Author: kannadanewsnow09

ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧಿಸಲ್ಪಟ್ಟು, ಜೈಲುಪಾಲಾಗಿದ್ದಾರೆ. ಇತ್ತ ನಟಿ ರನ್ಯಾ ರಾವ್ ಅವರ ಕಾರು ಚಾಲಕ ದೀಪಕ್ ಎಂಬಾತ ಹಣ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ನಟಿ ರನ್ಯಾ ರಾವ್ ಅವರ ಕಾರು ಚಾಲಕನಾಗಿ ಕಾರ್ಯ ನಿರ್ವಹಿಸಿದ್ದಂತ ದೀಪಕ್ ಎಂಬಾತನನ್ನು ಪೊಲೀಸರು ಹಣ ಡಬ್ಲಿಂಗ್ ಪ್ರಕರಣದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿ ದೀಪಕ್ ಚಿಕ್ಕಮಗಳೂರಿನ ಹೊಸಮನೆ ಬಡವಾಣೆಯ ನಿವಾಸಿಯಾಗಿದ್ದಾನೆ. ಈತ ನಟಿ ರನ್ಯಾ ರಾವ್ ಅವರ ಕಾರು ಚಾಲಕನಾಗಿ ಕಾರ್ಯ ನಿರ್ವಹಿಸಿದ್ದನು. ಈತನ ವಿರುದ್ಧ ಹಣ ಡಬ್ಲಿಂಗ್ ಆರೋಪದಡಿ ಪ್ರಕರಣ ದಾಖಲಾಗಿದ್ದರಿಂದ ದೀಪಕ್ ನನ್ನು ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/belagavi-municipal-corporation-mangesh-elected-mayor-veena-elected-as-deputy-mayor/ https://kannadanewsnow.com/kannada/breaking-shivamogga-woman-dies-of-electrocution-while-starting-motor/

Read More

ಬೆಳಗಾವಿ: ಪಾಲಿಕೆ ಗದ್ದುಗೆ ಬಿಜೆಪಿ ಪಾಲಾಗಿದೆ. ಸತತ ಮೂರನೇ ಬಾರಿಗೆ ಮೇಯರ್ ಆಗಿ ಮಂಗೇಶ್, ಉಪ ಮೇಯರ್ ಆಗಿ ವೀಣಾ ಆಯ್ಕೆಯಾಗಿದ್ದಾರೆ. ಈ ಮೂಲಕ ಆಡಳಿತಾರೂಢ ಕಾಂಗ್ರೆಸ್ ಗೆ ಭಾರೀ ಮುಖಭಂಗವೇ ಉಂಟಾಗಿದೆ. ಇಂದು ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಿತು. ಈ ವೇಳೆಯಲ್ಲಿ ಚುನಾವಣಾಧಿಕಾರಿಗಳು ಕೈ ಎತ್ತುವ ಮೂಲಕ ಮತ ಚಲಾಯಿಸುವುದಕ್ಕೆ ಅವಕಾಶವನ್ನು ನೀಡಿದರು. ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದಂತ ಮಂಗೇಶ್ ಪರವಾಗಿ 40 ಮತಗಳು ಚಲಾವಣೆಗೊಂಡರೇ, ವಿರುದ್ಧವಾಗಿ ಐದು ಮತ ಚಲಾಯಿಸಲ್ಪಟ್ಟಿತು. ಇನ್ನೂ ಉಪ ಮೇಯರ್ ಚುನಾವಣೆಯಲ್ಲಿ ವೀಣಾ ಅವರಿಗೆ 40 ಮತ ಪರವಾಗಿ ಬಿದ್ದರೇ, 19 ಮತಗಳು ವಿರುದ್ಧವಾಗಿ ಬಿದ್ದಿದ್ದವು. ಆ ಮೂಲಕ ಮೇಯರ್ ಆಗಿ ಬಿಜೆಪಿಯ ಮಂಗೇಶ್, ಉಪ ಮೇಯರ್ ಆಗಿ ವೀಣಾ ಆಯ್ಕೆಯಾಗಿದ್ದಾರೆ. https://kannadanewsnow.com/kannada/woman-killed-in-wild-elephant-attack-minister-ishwar-khandre-holds-emergency-meeting-to-arrest-3-elephants/ https://kannadanewsnow.com/kannada/breaking-shivamogga-woman-dies-of-electrocution-while-starting-motor/

Read More

ಬೆಂಗಳೂರು: ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ ಉಪಟಳ ನೀಡುತ್ತಿರುವ 3 ಪುಂಡಾನೆ ಗುರುತಿಸಿದ್ದು, ಈ ಆನೆಗಳನ್ನು ಸೆರೆ ಹಿಡಿಯಲು ಮತ್ತು ಕೂಡಲೇ ಇದೇ ಪ್ರದೇಶದಲ್ಲಿ ಆನೆ ಕಾರ್ಯಪಡೆಯ ಕಚೇರಿ ಸ್ಥಾಪಿಸಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯನ್ನು ನಿಯೋಜಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಬೇಲೂರು ತಾಲೂಕು ಕೋಗೋಡಿನ ತೋಟದಲ್ಲಿ ನಿನ್ನೆ ಮಹಿಳೆಯೊಬ್ಬರು ಆನೆ ದಾಳಿಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯಾಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಸಚಿವರು, ಹಾಸನ ವಲಯಕ್ಕೆ 2 ಥರ್ಮಲ್ ಕ್ಯಾಮರಾ ಸಹಿತ ಡ್ರೋನ್ ಖರೀದಿಸಿ ರಾತ್ರಿಯ ವೇಳೆ ಕೂಡ ಆನೆಗಳ ಸಂಚಾರದ ಬಗ್ಗೆ ನಿಗಾ ಇಟ್ಟು, ಸ್ಥಳೀಯರಿಗೆ ಸಕಾಲದಲ್ಲಿ ಮಾಹಿತಿ ನೀಡಲು ಸೂಚಿಸಿದರು. ಆನೆಗಳ ಸಮಸ್ಯೆ ಹೆಚ್ಚಿರುವ ಪ್ರದೇಶದಲ್ಲಿ ತುರ್ತು ಸ್ಪಂದನೆಗಳಾಗಿ 2 ಹೆಚ್ಚುವರಿ ಜೀಪುಗಳು ಮತ್ತು ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿ, ಆನೆಗಳ ಸಂಚಾರದ ಮಾಹಿತಿ ಬಂದ ಕೂಡಲೇ ಸ್ಪಂದಿಸುವಂತೆ ಈಶ್ವರ ಖಂಡ್ರೆ…

Read More

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದ್ದು, ಈ ಬಾರಿಯ ಬಜೆಟ್‌ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವ ಮೂಲಕ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಶುಕ್ರವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆಗೆ ಸಚಿವರು, ಇತ್ತೀಚಿನ ಮಂಡಿಸಲಾದ 2025-26ನೇ ಸಾಲಿನ ಬಜೆಟ್‌ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 1 ಸಾವಿರ ಹಾಗೂ ಅಂಗನವಾಡಿ ಸಹಾಯಕಿಯರಿಗೆ 750 ರೂಪಾಯಿ ಹೆಚ್ಚಿಸಲಾಗಿದ್ದು, ಇದರಿಂದ ವರ್ಷಕ್ಕೆ ಇಲಾಖೆಗೆ 144 ಕೋಟಿ ರೂಪಾಯಿ ಅನುದಾನ ಹೊರೆಯಾಗಿದೆ ಎಂದರು. ಎರಡೂ ಬಾರಿ ಹೆಚ್ಚಿಸಿದ್ದು ಸಿದ್ದರಾಮಯ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯವರ ಗೌರವ ಧನವನ್ನು ಹೆಚ್ಚಳ ಮಾಡಿರುವುದು ನಮ್ಮ ಕಾಂಗ್ರೆಸ್‌ ಸರ್ಕಾರವೇ. 2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದ ವೇಳೆಯ 2 ಸಾವಿರ ರೂಪಾಯಿ ಗೌರವ ಧನವನ್ನು ಹೆಚ್ಚಿಸಲಾಗಿತ್ತು. ಆದರೆ, ,ಕಳೆದ ಬಿಜೆಪಿ ಸರ್ಕಾರದ ನಾಲ್ಕು…

Read More

ಬೆಂಗಳೂರು: ಇ-ಖಾತಾ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿಯೊಂದು ಹೊರಬಿದ್ದಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದ್ದು, ಸದನದಲ್ಲಿ ವಿಧೇಯಕಕ್ಕೆ ಅಂಗೀಕಾರ ದೊರೆತಿದ್ದೇ ಆದರೇ ಗ್ರಾಮೀಣ ಭಾಗದ ಇ-ಖಾತಾ ಸಮಸ್ಯೆಯೇ ತೀರಲಿದೆ. ಶುಕ್ರವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಇ-ಖಾತಾ ಸಮಸ್ಯೆ ಸರಿ ಪಡಿಸೋ ಸಂಬಂಧ ತಿದ್ದುಪಡಿ ವಿಧೇಯಕ ಕುರಿತಂತೆ ಚರ್ಚೆ ನಡೆಸಲಾಯಿತು. ಅಂತಿಮವಾಗಿ ರಾಜ್ಯ ಸಚಿವ ಸಂಪುಟ ಸಭೆಯು ವಿಧೇಯಕಕ್ಕೆ ಅಂಗೀಕಾರ ನೀಡಿದೆ. ಶುಕ್ರವಾರದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡಿರುವಂತ ಇ-ಖಾತಾ ಸಮಸ್ಯೆ ಸರಿ ಪಡಿಸುವಂತ ತಿದ್ದುಪಡಿ ವಿಧೇಯಕವನ್ನು ರಾಜ್ಯದ ಉಭಯ ಸದನಗಳಲ್ಲಿ ಈ ಬಾರಿಯೇ ಮಂಡನೆ ಮಾಡೋ ಸಾಧ್ಯತೆ ಇದೆ. ಇದಕ್ಕೆ ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ದೊರೆತರೇ ಗ್ರಾಮೀಣ ಭಾಗದ ಇ-ಖಾತಾ ಸಮಸ್ಯೆ ಕ್ಲಿಯರ್ ಆಗಲಿದೆ. ಗ್ರಾಮೀಣ ಭಾಗದ ಕಂದಾಯ ಭೂಮಿಯಲ್ಲಿನ ನಿವೇಶ, ಮನೆ ಸಕ್ರಮಕ್ಕೆ ಅವಕಾಶ ಸಿಗಲಿದೆ. ಆ ನಂತ್ರ ಇ-ಖಾತಾವೂ…

Read More

ಬೆಂಗಳೂರು: ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಬೈಕ್ ಒಂದು ಗುದ್ದಿ ಗಾಯಗೊಂಡಿದ್ದರು. ಗಲ್ಲ, ತಲೆಗೆ ಪೆಟ್ಟು ಬಿದ್ದಿರುವಂತ ಅವರನ್ನು ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಂತಹ ಅವರಿಗೆ ಸಿಎಂ ಸಿದ್ಧರಾಮಯ್ಯ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನಿಂದ ಕುಮಾರ ಪಟ್ಟಣ ಸಮೀಪದ ಸ್ವಗ್ರಾಮಕ್ಕೆ ತೆರಳುತ್ತಿದ್ದಂತ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಮಾರ್ಗ ಮಧ್ಯೆ ಮೂತ್ರ ವಿಸರ್ಜನೆಗೆ ಕಾರಿನಿಂದ ಇಳಿಯುತ್ತಿದ್ದರು. ಈ ವೇಳೆಯಲ್ಲಿ ಹಿಂಬದಿಯಿಂದ ಸ್ಕೂಟರ್ ಒಂದು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ತಲೆ, ಕೈ-ಕಾಲುಗಳಿಗೆ ಪೆಟ್ಟು ಬಿದ್ದಿತ್ತು. ಬೈಕ್ ಗುದ್ದಿದ ಕಾರಣ ಗಾಯಗೊಂಡ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರನ್ನು ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇದೀಗ ರುದ್ರಪ್ಪ ಲಮಾಣಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಇಂತಹ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ಕರೆ…

Read More

ದಾವಣಗೆರೆ : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ದಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಾರ್ಚ್ 15 ರಂದು ಹದಡಿ ರಸ್ತೆಯ ಸರ್ಕಾರಿ ಐಟಿಐ ಕಾಲೇಜು ಆವರಣ ಹಾಗೂ ಬಿಐಇಟಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳ ನಡೆಯುವ ಮಾರ್ಚ್ 15 ರಂದು ಸಂಜೆ 6 ಗಂಟೆಯಿಂದ ಬಿಐಇಟಿ ಎಸ್.ಎಸ್.ಮಲ್ಲಿಕಾರ್ಜುನ್ ಸಾಂಸ್ಕøತಿಕ ಕೇಂದ್ರದಲ್ಲಿ ಶ್ರೀರಾಮಚಂದ್ರ ಹಡಪದ, ಹರ್ಷ ರಂಜಿನಿ, ಸ್ಪರ್ಷ ಆರ್.ಕೆ. ಇವರಿಂದ ಸಂಗೀತ ಪ್ರಭ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದ್ದಾರೆ. https://kannadanewsnow.com/kannada/police-public-school-invites-applications-from-skilled-teachers/ https://kannadanewsnow.com/kannada/another-victim-of-wild-elephant-attack-in-karnataka-woman-dies-on-the-spot/

Read More

ದಾವಣಗೆರೆ : ಕೊಂಡಜ್ಜಿಯಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಸ್ನಾತಕೋತ್ತರ ಹಾಗೂ ಸ್ನಾತಕ ಶಿಕ್ಷಕರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದ್ದಾರೆ. ಈ ಶಾಲೆಯನ್ನು ಕರ್ನಾಟಕ ರಾಜ್ಯ ಪೊಲೀಸ್ ಕಲ್ಯಾಣ, ಶಿಕ್ಷಣ ಟ್ರಸ್ಟ್, ಪೂರ್ವ ವಲಯ ದಾವಣಗೆರೆ ಇವರಿಂದ ಪೊಲೀಸ್ ಪಬ್ಲಿಕ್ ಸ್ಕೂಲ್ ಸಿಬಿಎಸ್‍ಇ ಪಠ್ಯಕ್ರಮದ ಶಾಲೆ ನಡೆಸಲಾಗುತ್ತಿದೆ. ಇಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಮಕ್ಕಳು ಹಾಗೂ ಇತರೆ ಸಾರ್ವಜನಿಕ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ. ಈ ಶಾಲೆಗೆ ಅಗತ್ಯವಿರುವ ಪಿಜಿಟಿ ಇಂಗ್ಲೀಷ್ ಶಿಕ್ಷಕರ 1 ಹುದ್ದೆಗೆ ಎಂಎ.ಬಿ.ಇಡಿ, ಪಿಜಿಟಿ ಗಣಿತ ಶಿಕ್ಷಕರ 1 ಹುದ್ದೆಗೆ ಎಂ.ಎಸ್ಸಿ, ಬಿ.ಇಡಿ, ಪಿಜಿಟಿ ವಿಜ್ಞಾನ ಶಿಕ್ಷಕರ 2 ಹುದ್ದೆಗಳಿಗೆ ಎಂಎಸ್ಸಿ, ಬಿಇಡಿ ಸಿಬಿಝಡ್, ಟಿಜಿಟಿ ಸಮಾಜ ವಿಜ್ಞಾನ 1 ಹುದ್ದೆಗೆ ಎಂ.ಎ. ಬಿ.ಇಡಿ, ಕನ್ನಡ ಪಿಜಿಟಿ 1 ಹುದ್ದೆಗೆ ಎಂಎ, ಬಿ.ಇಡಿ, ಹಿಂದಿ 2 ಹುದ್ದೆ ಬಿ.ಎ, ಎಂ.ಎ ಬಿ.ಇಡಿ, ದೈಹಿಕ ಶಿಕ್ಷಕ…

Read More

ಹಾಸನ: ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದಾಗಿ ಮತ್ತೊಂದು ಬಲಿಯಾಗಿದೆ. ಕಾಡಾನೆಯೊಂದು ಸೊಂಡಿಲಿನಿಂದ ತಿವಿದು, ಎತ್ತಿ ಬಿಸಾಕಿ ತುಳಿದ ಪರಿಣಾಮ ಸ್ಥಳದಲ್ಲೇ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಹಾಸನದ ಬೇಲೂರು ತಾಲ್ಲೂಕಿನ ಕೋಗೋಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ದಿಢೀರ್ ಕಾಡಾನೆಯೊಂದು ದಾಳಿ ಮಾಡಿದೆ. ಈ ವೇಳೆಯಲ್ಲಿ ಸುಶೀಲಮ್ಮ ಕಾಡಾನೆ ದಾಳಿಗೆ ಸಿಕ್ಕಿದ್ದಾರೆ. ಕೋಪಗೊಂಡ ಕಾಡಾನೆ ಸೊಂಡಿನಿಂದ ಎತ್ತಿ ಬಿಸಾಡಿ, ತಲೆ ಭಾಗವನ್ನು ತುಳಿದು ಸಾಯಿಸಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅರಣ್ಯ ಇಲಾಖೆ ಅಧಿಕಾರಿಗಳು, ಅರೇಹಳ್ಳಿ ಠಾಣೆಯ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಇದು ಕಳೆದ 2 ತಿಂಗಳಿನಲ್ಲಿ ನಾಲ್ಕನೇ ಸಾವಾಗಿದ್ದು, ಕಾಡಾನೆ ಹಿಡಿದು, ಸುರಕ್ಷಿತ ಸ್ಥಳಕ್ಕೆ ಬಿಡುವಂತೆ ಆಗ್ರಹಿಸಿದರು. https://kannadanewsnow.com/kannada/mark-carney-sworn-in-as-canadas-new-prime-minister/ https://kannadanewsnow.com/kannada/good-news-for-those-who-were-expecting-e-khata-illegal-plots-houses-to-be-regularised-soon/

Read More

ಬೆಂಗಳೂರು: ಇ-ಖಾತಾ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿಯೊಂದು ಹೊರಬಿದ್ದಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದ್ದು, ಸದನದಲ್ಲಿ ವಿಧೇಯಕಕ್ಕೆ ಅಂಗೀಕಾರ ದೊರೆತಿದ್ದೇ ಆದರೇ ಗ್ರಾಮೀಣ ಭಾಗದ ಸಮಸ್ಯೆಯೇ ತೀರಿದಂತೆ ಆಗಲಿದೆ. ರಾಜ್ಯದ ಅಕ್ರಮ ನಿವೇಶನ, ಮನೆಗಳಿಗೆ ಇ-ಖಾತಾ ನೀಡುವ ಸಂಬಂಧ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ. ಈ ತಿದ್ದುಪಡಿ ಮಸೂದೆಯನ್ನು ರಾಜ್ಯ ವಿಧಾನ ಮಂಡಲದ ಉಭಯ ಸದನಗಳಲ್ಲಿ ಕಾಂಗ್ರೆಸ್ ಸರ್ಕಾರ ಮಂಡಿಸಲಿದೆ. ಅಕ್ರಮ ಮನೆ, ನಿವೇಶನಗಗಳಿಗೆ ಸಕ್ರಮ ಮಾಡುವ ಸಂಬಂಧದ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ದೊರೆತಿದ್ದೇ ಆದರೇ, ಗ್ರಾಮೀಣ ಹಾಗೂ ನಗರ ಭಾಗದ ಅಕ್ರಮ ನಿವೇಶನ, ಮನೆ ಮಾಲೀಕರಿಗೆ ಸಿಹಿಸುದ್ದಿ ಸಿಗಲಿದೆ. ಗ್ರಾಮೀಣ ಭಾಗದ ಕಂದಾಯ ಬಡಾವಣೆ, ಗ್ರಾಮ ಠಾಣೆ ವ್ಯಾಪ್ತಿಯ ಮನೆ, ನಿವೇಶನ ಸಕ್ರಮಕ್ಕೆ ಅವಕಾಶ ದೊರೆಯುವಂತಾಗಲಿದ್ದು, ಇ-ಖಾತಾ ಲಭ್ಯವಾಗಲಿದೆ. https://kannadanewsnow.com/kannada/mark-carney-sworn-in-as-canadas-new-prime-minister/ https://kannadanewsnow.com/kannada/worlds-most-dangerous-terrorist-isis-leader-abu-khadija-killed/

Read More