Subscribe to Updates
Get the latest creative news from FooBar about art, design and business.
Author: kannadanewsnow09
ದಕ್ಷಿಣ ಕನ್ನಡ: ಕೆಲ ದಿನಗಳ ಹಿಂದಷ್ಟೇ ನೆಲಮಂಗಲದಲ್ಲಿ ಕಾರು ಅಪಘಾತದಲ್ಲಿ ಇಡೀ ಕುಟುಂಬವೇ ದುರ್ಮರಣಕ್ಕೆ ಈಡಾದಂತ ಘಟನೆ ನಡೆದಿತ್ತು. ಈ ಘಟನೆ ಹಸಿರಾಗಿರೋ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಭೀಕರ ಕಾರು ಅಪಘಾತ ಪ್ರಕರಣ ನಡೆದಿದೆ. ಈ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಪರ್ಲಡ್ಕ ಎಂಬಲ್ಲಿ ಕಂದಕಕ್ಕೆ ಕಾರೊಂದು ಉರುಳಿ ಬಿದ್ದ ಪರಿಣಾಮ ಮೂವರು ದುರ್ಮರಣ ಹೊಂದಿರುವುದಾಗಿ ತಿಳಿದು ಬಂದಿದೆ. ಮೃತರನ್ನು ಚಿದಾನಂದ, ಅಣ್ಣು ನಾಯಕ್ ಹಾಗೂ ರಮೇಶ್ ನಾಯ್ಕ್ ಎಂಬುದಾಗಿ ಗುರುತಿಸಲಾಗಿದೆ. ಮೃತರೆಲ್ಲರೂ ಸುಳ್ಯ ತಾಲ್ಲೂಕಿನ ಜಟ್ಟಿಪಳ್ಳ ನಿವಾಸಿಗಳು ಎಂಬುದಾಗಿ ಹೇಳಲಾಗುತ್ತಿದೆ. ನಿದ್ದೆ ಮಂಪರಿನಲ್ಲಿ ಕಾರು ಚಾಲನೆಯ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಈ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/karnataka-cm-siddaramaiah-pays-last-respects-to-former-pm-manmohan-singh/ https://kannadanewsnow.com/kannada/congress-president-mallikarjun-kharge-pays-last-respects-to-manmohan-singh/
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂತಿಮ ನಮನ ಸಲ್ಲಿಸಿದರು. ಇಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪಕ್ಷದ ಕಾರ್ಯಕರ್ತರ ಅಂತಿಮ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಅಲ್ಲಿಯೇ ಇರಿಸಲಾಗಿದೆ. ಎಐಸಿಸಿ ಕಚೇರಿಗೆ ತೆರಳಿದಂತ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. https://twitter.com/ANI/status/1872852745511903546 https://kannadanewsnow.com/kannada/job-news-sbi-invites-applications-for-13735-clerical-posts-apply-today/ https://kannadanewsnow.com/kannada/karnataka-cm-siddaramaiah-pays-last-respects-to-former-pm-manmohan-singh/
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅಂತಿಮ ನಮನ ಸಲ್ಲಿಸಿದರು. ಇಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಐಸಿಸಿ ಕಚೇರಿಗೆ ತೆರಳಿದಂತ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಮನಮೋಹನ್ ಸಿಂಗ್ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದರು. https://twitter.com/ANI/status/1872853283481764158 https://kannadanewsnow.com/kannada/bandipur-banned-on-new-years-eve/ https://kannadanewsnow.com/kannada/karnataka-cm-siddaramaiah-pays-last-respects-to-former-pm-manmohan-singh/
ನವದೆಹಲಿ: ಡಿಸೆಂಬರ್.26ರಂದು ನಿಧನರಾದಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರವನ್ನು ಇಂದು ನೆರವೇರಿಸಲಾಗುತ್ತದೆ. ಇದಕ್ಕೂ ಮುನ್ನ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪಡೆದರು. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಾಂಗ್ರೆಸ್ ನಯಾಕರು ಸೇರಿದಂತೆ ಹಲವು ಗಣ್ಯರು ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ಇಂದು ದೆಹಲಿಗೆ ತೆರಳಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಎಐಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರ ಆಗಮನಕ್ಕೂ ಮುನ್ನಾ ಕಾಂಗ್ರೆಸ್ ಕಚೇರಿಯಲ್ಲಿ ಇರಿಸಿದ್ದಂತ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದರು. ಇದೀಗ ಎಐಸಿಸಿ ಕಚೇರಿಗೆ ಆಗಮಿಸಿರುವಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಪುಷ್ಪಗುಚ್ಚವಿರಿಸಿ ಪಡೆದರು. https://kannadanewsnow.com/kannada/job-news-sbi-invites-applications-for-13735-clerical-posts-apply-today/ https://kannadanewsnow.com/kannada/young-man-commits-suicide-by-jumping-into-river-after-falling-victim-to-online-game-fraud/
ಮಂಗಳೂರು: ಆನ್ ಲೈನ್ ಆಟದ ಗೀಳಿಗೆ ಬಿದ್ದಂತ ಯುವಕನೊಬ್ಬ, ಅದರಿಂದ ವಂಚನೆಗೂ ಒಳಗಾಗಿದ್ದನು. ಈ ಕಾರಣದಿದಂಲೇ ಮನನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಮಂಗಳೂರಿನ ಮೂಡುಶೆಡ್ಡ ಗ್ರಾಮದ ನಿವಾಸಿ ಸೂರ್ಯ ಶೆಟ್ಟಿ(23) ಎಂಬಾತನೇ ಆನ್ ಲೈನ್ ಆಟದ ವಂಚನೆಗೆ ಬಲಿಯಾಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಯುವಕ ಆಗಿದ್ದಾನೆ. ಮೃತ ಸೂರ್ಯ ಶೆಟ್ಟಿ ಆನ್ ಲೈನ್ ನಲ್ಲಿ ಹಣ ಹೂಡಿಕೆ ಮಾಡಿ ಆಟ ಆಡುತ್ತಿದ್ದನಂತೆ. ಬುಧವಾರದಂದು ಗೆಳೆಯನೊಬ್ಬನಿಂದ 83 ಸಾವಿರ ಸಾಲ ಪಡೆದು, ಆನ್ ಲೈನ್ ಆಟದಲ್ಲಿ ಹಣ ಕಳೆದುಕೊಂಡಿದ್ದಾನೆ. ಇದರಿಂದ ಚಿಂತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/private-bus-accident-near-tumakuru-driver-killed-four-injured/ https://kannadanewsnow.com/kannada/impact-of-depression-in-bay-of-bengal-heavy-rains-likely-in-several-parts-of-the-state-today/
ನವದೆಹಲಿ: ಡಿ.26ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದರು. ಅವರ ಪಾರ್ಥೀವ ಶರೀರವನ್ನು ದೆಹಲಿಯ AICC ಕಚೇರಿಗೆ ಶಿಫ್ಟ್ ಮಾಡಲಾಗಿದೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಇದೀಗ ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕೊಂಡೊಯ್ಯಲಾಗಿದೆ. ಇಂದು ಬೆಳಿಗ್ಗೆ 9.30 ರವರೆಗೆ ಸಾರ್ವಜನಿಕರಿಗೆ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಗೌರವ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಯಾತ್ರೆಯನ್ನು ಇಂದು ಬೆಳಿಗ್ಗೆ 9.30ಕ್ಕೆ ಎಐಸಿಸಿ ಪ್ರಧಾನ ಕಚೇರಿಯಿಂದ ಸ್ಮಶಾನಕ್ಕೆ ಪ್ರಾರಂಭವಾಗಲಿದೆ. ಆ ಬಳಿಕ ಬೆಳಿಗ್ಗೆ 11.45ಕ್ಕೆ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಗುತ್ತದೆ. https://kannadanewsnow.com/kannada/impact-of-depression-in-bay-of-bengal-heavy-rains-likely-in-several-parts-of-the-state-today/ https://kannadanewsnow.com/kannada/bandipur-banned-on-new-years-eve/
ತುಮಕೂರು: ಜಿಲ್ಲೆಯಲ್ಲಿ ಖಾಸಗಿ ಬಸ್ ಒಂದು ಸ್ವಾಗತ ನಾಮಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ತುಮಕೂರಿನ ರಾಷ್ಟ್ರೀಯ ಹೆದ್ದಾರಿ 75ರ ತಾಲ್ಲೂಕಿನ ಅಂಚೆಪಾಳ್ಯ ಇಂದು ಬೆಳಗಿನ ಜಾವ ರಸ್ತೆಯಲ್ಲಿನ ಸ್ವಾಗತ ನಾಮಫಲಕಕ್ಕೆ ಬಸ್ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಮಂಗಳೂರಿನ ಬಿಸಿ ರೋಡ್ ನಿವಾಸಿ ಚಾಲಕ ಮೊಹಮ್ಮದ್ ಇಬ್ರಾಹಿಂ(40) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂದಹಾಗೇ ಖಾಸಗಿ ಬಸ್ ಉಡುಪಿಯ ಸುಭಾಷ್ ನಗರದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದರೇ, ಇನ್ನೂ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/bandipur-banned-on-new-years-eve/ https://kannadanewsnow.com/kannada/impact-of-depression-in-bay-of-bengal-heavy-rains-likely-in-several-parts-of-the-state-today/
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಹವಾಮಾನ ಇಲಾಖೆಯು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾ ಡಿ.28ರ ಇಂದು ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಅಂತ ತಿಳಿಸಿದೆ. ಇನ್ನೂ ಡಿ.29ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕ್ಷೀಣಿಸಲಿದೆ. ನಿನ್ನೆ ಬೆಂಗಳೂರು, ಮಂಡ್ಯ, ದಾವಣಗೆರೆ, ರಾಮನಗರ, ತುಮಕೂರು, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕರಾವಳಿ, ಮಲೆನಾಡು ಹಾಗೂ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಇಂದು ಸಹ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. https://kannadanewsnow.com/kannada/mla-munirathna-challenged-kusuma-the-defeated-congress-candidate-from-rr-nagar-constituency/ https://kannadanewsnow.com/kannada/bandipur-banned-on-new-years-eve/
ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಬಂಡೀಪುರಕ್ಕೆ ಹೊಸ ವರ್ಷದ ಮುನ್ನಾ ದಿನ ಹಾಗೂ ಹೊಸ ವರ್ಷದಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ವರ್ಷಾಂತ್ಯದ ಹಿನ್ನಲೆಯಲ್ಲಿ ಪ್ರಸಿದ್ಧ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಬಂಡೀಪುರದಲ್ಲಿ ಪ್ರವಾಸಿಗರ ದಂಡೇ ನೆರೆದು, ಮೋಜು-ಮಸ್ತಿ ಮಾಡುವ ಕಾರಣ, ವನ್ಯಜೀವಿಗಳ ಸಹಜ ಜೀವನಕ್ಕೆ ಧಕ್ಕೆಯಾಗಲಿದೆ ಎಂಬುದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಡಿಸೆಂಬರ್ 31 ಮತ್ತು ಜನವರಿ 1ರಂದು ಬಂಡೀಪುರದ ಅರಣ್ಯ ಇಲಾಖೆಯ ವಸತಿ ಗೃಹಗಳು ಲಭ್ಯವಿರುವುದಿಲ್ಲ. ಹೀಗಾಗಿ ಅರಣ್ಯ ಇಲಾಖೆಗೆ ಸೇರಿದ ವಸತಿಗೃಹಗಳು, ಕಾಟೇಜ್ ಗಳಲ್ಲಿ ಪ್ರತ್ಯೇಕವಾಗಿ ಈ ಎರಡು ದಿನ ವಾಸ್ತವ್ಯಕ್ಕೆ ಅವಕಾಶವಿರುವುದಿಲ್ಲ. ಅಂದಹಾಗೇ ಪ್ರತಿ ವರ್ಷವೂ ವನ್ಯ ಜೀವಿಗಳ ಸಹಜ ಜೀವನಕ್ಕೆ ತೊಂದರೆ ಆಗುವ ಕಾರಣಕ್ಕೆ ನಿರ್ಬಂಧ ಹೇರಲಾಗುತ್ತಿದೆ. ಅದರಂತೆ ಈ ಬಾರಿಯೂ ಹೊಸ ವರ್ಷಾಚರಣೆಯಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶಿಸಿದೆ. https://kannadanewsnow.com/kannada/mla-munirathna-challenged-kusuma-the-defeated-congress-candidate-from-rr-nagar-constituency/ https://kannadanewsnow.com/kannada/government-to-build-memorial-in-honour-of-former-pm-manmohan-singh/
ಬೆಂಗಳೂರು: ನನ್ನ ಮೇಲೆ ಸುಳ್ಳು ಅತ್ಯಾಚಾರ ದೂರು ನೀಡಿದ್ದರ ಹಿಂದೆ ಆರ್ ಆರ್ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದಂತ ಕುಸುಮಾ ಹನುಮಂತರಾಯಪ್ಪ ಅವರ ಕೈವಾಡವಿದೆ ಅಂತ ಶಾಸಕ ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ಹಾಕಲಾಗಿದೆ. ಈ ಬಗ್ಗೆ ನಾನು ಆದಿಚುಂಚನಗಿರಿಯ ಕಾಲ ಭೈರವ ದೇಗುಲಕ್ಕೆ ಬರುತ್ತೇನೆ. ಕುಸುಮಾ ಕೂಡ ಬರಲಿ. ಅತ್ಯಾಚಾರ ದೂರು ನೀಡಿದಂತವರು ಪರಿಚಯವೇ ಇಲ್ಲ ಅಂತ ದೇವರ ಮುಂದೆ ಪ್ರಮಾಣ ಮಾಡಲಿ ಎಂಬುದಾಗಿ ಸವಾಲ್ ಹಾಕಿದರು. ವಿದ್ಯಾವಂತೆ, ಬುದ್ಧಿವಂತೆಯಾದ ನೀವು ಈ ಮಟ್ಟದ ಕೀಳು ರಾಜಕಾರಣಕ್ಕೆ ಇಳಿಯಬೇಡಿ. ಕ್ಷೇತ್ರದಲ್ಲಿ ಕೆಲಸ ಮಾಡಲು ಸಹಾಯ ಮಾಡಿ, ಬರೀ ಅಪಪ್ರಾಚಾರ ಮಾಡಬೇಡಿ ಅಂತ ಕಿಡಿಕಾರಿದರು. https://kannadanewsnow.com/kannada/government-to-build-memorial-in-honour-of-former-pm-manmohan-singh/ https://kannadanewsnow.com/kannada/tea-bags-release-billions-of-harmful-microplastics-study-adds/