆ. ನಮ್ಮ ಪ್ರೀತಿಯ ಪಾಕಿಸ್ತಾನದ ಸಾರ್ವಭೌಮತ್ವವನ್ನು ಗಟ್ಟಿಯಾಗಿ ಎತ್ತಿಹಿಡಿಯುತ್ತಿರುವ ಪಾಕಿಸ್ತಾನದ ಸಶಸ್ತ್ರ ಪಡೆಗಳ ಧೈರ್ಯಶಾಲಿ ಪ್ರಯತ್ನಗಳ ಮೇಲೆ ರಾಷ್ಟ್ರೀಯ ಗಮನ ಮತ್ತು ಭಾವನೆಗಳು ಸರಿಯಾಗಿ ಕೇಂದ್ರೀಕೃತವಾಗಿರುವ ಭಾರತದ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿ ಪ್ರಕಟಿಸಲಾಗಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗಳನ್ನು ಹೊರಡಿಸಲು ಮತ್ತು ಸದರಿ ಮಾರ್ಗಸೂಚಿಯನ್ನು ಪರಿಷ್ಕರಿಸಲು ಹಾಗೂ ವರ್ಗಾವಣಾ ಅವಧಿಯನ್ನು ವಿಸ್ತರಿಸಲು ಮಾನ್ಯ ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ ವಿವರಿಸಿದರು. ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ ದಿ:15.05.2025 ರಿಂದ 14.06.2025 ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್ ‘ಸಿ’ ಮತ್ತು ‘ಡಿ’ ವೃಂಧದ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಲು ಪ್ರಸ್ತಾಪಿಸಲಾಗಿದೆ. https://kannadanewsnow.com/kannada/good-news-for-disabled-state-cabinet-approves-4-reservation-in-promotions/

Read More

ಬೆಂಗಳೂರು: ರಾಜ್ಯದ ಅಂಗವಿಕಲರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗ್ರೂಪ್-ಬಿ, ಎ ಹುದ್ದೆಗಳ ಮುಂಬಡ್ತಿಯಲ್ಲಿ ಶೇ.4 ರಷ್ಟು ಮೀಸಲಾತಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ರಲ್ಲಿ ಪರಿಭಾಷಿಸಲಾಗಿರುವ ಎದ್ದುಕಾಣುವ ಅಂಗವೈಕಲ್ಯವುಳ್ಳ ಅಧಿಕಾರಿಗಳಿಗೆ ಗುಂಪು-ಬಿ ಮತ್ತು ಗುಂಪು-ಎ (ಕಿರಿಯ ಶ್ರೇಣಿ) ಹುದ್ದೆಗಳಲ್ಲಿ ಮುಂಬಡ್ತಿಯಲ್ಲಿ ಶೇ.4 ರಷ್ಟು ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ನಿರ್ಣಯಿಸಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ ವಿವರಿಸಿದರು. ಅಂಗವಿಕಲ ವ್ಯಕ್ತಿಗಳ ಹಕ್ಕು ಅಧಿನಿಯಮ 2016ರ ಅನ್ವಯ “Provided that the Reservation in Promotion shall be in accordance with such instructions as are issued by the appropriate Government from time to time” ಎಂಬ ಅವಕಾಶ ಕಲ್ಪಿಸಲಾಗಿದೆ. ಮಾನ್ಯ ಸರ್ವೋಚ್ಛ ನ್ಯಾಯಾಲಯವು ಈ ಅವಕಾಶವನ್ನು ಪುಷ್ಟೀಕರಿಸಿ ಆದೇಶ…

Read More

ಮಂಡ್ಯ : ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬ ವ್ಯಕ್ತಿಯನ್ನು ಪೋಲೀಸರು ಬಂಧಿಸಿದ್ದಾರೆ. ಆರೋಪಿ ಜಾವೀದ್ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಗೆ ಮೋದಿ ಶೂ ಧರಿಸುವಂತೆ ಎಡಿಟ್ ಮಾಡಿದ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಆರೋಪಿ ವಿಕೃತಿ ಮೆರೆದಿದ್ದ ಎನ್ನಲಾಗಿದೆ. ಹೀಗಾಗಿ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದು, ಬಿಜೆಪಿ ಕಾರ್ಯಕರ್ತರ ದೂರಿನ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನಾಗರಿಕ ಸಂಹಿತೆ (ಬಿಎನ್‌ಎಸ್) ಕಲಂ 152, 192, ಮತ್ತು 340 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ವರದಿ : ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/mandya-contaminated-food-case-gokula-educational-institution-de-recognised/ https://kannadanewsnow.com/kannada/indo-pak-tensions-indigo-suspends-flights-to-several-cities-till-may-10/

Read More

ಮಂಡ್ಯ : ಕಲುಷಿತ ಆಹಾರ ಸೇವಿಸಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಗೋಕುಲ ವಿದ್ಯಾಸಂಸ್ಥೆಯ ಮೂರು ಶಾಲೆಗಳ ಮಾನ್ಯತೆಯನ್ನು ಡಿಡಿಪಿಐ ಎಚ್. ಶಿವರಾಮೇಗೌಡ ರದ್ದುಪಡಿಸಿದ್ದಾರೆ. ಮಾರ್ಚ್‌ 16ರಂದು ಉದ್ಯಮಿಯೊಬ್ಬರು ನೀಡಿದ್ದ ಕಲುಷಿತ ಆಹಾರ ಸೇವಿಸಿ ಮೇಘಾಲಯ ಮೂಲದ ಕೇರ್ಲಾಂಗ್ (13) ಮತ್ತು ನಮೀಬ್ ಮಾಂತೆ (14) ಎಂಬ ವಿದ್ಯಾರ್ಥಿಗಳು ಮೃತಪಟ್ಟು, 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಶಿಕ್ಷಣ ಇಲಾಖೆಯ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ಟಿ.ಕಾಗೇಪುರ ಹಾಗೂ ಕಿರುಗಾವಲು ಗೋಕುಲ ವಿದ್ಯಾಸಂಸ್ಥೆಯ ಮಾನ್ಯತೆ ಹಿಂಪಡೆದು ಆ ಮೂರು ಶಾಲೆಗಳ ವಿದ್ಯಾರ್ಥಿಗಳಿಗೆ ಪರ್ಯಾಯ ದಾಖಲಾತಿ ವ್ಯವಸ್ಥೆ ಕಲ್ಪಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ. ಉಮಾ ಅವರಿಗೆ ಡಿಡಿಪಿಐ ಎಚ್.ಶಿವರಾಮೇಗೌಡ ಆದೇಶಿಸಿದ್ದಾರೆ. 2024-25ನೇ ಸಾಲಿನಲ್ಲಿ ಕಿರುಗಾವಲು ಗೋಕುಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 126, ಗೋಕುಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಕನ್ನಡ ಮಾಧ್ಯಮ) 202 ಹಾಗೂ ಗೋಕುಲ ಪಬ್ಲಿಕ್ ಶಾಲೆಯಲ್ಲಿ (ಆಂಗ್ಲ ಮಾಧ್ಯಮ) 15 ವಿದ್ಯಾರ್ಥಿಗಳು ದಾಖಲಾಗಿದ್ದರು. ‘ಮೇಘಾಲಯ ಮೂಲದ 24ಕ್ಕೂ ಹೆಚ್ಚು…

Read More

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಮಧ್ಯೆ, ಜಮ್ಮುವಿನಾದ್ಯಂತ ಶುಕ್ರವಾರ (ಮೇ 9) ಸೈರನ್ಗಳನ್ನು ಕೇಳಬಹುದು. ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸ್ಫೋಟದ ಶಬ್ದಗಳು, ಬಹುಶಃ ಭಾರಿ ಫಿರಂಗಿಗಳ ಶಬ್ದಗಳು ಕೇಳುತ್ತಿವೆ ಎಂದು ಪೋಸ್ಟ್ ಮಾಡಿದ್ದಾರೆ. https://TWITTER.com/OmarAbdullah/status/1920854657934512613 https://twitter.com/OmarAbdullah/status/1920856920715341979 ಇದೀಗ ಬಂದ ಮಾಹಿತಿಯಂತೆ ಜಮ್ಮುವಿನ ಮೇಲೆ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿ ನಡೆಸಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಮ್ಮು ನಗರದಾದ್ಯಂತ ಬ್ಲ್ಯಾಕ್ ಔಟ್ ಮಾಡಿರುವುದಾಗಿ ತಿಳಿದು ಬಂದಿದೆ.

Read More