Author: kannadanewsnow09

ಮಂಡ್ಯ : ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಶುಕ್ರವಾರ ದಿಢೀರ್ ಭೇಟಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಕ್ಕಳೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮ ನಿಮಿತ್ತ ಮಂಡ್ಯಗೆ ತೆರಳುತ್ತಿದ್ದ ಸಚಿವರನ್ನು ಮದ್ದೂರು ಶಾಸಕ ಕೆ.ಎಂ.ಉದಯ್ ಅವರ ಕೋರಿಕೆ ಮೇರೆಗೆ ನಿಡಘಟ್ಟ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಹಾಗೂ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಕೊಠಡಿಗಳ ಅವ್ಯವಸ್ಥೆ ಹಾಗೂ ಸಮಸ್ಯೆ ಕುರಿತಂತೆ ಶಾಲಾ ಮಕ್ಕಳೊಂದಿಗೆ ಚರ್ಚಿಸಿದರು. ನಂತರ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಸಚಿವರು ಶಾಲೆಯ ಸಮಸ್ಯೆಗಳ ಬಗ್ಗೆ ಅಹವಾಲು ಆಲಿಸಿದರು. ಬಳಿಕ ಮಕ್ಕಳೊಂದಿಗೆ ದಿನನಿತ್ಯ ನೀಡುವ ಬಿಸಿಯೂಟದ ಬಗ್ಗೆ ಮಾಹಿತಿ ಪಡೆದರು. ಮತ್ತೆ ವಾರಕ್ಕೆರಡು ಬಾರಿ ಕಡ್ಡಾಯವಾಗಿ ಶಾಲೆಯಲ್ಲಿ ಊಟದ ಜೊತೆ ಮೊಟ್ಟೆ ಹಾಗೂ ಬಾಳೆಹಣ್ಣು ನೀಡಲಾಗುತ್ತಿದೆ ಎಂಬ ಬಗ್ಗೆ ಸಚಿವರು ಮಕ್ಕಳಿಂದಲೇ ಮಾಹಿತಿ ಪಡೆದುಕೊಂಡರು. ಬಳಿಕ ಶಾಲಾ ಆವರಣದಲ್ಲಿಯೇ ವಿದ್ಯಾರ್ಥಿಗಳೊಂದಿಗೆ ನೆಲದ ಮೇಲೆ ಕುಳಿತು ಸಹಪಂಕ್ತಿ ಭೋಜನ ಮಾಡಿದರು. ಸಚಿವರ ಆಗಮನದ…

Read More

ರಾಂಚಿ: ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಮಾಜಿ ನಾಯಕ ಚಂಪೈ ಸೊರೆನ್ ಅವರು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು. ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಜೆಎಂಎಂ ನಾಯಕ ಚಂಪೈ ಸೊರೆನ್ ಶುಕ್ರವಾರ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದರು. https://twitter.com/ANI/status/1829468033607160117 https://kannadanewsnow.com/kannada/honeytrap-for-karwar-seabird-naval-base-personnel-information-leak-suspected-nia/ https://kannadanewsnow.com/kannada/bengaluru-police-issues-guidelines-for-gowri-ganesha-festival-mandatory-to-follow-them/

Read More

ಕಾರವಾರ: ಇಲ್ಲಿನ ಸೀಬರ್ಡ್ ನೌಕಾನೆಲೆಯ ಸಿಬ್ಬಂದಿಗಳಿಗೆ ಹನಿಟ್ರ್ಯಾಪ್ ಮಾಡಿರುವಂತ ಯುವತಿಯೊಬ್ಬಳು ಮಾಡಿರುವುದಾಗಿ ತಿಳಿದು ಬಂದಿದೆ. ಅಲ್ಲದೇ ಪಾಕಿಸ್ತಾನಕ್ಕೆ ನೌಕಾನೆಲೆಯ ಮಾಹಿತಿ ಸೋರಿಕೆಯ ಶಂಕೆ ವ್ಯಕ್ತವಾಗಿರುವ ಕಾರಣ, ಎನ್ಐಎಯಿಂದ ತನಿಖೆಯನ್ನು ನಡೆಸಲಾಗುತ್ತಿದೆ. ಕಾರವಾರದ ಸೀಬರ್ಡ್ ನೌಕಾನೆಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವಂತ ಮೂವರು ಸಿಬ್ಬಂದಿಗಳಿಗೆ ಫೇಸ್ ಬುಕ್ ಮೂಲಕ ತಾನು ಮರೈನ್ ಅಧಿಕಾರಿ ಎಂಬುದಾಗಿ ಯುವತಿಯೊಬ್ಬಳು ಪರಿಚಯ ಮಾಡಿಕೊಂಡು, ಹನಿಟ್ರ್ಯಾಪ್ ಮಾಡಿರುವುದಾಗಿ ತಿಳಿದು ಬಂದಿತ್ತು. ಮುದಗಾದ ವೇತನ್ ತಾಂಡೇಲ್, ತೋಡೂರಿನ ಸುನೀಲ್ ಸೇರಿದಂತೆ ಮೂವರು ಯುವಕರಿಗೆ ಯುವತಿಯೊಬ್ಬಳು ಹನಿಟ್ರ್ಯಾಪ್ ಮಾಡಿ, ಕಾರವಾರದ ಸೀಬರ್ಡ್ ನೌಕಾನೆಲೆಯ ಗುಪ್ತ ಮಾಹಿತಿಯನ್ನು ಪಡೆದಿರುವುದಾಗಿ ಹೇಳಲಾಗುತ್ತಿತ್ತು. ಈ ಮಾಹಿತಿಯ ಎನ್ಐಎಗೆ ತಿಳಿಯುತ್ತಿದ್ದಂತೇ ಅಲರ್ಟ್ ಆದಂತ ಅಧಿಕಾರಿಗಳು, ಇಂದು ನೌಕಾನೆಲೆಗೆ ಭೇಟಿ ನೀಡಿ, ಸಿಬ್ಬಂದಿಗಳನ್ನು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/good-news-for-fire-station-officers-staff-state-govt-to-implement-7th-state-revised-pay/ https://kannadanewsnow.com/kannada/bengaluru-police-issues-guidelines-for-gowri-ganesha-festival-mandatory-to-follow-them/

Read More

ಬೆಂಗಳೂರು: ನಗರದಲ್ಲಿ ದಿನಾಂಕ 07-09-2024ರಿಂದ ಆರಂಭಗೊಳ್ಳುವಂತ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರು ಅನುಸರಿಸಬೇಕಾದಂತ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಲಾಗಿದೆ. ಜೊತೆ ಜೊತೆಗೆ ಗಣೇಶೋತ್ಸವದ ವೇಳೆಯಲ್ಲಿ ಆ ನಿಯಮಗಳನ್ನು ಪಾಲಿಸುವುದು ಕಡ್ಡಾಯ ತಪ್ಪಿದ್ರೇ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂಬುದಾಗಿ ಪೊಲೀಸ್ ಇಲಾಖೆ ಎಚ್ಚರಿಸಿದೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ:07/09/2024 ರಿಂದ ಬೆಂಗಳೂರು ನಗರಾದ್ಯಂತ ಸಾರ್ವಜನಿಕರು ಗೌರಿ-ಗಣೇಶ ಹಬ್ಬವನ್ನು ಆಚರಿಸುವರು. ಈ ಸಮಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಈ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ. 1. ನಗರದ ಎಲ್ಲಾ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ತಮ್ಮ ವ್ಯಾಪ್ತಿಗಳಲ್ಲಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಅರ್ಜಿಗಳನ್ನು ಪಡೆದುಕೊಳ್ಳುವುದು. 2022 ಮತ್ತು 2023ನೇ ಸಾಲಿನಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ ವಿಗ್ರಹಗಳ ಆಧಾರದ ಮೇಲೆ ಯಾವ ಯಾವ ಸ್ಥಳಗಳಲ್ಲಿ ಪ್ರಸ್ತುತ ಸಾಲಿನಲ್ಲಿ ಪ್ರತಿಷ್ಠಾಪಿಸಬಹುದು ಎಂಬುದನ್ನು ಗುರುತಿಸಿಕೊಳ್ಳುವುದು, ಸಂಘ-ಸಂಸ್ಥೆಗಳು ಗಣಪತಿ ವಿಗ್ರಹವನ್ನು ಪ್ರತಿಷ್ಠಾಪಿಸುವ ಜಾಗ, ದಿನ,…

Read More

ಶಿವಮೊಗ್ಗ: ಬೆಂಗಳೂರಿಗೆ ಶರಾವತಿ ನದಿ ನೀರನ್ನು ಕುಡಿಯುವುದಕ್ಕೆ ಕೊಂಡೊಯ್ಯುವ ಬಗ್ಗೆ ವಿವಾದ ಉಂಟಾಗಿದೆ. ಈ ಬಗ್ಗೆ ಜನರ ಅಭಿಪ್ರಾಯವನ್ನು ಪಡೆದು, ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡುವುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಸ್ಪಷ್ಟ ಪಡಿಸಿದ್ದಾರೆ. ಇಂದು ಸಾಗರ ನಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದಂತ ಅವರು, ಯಾವುದೇ ಅಭಿವೃದ್ಧಿ ಯೋಜನೆ ಅಂದಾಗ ಅದಕ್ಕೆ ವಿರೋಧಗಳು ಬಂದೇ ಬರುತ್ತವೆ. ಈಗ ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕುಡಿಯುವ ನೀರಿಗಾಗಿ ಕೊಂಡೊಯ್ಯುವುದಕ್ಕೂ ವಿರೋಧ ವ್ಯಕ್ತವಾಗಿದೆ. ನಾನು ಶರಾವತಿ ಕಣಿವೆಯ ಜನರ ಅಭಿಪ್ರಾಯವನ್ನು ಪಡೆದು, ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿ ಮಾಹಿತಿ ನೀಡಿ, ಮನವರಿಕೆ ಮಾಡುವುದಾಗಿ ಹೇಳಿದರು. ಹೆದ್ದಾರಿ ಯೋಜನೆ ವೇಳೆ ಪರಿಸರ ನಾಶವಾಗಲಿಲ್ಲವೇ? ತುಮಕೂರು ಹಾಗೂ ಕಾರವಾರ ನಡುವೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕಾಗಿ ಲಕ್ಷಾಂತರ ಮರಗಳ ಮಾರಣ ಹೋಮವೇ ನಡೆಯುತ್ತಿದೆ. ಇದು ಪರಿಸರ ನಾಶವಲ್ಲವೇ? ಇದರ ಬಗ್ಗೆ ಮಾತನಾಡದವರು ಶರಾವತಿ ನದಿ…

Read More

ಬೆಂಗಳೂರು: ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯದ ಪೋಟೋ ವೈರಲ್ ಆಗಿತ್ತು. ಈ ಬೆನ್ನಲ್ಲೇ ತಪ್ಪೆಸಗಿದಂತ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಈಗ ಈ ಕೇಸ್ ಗೆ ಬಿಗ್ ಟ್ವಿಸ್ಟ್ ಎನ್ನುವಂತೆ ನಟ ದರ್ಶನ್ ಗೆ ರಾಜಾತಿಥ್ಯದ ಮತ್ತೊಂದು ಪೋಟೋ ಸಿಕ್ಕಿರುವುದಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಿದ ಸಂಬಂಧ ಮತ್ತೊಂದು ಪೋಟೋ ಸಿಕ್ಕಿರುವುದಾಗಿ ತಿಳಿಸಿದರು. ದರ್ಶನ್ ಗೆ ರಾಜಾತಿಥ್ಯ ಪ್ರಕರಣ ಸಂಬಂಧ ಈಗಾಗಲೇ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎರಡು ಕೇಸ್ ದಾಖಲಾಗಿದೆ. ಇದಲ್ಲದೇ ಜೈಲು ಅಧಿಕಾರಿಗಳ ವಿರುದ್ಧವೂ ಒಂದು ಕೇಸ್ ದಾಖಲಾಗಿದೆ. ಈ ಮೂರು ಪ್ರಕರಣಗಳ ತನಿಖೆಯನ್ನು ನ್ಯಾಯಾಲಯದ ಅನುಮತಿ ಪಡೆದು ಹಿರಿಯ ಅಧಿಕಾರಿಗಳಿಂದ ನಡೆಸಲಾಗುತ್ತಿದೆ ಎಂದು ಹೇಳಿದರು. ಅಂದಹಾಗೇ ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿದ್ದಾರೆ. ರಾಜಾತಿಥ್ಯ ವಿಷಯ ಹೊರ…

Read More

ಹುಬ್ಬಳ್ಳಿ : ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭವಲ್ಲ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ಗೆ ಬಿಜೆಪಿಯವರು ಕೈಹಾಕಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಗಣಿಗ ಶಾಸಕರು ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ಎಂದಿಗೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಾರದೇ, ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ 2008, 2018 ರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಯವರು ,ಇಂತಹ ಪ್ರಯತ್ನಕ್ಕೆ ಈಗಲೂ ಕೈಹಾಕಿದ್ದು, 136 ಶಾಸಕರ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭದ ಮಾತಲ್ಲ ಎಂದರು. ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಸಿದ್ದರಾಮಯ್ಯನವರ ಮೇಲೆ ಮಾತ್ರ ಇಂತಹ ಪಿತೂರಿ ನಡೆಯುತ್ತಿರುವ ಕಾರಣವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳೆರಡೂ ಸೇರಿ ,…

Read More

ಸಕಲೇಶಪುರ : ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರೂ ನಾನು ಅದನ್ನು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸಲು ಸಿಬಿಐ ಹೈಕೋರ್ಟಿಗೆ ಅರ್ಜಿ ಸಲ್ಲಿಸಿರುವ ಪ್ರಕರಣದ ಕುರಿತ ತೀರ್ಪಿನ ಬಗ್ಗೆ ಕೇಳಿದಾಗ “ನನಗೆ ದೇವರ ಮೇಲೆ ಮತ್ತು ನ್ಯಾಯಾಲಯದ ಮೇಲೆ ನಂಬಿಕೆ ಇದೆ” ಎಂದರು. ಎತ್ತಿನಹೊಳೆ ಕಾಮಗಾರಿ ವೀಕ್ಷಣೆ ನಂತರ ಸಕಲೇಶಪುರದ ಹೆಬ್ಬನಹಳ್ಳಿ ಬಳಿ ಮಾಧ್ಯಮಗಳಿಗೆ ಪ್ರಶ್ನೆಗಳಿಗೆ ಗುರುವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ಮೇಲೆ ದೂರು ದಾಖಲಾಗಿರುವ ಬಗ್ಗೆ ಕೇಳಿದಾಗ ” ಸಿಎಂ ಏನು ಮಾಡಿದ್ದಾರೆ ಎಂದು ಅವರ ಮೇಲೆ ಎಲ್ಲಾ ಏಕೆ ಮುಗಿಬೀಳುತ್ತಿದ್ದಾರೋ ನನಗೆ ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಏನು ಆಗುವುದಿಲ್ಲ. ಜಮೀನು ಕಳೆದುಕೊಂಡಿರುವುದಕ್ಕೆ ಪರಿಹಾರವಾಗಿ ಬಿಜೆಪಿಯವರೇ ನಿವೇಶನ ನೀಡಿದ್ದಾರೆ. ಸಿಎಂ ಅವರು ಎಲ್ಲೂ ಪ್ರಭಾವವನ್ನು ಬೀರಿಲ್ಲ, ಸಹಿಯನ್ನು ಮಾಡಿಲ್ಲ” ಎಂದರು. ನಕಲಿಗಲ್ಲ ಅಸಲಿಗೆ ಉತ್ತರ…

Read More

ನವದೆಹಲಿ/ಶ್ರೀನಗರ: ತಾವು ಪ್ರಧಾನಿಗಳಾದ 28 ವರ್ಷಗಳ ನಂತರ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ದೇಶದ ಕೊನೆಯ ಭಾಗದಲ್ಲಿರುವ ಉರಿ ಜಲವಿದ್ಯುತ್ ಘಟಕವನ್ನು ಖುದ್ದು ವೀಕ್ಷಿಸಿದರು. ಬುಧವಾರವೇ ಶ್ರೀನಗರಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿಗಳು, 28 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಗ್ಗೆಯೇ ಶ್ರೀನಗರದಿಂದ ಬಾರಮುಲ್ಲಾಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿ; ತಾವು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಈ ರೇಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ್ದನ್ನು ನೆನಪು ಮಾಡಿಕೊಂಡರು. ಬಾರಾಮುಲ್ಲಾದಿಂದ ಉರಿಗೆ ತೆರಳಿದ ಅವರು; ಅಲ್ಲಿನ ರಾಷ್ಟ್ರೀಯ ಜಲವಿದ್ಯುತ್ ಉತ್ಪಾದನಾ ಘಟಕ (National Hydroelectric Power Corporation Private Limited- NHPC) ಕ್ಕೆ ಭೇಟಿ ಕೊಟ್ಟರು. 480 ಮೆಗಾವ್ಯಾಟ್ ಸಾಮರ್ಥ್ಯದ ಈ ವಿದ್ಯುತ್ ಘಟಕವೂ ದೇವೇಗೌಡರು ಪ್ರಧಾನಿಯಾಗಿದ್ದಾಗಲೇ ಉದ್ಘಾಟನೆ ಆಗಿತ್ತು. ಈ ವಿದ್ಯುತ್ ಉತ್ಪಾದನಾ ಘಟಕವೂ ಉರಿಯ ಝಿಲಂ ನದಿ ದಂಡೆಯಲ್ಲಿ, ಭಾರತ – ಪಾಕಿಸ್ತಾನದ ನಡುವಿನ ನಿಯಂತ್ರಣ ರೇಖೆಗೆ (LOC) ಅತಿ ಸಮೀಪದಲ್ಲಿದೆ.…

Read More

ಬೆಂಗಳೂರು: ನಮ್ಮ ಮೆಟ್ರೋ ರೈಲು ಹಳಿಯ ಮೇಲೆಯೇ ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ, ಕೆಲ ಕಾಲ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಂಡು, ಆ ಬಳಿಕ ಮತ್ತೆ ಪುನರಾರಂಭಗೊಂಡಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ಸುಮಾರು ಸಂಜೆ 04 .51 ಗಂಟೆಗೆ ಮೆಟ್ರೋ ರೈಲು ಸೆಟ್ #23 ನೇರಳೆ ಮಾರ್ಗದಲ್ಲಿ – ಕಬ್ಬನ್ ಪಾರ್ಕ್ ಅಪ್ ರಾಂಪ್‌ನಲ್ಲಿ ಮರದ ಕೊಂಬೆಯು ವಾಕ್‌ವೇ ನಡುವೆ ಬಿದ್ದು ಚಲಿಸುವ ರೈಲಿಗೆ ಅಡ್ಡಿಯಾಗಿದ್ದ ಕಾರಣ ಎಚ್ಚರಿಕೆಯಿಂದ ಚಲಿಸಲಾಯಿತು ಎಂದು ತಿಳಿಸಿದೆ. ಮರದ ಕೊಂಬೆಯನ್ನು ತೆರವುಗೊಳಿಸಿ, 17:05 ಗಂಟೆಗೆ ರೈಲು ಸೇವೆ ಎಂದಿನಂತೆ ಪುನರಾರಂಭವಾಯಿತು ಎಂಬುದಾಗಿ ಬಿಎಂಆರ್ ಸಿಎಲ್ ಮಾಹಿತಿ ನೀಡಿದೆ. https://kannadanewsnow.com/kannada/reliance-jio-to-offer-100gb-cloud-storage-free-of-cost-to-its-customers/ https://kannadanewsnow.com/kannada/trai-to-issue-new-rules-your-sim-card-will-be-closed-if-you-make-this-mistake-trai-new-rules/ https://kannadanewsnow.com/kannada/good-news-for-property-sales-buyers-anywhere-registration-system-to-be-implemented-across-the-state-from-september-2/

Read More