Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಮರು ನಿಗದಿ ಮಾಡಿ, ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಸುರಲ್ಕರ್ ವಿಕಾಸ ಕಿಶೋರ್ ಅವರು ಜ್ಞಾಪನಾದೇಶ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಕೈಗೊಳ್ಳುವುದು, ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಅಧಿಕಾರಿಗಳನ್ನು ಹಾಗೂ ಶಿಕ್ಷಕರನ್ನು ಹಾಗೂ ಇತರೆ ಸಿಬ್ಬಂದಿಗಳು ಕೆಲಸ ನಿರ್ವಹಿಸುವಂತೆ ಆದೇಶಿಸಿದ. ಸದರಿ ಆದೇಶದಂತೆ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಸಮೀಕ್ಷೆಯನ್ನು ಗ್ರೇಟರ್ ಬೆಂಗಳೂರು ಆಥಾರಿಟಿ ವ್ಯಾಪ್ತಿಯಲ್ಲಿ ದಿನಾಂಕ:…
ಬೆಂಗಳೂರು: ನಗರದಲ್ಲಿ ಆನ್ ಲೈನ್ ನಲ್ಲಿ ಹೂಡಿಕೆ ಮಾಡಿಸಿಕೊಂಡು ವಂಚಿಸುತ್ತಿದ್ದ ಜಾಲವನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ 8 ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಜನರನ್ನು ಆನ್ ಲೈನ್ ನಲ್ಲಿ ಹೂಡಿಕೆ ಮಾಡುವಂತೆ ಆರೋಪಿಗಳು ಪ್ರಚಾರ ಮಾಡುತ್ತಿದ್ದರು. ಫೇಸ್ ಬುಕ್, ವಾಟ್ಸ್ ಆಪ್, ಇನ್ ಸ್ಟಾಗ್ರಾಂ ಮೂಲಕ ಹೂಡಿಕೆ ಮಾಡುವಂತೆ ಆಮಿಷವನ್ನು ಒಡ್ಡುತ್ತಿದ್ದರು. ಈ ಆಮಿಷಕ್ಕೆ ಒಳಗಾದಂತ ಜನರು ದೇಶ, ವಿದೇಶಗಳಿಂದಲೂ ಆನ್ ಲೈನ್ ಮೂಲಕ ಹೂಡಿಕೆ ಮಾಡಿದ್ದರು. ಹೆಚ್ಚು ಲಾಭಾಂಶ ನೀಡೋದಾಗಿ ಹೂಡಿಕೆ ಮಾಡಿಸಿಕೊಂಡಿದ್ದಂತ ಆರೋಪಿಗಳು, ಹಣವನ್ನು ಹಿಂದಿರುಗಿಸದೇ ವಂಚಿಸುತ್ತಿದ್ದರು. ಈ ಬಗ್ಗೆ ಸಾರ್ವಜನಿಕರು ದೂರು ನೀಡಿದ ಹಿನ್ನಲೆಯಲ್ಲಿ ಕೆಂಗೇರಿ ಠಾಣೆಯ ಪೊಲೀಸರು ಬೆಂಗಳೂರಿನ 7 ಕಡೆಗಳಲ್ಲಿ ದಾಳಿ ನಡೆಸಿದ್ದರು. ಈ ದಾಳಿಯ ವೇಳೆಯಲ್ಲಿ 8 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 19 ಲ್ಯಾಪ್ ಟಾಪ್, 40 ಮೊಬೈಲ್, 11 ಪೆನ್ ಡ್ರೈವ್, 42 ಸಿಮ್ ಕಾರ್ಡ್, 4 ಐಪ್ಯಾಡ್, 2…
ಶಿವಮೊಗ್ಗ: ಸಾಗರದ ಬುಲೆಟ್ ಬೈಕ್ ಪ್ರಿಯರ ಆಸೆ ಈಡೇರಿಸಲು ಆರ್ ಬಿ ಡಿ ಮೋಟಾರ್ಸ್ ಅಣಿಯಾಗಿದೆ. ಹೊಸ ಹೊಸ ವಿನೂತನ ಮಾದರಿಯ ರಾಯಲ್ ಎನ್‌ಫೀಲ್ಡ್ ಮೋಟಾರ್ ಬೈಕ್ ಗಳೊಂದಿಗೆ ಸಾಗರದಲ್ಲಿ ಹೊಸ ಶೋ ರೂಂ ಗ್ರಾಂಡ್ ಓಪನ್ ಆಗಲಿದೆ. ಈ ಕುರಿತಂತೆ ಮಾಹಿತಿಯನ್ನು ಹಂಚಿಕೊಂಡಿರುವಂತ ಆರ್ ಬಿ ಡಿ ಮೋಟಾರ್ಸ್ ನ RBD ಮಹೇಶ್ ಅವರು, ಸಾಗರದಲ್ಲಿ ರಾಯಲ್ ಎನ್‌ಫೀಲ್ಡ್ ಮೋಟಾರ್ ಶೋ ರೂಂ ತೆರೆಯಬೇಕು ಎಂಬುದು ಬಹು ದಿನದ ಕನಸಾಗಿತ್ತು. ಅದು ನನಸಾಗಿದೆ. ಬುಲೆಟ್ ಬೈಕ್ ಪ್ರಿಯರ ಆಸೆ ಈಡೇರಿಸಲು ಆರ್ ಬಿ ಡಿ ಮೋಟಾರ್ಸ್ ನಿಂದ ಅಕ್ಟೋಬರ್.10ರಂದು ರಾಯಲ್ ಎನ್‌ಫೀಲ್ಡ್ ಬೈಕ್ ಮಾರಾಟ ಮಳಿಗೆ ಆರಂಭಗೊಳ್ಳುತ್ತಿದೆ ಎಂದರು. ಸಾಗರದ ಲೋಹಿಯಾ ನಗರ, ವಾರ್ಡ್ ನಂ.9, ಬಿಹೆಚ್ ರಸ್ತೆ, ರಾಷ್ಟ್ರೀಯ ಹೆದ್ದಾರಿ 69ರಲ್ಲಿ ರಾಯಲ್ ಎನ್ ಫೀಲ್ಡ್ ಶೋ ರೂಂ ಗ್ರ್ಯಾಂಡ್ ಓಪನಿಂಗ್ ಆಗಲಿದೆ. ಸಾಗರದ ಸಾರ್ವಜನಿಕರು, ಬುಲೆಟ್ ಪ್ರಿಯರು ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಮನವಿ ಮಾಡಿದ್ದಾರೆ. ರಾಯಲ್ ಎನ್‌ಫೀಲ್ಡ್ ಎಲ್ಲಾ…
ಬೆಂಗಳೂರು ; ನಾಡಿನ ವಿಖ್ಯಾತ ಹಾಸನಾಂಭ ಉತ್ಸವದಲ್ಲಿ ಪ್ರಸ್ತುತ ವರ್ಷದಿಂದ ವಿಐಪಿ ಸಂಪ್ರದಾಯಕ್ಕೆ ಬ್ರೇಕ್ ನೀಡಿ ಜನಸ್ನೇಹಿ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಕಾಸಸೌಧದಲ್ಲಿ ಸೋಮವಾರ ಹಾಸನ ಜಿಲ್ಲೆಯ ಶಾಸಕರು ಸಂಸದರು ಹಾಗೂ ಅಧಿಕಾರಿಗಳು ಜೊತೆ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಹಾಸನಾಂಭ ಉತ್ಸವದಲ್ಲಿ ವಿಐಪಿ ಸಂಸ್ಕೃತಿಯಿಂದ ಸ್ಥಳೀಯರು ಬೇಸತ್ತಿದ್ದು, ಈ ವರ್ಷದಿಂದ ಈ ಸಂಸ್ಕೃತಿಕ ತಿಲಾಂಜಲಿ ಹಾಡಲಾಗುವುದು. ಅಲ್ಲದೆ, ಜನಸ್ನೇಹಿ ಹಾಸನಾಂಭ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಭರವಸೆ ನೀಡಿದರು. “ಕಳೆದ ವರ್ಷ ಹಾಸನದಲ್ಲಿ ವಿಐಪಿ ಗಳ ಎಸ್ಕಾರ್ಟ್ಗಳದ್ದೇ ಸದ್ದು ಹೆಚ್ಚಾಗಿತ್ತು. ಆದರೆ, ಈ ವರ್ಷ ಇದಕ್ಕೆ ಅವಕಾಶ ನೀಡಲಾಗುವುದಿಲ್ಲ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಮಾಜಿ ಪ್ರಧಾನಿಗಳಿಗೆ ಮಾತ್ರ ಎಸ್ಕಾರ್ಟ್ ವ್ಯವಸ್ಥೆ ನೀಡಲಾಗುವುದು” ಎಂದು ಮಾಹಿತಿ ನೀಡಿದರು. ಮುಂದುವರೆದು, “ ಶಾಸಕರು, ಸಚಿವರು ನ್ಯಾಯಾಧೀಶರು, ಕ್ರೀಡಾಪಟುಗಳು, ಸಿನಿಮಾ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಬರೋಬ್ಬರಿ 131 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಡೈರಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರ್ ಆಫ್ ಪೊಲೀಸ್ ಅವರು ವರ್ಗಾವಣೆ ಆದೇಶ ಹೊರಡಿಸಿದ್ದಾರೆ. ಎಸ್ ಎಲ್ ಸಾಗರ್ ಅವರನ್ನು ಚಾಮರಾಜನಗರದ ಸಂತೇಮಾರನಹಳ್ಳಿ ವೃತ್ತಕ್ಕೆ ವರ್ಗಾವಣೆ ಮಾಡಿದ್ದರೇ, ಬಸವರಾಜು ಅವರನ್ನು ಡಿಸಿಆರ್ ಇಗೆ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗದ ಸೊರಬ ವೃತ್ತದ ಪೊಲೀಸ್ ಇನ್ಸ್ ಪೆಕ್ಟರ್ ರಾಜಶೇಖರಯ್ಯ ಎಲ್ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಮುದ್ದುರಾಜ ವೈ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ, ಬೆಂಗಳೂರು ನಗರ ಸಂಚಾರ ಮತ್ತು ಯೋಜನೆಯ ಪೊಲೀಸ್ ಇನ್ಸ್ ಪೆಕ್ಟರ್ ಅಶ್ವಥನಾರಾಯಣ ಸ್ವಾಮಿ ಬಿಎನ್ ಅವರನ್ನು ಹಲಸೂರು ಗೇಟ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಸವದತ್ತಿ ಪೊಲೀಸ್ ಠಾಣೆಯ ಧರ್ಮಾಕರ್ ಎಸ್ ಧರ್ಮಟ್ಟಿ ಅವರನ್ನು ಬೆಳಗಾವಿಯ ಕಂಗ್ರಾಳಿ ಕೆ ಎಸ್ ಆರ್ ಪಿ ಪೊಲೀಸ್ ತರಬೇತಿ…
ಬೆಂಗಳೂರು: ರಾಜ್ಯದ ಶಿಕ್ಷಕರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಜೊತೆಗೆ ಶಾಲಾ ತರಗತಿಯನ್ನು ನಡೆಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಆದೇಶಿಸಿದೆ. ಈ ಮೂಲಕ ರಾಜ್ಯದ ಜಾತಿಗಣತಿ ಸಮೀಕ್ಷೆಯಲ್ಲಿ ತೊಡಗಿದ್ದಂತ ಶಿಕ್ಷಕರಿಗೆ ಸರ್ಕಾರ ಶಾಕ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಕೈಗೊಳ್ಳುವುದು, ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಅಧಿಕಾರಿಗಳನ್ನು ಹಾಗೂ ಶಿಕ್ಷಕರನ್ನು ಹಾಗೂ ಇತರ ಸಿಬ್ಬಂದಿಗಳು ಕೆಲಸ ನಿರ್ವಹಿಸುವಂತೆ ಆದೇಶಿಸಿದೆ. ಸದರಿ ಆದೇಶದಂತೆ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಸಮೀಕ್ಷೆಯನ್ನು ಗ್ರೇಟರ್ ಬೆಂಗಳೂರು ಆಥಾರಿಟಿ ವ್ಯಾಪ್ತಿಯಲ್ಲಿ ದಿನಾಂಕ: 04-10-2025 ರಿಂದ ಪ್ರಾರಂಭಿಸಲಾಗಿದ್ದು, ರಾಜ್ಯದ ಇತರೆ ಭಾಗಗಳಲ್ಲಿ ದಿನಾಂಕ:…
ಬೆಂಗಳೂರು: ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಬ್ಬಂದಿಗಳ ವಾರ್ಷಿಕ ಆರೋಗ್ಯ ತಪಾಸಣೆಯ ವೆಚ್ಚವನ್ನು ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತು ಡೈರೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜರಲ್ ಆಫ್ ಪೊಲೀಸ್ ಅವರ ಕಚೇರಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಗೆ ವಾರ್ಷಿಕ ಆರೋಗ್ಯ ತಪಾಸಣೆಗಾಗಿ ವೈದ್ಯಕೀಯ ವೆಚ್ಚ ರೂ. 1000/- ಗಳಿಂದ ರೂ. 1500/- (ಒಂದು ಸಾವಿರದ ಐದು ನೂರು ರೂಪಾಯಿಗಳು ಮಾತ್ರ) ಗಳಿಗೆ ಹೆಚ್ಚಿಸಿ ಆದೇಶಿಸಲಾಗಿದ್ದು, ಸದರಿ ಸರ್ಕಾರದ ಆದೇಶವನ್ನು ಸೂಕ್ತ ಕ್ರಮಕ್ಕಾಗಿ ಈಗಾಗಲೇ ಉಲ್ಲೇಖಿತ (4)ರ ಸುತ್ತೋಲೆಯಲ್ಲಿ ತಿಳಿಸಲಾಗಿರುತ್ತದೆ. ಆದರೆ ಇದಕ್ಕೆ ತಗಲುವ ವೆಚ್ಚವನ್ನು ಲೆಕ್ಕ ಶೀರ್ಷಿಕೆ 2055-00-001-0-01-021 (ವೈದ್ಯಕೀಯ ವೆಚ್ಚ ಮರುಪಾವತಿ)ಗಳ ಅಡಿಯಲ್ಲಿ ಭರಿಸತಕ್ಕದ್ದು ಎಂದು ನಮೂದಿಸಲಾಗಿರುತ್ತದೆ. ಆದರೆ ಸದರಿ ಲೆಕ್ಕ ಶೀರ್ಷಿಕೆ Direction & Administration ರಡಿಯಲ್ಲಿರುವ ಘಟಕಗಳಿಗೆ ಮಾತ್ರ ಸಂಬಂಧಿಸಿದ್ದು, ಇತರ ಘಟಕಗಳು ಒಳಗೊಂಡಿರುವುದಿಲ್ಲ. ಆದ್ದರಿಂದ ಸರ್ಕಾರವು ಉಲ್ಲೇಖಿತ (5)ರ ನಡವಳಿ ಆದೇಶದಲ್ಲಿ ಪೊಲೀಸ್ ಸಿಬ್ಬಂದಿಗಳ ವಾರ್ಷಿಕ ಆರೋಗ್ಯ…
ಮೈಸೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸುವ ಸಲುವಾಗಿ ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ವಿಸ್ತರಿಸಲಾಗಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ಗಳನ್ನು ಪೂರ್ಣಗೊಳಿಸಲಿದೆ. ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ಎಕ್ಸ್‌ಪ್ರೆಸ್ ವಿಶೇಷ ರೈಲು ಅಕ್ಟೋಬರ್ 17 ಮತ್ತು 24 ರಂದು ರಾತ್ರಿ 10.30ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು, ಮರುದಿನ ಮುಂಜಾನೆ 4.15ಕ್ಕೆ ತಾಳಗುಪ್ಪ ತಲುಪಲಿದೆ. ಮತ್ತೊಂದೆಡೆ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಅಕ್ಟೋಬರ್ 18 ಮತ್ತು 25 ರಂದು ತಾಳಗುಪ್ಪದಿಂದ ಬೆಳಗ್ಗೆ 10 ಗಂಟೆಗೆ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ. ಈ ವಿಶೇಷ ರೈಲು, ಎರಡೂ ಮಾರ್ಗದಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರಂ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ಈ ವಿಶೇಷ ರೈಲಿನಲ್ಲಿ ಒಟ್ಟು 20 ಬೋಗಿಗಳಿರಲಿವೆ. ಅವುಗಳಲ್ಲಿ ಒಂದು ಎಸಿ ಟು-ಟಯರ್, ಎರಡು ಎಸಿ ಥ್ರೀ-ಟಯರ್,…
ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…
ಬೆಂಗಳೂರು: ಇಂದಿನ ಡಿಜಿಟಲ್ ಯುಗದಿಂದಾಗಿ ಪುಸ್ತಕ ಓದುವ ಹವ್ಯಾಸವು ದೂರವಾಗಿರುವುದು ವಿಷಾದಕರ. ಪತ್ರಕರ್ತರು ನಿರಂತರವಾಗಿ ಓದುವ ಹವ್ಯಾಸದಲ್ಲಿ ತೊಡಗಿಕೊಂಡರೆ ಮಾತ್ರ ಜ್ಞಾನ ಸಂಪಾದಿಸಿಕೊಂಡು, ವೃತ್ತಿ ಬದ್ಧತೆ ತೋರಿಸಲು ಸಾಧ್ಯ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಅಭಿಪ್ರಾಯಪಟ್ಟರು. ಕಂದಾಯ ಭವನದಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ಕಚೇರಿಯಲ್ಲಿ ಸಂಘದ ಸದಸ್ಯರಿಗಾಗಿ ಸ್ಥಾಪಿಸಿರುವ ಗ್ರಂಥಾಲಯ ಸೌಲಭ್ಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಬಹುತೇಕ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳೇ ರಾರಾಜಿಸುತ್ತವೆ. ಪತ್ರಕರ್ತರು ಸದಾ ವಸ್ತುನಿಷ್ಠ ವರದಿಗಳಿಗೆ ಗಮನ ನೀಡಿದರಷ್ಟೇ ಪತ್ರಿಕೋದ್ಯಮ ಮೌಲ್ಯ ಉನ್ನತಿಗೇರಲು ಸಾಧ್ಯ ಎಂದೂ ಅವರು ಹೇಳಿದರು. ಜಿಲ್ಲಾಧಿಕಾರಿಯಾಗಿ ನಾನು ಬಂದ ಮೇಲೆ ಬೆಂಗಳೂರಿನಲ್ಲಿ ಸುಮಾರು 300 ಎಕರೆ ಅಕ್ರಮ ಒತ್ತುವರಿ ತೆರವು ಮಾಡಲಾಗಿದೆ. ಯಾವುದೇ ಸಂದರ್ಭಗಳಲ್ಲಿ ಯಾವುದೇ ಒತ್ತಡಕ್ಕೂ ಮಣಿಯದೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಲು ತನ್ನಿಂದ ಸಾಧ್ಯವಾಗಿದೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಹಿರಿಯ ಪತ್ರಕರ್ತರಾದ ಕಂ.ಕ.ಮೂರ್ತಿ, ಪುಸ್ತಕಗಳು ಜ್ಞಾನದ ಭಂಡಾರವಾಗಿದ್ದು, ಪತ್ರಕರ್ತರು ಪುಸ್ತಕಗಳ ಓದಿನತ್ತ ಹೆಚ್ಚಿನ…














