Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಅಮೆರಿಕದ ಜಾರ್ಜ್ಟೌನ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿರುವ ಭಾರತೀಯ ಸಂಶೋಧನಾ ವಿದ್ಯಾರ್ಥಿಯನ್ನು ವಲಸೆ ಅಧಿಕಾರಿಗಳು ಬಂಧಿಸಿದ್ದಾರೆ. ಫೆಲೆಸ್ತೀನ್ ಭಯೋತ್ಪಾದಕ ಗುಂಪು ಹಮಾಸ್ ಜೊತೆ ನಂಟು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿ ವೀಸಾದಲ್ಲಿದ್ದ ಬಾದರ್ ಖಾನ್ ಸೂರಿ ಅವರನ್ನು ಹೋಮ್ಲ್ಯಾಂಡ್ ಸೆಕ್ಯುರಿಟಿ ಇಲಾಖೆಯ ಏಜೆಂಟರು ಸಂಪರ್ಕಿಸಿ ನೋಟಿಸ್ ನೀಡಿದ್ದಾರೆ. ವಿದ್ಯಾರ್ಥಿಯ ವೀಸಾವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಹೇಳಿದ ನಂತರ ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವಿದ್ಯಾರ್ಥಿಯ ವಕೀಲರು ತಿಳಿಸಿದ್ದಾರೆ. ಸೂರಿ ವಿಶ್ವವಿದ್ಯಾಲಯದಲ್ಲಿ ಹಮಾಸ್ ಭಯೋತ್ಪಾದಕ ಗುಂಪಿಗೆ ಕೆಲಸ ಮಾಡುತ್ತಿದ್ದರು ಮತ್ತು ಹಮಾಸ್ ಪರವಾಗಿ ಪ್ರಚಾರ ಮಾಡುತ್ತಿದ್ದರು ಎಂದು ಹೋಮ್ಲ್ಯಾಂಡ್ ಸೆಕ್ಯುರಿಟಿ ಕಂಡುಕೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಹಮಾಸ್ ಪ್ರಚಾರವನ್ನು ಹರಡುತ್ತಿದೆ ಎಂದು ವಲಸೆ ಅಧಿಕಾರಿಗಳು ಆರೋಪಿಸಿದರು. ಹಮಾಸ್ನ ಹಿರಿಯ ಸಲಹೆಗಾರನಾಗಿದ್ದ ಭಯೋತ್ಪಾದಕನೊಂದಿಗೆ ಸೂರಿ ನಿಕಟ ಸಂಬಂಧ ಹೊಂದಿದ್ದರು ಎಂದು ಹೋಮ್ಲ್ಯಾಂಡ್ ಸೆಕ್ಯುರಿಟಿ ವಕ್ತಾರರು ಹೇಳಿದ್ದಾರೆ. ಬದರ್ ಖಾನ್ ಸೂರಿ ವಲಸೆ ನ್ಯಾಯಾಲಯದ ಮೊರೆ…
ಬೆಂಗಳೂರು: ಅಮೆರಿಕದ ಬಿಲಿಯನೇರ್ ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಮಾಧ್ಯಮ ದೈತ್ಯ ‘X’ (ಹಿಂದೆ ಟ್ವಿಟರ್) ಭಾರತ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದೆ. ಕಾನೂನುಬಾಹಿರ ವಿಷಯ ನಿಯಂತ್ರಣ ಮತ್ತು ಅನಿಯಂತ್ರಿತ ಸೆನ್ಸಾರ್‌ಶಿಪ್ ಎಂದು ಕರೆಯುವುದನ್ನು ಪ್ರಶ್ನಿಸಿದೆ. ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಕೇಂದ್ರದ ವ್ಯಾಖ್ಯಾನದ ಬಗ್ಗೆ, ವಿಶೇಷವಾಗಿ ಸೆಕ್ಷನ್ 79(3)(b) ಬಳಕೆಯ ಬಗ್ಗೆ ಇದು ಕಳವಳ ವ್ಯಕ್ತಪಡಿಸಿದೆ, ಇದು ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲಂಘಿಸುತ್ತದೆ ಮತ್ತು ಆನ್‌ಲೈನ್‌ನಲ್ಲಿ ಮುಕ್ತ ಅಭಿವ್ಯಕ್ತಿಯನ್ನು ದುರ್ಬಲಗೊಳಿಸುತ್ತದೆ ಎಂದು ‘X’ ವಾದಿಸುತ್ತದೆ. ಸೆಕ್ಷನ್ 69A ನಲ್ಲಿ ವಿವರಿಸಿರುವ ರಚನಾತ್ಮಕ ಕಾನೂನು ಪ್ರಕ್ರಿಯೆಯನ್ನು ಬೈಪಾಸ್ ಮಾಡುವ ಮೂಲಕ ಸಮಾನಾಂತರ ವಿಷಯ-ತಡೆಗಟ್ಟುವ ಕಾರ್ಯವಿಧಾನವನ್ನು ರಚಿಸಲು ಸರ್ಕಾರವು ಈ ವಿಭಾಗವನ್ನು ಬಳಸುತ್ತಿದೆ ಎಂದು ಮೊಕದ್ದಮೆಯಲ್ಲಿ ಆರೋಪಿಸಲಾಗಿದೆ. ಈ ವಿಧಾನವು ಶ್ರೇಯಾ ಸಿಂಘಾಲ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ 2015 ರ ತೀರ್ಪಿಗೆ ವಿರುದ್ಧವಾಗಿದೆ ಎಂದು ‘X’ ಹೇಳಿಕೊಂಡಿದೆ, ಇದು ಸರಿಯಾದ ನ್ಯಾಯಾಂಗ ಪ್ರಕ್ರಿಯೆಯ ಮೂಲಕ ಅಥವಾ ಸೆಕ್ಷನ್ 69A ಅಡಿಯಲ್ಲಿ…
ನವದೆಹಲಿ: ಮುಂಬೈನ ಕೌಟುಂಬಿಕ ನ್ಯಾಯಾಲಯವು ಗುರುವಾರ ಭಾರತೀಯ ಕ್ರಿಕೆಟಿಗ ಯುಜುವೇಂದ್ರ ಚಾಹಲ್ ಮತ್ತು ಅವರ ಪರಿತ್ಯಕ್ತ ಪತ್ನಿ ಧನಶ್ರೀ ವರ್ಮಾ ಅವರಿಗೆ ವಿಚ್ಛೇದನವನ್ನು ಮಂಜೂರು ಮಾಡಿದೆ. ಚಾಹಲ್ ಅವರ ವಕೀಲ ನಿತಿನ್ ಗುಪ್ತಾ ಮತ್ತು ವರ್ಮಾ ಅವರ ವಕೀಲೆ ಅದಿತಿ ಮೊಹೋನಿ ಅವರು ಬಾರ್ & ಬೆಂಚ್‌ಗೆ ಇದನ್ನು ದೃಢಪಡಿಸಿದರು. ಚಾಹಲ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಭಾಗವಹಿಸಲಿರುವ ಕಾರಣ, ಇಂದಿನೊಳಗೆ ವಿಚ್ಛೇದನ ಅರ್ಜಿಯನ್ನು ನಿರ್ಧರಿಸುವಂತೆ ಬಾಂಬೆ ಹೈಕೋರ್ಟ್ ಕುಟುಂಬ ನ್ಯಾಯಾಲಯಕ್ಕೆ ಆದೇಶಿಸಿದ ಒಂದು ದಿನದ ನಂತರ ವಿಚ್ಛೇದನವನ್ನು ಮಂಜೂರು ಮಾಡಲಾಗಿದೆ. ವಿಚ್ಛೇದನದ ನಿಯಮಗಳ ಪ್ರಕಾರ, ಚಾಹಲ್ ವರ್ಮಾಗೆ ಎರಡು ಕಂತುಗಳಲ್ಲಿ ₹4.75 ಕೋಟಿ ಜೀವನಾಂಶವನ್ನು ಪಾವತಿಸಬೇಕಾಗುತ್ತದೆ. ಬುಧವಾರ, ಚಾಹಲ್ ಮತ್ತು ವರ್ಮಾ ದಂಪತಿಗಳು ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 13B ಅಡಿಯಲ್ಲಿ ವಿಚ್ಛೇದನ ಆದೇಶಕ್ಕಾಗಿ ಆರು ತಿಂಗಳ ಕೂಲಿಂಗ್-ಆಫ್ ಅವಧಿಯನ್ನು ಮನ್ನಾ ಮಾಡಲು ಸಲ್ಲಿಸಿದ ಮನವಿಯನ್ನು ಹೈಕೋರ್ಟ್ ಅನುಮತಿಸಿತ್ತು. ಚಾಹಲ್ ಮತ್ತು ವರ್ಮಾ ಎರಡೂವರೆ ವರ್ಷಗಳಿಗೂ ಹೆಚ್ಚು…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ವಿಧಾನಸೌಧದ ಸಚಿವರ ಕಚೇರಿಯಲ್ಲಿ 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಪಾವತಿ ಮಾಡುವ ಕುರಿತು, ಅಂಗನವಾಡಿಯ ವಿವಿಧ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಚರ್ಚೆ ನಡೆಸಿದರು. ಗೌರವಧನ ಹೆಚ್ಚಳ, ನಿವೃತ್ತಿಯಾದ ಎಲ್ಲರಿಗೂ ಗ್ರ್ಯಾಚುಟಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆಗಳು ಒತ್ತಾಯಿಸುತ್ತಾ ಬಂದಿವೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಕ್ರಮವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಈಗಾಗಲೇ ಸರ್ಕಾರ 2023-24ನೇ…
ಬೆಂಗಳೂರು: ರಾಜ್ಯದಲ್ಲಿ ದರಿದ್ರ, ಜನವಿರೋಧಿ, ಕೆಟ್ಟ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಈ ನಾಡಿನ ಜನತೆಗೆ ಕೊಟ್ಟ ಏಕೈಕ ಗ್ಯಾರಂಟಿ ಎಂದರೆ ಅದು ಬೆಲೆ ಏರಿಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬೆಲೆ ಏರಿಕೆಯ ಗ್ಯಾರಂಟಿಯನ್ನು ಈ ರಾಜ್ಯ ಸರಕಾರ ಸರಿಯಾಗಿ ಅನುಷ್ಠಾನಕ್ಕೆ ತರುತ್ತಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳು ವಿಫಲವಾಗಿದೆ. ಬೆಲೆ ಏರಿಕೆಯಿಂದ ನಾಡಿನ ಸಾಮಾನ್ಯ ಜನರು, ಬಡವರು, ರೈತರು ಸೇರಿ ಎಲ್ಲರೂ ತತ್ತರಿಸಿ ಹೋಗಿದ್ದಾರೆ ಎಂದು ತಿಳಿಸಿದರು. ಇವರ ಹುಳುಕನ್ನು ಮುಚ್ಚಿ ಹಾಕಲು ಪದೇಪದೇ ಕೇಂದ್ರ ಸರಕಾರ ಅನ್ಯಾಯ ಮಾಡುತ್ತಿದೆ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಒಂದು ಕಡೆ ಪುಕ್ಕಟೆ ವಿದ್ಯುತ್ ಎನ್ನುತ್ತಾರೆ. ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. 3 ಫೇಸ್ ವಿದ್ಯುತ್ತನ್ನು 7 ತಾಸು ಕೊಡಲು ಸರಕಾರಕ್ಕೆ ಆಗುತ್ತಿಲ್ಲ. ಮತ್ತೊಂದು ಕಡೆ ಪಿಡಬ್ಲ್ಯುಡಿ ಮತ್ತಿತರ ಇಲಾಖೆಗಳು 6500 ಕೋಟಿ ವಿದ್ಯುತ್…
ಬೆಂಗಳೂರು: “ದ್ವೇಷ ರಾಜಕಾರಣ ಎಂಬುದು ಅವರ (ಕೇಂದ್ರ ಸಚಿವ ಕುಮಾರಸ್ವಾಮಿ) ಡಿಎನ್ ಎ ಯಲ್ಲಿದೆ. ಕೇತಗಾನಹಳ್ಳಿ ಜಮೀನು ವಿಚಾರವಾಗಿ ಕೇಸ್ ದಾಖಲಿಸಿರುವುದು ಎಸ್.ಆರ್ ಹಿರೇಮಠ್ ಅವರು. ಕೋರ್ಟ್ ಆದೇಶದಂತೆ ಅಧಿಕಾರಿಗಳು ಕೆಲಸ ಮಾಡಿದ್ದು, ನಾವು ಹೇಗೆ ದ್ವೇಷ ರಾಜಕಾರಣ ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಕೇಂದ್ರ ಸಚಿವ ಕುಮಾರಸ್ವಾಮಿ ಕೇತಗಾನಹಳ್ಳಿ ಜಮೀನು ಒತ್ತುವರಿ ತೆರವು ದ್ವೇಷದ ರಾಜಕಾರಣ ಎಂಬ ಆರೋಪದ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನಾವು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದೇವಾ? ಈ ವಿಚಾರವಾಗಿ ಎಸ್.ಆರ್ ಹಿರೇಮಠ್ ಅವರು ಪ್ರಕರಣ ದಾಖಲಿಸಿದ್ದಾರೆ. ನನ್ನ ಮೇಲೂ ಹಿರೇಮಠ್ ಅವರು ಅನೇಕ ಕೇಸ್ ದಾಖಲಿಸಿದ್ದರು. ಅವರ ಅರ್ಜಿ ಮೇರೆಗೆ ನ್ಯಾಯಾಲಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಅಧಿಕಾರಿಗಳು ಕೋರ್ಟ್ ಆದೇಶದಂತೆ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ದ್ವೇಷದ ರಾಜಕಾರಣ ಏನಿದೆ?” ಎಂದು ತಿಳಿಸಿದರು. ಕುಮಾರಸ್ವಾಮಿ ಮರ್ಯಾದೆಯಾಗಿ ಇದ್ದರೆ ಕ್ಷೇಮ “ನನ್ನ ವಿರುದ್ಧ ಮೈಸೂರಿನಲ್ಲಿ ಅವರು…
ಬೆಂಗಳೂರು: “ಬೇಸಿಗೆ ಸಮಯದಲ್ಲಿ ನೀರಿನ ಸಂರಕ್ಷಣೆ ಅಭಿಯಾನದ ಜತೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ತೀರ್ಮಾನಿಸಿದೆ. ಇದು ಸರ್ಕಾರದ ಕಾರ್ಯಕ್ರಮವೇ ಹೊರತು ರಾಜಕೀಯ ಕಾರ್ಯಕ್ರಮವಲ್ಲ. ನ್ಯಾಯಾಲಯದಲ್ಲಿ ಆಕ್ಷೇಪ ಸಲ್ಲಿಸಲಾಗಿದ್ದು ನಮ್ಮ ವಿಚಾರವನ್ನು ನ್ಯಾಯಾಲಯದ ಮುಂದೆ ಪ್ರಸ್ತಾಪಿಸುತ್ತೇವೆ” ಎಂದು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಈ ವಿಚಾರ ತಿಳಿಸಿದರು. “ಮಾ.22ರಂದು ವಿಶ್ವ ಜಲ ದಿನ. ನಾವು ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿದ್ದೇವೆ. ಬೆಂಗಳೂರಿಗೆ ಕುಡಿಯುವ ನೀರು ಒದಗಿಸಲು 6ನೇ ಹಂತದ ಯೋಜನೆಗೆ ಡಿಪಿಆರ್ ಸಿದ್ಧಪಡಿಸಲಾಗಿದೆ. ನೀರಿನ ಸದ್ಬಳಕೆ ಹಾಗೂ ಸಂರಕ್ಷಣೆಗೆ ಜನರಲ್ಲಿ ಜಾಗೃತಿ ಮೂಡಿಸಲು ಒಂದು ತಿಂಗಳ ಕಾಲ ಅಭಿಯಾನ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು. “ಅನೇಕರು ಕಾರು, ವಾಹನ ತೊಳೆಯಲು, ಗಿಡಗಳಿಗೆ ಕುಡಿಯುವ ನೀರನ್ನು ಬಳಸುತ್ತಿದ್ದಾರೆ. ಹೀಗೆ ಸುಮಾರು 20% ಕುಡಿಯುವ ನೀರು ವ್ಯರ್ಥವಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರತಿಜ್ಞಾ ಸ್ವೀಕಾರ ಮಾಡಿಸಲಾಗುವುದು. ಇನ್ನು ಕೆಆರ್ ಎಸ್ ನಲ್ಲಿ…
ನವದೆಹಲಿ: ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಚೆಂಡಿನ ಮೇಲೆ ಲಾಲಾರಸವನ್ನು ಬಳಸುವುದರ ಮೇಲಿನ ನಿಷೇಧವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗುರುವಾರ ತೆಗೆದುಹಾಕಿದೆ. ಮುಂಬೈನಲ್ಲಿ ನಡೆದ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಲಾಲಾರಸ ನಿಷೇಧವನ್ನು ತೆಗೆದುಹಾಕಲಾಗಿದೆ. ಹೆಚ್ಚಿನ ನಾಯಕರು ಈ ಕ್ರಮದ ಪರವಾಗಿದ್ದರು ಎಂದು ಬಿಸಿಸಿಐನ ಉನ್ನತ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಚೆಂಡನ್ನು ಹೊಳೆಯಿಸಲು ಲಾಲಾರಸವನ್ನು ಹಚ್ಚುವ ಹಳೆಯ ಅಭ್ಯಾಸವನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ನಿಷೇಧಿಸಿತ್ತು. 2022 ರಲ್ಲಿ, ವಿಶ್ವ ಸಂಸ್ಥೆ ನಿಷೇಧವನ್ನು ಶಾಶ್ವತಗೊಳಿಸಿತು. ಸಾಂಕ್ರಾಮಿಕ ರೋಗದ ನಂತರ ಐಪಿಎಲ್ ಕೂಡ ತನ್ನ ಆಟದ ಪರಿಸ್ಥಿತಿಗಳಲ್ಲಿ ಐಸಿಸಿ ನಿಷೇಧವನ್ನು ಸೇರಿಸಿದೆ. ಆದರೆ ಅದರ ಮಾರ್ಗಸೂಚಿಗಳು ಕ್ರೀಡಾ ಆಡಳಿತ ಮಂಡಳಿಯ ವ್ಯಾಪ್ತಿಯಿಂದ ಹೊರಗಿವೆ. ಗುರುವಾರದ ಬೆಳವಣಿಗೆಯೊಂದಿಗೆ, ಕೋವಿಡ್ -19 ಸಾಂಕ್ರಾಮಿಕ ರೋಗದ ನಂತರ ಲಾಲಾರಸ ಬಳಕೆಯನ್ನು ಮತ್ತೆ ಪರಿಚಯಿಸಿದ ಮೊದಲ ಪ್ರಮುಖ ಕ್ರಿಕೆಟ್ ಪಂದ್ಯಾವಳಿ ಐಪಿಎಲ್ ಆಗಿದೆ.…
ಬೆಂಗಳೂರು: ಬೆಳಗಾವಿಯಲ್ಲಿನ ಎಂಇಎಸ್ ಪುಂಡಾಟ ಖಂಡಿಸಿ ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಅಂದು ರಾಜ್ಯಾಧ್ಯಂತ ಸಿನಿಮಾ ಪ್ರದರ್ಶನ್ ಬಂದ್ ಮಾಡಲಾಗುತ್ತಿದೆ ಎಂಬುದಾಗಿ ಸಿನಿಮಾ ಪ್ರದರ್ಶಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಬೆಳಗಾವಿಯಲ್ಲಿ ಕನ್ನಡಿಗರ ಮೇಲಿನ ಹಲ್ಲೆ, ಮರಾಠಿಗರ ಪುಂಡಾಟ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಇಂತಹ ಬಂದ್ ಗೆ ಸಿನಿಮಾ ಪ್ರದರ್ಶಕರ ಸಂಘವು ಬೆಂಬಲ ನೀಡುತ್ತಿದೆ ಎಂದರು. ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಬೆಂಬಲಿಸಿ ರಾಜ್ಯಾಧ್ಯಂತ ಒಂದು ದಿನ ಸಿನಿಮಾ ಪ್ರದರ್ಶನ ಸ್ಥಗಿತಕ್ಕೆ ನಿರ್ಧರಿಸಲಾಗಿದೆ. ಮಾರ್ಚ್.22ರಂದು ರಾಜ್ಯಾಧ್ಯಂತ ಸಿನಿಮಾ ಪ್ರದರ್ಶ ಬಂದ್ ಆಗಲಿದೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/big-news-what-did-deputy-cm-dk-shivakumar-say-about-akhand-karnataka-bandh-on-march-22/ https://kannadanewsnow.com/kannada/breaking-encounter-between-security-forces-in-bijapur-chhattisgarh-22-naxals-killed-naxal-encounter/
ಶಿವಮೊಗ್ಗ: ಜಿಲ್ಲೆಯ ಸಾಗರ-ಸೊರಬ ರಸ್ತೆಯ ಹೊಳೆಕೊಪ್ಪ ಸಮೀಪದಲ್ಲಿ ಒಣ ಮರ ಕಡಿತಲೆ ಮಾಡಿಲ್ಲ. ವಾಹನ ಸವಾರರ ಬಲಿಗಾಗಿ ಕಾದಿವೆ ಅಂತ ನಿಮ್ಮ ಕನ್ನಡ ನ್ಯೂಸ್ ನೌ ಸುದ್ದಿ ಪ್ರಕಟಿಸಿತ್ತು. ಈ ಬೆನ್ನಲ್ಲೇ ಕನ್ನಡ ನ್ಯೂಸ್ ನೌ ಫಲಶೃತಿ ಎನ್ನುವಂತೆ ಒಣಗಿದ ಮರಗಳನ್ನು ಸೊರಬ ಅರಣ್ಯಾಧಿಕಾರಿಗಳು ಕಡಿತಲೆ ಮಾಡಿದ್ದಾರೆ. ಕಳೆದ ಐದು ದಿನಗಳ ಹಿಂದೆ ನಿಮ್ಮ ಕನ್ನಡ ನ್ಯೂಸ್ ನೌ ‘ವಾಹನ ಸವಾರ’ರ ಬಲಿಗಾಗಿ ಕಾದಿವೆ ‘ಒಣ ಮರ’: ಕಡಿತಲೆಗೆ ‘ಸೊರಬ ಅರಣ್ಯಾಧಿಕಾರಿ’ಗಳ ನಿರ್ಲಕ್ಷ್ಯ ಎಂಬುದಾಗಿ ಸುದ್ದಿ ಪ್ರಕಟಿಸಿತ್ತು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಭದ್ರಾಪುರದ ನಂತ್ರ ರಾಮಕೃಷ್ಣ ಎಂಬುವರ ಮನೆಯಿಂದ ಹಿಡಿದು ಅಮಚಿ ಸಮೀಪದ ಸೇತುವೆಯವರೆಗೆ ಸುಮಾರು 22 ಅಕೇಶಿಯಾ ಮರಗಳ ಸಾಲು ಜೊತೆಗೆ ಒಂದೆರೆಡು ಹುನಾಲು ಮರಗಳಿದ್ದಾವೆ. ದಾರಿಯುದ್ಧಕ್ಕೂ ಸಾಲು ಗಟ್ಟಿರುವಂತ 24 ಮರಗಳಲ್ಲಿ ಬರೋಬ್ಬರಿ 10ಕ್ಕೂ ಹೆಚ್ಚು ಮರಗಳು ಒಣಗಿ ಹೋಗಿದ್ದಾವೆ. ದಾರಿ ಹೋಕರ ಮೇಲೆ ಈಗಲೋ ಆಗಲೋ ಬೀಳೋ ಸ್ಥಿತಿಯಲ್ಲಿದ್ದಾವೆ ಎಂಬುದಾಗಿ ವರದಿ ಮಾಡಲಾಗಿತ್ತು. ಈ ವರದಿಯ…