Author: kannadanewsnow09

ಧಾರವಾಡ : 110 ಕೆವ್ಹಿ. ಲಕ್ಕಮ್ಮನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ದಿನಾಂಕ:05.01.2025 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 3ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವ್ಹಿಮಾರ್ಗಗಳಲ್ಲಿ ದಿನಾಂಕ:05.01.2025ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಟೋಲ-ನಾಕಾ, ಮಾಳಮಡ್ಡಿ, ನಗರಕರ ಕಾಲೋನಿ, ಬಾಗಲಕೋಟ ಪೆಟ್ರೋಲ ಪಂಪ್, ಲಕ್ಷ್ಮೀನಗರ, ಗಾಂಧಿ ನಗರ, ಕಲಘಟಗಿ ರಸ್ತೆ, ರಾಜೀವಗಾಂಧಿ ನಗರ, ಸರಸ್ವತಿನಗರ, ತೇಜಸ್ವಿನಗರ, ಸಂಗೊಳ್ಳಿ ರಾಯಣ್ಣ ನಗರ, ಗಿರಿನಗರ, ಕಕ್ಕಯ್ಯಾ ನಗರ, ಗುರುದೇವ ನಗರ, ವಿದ್ಯಾಗಿರಿ, ರಜತಗಿರಿ, ಸಪ್ತಗಿರಿ,ವಾಯ್. ಎಸ್.ಕಾಲೋನಿ, ಲಕ್ಕಮ್ಮನಹಳ್ಳಿ, ಗೋಪಾಲಪುರ, ದಾನೇಶ್ವರಿ ನಗರ, ಸನ್ಮತಿ ಮಾರ್ಗ, ಸ್ಟೇಶನ್ ರೋಡ್, ನುಗ್ಗಿಕೇರಿ, ವಿವೇಕಾನಂದ ನಗರ, ಕೆ.ಎಮ್.ಪಿ, ವೆಂಕಟೇಶ್ವರ, ಸೋಮೇಶ್ವರ,ಗಾರ್ಡನ ಪಾಲಿಮರ, ಜೆ.ಎಸ್.ಎಸ್, ಮಾದರಮಡ್ಡಿ, ನವಲೂರ, ಲಕ್ಕಮ್ಮನಹಳ್ಳಿ ಕೈಗಾರಿಕಾ ಪ್ರದೇಶ,ರಾಯಾಪುರ ಕೈಗಾರಿಕಾ ಪ್ರದೇಶ, ಜನ್ನತ ನಗರ, ಲಕ್ಷ್ಮೀಸಿಂಗನಕೇರಿ, ಪಿ.ಬಿ ರಸ್ತೆ, ಮೂಗಬಸವೇಶ್ವರ ಕರೆಂಟ್…

Read More

ತುಮಕೂರು: ಜಿಲ್ಲೆಯಲ್ಲಿ ಟಾಟಾ ಏಸ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಶಾಲಾ ಮಕ್ಕಳಿಗೆ ಗಾಯವಾಗಿರುವಂತ ಘಟನೆ ನಡೆದಿದೆ. 15ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಗೌಡನಕುಂಟೆ ಬಳಿಯಲ್ಲಿ ಟಾಟಾ ಏಸ್ ವಾಹನ ಪಲ್ಟಿಯಾದ ಪರಿಣಾಮ 15ಕ್ಕೂ ಹೆಚ್ಚು ಶಾಲಾ ಮಕ್ಕಳು ಗಾಯಗೊಂಡಿರುವಂತ ಘಟನೆ ನಡೆದಿದೆ. ಕೊರಟಗೆರೆ ತಾಲ್ಲೂಕು ಚಿಂಪುಗಾನಹಳ್ಳಿ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ಎಂಬುವರು 35 ಮಕ್ಕಳನ್ನು ತುಂಬಿಕೊಂಡು ಟಾಟಾ ಏಸ್ ನಲ್ಲಿ ಪ್ರವಾಸಕ್ಕೆ ತಾವೇ ಚಾಲನೆ ಮಾಡಿಕೊಂಡು ಕರೆದೊಯ್ಯುತ್ತಿದ್ದರು. ಈ ವೇಳೆ ಗೌಡನಕುಂಟೆಯ ಬಳಿಯಲ್ಲಿ ವಾಹನ ಪಲ್ಟಿಯಾಗಿದೆ. ಈ ಘಟನೆಯಲ್ಲಿ 15ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದು, ಕೊರಟಗೆರೆ, ತುಮಕೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/rasaleela-video-viral-case-madhugiri-dysp-suspended-in-tumakuru/ https://kannadanewsnow.com/kannada/students-need-information-about-celestial-bodies-priyank-kharge/

Read More

ತುಮಕೂರು: ಜಮೀನು ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ಮಹಿಳೆ ಒಬ್ಬಳು ದೂರು ನೀಡಲು ಠಾಣೆಯ ಮೆಟ್ಟಿಲು ಏರಿದ್ದಾಳೆ. ಆದರೆ ಠಾಣೆಯಲ್ಲಿದ ಡಿವೈಎಸ್ಪಿ ಅಧಿಕಾರಿ ಒಬ್ಬ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕ್ಷೇತ್ರ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿತ್ತು. ಅಲ್ಲದೇ ಡಿವೈಎಸ್ಪಿ ರಾಸಲೀಲೆ ವೀಡಿಯೋ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ತುಮಕೂರಿನ ಮಧುಗಿರಿ ಡಿವೈಎಸ್ಪಿಯನ್ನು ಅಮಾನತುಗೊಳಿಸಿ ಐಜಿ ಮತ್ತು ಐಜಿಪಿ ಆದೇಶಿಸಿದ್ದಾರೆ. ಪಾವಗಡದ ಮಹಿಳೆಯೊಬ್ಬರು ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಮಹಿಳೆ ಪಾವಗಡದಿಂದ ಡಿವೈಎಸ್ಪಿ ಕಚೇರಿಗೆ ಬಂದಿದ್ದರು. ಮಹಿಳೆಯನ್ನು ಏಕಾಂತ ಕೊಠಡಿಗೆ ಕರೆದುಕೊಂಡು ಹೋದ ಡಿವೈಎಸ್​ಪಿ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿತ್ತು. ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ರಾಮಚಂದ್ರಪ್ಪ ತಲೆಮರೆಸಿಕೊಂಡಿದ್ದಾನೆ. ಗೃಹ ಸಚಿವ ಜಿ. ಪರಮೇಶ್ವರ್‌ ಅವರ ಜಿಲ್ಲೆಯಲ್ಲಿಯೇ ಇಂತಹ ಘಟನೆ ನಡೆದಿದ್ದು, ಇದು ಇಡೀ ಪೊಲೀಸ್‌ ಇಲಾಖೆಯ ತಲೆ ತಗ್ಗಿಸುವಂತಹ ಘಟನೆಯಾಗಿತ್ತು. ಡಿವೈಎಸ್ಪಿ…

Read More

ಬೆಂಗಳೂರು: ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ (ಇಂಡಿಯನ್‌ ಇನ್ಸಿಟ್ಯೂಟ್‌ ಆಫ್‌ ಆಸ್ತ್ರೋ ಫಿಜಿಕ್ಸ್-ಐಐಎ) ರಾಜ್ಯಾದ್ಯಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ನಿರ್ವಹಿಸುತ್ತಿರುವ ಗ್ರಾಮೀಣ ಗ್ರಂಥಾಲಯಗಳಾದ ಅರಿವು ಕೇಂದ್ರಗಳ ಮೂಲಕ ಖಗೋಳವನ್ನು ಉತ್ತೇಜಿಸಲು ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ರಾಜ್ಯದಲ್ಲಿ ಸುಮಾರು 6000 ಅರಿವು ಕೇಂದ್ರಗಳನ್ನು ನಿರ್ವಹಿಸುತ್ತಿದೆ, ಇವು ಪ್ರಾಥಮಿಕವಾಗಿ ಗ್ರಾಮೀಣ ಪ್ರದೇಶಗಳಲ್ಲಿದ್ದು ಇವುಗಳನ್ನು ಗ್ರಂಥಾಲಯ ಮೇಲ್ವಿಚಾರಕರು ನಿರ್ವಹಿಸುತ್ತಿದ್ದಾರೆ. ಖಗೋಳ ಭೌತಶಾಸ್ತ್ರ ಸಂಸ್ಥೆಯೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯಂತೆ ಖಗೋಳದಲ್ಲಿ ಅರಿವು ಮತ್ತು ಆಸಕ್ತಿಯನ್ನು ಉತ್ತೇಜಿಸಲು ಗ್ರಾಮೀಣಾಭಿವೃದ್ಧಿ ಇಲಾಖೆಯೊಂದಿಗೆ ಸಂಸ್ಥೆ ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಿದೆ ಹಾಗೂ ಅರಿವು ಕೇಂದ್ರಗಳು ಸೇವೆ ಸಲ್ಲಿಸುವ ಪ್ರದೇಶಗಳ ಸಮುದಾಯಗಳಲ್ಲಿ ವಿಜ್ಞಾನ ಸಾಕ್ಷರತೆ ಮತ್ತು ವೈಜ್ಞಾನಿಕ ಮನೋಭಾವವನ್ನು ಉತ್ತೇಜಿಸುತ್ತದೆ. ಮೇಲ್ವಿಚಾರಕರ ತರಬೇತಿ ಮತ್ತು ಮಾರ್ಗದರ್ಶನ, ಕನ್ನಡದಲ್ಲಿ ಖಗೋಳಸಂಪನ್ಮೂಲಗಳ ರಚನೆ ಮತ್ತು ಆಕಾಶಕಾಯಗಳ ಘಟನೆಗಳ ಸುತ್ತ ಸಾರ್ವಜನಿಕ…

Read More

ಹೈದರಾಬಾದ್: ಟಾಲಿವುಡ್ ನಟ ಅಲ್ಲು ಅರ್ಜುನ್ ಅವರಿಗೆ ಸಂಧ್ಯಾ ಥಿಯೇಟರ್ ನಲ್ಲಿ ಪುಷ್ಪಾ-2 ಚಿತ್ರದ ಪ್ರೀಮಿಯರ್ ಶೋ ಪ್ರದರ್ಶನದ ವೇಳೆಯಲ್ಲಿ ಉಂಟಾಗಿದ್ದಂತ ಕಾಲ್ತುಳಿತ ಕೇಸಲ್ಲಿ ಬಿಗ್ ರಿಲೀಫ್ ನೀಡಲಾಗಿದೆ. ಕಾಲ್ತುಳಿತ ಕೇಸಲ್ಲಿ ಕೋರ್ಟ್ ನಟ ಅಲ್ಲು ಅರ್ಜುನ್ ಗೆ ರೆಗ್ಯೂಲರ್ ಜಾಮೀನು ಮಂಜೂರು ಮಾಡಲಾಗಿದೆ. ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರದಲ್ಲಿ ಕಾಲ್ತುಳಿತ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ಗೆ ಜಾಮೀನು ನೀಡಲಾಗಿದೆ. ಡಿಸೆಂಬರ್ 4 ರಂದು ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಪುಷ್ಪ 2 ಪ್ರದರ್ಶನದ ಸಮಯದಲ್ಲಿ ಈ ಘಟನೆ ನಡೆದಿದೆ. ನಟನ ಜಾಮೀನು ಅರ್ಜಿಯ ಮೇಲಿನ ಆದೇಶವನ್ನು ನ್ಯಾಯಾಲಯವು ಸೋಮವಾರ ಕಾಯ್ದಿರಿಸಿತ್ತು. ಮಹತ್ವದ ಬೆಳವಣಿಗೆಯೊಂದರಲ್ಲಿ, ಜಾಮೀನು ಷರತ್ತುಗಳ ಭಾಗವಾಗಿ 50,000 ರೂ.ಗಳ ಬಾಂಡ್ ಸಲ್ಲಿಸುವಂತೆ ನ್ಯಾಯಾಲಯವು ಅಲ್ಲು ಅರ್ಜುನ್ಗೆ ಸೂಚಿಸಿದೆ. ಸಂಧ್ಯಾ ಚಿತ್ರಮಂದಿರದಲ್ಲಿ ನಡೆದ ದುರಂತ ಘಟನೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಅಲ್ಲಿ 35 ವರ್ಷದ ಮಹಿಳೆ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡರು ಮತ್ತು ಅವರ…

Read More

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡಿರುವ ಬಸ್‌ ಟಿಕೆಟ್‌ ದರ ಏರಿಕೆಯನ್ನು ಖಂಡಿಸಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಮೆಜೆಸ್ಟಿಕ್‌ನಲ್ಲಿ ವಿಭಿನ್ನವಾಗಿ ಪ್ರತಿಭಟಿಸಿದರು. ಬಸ್‌ ಪ್ರಯಾಣಿಕರ ಕೈಗೆ ಹೂ ನೀಡಿದ ಅವರು, ಸಿಎಂ ಸಿದ್ದರಾಮಯ್ಯನವರ ಪರವಾಗಿ ಕ್ಷಮೆ ಯಾಚಿಸಿದರು. ಬಸ್‌ನಲ್ಲಿ ಕುಳಿತಿದ್ದ ಪ್ರಯಾಣಿಕರ ಬಳಿ ಹೋದ ಆರ್‌.ಅಶೋಕ ಹಾಗೂ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಕಾಂಗ್ರೆಸ್‌ ಸರ್ಕಾರ ಬೆಲೆ ಏರಿಕೆ ಮಾಡುವುದಿಲ್ಲವೆಂದು ನೀವು ಮತ ನೀಡಿದ್ದೀರಿ. ಆದರೆ ಮಾತಿಗೆ ತಪ್ಪಿದ ಸರ್ಕಾರ ಹೊಸ ವರ್ಷದಂದೇ ಟಿಕೆಟ್‌ ದರ ಏರಿಕೆ ಮಾಡಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯನವರ ಪರವಾಗಿ ನಾನು ಕ್ಷಮೆ ಕೇಳುತ್ತಿದ್ದೇನೆ” ಎಂದು ಪ್ರಯಾಣಿಕರಿಗೆ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮ ಕಾಲಿಗೆ ಬೀಳುತ್ತೇವೆ, ಕೈ ಮುಗಿಯುತ್ತೇವೆ ಕ್ಷಮಿಸಿ ಬಿಡಿ ಎಂಬುದು ಸಿಎಂ ಸಿದ್ದರಾಮಯ್ಯನವರ ಹೊಸ ಸ್ಲೋಗನ್. ಟಿಕೆಟ್ ದರ 200-300 ರೂಪಾಯಿ ಜಾಸ್ತಿಯಾಗಿದೆ. ಬಸ್‌ಗಳ ಟಿಕೆಟ್ ದರ ಮಾತ್ರ ಅಲ್ಲ, ಮುಂದೆ ಹಾಲಿನ ದರವನ್ನೂ ಏರಿಕೆ ಮಾಡುತ್ತೇವೆ. ನೀರಿನ ದರವನ್ನು ಏರಿಕೆ…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಹೆಚ್ಚು ಸಾಗುವಾನಿ ಮರಗಳಿರುವಂತ ಅರಣ್ಯ ಪ್ರದೇಶವೆಂದರೇ ಸಾಗರ ತಾಲ್ಲೂಕಿನ ಉಳ್ಳೂರು ವ್ಯಾಪ್ತಿಯಲ್ಲಿ ಆಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವಂತ ಮರಗಳ್ಳರು, ಮರಗಳ ಮಾರಣಹೋಮವನ್ನೇ ನಡೆಸಿ, ಕಳ್ಳಸಾಗಾಣಿಕೆ ಮಾಡುತ್ತಿರುವುದಾಗಿ ಹೇಳಲಾಗುತ್ತಿದೆ. ದಿನೇ ದಿನೇ ಉಳ್ಳೂರು ವ್ಯಾಪ್ತಿಯಲ್ಲಿ ಸಾಗುವಾನಿ ಮರಗಳ ಕಳ್ಳಸಾಗಾಟ ಹೆಚ್ಚಾಗುತ್ತಿದ್ದರೂ, ಉಪ ವಲಯ ಅರಣ್ಯಾಧಿಕಾರಿ ಮಾತ್ರ ಕಣ್ಮುಚ್ಚಿ ಕುಳಿತಿರೋ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರು ವ್ಯಾಪ್ತಿಯ ಅರಣ್ಯದಲ್ಲಿ ಸಾಗುವಾನಿ ಮರಗಳು ತಿಂಗಳಿಗೆ ಒಂದೆರಡು ಮರಗಳೇ ಕಣ್ಮರೆಯಾಗುತ್ತಿವೆ. ಮರಗಳ್ಳರು ಅಕ್ರಮವಾಗಿ ಮರಗಳನ್ನು ರಾತ್ರೋ ರಾತ್ರಿ ಕದ್ದು ಸಾಗಾಟ ಮಾಡುತ್ತಿದ್ದರೂ ಉಪ ವಲಯ ಅರಣ್ಯಾಧಿಕಾರಿ ಮಾತ್ರ ತನಗೇ ಸಂಬಂಧವೇ ಇಲ್ಲದ ರೀತಿಯಲ್ಲಿ ಇದ್ದಾರೆ ಎಂಬುದಾಗಿ ಅಲ್ಲಿನ ಗ್ರಾಮಸ್ಥರ ಆರೋಪವಾಗಿದೆ. ಸಾಗುವಾನಿ ಮರಗಳ ಮಾರಣಹೋಮ, ಕಳ್ಳ ಸಾಗಾಟ ಹೇಗೆ.? ಉಳ್ಳೂರು ವ್ಯಾಪ್ತಿಯ ಅರಣ್ಯದಲ್ಲಿ ಸಾಗುವಾನಿ ಮರಗಳೇ ಹೆಚ್ಚಾಗಿರುವ ಕಾರಣ, ಕಳ್ಳರ ಮೇಲೆ ಕಣ್ಣಿಡಬೇಕಾಗಿದ್ದು ಅರಣ್ಯ ಇಲಾಖೆಯ ಕರ್ತವ್ಯ. ಫೀಲ್ಡ್ ಬಿಟ್ಟು ಸದಾ ಸಾಗರದ ಇಲಾಖೆ ಕಚೇರಿಯಲ್ಲೇ ಉಪ ವಲಯ…

Read More

ಹುಬ್ಬಳ್ಳಿ: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ರೈಲು ಸಂಖ್ಯೆ 07363/07364 ಎಸ್ಎಸ್ಎಸ್ ಹುಬ್ಬಳ್ಳಿ-ಯೋಗ ನಗರಿ ರಿಷಿಕೇಶ್-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸಲಾಗುತ್ತಿದೆ. ಈ ಬಗ್ಗೆ ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರೈಲು ಸಂಖ್ಯೆ 07363 ಎಸ್ಎಸ್ಎಸ್ ಹುಬ್ಬಳ್ಳಿ-ಯೋಗ ನಗರಿ ರಿಷಿಕೇಶ್ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ಜನವರಿ 06 ರಿಂದ ಮುಂದಿನ ಆದೇಶದ ವರೆಗೆ ಪ್ರತಿ ಸೋಮವಾರ 20:30 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಜನವರಿ 13 & 27, ಮತ್ತು ಫೆಬ್ರವರಿ 03,10 & 24, 2025 ರಂದು ಹೊರತುಪಡಿಸಿ ಬುಧವಾರ 23:30 ಗಂಟೆಗೆ ಯೋಗ ನಗರಿ ರಿಷಿಕೇಶ್ ತಲುಪಲಿದೆ ಎಂದಿದೆ. ರೈಲು ಸಂಖ್ಯೆ 07364 ಯೋಗ ನಗರಿ ರಿಷಿಕೇಶ್-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ಜನವರಿ 09 ರಿಂದ ಮುಂದಿನ ಆದೇಶದ ವರೆಗೆ ಪ್ರತಿ ಗುರುವಾರ 06:15 ಗಂಟೆಗೆ ಯೋಗ ನಗರಿ ಹೃಷಿಕೇಶದಿಂದ ಹೊರಟು ಜನವರಿ 16 & 30…

Read More

ಬೆಂಗಳೂರು: ಸಾರಿಗೆ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಈ ಬೆನ್ನಲ್ಲೇ ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎನ್ನುವಂತೆ ಮೆಟ್ರೋ ಟಿಕೆಟ್ ದರ, ನೀರಿನ ದರ ಏರಿಕೆಯ ಸುಳುವು ಹೊರ ಬಿದ್ದಿದೆ. ಬೆಂಗಳೂರಿನ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ಬಿಎಂಆರ್ ಸಿಎಲ್ ಮುಂದಾಗಿದೆ. ಈ ಸಂಬಂಧ ಜನವರಿ 2ನೇ ವಾರ ಅಥವಾ 3ನೇ ವಾರದಲ್ಲಿ ಬೋರ್ಡ್ ಮೀಟಿಂಗ್ ನಡೆಯಲಿದೆ. ಈ ಸಭೆಯಲ್ಲಿ ಮೆಟ್ರೋ ಟಿಕೆಟ್ ದರ ಏರಿಕೆ ಸಂಬಂಧ ಚರ್ಚೆ ನಡೆಸಲಾಗುತ್ತದೆ. ಈಗಾಗಲೇ ಮೆಟ್ರೋ ಟಿಕೆಟ್ ದರ ಹೆಚ್ಚಳಕ್ಕೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಬಿಎಂಆರ್ ಸಿಎಲ್ ಆಹ್ವಾನಿಸಿತ್ತು ಎನ್ನಲಾಗಿದೆ. ಈ ಆಕ್ಷೇಪಣೆಗಳ ನಡುವೆಯೂ ಶೀಘ್ರವೇ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಲಾಗುವಂತ ಸುಳಿವನ್ನು ಬಿಎಂಆರ್ ಸಿಎಲ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಕಾವೇರಿ ನೀರಿನ ದರವೂ ಪರಿಷ್ಕರಣೆ ಇನ್ನೂ ನಮ್ಮ ಮೆಟ್ರೋ ಟಿಕೆಟ್ ದರ ಅಷ್ಟೇ ಅಲ್ಲದೇ ಬೆಂಗಳೂರು ಜನತೆಗೆ ಬಿಗ್ ಶಾಕ್…

Read More

ಬೆಂಗಳೂರು: ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ನಿನ್ನೆಯಷ್ಟೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ಸುಗಳ ಪ್ರಯಾಣ ದರ ಏರಿಕೆಗೂ ಅನುಮತಿ ನೀಡಲಾಗಿದೆ. ಈ ಬೆನ್ನಲ್ಲೇ ಬೆಂಗಳೂರಲ್ಲಿ ಕಾವೇರಿ ನೀರಿನ ದರ ಪರಿಷ್ಕರಣೆ ಮುಂದಾಗಿದೆ. ಈ ಮೂಲಕ ಶೀಘ್ರವೇ ನೀರಿನ ದರ ಹೆಚ್ಚಳದ ಶಾಕ್ ನೀಡಲು ಸರ್ಕಾರ ಮುಂದಾಗಿರುವ ಸುಳಿವನ್ನು ಜಲಮಂಡಳಿ ನೀಡಿದೆ. ಬೆಂಗಳೂರಲ್ಲಿ ಕಾವೇರಿ ನೀರಿನ ದರ ಪರಿಷ್ಕರಣೆಗೆ ಸರ್ಕಾರ ಮುಂದಾಗಿ ಎನ್ನಲಾಗುತ್ತಿದೆ. ಈ ಸಂಬಂಧ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಬಿಡಬ್ಲ್ಯೂ ಎಸ್ ಎಸ್ ಬಿ ಸಭೆ ನಡೆಯೋ ಸಾಧ್ಯತೆ ಇದೆ. ಡಿಸಿಎಂ ನೇತೃತ್ವದ ಜಲಮಂಡಳಿ ಸಭೆಯಲ್ಲಿ ಕಾವೇರಿ ನೀರಿನದ ದರ ಹೆಚ್ಚಳದ ಕುರಿತಂತೆ ಚರ್ಚಿಸಲಾಗುತ್ತಿದೆ. ಆ ಬಳಿಕ ಬೆಂಗಳೂರಲ್ಲಿ ನೀರಿನ ದರ ಪರಿಷ್ಕರಣೆ ಅಧಿಕೃತ ಆದೇಶ ಹೊರ ಬೀಳೋ ಸಾಧ್ಯತೆ ಇದೆ. ಅಂದಹಾಗೆ ನೀರು ಸರಬರಾಜು ವೆಚ್ಚ, ವಿದ್ಯುತ್ ಬಳಕೆ ವೆಚ್ಚ ಸೇರಿದಂತೆ…

Read More