Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಚೆನ್ನೈ: ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಅವರ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ತಮಿಳುನಾಡಿನ ಪ್ರಮುಖ ರಾಜಕೀಯ ಶಕ್ತಿಗಳು ಬೆಂಬಲ ನೀಡಲು ಮುಂದಾಗಿವೆ. ರಾಜ್ಯದಲ್ಲಿ ಸರ್ಕಾರ ರಚನೆಯ ಕಸರತ್ತು ತೀವ್ರಗೊಂಡಿರುವ ಬೆನ್ನಲ್ಲೇ ಸಿಪಿಐ (CPI), ಸಿಪಿಐಎಂ (CPM) ಮತ್ತು ವಿಸಿಕೆ (VCK) ಪಕ್ಷಗಳು ಟಿವಿಕೆಗೆ ಬೆಂಬಲ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ನಿರ್ಣಾಯಕ ಹಂತದಲ್ಲಿ ಮೈತ್ರಿ ರಾಜಕಾರಣ: 2026ರ ವಿಧಾನಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ, ಬಹುಮತಕ್ಕೆ ಕೆಲವು ಸ್ಥಾನಗಳ ಕೊರತೆ ಎದುರಿಸುತ್ತಿದ್ದ ವಿಜಯ್ ಅವರಿಗೆ ಈ ಬೆಳವಣಿಗೆಯಿಂದ ದೊಡ್ಡ ಬಲ ಸಿಕ್ಕಂತಾಗಿದೆ. ಈ ಮೊದಲೇ ಕಾಂಗ್ರೆಸ್ ಪಕ್ಷವು ಟಿವಿಕೆಗೆ ತನ್ನ ಬೆಂಬಲ ಘೋಷಿಸಿತ್ತು. ಈಗ ಎಡಪಕ್ಷಗಳು ಮತ್ತು ತಿರುಮಾವಳವನ್ ನೇತೃತ್ವದ ವಿಸಿಕೆ ಕೂಡ ಕೈಜೋಡಿಸುತ್ತಿರುವುದು ತಮಿಳುನಾಡಿನ ಸಾಂಪ್ರದಾಯಿಕ ದ್ರಾವಿಡ ಪಕ್ಷಗಳಿಗೆ (DMK ಮತ್ತು AIADMK) ದೊಡ್ಡ ಸವಾಲಾಗಿ ಪರಿಣಮಿಸಿದೆ. ಇಂದೇ ಅಂತಿಮ ನಿರ್ಧಾರ? ಈ ಮಹತ್ವದ ಮೈತ್ರಿಯ ಕುರಿತು ಇಂದು ಸಂಜೆ…
ನವದೆಹಲಿ: ಭಾರತೀಯ ಕ್ರಿಕೆಟ್‌ನಲ್ಲಿ ದೊಡ್ಡ ಮಟ್ಟದ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಂಬರುವ ಮಹತ್ವದ ಟೂರ್ನಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಟಿ20 ಕ್ರಿಕೆಟ್ ತಂಡಕ್ಕೆ ಹೊಸ ನಾಯಕನನ್ನು ನೇಮಿಸಲು ಬಿಸಿಸಿಐ (BCCI) ಗಂಭೀರ ಚಿಂತನೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. ಪ್ರಸ್ತುತ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಕೆಳಗಿಳಿಸಿ, ಐಪಿಎಲ್‌ನಲ್ಲಿ ಯಶಸ್ವಿ ನಾಯಕ ಎನಿಸಿಕೊಂಡಿರುವ ಶ್ರೇಯಸ್ ಅಯ್ಯರ್ ಅವರಿಗೆ ಪಟ್ಟ ಕಟ್ಟುವ ಸಾಧ್ಯತೆ ದಟ್ಟವಾಗಿದೆ. ನಾಯಕತ್ವ ಬದಲಾವಣೆಗೆ ಕಾರಣವೇನು? ಭಾರತ ತಂಡವು 2028ರ ಟಿ20 ವಿಶ್ವಕಪ್ ಮತ್ತು ಐತಿಹಾಸಿಕವಾಗಿ ಕ್ರಿಕೆಟ್ ಸೇರ್ಪಡೆಯಾಗಿರುವ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಮೇಲೆ ಕಣ್ಣಿಟ್ಟಿದೆ. ಈ ದೀರ್ಘಕಾಲದ ಗುರಿಗಳಿಗಾಗಿ ಯುವ ಮತ್ತು ಚತುರ ನಾಯಕನ ಅಗತ್ಯವಿದೆ ಎಂದು ಆಯ್ಕೆಗಾರರು ಭಾವಿಸಿದ್ದಾರೆ. ಸೂರ್ಯಕುಮಾರ್ ಕಳಪೆ ಫಾರ್ಮ್: 35 ವರ್ಷದ ಸೂರ್ಯಕುಮಾರ್ ಯಾದವ್ ಇತ್ತೀಚಿನ ದಿನಗಳಲ್ಲಿ ಬ್ಯಾಟಿಂಗ್‌ನಲ್ಲಿ ಲಯ ಕಳೆದುಕೊಂಡಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಯುಎಸ್ಎ ವಿರುದ್ಧದ 84 ರನ್ ಹೊರತುಪಡಿಸಿದರೆ ಉಳಿದ ಪಂದ್ಯಗಳಲ್ಲಿ ಅವರು ವಿಫಲರಾಗಿದ್ದರು. ಅಲ್ಲದೆ, ಐಪಿಎಲ್ 2026ರಲ್ಲಿ ಮುಂಬೈ…
ಹಾಸನ ; ಇನ್ನೆರಡು ಮೂರು ದಿನಗಳಲ್ಲಿ ತಮಿಳುನಾಡು ರಾಜ್ಯದಲ್ಲಿ ಸೃಷ್ಟಿಯಾಗಿರುವ ರಾಜಕೀಯ ಬಿಕ್ಕಟ್ಟು ಬಗೆಹರಿಯಬಹುದು. ದಶಕಗಳಿಂದ ರಾಜಕೀಯ ಎದುರಾಳಿಗಳಾಗಿ ಹೋರಾಟ ನಡೆಸಿರುವ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳು ಮೈತ್ರಿ ಮಾಡಿಕೊಂಡು ಸರಕಾರ ರಚಿಸುತ್ತವೆ ಎಂದು ನಾನಾದರೂ ಭಾವಿಸುವುದಿಲ್ಲ ಎಂದು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಯ ಅವರು ಹೇಳಿದರು. ಹಾಸನ ಜಿಲ್ಲೆಯ ಮಾವಿನಕೆರೆ ರಂಗನಾಥ ಸ್ವಾಮಿ ಬೆಟ್ಟದಲ್ಲಿ ಇಂದು ಬೆಳಗ್ಗೆ ದೇವರ ದರ್ಶನ ಪಡೆದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಇನ್ನೆರಡು ಮೂರು ದಿನಗಳಲ್ಲಿ ತಮಿಳುನಾಡು ರಾಜ್ಯದಲ್ಲಿ ಸೃಷ್ಟಿಯಾಗಿರುವ ರಾಜಕೀಯ ಬಿಕ್ಕಟ್ಟು ಬಗೆಹರಿಯಬಹುದು. ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆಯನ್ನು ಹೊರತುಪಡಿಸಿ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳು ಅಧಿಕಾರಕ್ಕಾಗಿ ಕೈಜೋಡಿಸುತ್ತವೆ ಎಂದು ನಾನು ಭಾವಿಸುವುದಿಲ್ಲ. ಅಂತಹ ಸಾಧ್ಯತೆ ಗೋಚರಿಸುತ್ತಿಲ್ಲ ಎಂದು ಕುಮಾರಸ್ವಾಮಿಯವರು ಹೇಳಿದರು. ತಮಿಳುನಾಡಿನಲ್ಲಿ ಸದ್ಯಕ್ಕೆ ಅಲ್ಲಿನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯಪಾಲರು ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಅಲ್ಲಿನ ಕಾನೂನು ಪಂಡಿತರ ಸಲಹೆಗಳನ್ನು ತೆಗೆದುಕೊಂಡು ಸರ್ಕಾರ ರಚನೆಯ ಬಗ್ಗೆ ಕ್ರಮಗಳನ್ನು ವಹಿಸುತ್ತಿದ್ದಾರೆ. ಮುಂದೆ ಏನೆಲ್ಲ…
ಬೆಳಗಾವಿ: ರಾಜ್ಯದಾದ್ಯಂತ ಸಂಜೆ ವೇಳೆಗೆ ಮಳೆಯ ಸಿಂಚನವಾಗುತ್ತಿದ್ದರೂ, ಸೂರ್ಯನ ಪ್ರಖರತೆ ಮಾತ್ರ ಕಡಿಮೆಯಾಗಿಲ್ಲ. ಅತಿಯಾದ ಬಿಸಿಲಿನ ಝಳ ಹಾಗೂ ಹೀಟ್ ಸ್ಟ್ರೋಕ್‌ನಿಂದಾಗಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೊಂದು ಬಲಿ ಪಡೆದಿದೆ. ಘಟನೆಯ ವಿವರ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಉಗಾರ ಖುರ್ದ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ವಾರದ ಸಂತೆಯಲ್ಲಿ ವ್ಯಾಪಾರ ಮಾಡುತ್ತಿದ್ದ ವರ್ಧಮಾನ ಮಗದುಮ ಎಂಬುವವರು ಬಿಸಿಲ ತಾಪ ತಾಳಲಾರದೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳ: ಉಗಾರ ಖುರ್ದ ಪಟ್ಟಣದ ವಾರದ ಸಂತೆ. ಕಾರಣ: ತೀವ್ರವಾದ ಬಿಸಿ ಗಾಳಿ ಮತ್ತು ಹೀಟ್ ಸ್ಟ್ರೋಕ್ (ಉಷ್ಣಾಘಾತ). ಪರಿಣಾಮ: ಸಂತೆ ನಡೆಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ ವರ್ಧಮಾನ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ, ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಹೆಚ್ಚುತ್ತಿರುವ ಆತಂಕ: ಬೆಳಗಾವಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪಮಾನ ಏರಿಕೆಯಾಗುತ್ತಿದೆ. ಜಿಲ್ಲೆಯ ಜನರು ಅತಿಯಾದ ಬಿಸಿ ಗಾಳಿಯಿಂದ ಕಂಗೆಟ್ಟಿದ್ದಾರೆ. ಮಳೆ ಬಂದು ಹೋದ ಮೇಲೂ ವಾತಾವರಣದಲ್ಲಿ ಉಷ್ಣಾಂಶ ಕಡಿಮೆಯಾಗದ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಮಾಲ್ವೆಯಲ್ಲಿ ಹೈಬ್ರಿಡ್ ಅಕೇಶಿಯಾ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿ ಸಾಗಿಸಿದಂತ ಆರೋಪವನ್ನು ಗ್ರಾಮಸ್ಥರು ಮಾಡಿದ್ದರು. ಈ ಸಂಬಂಧ ಸ್ಥಳಕ್ಕೆ ಸಾಗರ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಡಿ ಫಯಾಜುದ್ದೀನ್ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೇ ಈ ಘಟನೆ ಸಂಬಂಧ 9 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇಂದು ಕನ್ನಡ ನ್ಯೂಸ್ ನೌ ಜೊತೆಗೆ ಈ ಮಾಹಿತಿ ಹಂಚಿಕೊಂಡಂತ ಅವರು, ಸಾಗರ ತಾಲ್ಲೂಕಿನ ಕಸಬಾ ಹೋಬಳಿಯ ಮಾಲ್ವೆ ಗ್ರಾಮದಲ್ಲಿ ಸಾಮಾಜಿಕ ಅರಣ್ಯದಲ್ಲಿ ಅಕ್ರಮವಾಗಿ ಹೈಬ್ರಿಡ್ ಅಕೇಶಿಯಾ ಮರ ಕಡಿತಲೆ ಘಟನೆ ಕಂಡು ಬಂದಿತ್ತು. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಸುಮಾರು 42 ಮರಗಳನ್ನು ಕಡಿತಲೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಸಂಬಂಧ 9 ಮಂದಿ ವಿರುದ್ಧ ನ್ಯಾಯಾಲಯದ ಅನುಮತಿಯನ್ನು ಪಡೆದು ಎಫ್ಐಆರ್ ದಾಖಲಿಸುವುದಾಗಿ ಹೇಳಿದರು. ಹೈಬ್ರಿಡ್ ಅಕೇಶಿಯಾ ಮರಗಳನ್ನು ನಾನು ನೆಟ್ಟು ಬೆಳಸಿದ್ದಾಗಿ ಪಕ್ಕದ ಜಮೀನಿನ ಮಾಲೀಕರು…
ಬೆಂಗಳೂರು: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯು ಇಂದು ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ್, ಕೇಂದ್ರ ಸರ್ಕಾರದ ಯೋಜನೆಗಳ ವಿರುದ್ಧ ಕಾನೂನು ಹೋರಾಟ ಮತ್ತು ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ನೀಡಿರುವ ಅನುಮೋದನೆಗಳ ಬಗ್ಗೆ ಮಾಹಿತಿ ನೀಡಿದರು. ೧. ಕೇಂದ್ರದ ವಿರುದ್ಧ ಕಾನೂನು ಹೋರಾಟ: ಮನರೇಗಾ ಮತ್ತು ಜೀರಾಂಜಿ ಕಾಯ್ದೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ‘ಜೀರಾಂಜಿ’ ಕಾಯ್ದೆಯ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಲು ಸಂಪುಟ ನಿರ್ಧರಿಸಿದೆ. ಮನರೇಗಾ ಸಂಕಷ್ಟ: ಕೇಂದ್ರವು ಮನರೇಗಾ ಯೋಜನೆಯನ್ನು ರದ್ದುಗೊಳಿಸಿ ಜೀರಾಂಜಿ ಯೋಜನೆಯನ್ನು ತಂದಿದೆ. ಆದರೆ ಮೇ ತಿಂಗಳು ಬಂದರೂ ಯೋಜನೆಯ ಅಧಿಸೂಚನೆ (Notification) ಹೊರಡಿಸಿಲ್ಲ. ಅನುಷ್ಠಾನದ ಗೊಂದಲ: ಹೊಸ ಯೋಜನೆ ಹೇಗೆ ಜಾರಿಯಾಗುತ್ತದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ, ಹಳೆಯ ಬಾಕಿ ಹಣವನ್ನೂ ಬಿಡುಗಡೆ ಮಾಡಿಲ್ಲ. ಮಳೆ ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಬಡವರ ಕೂಲಿಯ ಬಗ್ಗೆ ಕೇಂದ್ರ ನಿರ್ಲಕ್ಷ್ಯ ವಹಿಸಿದೆ ಎಂದು…
ನವದೆಹಲಿ: ಭಾರತೀಯ ಕ್ರಿಕೆಟ್‌ನ ‘ಮಿಸ್ಟರ್ 360’ ಖ್ಯಾತಿಯ ಸೂರ್ಯಕುಮಾರ್ ಯಾದವ್ ಅವರ ಮನೆಯಲ್ಲಿ ಸಂಭ್ರಮ ಮನೆಮಾಡಿದೆ. ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವೀಶಾ ಶೆಟ್ಟಿ ದಂಪತಿಗೆ ಇಂದು (ಮೇ 7, 2026) ಹೆಣ್ಣು ಮಗು ಜನಿಸಿದೆ. ಈ ಸಂತಸದ ಸುದ್ದಿಯನ್ನು ಸೂರ್ಯಕುಮಾರ್ ಅವರು ಅತ್ಯಂತ ಭಾವನಾತ್ಮಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಭಾವನಾತ್ಮಕ ಪೋಸ್ಟ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮುದ್ದಾದ ಫೋಟೋವೊಂದನ್ನು ಹಂಚಿಕೊಂಡಿರುವ ಸೂರ್ಯಕುಮಾರ್, ಅದಕ್ಕೆ ಮನಮಿಡಿಯುವ ಅಡಿಬರಹ ನೀಡಿದ್ದಾರೆ. ಆಸ್ಪತ್ರೆಯ ಹಿನ್ನೆಲೆಯಲ್ಲಿ ಮಗುವಿನ ಪುಟ್ಟ ಕೈಯನ್ನು ಪೋಷಕರು ಹಿಡಿದಿರುವ ಫೋಟೋ ಇದಾಗಿದ್ದು, ಸೂರ್ಯಕುಮಾರ್ ಅವರ ಟ್ಯಾಟೂ ಇರುವ ಕೈ ಮಗುವನ್ನು ಅಕ್ಕರೆಯಿಂದ ಹಿಡಿದಿರುವುದು ಅಭಿಮಾನಿಗಳ ಗಮನ ಸೆಳೆಯುತ್ತಿದೆ. “ನಗು, ಸಂಭ್ರಮ ಮತ್ತು ಕನಸುಗಳೊಂದಿಗೆ – ನಮ್ಮ ಪುಟ್ಟ ಮಗಳನ್ನು ನಾವು ಸ್ವಾಗತಿಸುತ್ತಿದ್ದೇವೆ,” ಎಂದು ಅವರು ಬರೆದುಕೊಂಡಿದ್ದಾರೆ. https://twitter.com/surya_14kumar/status/2052384452958130247 ಹರಿದುಬಂದ ಶುಭಾಶಯಗಳ ಮಹಾಪೂರ ಈ ಸುದ್ದಿ ಹೊರಬೀಳುತ್ತಿದ್ದಂತೆಯೇ ಕ್ರಿಕೆಟ್ ಲೋಕದ ಗಣ್ಯರು, ಸಹ ಆಟಗಾರರು ಮತ್ತು ಅಭಿಮಾನಿಗಳು ಶುಭಾಶಯಗಳ ಮಳೆ ಸುರಿಸಿದ್ದಾರೆ.…
ನವದೆಹಲಿ: ವರದಕ್ಷಿಣೆಗಾಗಿ ಗರ್ಭಿಣಿ ಪತ್ನಿಯ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದ ಪತಿಗೆ ದೆಹಲಿ ಹೈಕೋರ್ಟ್ ವಿಶಿಷ್ಟ ಕಾರಣಕ್ಕಾಗಿ ಶಿಕ್ಷೆಯ ಪ್ರಮಾಣವನ್ನು ಕಡಿತಗೊಳಿಸಿದೆ. ಘಟನೆ ನಡೆದು ದಶಕಗಳ ನಂತರ ಪತ್ನಿಯೇ ತನ್ನ ಪತಿಯನ್ನು ಕ್ಷಮಿಸಿ, ಆತನೊಂದಿಗೆ ಸಂಸಾರ ನಡೆಸುತ್ತಿರುವುದನ್ನು ಪರಿಗಣಿಸಿದ ನ್ಯಾಯಾಲಯ ಈ ಆದೇಶ ನೀಡಿದೆ. ಘಟನೆಯ ವಿವರ: ಈ ಪ್ರಕರಣವು 2000ನೇ ಇಸವಿಯ ನವೆಂಬರ್‌ನಲ್ಲಿ ನವದೆಹಲಿಯ ರಾಜಾಪುರಿಯಲ್ಲಿ ನಡೆದಿತ್ತು. ಸವಿತಾ ಎಂಬ ಮಹಿಳೆಗೆ ಆಕೆಯ ಪತಿ ರಾಜು, ಅತ್ತೆ ಮತ್ತು ಮೈದುನ ಸೇರಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಘಟನೆಯ ದಿನ ಅತ್ತೆ ಮತ್ತು ಮೈದುನ ಸವಿತಾಳ ಕೈಗಳನ್ನು ಹಿಡಿದುಕೊಂಡಿದ್ದರೆ, ಪತಿ ರಾಜು ಆಕೆಗೆ ಬೆಂಕಿ ಹಚ್ಚಿದ್ದನು. ಆ ಸಮಯದಲ್ಲಿ ಸವಿತಾ ಗರ್ಭಿಣಿಯಾಗಿದ್ದರು. ನ್ಯಾಯಾಲಯದ ನಡಾವಳಿ: ಕೆಳಹಂತದ ನ್ಯಾಯಾಲಯದ ತೀರ್ಪು: 2004ರಲ್ಲಿ ವಿಚಾರಣಾ ನ್ಯಾಯಾಲಯವು ಪತಿ ರಾಜು, ಅತ್ತೆ ಬಾರ್ದಿ ದೇವಿ ಮತ್ತು ಮೈದುನ ಶಂಭು ಅವರನ್ನು ಅಪರಾಧಿಗಳೆಂದು ಘೋಷಿಸಿ 7 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು. ಹೈಕೋರ್ಟ್‌ನಲ್ಲಿ ಕ್ಷಮೆ:…
ಮಂಡ್ಯ : ಮದ್ದೂರು ನಗರದ ಪುರಾಣ ಪ್ರಸಿದ್ಧ ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಉಗ್ರ ನರಸಿಂಹ ಸ್ವಾಮಿಯ ಭವ್ಯ ಬ್ರಹ್ಮೋತ್ಸವವು ಗುರುವಾರ ಸಡಗರ ಸಂಭ್ರಮದಿಂದ ಸಹಸ್ರಾರು ಭಕ್ತಾಧಿಗಳು ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ಪರಭವ ನಾಮ ಸಂವತ್ಸರದ ವೈಶಾಖ ಮಾಸ ಬಹುಳ ಪಂಚಮಿ ಪೂರ್ವಾಷಾಡ ನಕ್ಷತ್ರದಲ್ಲಿ ನಡೆದ ರಥೋತ್ಸವಕ್ಕೆ ಸಾಕ್ಷಿಯಾಗಲು ನಾಡಿನ ವಿವಿಧೆಡೆಯಿಂದ ಹಾಗೂ ನೆರೆರಾಜ್ಯಗಳಿಂದ ಸಾವಿರಾರು ಭಕ್ತ ಸಾಗರವೇ ಹರಿದು ಬಂದಿತ್ತು. ಸಹಸ್ರಾರು ಭಕ್ತಾದಿಗಳು ಗೋವಿಂದ… ಗೋವಿಂದ… ಎಂಬ ನಾಮಸ್ಮರಣೆಯ ನಡುವೆ ರಥವು ಕೋಟೆ ಬೀದಿಯ ಪ್ರಮುಖ ಬೀದಿಗಳಲ್ಲಿ ಎಳೆದು ಭಕ್ತರು ರಥಕ್ಕೆ ಹಣ್ಣು-ಜವನ ಎಸೆದು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ರಥೋತ್ಸವದ ಅಂಗವಾಗಿ ಸ್ವಾಮಿಗೆ ವಿಶೇಷ ಅಭಿಷೇಕ, ಪೂಜೆ ಹಾಗೂ ಅಲಂಕಾರಗಳನ್ನು ನೆರವೇರಿಸಲಾಯಿತು. ನಂತರ ಸಕಲ ಮಂಗಳ ವಾದ್ಯಗಳೊಂದಿಗೆ ಉತ್ಸವ ಮೂರ್ತಿಯನ್ನು ಅಲಂಕೃತ ಮಹಾರಥದಲ್ಲಿ ಪ್ರತಿಷ್ಠಾಪಿಸಲಾಯಿತು. ರಥೋತ್ಸವದ ಅಂಗವಾಗಿ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಭಕ್ತರಿಗೆ ಪಾನಕ, ಮಜ್ಜಿಗೆ, ಹೆಸರುಬೇಳೆ ಹಾಗೂ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಶಾಸಕ…
ಕಿತ್ತೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಾರಿಗೆ ಸೇವೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಚನ್ನಮ್ಮನ ಕಿತ್ತೂರಿನಲ್ಲಿ ನೂತನ ಬಸ್ ಘಟಕವನ್ನು ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಉದ್ಘಾಟಿಸಿದರು. ಸಮಗ್ರ ಸಾರಿಗೆ ಅಭಿವೃದ್ಧಿಯ ಗುರಿಯೊಂದಿಗೆ ಈ ಭಾಗದ ಪ್ರಯಾಣಿಕರಿಗೆ ಸುಸಜ್ಜಿತ ಸೇವೆ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು. ನೂತನ ಘಟಕದ ವಿಶೇಷತೆಗಳು: ವೆಚ್ಚ ಮತ್ತು ವಿಸ್ತೀರ್ಣ: ಒಟ್ಟು ₹5.27 ಕೋಟಿ ವೆಚ್ಚದಲ್ಲಿ, 4 ಎಕರೆ ವಿಸ್ತೀರ್ಣದಲ್ಲಿ ಈ ಆಧುನಿಕ ಬಸ್ ಘಟಕವನ್ನು ನಿರ್ಮಿಸಲಾಗಿದೆ. ಕಾರ್ಯಾಚರಣೆ: ಪ್ರಸ್ತುತ ಈ ಘಟಕವು 15 ವಾಹನಗಳ ಬಲವನ್ನು ಹೊಂದಿದ್ದು, 15 ವೇಗದೂತ ಅನುಸೂಚಿಗಳ (Schedules) ಮೂಲಕ ಕಾರ್ಯಾಚರಣೆ ಆರಂಭಿಸಿದೆ. ವ್ಯಾಪ್ತಿ: ಈ ಘಟಕದ ವ್ಯಾಪ್ತಿಯಲ್ಲಿ ಒಂದು ಸುಸಜ್ಜಿತ ಬಸ್ ನಿಲ್ದಾಣವೂ ಒಳಗೊಂಡಿದೆ. ಸಾರಿಗೆ ಸಂಸ್ಥೆಯ ಇತರೆ ಅಭಿವೃದ್ಧಿ ಕಾಮಗಾರಿಗಳು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ…














