Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವಿಜಯೇಂದ್ರ ಅವರೇ ನಿಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ನಿಮ್ಮ ಸ್ಥಾನಕ್ಕೆ ದಲಿತ ನಾಯಕರನ್ನು ಕೂರಿಸಿ ಎಂದು ಪತ್ರ ಬರೆಯಿರಿ. ನಿಮ್ಮಿಂದ ಸಲಹೆ ತೆಗೆದುಕೊಳ್ಳುವ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯದಲ್ಲಿ ವಿಜಯೇಂದ್ರ ಅವರು ರಾಜ್ಯಮಟ್ಟದಲ್ಲಿ ಹಾಗೂ ರಾಷ್ಟ್ರಮಟ್ಟದಲ್ಲಿ ಜೆ.ಪಿ.ನಡ್ಡಾ ಅವರು 14ನೇ ಅಧ್ಯಕ್ಷರು. ಈ ವಿಜಯೇಂದ್ರ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿ ಎಂದು ತಮ್ಮ ರಾಜಕೀಯ ಎಳಸುತನವನ್ನ ಪ್ರದರ್ಶನ ಮಾಡಿದ್ದಾರೆ ಎಂದರು. ಅವರ ತಂದೆ ಯಡಿಯೂರಪ್ಪ ಅವರಿಂದ ರಾಜಕೀಯ ಕಲಿತಿದ್ದಾರೆ. ಒಳ್ಳೆ ಭವಿಷ್ಯವಿದೆ ಎಂದು ನನಗೆ ಅನಿಸಿತ್ತು. ಆದರೆ ಅವರ ಇತ್ತೀಚಿನ ಹೇಳಿಕೆಗಳನ್ನು ನೋಡುತ್ತಿದ್ದರೆ ಭೌದ್ದಿಕ ದಿವಾಳಿತನವನ್ನ ಪ್ರದರ್ಶಿಸುತ್ತಿವೆ. ಅವರ ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಳ್ಳಲು ದೆಹಲಿ ದಂಡಯಾತ್ರೆಯನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಅನಿವಾರ್ಯವಾಗಿ ರಾಜಕೀಯ…
ಬೆಂಗಳೂರು: ಸಣ್ಣ ಸಣ್ಣ ವ್ಯಾಪಾರಿಗಳಿಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್ ನೀಡಿರುವುದು ವ್ಯಾಪಕ ಚರ್ಚೆಗೆ ಒಳಗಾಗುತ್ತಿದೆ. ಇದೇ ಹೊತ್ತಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯು 40 ಲಕ್ಷದೊಳಗೆ ವಹಿವಾಟು ಆಗಿದ್ರೆ ನೋಂದಣಿ ಬೇಕಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ವಾಣಿಜ್ಯ ತೆರಿಗೆ ಇಲಾಖೆಯ ಕೆಟಿಡಿ ಅಡಿಷನಲ್ ಕಮಿಷನರ್ ಚಂದ್ರಶೇಖರ್ ನಾಯ್ಕ್ ಅವರು ಮಾಹಿತಿ ಹಂಚಿಕೊಂಡಿದ್ದು, 40 ಲಕ್ಷದೊಳಗೆ ವಹಿವಾಟು ಆಗಿದ್ದರೇ ನೋಂದಣಿ ಬೇಕಾಗಿಲ್ಲ. 40 ಲಕ್ಷಕ್ಕಿಂತ ಹೆಚ್ಚು ವಹಿವಾಟು ಮಾಡಿದ್ದರೆ ಮಾತ್ರವೇ ಆದಾಯ ತೆರಿಗೆ ನೋಂದಣಿ ಮಾಡಿಸಬೇಕು ಎಂಬುದಾಗಿ ತಿಳಿಸಿದ್ದಾರೆ. 2021-22ನೇ ಸಾಲಿನಿಂದ ಈವರೆಗಿನ ವಹಿವಾಟಿಗೆ ನೋಟಿಸ್ ನೀಡಲಾಗಿದೆ. ಸರ್ವಿಸ್ ಸಂಬಂಧಿತ ವಹಿವಾಟು ಮಾಡ್ತಿದ್ರೆ 20 ಲಕ್ಷದವರೆಗೆ ವಿನಾಯಿತಿ ಇದೆ. ಗೂಡ್ಸ್ ರಿಲೇಟೆಡ್ ವಹಿವಾಟು ಮಾಡ್ತಿದ್ರೆ 40 ಲಕ್ಷದವರೆಗೆ ವಿನಾಯಿತಿ ಇದೆ. ವಾರ್ಷಿಕವಾಗಿ 40 ಲಕ್ಷಕ್ಕಿಂತ ಹೆಚ್ಚು ಹಣ ಬಂದ್ರೆ ಜಿಎಸ್ಟಿ ನೋಂದಣಿ ಮಾಡಿಸಬೇಕು ಎಂದಿದ್ದಾರೆ. https://kannadanewsnow.com/kannada/rowdy-sheeter-biklu-shiva-murder-case-mla-bhyrathi-basavaraj-appears-before-the-police-for-questioning/
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣ ಸಂಬಂಧ ಶಾಸಕ ಭೈರತಿ ಬಸವರಾಜ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಈ ಹಿನ್ನಲೆಯಲ್ಲಿ ಇಂದು ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಬೆಂಗಳೂರಿನ ಭಾರತೀನಗರ ಪೊಲೀಸ್ ಠಾಣೆಗೆ ತೆರಳಿದಂತ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರು, ತನಿಖಾಧಿಕಾರಿ ಪ್ರಕಾಶ್ ರಾಥೋಡ್ ಮುಂದೆ ವಿಚಾರಣೆಗೆ ಹಾಜರಾದರು. ಅವರನ್ನು ಪೊಲೀಸ್ ತನಿಖಾಧಿಕಾರಿ ಬಿಕ್ಲು ಶಿವ ಕೊಲೆ ಕೇಸ್ ಸಂಬಂಧ ವಿಚಾರಣೆ ನಡೆಸುತ್ತಿದ್ದಾರೆ. ಅಂದಹಾಗೇ ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಭೈರತಿ ಬಸವರಾಜ್ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು. ಈಗಾಗಲೇ ಈ ಪ್ರಕರಣದಲ್ಲಿ ಐವರು ಆರೋಪಿಗಳು ತಾವೇ ಕೊಲೆ ಮಾಡಿದ್ದು ಎಂಬುದಾಗಿ ಸ್ವಯಂ ಪ್ರೇರಿತರಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದರು. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. https://kannadanewsnow.com/kannada/union-minister-shobha-karandlaje-insists-on-establishing-a-multi-modal-transport-system/
ಬೆಂಗಳೂರು: ರಾಜ್ಯ ಸರಕಾರ ಯಾವ ರಿಯಲ್ ಎಸ್ಟೇಟ್ ಸಲುವಾಗಿ ಕೆಲಸ ಮಾಡುತ್ತಿದೆ? ಯಾರನ್ನು ಓಲೈಕೆ ಮಾಡುತ್ತೀರಿ? ಅಥವಾ ಯಾರಿಂದ ಸೂಟ್ಕೇಸ್ ಬಂದಿದೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದ್ದಾರೆ. ಹೆಬ್ಬಾಳದಲ್ಲಿ ಬಿ.ಎಂ.ಆರ್.ಸಿ.ಎಲ್ ಗೆ 45 ಎಕರೆ ಭೂಮಿಯನ್ನು ಮಂಜೂರು ಮಾಡುವ ಬದಲು ಕೇವಲ 9 ಎಕರೆ ಭೂಮಿಯನ್ನು ಕಾಂಗ್ರೆಸ್ ಸರ್ಕಾರ ಮಂಜೂರು ಮಾಡಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಮುಖಂಡರ ಜೊತೆ ಅವರು ಇಂದು ಹೆಬ್ಬಾಳದ ಫ್ಲೈ ಓವರ್ ಬಳಿ ಇರುವ ಸ್ಥಳಕ್ಕೆ ಭೇಟಿ ನೀಡಿದ್ದರು. ಬಳಿಕ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ಭೂಮಿ ರೈತರದು. ಇಲ್ಲಿ ಮಲ್ಟಿ ಮೋಡ್ ಟ್ರಾನ್ಸ್ಪೋರ್ಟ್ ಸಿಸ್ಟಂ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ಹೆಮ್ಮನಕೆರೆ ಮತ್ತು ಹೆಬ್ಬಾಳ ಗ್ರಾಮದ 55 ಎಕರೆ ಜಮೀನನ್ನು ಜೂನ್ 2000ದಲ್ಲಿ ಎಸ್.ಎಂ. ಕೃಷ್ಣ ಅವರ ಸರಕಾರ ಇದ್ದಾಗ ಗ್ಲೋಬಲ್ ಇನ್ವೆಸ್ಟರ್ಸ್ ಮೀಟ್ ವೇಳೆ ವಶಕ್ಕೆ ಪಡೆದಿದ್ದರು. ಬೇರೆಬೇರೆ ರೀತಿಯ ಸಾಂಸ್ಕøತಿಕ ಚಟುವಟಿಕೆಗೆ ಅವಕಾಶ ನೀಡುವುದು,…
ಮೈಸೂರು : ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು. ಸರ್ಕರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ ಬರಲಿ. ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆ ನಡೆಸೋಣ. ನಾನೂ ಬರುತ್ತೇನೆ ಎಂದು ಸವಾಲು ಹಾಕಿದರು. ಅಭಿವೃದ್ಧಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಯವರಿಗೆ ಇವತ್ತಿನ ಅಭಿವೃದ್ಧಿ ಕಾರ್ಯಗಳೇ ಉತ್ತರ. ಬಿಜೆಪಿ-ಜೆಡಿಎಸ್ ನವರಿಗೆ ಈ ಮಟ್ಟಿನ ಮತ್ಸರ ಇರಬಾರದು. ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಅತೀ ಮತ್ಸರ ಪಡುತ್ತಿದ್ದಾರೆ ಎಂದು ಟೀಕಿಸಿದರು. ರಾಜ್ಯದಲ್ಲಿ ಬಿಜೆಪಿ…
ಮೈಸೂರು : ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು. ಸರ್ಕರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ ಬರಲಿ. ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆ ನಡೆಸೋಣ. ನಾನೂ ಬರುತ್ತೇನೆ ಎಂದು ಸವಾಲು ಹಾಕಿದರು. ಅಭಿವೃದ್ಧಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಯವರಿಗೆ ಇವತ್ತಿನ ಅಭಿವೃದ್ಧಿ ಕಾರ್ಯಗಳೇ ಉತ್ತರ. ಬಿಜೆಪಿ-ಜೆಡಿಎಸ್ ನವರಿಗೆ ಈ ಮಟ್ಟಿನ ಮತ್ಸರ ಇರಬಾರದು. ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಅತೀ ಮತ್ಸರ ಪಡುತ್ತಿದ್ದಾರೆ ಎಂದು ಟೀಕಿಸಿದರು. ರಾಜ್ಯದಲ್ಲಿ ಬಿಜೆಪಿ…
ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಬಿಎಂಟಿಸಿಯಿಂದ ಹೊಸ ಮಾರ್ಗದಲ್ಲಿ ಬಸ್ ಸಂಚಾರವನ್ನು ಆರಂಭಿಸಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಿತ ಸೇವೆಗಳಲ್ಲಿ ನೂತನ ಮಾರ್ಗವನ್ನು ದಿನಾಂಕ: 21.07.2025 ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ : ಕ್ರ ಸಂ ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸುಗಳ ಸಂಖ್ಯೆ 1 230-ಡಿ ಮೈಸೂರು ರಸ್ತೆ ಬಸ್ ನಿಲ್ದಾಣ ಚಂದ್ರಪ್ಪ ಸರ್ಕಲ್ ಕೆಂಗೇರಿ, ಅಂಚೆಪಾಳ್ಯ, ಹೊಸಪಾಳ್ಯ, ಬೆಟ್ಟನಪಾಳ್ಯ, ಭೀಮನಕುಪ್ಪೆಕ್ರಾಸ್, ರಾಮೋಹಳ್ಳಿ 01 ಮಾರ್ಗ ಸಂಖ್ಯೆ: 230-ಡಿ ಬಿಡುವ ವೇಳೆ ಮೈಸೂರು ರಸ್ತೆ ಬಸ್ ನಿಲ್ದಾಣ ಚಂದ್ರಪ್ಪ ಸರ್ಕಲ್ 10:50, 14:10 08:05, 16:30 (ಕೆಂಗೇರಿ ಟಿಟಿಎಂಸಿ) 9:00, 12:15, 15:35, 17:25 https://kannadanewsnow.com/kannada/a-special-express-train-service-between-yeshwantpur-and-talguppa/
ಮೈಸೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/06588) ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ. ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ಎಕ್ಸ್ ಪ್ರೆಸ್ ವಿಶೇಷ ರೈಲು ಜುಲೈ 25, 2025 ರಂದು ರಾತ್ರಿ 10:30 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 04:15 ಗಂಟೆಗೆ ತಾಳಗುಪ್ಪ ತಲುಪಲಿದೆ. ಮಾರ್ಗಮಧ್ಯೆ, ಈ ರೈಲು ತುಮಕೂರು (11:18/11:20 PM), ತಿಪಟೂರು (00:13/00:15 AM), ಅರಸೀಕೆರೆ (00:33/00:38 AM), ಬೀರೂರು (01:13/01:15 AM), ತರೀಕೆರೆ (01:43/01:45 AM), ಭದ್ರಾವತಿ (02:00/02:02 AM), ಶಿವಮೊಗ್ಗ ಟೌನ್ (02:20/02:25 AM), ಆನಂದಪುರಂ (03:10/03:12 AM) ಮತ್ತು ಸಾಗರ ಜಂಬಗಾರು (03:35/03:37 AM) ನಿಲ್ದಾಣಗಳಲ್ಲಿ ಆಗಮಿಸಿ, ನಿರ್ಗಮಿಸಲಿದೆ. ವಾಪಸ್ ಬರುವಾಗ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ಎಕ್ಸ್ ಪ್ರೆಸ್ ವಿಶೇಷ ರೈಲು ಜುಲೈ 26, 2025 ರಂದು ಬೆಳಿಗ್ಗೆ 08:15 ಗಂಟೆಗೆ ತಾಳಗುಪ್ಪದಿಂದ ಹೊರಟು,…
ಬೆಂಗಳೂರು: ನಗರದಲ್ಲಿ ಡಿ ಆರ್ ಐ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 40 ಕೋಟಿ ಮೌಲ್ಯದ ಕೊಕೇನ್ ಡ್ರಗ್ಸ್ ಸೀಜ್ ಮಾಡಿದ್ದಾರೆ. ವಿದೇಶದಿಂದ ಬೆಂಗಳೂರಿಗೆ ಕೊಕೇನ್ ಡ್ರಗ್ಸ್ ಸರಬರಾಜು ಮಾಡುತ್ತಿದ್ದಂತ ಮಾಹಿತಿ ಡಿ ಆರ್ ಐ ಅಧಿಕಾರಿಗಳಿಗೆ ಸಿಕ್ಕಿತ್ತು. ಈ ಸಂಬಂಧ ಕಾರ್ಯಾಚರಣೆ ನಡೆಸಿದಂತ ಡಿಆರ್ ಐ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ 40 ಕೋಟಿ ಮೌಲ್ಯದ ಕೊಕೇನ್ ಡ್ರಗ್ಸ್ ಜಸ್ತಿ ಮಾಡಿದ್ದಾರೆ. ಭಾರತ ಮೂಲದ ಪ್ರಯಾಣಿಕನೋರ್ವ ದೋಹಾದಿಂದ ಬೆಂಗಳೂರಿಗೆ ಬ್ಯಾಗ್ ನಲ್ಲಿ ಡ್ರಗ್ಸ್ ತಂದಿದ್ದರು. ಈ ಮಾಹಿತಿಯಿಂದ ಬ್ಯಾಗ್ ಪರಿಶೀಲನೆ ಮಾಡಿದಾಗ 40 ಕೋಟಿ ಮೌಲ್ಯದ 4 ಕೆಜಿ ಕೊಕೇನ್ ಡ್ರಗ್ಸ್ ಪತ್ತೆಯಾಗಿದೆ.
ತುಮಕೂರು: BSW ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ತುಮಕೂರು ವಿಶ್ವ ವಿದ್ಯಾಲಯದಿಂದ ಹೊಸದಾಗಿ BSW ಕೋರ್ಸ್ ಆರಂಭಿಸಲಾಗುತ್ತಿದೆ. ಈ ವರ್ಷದ ವ್ಯಾಸಂಗಕ್ಕೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿದಂತ ವಿದ್ಯಾರ್ಥಿಗಳಿಗೆ ಕೋರ್ಸ್ ದಾಖಲಾತಿ ಕೂಡ ಆರಂಭಿಸಲಾಗಿದೆ. ಈ ಕುರಿತು ತುಮಕೂರು ವಿವಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025-26ನೇ ಶೈಕ್ಷಣಿಕ ಸಾಲಿಗೆ B. S. W (ಬ್ಯಾಚುಲರ್ ಆಫ್ ಸೋಶಿಯಲ್ ವರ್ಕ್) ಎಂಬ ಹೊಸ ವಿಭಾಗವನ್ನು ಪ್ರಾರಂಭಿಸಿದ್ದು, ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರು ಹಾಗೂ ಪ್ರಾoಶುಪಾಲರು ದಯಮಾಡಿ ದ್ವಿತೀಯ PUC ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ B. S. W Course ಪ್ರಾರಂಭಿಸಿರುವ ಕುರಿತು ಮಾಹಿತಿ ನೀಡುವಂತೆ ಮನವಿ ಮಾಡಿದೆ. ಇನ್ನೂ ಸ.ಪ್ರ.ದ.ಕಾ ತುಮಕೂರು ವಿಶ್ವವಿದ್ಯಾನಿಲಯ ಅಡಿಯಲ್ಲಿ ಬರುವ ಚಿಕ್ಕನಾಯಕನಹಳ್ಳಿ ಹಾಗೂ ತಿಪಟೂರು ಕಾಲೇಜುಗಳಲ್ಲಿ ಪ್ರವೇಶ ಆರಂಭವಾಗಿದೆ ಎಂದು ತಿಳಿಸಿದೆ. Job Opportunities for BSW and MSW Course I.ಸರ್ಕಾರಿ ಉದ್ಯೋಗವಕಾಶಗಳು :- 1.ಮಹಿಳಾ ಮತ್ತು ಮಕ್ಕಳ ಕಲ್ಯಾಣಧಿಕಾರಿಯಾಗಿ (CDPO)…