Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ರಾಮನಗರ ಜಿಲ್ಲೆ ಬಿಡದಿ ಬಳಿಯಿರುವ ವೆಲ್ಸ್ ಸ್ಟುಡಿಯೋಸ್ ಅಂಡ್ ಎಂಟರ್ ಟೈನ್ಮೆಂಟ್ ಪ್ರೈ. ಲಿ. (ಜಾಲಿ ವುಡ್ ಸ್ಟುಡಿಯೋ)ಗೆ ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೆ ಕಾರ್ಯಾಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿರುವ ಸ್ಟುಡಿಯೋಗೆ ನೋಟಿಸ್ ನೀಡಿರುವ ವಿಚಾರ ಮಾಧ್ಯಮದಿಂದ ತಮಗೆ ತಿಳಿಯಿತು. ಈ ಬಗ್ಗೆ ಮಾಹಿತಿ ಪಡೆದಾಗ, ರಾಮನಗರ ಪ್ರಾದೇಶಿಕ ಕಚೇರಿಯಿಂದ 2024ರಲ್ಲೇ 2 ಬಾರಿ ನೋಟಿಸ್ ನೀಡಿದ್ದರೂ ಅನುಪಾಲನೆ ಮಾಡಿದ ಕಾರಣ ಈ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು. ಇಲ್ಲಿ ಎಸ್.ಟಿ.ಪಿ. ಕಾರ್ಯನಿರ್ವಹಣೆ ಸೇರಿದಂತೆ ಸಮರ್ಪಕವಾಗಿ ತಾಜ್ಯ ವಿಲೇವಾರಿ ಆಗುತ್ತಿಲ್ಲ, ಜನರೇಟರ್ ಸೆಟ್ ಗಳಿದ್ದು ಅದಕ್ಕೂ ಅನುಮತಿ ಪಡೆದಿಲ್ಲ ಎಂದು ತಿಳಿಸಿದ್ದಾರೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಹೀಗಾಗಿ ಮಂಡಳಿ ಕ್ರಮ…
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕೆಎನ್ಎನ್ ಡಿಜಿಟಲ್ ಡೆಸ್ಕ್: ಜಾನ್ ಕ್ಲಾರ್ಕ್, ಮೈಕೆಲ್ ಎಚ್ ಡೆವೊರೆಟ್ ಮತ್ತು ಜಾನ್ ಎಂ ಮಾರ್ಟಿನಿಸ್ 2025 ರ ಭೌತಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ 2025 ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಜಾನ್ ಕ್ಲಾರ್ಕ್, ಮೈಕೆಲ್ ಹೆಚ್. ಡೆವೊರೆಟ್ ಮತ್ತು ಜಾನ್ ಎಂ. ಮಾರ್ಟಿನಿಸ್ ಅವರಿಗೆ “ವಿದ್ಯುತ್ ಸರ್ಕ್ಯೂಟ್‌ನಲ್ಲಿ ಮ್ಯಾಕ್ರೋಸ್ಕೋಪಿಕ್ ಕ್ವಾಂಟಮ್ ಮೆಕ್ಯಾನಿಕಲ್ ಟನಲಿಂಗ್ ಮತ್ತು ಶಕ್ತಿ ಪರಿಮಾಣೀಕರಣದ ಆವಿಷ್ಕಾರಕ್ಕಾಗಿ” ನೀಡಲು ನಿರ್ಧರಿಸಿದೆ. https://twitter.com/NobelPrize/status/1975498493218394168
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಸಂದರ್ಭದಲ್ಲಿ ಮೂವರು ಶಿಕ್ಷಕರು ಸಾವನ್ನಪ್ಪಿದ್ದಾರೆ. ಅವರಿಗೆ ರಾಜ್ಯ ಸರ್ಕಾರದಿಂದ ತಲಾ 20 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಇಂದು ಸಮೀಕ್ಷೆ ಸಂಬಂಧ ಅಧಿಕಾರಗಳ ಜೊತೆಗೆ ಸಭೆಯನ್ನು ನಡೆಸಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕೊಪ್ಪಳ ಜಿಲ್ಲೆಯಲ್ಲಿ ಜಾತಿಗಣತಿ ಸಮೀಕ್ಷೆ ಶೇ.90ರಷ್ಟು ಆಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಶೇ.68, 69ರಷ್ಟು ಆಗಿದೆ. ಇಡೀ ರಾಜ್ಯದಲ್ಲಿ ನಮ್ಮ ನಿರೀಕ್ಷೆ ಏನಿತ್ತೋ ಅದು ಸಾಧ್ಯವಾಗಿಲ್ಲ. ಇಂದು ಸಂಜೆ ಜಾತಿಗಣತಿ ಸಮೀಕ್ಷೆ ಎಷ್ಟು ಆಗಲಿದೆ ಎಂಬುದು ತಿಳಿಯಲಿದೆ. ನನಗೆ ಬಂದಿರುವಂತ ಮಾಹಿತಿಯಂತೆ ಎಲ್ಲಾ ಜಿಲ್ಲೆಯಲ್ಲಿ ಸಂಪೂರ್ಣ ಸಮೀಕ್ಷೆಯಾಗಿಲ್ಲ ಎಂದರು. ನಿನ್ನೆ ಶಿಕ್ಷಣ ಇಲಾಖೆಯಿಂದ ಒಂದು ಆದೇಶ ಮಾಡಲಾಗಿದೆ. ಹಿಂದುಳಿದ ಆಯೋಗದ ಜೊತೆಗೆ ಚರ್ಚಿಸಿ ಮಾಡಿರುವಂತ ಆದೇಶವಾಗಿದೆ. ಆ ಬಳಿಕ ಇಂದು ಚರ್ಚಿಸಿ ಎಲ್ಲಾ ಶಿಕ್ಷಕರನ್ನು ಸಮೀಕ್ಷೆಗೆ ತೊಡಗಿಸಿಕೊಳ್ಳಲು ನಿರ್ಧರಿಸಲಾಗಿದೆ. ಒಂದು ದಿನಕ್ಕೆ ಕನಿಷ್ಠ 15 ಮನೆಗಳನ್ನು ಮಾಡಲು ಹೇಳಲಾಗಿತ್ತು. ಆದರೇ ಅದು ಸಾಧ್ಯವಾಗಿಲ್ಲ. ರಜೆ ವಿಸ್ತರಣೆ…
ಬೆಂಗಳೂರು: ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದಂತ ದಸರಾ ರಜೆಯನ್ನು ಅಕ್ಟೋಬರ್.18ರವರೆಗೆ ದಸರಾ ರಜೆಯನ್ನು ವಿಸ್ತರಣೆ ಮಾಡಲು ಸಿಎಂ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ಕೊಪ್ಪಳ ಜಿಲ್ಲೆಯಲ್ಲಿ ಜಾತಿಗಣತಿ ಸಮೀಕ್ಷೆ ಶೇ.90ರಷ್ಟು ಆಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಶೇ.68, 69ರಷ್ಟು ಆಗಿದೆ. ಇಡೀ ರಾಜ್ಯದಲ್ಲಿ ನಮ್ಮ ನಿರೀಕ್ಷೆ ಏನಿತ್ತೋ ಅದು ಸಾಧ್ಯವಾಗಿಲ್ಲ. ಇಂದು ಸಂಜೆ ಜಾತಿಗಣತಿ ಸಮೀಕ್ಷೆ ಎಷ್ಟು ಆಗಲಿದೆ ಎಂಬುದು ತಿಳಿಯಲಿದೆ. ನನಗೆ ಬಂದಿರುವಂತ ಮಾಹಿತಿಯಂತೆ ಎಲ್ಲಾ ಜಿಲ್ಲೆಯಲ್ಲಿ ಸಂಪೂರ್ಣ ಸಮೀಕ್ಷೆಯಾಗಿಲ್ಲ ಎಂದರು. ನಾಳೆಯಿಂದ ಅಕ್ಟೋಬರ್ 8, 9, 10 ಮೂರು ದಿನ ವರ್ಕಿಂಗ್ ಡೇಸ್ ಇದೆ. 13, 14, 15, 16, 17, 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ಸಮೀಕ್ಷೆ ಹಿನ್ನಲೆಯಲ್ಲಿ ದಸರಾ ರಜೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದರು. ನಿನ್ನೆ ಶಿಕ್ಷಣ ಇಲಾಖೆಯಿಂದ ಒಂದು ಆದೇಶ ಮಾಡಲಾಗಿದೆ. ಹಿಂದುಳಿದ ಆಯೋಗದ ಜೊತೆಗೆ ಚರ್ಚಿಸಿ ಮಾಡಿರುವಂತ ಆದೇಶವಾಗಿದೆ. ಇಂದು ಈ…
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಇಂದು ಸಮೀಕ್ಷೆ ಮುಕ್ತಾಯಗೊಳ್ಳಬೇಕಿತ್ತು. ಆದರೇ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಅಕ್ಟೋಬರ್.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು, ಸದಸ್ಯರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. ಜಾತಿಗಣತಿ ಸಮೀಕ್ಷೆ ಮುಕ್ತಾಯವಾಗದ ಹಿನ್ನಲೆಯಲ್ಲಿ ರಾಜ್ಯದ ಶಾಲೆಗಳಿಗೆ ರಜೆಯನ್ನು ಮುಂದುವರೆಸಲು ನಿರ್ಧರಿಸಲಾಯಿತು. ಅದರಂತೆ ಅಕ್ಟೋಬರ್.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ನಿರ್ಧರಿಸಲಾಗಿದೆ. ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದಂತ ದಸರಾ ರಜೆಯನ್ನು ಅಕ್ಟೋಬರ್.18ರವರೆಗೆ ದಸರಾ ರಜೆಯನ್ನು ವಿಸ್ತರಣೆ ಮಾಡಲು ಸಿಎಂ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ಕೊಪ್ಪಳ ಜಿಲ್ಲೆಯಲ್ಲಿ ಜಾತಿಗಣತಿ ಸಮೀಕ್ಷೆ ಶೇ.90ರಷ್ಟು ಆಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ…
ರಾಮನಗರ: ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ರಿಯಾಲಿಟಿ ಶೋ ಸ್ಥಗಿತಗೊಳಿಸುವಂತೆ ಕನ್ನಡಪರ ಸಂಘಟನೆಯಿಂದ ಬಿಗ್ ಬಾಸ್ ಸೆಟ್ ಬಳಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ರಾಮನಗರದ ಜಾಲಿವುಡ್ ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್ ಬಳಿಯಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರಿಂದ ಶೋ ಸ್ಥಗಿತಗೊಳಿಸುವಂತೆ ಪ್ರತಿಭಟನೆ ನಡೆಸಲಾಗುತ್ತಿದೆ. ಜಾಲಿವುಡ್ ಒಳಭಾಗದಲ್ಲಿ ನಡೆಯುತ್ತಿರುವಂತ ಬಿಗ್ ಬಾಸ್ ಶೋ ಸ್ಥಗಿತಗೊಳಿಸುವಂತೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. https://kannadanewsnow.com/kannada/7-daily-habits-that-damage-your-kidneys/
ಬೆಂಗಳೂರು: ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. SC/ST ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. SC/ST ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಕರೆ ನೀಡಿದರು. ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ST ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ…
ಚೆನ್ನೈ : 158 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ಕೊಲಂಬೊ-ಚೆನ್ನೈ ವಿಮಾನಕ್ಕೆ ಮಂಗಳವಾರ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನಯಾನ ಸಂಸ್ಥೆಯು ತನ್ನ ಹಿಂದಿರುಗುವ ಪ್ರಯಾಣವನ್ನು ರದ್ದುಗೊಳಿಸಬೇಕಾಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನವು ಸುರಕ್ಷಿತವಾಗಿ ಇಳಿಯಿತು ಮತ್ತು ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಇಳಿಸಲಾಯಿತು ಎಂದು ಅವರು ಹೇಳಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಹಕ್ಕಿ ಡಿಕ್ಕಿ ಹೊಡೆದ ನಂತರ ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದರು. ವಿಮಾನವನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಏರ್ ಇಂಡಿಯಾ ಎಂಜಿನಿಯರ್‌ಗಳು ವ್ಯಾಪಕ ತಪಾಸಣೆ ನಡೆಸಿದರು ಮತ್ತು ಘಟನೆಯ ಕಾರಣ ವಿಮಾನಯಾನ ಅಧಿಕಾರಿಗಳು ಅದರ ಹಿಂದಿರುಗುವ ಪ್ರಯಾಣವನ್ನು ರದ್ದುಗೊಳಿಸಿದರು ಎಂದು ಅವರು ಹೇಳಿದರು. ನಂತರ ಕೊಲಂಬೊಗೆ ಹೊರಟ 137 ಪ್ರಯಾಣಿಕರಿಗೆ ವಿಮಾನವು ಮತ್ತೊಂದು ವಿಮಾನವನ್ನು ವ್ಯವಸ್ಥೆ ಮಾಡಿತು ಎಂದು ಅವರು ಹೇಳಿದರು.
ಬೆಂಗಳೂರು : ರಾಮಾಯಣ ದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ತಪೋವನ ದಲ್ಲಿರುವ ಶ್ರೀ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು. ವಾಲ್ಮೀಕಿ ಜಯಂತೋತ್ಸವದ ಮೂಲಕ ಅವರನ್ನುಸ್ಮರಿಸಲಾಗಿದೆ. ದೇಶ ಕಂಡ ಅಪರೂಪದ ಸಾಹಿತಿ. ರಾಮಾಯಣ ದಂತಹ ಮಹಾನ್ ಗ್ರಂಥದ ಕತೃ. ವಾಲ್ಮೀಕಿಯವರು ಶೂದ್ರ ಜನಾಂಗದಲ್ಲಿ ಜನಿಸಿದ್ದರೂ, ರಾಮಾಯಣದಂತಹ ಶ್ರೇಷ್ಠ ಗ್ರಂಥವನ್ನು ವಿಶ್ವಕ್ಕೆ ಪರಿಚಯಿಸಿದರು. ವಾಲ್ಮೀಕಿಯವರ ಪ್ರತಿಮೆಯನ್ನು 2017 ರಲ್ಲಿ ಸ್ಥಾಪಿಸಲಾಯಿತು. ವಾಲ್ಮೀಕಿ ಹಾಗೂ ಕನಕದಾಸರಂತಹ ಮಹಾನ್ ಸಂತರು ಸಮಾಜಮುಖಿಯಾಗಿ ಬದುಕಿದವರು. ಅವರು ಬೋಧಿಸಿದಂತೆ ಮಾನವೀಯ ಮೌಲ್ಯಗಳನ್ನು ಅನುಸರಿದವರು ಎಂದರು. ಸಚಿವಸಂಪುಟ ಪುನರ್ ರಚನೆ ನಾಯಕ ಸಮುದಾಯದ ಶಾಸಕರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮುಂದಿನ ದಿನಗಳಲ್ಲಿ ಸಚಿವಸಂಪುಟ…













