Subscribe to Updates
Get the latest creative news from FooBar about art, design and business.
Author: kannadanewsnow09
“ಆಹಾರವೇ ಔಷಧಿ: ಆಯುರ್ವೇದದಲ್ಲಿ ದೀರ್ಘ ಖಾಯಿಲೆಗಳ ನಿವಾರಣೆಗೆ ಆಹಾರದ ಪಾತ್ರ” ಆಹಾರ ಮತ್ತು ತರಕಾರಿಗಳಿಂದ ದೀರ್ಘ ಕಾಲದ ಖಾಯಿಲೆಗಳಿಗೆ ಶಾಶ್ವತ ಪರಿಹಾರ. —ದೀರ್ಘಕಾಲದ ಖಾಯಿಲೆಗಳಗೆ ,ಆಹಾರ ಮತ್ತು ತರಕಾರಿಗಳ ಶಕ್ತಿ: ಸಂಪೂರ್ಣ ಗುಣಮುಖತೆಗೆ ಆಯುರ್ವೇದೀಯ ಮಂತ್ರ. ಇಂದಿನ ಜೀವಿತಶೈಲಿಯಲ್ಲಿ ಎಕ್ಸಿಮಾ, ಪಿಸಿಒಡಿಯು, ಜೀರ್ಣಕ್ರಿಯೆ ತೊಂದರೆ, ಸಂಧಿವಾತ, ಆಮ್ಲತೆ(ಅಸಿಡಿಟಿ) ಇತ್ಯಾದಿ ದೀರ್ಘಕಾಲದ ಖಾಯಿಲೆಗಳು ಸಾಮಾನ್ಯವಾಗುತ್ತಿವೆ. ಆಧುನಿಕ ವೈದ್ಯಕೀಯವು ಸಾಮಾನ್ಯವಾಗಿ ಲಕ್ಷಣಗಳನ್ನು (symtoms) ಮಾತ್ರ ನಿರ್ವಹಿಸುತ್ತದೆ, ಆದರೆ ಆಯುರ್ವೇದವು ಮೂಲ ಕಾರಣ ನಿವಾರಣೆಯತ್ತ ಗಮನ ಹರಿಸುತ್ತದೆ—ಆಯುರ್ವೇದ ವೈದ್ಯಕೀಯದ ಚಿಕಿತ್ಸಾ ವಿಧಾನದಲ್ಲಿ ಇದೆ ಆಹಾರ (ಆಹಾರ ಶಿಷ್ಟಾಚಾರ)🥗 ದ ಪೂರ್ಣ ವಿವರ:- ಆಹಾರ ಕೇವಲ ಇಂಧನವಲ್ಲ—it’s medicine! ಆಹಾರ ಮತ್ತು ತರಕಾರಿಗಳ ಮಹತ್ವ🥔🥦🍅 ಕೋಷ್ಠ ದಿಂದ(Gut Health) ಆರೋಗ್ಯದ ಕಡೆಗೆ 🧅🥗 ನಿಮ್ಮ ಜೀರ್ಣಾಗ್ನಿ ನಿಮ್ಮ ರೋಗ ನಿರೋಧಕ ಶಕ್ತಿಯ ಮೂಲವಾಗಿದೆ. ದುರ್ಬಲ ಜೀರ್ಣಶಕ್ತಿಯಿಂದ ‘ಆಮ’ (ವಿಷವಸ್ತುಗಳು) ದೇಹದಲ್ಲಿ ಸಂಚಯವಾಗುತ್ತದೆ—ಇದುವೇ ಹೆಚ್ಚಿನ ದೀರ್ಘ ಕಾಯಿಲೆಗಳ(chronic disorders) ಮೂಲ ಕಾರಣವಾಗಿದೆ. ನಿಮ್ಮ ಅಡಿಗೆಮನೆಯಲ್ಲಿನ ,ನೈಸರ್ಗಿಕ ಔಷಧಾಲಯ🍠 ತರಕಾರಿಗಳು…
ತುಮಕೂರು: ಶೀಬಿ ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದು ಪಡಿಸಲು ಮತ್ತು ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಂಡು, ಅಮೂಲ್ಯವಾದ ಅರಣ್ಯ ಭೂಮಿಯನ್ನು ಸಂರಕ್ಷಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ. ತುಮಕೂರು ಜಿಲ್ಲೆ ಕಳ್ಳಂಬೆಳ್ಳ ಹೋಬಳಿ ಶೀಬಿ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದ ಸಚಿವರು. ಬೆಂಗಳೂರು-ಪುಣೆ ಹೆದ್ದಾರಿಯ ಪಕ್ಕದಲ್ಲೇ ಇರುವ ಈ ಅರಣ್ಯಭೂಮಿಗೆ ಭಾರೀ ಮೌಲ್ಯವಿದ್ದು, ಕೆಲವರು ಇದನ್ನು ಕಬಳಿಸಲು ಮತ್ತು ಒತ್ತುವರಿ ಮಾಡಲು ಯತ್ನಿಸುತ್ತಿದ್ದಾರೆ ಹೀಗಾಗಿ ಅರಣ್ಯ ಸಿಬ್ಬಂದಿ ಕಟ್ಟೆಚ್ಚರದಿಂದ ಇರಬೇಕು ಎಂದರು. ಕೆಲವರು ನ್ಯಾಯಾಲಯದಲ್ಲಿ ಭೂಮಿಯ ಮಾಲೀಕತ್ವದ ಹೋರಾಟ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್ ಡಿನೋಟಿಫಿಕೇಷನ್ ಆಗದ ಹೊರತು, ಅರಣ್ಯ ಭೂಮಿ ಅರಣ್ಯವಾಗಿಯೇ ಉಳಿಯುತ್ತದೆ ಎಂದು ಹೇಳಿದ್ದು, ಡಿನೋಟಿಫಿಕೇಷನ್ ಆಗದ ಈ ಅರಣ್ಯದಲ್ಲಿನ ಅಕ್ರಮ ಮಂಜೂರಾತಿ ರದ್ದುಪಡಿಸುವಂತೆ ಎ.ಸಿ. ನ್ಯಾಯಾಲಯದಲ್ಲಿ ದಾವೆ ಹೂಡುವಂತೆ ಸೂಚಿಸಿದರು.…
ಶಿರಸಿ: ಶಿರಸಿಯ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಪೂರ್ಣಾಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವ ಮೂಲಕ ವಿಶೇಷ ಸಾಧನೆ ಮಾಡಿದ ಕುಮಾರಿ ಶಗುಪ್ತಾ ಅಂಜುಮ್ ಅವರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಇಂದು ಸರ್ಕಾರಿ ಶಾಲೆಯಲ್ಲಿ ಸನ್ಮಾನಿಸಿ ಅಭಿನಂದಿಸಿದರು. “ಕುಮಾರಿ ಶಗುಪ್ತಾ ಅಂಜುಮ್ ಅವರ ವೈದ್ಯೆಯಾಗುವ ಕನಸು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ. ಅವರ ಈ ಆಶಯ ನೆರವೇರಲಿ ಎಂದು ನಾನು ಮನಸಾರೆ ಹಾರೈಸುತ್ತೇನೆ. ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಅತ್ಯಮೂಲ್ಯವಾದದ್ದು. ಇಂತಹ ಸಾಧನೆಯಿಂದ ಭಾರತದ ದಿವ್ಯ ಪರಂಪರೆಗೆ ಮುನ್ನುಡಿ ಬರೆಯುವಂತರಾಗಲಿ. ಅವರೆಲ್ಲರಿಗೂ ನನ್ನ ಗೌರವ ಮತ್ತು ಅಭಿನಂದನೆಗಳು,” ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಹಾಗೆಯೇ, ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಅವರು ತಮ್ಮ ಜಿಲ್ಲೆಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿನಿಯನ್ನು ಸನ್ಮಾನಿಸಿ ಗೌರವಿಸಿ, ಶುಭ ಹಾರೈಸಿದ್ದಾರೆ. ಅವರಿಗೆ ಸಚಿವ ಮಧು ಬಂಗಾರಪ್ಪನವರು…
ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯು ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಶಿಕ್ಷಕರ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಆಕ್ಷೇಪಣೆ ಕೋರಿ ಇಲಾಖಾ ವೆಬ್‌ಸೈಟ್ https://schooleducation.karnataka.gov.in/86/teachers/kn ನ ಶಿಕ್ಷಕರ ಸೇವಾ ವಿವರಗಳಲ್ಲಿ ಕ್ರಮ ಸಂಖ್ಯೆ 04ರಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿರುತ್ತದೆ. ಈ ಕರಡು ತಾತ್ಕಾಲಿಕ ಜೇಷ್ಟತಾ ಪಟ್ಟಿಗೆ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ ಸಂಬಂಧಿಸಿದ ಶಿಕ್ಷಕರು ಸಮರ್ಥನೀಯ ಪೂರಕ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಮೇ 08 ರೊಳಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ನೇರವಾಗಿ ಸಲ್ಲಿಸಲು ಸೂಚಿಸಿದೆ. https://kannadanewsnow.com/kannada/rajalakshmi-kodibettu-conferred-with-mangala-varghese-award-by-kuwj/ https://kannadanewsnow.com/kannada/breaking-another-suicide-in-bengaluru-car-driver-commits-suicide-after-unable-to-repay-loan/
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕೊಡಮಾಡುವ ಮಂಗಳ ವರ್ಗೀಸ್ ಪ್ರಶಸ್ತಿಯನ್ನು ಪ್ರಜಾವಾಣಿಯ ಹಿರಿಯ ಪತ್ರಕರ್ತೆ ಕೆ.ರಾಜಲಕ್ಷ್ಮಿ ಕೋಡಿಬೆಟ್ಟು ಅವರಿಗೆ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಪ್ರದಾನ ಮಾಡಿದರು. ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಅವರು ಅನಾರೋಗ್ಯದಿಂದ ಬರಲಾಗದ ಕಾರಣ ಮಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಕರಾವಳಿ ಭಾಗದ ದೈವರಾಧನೆ ಕುರಿತು ರಾಜಲಕ್ಷ್ಮಿ ಅವರು ಸುಧಾ ವಾರಪತ್ರಿಕೆಗೆ ಬರೆದಿದ್ದ ಲೇಖನ ಮುಖಪುಟದಲ್ಲಿ (cover page story) ಪ್ರದಾನವಾಗಿ ಪ್ರಕಟಗೊಂಡಿದ್ದು ಕೆಯುಡಬ್ಲ್ಯೂಜೆ ಪ್ರಶಸ್ತಿಗೆ ಆಯ್ಕೆಯಾಗಿತ್ತು. ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಬಾಸ್ಕರ ರೈ ಕಟ್ಟ, ರಾಜಲಕ್ಷ್ಮಿ ಪತಿ ಗಣಪತಿ ಭಟ್ , ಪ್ರವೀಣ್ ಕುಮಾರ್ ಕೋಡಿಯಾಲಬೈಲು ಹಾಜರಿದ್ದರು
ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ಅವರು ಕಾರ್ಯಕ್ರಮವೊಂದರಲ್ಲಿ ಕನ್ನಡಿಗರನ್ನು ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದಂತ ಉಗ್ರರಿಗೆ ಹೋಲಿಕೆ ಮಾಡಿದ್ದರು. ಇಂತಹ ಗಾಯಕ ಸೋನು ನಿಗಮ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪೊಲೀಸರಿಗೆ ದೂರು ನೀಡಲಾಗಿದೆ. ಈ ಕುರಿತಂತೆ ಕರ್ನಾಟಕ ರಕ್ಷಣಾ ವೇದಿಕೆಯ ಬೆಂಗಳೂರು ನಗರ ಘಟಕದ ಜಿಲ್ಲಾಧ್ಯಕ್ಷ ಧರ್ಮರಾಜ್.ಎ ಅವರು ಅವಲಹಳ್ಳಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. ಅವರು ನೀಡಿರುವಂತ ದೂರಿನಲ್ಲಿ ಪ್ರಸಿದ್ಧ ಗಾಯಕ ಸೋನು ನಿಗಮ್ ತಮ್ಮ ಪೊಲೀಸ್ ಠಾಣಾ ವ್ಯಾಪ್ತಿಯ ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ, ವಿರ್ಗೊನಗರ್, ಬೆಂಗಳೂರು ಇಲ್ಲಿ ಏಪ್ರಿಲ್ 30, 2025 ರಂದು ನಡೆದ ಸಂಗೀತ ಕಾರ್ಯಕ್ರಮದಲ್ಲಿ ಮಾಡಿದ ಆಕ್ಷೇಪಾರ್ಹ ಮತ್ತು ಭಾವನೆಗಳನ್ನು ಕೆರಳಿಸುವ ಹೇಳಿಕೆಗಳಿಗಾಗಿ ಈ ಮೂಲಕ ದೂರನ್ನು ಸಲ್ಲಿಸುತ್ತಿದ್ದೇನೆ. ಅವರ ಹೇಳಿಕೆಗಳು ಕನ್ನಡಿಗ ಸಮುದಾಯದ ಭಾವನೆಗಳಿಗೆ ತೀವ್ರ ಘಾಸಿಯನ್ನುಂಟುಮಾಡಿದ್ದು, ಕರ್ನಾಟಕದ ವಿವಿಧ ಭಾಷಿಕ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುತ್ತದೆಯಲ್ಲದೆ ಹಿಂಸೆಗೆ…
ಬೆಂಗಳೂರು: 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾರ್ಗಸೂಚಿ ಹೊರಡಿಸಿದ್ದು, 2025 ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ನೋಂದಾಯಿಕೊಂಡು ಪರೀಕ್ಷೆಗೆ ಗೈರು ಹಾಜರಾದ ಪೂರ್ಣಗೊಳಿಸದ [Not Completed] | ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳಿಗೆ 2025ರ ಮೇ ಮಾಹೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ನಡೆಸಲಾಗುವುದು, ಈ ಹಿನ್ನೆಲೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 1, 2023ರ ಪೂರಕ ಪರೀಕ್ಷೆಗೆ ನೋಂದಾಯಿಸಿದ್ದ ಮತ್ತು 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ಣಗೊಳಿಸದ [Not Completed], 2025ರ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಗೈರು ಹಾಜರಾಗಿರುವ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು ಮಂಡಳಿಯ https://kseab.karnataka.gov.in ಶಾಲಾ ಲಾಗಿನ್ ಮೂಲಕ ಪರೀಕ್ಷೆ-2ಕ್ಕೆ ನೋಂದಣಿ ಮಾಡುವುದು. ಶಾಲಾ ಲಾಗಿನ್‌ನಲ್ಲಿ Registration for 2025 Exam-2ನ್ನು ಕ್ಲಿಕ್ ಮಾಡಿದಾಗ ENTER REGISTER NUMBER ಎನ್ನುವ…
ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದರೇ, ಕಲಬುರ್ಗಿ ಕೊನೆಯ ಸ್ಥಾನವನ್ನು ಗಳಿಸಿದೆ. ಈ ಬೆನ್ನಲ್ಲೇ ಎಸ್ ಎಸ್ ಎಲ್ ಸಿ ಪರೀಕ್ಷೆ-2, 3ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ದಿನಾಂಕ 26-05-2025ರಿಂದ ಪರೀಕ್ಷೆ ಆರಂಭಗೊಂಡು, ದಿನಾಂಕ 02-06-2025ರವರೆಗೆ ನಡೆಯಲಿದೆ. ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ವಿಷಯವಾರು ವೇಳಾಪಟ್ಟಿ ದಿನಾಂಕ 26-05-2025ರಂದು ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಎನ್ ಸಿ ಇ ಆರ್ ಟಿ, ಸಂಸ್ಕೃತ. ದಿನಾಂಕ 27-05-2025ರಂದು ಕೋರ್ ಸಬ್ಜೆಕ್ಟ್ – ಗಣಿತ, ಸಮಾಜ ಶಾಸ್ತ್ರ ದಿನಾಂಕ 28-05-2025ರಂದು ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ ದಿನಾಂಕ 29-05-2025ರಂದು ಕೋರ್ ಸಬ್ಜೆಕ್ಟ್ – ಸಮಾಜ…
ಆನೇಕಲ್: “ಆನೇಕಲ್ ತಾಲೂಕಿಗೆ ಕುಡಿಯಲು ಕಾವೇರಿ ನೀರು ಪೂರೈಸಲು ಟೆಂಡರ್ ಕರೆಯಲಾಗಿದ್ದು ಹಾಗೂ ಮೆಟ್ರೋ ವಿಸ್ತರಣೆಗೆ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಆನೇಕಲ್ ತಾಲ್ಲೂಕು ಹೆನ್ನಾಗರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಸಚಿವ ರಾಮಲಿಂಗಾ ರೆಡ್ಡಿ, ಶಾಸಕ ಶಿವಣ್ಣ, ಮಾಜಿ ಸಂಸದ ಸುರೇಶ್, ರಮೇಶ್ ಅವರು ನಿಮ್ಮನ್ನು ಬೆಂಗಳೂರು ನಗರ ವ್ಯಾಪ್ತಿಗೆ ಸೇರಿಸಬೇಕು ಎಂದು ನನ್ನ ಮೇಲೆ ಒತ್ತಾಯ ಹಾಕುತ್ತಿದ್ದಾರೆ. ಈ ಬಗ್ಗೆ ಮುಂದೆ ಚರ್ಚೆ ಮಾಡುತ್ತೇನೆ. ನಿಮ್ಮನ್ನು ಗ್ರೇಟರ್ ಬೆಂಗಳೂರಿನಲ್ಲಿ ಸೇರಿಸಲು ಚರ್ಚೆಯಾಗುತ್ತಿದೆ. ಎಲ್ಲಾ ಶಾಸಕರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಇನ್ನು ಈ ಭಾಗಕ್ಕೆ ಕಾವೇರಿ ನೀರನ್ನು ಪೂರೈಸಬೇಕು ಎಂದು ಸುರೇಶ್ ಹಾಗೂ ರಾಮಲಿಂಗಾ ರೆಡ್ಡಿ ಅವರು ಒತ್ತಡ ಹಾಕುತ್ತಿದ್ದಾರೆ. ಆನೇಕಲ್ ತಾಲೂಕಿಗೆ 30 ಎಂಎಲ್ ಡಿ ನೀರನ್ನು ನೀಡಲು ಟೆಂಡರ್ ಕರೆಯಲಾಗಿದೆ. ಈ ಬಗ್ಗೆ ನಾಳೆ…
ಬೆಂಗಳೂರು: ಬಸವನಗುಡಿಯ ನ್ಯಾಷನಲ್ ಹೈ ಸ್ಕೂಲ್ ಚಿರಂಜೀವಿ ಪ್ರಣವಿ. ಎನ್. ರಾಜ್ ಇಂದು ಪ್ರಕಟವಾದಂತ ಎಸ್ ಎಸ್ ಎಲ್ ಸಿ ಪರೀಕ್ಷೆ-1ರಲ್ಲಿ ಎರಡನೇ ಶ್ರೇ ಯಾಂಕದಲ್ಲಿ ತೇರ್ಗಡೆಯಾಗಿದ್ದಾರೆ. ಈ ಮೂಲಕ ನ್ಯಾಷನಲ್ ಹೈಸ್ಕೂಲ್ ಶಿಕ್ಷಣ ಸಂಸ್ಥೆ ರ್ಯಾಂಕಿಂಗ್ ಪರಂಪರೆಯನ್ನು ಮುಂದುವರೆಸಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ-1ರಲ್ಲಿ ಅಮೋಘ ಸಾಧನೆ ಮಾಡಿದ ಪ್ರಣವಿ. ಎನ್. ರಾಜ್. ಅವರಿಗೆ ಎನ್ಇಎಸ್ ಶಿಕ್ಷಣ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು, ಶಾಲೆಯ ಎಲ್ಲಾ ಅಧ್ಯಾಪಕರು, ಕಚೇರಿ, ಹಾಗೂ ಇತರೆ ಸಿಬ್ಬಂದಿಗಳು ಅಭಿನಂದಿಸಿದ್ದಾರೆ. ಎನ್.ಇ.ಎಸ್ ಸಂಸ್ಥೆಯ ಅಧ್ಯಕ್ಷರಾದ ಡಾ.ಎಚ್.ಎನ್. ಸುಬ್ರಮಣ್ಯ, ಗೌರವ ಕಾರ್ಯದರ್ಶಿ ವಿ. ವೆಂಕಟಶಿವಾ ರೆಡ್ಡಿ ಮತ್ತಿತರರು ವಿದ್ಯಾರ್ಥಿ ಹಾಗೂ ಪೋಷಕರನ್ನು ಅಭಿನಂದಿಸಿ, ಉತ್ತಮ ರೀತಿಯಲ್ಲಿ ಶಿಕ್ಷಣ ಮುಂದುವರೆಸುವಂತೆ ಹುರಿದುಂಬಿಸಿದರು. https://kannadanewsnow.com/kannada/breaking-breaking-case-court-dismisses-ct-ravis-plea-seeking-quashing-of-case-against-laxmi-hebbalkar/ https://kannadanewsnow.com/kannada/for-the-first-time-in-the-state-powermen-were-given-safe-supplies-in-mandya/ https://kannadanewsnow.com/kannada/complaint-filed-against-sonu-nigam-for-comparing-kannadigas-to-terrorists/













