Subscribe to Updates
Get the latest creative news from FooBar about art, design and business.
Author: kannadanewsnow09
ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿನ ಮಾತಾ ವೈಷ್ಣೋ ದೇವಿ ದೇವಸ್ಥಾನದ ಪಾದಚಾರಿ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಈ ಘಟನೆ ಸೋಮವಾರ ನಡೆದಿದೆ. ಘಟನಾ ಸ್ಥಳದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವೀಡಿಯೋದಲ್ಲಿ ವೈಷ್ಣೋ ದೇವಿ ದೇವಸ್ಥಾನದ ಮುಂಭಾಗದಲ್ಲಿರುವಂತ ಪಾದಚಾರಿ ಮಾರ್ಗದಲ್ಲಿ ಭೂಕುಸಿತದ ಅವಶೇಷಗಳು ಕುಸಿದು ಬಿದ್ದಿರುವುದನ್ನು ತೋರಿಸುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://twitter.com/vani_mehrotra/status/1830535690775654894 https://kannadanewsnow.com/kannada/breaking-aap-mla-amanatullah-khan-arrested-by-ed-in-money-laundering-case/ https://kannadanewsnow.com/kannada/attention-public-september-14-is-the-last-day-for-free-update-of-aadhaar-card/
ಬೆಂಗಳೂರು : “ಎತ್ತಿನಹೊಳೆ ಯೋಜನೆ 2027 ಕ್ಕೆ ಪೂರ್ಣಗೊಳ್ಳಲಿದೆ. ಪ್ರಸ್ತುತ ಪಂಪ್ ಮಾಡಿದ ನೀರನ್ನು 132 ಕಿ.ಮೀ ದೂರದ ವಾಣಿವಿಲಾಸ ಸಾಗರಕ್ಕೆ ಹರಿಸಲಾಗುತ್ತದೆ. ಅರಣ್ಯ ಭೂಮಿ ತಕರಾರು ಬಗೆಹರಿಸಿ ಮುಂದಿನ 140 ಕಿ.ಮೀ ಕಾಮಗಾರಿ ಪೂರ್ಣಗೊಳಿಸಿ, ತುಮಕೂರಿಗೆ ನೀರು ಹರಿಸಲಾಗುವುದು. ಮೊದಲ ಹಂತದ ಕಾಮಗಾರಿಗಳನ್ನು ಸೆ.6ರಂದು ಲೋಕಾರ್ಪಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು “ಹೆಬ್ಬನಹಳ್ಳಿ ವಿತರಣಾ ತೊಟ್ಟಿ 4 ರಿಂದ 32 ಕಿ. ಮೀ. ದೂರದಲ್ಲಿ ಎಸ್ಕೇಪ್ ಚಾನೆಲ್ ಮಾಡಿದ್ದು, ಅಲ್ಲಿಂದ ನಾಲೆ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಲಾಗುವುದು. ನವೆಂಬರ್ 1 ರ ವೇಳೆಗೆ ಸುಮಾರು 5 ಟಿಎಂಸಿ ನೀರನ್ನು ಮೇಲಕ್ಕೆ ಎತ್ತಲಾಗುವುದು. ಅರಣ್ಯ ಇಲಾಖೆಯಿಂದ 502 ಎಕರೆ ಜಮೀನು ಪಡೆಯಬೇಕಾಗಿದ್ದು, ಇದಕ್ಕೆ ಬದಲಿಯಾಗಿ ನಾವು 452 ಎಕರೆ ಜಮೀನು ನೀಡಿದ್ದೇವೆ. ಮುಂದಿನ 4 ತಿಂಗಳಲ್ಲಿ ಈ ಕೆಲಸ ಮುಗಿಯಲಿದ್ದು, ಆನಂತರ ತುಮಕೂರು ಭಾಗದ ಕೆಲಸವನ್ನು ತ್ವರಿತವಾಗಿ ಮುಗಿಸಲಾಗುವುದು” ಎಂದು ಹೇಳಿದರು.…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಹಗರಣದ ಆರೋಪ ಕುರಿತಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ಬೆನ್ನಲ್ಲೇ ಸಚಿವ ಎಂ.ಬಿ ಪಾಟೀಲ್ ಅವರ ವಿರುದ್ಧದ ಸಿಎ ಸೈಟ್ ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರಿಗೆ ದೂರು ನೀಡಲಾಗಿತ್ತು. ಈ ದೂರು ಆಧರಿಸಿ ಮಾಹಿತಿ ನೀಡುವಂತೆ ಸಿಎಸ್ ಗೆ ಪತ್ರ ಬರೆಯಲಾಗಿದೆ. ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ಸಿಎ ಸೈಟ್ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ ಬಗ್ಗೆ ಪ್ರತಿಕ್ರಿಯಿಸಿರುವಂತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಈ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದು ಕೋರಿದ್ದಾರೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆನ್ನಲ್ಲೇ, ಈಗ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಸಿಎ ಸೈಟ್ ಹಂಚಿಕೆ ಹಗರಣದಲ್ಲಿ ಪ್ರಾಸಿಕ್ಯೂಷನ್ ಸಂಕಷ್ಟ ಎದುರಾಗಿದೆ. ಹಾಗಾದ್ರೆ ರಾಜ್ಯಪಾಲರು ಎಂ.ಬಿ ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್…
ಬೆಂಗಳೂರು: 2 ವಾರಗಳಲ್ಲಿ ಕೆಪಿಎಸ್ಸಿಯ ಕೆಎಎಸ್ ಮರು ಪರೀಕ್ಷೆಗೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದರು. ಇದು ಉದ್ಯೋಗಾಕಾಂಕ್ಷಿಗಳು ಹಾಗೂ ಪ್ರತಿಪಕ್ಷಗಳ ಹೋರಾಟಕ್ಕೆ ಸಂದ ಜಯ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವಂತ ಅವರು, “ಕೆಪಿಎಸ್ ಸಿ ಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತು”. ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದ್ದು, ಇದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಹಾಗು ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದಿದ್ದಾರೆ. ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಮರುಪರೀಕ್ಷೆಯನ್ನ ಸಮರ್ಪಕವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತೊಂದರೆಯಾಗದಂತೆ ಸೂಕ್ತ ಪರೀಕ್ಷಾ ದಿನಾಂಕ ನಿಗದಿ ಮಾಡುವುದು, ಅಭ್ಯರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪರೀಕ್ಷಾ ಕೇಂದ್ರಗಳ ಹಂಚಿಕೆ ಮಾಡುವುದು, ಪ್ರಶ್ನೆ ಪತ್ರಿಕೆ ರಚನೆ, ಕನ್ನಡಕ್ಕೆ ತರ್ಜುಮೆ ಸೇರಿದಂತೆ ಎಲ್ಲ ಅಂಶಗಳನ್ನ…
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪೋಟೋ ವೈರಲ್ ಆಗುತ್ತಿದ್ದಂತೇ, ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅವರು ಬೆನ್ನು ನೋವಿನಿಂದ ಬಳಲುತ್ತಿದ್ದು, ಅವರಿಗೆ ಸರ್ಜಿಕಲ್ ಚೇರ್ ಅವಶ್ಯಕತೆ ಇದೆ ಎಂಬುದಾಗಿ ಪತ್ನಿ ವೈದ್ಯಕೀಯ ವರದಿ ಸಲ್ಲಿಸಿದ ಕಾರಣ, ಅವರಿಗೆ ಸರ್ಜಿಕಲ್ ಚೇರ್ ನೀಡಲು ಸಮ್ಮತಿ ನೀಡಲಾಗಿದೆ. ಬಳ್ಳಾರಿ ಜೈಲಿನಲ್ಲಿರುವಂತ ನಟ ದರ್ಶನ್ ಅವರಿಗೆ ಬೆನ್ನು ಮೂಳೆ(ಎಲ್-5) ಸಮಸ್ಯೆಯಿಂದ ಬಳಲುತ್ತಿರುವುದಾಗಿ ಪತ್ನಿ ವಿಜಯಲಕ್ಷ್ಮಿ ಅವರು ಜೈಲು ಅಧಿಕಾರಿಗಳಿಗೆ ವೈದ್ಯಕೀಯ ಪ್ರಮಾಣಪತ್ರವನ್ನು ಸಲ್ಲಿಸಿದ್ದರು. ಅಲ್ಲದೇ ದರ್ಶನ್ ಅವರಿಗೆ ಸರ್ಜಿಕಲ್ ಚೇರ್ ನೀಡುವಂತೆಯೂ ಮನವಿ ಮಾಡಲಾಗಿತ್ತು. ಈ ಮನವಿಯನ್ನು ಪರಿಶೀಲಿಸಿದಂತ ಜೈಲು ಅಧಿಕಾರಿಗಳು, ವೈದ್ಯರಿಂದ ತಾವು ತಪಾಸಣೆ ನಡೆಸಿದಾಗ ನಟ ದರ್ಶನ್ ಅವರಿಗೆ ಬೆನ್ನು ಮೂಳೆ ಸಮಸ್ಯೆ ಇರುವುದು ಖಚಿತವಾಗಿತ್ತು. ಈ ಹಿನ್ನಲೆಯಲ್ಲಿ ಶೌಟಕ್ಕೆ ಸರ್ಜಿಕಲ್ ಚೇರ್ ಒದಗಿಸುವುದಕ್ಕೆ ಅನುಮತಿ ನೀಡಿದ್ದಾರೆ. https://kannadanewsnow.com/kannada/breaking-aap-mla-amanatullah-khan-arrested-by-ed-in-money-laundering-case/ https://kannadanewsnow.com/kannada/attention-public-september-14-is-the-last-day-for-free-update-of-aadhaar-card/
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಬಗ್ಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರೇ, ಇನ್ನುಳಿದ ಪ್ರಾಸಿಕ್ಯೂಷನ್ ಗಾಗಿ ಅರ್ಜಿ ಸಲ್ಲಿಸಿರುವುದಕ್ಕೂ ಪ್ರತಿಕ್ರಿಯಿಸುವಂತೆ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದರು. ರಾಜಭವನ ಚಲೋ ಕೂಡ ನಡೆಸಿ, ಮನವಿ ಮಾಡಿದ್ದರು. ಈ ಬೆನ್ನಲ್ಲೇ ಇನ್ನಷ್ಟು ಸ್ಪಷ್ಟನೆ ಬಯಸಿರುವಂತ ರಾಜ್ಯಪಾಲರು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರಾಸಿಕ್ಯೂಷನ್ ಕಡತವನ್ನು ಲೋಕಾಯುಕ್ತಕ್ಕೆ ವಾಪಾಸ್ ಕಳುಹಿಸಿದ್ದಾರೆ. ಈ ಕುರಿತಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾಹಿತಿ ಹಂಚಿಕೊಂಡಿದ್ದು, ಲೋಕಾಯುಕ್ತದವರು ಹೆಚ್.ಡಿ ಕುಮಾರಸ್ವಾಮಿ ವಿರುದ್ಧದ ಪ್ರಕರಣದ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿಗಾಗಿ ರಾಜ್ಯಪಾಲರಲ್ಲಿ ಮನವಿ ಮಾಡಿದ್ದರು. ಆ ಲೋಕಾಯುಕ್ತದ ಕಡತವನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ. ಅದಕ್ಕೆ ಲೋಕಾಯುಕ್ತ ಸ್ಪಷ್ಟನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯಪಾಲರು ಒಂದು ಕಡತ ಮಾತ್ರ ಇದೆ ಎಂಬುದಾಗಿ ಶನಿವಾರ ತಿಳಿಸಿದ್ದರು. ಅದು ಹೆಚ್.ಡಿ ಕುಮಾರಸ್ವಾಮಿ ಅವರದ್ದು ಎಂಬುದು ಈಗ ಗೊತ್ತಾಗಿದೆ. ಅದಕ್ಕಾದರೂ ಕ್ರಮ ತೆಗೆದುಕೊಳ್ಳಲೇಬೇಕಲ್ಲವೇ? ಕಾನೂನು ರೀತಿ ಇದೆಯೇ? ಕಾನೂನು ಬಾಹಿರವಾಗಿದೆಯೇ ಎಂಬುದನ್ನು ಲೋಕಾಯುಕ್ತರು ತಿಳಿಸಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ ಮಹಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಖಾಸಗಿ ಸೇವಾ ವಾಹನಗಳು ಹಾಗೂ ರಾಷ್ಟ್ರೀಯ ರಹದಾರಿ ಹೊಂದಿದ ಸರಕು ಸಾಗಾಣಿಕೆ ವಾಹನಗಳಲ್ಲಿ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ (VLT) ಹಾಗೂ ತುರ್ತು ಪ್ಯಾನಿಕ್ ಬಟನ್ ಅಳವಡಿಸುವಂತೆ ಸೂಚಿಸಲಾಗಿತ್ತು. ಸೆ.10ರೊಳೆಗೆ ಖಾಸಗಿ ಸೇವಾ ವಾಹನಗಳಲ್ಲಿ ವಿಎಲ್ ಟಿ ಅಳವಡಿಸಬೇಕು. ಇಲ್ಲದೇ ಇದ್ದರೇ ದಂಡವನ್ನು ಹಾಕಲಾಗುತ್ತದೆ. ಈಗಾಗಲೇ ವಿಎಲ್ ಟಿ ಅಳವಡಿಕೆಗೆ ವಾಹನ ಮಾಲೀಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಆದಾಗ್ಯೂ ಸೆ.10ರ ಒಳಗಾಗಿ ಅಳವಡಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ರಸ್ತೆ ಮತ್ತು ಸಾರಿಗೆ ಆಯುಕ್ತ ಎ.ಎಂ ಯೋಗೀಶ್ ಅವರು ಸೂಚಿಸಿದ್ದಾರೆ. ಸೆ.10ರ ಒಳಗಾಗಿ ಪ್ಯಾನಿಕ್ ಬಟನ್, ವಿಎಲ್ ಟಿ ಅಳಪಡಿಸುವುದು ಕಡ್ಡಾಯ. ಸೆ.10ರ ನಂತ್ರ ಡಿವೈಎಸ್ ಅಳವಡಿಸದೇ ಇರುವಂತ ವಾಹನಗಳ ವಿರುದ್ಧ ಸಾರಿಗೆ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸುವ ಮೂಲಕ ದಂಡ ಹಾಕುವುದಕ್ಕೆ ಮುಂದಾಗಿದ್ದಾರೆ. ಅಂದಹಾಗೇ ಯೆಲ್ಲೋ ಬೋರ್ಟ್ ನ ಟ್ಯಾಕ್ಸಿಗಳು, ಕ್ಯಾಬ್ ಗಳು,…
ಬೆಂಗಳೂರು: ರಾಜ್ಯದ ಕುಟುಂಬದ ಯಜಮಾನಿಯರಿಗೆ ಸಂತಸದ ಸುದ್ಧಿ; ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅತ್ಯುತ್ತಮ ಅವಕಾಶ ಕಲ್ಪಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯು ಜಾರಿಗೆ ಬಂದು ಇಲ್ಲಿಗೆ ಒಂದು ವರ್ಷವಾಗಿದೆ. ಈ ಸಂದರ್ಭದಲ್ಲಿ ಕುಟುಂಬದ ಎಲ್ಲ ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಭಾಶಯ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಯಜಮಾನಿಯರಿಗೆ ಒಂದು ಬಹುಮಾನವನ್ನೂ ಘೋಷಿಸಿದ್ದಾರೆ. ಇಲ್ಲಿಯವರೆಗೆ ಗೃಹಲಕ್ಷ್ಮೀ ಫಲಾನುಭವಿಗಳಾದ ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆಯನ್ನು ಈ ಒಂದು ವರ್ಷದಲ್ಲಿ ತಂದಿದೆ ಎನ್ನುವುದನ್ನು ಯಜಮಾನಿಯರು ಹಂಚಿಕೊಳ್ಳಲು ಸಚಿವರು ಕೋರಿದ್ದಾರೆ. ರೀಲ್ಸ್ ಮಾಡಿ ಸಾಮಾಜಿಕ ಜಾಲ ಜಾಲತಾಣಗಳಾದ ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್ ಗಳಲ್ಲಿ ಶೇರ್ ಮಾಡುವ ಮೂಲಕ ಅದನ್ನು ಹಂಚಿಕೊಳ್ಳುವಂತೆ ಕೋರಿದ್ದಾರೆ. ಯಾವ ಯಜಮಾನಿಯರು ಮಾಡಿದ ರೀಲ್ಸ್ ಗೆ ಹೆಚ್ಚು ವಿವರ್ಸ್ ಬಂದಿದೆಯೋ ಅಂತಹ ಯಜಮಾನಿಯರಿಗೆ ಒಂದು…
ಪ್ಯಾರಿಸ್ : ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನ ಪುರುಷರ ಸಿಂಗಲ್ಸ್ ಎಸ್ಎಲ್3 ವಿಭಾಗದ ಸೆಮಿಫೈನಲ್ನಲ್ಲಿ ಜಪಾನ್ನ ಡೈಸುಕೆ ಫುಜಿಹರಾ ವಿರುದ್ಧ ನೇರ ಗೇಮ್ಗಳ ಜಯ ಸಾಧಿಸಿದ ಭಾರತದ ಅಗ್ರ ಶ್ರೇಯಾಂಕಿತ ಶಟ್ಲರ್ ನಿತೇಶ್ ಕುಮಾರ್ ಪದಕ ಗೆದ್ದಿದ್ದಾರೆ. 2009ರ ಅಪಘಾತದಲ್ಲಿ ಕಾಲಿನ ಶಾಶ್ವತ ಗಾಯದಿಂದ ಪಾರಾದ 29ರ ಹರೆಯದ ನಿತೇಶ್, 48 ನಿಮಿಷಗಳ ಕಾಲ ನಡೆದ ಸೆಮಿಫೈನಲ್ನಲ್ಲಿ ಫುಜಿಹರಾ ವಿರುದ್ಧ 21-16, 21-12 ಅಂತರದಲ್ಲಿ ಜಯ ಸಾಧಿಸಿದರು. ಮೂರು ವರ್ಷಗಳ ಹಿಂದೆ ಟೋಕಿಯೊದಲ್ಲಿ ಪ್ಯಾರಾ ಬ್ಯಾಡ್ಮಿಂಟನ್ಗೆ ಪಾದಾರ್ಪಣೆ ಮಾಡಿದಾಗ ಪ್ರಮೋದ್ ಭಗತ್ ಚಿನ್ನ ಗೆದ್ದ ನಂತರ ಐಐಟಿ ಮಂಡಿ ಪದವೀಧರರು ಎಸ್ಎಲ್ 3 ವಿಭಾಗದಿಂದ ಪದಕದೊಂದಿಗೆ ಭಾರತಕ್ಕೆ ಮರಳುವುದನ್ನು ಖಚಿತಪಡಿಸಿದರು. ನಿತೇಶ್ ಅವರಂತಹ ಎಸ್ಎಲ್ 3 ವರ್ಗದ ಆಟಗಾರರು ಹೆಚ್ಚು ತೀವ್ರವಾದ ಕೆಳ ಅಂಗಾಂಗ ಅಂಗವೈಕಲ್ಯಗಳೊಂದಿಗೆ ಸ್ಪರ್ಧಿಸುತ್ತಾರೆ, ಅರ್ಧ-ಅಗಲದ ಅಂಗಣದಲ್ಲಿ ಆಟದ ಅಗತ್ಯವಿರುತ್ತದೆ. ಮತ್ತೊಂದು ಸೆಮಿಫೈನಲ್ನಲ್ಲಿ ನಿತೇಶ್ ಗ್ರೇಟ್ ಬ್ರಿಟನ್ನ ಡೇನಿಯಲ್ ಬೆತೆಲ್ ಅವರನ್ನು 21-7, 21-9ರಿಂದ ಥಾಯ್ಲೆಂಡ್ನ ಬುನ್ಸನ್ ಮೊಂಗ್ಖೋನ್ ಅವರನ್ನು ಸೋಲಿಸಲಿದ್ದಾರೆ.…
ಬೆಂಗಳೂರು : ‘ನಾನು ವಿಜಯಪುರ ಜಿಲ್ಲೆಯವ ನನಗೂ ಭಾಷೆ ಗೊತ್ತಿದೆ. ಬಾಗಲಕೋಟೆಗೇ ಬಂದು ನಿನಗೆ ನಿನ್ನ ಭಾಷೆಯಲ್ಲೇ ಉತ್ತರ ನೀಡುವೆ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಮಾಜಿ ಸಚಿವ ಮುರುಗೇಶ ನಿರಾಣಿ ಅವರಿಗೆ ತಿರುಗೇಟು ನೀಡಿದ್ದಾರೆ. ನಿರಾಣಿ ಅವರು ಬಾಗಲಕೋಟೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ವಿರುದ್ಧ ನೀಡಿರುವ ಹೇಳಿಕೆಗೆ ಸಚಿವರು ತಮ್ಮ ಎಕ್ಸ್ ಜಾಲತಾಣದಲ್ಲಿ ಭಾನುವಾರ ಪ್ರತಿಯುತ್ತರ ನೀಡಿದ್ದಾರೆ. ಎಕ್ಸ್ ನಲ್ಲಿ ಸಚಿವರು ಬರೆದುಕೊಂಡಿರುವ ಪೂರ್ಣ ಪಾಠ ಇಲ್ಲಿದೆ. ‘ಮಿ. ಮುರುಗೇಶ ನಿರಾಣಿ ಬಾಗಲಕೋಟೆಯಲ್ಲಿ ನೀನು ಮಾಡಿರುವ ಪತ್ರಿಕಾಗೋಷ್ಠಿಯನ್ನು ಗಮನಿಸಿದ್ದೇನೆ. ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ ಯಾವುದೇ ರಿಯಾಯಿತಿ ಇಲ್ಲದೆ ಸಿ.ಎ ನಿವೇಶನ ನೀಡಿದ್ದರೂ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಹೆಸರನ್ನು ಅನವಶ್ಯಕವಾಗಿ ಎಳೆದು ತಂದು ಹಗರಣವಾಗಿದೆ ಎಂದು ಬಿಜೆಪಿ ಅವರು ಬಿಂಬಿಸುತ್ತಿರುವುದಕ್ಕೆ ಪ್ರತಿಯಾಗಿ ನಾನು ಪತ್ರಿಕಾಗೋಷ್ಠಿ ನಡೆಸಿ, ಬಿಜೆಪಿ ಅವಧಿಯಲ್ಲಿ ಬಿಜೆಪಿ ನಾಯಕರು ಯಾರು ಯಾರು ಎಷ್ಟೆಷ್ಟು ಲಾಭ ಪಡೆದಿದ್ದಾರೆ ಎಂಬುದು ತಿಳಿಸುವದು ನನ್ನ ಉದ್ದೇಶವಾಗಿತ್ತು. ಈ ಸಂದರ್ಭದಲ್ಲಿ…