Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೀದರ್ : ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತ ಧಾಮ ಸೇರಿದಂತೆ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ ಹುಲಿ ಹಾಗೂ ಮಾಂಸಹಾರಿ ಪ್ರಾಣಿಗಳ ಗಣತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಭಾಲ್ಕಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ದೇಶಾದ್ಯಂತ ಹುಲಿ ಅಂದಾಜು -2026 ನಡೆಯುತ್ತಿದ್ದು, ಇದು 6ನೇ ಅಂತ ಪ್ರಯೋಗವಾಗಿದೆ. ಈ ಹಿಂದೆ 2006, 2010, 2014, 2018 ಮತ್ತು 2022ರಲ್ಲಿ ಗಣತಿ ನಡೆದಿತ್ತು. ರಾಜ್ಯದಲ್ಲಿ ಸುಮಾರು 563 ಹುಲಿಗಳಿವೆ ಎಂದು ಅಂದಾಜಿಸಲಾಗಿತ್ತು ಮತ್ತು ರಾಜ್ಯ ಹುಲಿ ಸಂಖ್ಯೆಯಲ್ಲಿ ದೇಶದಲ್ಲೇ 2ನೇ ಸ್ಥಾನ ಪಡೆದಿತ್ತು ಎಂದರು. ರಾಜ್ಯದ ಅರಣ್ಯ ಪ್ರದೇಶಗಳ ಪ್ರತಿ ವಲಯದಲ್ಲಿರುವ ಎಲ್ಲ 38 ಅರಣ್ಯ ವಿಭಾಗದ ಗಸ್ತುಗಳಲ್ಲಿ ಈ ಪ್ರಕ್ರಿಯೆ ನಡೆಯಲಿದ್ದು, ಇದಕ್ಕಾಗಿ ಕಳೆದ ಅಕ್ಟೋಬರ್ -ಡಿಸೆಂಬರ್ ನಲ್ಲಿ 5 ಹುಲಿ ಸಂರಕ್ಷಿತ ಪ್ರದೇಶಗಳಿಗೆ ಪ್ರತ್ಯೇಕವಾಗಿ ಮತ್ತು ರಾಜ್ಯದ ಎಲ್ಲಾ…

Read More

ಬೆಂಗಳೂರು: ಪ್ರತಿಭಟನೆಗೆ ವೇದಿಕೆ ಹಾಕಲು ಅವಕಾಶ ಕೊಡುವುದಿಲ್ಲ; ಇದೇನು ಇವರ ಅಪ್ಪನ ಮನೆಯ ಸರಕಾರವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. “ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ” ಎನ್ನುವ ಘೋಷವಾಕ್ಯದೊಂದಿಗೆ ಇಂದು ಬಾಗಲೂರು ಮುಖ್ಯ ರಸ್ತೆಯ ಕೌಂಟ್ರಿ ಕ್ಲಬ್ ಹತ್ತಿರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ. ಇಂಥ ಗೊಡ್ಡು ಬೆದರಿಕೆಗೆ ಹೆದರುವವರು ಬಿಜೆಪಿ ಕಾರ್ಯಕರ್ತರಲ್ಲ; ಇದನ್ನು ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರು ಅರ್ಥ ಮಾಡಿಕೊಳ್ಳಲಿ ಎಂದು ತಿಳಿಸಿದರು. ಮನೆ ಕೆಡವಿದ್ದೇ ಕಾಂಗ್ರೆಸ್ ಸರಕಾರ. ಆದರೆ, ಕೆ.ಸಿ.ವೇಣುಗೋಪಾಲ್ ಅವರು ಬೆದರಿಸಿದ ತಕ್ಷಣ ಸಿದ್ದರಾಮಯ್ಯನವರು ತಮ್ಮ ಸಿಎಂ ಕುರ್ಚಿ ಕಳಕೊಳ್ಳುವ ಭೀತಿಯಿಂದ ಅಕ್ರಮ ವಲಸಿಗರಿಗೆ ಮನೆ ಕೊಡಲು ರಾಜ್ಯ ಸರಕಾರ ಮುಂದಾಗಿದೆ. ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಕುರ್ಚಿ ಕಸಿದುಕೊಳ್ಳಬೇಕೆಂಬ ಕಾರಣಕ್ಕಾಗಿ ಕೆ.ಸಿ.ವೇಣುಗೋಪಾಲ್ ಮೂಲಕ ಸಿಎಂಗೆ ಧಮ್ಕಿ ಹಾಕಿಸಿ ಅವರೂ ಅಕ್ರಮ ವಲಸಿಗರಿಗೆ ಮನೆ ಕೊಡಲು ಹೊರಟಿದ್ದಾರೆ ಎಂದು ಟೀಕಿಸಿದರು. ಕೆ.ಸಿ.ವೇಣುಗೋಪಾಲ್…

Read More

ಶಿವಮೊಗ್ಗ: ಯಶ್ ಅವರ ಮಾತುಗಳು ನಿಜ. ಅವರು ಬಂದ ಹಾದಿ ವೀಕೆಂಡ್ ವಿತ್ ರಮೇಶ್ ಪಾಠವಾಗಿ ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ನೀಡಿ. ದಯವಿಟ್ಟು ಶಿಕ್ಷಣದಲ್ಲಿ ಬದಲಾವಣೆ ತನ್ನಿ ಎಂಬುದಾಗಿ ಸಲಹೆ ಮಾಡಿ, ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಸೊರಬದ ಕೈಸೋಡಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಕೈಸೋಡಿಯಲ್ಲಿ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ರಾಕೇಶ್(21) ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪದವಿ ವ್ಯಾಸಂಗದ ಬಳಿಕ ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸಿದ್ದನು. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧಗೊಳ್ಳುತ್ತಿದ್ದಂತ ರಾಕೇಶ್, ಮಾನಸಿಕ ಅನಾರೋಗ್ಯದಿಂದಲೂ ಬಳಲುತ್ತಿದ್ದನು ಎನ್ನಲಾಗುತ್ತಿದೆ. ಇಂದು ಮುಂಜಾನೆ ಡೆತ್ ನೋಟ್ ಬರೆದಿಟ್ಟು ರಾಕೇಶ್ ಆತ್ಮಹತ್ಯೆಗೆ ಶರಣಾಗಿದ್ದನು. ವಿಷಯ ತಿಳಿದಂತ ಕುಟುಂಬಸ್ಥರು ಪಾರ್ಥೀವ ಶರೀರದ ಅಂತ್ಯಕ್ರಿಯೆಗೆ ಮುಂದಾಗಿತ್ತು. ಆದರೇ ಪೊಲೀಸರಿಗೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿ, ಅಂತ್ಯಕ್ರಿಯೆ ನಿಲ್ಲಿಸಿ ಆತ್ಮಹತ್ಯೆಗೆ ಶರಣಾದ ರಾಕೇಶ್ ಪಾರ್ಥೀವ ಶರೀರದ ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಅಂದಹಾಗೇ ಕೈಸೋಡಿಯ ಉಮೇಶ್ ಹಾಗೂ ಗೀತಾ…

Read More

ಬಾಂಗ್ಲಾದೇಶ: ಹೊಸ ವರ್ಷದ ಮುನ್ನಾದಿನ ಶರಿಯತ್‌ಪುರ ಜಿಲ್ಲೆಯಲ್ಲಿ ಗುಂಪೊಂದು ಹಿಂದೂ ಉದ್ಯಮಿ ಖೋಕೋನ್ ಚಂದ್ರ ದಾಸ್ ಅವರನ್ನು ಹೊಡೆದು, ಇರಿದು, ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಅಧಿಕಾರಿಗಳು ಮೂವರು ಶಂಕಿತರನ್ನು ಬಂಧಿಸಿದ್ದಾರೆ. ಢಾಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ದಾಸ್ ಶನಿವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮತ್ತು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಬಾಂಗ್ಲಾದೇಶದ ಕ್ಷಿಪ್ರ ಕಾರ್ಯಾಚರಣಾ ಬೆಟಾಲಿಯನ್ (RAB) ವಿಶೇಷ ಕಾರ್ಯಾಚರಣೆಯ ಸಮಯದಲ್ಲಿ ಕಿಶೋರ್‌ಗಂಜ್ ಜಿಲ್ಲೆಯ ಸೋಹಾಗ್ ಖಾನ್ (27), ರಬ್ಬಿ ಮೊಲ್ಲಾ (21) ಮತ್ತು ಪಲಾಶ್ ಸರ್ದಾರ್ (25) ಎಂಬ ಮೂವರು ಶಂಕಿತರನ್ನು ಬಂಧಿಸಿರುವುದಾಗಿ ತಿಳಿಸಿದೆ. ತನಿಖೆಯ ಸಮಯದಲ್ಲಿ ಶಂಕಿತರನ್ನು ಗುರುತಿಸಲಾಗಿದೆ ಮತ್ತು ಅವರನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. RAB ಪ್ರಕಾರ, ಬಂಧಿತ ವ್ಯಕ್ತಿಗಳು ಮಾದಕವಸ್ತು ಅಪರಾಧಗಳು ಮತ್ತು ಇತರ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಒಳಗೊಂಡಂತೆ ಹಿಂದಿನ ಕ್ರಿಮಿನಲ್ ದಾಖಲೆಗಳನ್ನು ಹೊಂದಿದ್ದಾರೆ. ದಾಳಿಯ ಹಿಂದಿನ ಉದ್ದೇಶವನ್ನು ಸ್ಥಾಪಿಸಲು ಮತ್ತು ಭಾಗಿಯಾಗಿರುವ ಯಾವುದೇ ಹೆಚ್ಚುವರಿ…

Read More

ಬೆಂಗಳೂರು: ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ತ್ವರಿತ ವಿಚಾರಣೆ ನಡೆದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದಂತ ಅವರು, ಹುಬ್ಳಳ್ಳಿಯ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ. ಇದು ಅಟ್ರಾಸಿಟಿ ಪ್ರಕರಣವಾಗಿರುವುದರಿಂದ 60 ದಿನಗಳ ಒಳಗಾಗಿ ದೋಷರೋಪ ಪಟ್ಟಿ ಸಲ್ಲಿಸಬೇಕಾಗಿದೆ. ಹೀಗಾಗಿ ಖಾಸಗಿ ಪ್ರಾಸಿಕ್ಯೂಟರ್‌ರನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ ಎಂದಿದ್ದಾರೆ. ಹೆಣ್ಣುಮಗಳೊಬ್ಬಳ ನಿಲುವಿಗೆ ವಿರುದ್ಧವಾಗಿ ಮದುವೆಗೆ ಬಲವಂತಪಡಿಸುವುದು ಅಥವಾ ಮದುವೆ ನಿರಾಕರಿಸುವುದು, ಜಾತಿಯಾಧಾರಿತ ಹಿಂಸೆ -ಹಲ್ಲೆ, ಮರ್ಯಾದಾಗೇಡು ಹತ್ಯೆಯಂತಹ ಘಟನೆಗಳು ಇಡೀ ಮಾನವ ಸಮಾಜ ತಲೆತಗ್ಗಿಸುವಂತಹ ಹೀನ ಕೃತ್ಯಗಳು. ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಇದನ್ನು ಸಹಿಸುವುದಿಲ್ಲ. ಮುಂದೆ ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ಹಾಗೂ ಜನರಲ್ಲಿ ಕಾನೂನಿನ ಬಗ್ಗೆ ಅರಿವು…

Read More

ಬಳ್ಳಾರಿ: ಜಿಲ್ಲೆಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದು ಫೈರಿಂಗ್ ನಡೆದಿತ್ತು. ಈ ಗುಂಡಿನ ದಾಳಿಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿದ್ದನು. ಈ ಘಟನೆ ಸಂಬಂಧ ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಬಂಧಿಸಲಾಗಿದೆ. ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕೈ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದಾಗ ಸ್ಥಳದಲ್ಲಿದ್ದ 9 ಗನ್ ಮ್ಯಾನ್ ಗಳ ಪೈಕಿ ಓರ್ವನನ್ನು ಬಂಧಿಸಲಾಗಿದೆ.  ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳಾದ ಬಲ್ಜಿತ್ ಸಿಂಗ್, ಮಹೇಂದ್ರ ಸಿಂಗ್, ಗುರುಚರಣ್ ಸಿಂಗ್, ಶಾಸಕ ಭರತ್ ರೆಡ್ಡಿ ಸರ್ಕಾರಿ ಗನ್ ಮ್ಯಾನ್ ಬಸವರಾಜ್, ಶಾಸಕ ಜನಾರ್ದನ ರೆಡ್ಡಿಯ ನಾಲ್ವರು ಸರ್ಕಾರಿ ಗನ್ ಮ್ಯಾನ್, ಮಾಜಿ ಸಚಿವ ಬಿ.ಶ್ರೀರಾಮುಲು ಗನ್ ಮ್ಯಾನ್ ವಶಕ್ಕೆ ಪಡೆಯಲಾಗಿದೆ. ಈವರೆಗೆ ಒಟ್ಟು 9 ಗನ್ ಮ್ಯಾನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. https://kannadanewsnow.com/kannada/who-said-janardhana-reddy-should-get-security-from-america-or-not-dcm-dks/…

Read More

ಬೆಂಗಳೂರು : “ಬಳ್ಳಾರಿ ಗಲಭೆ ಬಗ್ಗೆ ಎಚ್.ಎಂ.ರೇವಣ್ಣ ಅವರು ಒಳ್ಳೆಯ ಮಾಹಿತಿಗಳನ್ನು ಪಡೆದುಕೊಂಡು ಬಂದಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಅರಮನೆ ಮೈದಾನದ ಬಳಿ ಮಾಧ್ಯಮಗಳಿಗೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಬಳ್ಳಾರಿ ಗಲಭೆ ಕುರಿತಾಗಿ ಎಚ್.ಎಂ.ರೇವಣ್ಣ ಅವರ ಸಮಿತಿ ವರದಿ ನೀಡಿದೆಯೇ ಎಂದಾಗ, “ಅಧಿಕೃತ ಹಾಗೂ ಅನಧಿಕೃತ ವಿಚಾರಗಳನ್ನು ಭೇಟಿ ಮಾಡಿ ತಿಳಿಸಿದ್ದಾರೆ” ಎಂದರು. ವಾಲ್ಮೀಕಿ ಮಹರ್ಷಿ ಎಲ್ಲಾ ಸಮುದಾಯಕ್ಕೆ ಸೇರಿದವರು “ಎಲ್ಲಾ ಕಡೆಯೂ ಪ್ರತಿಮೆಗಳನ್ನು ಇಡುತ್ತಾರೆ. ಇದಕ್ಕೆ ಅಸೂಯೆ ಏಕೆ ಪಡಬೇಕು. ವಾಲ್ಮೀಕಿ ಮಹರ್ಷಿಯವರು ಒಂದು ಸಮುದಾಯಕ್ಕೆ ಸೇರಿದವರೇ? ಅವರು ಎಲ್ಲಾ ಸಮುದಾಯದ ಆಸ್ತಿ. ಅವರು ಬರೆದಿರುವ ರಾಮಯಣವನ್ನು ಎಲ್ಲರೂ ಓದುವುದಿಲ್ಲವೇ?. ಹೀಗಿರುವಾಗ ಅವರ ಬ್ಯಾನರ್ ಹಾಕಲು ಜನಾರ್ಧನ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದು ಸರಿಯಲ್ಲ” ಎಂದರು. ಜಡ್ ಪ್ಲಸ್ ಸೆಕ್ಯುರಿಟಿ ನೀಡಿ ಎಂದು ಜನಾರ್ದನ ರೆಡ್ಡಿ ಅವರು ಪತ್ರ ಬರೆದಿರುವ ಬಗ್ಗೆ ಕೇಳಿದಾಗ, “ಜಡ್ ಆದರೂ ಕೇಳಲಿ. ಇರಾನ್, ಅಮೆರಿಕಾದಿಂದಾದರೂ ಸೆಕ್ಯುರಿಟಿ ತೆಗೆದುಕೊಂಡು ಬರಲಿ.‌ ಇವರು…

Read More

ಧಾರವಾಡ : ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜನೆವರಿ 12, 2025 ರಿಂದ ಜನೆವರಿ 18, 2026 ರವರೆಗೆ ಬೆಳಿಗ್ಗೆ 6:30 ಗಂಟೆಯಿಂದ 9 ಗಂಟೆಯವರೆಗೆ ಧಾರವಾಡ ಪೊಲೀಸ್ ಕವಾಯತು ಮೈದಾನ ಡಿ.ಎ.ಆರ್ ಘಟಕದಲ್ಲಿ ನಾಗರಿಕ ಬಂದೂಕು ತರಬೇತಿಯನ್ನು ಆಯೋಜಿಸಲಾಗಿದೆ. ನಾಗರಿಕ ಬಂದೂಕು ತರಬೇತಿಯನ್ನು ಪಡೆಯಲು ಇಚ್ಛಿಸುವ, ಧಾರವಾಡ ಜಿಲ್ಲಾ ವ್ಯಾಪ್ತಿಯ ನಾಗರಿಕರು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳನ್ನು ಅಥವಾ ಜಿಲ್ಲಾ ಆಯುಧಗಾರರು. ಡಿ.ಎ.ಆರ್. ಧಾರವಾಡ (ವೈ.ಎಂ. ಕಡೇಮನಿ, ಮೊ.ಸಂ: 872252206) ಅವರನ್ನು ಸಂಪರ್ಕಿಸಬಹುದು. ನಿಗಧಿತ ನಮೂನೆಯಲ್ಲಿ ವಿವರಗಳನ್ನು ತುಂಬಿ, ಇತ್ತೀಚಿನ 03 ಪಾಸ್ ಪೋರ್ಟ್ ಸೈಜ್ ಫೋಟೋ, ಆಧಾರ ಕಾರ್ಡ ಪ್ರತಿಯೊಂದಿಗೆ ಜನವರಿ 09, 2026 ರೊಳಗೆ ಪೊಲೀಸ್ ಠಾಣೆಗೆ ಸಲ್ಲಿಸುವುದು ಹಾಗೂ ನಾಗರಿಕ ಬಂದೂಕು ತರಬೇತಿಗೆ ತಗಲುವ ವೆಚ್ಚವನ್ನು ಅರ್ಜಿದಾರರಿಂದ ಡಿ.ಎ.ಆರ್. ಘಟಕದಲ್ಲಿ ನಗದು ರೂಪದಲ್ಲಿ ಪಡೆದುಕೊಂಡು ಒಟ್ಟು 07 ದಿನಗಳ ತರಬೇತಿಯನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಾಗೂ ನಾಗರಿಕ ಬಂದೂಕು ತರಬೇತಿಯ ಷರತ್ತುಗಳಿಗಾಗಿ ತಮ್ಮ ತಮ್ಮ ವ್ಯಾಪ್ತಿಯ…

Read More

ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆ ಮುಂದಿನ 20 ರಿಂದ 25 ವರ್ಷಗಳಲ್ಲಿನ ದ್ವಿಗುಣಗೊಳ್ಳಲಿದ್ದು, ನಗರದ ಮೂಲ ಸೌಕರ್ಯ ಕೊರತೆ ನಿವಾರಿಸಲು 1.5 ಲಕ್ಷ ಕೋಟಿ ರೂ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಕಟಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಶ್ರೀ ಮಹಾವೀರ್ ಜೈನ್ ಶಿಕ್ಷಣ ಸಂಘದ ಬಿಬಿಯುಎಲ್ ಜೈನ ವಿದ್ಯಾಲಯ 40 ವರ್ಷ ಪೂರೈಸಿದ ಮತ್ತು ಸಿಬಿ ಭಂಡಾರಿ ಜೈನ್ ಕಾಲೇಜಿನ 25 ವರ್ಷಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ನಗರದ ಮೂಲ ಸೌಕರ್ಯದ ಸ್ವರೂಪವನ್ನು ಬದಲಿಸಬೇಕಿದೆ. ಇಲ್ಲಿರುವ ಎಲ್ಲರಿಗೂ ಸಂಚರಿಸಲು ಸ್ವಂತ ವಾಹನಗಳು ಬೇಕು. ಯಾರೂ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಓಡಾಡುವುದಿಲ್ಲ. 1.4 ಕೋಟಿ ಜನ ಸಂಖ್ಯೆ ಇದ್ದರೆ 1.3 ಕೋಟಿ ವಾಹನಗಳಿವೆ. ಹಾಗಾಗಿ ಸಂಚಾರಿ ಒತ್ತಡದ ಸಮಸ್ಯೆ ತೀವ್ರವಾಗಿದೆ. ಬೆಂಗಳೂರು ನಗರದ ಜವಾಬ್ದಾರಿ ತೆಗೆದುಕೊಂಡ ನಂತರ ತಾವು ಸೌಕರ್ಯಕ್ಕೆ ಹೂಡಿಕೆಗೆ ಆದ್ಯತೆ ಕೊಡುತ್ತಿದ್ದೇನೆ. ಸಂಚಾರಿ ಒತ್ತಡ ಇದ್ದರೂ ಸಹ ಯಾರೂ ಬೆಂಗಳೂರು ಬಿಟ್ಟು ಹೋಗಲು ತಯಾರಿಲ್ಲ…

Read More

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್‌ 23 ಮತ್ತು 24ರಂದು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ನಡೆಸಲಿದ್ದು, ಜನವರಿ 17ರಿಂದ ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. UGCET-26: 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (UGCET-26) ಯನ್ನು ಏಪ್ರಿಲ್ 23 ಮತ್ತು 24ರಂದು ನಡೆಸಲಾಗುವುದು ಎಂದು ಡಾ.ಎಂ.ಸಿ ಸುಧಾಕರ್ ಘೋಷಿಸಿದ್ದಾರೆ. ಹೊರನಾಡು ಮತ್ತು ಗಡಿ ನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.22ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜನವರಿ 17ರಿಂದ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಚಿವರು ಇತರ ಪರೀಕ್ಷೆಗಳ ವೇಳಾ ಪಟ್ಟಿಯನ್ನೂ ಪ್ರಕಟಿಸಿದರು. ಕ್ರೈಸ್ ಪರೀಕ್ಷೆ ಮಾರ್ಚ್ 1, ಪಿಜಿಸಿಇಟಿ (ಎಂಬಿಎ, ಎಂಸಿಎ) ಪರೀಕ್ಷೆ ಮೇ 14ರಂದು, ಪಿಜಿಸಿಇಟಿ (ಎಂಇ/ಎಂ.ಟೆಕ್) ಹಾಗೂ ಡಿಸಿಇಟಿ ಪರೀಕ್ಷೆಗಳು ಮೇ 23ರಂದು ನಡೆಯಲಿವೆ. ಎಂಎಸ್ಸಿ ನರ್ಸಿಂಗ್, ಎಂಪಿಟಿ, ಎಂ.ಎಸ್ಸಿ-ಎಎಚ್ ಎಸ್ ಪರೀಕ್ಷೆ ಗಳು ಜು.18ರಂದು, ಅಕ್ಟೋಬರ್ 11ರಂದು…

Read More