Author: kannadanewsnow09

ಬೆಂಗಳೂರು: ಪುತ್ರ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಕೆ ಆರ್ ಪೇಟೆ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಹೆಚ್.ಡಿ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್, ವಿಚಾರಣೆಯನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಿತು. ಇಂದು ಹೆಚ್ ಡಿ ರೇವಣ್ಣ ವಿರುದ್ಧ ಕೆ.ಆರ್ ನಗರ ಠಾಣೆಯಲ್ಲಿ ದಾಖಲಾಗಿದ್ದಂತ ಜಾಮೀನು ರಹಿತ ಸೆಕ್ಷನ್ ಕೇಸಿನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಯಿತು. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ನಡೆದಂತ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ಹೆಚ್.ಡಿ ರೇವಣ್ಣ ಪರವಾಗಿ ಹಿರಿಯ ವಕೀಲರು 364ಎ, 364 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂಬುದಾಗಿ ವಾದಿಸಿದರು. ಅಲ್ಲದೇ ಕೆ ಆರ್ ಪೇಟೆ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಹಿಳೆ ಸಲ್ಲಿಸಿದ್ದಂತ…

Read More

ರಾಯಚೂರು: ಪದೇ ಪದೇ ಪ್ರಧಾನಿ ನರೇಂದ್ರ ಮೋದಿಯವರನ್ನು, ಬಿಜೆಪಿಯನ್ನು ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಏಕೆ ಎಳೆದು ತರುತ್ತೀರಿ? ಪ್ರಧಾನಿ ಮೋದಿಗೂ ಈ ಪ್ರಕರಣಕ್ಕೂ ಏನು ಸಂಬಂಧ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ರಾಯಚೂರಿನ ಸಿಂಧನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಪ್ರಜ್ವಲ್ ರೇವಣ್ಣ ಅಶ್ಲೀಲ ಪ್ರಕರಣದ ಬಗ್ಗೆ ಕೇಂದ್ರ ಗೃಹ ಸಚಿವರು ಸಲಹೆ ಕೊಟ್ಟಿದ್ದಾರೆ. ನೋಟಿಸ್ ಬಳಿಕ ಆ ವ್ಯಕ್ತಿ ಒಂದು ವಾರ ಟೈಂ ಕೇಳಿದ್ದಾರೆ. ಇಲ್ಲಿಗೆ ಆ ವ್ಯಕ್ತಿ ಬರಲ್ಲ ಅಂದಿಲ್ಲವಲ್ಲ ಎಂದರು. ಮಾಜಿ ಸಚಿವ ಹೆಚ್.ಡಿ ರೇವಣ್ಣ ಕೂಡ ಸಮಯ ಕೇಳಿದ್ದಾರೆ. ಮೊದಲ ಸಮನ್ಸ್ ಹಂತದಲ್ಲೇ ಈ ರೀತಿಯಾಗಿ ಮಾಡುತ್ತಿದ್ದೀರಿ. ನೀವು ಹಾಗೂ ನಿಮ್ಮ ಡಿಸಿಎಂ ಹೇಳಿಕೆ ಕೊಡುವ ಮೂಲಕ ಪ್ರಕರಣದ ತನಿಖೆ ಸರಿಯಾಗಿ ನಡೆಸಲು ಹೇಳುತ್ತಿದ್ದಿರೋ ಅಥವಾ ಪ್ರಚಾರಕ್ಕೆ ಈ ಪ್ರಕರಣವನ್ನು ಬಳಕೆ ಮಾಡ್ತಿದ್ದಿರೋ ಎಂದು ಕಿಡಿಕಾರಿದರು. ನಾನು ದಾಖಲೆ ರೆಡಿ ಮಾಡಿದ್ದೇನೆ. ಯಾವಾಗ ಬೇಕಾದ್ರೂ ಬಿಡುಗಡೆ ಮಾಡುತ್ತೇನೆ…

Read More

ಉತ್ತರ ಕನ್ನಡ: ಬಿಜೆಪಿ ಸರ್ಕಾರ ಸತ್ತು ಹೋಗಿದೆ. ಜನರ, ಬಡವರ ಪರವಾಗಿ ಇಲ್ಲವಾಗಿದೆ. ಕೋರೊನಾ ಸಮಯದಲ್ಲಿ ಆಕ್ಸಿಜನ್ ಇಲ್ಲದೆ ಜನ ಸತ್ತರು, ಚಿಕಿತ್ಸೆ ಸರಿಯಾಗಿ ಸಿಗದೆ ರಾಜ್ಯದಲ್ಲಿ 4 ಲಕ್ಷ ಜನ ಸತ್ತಿದ್ದಾರೆ. ಈಗ ವ್ಯಾಕ್ಸಿನ್ ತೆಗೆದುಕೊಂಡವರು ಸಾಯುವ ಕಾಲ ಬಂದಿದೆ. ಬಿಜೆಪಿಯವರು ಈ ವ್ಯಾಕ್ಸಿನ್ ಕೊಟ್ಟ ಕಂಪೆನಿಯಿಂದಲೂ ಲಂಚ ಹೊಡೆದಿದ್ದಾರೆ ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಉತ್ತರ ಕನ್ನಡದ ಮುಂಡಗೋಡದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದಂತ ಅವರು, ಕೊರೋನಾ ಲಸಿಕೆ ಹಾಕಿಸಿಕೊಂಡವರಿಗೆ ಮೋದಿ ಫೋಟೊ ಇರುವ ಪ್ರಮಾಣ ಪತ್ರ ಕೊಟ್ಟರು. ಸತ್ತವರ ಸರ್ಟಿಫಿಕೆಟ್ಗೆ ಏಕೆ ಮೋದಿ ಫೋಟೋ ಹಾಕಿಲಿಲ್ಲ. ಜನಕ್ಕೆ ಏನೂ ಸಹಾಯ ಮಾಡದೆ ದೀಪ ಹಚ್ಚಿ, ಚಪ್ಪಾಳೆ ಹೊಡೆಯಿರಿ ಮಂಗಮಾಯ ಆಗುತ್ತೆ ಎಂದರು, ಏನೂ ಆಗಲಿಲ್ಲ. ಕೋರೋನಾ ಸಮಯದಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಕೊಟ್ಟಿದ್ದೇನೆ ಎಂದು ಹೇಳಿತು. ಆ ಹಣ ಯಾರಿಗಾದರೂ ಬಂದಿದೆಯೇ? ಎಂದು ಪ್ರಶ್ನಿಸಿದರು. ನಮ್ಮ ಕರಾವಳಿಯ ಕಾರ್ಪೋರೇಷನ್ ಬ್ಯಾಂಕ್,…

Read More

ನವದೆಹಲಿ: ಬಿರು ಬೇಸಿಗೆಯಲ್ಲಿ ವಾಹನಗಳಿಗೆ ಪುಲ್ ಟ್ಯಾಂಕ್ ಪೆಟ್ರೋಲ್, ಡೀಸೆಲ್ ಮಾಡಿಸಬೇಡಿ. ಮಾಡಿಸಿದ್ರೇ ಬ್ಲಾಸ್ಟ್ ಆಗಿ ಹೊತ್ತಿಕೊಳ್ಳೋ ಸಾಧ್ಯತೆ ಇದೆ ಎಂಬುದಾಗಿ ವೈರಲ್ ಸುದ್ದಿಯೊಂದು ಹರಿದಾಡುತ್ತಿತ್ತು. ಆದ್ರೇ ಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಪುಲ್ ಟ್ಯಾಂಕ್ ಮಾಡಿಸಿದ್ರೆ ಸಮಸ್ಯೆ ಆಗಲ್ಲ. ಯಾವುದೇ ವಾಹನ ಸವಾರರು ಆತಂಕಕ್ಕೆ ಒಳಗಾಗ ಬಾರದು ಅಂತ ಇಂಡಿಯನ್ ಆಯಿಲ್ ಸ್ಪಷ್ಟ ಪಡಿಸಿದೆ. ಈ ಬಗ್ಗೆ ಬಿಸಿಲಿನ ವಾತಾವರಣದಲ್ಲಿ ತಮ್ಮ ವಾಹನಗಳ ಇಂಧನ ಟ್ಯಾಂಕ್ ಗಳನ್ನು ಗರಿಷ್ಠ ಸಾಮರ್ಥ್ಯಕ್ಕೆ ತುಂಬಿಸದಂತೆ ನಾಗರಿಕರಿಗೆ ಎಚ್ಚರಿಕೆ ನೀಡುವ ಕಂಪನಿಯ ‘ಸಲಹೆ’ ಎಂದು ವ್ಯಾಪಕವಾಗಿ ಪ್ರಸಾರವಾಗುತ್ತಿರುವ ವಾಟ್ಸಾಪ್ ಸಂದೇಶವು ನಕಲಿ ಎಂದು ಇಂಡಿಯನ್ ಆಯಿಲ್ ಸ್ಪಷ್ಟನೆ ನೀಡಿದೆ. ಆಟೋಮೊಬೈಲ್ ತಯಾರಕರು ಕಾರ್ಯಕ್ಷಮತೆಯ ಅವಶ್ಯಕತೆಗಳು, ಹಕ್ಕುಗಳು ಮತ್ತು ಪರಿಸರ ಪರಿಸ್ಥಿತಿಗಳ ಎಲ್ಲಾ ಅಂಶಗಳನ್ನು ಅಂತರ್ನಿರ್ಮಿತ ಸುರಕ್ಷತಾ ಅಂಶಗಳೊಂದಿಗೆ ಪರಿಗಣಿಸಿ ವಾಹನಗಳನ್ನು ವಿನ್ಯಾಸಗೊಳಿಸುತ್ತಾರೆ. ಪೆಟ್ರೋಲ್ / ಡೀಸೆಲ್ ವಾಹನಗಳಿಗೆ ಇಂಧನ ಟ್ಯಾಂಕ್ ನಲ್ಲಿ ನಿರ್ದಿಷ್ಟಪಡಿಸಿದ ಗರಿಷ್ಠ ಪರಿಮಾಣವು ಇದಕ್ಕೆ ಹೊರತಾಗಿಲ್ಲ. ಆದ್ದರಿಂದ, ಚಳಿಗಾಲ ಅಥವಾ ಬೇಸಿಗೆಯನ್ನು ಲೆಕ್ಕಿಸದೆ,…

Read More

ಬೆಂಗಳೂರು: ದೇಶವನ್ನು 10 ವರ್ಷಗಳ ಕಾಲ ಸರ್ವತೋಮುಖ ಅಭಿವೃದ್ಧಿಯತ್ತ ಒಯ್ದ ನರೇಂದ್ರ ಮೋದಿಯವರು ಸಮರ್ಥ ನಾಯಕ. ದೇಶ, ಬಡವರಿಗೆ ಒಳ್ಳೆಯದು ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಿಳಿಸಿದರು. ಬೀದರ್‍ನಲ್ಲಿ ರೆಡ್ಡಿ ಸಮುದಾಯದ ಸಾರ್ವಜನಿಕ ಸಭೆಯಲ್ಲಿ ಇಂದು ಮಾತನಾಡಿದ ಅವರು, ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿಗೆ ರಾಹುಲ್ ಗಾಂಧಿಯವರಂತೆ ಸಮಸ್ಯೆಗಳ ಅರಿವಿಲ್ಲ ಎಂದು ಟೀಕಿಸಿದರು. ಭಗವಂತ ಖೂಬಾ ಅವರು ಜನರ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿದ್ದಾರೆ. ಜನಮೆಚ್ಚುಗೆ ಗಳಿಸಿದ್ದಾರೆ ಎಂದು ವಿಶ್ಲೇಷಿಸಿದರು. ರೈತ ಯೋಜನೆಗಳು, ಅಭಿವೃದ್ಧಿಗೆ ಸಂಸತ್ತಿನಲ್ಲಿ ಮನವಿ ಮಾಡಲು ಬಿಜೆಪಿಯ ಸಮರ್ಥ ಅಭ್ಯರ್ಥಿ ಆಯ್ಕೆ ಮಾಡಿ ಎಂದು ವಿನಂತಿಸಿದರು. ಫಲಿತಾಂಶ ಬಂದ ಬಳಿಕ ರಾಹುಲ್ ಗಾಂಧಿಯವರು ವಿದೇಶಕ್ಕೆ ಓಡಿ ಹೋಗಲಿದ್ದಾರೆ. ಯಾಕೆಂದರೆ ಫಲಿತಾಂಶ ಈಗಾಗಲೇ ಗೊತ್ತಾಗಿದೆ ಎಂದು ತಿಳಿಸಿದರು. ದೇಶದ ಭವಿಷ್ಯ, ಸುರಕ್ಷತೆ, ಅಭಿವೃದ್ಧಿಗೆ ಮೋದಿಜೀ, ಬಿಜೆಪಿ ಆಯ್ಕೆ ಅನಿವಾರ್ಯ. ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಒಳ್ಳೆಯದು ಮಾಡಿಲ್ಲ. 50 ವರ್ಷಕ್ಕೂ ಹೆಚ್ಚು ಕಾಲ ಆಳ್ವಿಕೆ ನಡೆಸಿದರೂ ದೇಶಕ್ಕೆ…

Read More

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಈಗಾಗಲೇ ಜಾಮೀನಿಗಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ನಿನ್ನೆಯಷ್ಟೇ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಇಂದಿಗೆ ಕೋರ್ಟ್ ಮುಂದೂಡಿಕೆ ಮಾಡಿತ್ತು. ಈಗ ಬಂಧನದ ಭೀತಿಯನ್ನು ಎದುರಿಸುತ್ತಿರುವಂತ ಅವರು, ಮತ್ತೆ ಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಸಂಬಂಧ ಇಂದು ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿತ್ತು. ಈ ದೂರಿನ ಸಂಬಂಧ ಪ್ರಜ್ವಲ್ ರೇವಣ್ಣ ಹಾಗೂ ಹೆಚ್.ಡಿ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಂದು ಎಸ್ಐಟಿ ವಿಚಾರಣೆಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಹಾಜರಾಗಬೇಕಿತ್ತು. ಆದ್ರೇ ಕೊನೆಯ ಗಳಿಗೆಯಲ್ಲಿ ಮತ್ತೊಂದು ದೂರು, ಆ ಬಳಿಕ ಎಫ್ಐಆರ್ ದಾಖಲಾಗುತ್ತಿದ್ದಂತೆ, ವಿಚಾರಣೆಯಿಂದ ಹಿಂದೆ ಸರಿದು, ಗೈರಾಗಿದ್ದಾರೆ. ನೇರವಾಗಿ ಕೋರ್ಟ್ ಗೆ ಹಾಜರಾಗಿ ನಿರೀಕ್ಷಣಾ ಜಾಮೀನು ನಿರೀಕ್ಷೆಯಲ್ಲಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು, ಅದು ಸಿಗೋದು ಡೌಟ್ ಎಂಬುದಾಗಿ ಅರಿತು, ಇಂದು ಮತ್ತೆ ಬೆಂಗಳೂರಿನ…

Read More

ಬೆಂಗಳೂರು: ಬಿರು ಬಿಸಿನಿಂದ ಕಂಗೆಟ್ಟಿದ್ದಂತ ಸಿಲಿಕಾನ್ ಸಿಟಿಯಲ್ಲಿ ಇದೀಗ ವರುಣಾಗಮನವಾಗಿದೆ. ಗುಡುಗು ಸಹಿತ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತೆ ಆಗಿದೆ. ಬೆಂಗಳೂರಿನಲ್ಲಿ ನಿನ್ನೆಯಷ್ಟೇ ಕೆಲ ಪ್ರದೇಶಗಳಲ್ಲಿ ಮಳೆಯಾಗಿತ್ತು. ಇಂದು ಮತ್ತೆ ಮಳೆ ಆರಂಭಗೊಂಡಿದೆ. ಬೆಂಗಳೂರಿನ ಕೇಂದ್ರ ಸ್ಥಾನವಾಗಿರುವಂತ ಮೆಜೆಸ್ಟಿಕ್ ಸುತ್ತಾಮುತ್ತ ಗುಡುಗು ಸಹಿತ ಮಳೆ ಸುರಿಯುತ್ತಿದೆ. ರೇಸ್ ಕೋರ್ಸ್, ಶಿವಾನಂದ ಸರ್ಕಲ್, ಚಾಲುಕ್ಯ ಸರ್ಕಲ್, ಮೈಸೂರು ಬ್ಯಾಂಕ್ ವೃತ್ತ, ಮಾರ್ಕೆಟ್, ಹೊಸಕೇಟೆ, ಕೆ ಆರ್ ಪುರಂ, ವೈಟ್ ಫೀಲ್ಡ್ ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದೆ. ದಿಢೀರ್ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ರಾಜಧಾನಿ ಜನತೆಯನ್ನು ತಂಪು ಮಾಡಿದ್ದರೇ, ವಾಹನ ಸವಾರರು ರಸ್ತೆಯಲ್ಲಿ ನೀರು ಹರಿದು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಕಳೆದ ಕೆಲ ಗಂಟೆಯಿಂದ ಮಳೆಯಾಗುತ್ತಿದ್ದು, ಗುಡುಗು ಸಹಿತ ಧಾರಾಕಾರ ಮಳೆ ಬೆಂಗಳೂರಿನ ವಿವಿಧೆಡೆಯಾಗುತ್ತಿದೆ. ಈ ಮೂಲಕ ಬಿಸಿನಿಂದ ತತ್ತರಿಸಿದ್ದಂತ ಬೆಂಗಳೂರು ಜನತೆಗೆ ವರುಣ ತಂಪೆರೆದಿದ್ದಾನೆ. https://kannadanewsnow.com/kannada/union-home-minister-amit-shah-demands-cbi-probe-into-neha-hiremath-murder-case/ https://kannadanewsnow.com/kannada/breaking-up-lok-sabha-elections-rahul-gandhi-files-nomination-from-rae-bareli/

Read More

ದೇವರು ನಮಗೆ ನೀಡಿದ ಪ್ರತಿ ದಿನವೂ ಒಳ್ಳೆಯ ದಿನ ಎಂದು ಹೇಳಲಾಗುತ್ತದೆ. ಕೆಲವು ದಿನಗಳು ನಮಗೆ ಹೆಚ್ಚು ಹೆಚ್ಚು ಅದೃಷ್ಟವನ್ನು ತರುತ್ತವೆ. ಆ ರೀತಿಯಲ್ಲಿ, 5-5-2024 ಭಾನುವಾರವು ಕುಬೇರನಿಗೆ ಸೇರಿದ ಐದನೇ ಸಂಖ್ಯೆಯನ್ನು ಆಧರಿಸಿದೆ. ನಮ್ಮ ಎಲ್ಲಾ ಆರ್ಥಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು, ಆ ದಿನ ಮಾಡಬೇಕಾದ ಸೂಕ್ಷ್ಮ ಆಧ್ಯಾತ್ಮಿಕ ಪರಿಹಾರವನ್ನು ನಾವು ಈ ಪೋಸ್ಟ್ ಮೂಲಕ ತಿಳಿಯಲಿದ್ದೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ…

Read More

ಮುಂಡಗೋಡು: ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾರಾದರೂ ಅಂತರರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದರು. ರೇವಣ್ಣ ದುಬೈಗೆ ತೆರಳಿರುವ ಬಗ್ಗೆ ಮಾತನಾಡಿದ ಅವರು ಯಾವ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂದರು. ಪ್ರಜ್ವಲ್ ರೇವಣ್ಣ ಅವರ ಮೇಲೆ ಬಲಾತ್ಕಾರ ಮಾಡಿರುವ ಆರೋಪವಿದೆ ಪ್ರಜ್ವಲ್ ರೇವಣ್ಣ ಅವರ ಮೇಲೆ ಬಲಾತ್ಕಾರ ಮತ್ತು ಲೈಂಗಿಕ ಶೋಷಣೆ ಮಾಡಿರುವ ಆರೋಪವಿದೆ. ಪ್ರಜ್ವಲ್ ರೇವಣ್ಣ ಅವರ ಬಗ್ಗೆ ತಿಳಿದೂ ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದರು. ಸಂತ್ರಸ್ತ ಮಹಿಳೆಗೆ ರಕ್ಷಣೆ ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ರಕ್ಷಣೆ ನೀಡಲು…

Read More

ಬೆಂಗಳೂರು: ನಿನ್ನೆಯಷ್ಟೇ ಬೆಂಗಳೂರಲ್ಲಿ ಮಳೆಯಾಗಿತ್ತು. ಬಿಸಿಲಿನಿಂದ ಕಂಗೆಟ್ಟಿದ್ದಂತ ಜನತೆಗೆ ತಂಪೆರೆದಿತ್ತು. ಈಗ ಮುಂದಿನ ಮೂರು ಗಂಟೆಯಲ್ಲಿ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ರಾಜ್ಯ ಹವಾಮಾನ ಇಲಾಖೆಯು ಬೆಂಗಳೂರಲ್ಲಿ ಮುಂದಿನ 3 ಗಂಟೆಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರದಲ್ಲಿ ಮಳೆ ಸಾಧ್ಯತೆಯಿದೆ ಎಂದು ತಿಳಿಸಿದೆ. ಇನ್ನು, ಒಂದು ಅಥವಾ ಎರಡು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ತಾತ್ಕಾಲಿಕ ವಿದ್ಯುತ್ ವ್ಯತ್ಯಯ, ಸಣ್ಣಪುಟ್ಟ ಸಂಚಾರ ದಟ್ಟನೆ. ದುರ್ಬಲ ಮರದ ಕೊಂಬೆಗಳು ಕಿತ್ತು ಬರುವ ಎಚ್ಚರಿಕೆಯನ್ನು ನೀಡಲಾಗಿದೆ. https://kannadanewsnow.com/kannada/union-home-minister-amit-shah-demands-cbi-probe-into-neha-hiremath-murder-case/ https://kannadanewsnow.com/kannada/congress-is-not-a-party-that-takes-away-the-taali-but-gives-thali-bhagya-h-k-patil/

Read More