Author: kannadanewsnow09

ಬೆಂಗಳೂರು: ಎರಡು ನಾಲಿಗೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮನೆಹಾಳು ಕಾಂಗ್ರೆಸ್‌ ಬರ-ಪ್ರವಾಹ ಪರಿಹಾರವಾಗಿ ರಾಜ್ಯಕ್ಕೆ ಕೇವಲ ಚಿಪ್ಪು ನೀಡಿದೆ. ಆದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭರಪೂರ ಪರಿಹಾರ ನೀಡಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ‌ ಸುಳ್ಳುರಾಮಯ್ಯ ಆಗಿದ್ದು, ರಾವಣನಿಗೆ ಹತ್ತು ತಲೆ ಇದ್ದಂತೆ ಇವರು ಹತ್ತು ನಾಲಿಗೆ ಇಟ್ಟುಕೊಂಡು ಮಾತಾಡುತ್ತಿದ್ದಾರೆ. ಈ ಮೊದಲು ಮಾರ್ಗಸೂಚಿ ಪ್ರಕಾರ, 4,860 ಕೋಟಿ ರೂ. ನಷ್ಟ ಪರಿಹಾರ ನೀಡಬೇಕು ಎಂದು ಕೇಳಿ ಈಗ ಕೇಂದ್ರ ಸರ್ಕಾರ 3,454 ಕೋಟಿ ರೂ. ನೀಡಿದ ನಂತರ 18,172 ಕೋಟಿ ರೂ. ನೀಡಬೇಕೆಂದು ಪ್ರತಿಭಟನೆ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಎರಡು ನಾಲಿಗೆ ಹೊಂದಿದ್ದು, ಈ ಸರ್ಕಾರ ತೊಲಗಬೇಕು, ಕಾಂಗ್ರೆಸ್‌ ತೊಲಗಲಿ, ಇಲ್ಲವಾದರೆ ರಾಜ್ಯಕ್ಕೆ ಉಳಿಗಾಲವಿಲ್ಲ ಎಂದರು. ಕಾಲುಭಾಗ ಹಣ ಬಿಡುಗಡೆ 2004-05 ರಲ್ಲಿ ಬರ ಬಂದಾಗ ನವೆಂಬರ್‌ನಲ್ಲಿ ರಾಜ್ಯ ಸರ್ಕಾರ 1147.70 ಕೋಟಿ ರೂ.…

Read More

ಹಾವೇರಿ: ಕೇಂದ್ರ ಸರ್ಕಾರ ನೀಡಿರುವ ಪರಿಹಾರದ ಮೊತ್ತಕ್ಕೆ ಸಮನಾಗಿ ರಾಜ್ಯ ಸರ್ಕಾರವೂ ತನ್ನ ಖಜಾನೆಯಿಂದ ಹಣ ಹಣ ಸೇರಿಸಿ ರೈತರಿಗೆ ಬರ ಪರಿಹಾರವನ್ನು ತಕ್ಷಣವೇ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿಂದು ತುರ್ತು ಪತ್ರಿಕಾಗೋಷ್ಠಿ ನಡೆಸಿ ಯುಪಿಎ ಹಾಗೂ ಎನ್ ಡಿಎ ಅವಧಿಯಲ್ಲಿ ರಾಜ್ಯಕ್ಕೆ ಬಿಡಿಗಡೆಯಾದ ಪರಿಹಾರದ ದಾಖಲೆ ಬಿಡುಗಡೆ ಮಾಡಿ ಮಾತಮಾಡಿದರು. ಬರ ಪರಿಹಾರದ ಬಗ್ಗೆ ಕಾಂಗ್ರೆಸ್ ಸರ್ಕಾರ ಹಿಂದೆದು ಕಾಣದ ರಾಜಕಾಣರ ಮಾಡುತ್ತಿದೆ. ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ವಿಳಂಬ ಆಯಿತು ಎಂದು ಕಾಂಗ್ರೆಸ್ ನವರು ಹೇಳಿದ್ದಾರೆ. ಯುಪಿಎ ಅವಧಿಯಲ್ಲಿ ಒಂದು ವರ್ಷ, ಎಂಟು ತಿಂಗಳ ನಂತರ ಬರ ಪರಿಹಾರ ಕೊಟ್ಟಿದ್ದಾರೆ. ಆಗ ಎಂದೂ ಪ್ರತಿಭಟನೆ ಮಾಡದ ಕಾಂಗ್ರೆಸ್ ನವರು ಇವತ್ತು ಪ್ರತಿಭಟನೆ ಮಾಡುತ್ತಿದ್ದಾರೆ. ಆನೆ ಹೊಟ್ಟಿಗೆ ಅರೆ ಕಾಸಿನ ಮಜ್ಜಿಗೆ ಅಂತ ಹೇಳಿದ್ದಾರೆ.ಆದರೆ, ಯುಪಿಎ ಅವಧಿಯಲ್ಲಿ ಹತ್ತು ವರ್ಷದಲ್ಲಿ 1954 ಕೋಟಿ ರೂ.…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರ ವೀಡಿಯೋ ಎನ್ನಲಾದಂತ ರಾಸಲೀಲೆ ಪ್ರಕರಣವನ್ನುಎಸ್ ಐಟಿ ತನಿಖೆಗೆ ವಹಿಸಿ ಅಧಿಕೃತ ಆದೇಶ ಮಾಡಲಾಗಿದೆ. ಅಲ್ಲದೇ ಸಿಐಡಿಯ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ ಆದೇಶಿಸಿದೆ. ಇಂದು ಈ ಸಂಬಂಧ ಆದೇಶವನ್ನು ಹೊರಡಿಸಲಾಗಿದ್ದು,  ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವಿಡಿಯೋ ಚಿತ್ರೀಕರಣವು ಮಾಧ್ಯಮಗಳಲ್ಲಿ ಪಚಾರವಾಗಿದ್ದು, ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು ಮತ್ತು ಅದನ್ನು ಸಾರ್ವಜನಿಕ ಪಡಿಸಿದ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಲು ಆದೇಶ ನೀಡಬೇಕೆಂದು ಹಾಗೂ ಆರೋಪಿಗಳ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು ರವರು ಕೋರಿರುತ್ತಾರೆ ಎಂದಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ…

Read More

ಬೆಂಗಳೂರು: ಮೋದಿ ಅವರೇ ನಿಮ್ಮ ಮಿತ್ರ ಪಕ್ಷದ ಅಭ್ಯರ್ಥಿ ಸಾವಿರಾರು ಮಹಿಳೆಯರ ಮಾಂಗಲ್ಯ ಕಸಿದಿದ್ದಾರೆ. ಇದರ ವಿರುದ್ಧ ನಿಮ್ಮ ಮೌನವೇಕೆ? ನಿಮ್ಮ ಮಾಂಗಲ್ಯ ಕಸಿಯುವ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು, ಕ್ಷಮೆ ಕೇಳಬೇಕು. ರಾಜ್ಯದ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ತಮ್ಮ ಎಲ್ಲಾ ಸ್ಥಾನಗಳಿಗೂ ರಾಜೀನಾಮೆ ಕೊಡಬೇಕು ಎಂಬುದಾಗಿ ಕಾಂಗ್ರೆಸ್ ನ ಮಂಜುಳಾ ನಾಯ್ಡು ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಪ್ರಜ್ವಲ್ ರೇವಣ್ಣ ಅವರ ಕಾಮ ಕಾಂಡ ಇಡೀ ವಿಶ್ವ, ದೇಶದ ನಾಗರೀಕ ಸಮಾಜ ತಲೆ ತಗ್ಗಿಸುವ ಹಾಗೂ ಅವಮಾನಕರ ಸಂಗತಿ. ಕೆಲಸದ ಜಾಗದಲ್ಲಿ ಹೆಣ್ಣುಮಕ್ಕಳ ಮೇಲೆ ಶೋಷಣೆ ನಡೆಯುತ್ತದೆ ಎಂದು ಕಾನೂನು ತರುವ ರಾಜಕಾರಣಿಯೇ ತನ್ನ ಸುತ್ತ ಇರುವ ಮಹಿಳೆಯರನ್ನು ಬಳಿಸಿಕೊಂಡು ಮಾಡಿರುವ ಕೃತ್ಯ ನಾಚಿಕೆಗೇಡು ಎಂಬುದಾಗಿ ಕಿಡಿಕಾರಿದರು. ನೂರಾರು ವರ್ಷಗಳಿಂದ ಹೋರಾಟ ಮಾಡಿ ಮಹಿಳೆಯರ ಬದುಕಿಗೆ ಘನತೆ ತಂದು ಕೊಟ್ಟರೆ ಇವರು ಅದನ್ನು ಹಾಳು ಮಾಡಿ ಕೆಟ್ಟ ಉದಾಹರಣೆಯನ್ನು ಸಮಾಜಕ್ಕೆ ಕೊಟ್ಟಿರುವುದು ಹೀನ ಕೃತ್ಯ. ಶೋಷಣೆಗೆ ಒಳಗಾದ ಮಹಿಳೆಯರು…

Read More

ಬೆಂಗಳೂರು: ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಕ್ರಿಮಿನಲ್ ಮೊಕ್ಕದ್ದಮ್ಮೆ ಪ್ರಕರಣದ ತನಿಖೆಗಾಗಿ ಸಿಐಡಿಯ ವಿಶೇಷ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಒಳಾಡಳಿತ ಇಲಾಖೆಯ ಅಪರಾಧಗಳು ವಿಭಾಗದ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಅದರಲ್ಲಿ ಹಾಸನ ಜಿಲ್ಲೆಯಲ್ಲಿ ಮಹಿಳೆರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಹಾಗೂ ಈ ಸಂಬಂಧ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯ ಕ್ರಿಮಿನಲ್ ಮೊಕದ್ದಮ್ಮೆ ಸಂಖ್ಯೆ 107/2024 ಕಲಂ 354ಎ, 354ಡಿ, 506, 509 ಐಪಿಸಿ ರಡಿ ದಾಖಲಾಗಿರುವ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯ ವಿಶೇಷ ತನಿಖಾ ಸಂಸ್ಥೆಯಾದ ಸಿಐಟಿಯ ಒಂದು ವಿಶೇಷ ತನಿಖಾ ತಂಡವನ್ನು ರಚಿಸಿ ಸರ್ಕಾರ ಆದೇಶಿಸಿದೆ ಎಂದಿದ್ದಾರೆ. ರಾಜ್ಯ ಸರ್ಕಾರ ರಚಿಸಿರುವಂತ ಸಿಐಡಿಯ ಎಸ್ ಐಟಿ ತಂಡ ವಿಶೇಷ ತಂಡ ಮುಖ್ಯಸ್ಥರನ್ನಾಗಿ ಬೆಂಗಳೂರಿನ ಸಿಐಡಿಯ ಅಪರ ಪೊಲೀಸ್ ಮಹಾನಿರ್ದೇಶಕರಾದಂತ ಬಿಜಯ ಕುಮಾರ್ ಸಿಂಗ್ ಅವರನ್ನು ನೇಮಿಸಲಾಗಿದೆ. ಸದಸ್ಯರನ್ನಾಗಿ…

Read More

ಬೆಂಗಳೂರು: ಹಾಸನ ಪೆನ್ ಡ್ರೈವ್ ವಿಚಾರವಾಗಿ ಮೋದಿಯವರೇ ನಿಮ್ಮ ಮಿತ್ರ ಪಕ್ಷದ ಪ್ರಜ್ವಲ್ ರೇವಣ್ಣ ಕೃತ್ಯದ ಬಗ್ಗೆ ಮಾತನಾಡಿ ಎಂಬುದಾಗಿ ಕಾಂಗ್ರೆಸ್ ಪಕ್ಷದ  ಕವಿತಾರೆಡ್ಡಿ ಆಗ್ರಹಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದಂತ ಅವರು, ಮಾಜಿ ಪ್ರಧಾನಿ ಕುಟುಂಬದ ಸದಸ್ಯ ಪ್ರಜ್ವಲ್ ರೇವಣ್ಣ ಮಾಡಿರುವ ಈ ಹೀನ ಕೃತ್ಯ ಖಂಡನಿಯ. ಈ ಕುಟುಂಬದ ಸದಸ್ಯರು ಎಲ್ಲಾ ಅಧಿಕಾರಗಳನ್ನು ಅನುಭವಿಸಿರುವವರು. ಎಲ್ಲಾ ಹುದ್ದೆಗಳ ರುಚಿ ಕಂಡಿದ್ದಾರೆ. ಇಂತಹ ಕುಟುಂಬದ ಸದಸ್ಯ ಯಾವುದೇ ಕಾನೂನಿನ ಭಯ ಇಲ್ಲದೆ ಜರ್ಮನಿಗೆ ಹಾರಿ ಹೋಗಿದ್ದಾರೆ. ಇವರಿಂದ ಶೋಷಣೆಗೆ ಒಳಗಾದ ಮಹಿಳೆಯರನ್ನು ಹೇಗೆ ರಕ್ಷಣೆ ಮಾಡುವುದು ಎನ್ನುವುದೇ ಚಿಂತೆಯಾಗಿದೆ ಎಂದು ಕಳವಳ ವ್ಯಕ್ತ ಪಡಿಸಿದ್ದಾರೆ. ಸಣ್ಣ ವಿಚಾರಕ್ಕೂ ಮಾತನಾಡುವ ಪ್ರಧಾನಿ ಮೋದಿ ಅವರೇ ನಿಮ್ಮ ಮಿತ್ರ ಪಕ್ಷದ ಲೋಕಸಭಾ ಅಭ್ಯರ್ಥಿಯ ಕೃತ್ಯದ ಬಗ್ಗೆ ಮಾತನಾಡಿ. ಎರಡು ದಿನ ರಾಜ್ಯಕ್ಕೆ ಬರುತ್ತಿರುವ ಮೋದಿ ಅವರನ್ನು ಮಾಧ್ಯಮಗಳು ಪ್ರಶ್ನೆ ಮಾಡಬೇಕು. ಏನೇ ಆದರೂ ಓಡಿ ಬರುವ ಶೋಭಾಕ್ಕ ಎಲ್ಲಿ ನಿಮ್ಮ ದನಿ ಅಡಗಿ…

Read More

ಬೆಂಗಳೂರು: ಬರ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಪ್ರತಿಯೊಂದು ಸಮಸ್ಯೆಯ ಬಗ್ಗೆ ಕೇಂದ್ರದ ಕಡೆ ಕೈ ತೋರಿಸುವ ಕಾಂಗ್ರೆಸ್ ಸರಕಾರ ಬರದಿಂದ ನೊಂದಿರುವ ಜನರಿಗೆ ಏನು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಾಸ್ವಾಮಿ ಅವರು ಪ್ರಶ್ನಿಸಿದ್ದಾರೆ. ತಮ್ಮನ್ನು ಭೇಟಿ ಮಾಡಿದ್ದ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿಗಳು; ಕೇಂದ್ರ ಸರಕಾರ ₹3,454 ಕೋಟಿ ಪರಿಹಾರ ನೀಡಿದೆ. ಕಡಿಮೆ ಬಂದಿದೆ ಎಂದರೆ ಕೇಳಲಿ, ಅದು ಬಿಟ್ಟು ರಾಜಕೀಯ ಮಾಡಿಕೊಂಡಿದ್ದರೆ ಉಪಯೋಗವೇನು? ಎಂದರು. ಹಣ ಬಿಡುಗಡೆ ಮಾಡುವಾಗ ಎಲ್ಲಾ ಅಂಶಗಳನ್ನು ಕೇಂದ್ರ ಸರ್ಕಾರ ಪರಿಗಣನೆಗೆ ತೆಗೆದುಕೊಂಡಿರುತ್ತದೆ. ಹಣ ಸಾಕಾಗಲಿಲ್ಲ ಎಂದರೆ ಇವರು ಕೇಳಿದಷ್ಟು ಹಣ ಕೊಡಲು ಸಾಧ್ಯವೇ? ಒಕ್ಕೂಟ ವ್ಯವಸ್ಥೆ ಎನ್ನುವುದು ಇದೆಯಲ್ಲ. 15ನೇ ಹಣಕಾಸಿನ ಆಯೋಗದ ಶಿಫಾರಸಿನ ಹಿನ್ನಲೆಯಲ್ಲಿ ಹಣ ಬರುತ್ತದೆ. ರಾಜ್ಯದಲ್ಲಿ ತೀವ್ರ ಬರವಿದೆ, ಅದಕ್ಕೆ ರಾಜ್ಯ ಸರ್ಕಾರ ಏನು ಮಾಡಿದೆ? ₹2000 ಕೊಡುತ್ತೇವೆ ಎಂದರು, ಯಾರಿಗೆ ಹೋಗಿದೆ? ಎಷ್ಟು ಜನಕ್ಕೆ ಹಣ ತಲುಪಿದೆ? ಆ ₹2000ದಲ್ಲಿ ಕೇಂದ್ರ ಸರಕಾರದ ಹಣ…

Read More

ಬೆಂಗಳೂರು : “ನಾವು ರೈತರ ಹಿತಕ್ಕಾಗಿ ಬರ ಪರಿಹಾರ ಕೇಳುತ್ತಿದ್ದೇವೆಯೇ ಹೊರತು ಭಿಕ್ಷೆ ಕೇಳುತ್ತಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬರ ಪರಿಹಾರ ಅನ್ಯಾಯ ಖಂಡಿಸಿ ಭಾನುವಾರ ನಡೆದ ಪ್ರತಿಭಟನೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಬರದ ಕಾರಣಕ್ಕೆ ರೈತರಿಗೆ ಕೆಲಸ ಸಿಗದೇ ಪರದಾಡುತ್ತಿದ್ದಾರೆ. ನರೇಗಾ ಕೆಲಸದ ಅವಧಿ ಹೆಚ್ಚಳ ಮಾಡಲಿಲ್ಲ. ನಾವು ಅವರ ಮನೆಯ ಹಣ ಕೇಳಿಲ್ಲ. ರಾಜ್ಯದ ಕಷ್ಟಕ್ಕೆ ಹಣ ಕೇಳಿದೆವು. ನನಗೆ ಹಾಗೂ ಸಿದ್ದರಾಮಯ್ಯ ಅವರಿಗೆ ಹಣ ಕೊಡಿ ಎಂದು ಕೇಳುತ್ತಿಲ್ಲ. ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಗೌರವ ಕೊಟ್ಟಿಲ್ಲ. ಕರ್ನಾಟಕದಲ್ಲಿ ಬರ ಪರಿಸ್ಥಿತಿ ಬಂದಿದೆ ಪರಿಹಾರ ನೀಡಿ ಎಂದು ಸೆಪ್ಟೆಂಬರ್ ತಿಂಗಳಲ್ಲೇ ಅರ್ಜಿ ಕೊಟ್ಟೆವು. ಅಲ್ಲಿಂದ ಇಲ್ಲಿಯ ತನಕ ಸುಮಾರು 50 ಸಾವಿರ ಕೋಟಿಯಷ್ಟು ನಷ್ಟ ಉಂಟಾಗಿದೆ. ನಾವು ಇಂತಹ ಕಷ್ಟದಲ್ಲೂ 2 ಸಾವಿರ ಕೊಟ್ಟಿದ್ದೇವೆ ಎಂದರು. ಬರ…

Read More

ಹುಬ್ಬಳ್ಳಿ: ಜಿಲ್ಲೆಯಲ್ಲಿ ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಧ್ವನಿ ಎತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಕರಣ ಅಮಾನವೀಯವಾದದ್ದು ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ. ಈ ಬಗ್ಗೆ ಕರ್ನಾಟಕ ಬಿಜೆಪಿ ಪ್ರಧಾನಿ ಮೋದಿ ಅವರ ಮಾತನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಅಮಾನವೀಯವಾದುದು.‌ ಕುಟುಂಬ ನ್ಯಾಯಕ್ಕಾಗಿ ಆಗ್ರಹಿಸಿದರೂ ಕಾಂಗ್ರೆಸ್ ಸರ್ಕಾರ ತುಷ್ಟೀಕರಣದ ನೀತಿ ಅನುಸರಿಸಿ ಘಟನೆಯನ್ನು ಗಂಭೀರವಾಗಿ ತೆಗದುಕೊಳ್ಳಲೇ ಇಲ್ಲ ಎಂದು ತಿಳಿಸಿದ್ದಾರೆ. https://twitter.com/BJP4Karnataka/status/1784492272048070988?s=19 ಅಂದಹಾಗೇ ಕೆಲ ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಅವರ ಹತ್ಯೆಯಾಗಿತ್ತು. ಫಯಾಜ್ ಎಂಬಾತ ಚಾಕುವಿನಿಂದ 14 ಬಾರಿ ಹಿರಿದು ಹತ್ಯೆಗೈದಿದ್ದನು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈಗಾಗಲೇ ಸಿಐಡಿ ಅಧಿಕಾರಿಗಳು ಪ್ರಕರಣದ ಕುರಿತಂತೆ ತನಿಖೆ ಕೂಡ ನಡೆಸುತ್ತಿದ್ದಾರೆ. https://kannadanewsnow.com/kannada/arvinder-singh-lovely-resigns-as-delhi-congress-chief/ https://kannadanewsnow.com/kannada/lok-sabha-elections-2024-voter-turnout-drops-in-3-constituencies-of-bengaluru/

Read More

ನಾವೆಲ್ಲರೂ ದೇವಸ್ಥಾನಗಳಿಗೆ ಹೋಗುತ್ತೇವೆ, ಮನೆಯಲ್ಲಿ ಪೂಜೆ ಮಾಡುತ್ತೇವೆ, ದಾನಧರ್ಮ ಮಾಡುತ್ತೇವೆ, ಇದೆಲ್ಲವೂ ನಾವು ಬಡತನವಿಲ್ಲದೆ ಸಮೃದ್ಧಿಯಿಂದ ಬದುಕಲು, ಆದರೆ ಇದೆಲ್ಲವೂ ನಮಗೆ ಸಿಗಬೇಕಾದರೆ ಮೊದಲು ದೇವರ ಅನುಗ್ರಹವನ್ನು ಪಡೆಯಬೇಕು. ಆಗ ಮಾತ್ರ ನಮ್ಮೆಲ್ಲರ ಪ್ರಾರ್ಥನೆಗಳು ಫಲಪ್ರದವಾಗುತ್ತವೆ. ನಾವು ದೇವರ ಅನುಗ್ರಹವನ್ನು ಸಂಪೂರ್ಣವಾಗಿ ಪಡೆಯಬೇಕಾದರೆ, ನಾವು ಮಾಡುವ ಸಣ್ಣ ತಪ್ಪುಗಳನ್ನು ಸರಿಪಡಿಸಬೇಕು. ಅದರಲ್ಲಿ ಪ್ರಮುಖವಾದುದೆಂದರೆ ಈ ತಲವಿರಿ ಕೋಲಂ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ,…

Read More