Subscribe to Updates
Get the latest creative news from FooBar about art, design and business.
Author: kannadanewsnow09
ಬೀದರ್: ಗುತ್ತಿಗೆದಾರ ಸಚಿನ್ ಪಾಂಚಾಳ್ ಅವರು ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಕೊಲೆ ಬೆದರಿಕೆ ಹಾಕಿದ್ದಾರೆ ಅಂತ ಆರೋಪಿಸಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂತಹ ಗುತ್ತಿಗೆದಾರ ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರ 10 ಲಕ್ಷ ಪರಿಹಾರ ನೀಡುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಚಿನ್ ಪಾಂಚಾಳ್ ಆತ್ಮಹತ್ಯೆಗೆ ಸಂತಾಪವಿದೆ. ಈ ಘಟನೆಯಲ್ಲಿ ಕರ್ತವ್ಯ ಲೋಪ ಎಸಗಿದಂತ ಪೊಲೀಸರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಈ ಪ್ರಕರಣವನ್ನು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು. ಇನ್ನೂ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಕಟ್ಟಿತೊಗಾಂವ್ ಗ್ರಾಮದ ಸಚಿನ್ ಪಾಂಚಾಳ್ ಅವರ ಮನೆಗೆ ಭೇಟಿ ನೀಡಿದಂತ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಅಲ್ಲದೇ ಸಚಿನ್ ಕುಟುಂಬಸ್ಥರಿಗೆ ಸರ್ಕಾರದಿಂದ 10 ಲಕ್ಷ ಪರಿಹಾರವನ್ನು ನೀಡುವುದಾಗಿ ಇದೇ ಸಂದರ್ಭದಲ್ಲಿ ಘೋಷಿಸಿದರು. https://kannadanewsnow.com/kannada/it-is-mandatory-to-upload-these-five-documents-to-get-e-khata/ https://kannadanewsnow.com/kannada/pakistani-soldier-killed-11-injured-in-afghan-taliban-firing/
ಬೆಂಗಳೂರು: ನಗರದಲ್ಲಿ ಆಸ್ತಿ ಮಾಲೀಕರಿಗೆ ಇ-ಖಾತಾ ಪಡೆಯಲು ಬಿಬಿಎಂಪಿ ಮಹತ್ವದ ಮಾಹಿತಿ ಹಂಚಿಕೊಂಡಿದೆ. ಆಸ್ತಿ ಮಾಲೀಕರು ಈ ಐದು ದಾಖಲೆಗಳನ್ನು ಕಡ್ಡಾಯವಾಗಿ ಅಪ್ ಲೋಡ್ ಮಾಡಬೇಕಿದೆ. ಆ ಬಗ್ಗೆ ಮುಂದೆ ಓದಿ. ಬಿಬಿಎಂಪಿ ಇ-ಖಾತಾ 22 ಲಕ್ಷ ಆಸ್ತಿಗಳು https://bbmpeaasthi.karnataka.gov.in ನಲ್ಲಿ ಲಭ್ಯವಿದೆ. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ದೂರದೃಷ್ಟಿ ಮತ್ತು ನಾಯಕತ್ವದಲ್ಲಿ ಬಿಬಿಎಂಪಿಯು ಎಲ್ಲಾ ಬೆಂಗಳೂರಿಗರಿಗೆ ತಮ್ಮ ಸ್ವತ್ತುಗಳ ಬಿಬಿಎಂಪಿ ಇ-ಖಾತಾಗಳನ್ನು ನೀಡಲು ಸುಮಾರು 22-ಲಕ್ಷ ಕರಡು ಇ-ಖಾತಾಗಳನ್ನು ಆನ್‌ಲೈನ್‌ನಲ್ಲಿ ಇರಿಸಲಾಗಿರುತ್ತದೆ. ಎಲ್ಲಾ ನಾಗರೀಕರು ತಮ್ಮ ಬಿಬಿಎಂಪಿ ಇ-ಖಾತಾ ಪಡೆಯಲು ವಿನಂತಿಸಲಾಗಿದೆ. ಬಿಬಿಎಂಪಿಯ ಇ-ಖಾತಾ ಈಗ ನಾಗರೀಕರ ನಿಯಂತ್ರಣದಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಬಿಬಿಎಂಪಿಯ ಇ-ಖಾತಾವನ್ನು ಪಾಲಿಕೆ ಜಾಲತಾಣ https://bbmpeaasthi.karnataka.gov.in ರಲ್ಲಿ ಪಡೆಯಲು ಪಾಲಿಕೆಯಲ್ಲಿ ಸಂಪರ್ಕರಹಿತ, ಫೇಸ್‌ಲೆಸ್, ಆನ್‌ಲೈನ್ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ನಿಮ್ಮ ಆಸ್ತಿ ಇ-ಖಾತಾ ಆನ್‌ಲೈನ್‌ನಲ್ಲಿದೆ ಮತ್ತು ಅದನ್ನು ಸರಾಗವಾಗಿ ಈ ಕೆಳಗಿನಂತೆ ಪಡೆಯಿರಿ: 1. ನಿಮ್ಮ ಕರಡು ಇ-ಖಾತಾವನ್ನು ವಾರ್ಡ್ ವಾರು ಪಟ್ಟಿಯಲ್ಲಿ ಹುಡುಕಿ. (ನಿಮ್ಮ…
ಬೆಂಗಳೂರು: ರಾಜ್ಯದಲ್ಲಿ ಸಾವಿರಾರು ಜನರು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋದಕ್ಕೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಅವರಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ಸರ್ಕಾರದಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಆರಂಭ ಮಾಡಲಿದೆ. ಹೀಗಾಗಿ ನೀವು ಹೊಸದಾಗಿ BPL, APL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋ ನಿರೀಕ್ಷೆಯಲ್ಲಿದ್ದರೇ ಈ ಕೆಳಗಿನ ದಾಖಲೆಗಳನ್ನು ರೆಡಿ ಇಟ್ಕೊಳ್ಳಿ. ಕರ್ನಾಟಕ ರಾಜ್ಯ ಸರ್ಕಾರವು ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಶೀಘ್ರವೇ ಪ್ರಾರಂಭಿಸಲಿದೆ. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಕರ್ನಾಟಕ ರಾಜ್ಯದ ಎಲ್ಲಾ ಖಾಯಂ ನಿವಾಸಿಗಳು ಈಗ ಅಧಿಕೃತ ahara.kar.nic.in ವೆಬ್ಸೈಟ್ಗೆ ಭೇಟಿ ನೀಡಬಹುದು. ಕರ್ನಾಟಕ ರಾಜ್ಯದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು. ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಆನ್ ಲೈನ್ ವ್ಯವಸ್ಥೆಯ ಸಹಾಯದಿಂದ ಅರ್ಜಿದಾರರು ಮತ್ತು ಸರ್ಕಾರ ಇಬ್ಬರೂ ಸಾಕಷ್ಟು ಸಮಯ ಮತ್ತು ಶ್ರಮವನ್ನು ಉಳಿಸಬಹುದು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಮಾತ್ರ…
ಬೆಂಗಳೂರು: ಮಾಜಿ ಸಂಸದ ಡಿ.ಕೆ ಸುರೇಶ್ ಅವರ ಸಹೋದರಿ ಅಂತ ಹೇಳಿಕೊಂಡು ಜ್ಯೂವೆಲ್ಲರಿ ಅಂಗಡಿಗೆ ಶ್ವೇತಾಗೌಡ ಎಂಬುವರು ಮೋಸ ಮಾಡಿದ್ದಾರೆ ಎಂಬುದಾಗಿ ಆರೋಪಿಸಲಾಗಿತ್ತು. ಈ ಬಗ್ಗೆ ಡಿಕೆ ಸುರೇಶ್ ಏನು ಹೇಳಿದ್ರು ಅಂತ ಮುಂದೆ ಓದಿ. ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ನನ್ನ ಹೆಸರನ್ನು ಬಳಸಿಕೊಂಡು ಶ್ವೇತಗೌಡ ಎಂಬಾಕೆ ಚಿನ್ನದ ಅಂಗಡಿ ಮಾಲೀಕರಿಗೆ ವಂಚಿಸಿರುವ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ. ನನ್ನ ಹೆಸರು ದುರುಪಯೋಗ ಮಾಡಿಕೊಂಡು ಹೀಗೆ ಮಾಡಲಾಗಿದೆ. ಪೊಲೀಸರಿಂದ ಮಾಹಿತಿ ಪಡೆದು, ಇನ್ನೊಂದು ಎರಡು ಮೂರು ದಿನಗಳಲ್ಲೇ ಪೊಲೀಸ್ ಕಮೀಷನರಿಗೆ ದೂರು ನೀಡುತ್ತೇನೆ ಎಂದರು. ಈ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ ಕೈಗೊಳ್ಳಲಿದೆ. ಈ ಸಂಬಂಧ ಸಮಗ್ರ ತನಿಖೆ ನಡೆಯಲಿ ಅಂತ ತಾನು ಗೃಹ ಸಚಿವರಿಗೆ ಪತ್ರ ಬರೆಯುವುದಾಗಿಯೂ ತಿಳಿಸಿದರು. ನನಗೂ ಶ್ವೇತಾಗೌಡಗೂ ಯಾವುದೇ ಸಂಬಂಧವಿಲ್ಲ. ಒಂದೆರಡು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಆಗ ನಾನು ಹೋಗಿದ್ದೆ. ಅದು ಬಿಟ್ಟರೆ ಆಕೆ ನನಗೆ ಪರಿಚಯವಿಲ್ಲ. ನನಗೆ ಇರೋದು ಒಬ್ಬಳೇ ತಂಗಿ ಎಂಬುದಾಗಿ ಸ್ಪಷ್ಟ…
ಧಾರವಾಡ: ಜಿಲ್ಲೆಯಲ್ಲಿ ಜನರಿಗೆ ಭಯ ಹುಟ್ಟಿಸಿದ್ದಂತ ಚಡ್ಡಿ ಗ್ಯಾಂಗ್ ಅನ್ನು ಹೆಡೆಮುರಿ ಕಟ್ಟಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸರು ಚಡ್ಡಿ ಗ್ಯಾಂಗ್ ಸದಸ್ಯನ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರು, ಇಂದು ಬೆಳಿಗ್ಗೆ 3 ರಿಂದ 3.30 ಸಮಯದಲ್ಲಿ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ನವಲೂರಿನಲ್ಲಿ ವ್ಯಕ್ತಿಯೊಬ್ಬರ ಮನೆಯ ಮೇಲೆ ಕಲ್ಲು ಬೀಸಿ, ದಾಳಿ ನಡೆಸಿ ದರೋಡೆಗೆ ಯತ್ನಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ವಿದ್ಯಾಗಿರಿ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ದರೋಡೆಕೋರರ ಪತ್ತೆ ಕಾರ್ಯ ನಡೆಸಿದ್ದಾರೆ ಎಂದರು. ಈ ವೇಳೆಯಲ್ಲಿ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಹಲವರ ಬಗ್ಗೆ ಮಾಹಿತಿ ನೀಡಿದ್ದಾರೆ. ಇಂಡಸ್ಟ್ರೀಯಲ್ ಏರಿಯಾದ ಪಾರ್ಕ್ ಸುತ್ತಾಮುತ್ತಾ ಮಾಹಿತಿ ಸಿಕ್ಕ ಕಾರಣ, ಪೊಲೀಸರು ಅಲ್ಲಿಗೆ ತೆರಳುತ್ತಾರೆ. ಪೊಲೀಸರನ್ನು ಕಂಡ ಮತ್ತೊಬ್ಬ ಆರೋಪಿ ಅವರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳೋದಕ್ಕೆ ಪ್ರಯತ್ನಿಸಿದ್ದಾನೆ. ಆಗ ಸಬ್ ಇನ್ಸ್ ಪೆಕ್ಟರ್ ಪ್ರಮೋದ್ ಎಂಬುವರು ಗಾಳಿಯಲ್ಲಿ ಗುಂಡು…
ಬೆಂಗಳೂರು: ನಗರದಲ್ಲಿ ಡಿಸೆಂಬರ್.31ರ ರಾತ್ರಿಯಂದು ಹೊಸ ವರ್ಷಾಚರಣೆಯನ್ನು ವಿಜೃಂಭಣೆಯಿಂದ ಜನರು ಆಚರಿಸುತ್ತಾರೆ. ಈ ವೇಳೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಲಾಗಿದೆ. ಈ ನಿಯಮಗಳನ್ನು ಪಾಲಿಸುವಂತೆ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರು ನಗರದ ಜನತೆ ಹೊಸ ವರ್ಷಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಣೆ ಮಾಡಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಆದ್ಯತೆಯನ್ನಾಗಿ ಪರಿಗಣಿಸಿ, ನಗರದಾದ್ಯಂತ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸೂಕ್ತ ಬಂದೋಬಸ್ತ್ ಏರ್ಪಡಿಸಿಕೊಂಡು, ಕೆಳಕಂಡ ವ್ಯವಸ್ಥೆಗಳಗೆ ಕ್ರಮ ಕೈಗೊಳ್ಳಲಾಗಿದೆ. ದಿನಾಂಕ: 12-12-2024 ರಂದು ಪೊಲೀಸ್ ಆಯುಕ್ತರ ಕಛೇರಿಯಲ್ಲಿ 2025ನೇ ಸಾಲಿನ ನೂತನ ವರ್ಷಾಚರಣೆಯ ಸಂಬಂಧ ಅಪರ ಪೊಲೀಸ್ ಆಯುಕ್ತರು. ಪಶ್ಚಿಮ ರವರ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರ ಪೊಲೀಸ್, ಬಿ.ಬಿ.ಎಂ.ಪಿ., ಆರೋಗ್ಯ ಇಲಾಖೆ, ಅಬಕಾರಿ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಬೆಸ್ಕಾಂ, ಬಿ.ಎಂ.ಆರ್.ಸಿ.ಎಲ್ ಹಾಗೂ ಇತರೆ ಇಲಾಖೆಗಳು/ಸಂಸ್ಥೆಗಳೊಂದಿಗೆ ಸಭೆಯನ್ನು ಏರ್ಪಡಿಸಿದ್ದು. ಅಗತ್ಯ ಮುಂಜಾಗರೂಕತಾ…
ಬೆಂಗಳೂರು: ನಗರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ತೊಂದರೆ ಆಗದಂತೆ ಪೊಲೀಸರು ಹದ್ದಿನ ಕಣ್ಣು ನೆಟ್ಟಿದ್ದಾರೆ. ಬೆಂಗಳೂರು ನಗರದ ಎಲ್ಲಾ ಫ್ರೈ ಓವರ್ ಗಳಲ್ಲಿ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗುತ್ತಿದೆ. ಎಲ್ಲೆಡೆ ಪೊಲೀಸರ ಬಿಗು ಬಂದೋಬಸ್ತ್ ಕೈಗೊಳ್ಳಲಾಗಿದೆ. ಜೊತೆಗೆ ಸಿಸಿಟಿವಿ ಕ್ಯಾಮರಾ ಕಣ್ಗಾವಲಿರಿಸಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ಬೆಂಗಳೂರಲ್ಲಿ ಹೊಸ ವರ್ಷಾಚರಣೆಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಡಿಸೆಂಬರ್ 31ರ ಮಧ್ಯರಾತ್ರಿ 1ರ ನಂತ್ರ ಎಲ್ಲಾ ಫ್ಲೈಓವರ್ ಗಳನ್ನು ಬಂದ್ ಮಾಡಲಾಗುತ್ತಿದೆ. ಮೇಲ್ ಸೇತುವೆಯ ಮೇಲೆ ವಾಹನಗಳ ಸಂಚಾರವನ್ನು ನಿಷೇಧಿಸುತ್ತಿರುವುದಾಗಿ ತಿಳಿಸಿದರು. ಎಂಜಿ ರೋಡ್, ಬ್ರಿಗೇಡ್ ರೋಡ್ ಗಳಲ್ಲಿ ಪೊಲೀಸರ ಭದ್ರತೆಯನ್ನು ಹೆಚ್ಚಿಸಲಾಗಿದೆ. ವಾಚ್ ಟವರ್ ನಿರ್ಮಾಣ ಮಾಡಲಾಗಿದೆ. ಹೆಚ್ಚಿನ ಸಿಸಿಟಿವಿ ಅಳವಡಿಸಲಾಗಿದೆ. ಪೊಲೀಸರ ಭದ್ರತೆಯನ್ನು ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲು ನಿಯೋಜಿಸಲಾಗಿದೆ ಎಂದರು. ಇನ್ನೂ ಬೆಂಗಳೂರಲ್ಲಿ ಡಿಸೆಂಬರ್.31ರಂದು ರಾತ್ರಿ…
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಅಧಿಕಾರಿ, ಸಿಬ್ಬಂದಿಗಳಿಗೆ ಮಹತ್ವದ ಮಾಹಿತಿಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿದೆ. ಅದೇ ಇ-ಗ್ರಾಮ ಸ್ವರಾಜ್ ತಂತ್ರಾಂಶದ ತಾಂತ್ರಿಕ ಸಮಸ್ಯೆ ಪರಿಹಾರಿಸಲಾಗಿದೆ. ಈ ಮೂಲಕ ಗ್ರಾಮ ಪಂಚಾಯತಿಗಳ ಅನುದಾನ ಬಳಕೆಗೆ ಅನುಕೂಲ ಮಾಡಿಕೊಡಲಾಗಿದೆ. ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇ-ಗ್ರಾಮ ಸ್ವರಾಜ್ ತಂತ್ರಾಂಶದೊಂದಿಗೆ ಇರುವ ಸಂಯೋಜನೆಯಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ 2024-25 ನೇ ಸಾಲಿನ 15ನೇ ಹಣಕಾಸು ಆಯೋಗದ ಅನಿರ್ಬಂಧಿತ ಮೋದಲನೇ ಕಂತಿನ ಅನುದಾನವನ್ನು ಬಳಕೆ ಮಾಡಿಕೊಳ್ಳಲು ಕೆಲವು ಗ್ರಾಮ ಪಂಚಾಯತಿಗಳಿಗೆ ಸಾಧ್ಯವಾಗಿರಲಿಲ್ಲ ಎಂದು ತಿಳಿಸಿದೆ. ಇದೀಗ ಇ-ಸ್ವರಾಜ್ ತಂತ್ರಾಂಶದಲ್ಲಿ ಎದುರಾಗಿದ್ದ ತಾಂತ್ರಿಕ ತೊಂದರೆಗಳನ್ನು ನಿವಾರಿಸಲಾಗಿರುವುದರಿಂದ ಅಂತಹ ಗ್ರಾಮ ಪಂಚಾಯತಿಗಳು ಈಗ ಇ-ಗ್ರಾಮ ಸ್ವರಾಜ್ ತಂತ್ರಾಂಶದ ಮೂಲಕ ಅನುದಾನ ಬಳಸಿಕೊಳ್ಳಬಹುದಾಗಿದೆ ಎಂದು ತಿಳಿಸಿದೆ. https://kannadanewsnow.com/kannada/congress-president-sonia-gandhi-pays-last-respects-to-manmohan-singh/ https://kannadanewsnow.com/kannada/bandipur-banned-on-new-years-eve/
ಬೆಂಗಳೂರು: ರಾಜ್ಯದಲ್ಲಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋದು ಮತ್ತಷ್ಟು ಸರಳಗೊಳಿಸಲಾಗಿದೆ. ಮನೆಯಿಂದಲೇ, ಕುಳಿತಲ್ಲಿಯೇ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಹಾಗಾದ್ರೇ ಅದೇಗೆ.? ಮಾನದಂಡಗಳೇನು ಎಂಬುದು ಸೇರಿದಂತೆ ಇತರೆ ಮಾಹಿತಿ ಮುಂದಿದೆ ಓದಿ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ 2024ನೇ ಸಾಲಿನ ಪಡಿತರ ಚೀಟಿಗಾಗಿ ಆನ್ ಲೈನ್ ಅರ್ಜಿಗಳನ್ನು www.ahara.kar.nic.in ರಂದು ಆರಂಭಿಸಿದೆ. ಕರ್ನಾಟಕದ ನಿವಾಸಿಗಳು ಈಗ ಆನ್ಲೈನ್ನಲ್ಲಿ ಹೊಸ ಪಡಿತರ ಚೀಟಿಗಾಗಿ ಸುಲಭವಾಗಿ ಅರ್ಜಿ ಸಲ್ಲಿಸಬಹುದು ಮತ್ತು ಪಿಡಿಎಫ್ ರೂಪದಲ್ಲಿ ಸಂಪೂರ್ಣ ಅರ್ಜಿ ಪ್ರಕ್ರಿಯೆಯನ್ನು ಪ್ರವೇಶಿಸಬಹುದು. 2024 ರ ಕರ್ನಾಟಕ ಪಡಿತರ ಚೀಟಿ ಪಟ್ಟಿಯಲ್ಲಿ ಪಟ್ಟಿ ಮಾಡದ ವ್ಯಕ್ತಿಗಳು ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು ಮತ್ತು ಕಾರ್ಯವಿಧಾನಗಳ ಬಗ್ಗೆ ಮಾಹಿತಿಯನ್ನು ಪಡೆಯಬಹುದು. ಹೆಚ್ಚುವರಿಯಾಗಿ, ಅರ್ಜಿದಾರರು ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ತಮ್ಮ ಸೇರ್ಪಡೆ ವಿನಂತಿಯ ಸ್ಥಿತಿಯನ್ನು ಆನ್ ಲೈನ್ ನಲ್ಲಿ ಟ್ರ್ಯಾಕ್ ಮಾಡಬಹುದು. ಕರ್ನಾಟಕದಲ್ಲಿ ಆನ್ ಲೈನ್…
ಬೆಂಗಳೂರು: ಇ-ಗ್ರಾಮ ಸ್ವರಾಜ್ ತಂತ್ರಾಂಶದ ತಾಂತ್ರಿಕ ಸಮಸ್ಯೆ ಪರಿಹಾರವಾಗಿದೆ. ಇದು ಗ್ರಾಮ ಪಂಚಾಯತಿಗಳ ಅನುದಾನ ಬಳಕೆಗೆ ಅನುಕೂಲಕಾರಿಯಾಗಿದೆ ಅಂತ ಗ್ರಾಮೀಣಾಭಿವೃದ್ಧಿ ಇಲಾಖೆ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇ-ಗ್ರಾಮ ಸ್ವರಾಜ್ ತಂತ್ರಾಂಶದೊಂದಿಗೆ ಇರುವ ಸಂಯೋಜನೆಯಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ 2024-25 ನೇ ಸಾಲಿನ 15ನೇ ಹಣಕಾಸು ಆಯೋಗದ ಅನಿರ್ಬಂಧಿತ ಮೋದಲನೇ ಕಂತಿನ ಅನುದಾನವನ್ನು ಬಳಕೆ ಮಾಡಿಕೊಳ್ಳಲು ಕೆಲವು ಗ್ರಾಮ ಪಂಚಾಯತಿಗಳಿಗೆ ಸಾಧ್ಯವಾಗಿರಲಿಲ್ಲ. ಎದುರಾಗಿದ್ದ ತಾಂತ್ರಿಕ ತೊಂದರೆಗಳನ್ನು ನಿವಾರಿಸಲಾಗಿರುವುದರಿಂದ ಅಂತಹ ಗ್ರಾಮ ಪಂಚಾಯತಿಗಳು ಈಗ ಇ-ಗ್ರಾಮ ಸ್ವರಾಜ್ ತಂತ್ರಾಂಶದ ಮೂಲಕ ಅನುದಾನ ಬಳಸಿಕೊಳ್ಳಬಹುದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಟಣೆ ತಿಳಿಸಿದೆ. https://kannadanewsnow.com/kannada/former-pm-manmohan-singhs-funeral-the-pioneer-of-economic-revolution-is-still-a-memory/ https://kannadanewsnow.com/kannada/congress-president-sonia-gandhi-pays-last-respects-to-manmohan-singh/