Author: kannadanewsnow09

ಬೆಂಗಳೂರು: ಹಾಸನ ಪೆನ್ ಡ್ರೈವ್ ಕೇಸ್ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಹೊರ ಹಾಕಿದ್ದಾರೆ. ಅಶ್ಲೀಲ ವೀಡಿಯೋ ಕೇಸ್ ಸಂಬಂಧ ಸತ್ಯ ಆದಷ್ಟು ಬೇಗ ಹೊರ ಬರಲಿದೆ ಎಂಬುದಾಗಿ ಹೇಳಿದ್ದಾರೆ. ಇಂದು ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಈ ಬಗ್ಗೆ ಬರೆದು ಪೋಸ್ಟ್ ಮಾಡಿರುವಂತ ಅವರು, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ತಿಳಿಸಿದ್ದಾರೆ. ಇನ್ನೂ ಸಿಐಡಿ ಎಸ್ಐಟಿ ತಂಡ ನೀಡಿರುವಂತ ನೋಟಿಸ್ ಗೆ ತಮ್ಮ ವಕೀಲರ ಮೂಲಕ ಪ್ರತ್ಯುತ್ತರ ನೀಡಿರುವಂತ ಸಂಸದ ಪ್ರಜ್ವಲ್ ರೇವಣ್ಣ ಅವರು, ನನ್ನ ಕಕ್ಷಿದಾರರು ವಿದೇಶದಲ್ಲಿ ಇದ್ದಾರೆ. ಅವರಿಗೆ ನೋಟಿಸ್ ನೀಡಿರುವ ಬಗ್ಗೆ ತಿಳಿಸಲಾಗಿದೆ. 7 ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗಲಿದ್ದಾರೆ. ಅಲ್ಲಿಯವರೆಗೆ ಕಾಲಾವಕಾಶ ನೀಡುವಂತೆ ಕೋರಿದ್ದಾರೆ. ಒಟ್ಟಾರೆಯಾಗಿ ಮೇ.3ರಂದು ಬೆಂಗಳೂರಿಗೆ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಿಂದ ಬರಲಿದ್ದಾರೆ ಎನ್ನಲಾಗಿತ್ತು. ಇದೀಗ…

Read More

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಭಾಗಿಯಾಗಿ, ವಿದೇಶದಲ್ಲಿ ತಲೆ ಮರೆಸಿಕೊಂಡಿರುವಂತ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಸಿಎಂ ಸಿದ್ಧರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಇಂದು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವಂತ ಸಿಎಂ ಸಿದ್ಧರಾಮಯ್ಯ ಅದರಲ್ಲಿ, 2024 ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಮತ್ತು ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಅಸಂಖ್ಯಾತ ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಮಾಡಿದ್ದಾರೆ ಎಂಬ ಗಂಭೀರ ಪ್ರಕರಣ ನಿಮಗೆ ತಿಳಿದಿರಬೇಕು. ಹಾಸನ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಎದುರಿಸುತ್ತಿರುವ ಆರೋಪಗಳು ಭಯಾನಕ ಮತ್ತು ನಾಚಿಕೆಗೇಡಿನ ಸಂಗತಿಯಾಗಿದ್ದು, ಇವು ದೇಶದ ಆತ್ಮಸಾಕ್ಷಿಯನ್ನು ಅಲುಗಾಡಿಸಿವೆ ಎಂದಿದ್ದಾರೆ. ನಮ್ಮ ಸರ್ಕಾರವು 28/04/2024 ರಂದು ಅಪರಾಧ ತನಿಖಾ ಇಲಾಖೆ (ಸಿಐಡಿ) ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದೆ ಮತ್ತು ತನಿಖೆ ಸರಿಯಾದ ಶ್ರದ್ಧೆಯಿಂದ ಪ್ರಾರಂಭವಾಗಿದೆ. ಹಲವಾರು ಮಹಿಳೆಯರ ವಿರುದ್ಧದ ಅಪರಾಧಗಳ ನಿಜವಾದ…

Read More

ಯಾದಗಿರಿ : “ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ನಾರಿ ಶಕ್ತಿ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವವಿದ್ದರೆ ಮೊದಲು ಸಂತ್ರಸ್ತರ ಮನೆಗೆ ಹೋಗಿ ಆ ಮಹಿಳೆಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಯಾದಗಿರಿಯ ದೇವತ್ಕಲ್ ನ ಹೆಲಿಪ್ಯಾಡ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು. ಪೆನ್ ಡ್ರೈವ್ ಪ್ರಕರಣದ ಹಿಂದೆ ಮಹಾನಾಯಕರ ಕೈವಾಡವಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ; “ದೇವರಾಜೇ ಗೌಡ ಈ ಪೆನ್ ಡ್ರೈವ್ ವಿಚಾರವಾಗಿ ಯಾರನ್ನೆಲ್ಲಾ ಭೇಟಿ ಮಾಡಿದ್ದರು ಎಂದು ನಮ್ಮ ವಕ್ತಾರರು ವಿವರಿಸಿದ್ದಾರೆ. ಈ ವಿಚಾರವಾಗಿ ದೇವರಾಜೇ ಗೌಡ, ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದರು, ಅಲ್ಲದೇ ಬಿಜೆಪಿ ನಾಯಕರಿಗೆ ಈ ವಿಚಾರ ತಿಳಿಸಿದ್ದರು. ನಾವು ಈ ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿದ್ದರೆ ಬೇರೆ ರೀತಿಯೇ ಮಾಡಬಹುದಾಗಿತ್ತು. ನಮಗೆ ಅದರ ಅಗತ್ಯವಿಲ್ಲ. ಈ ವಿಚಾರಗಳ ಬಗ್ಗೆ ನಾನು…

Read More

ಬೆಂಗಳೂರು: ಪೆನ್ ಡ್ರೈವ್ ಬಿಡುಗಡೆಗೂ ಮುನ್ನವೇ, ಬಿಡುಗಡೆ ಮಾಡದಂತೆ ಮೊದಲೇ ಸಂಧಾನವನ್ನು ಪ್ರಜ್ವಲ್ ರೇವಣ್ಣ ನಡೆಸಿದ್ದರು ಎಂಬುದಾಗಿ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರು, ಮಾಜಿ ಪರಿಷತ್ ಸದಸ್ಯರಾಗಿರುವಂತ ರಮೇಶ್ ಬಾಬು ಹೊಸ ಬಾಂಬ್ ಸಿಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಪೆನ್‌ ಡ್ರೈವ್‌ ವಿಚಾರ ಕುಮಾರಸ್ವಾಮಿ ಹಾಗೂ ಬಿಜೆಪಿಯ ಎಲ್ಲಾ ನಾಯಕರಿಗೆ ಮೊದಲೇ ತಿಳಿದಿತ್ತು. ಬಿಜೆಪಿ ನಾಯಕ, ವಕೀಲ ದೇವರಾಜೇಗೌಡ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ಕೂಡ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು ಎಂಬುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಕುಮಾರಸ್ವಾಮಿ ಅವರು ಅನವಶ್ಯಕವಾಗಿ ತಮ್ಮ ಕುಟುಂಬದ ಒಳ ಜಗಳವನ್ನು ಕಾಂಗ್ರೆಸ್‌ ಪಕ್ಷ, ಡಿ.ಕೆ.ಶಿವಕುಮಾರ್ , ಸಿಎಂ ಸಿದ್ದರಾಮಯ್ಯ ಅವರ ಮೇಲೆ ಹಾಕುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ಇವರ ಹೆಸರು ತರುವುದು ಬೇಡ. ತನಿಖೆಯ ಹಾದಿ ತಪ್ಪಿಸುವುದು ಬಿಟ್ಟು ತನಿಖೆ ಪೂರಕವಾಗಿ ನಡೆದುಕೊಳ್ಳಿ. ವಾಸ್ತವತೆಯ ಬಗ್ಗೆ ಮಾತನಾಡಿ ಎಂದು ಒತ್ತಾಯಿಸಿದ್ದಾರೆ. ಬಿಜೆಪಿಗೆ ಜೆಡಿಎಸ್‌ ಮೇಲೆ ಇರುವ ಕೋಪವನ್ನು ಈ ರೀತಿಯಾಗಿ ತೀರಿಸಿಕೊಳ್ಳುವ ಕೆಲಸ…

Read More

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಂಸದ ಡಿ.ಕೆ ಸುರೇಶ್ ಆರೋಪದ ಬೆನ್ನಲ್ಲೇ, ಈಗ ಅಶ್ಲೀಲ ವೀಡಿಯೋ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇ ಹಾಸನದ ಸಂಸದರ ಸರ್ಕಾರಿ ನಿವಾಸದಲ್ಲೇ ನೀಚ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಮೀಪದಲ್ಲೇ ಸಂಸದರ ಸರ್ಕಾರಿ ನಿವಾಸವಿದೆ. 2019ರಲ್ಲಿ ಹೆಚ್.ಡಿ ದೇವೇಗೌಡ ಪ್ರಧಾನಿಯಾಗಿದ್ದಂತ ಸಂದರ್ಭದಲ್ಲಿ ಅವರಿಗೆ ಅನುಕೂಲ ಕಲ್ಪಿಸೋ ಕಾರಣಕ್ಕಾಗಿ ಸರ್ಕಾರದಿಂದಲೇ ಸಂಸದರ ನಿವಾಸವನ್ನು ಕಟ್ಟಿಸಿಕೊಡಲಾಗಿತ್ತು. ಹಾಸನ ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆಯಾದ ನಂತ್ರ, ಅವರಿಗೆ ನಿವಾಸವನ್ನು ಹಸ್ತಾಂತರಿಸಲಾಗಿತ್ತು. ಪ್ರಜ್ವಲ್ ರೇವಣ್ಣ ಅವರು ಹಾಸನಕ್ಕೆ ಬಂದಾಗಲೆಲ್ಲೇ ಸಂಸದರ ನಿವಾಸದಲ್ಲೇ ಉಳಿದು ಕೊಳ್ಳುತ್ತಿದ್ದರಂತೆ. ಎರಡು ಅಂತಸ್ತು ಒಳಗೊಂಡಿರುವಂತ ಸಂಸದರ ನಿವಾಸದಲ್ಲಿ ಕೆಳ ಅಂತಸ್ತು ಹಾಗೂ ಮೊದಲ ಮಹಡಿಯನ್ನು ಒಳಗೊಂಡಿರುವಂತ ನಿವಾಸವಾಗಿದೆ. ಇದೇ ನಿವಾಸದಲ್ಲಿ ಅಂದು ದೇವೇಗೌಡ ಅವರಿಗೆ ಅನುಕೂಲವಾಗಲಿ ಅಂತ ಲಿಫ್ಟ್ ವ್ಯವಸ್ಥೆ ಕೂಡ ಮಾಡಲಾಗಿತ್ತು. ಹಾಸನಕ್ಕೆ ಬಂದಾಗಲೆಲ್ಲ ಸಂಸದ ಪ್ರಜ್ವಲ್ ರೇವಣ್ಣ…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡದಿಂದ ಚುರುಕುಗೊಳಿಸಲಾಗಿದೆ. ಇದೇ ಸಂದರ್ಭದಲ್ಲಿ ನಮಗೆ ತೊಂದ್ರೆ ಕೊಡಬೇಡಿ. ತೊಂದ್ರೆ ಕೊಟ್ರೆ ನಾವು ಆತ್ಮಹತ್ಯೆ ಮಾಡಿಕೊಳ್ತೀವಿ ಎಂಬುದಾಗಿ ವೀಡಿಯೋದಲ್ಲಿರುವಂತ ಸಂತ್ರಸ್ತೆಯರು ಹೇಳಿಕೆ ನೀಡೋದಕ್ಕೆ ಹಿಂದೇಟು ಹಾಕುತ್ತಿರೋದಾಗಿ ತಿಳಿದು ಬಂದಿದೆ. ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಎಸ್ಐಟಿಯಿಂದ ತನಿಖೆ ನಡೆಸಲಾಗುತ್ತಿದೆ. ಎಸ್ಐಟಿಯ ತನಿಖಾ ತಂಡ ದೂರವಾಣಿಯ ಮೂಲಕ ದೂರುದಾರೆ ಸೇರಿದಂತೆ ವೀಡಿಯೋದಲ್ಲಿರುವಂತ ಮಹಿಳೆಯರನ್ನು ಸಂಪರ್ಕಿಸಿ ಹೇಳಿಕೆ ನೀಡೋದಕ್ಕೆ ಮನವೊಲಿಕೆ ಮಾಡೋ ಕಾರ್ಯದಲ್ಲಿ ನಿರತವಾಗಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಹೇಳಿಕೆ ನೀಡುವಂತೆ ಎಸ್ಐಟಿ ತನಿಖಾ ತಂಡ ಮಾಹಿತಿ ಕೋರಿದ್ರೇ, ನಮಗೆ ತೊಂದ್ರೆ ಕೊಟ್ಟರೇ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂಬುದಾಗಿ ಹೇಳುತ್ತಿರೋದಾಗಿ ತಿಳಿದು ಬಂದಿದೆ. ದೂರುದಾರೆ ಬಿಟ್ಟು ಉಳಿದವರು ಪ್ರತಿಕ್ರಿಯೆ ನೀಡೋದಕ್ಕೆ ನಿರಾಕರಿಸಿದ್ದಾರೆ ಎನ್ನಲಾಗಿದೆ. ವೀಡಿಯೋದಲ್ಲಿರುವಂತ ಮಹಿಳೆಯರನ್ನು ಸಂಪರ್ಕಿಸಿ ಎಸ್ಐಟಿ ಹೇಳಿಕೆ ಪಡೆಯೋದಕ್ಕೆ ಪ್ರಯತ್ನಿಸಿದ್ರೂ ಕೂಡ, ಸಂತ್ರಸ್ತೆಯರು ಮಾತ್ರ ಏನು ಹೇಳಲ್ಲ. ಏನು ಕೇಳ್ಬೇಡಿ ಎಂಬುದಾಗಿ ಹಠ ಹಿಡಿದ್ದಾರೆ…

Read More

ಬೆಂಗಳೂರು: ಸುಖಾ ಸುಮ್ಮನೇ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿವರ ಮೇಲೆ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕುರಿತಂತೆ ಆರೋಪ ಮಾಡುತ್ತಿದ್ದಾರೆ. ಆದ್ರೇ ಪ್ರಜ್ವಲ್ ಅಶ್ಲೀಲ ವೀಡಿಯೋ ಬಿಡುಗಡೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯೇ ಕಾರಣ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗ ಮುಖ್ಯಸ್ಥ ರಮೇಶ್ ಬಾಬು ಗಂಭೀರ ಆರೋಪ ಮಾಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರಾದ ರಮೇಶ್‌ ಬಾಬು ಅವರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು. ಪೆನ್‌ ಡ್ರೈವ್‌ ವಿಚಾರ ಕುಮಾರಸ್ವಾಮಿ ಹಾಗೂ ಬಿಜೆಪಿಯ ಎಲ್ಲಾ ನಾಯಕರಿಗೆ ಮೊದಲೇ ತಿಳಿದಿತ್ತು. ಬಿಜೆಪಿ ನಾಯಕ, ವಕೀಲ ದೇವರಾಜೇಗೌಡ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ಕೂಡ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು. ಕುಮಾರಸ್ವಾಮಿ ಅವರು ಅನವಶ್ಯಕವಾಗಿ ತಮ್ಮ ಕುಟುಂಬದ ಒಳ ಜಗಳವನ್ನು ಕಾಂಗ್ರೆಸ್‌ ಪಕ್ಷ, ಡಿ.ಕೆ.ಶಿವಕುಮಾರ್ , ಸಿಎಂ ಸಿದ್ದರಾಮಯ್ಯ ಅವರ ಮೇಲೆ ಹಾಕುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ಇವರ ಹೆಸರು ತರುವುದು ಬೇಡ. ತನಿಖೆಯ ಹಾದಿ ತಪ್ಪಿಸುವುದು…

Read More

ಬೆಂಗಳೂರು: ತಾನು ಸಾವಿರಾರು ಮಹಿಳೆಯರ ಮೇಲೆ ಎಸಗಿರುವ ಕೃತ್ಯವನ್ನು ತಾನೇ ಚಿತ್ರೀಕರಣ ಮಾಡಿಕೊಂಡಿದ್ದಾನೆ. ಇದು ಲೈಂಗಿಕ ಹಗರಣವಲ್ಲ ದೇಶದ ದೊಡ್ಡ ಅತ್ಯಾಚಾರ ಪ್ರಕರಣ ಎಂಬುದಾಗಿ ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಗಂಭೀರ ಆರೋಪ ಮಾಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು,  ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ ಎಂದರು. ರಾಕ್ಷಸೀ ಕೃತ್ಯ ಎಸಗಿರುವ ಪ್ರಜ್ವಲ್‌ ರೇವಣ್ಣ ಅವರು ಮೋದಿ ಪರಿವಾರದ ವ್ಯಕ್ತಿ. ಈತ ಎಸಗಿರುವ…

Read More

ನವದೆಹಲಿ: ಶಿಗೂ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಮತ್ತು ಲಿಲಿಯನ್ ಟೆಕ್ನೋಕ್ಯಾಬ್ ಪ್ರೈವೇಟ್ ಲಿಮಿಟೆಡ್ ಒಳಗೊಂಡ ಅಪ್ಲಿಕೇಶನ್ ಆಧಾರಿತ ಮೋಸದ ಹೂಡಿಕೆ ಯೋಜನೆಗಳ ವಿರುದ್ಧ ಭಾರಿ ಸಮರವನ್ನೇ ಸಾರಿದೆ. ಇಂದು ಕೇಂದ್ರ ತನಿಖಾ ದಳ (Central Bureau of Investigation-CBI) ಒಂಬತ್ತು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ (ಯುಟಿ) 30 ಸ್ಥಳಗಳನ್ನು ಒಳಗೊಂಡ ರಾಷ್ಟ್ರವ್ಯಾಪಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ (ಎನ್ಸಿಆರ್), ರಾಜಸ್ಥಾನ, ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ (ಎನ್ಸಿಆರ್) ಮತ್ತು ರಾಜಸ್ಥಾನದಲ್ಲಿ ತಲಾ ಗರಿಷ್ಠ 6 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಅವರು ಹೇಳಿದರು. ಮೊಬೈಲ್ ಫೋನ್ಗಳು, ಕಂಪ್ಯೂಟರ್ ಹಾರ್ಡ್ ಡ್ರೈವ್ಗಳು, ಸಿಮ್ ಕಾರ್ಡ್ಗಳು, ಎಟಿಎಂ / ಡೆಬಿಟ್ ಕಾರ್ಡ್ಗಳು, ಇಮೇಲ್ ಖಾತೆಗಳು ಮತ್ತು ವಿವಿಧ ದಾಖಲೆಗಳು ಸೇರಿದಂತೆ ಮಹತ್ವದ ಡಿಜಿಟಲ್ ಪುರಾವೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಹಿರಿಯ…

Read More

ಬೆಂಗಳೂರು: ರಾಮನಗರ ಶಾಸಕರಿಗೆ ಸಂಬಂಧಿಸಿದ ವಿಡಿಯೋ ಬಿಡುಗಡೆ ಬಗ್ಗೆ ಕೇಳಿದಾಗ, “ಮಾಡಲಿ ಸಂತೋಷ. ಸಂತ್ರಸ್ತೆ ದೂರು ನೀಡಿದರೆ ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ಸೂಚಿಸುತ್ತೇವೆ” ಎಂದು ಸಂಸದ ಡಿ.ಕೆ ಸುರೇಶ್ ತಿಳಿಸಿದರು. ನಿಮ್ಮ ಆಪ್ತರು ಎಂದು ವಿಡಿಯೋ ವೈರಲ್ ಮಾಡಿದ್ದಾರಾ ಎಂದು ಕೇಳಿದಾಗ, “ಅಂತಹ ನೂರೆಂಟು ಇವೆ. ಬಾಂಬೆ ಬ್ಲೂ ಬಾಯ್ಸ್ ಗಳದ್ದು ಆಯ್ತು, ಯೋಗೇಶ್ವರ್ ಅವರು ಎಲ್ಲ ಮಠಗಳ ಪ್ರವಾಸ ಮಾಡಿದ್ದು ಆಯ್ತಾ? ಮಠದವರು ನಿಮ್ಮ ಬಳಿ ಖಾಸಗಿಯಾಗಿ ಆ ಬಗ್ಗೆ ಮಾತಾಡಿರಬೇಕಲ್ಲವೇ? ಅಮಿತ್ ಶಾ ಬಳಿ ಹೋಗಿ ಕೊಟ್ಟಿದ್ದಾಯ್ತು. ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರು ಬದಲಾವಣೆಯಾಗಲು ಕಾರಣವೇನು? ಅದನ್ನು ಯೋಗೇಶ್ವರ್ ಅವರೇ ಹೇಳಿದ್ದಾರೆ. ಹೀಗಾಗಿ ಒಬ್ಬೊಬ್ಬರದ್ದು ಒಂದೊಂದು ಇರುತ್ತದೆ” ಎಂದು ತಿಳಿಸಿದರು. ಸಂತ್ರಸ್ತೆಯರಿಗೆ ನ್ಯಾಯ ಒದಗಿಸಿಕೊಡುವುದು ಎಷ್ಟು ಮುಖ್ಯವೋ ವಿಡಿಯೋ ಬಿಡುಗಡೆ ಮಾಡಿದವರಿಗೆ ಶಿಕ್ಷೆಯಾಗುವುದು ಅಷ್ಟೇ ಮುಖ್ಯವಲ್ಲವೇ ಎಂದು ಕೇಳಿದಾಗ, “ಯಾರೆಲ್ಲಾ ಕಾನೂನು ಚೌಕಟ್ಟಿನಲ್ಲಿ ತಪ್ಪಿತಸ್ಥರಿದ್ದಾರೆ ಅವರ ವಿರುದ್ಧ ಕ್ರಮ ಜರುಗಿಸಬೇಕು. ಇದು ಒಬ್ಬರ ವಿಚಾರವಲ್ಲ, ನೂಲಿನಂತೆ ಸೀರೆ…

Read More