Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ನವದೆಹಲಿ: ಭಾರತೀಯ ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಮಗ್ರ ಹಾಗೂ ಪ್ರಯಾಣಿಕ-ಕೇಂದ್ರಿತ ಡಿಜಿಟಲ್ ವೇದಿಕೆಯಾಗಿರುವ ರೈಲ್ಒನ್ ಮೊಬೈಲ್ ಆ್ಯಪ್ ಅನ್ನು ಆರಂಭಿಸಿದೆ. ಒಂದೇ ಇಂಟರ್‌ಫೇಸ್‌ನಡಿ ವಿವಿಧ ರೈಲ್ವೆ ಸೇವೆಗಳನ್ನು ಒಗ್ಗೂಡಿಸುವ ಈ ಆ್ಯಪ್, ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲತೆ, ಪಾರದರ್ಶಕತೆ ಹಾಗೂ ಕಾರ್ಯಕ್ಷಮತೆಯನ್ನು ಒದಗಿಸುವುದೇ ಇದರ ಉದ್ದೇಶವಾಗಿದೆ. ಪ್ರಯಾಣಿಕರು ಈ ಏಕೀಕೃತ ಸೇವೆಗಳ ಪ್ರಯೋಜನ ಪಡೆಯಲು ರೈಲ್ಒನ್ ಆ್ಯಪ್ ಅನ್ನು ಡೌನ್‌ಲೋಡ್ ಮಾಡಿ ಬಳಸುವಂತೆ ವಿನಂತಿಸಲಾಗಿದೆ. ರೈಲ್ಒನ್ ಆ್ಯಪ್ ಮೂಲಕ ಪ್ರಯಾಣಿಕರು ಕಾಯ್ದಿರಿಸಿದ ಹಾಗೂ ಕಾಯ್ದಿರಿಸದ ಟಿಕೆಟ್‌ಗಳು, ಜೊತೆಗೆ ಪ್ಲಾಟ್‌ಫಾರ್ಮ್ ಟಿಕೆಟ್‌ಗಳನ್ನು ಸುಲಭವಾಗಿ ಬುಕ್ ಮಾಡಬಹುದು. ಅಲ್ಲದೆ, ರೈಲುಗಳನ್ನು ಹುಡುಕಲು, ಪ್ರಯಾಣದ ಯೋಜನೆ, ಮತ್ತು ಪಿಎನ್ಆರ್ ಸ್ಥಿತಿಯ ನೇರ ಮಾಹಿತಿಯನ್ನು ಪಡೆಯುವ ಸೌಲಭ್ಯವೂ ಈ ಆ್ಯಪ್‌ನಲ್ಲಿ ಲಭ್ಯವಿದ್ದು, ಪ್ರಯಾಣವನ್ನು ಸುಗಮವಾಗಿ ನಿರ್ವಹಿಸಲು ಸಹಕಾರಿಯಾಗಿದೆ. ಸುಗಮ ಪ್ರಯಾಣದ ಅನುಭವಕ್ಕಾಗಿ ರೈಲ್ಒನ್ ಆ್ಯಪ್‌ನಲ್ಲಿ ರೈಲಿನ ಪ್ರಸ್ತುತ ಚಲನಾ ಸ್ಥಿತಿ, ಕೋಚ್ ಸ್ಥಾನದ ಮಾಹಿತಿ, ಹಾಗೂ ರೈಲು ಎಲ್ಲಿದೆ ಎಂಬುದನ್ನು ಪರಿಶೀಲಿಸುವ ಸೌಲಭ್ಯಗಳನ್ನು ಒದಗಿಸಲಾಗಿದೆ, ಇದರಿಂದ ಪ್ರಯಾಣಿಕರು ನಿಲ್ದಾಣಗಳಲ್ಲಿ…

Read More

ಜನವರಿ 1 ರಂದು ಬೆಳಿಗ್ಗೆ ಎದ್ದಾಗ ಈ ಮಾತನ್ನು 3 ಬಾರಿ ಹೇಳಿದರೆ, ಮುಂದಿನ ವರ್ಷ ನಿಮಗೆ ಯಾವುದೇ ತೊಂದರೆಯಾಗದಂತೆ ದೇವರು ಖಾತ್ರಿಪಡಿಸುತ್ತಾನೆ.ಕ ಷ್ಟಗಳನ್ನು ಪರಿಹರಿಸಲು ವಿಷ್ಣು ಸಹಸ್ರ ಮಂತ್ರವಾಗಿದೆ. 2025 ನೇ ವರ್ಷವು ಇಂದು ಕೊನೆಗೊಳ್ಳುತ್ತದೆ. ನಾಳೆ ಹೊಸ ವರ್ಷವನ್ನು ಸ್ವಾಗತಿಸಲು ನಾವೆಲ್ಲರೂ ಕಾಯುತ್ತಿದ್ದೇವೆ. ಈ ದಿನದಂದು ನಾವು ಮಾಡಬಹುದಾದ ಪೂಜೆಯು 2026 ರ ವರ್ಷವಿಡೀ ನಮಗೆ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ ಮತ್ತು ಈ ವರ್ಷದ ಎಲ್ಲಾ ಕಷ್ಟಗಳು ಇಂದು ನಮ್ಮನ್ನು ಹಾದುಹೋಗಲಿ. ಹುಟ್ಟಲಿರುವ ಹೊಸ ವರ್ಷವು ಎಲ್ಲರಿಗೂ ಹೊಸ ವಸಂತವನ್ನು ತರಲಿ, ಮತ್ತು ದೇವರ ಆಶೀರ್ವಾದವು ಎಲ್ಲರಿಗೂ ನೆರವೇರಲಿ ಎಂಬ ಪ್ರಾರ್ಥನೆಯೊಂದಿಗೆ ಇಂದಿನ ಆಧ್ಯಾತ್ಮಿಕ ಪೋಸ್ಟ್‌ಗೆ ಪ್ರಯಾಣಿಸೋಣ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ.…

Read More

ಬೆಂಗಳೂರು: ಶ್ರೀಲಂಕಾ ಪತ್ರಕರ್ತರ ನಿಯೋಗವು ಕರ್ನಾಟಕ ಮಾಹಿತಿ ಹಕ್ಕು ಆಯೋಗಕ್ಕೆ ಭೇಟಿ ನೀಡಿ ಸಂವಾದ ನಡೆಸಿತು. ಕರ್ನಾಟಕ ಪ್ರವಾಸದಲ್ಲಿರುವ ನಿಯೋಗ, ಮಾಹಿತಿ ಹಕ್ಕು ಆಯೋಗಕ್ಕೆ ಸೌಹಾರ್ದಯುತವಾಗಿ ಭೇಟಿ ಹಲವು ವಿಷಯಗಳ ಮೇಲೆ ಚರ್ಚೆ ನಡೆಸಿತು. ಕರ್ನಾಟಕದಲ್ಲಿ ಮಾಹಿತಿ ಹಕ್ಕು ಆಯೋಗ ಕಳೆದ ಎರಡು ದಶಕಗಳಲ್ಲಿ ಹೇಗೆ ಕ್ರೀಯಾಶೀಲವಾಗಿ ಕೆಲಸ ಮಾಡುತ್ತಿದೆ ಎನ್ನುವುದನ್ನು ಆಯೋಗದ ಪ್ರಭಾರಿ ಮುಖ್ಯ ಆಯುಕ್ತರಾದ ಕೆ.ರಾಮನ್, ಆಯುಕ್ತರುಗಳಾದ ರಾಜಶೇಖರ್, ರುದ್ರಣ್ಣ ಹರ್ತಿಕೋಟೆ, ಮಮತಾ ಮತ್ತು ಬದ್ರುದ್ದೀನ್ ಅವರು ಮಾಹಿತಿ ನೀಡಿದರು. ಶ್ರೀಲಂಕಾದಲ್ಲಿ ಕಳೆದ 3 ವರ್ಷಗಳಿಂದ ಮಾಹಿತಿ ಹಕ್ಕು ಆಯೋಗ (ಆರ್‌ಟಿಐ)ಪ್ರಾರಂಭವಾಗಿದೆ ಎಂದು ಶ್ರೀಲಂಕಾ ಅಧ್ಯಕ್ಷರ ಮಾಧ್ಯಮ ಮಾಜಿ ಕಾರ್ಯದರ್ಶಿ ಮತ್ತು ನಿಶ್ಚಿನಾಂತು ಆಲ್ವೀಸ್ ಹಾಗೂ ಹಿರಿಯ ಪತ್ರಕರ್ತ ಪಾತುಮ್ ಪಾಸ್ಕೂಲ್ ಅವರು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ಪತ್ರಕರ್ತರ ಸಂಘದ ಹೋರಾಟ ಕಾರಣದಿಂದ ಪತ್ರಕರ್ತರಿಗೆ ಬಸ್ ಪಾಸ್, ಮಾಸಾಶನ ಸೇರಿದಂತೆ ಹಲವು ಸೌಲಭ್ಯ ಕಲ್ಪಿಸಿದೆ ಎನ್ನುವ ಮಾಹಿತಿಯನ್ನು ನೀಡಿದರು. ಇದಕ್ಕೆ…

Read More

ಮಂಡ್ಯ : ಶತಮಾನಗಳ ಸಿಟ್ಟನ್ನು ಸಿಡಿಮದ್ದಾಗಿಸಿಕೊಂಡು ಸಿದ್ದ ನಾಕಾ ನೇತೃತ್ವದಲ್ಲಿ ಯುದ್ಧ ಗೆದ್ದ ಭೀಮ ಕೋರೆಗಾಂವ್ ಯುದ್ಧವೀರರನ್ನು ನೆನೆಯಬೇಕಿದೆ. ಈ ಹಿನ್ನಲೆಯಲ್ಲಿ ಜ.1ರಂದು ಮದ್ದೂರು ತಾಲೂಕಿನ ಎಲ್ಲಾ ಶೋಷಿತ ಸಮುದಾಯದವರು 208 ನೇ ಭೀಮ ಕೋರೆಗಾಂವ್ ಕದನ ವಿಜಯೋತ್ಸವ ಆಚರಣೆಯಲ್ಲಿ ಭಾಗವಹಿಸಬೇಕೆಂದು ಜಿ.ಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ಮಂಗಳವಾರ ಹೇಳಿದರು. ಜ.1 ಗುರುವಾರ ಬೆಳಿಗ್ಗೆ 9 ಗಂಟೆಗೆ ಮದ್ದೂರು ನಗರದ ನಗರಸಭೆ ಮುಂಭಾಗದ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಗುವುದು ಎಂದರು. ಭಾರತದಲ್ಲಿ ನಡೆದಿರುವ ಸಾವಿರಾರು ಯುದ್ಧಗಳ ಪೈಕಿ ಭೀಮಾ ಕೋರೆಗಾಂವ್ ಯುದ್ಧದ ವಿಜಯವು ಜಗತ್ತೇ ನಿಬ್ಬೆರಗಾಗುವಂತೆ ಮಾಡಿದ್ದಲ್ಲದೆ ಆ ಯುದ್ಧವು ಮುಂದಿನ ತಲೆಮಾರಿಗಳಿಗೆ ಸ್ವಾಭಿಮಾನದ ಪ್ರತೀಕವಾಗಿ ಶಾಶ್ವತವಾಗಿ ಉಳಿದು ಬಿಟ್ಟಿದೆ. ಕೇವಲ 500ಮಂದಿ ಮಹಾರ್ ಸೈನಿಕರು 28 ಸಾವಿರ ಜಾತಿವಾದಿ ಪೇಶ್ವೆ ಸೈನಿಕರನ್ನು ಸೆದೆಬಡಿದ ಭಾರತದ ಸ್ವಾಭಿಮಾನದ ಇತಿಹಾಸವನ್ನು ಸಾರಿ ಸಾರಿ ಹೇಳುವಂತಿದೆ. ಹೀಗಾಗಿ 1 ಜನವರಿ 1818…

Read More

ಬ್ರಾಹ್ಮಣ ಭೋಜನ ಪ್ರಿಯಃ”, ಬರೀ ಇದೊಂದೇ ಸಾಲು ಮಾತ್ರನಾ ಇರೋದು,? ಖಂಡಿತಾ ಇಲ್ಲ ಬ್ರಾಹ್ಮಣ ಭೋಜನ ಪ್ರಿಯ: ಬ್ರಾಹ್ಮಣರಿಗೆ ಭೋಜನ ಮಾಡಿಸಿದರೆ ಸಕಲ ದೇವತೆಗಳೂ ತೃಪ್ತರಾಗುತ್ತಾರೆ ತುಂಬಾ ಜನ ಇದನ್ನು ಕೊಂಕು ಮಾತಾಗಿ ಉಪಯೋಗಿಸುತ್ತೀರಾ..! ಸರಿಯಾಗಿ ಅರ್ಥ ತಿಳಿದುಕೊಂಡು ಮಾತನಾಡುವುದು ಒಳಿತು.. TODAY ಯಾರೋ ಒಬ್ಬರು ದೇವಾಲಯದಲ್ಲಿ ಮಾತಾಡುತ್ತಿದ್ದನ್ನು ಕೇಳಿಸಿಕೊಂಡಿದಕ್ಕಾಗಿ ಹಾಕುತ್ತಿದ್ದೇನೆ..( ಬರೆದವರ ಹೆಸರು ಗೊತ್ತಿಲ್ಲ. ಅವರಿಗೆ ಧನ್ಯವಾದಗಳು) ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ…

Read More

ಬೆಂಗಳೂರು: ಪ್ರಸ್ತುತ 108 – ಆರೋಗ್ಯ ಕವಚ ಆಂಬುಲೆನ್ಸ್‌ ಸೇವೆಯನ್ನು ಒಡಂಬಡಿಕೆ ಮಾದರಿಯಲ್ಲಿ ನಿರ್ವಹಣೆ ಮಾಡುತ್ತಿದ್ದು, ಸೇವೆಯ ಕುರಿತು ಸಾರ್ವಜನಿಕರಿಂದ ಹಲವಾರು ಆಕ್ಷೇಪಣೆಗಳು, ಸಮಸ್ಯೆಗಳು ದಾಖಲಾಗಿದ್ದರಿಂದ, ಸನ್ಮಾನ್ಯ ಮುಖ್ಯಮಂತ್ರಿಗಳು 2025-26 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಸರ್ಕಾರದ ವತಿಯಿಂದಲೇ ಆರೋಗ್ಯ ಕವಚ-108 ನಿರ್ವಹಣೆ ಮಾಡಲು ಆರೋಗ್ಯ ಇಲಾಖೆ ಸಕಲ ಸಿದ್ಧತೆ ನಡೆಸುತ್ತಿದೆ. ಅವಶ್ಯಕವಾದ ತಂತ್ರಜ್ಞಾನ, ಕಮಾಂಡ್ ಕಂಟ್ರೋಲ್ ಸೆಂಟರ್, ಅದಕ್ಕೆ ಬೇಕಾದ ಮಾನವ ಸಂಪನ್ಮೂಲ ಸೇರಿದಂತೆ ಎಲ್ಲಾ ಸಿದ್ಧತೆಗಳು ಅಂತಿಮ ಹಂತ ತಲುಪಿದೆ. ಸದ್ಯದಲ್ಲಿಯೇ ಸರ್ಕಾರದ ವತಿಯಿಂದ ರಾಜ್ಯದಾದ್ಯಂತ ಆಂಬ್ಯುಲೆನ್ಸ್‌ ಸೇವೆ ಪ್ರಾರಂಭಗೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳಡಿಯಲ್ಲಿ ಒಟ್ಟಾರೆ 1841 ಆಂಬ್ಯುಲೆನ್ಸ್‌ ಲಭ್ಯವಿದ್ದು, ಇದರಲ್ಲಿ 108-ಆರೋಗ್ಯ ಕವಚ ಕಾರ್ಯಕ್ರಮದಡಿಯಲ್ಲಿ ಒಟ್ಟು 715 ಆಂಬ್ಯುಲೆನ್ಸ್‌ಗಳು ಹಾಗೂ ರಾಜ್ಯ ವಲಯದ 1126 ಆಂಬ್ಯುಲೆನ್ಸ್‌ಗಳು ಲಭ್ಯವಿದೆ. ಮಾನದಂಡಗಳನ್ವಯ ಹಾಲಿ ಜನಸಂಖ್ಯೆಗೆ 813 ಆಂಬ್ಯುಲೆನ್ಸ್‌ಗಳು ಅಗತ್ಯವಿದ್ದು, ಇತರೆ ಇಲಾಖೆಯ ಆಂಬ್ಯುಲೆನ್ಸ್‌ಗಳನ್ನು ಹೊರತುಪಡಿಸಿ ಆರೋಗ್ಯ…

Read More

ಮೈಸೂರು: ಮೈಸೂರು ವಿಭಾಗದ ನೈರುತ್ಯ ರೈಲ್ವೆ ವಿಭಾಗದಲ್ಲಿನ ಎಕ್ಸ್‌ಪ್ರೆಸ್, ಸೂಪರ್‌ಫಾಸ್ಟ್ ಹಾಗೂ ಪ್ರಯಾಣಿಕ ರೈಲುಗಳ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ. ಮೈಸೂರು ವಿಭಾಗದ ಮೂಲಕ ಸಂಚರಿಸುವ ಹಾಗೂ ಮೈಸೂರು ವಿಭಾಗದಿಂದ ಆರಂಭವಾಗುವ/ಅಂತ್ಯಗೊಳ್ಳುವ ಹಲವು ಎಕ್ಸ್‌ಪ್ರೆಸ್, ಸೂಪರ್‌ಫಾಸ್ಟ್, ಮೆಮು ಮತ್ತು ಪ್ರಯಾಣಿಕ ರೈಲುಗಳ ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. ಈ ಪರಿಷ್ಕರಣೆಯಡಿ ಕೆಲವು ರೈಲುಗಳ ಸಂಚಾರ ಸಮಯವನ್ನು ಮುಂಚಿತಗೊಳಿಸಲಾಗಿದ್ದು, ಕೆಲವು ರೈಲುಗಳ ಸಂಚಾರ ಸಮಯವನ್ನು ಮುಂದೂಡಲಾಗಿದೆ. ಈ ಬದಲಾವಣೆಗಳು ವಿವಿಧ ದಿನಾಂಕಗಳಿಂದ 01.01.2026ರಿಂದ ಜಾರಿಗೆ ಬರಲಿವೆ. ಉತ್ತಮ ಕಾರ್ಯಾಚರಣಾ ದಕ್ಷತೆ, ಸಮಯಪಾಲನೆಯ ಸುಧಾರಣೆ ಹಾಗೂ ವಿಭಾಗೀಯ ಸಂಚಾರವನ್ನು ಸಮರ್ಪಕವಾಗಿ ವ್ಯವಸ್ಥಿತಗೊಳಿಸುವ ಉದ್ದೇಶದಿಂದ ಈ ವೇಳಾಪಟ್ಟಿ ಪರಿಷ್ಕರಣೆ ಕೈಗೊಳ್ಳಲಾಗಿದೆ. ಈ ಬದಲಾವಣೆಗಳ ವ್ಯಾಪ್ತಿಯಲ್ಲಿ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಅರಸೀಕೆರೆ, ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ, ಯಶವಂತಪುರ, ಬೆಂಗಳೂರು, ಚೆನ್ನೈ, ತಿರುಪತಿ, ಅಜ್ಮೀರ್, ವಾರಾಣಸಿ, ಗಾಂಧಿಧಾಮ್, ಬಾರ್ಮೇರ್, ಉದಯಪುರ, ಚಂಡೀಗಢ ಹಾಗೂ ಹಜ್ರತ್ ನಿಜಾಮುದ್ದೀನ್ ನಗರಗಳನ್ನು ಸಂಪರ್ಕಿಸುವ ದೀರ್ಘ ದೂರದ ರೈಲುಗಳನ್ನು ಸೇರಿದಂತೆ…

Read More

ಶಿವಮೊಗ್ಗ: ಜಡತ್ವದಿಂದ ಹೊಂದಿರುವ ಜನರಿಗೆ ದುಡಿಮೆಯನ್ನು ಯೋಜನೆ ಕಲಿಸಿಕೊಟ್ಟಿದೆ ಪ್ರತಿಯೊಬ್ಬರಲ್ಲಿಯೂ ನಾನು ನನ್ನ ಕುಟುಂಬವನ್ನು ಹೇಗೆ ರಕ್ಷಣೆ ಮಾಡಬೇಕು ಎಂಬುದನ್ನು ಸ್ವ ಸಹಾಯ ಗುಂಪುಗಳ ಮೂಲಕ ಜನರು ಅರಿತಿದ್ದಾರೆ. ಜಾತಿ ಮತ ಭೇದ ಇಲ್ಲದೇ ಎಲ್ಲರೂ ಸಮಾನತೆಯಿಂದ ಬದುಕುವ ವಾತಾವರಣ ನಿರ್ಮಾಣ ಆಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಎಲ್ಲರಿಗೂ ಅಬಿವೃದ್ಧಿ ಹೊಂದಲು ಸಮಾನ ಅವಕಾಶ ಕಲ್ಪಿಸಿದೆ. ಈ ಕಾರಣದಿಂದಾಗಿ ಜನಸಾಮಾನ್ಯರ ಬದುಕಿಗೆ ಬೆಳಕಾಗಿದೆ ಎಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕ ನಿಗಮ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಸೋಮವಾರದಂದು ಶಿವಮೊಗ್ಗದ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಗರ ತಾಲೂಕು, ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಆನಂದಪುರ ವಲಯದ ಶ್ರೀ ವೀರಾಂಜನೇಯ ಸಭಾಭವನದಲ್ಲಿ ಆಯೋಜಿಸಲಾದ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಮದ್ಯ ವರ್ಜನಾ ಶಿಬಿರಗಳ…

Read More

ಮಂಡ್ಯ : ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪೋಲೀಸ್ ಇಲಾಖೆಯಿಂದ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದ್ದು, ಪ್ರವಾಸಿ ತಾಣಗಳಿಗೆ ಅತಿ ಹೆಚ್ಚು ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳನ್ನು ಈಗಾಗಲೇ ಜಿಲ್ಲಾಡಳಿತ ಕೈಗೊಂಡಿದ್ದು, ಪ್ರವಾಸಿಗರಿಗೂ ಸಹ ಹಲವು ಸೂಚನೆಗಳನ್ನು ನೀಡಲಾಗಿದೆ. ಹೊಸ ವರ್ಷಾಚರಣೆಯ ಸಂಬಂಧ ಮಂಡ್ಯ ಜಿಲ್ಲಾ ಪೊಲೀಸರು ಕೆ.ಆರ್.ಎಸ್ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಪ್ರವೇಶ ನಿರ್ಬಂಧಿಸಿ ಆದೇಶವನ್ನು ಹೊರಡಿಸಿದ್ದಾರೆ. ಡಿಸೆಂಬರ್ 31ರ ಬೆಳಗ್ಗೆ 6 ಗಂಟೆಯಿಂದ ಜನವರಿ 1 ರಾತ್ರಿ 8 ಗಂಟೆಯ ತನಕ ಈ ಆದೇಶ ಜಾರಿಯಲ್ಲಿರುತ್ತದೆ. ಮಂಡ್ಯ ಜಿಲ್ಲೆಯ ಕಡೆ ಹೋಗಿ ಹೊಸ ವರ್ಷಾಚರಣೆ ಮಾಡುವವರಿದ್ದರೆ ಈ ಕುರಿತು ನೀವು ಮಾಹಿತಿ ತಿಳಿದು ಪ್ರವಾಸ ಮಾಡುವುದು ಉತ್ತಮ. ಕೆ.ಆರ್‌.ಎಸ್. ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಹೊಸ ವರ್ಷದ ಪ್ರಯುಕ್ತ ಬಲಮುರಿ, ಎಡಮುರಿ ವೇಣುಗೋಪಾಲಸ್ವಾಮಿ ದೇವಾಲಯ, ಚಿಕ್ಕಯಾರಹಳ್ಳಿ ಬಳಿಯ ಕೆ.ಆರ್‌.ಸಾಗರ ಅಣೆಕಟ್ಟು, ಕಾವೇರಿ ಹಿನ್ನೀರು ಮತ್ತು ನದಿ ಪಾತ್ರದ…

Read More

ಬೆಂಗಳೂರು: ನಗರದಲ್ಲಿ ಭೀಕರ ಅವಘಡ ಸಂಭವಿಸಿದೆ. ಪಿಜಿಯೊಂದರಲ್ಲಿನ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಓರ್ವ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಕುಂದಲಹಳ್ಳಿ ಕಾಲೋನಿಯಲ್ಲಿ ಇರುವಂತ ಪಿಜಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸ್ಪೋಟಗೊಂಡು, ಈ ದುರ್ಘಟನೆ ಸಂಭವಿಸಿದೆ. ಸಿಲಿಂಡರ್ ಸ್ಪೋಟದಲ್ಲಿ ಅರವಿಂದ್(23) ಎಂಬುವರು ದುರ್ಮರಣ ಹೊಂದಿದ್ದಾರೆ. ಇನ್ನೂ ಈ ದುರ್ಘಟನೆಯಲ್ಲಿ ದೇವಿ, ವಿಶಾಲ್ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ. ಜೊತೆಗೆ ವೆಂಕಟೇಶ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಹೆಚ್ ಎ ಎಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More