Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ. ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂಬುದಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಸಿದ ಪ್ರಗತಿ ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಕಾರ್ಯನಿರ್ವಹಣಾ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ. • ಸರ್ಕಾರದ ಪರವಾಗಿ ಸಮರ್ಪಕವಾಗಿ ವಾದ ಮಾಡಲು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. • ಸರ್ಕಾರದ ಕಾನೂನುಗಳನ್ನು ಎಲ್ಲಾ ಹಂತಗಳಲ್ಲಿ ಎತ್ತಿ ಹಿಡಿಯುವುದು ನಿಮ್ಮ ಕರ್ತವ್ಯ. ಕರ್ನಾಟಕ ರಾಜ್ಯ ಅಧಿನಿಯಮಗಳ ಸಂಪೂರ್ಣ ಅನುಷ್ಠಾನ, ಉದ್ದೇಶದ ನಿರ್ವಹಣೆ ನಿಮ್ಮ ಕೈಯಲ್ಲಿದೆ. • ನೀವೆಲ್ಲರೂ ಹಿರಿಯ ನ್ಯಾಯವಾದಿಗಳಿದ್ದೀರಿ. ಸರ್ಕಾರದ ಆದ್ಯತೆಗಳನ್ನು ಕಾಪಾಡುವುದು ನಿಮ್ಮೆಲ್ಲರ ಜವಾಬ್ದಾರಿ. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ. • ನ್ಯಾಯಾಲಯಗಳಲ್ಲಿ ಪರಿಣಾಮಕಾರಿಯಾಗಿ ವಾದ ಮಂಡಿಸದ ಕಾರಣಕ್ಕೆ ನಾವು ಹಲವು ಪ್ರಕರಣಗಳಲ್ಲಿ ಹಿನ್ನಡೆ ಅನುಭವಿಸುವಂತಾಗಿದೆ. ಸರ್ಕಾರಕ್ಕೆ ಅನುಕೂಲಕರವಾದ ಕೇಸ್‌ಗಳಲ್ಲಿ ಸಹ ಸರ್ಕಾರದ ಪರವಾಗಿ ಆದೇಶಗಳು ಬರುತ್ತಿಲ್ಲ ಯಾಕೆ? •…
ಮಡಿಕೇರಿ : ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಕಾನೂನು ಪದವೀಧರರಿಗೆ 2025-26ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವರ್ಗ- 1 ಮತ್ತು ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ:3,50,000 ಹಾಗೂ ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ:2,50,000 ಒಳಪಟ್ಟಿರಬೇಕು. ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪ್ರವರ್ಗ-1ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಲಯಮಾನುಸಾರ ಇತರೆ ವರ್ಗಗಳಲ್ಲಿ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದು 02 ವರ್ಷದ ಒಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅರ್ಜಿದಾರರ ವಯಸ್ಸು ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದೊಳಗಿರಬೇಕು. ಪ್ರವರ್ಗ 2ಎ, 3ಎ, 3ಬಿ ರ ಅಭ್ಯರ್ಥಿಗಳಿಗೆ 38 ವರ್ಷದೊಳಗಿರಬೇಕು. ಅಭ್ಯರ್ಥಿಯು ತನ್ನ ಹೆಸರನ್ನು ಬಾರ್ ಕೌನ್ಸಿಲ್‍ನಲ್ಲಿ ನೊಂದಾಯಿಸಿರಬೇಕು. ಕಾನೂನು ತರಬೇತಿಯು 04 ವರ್ಷಗಳ ಅವಧಿಯಾಗಿದ್ದು…
ಮಡಿಕೇರಿ : ಪ್ರಸಕ್ತ (2025-26) ಸಾಲಿಗೆ ಡಾ.ಎ.ಪಿ.ಜೆ ಅಜ್ದುಲ್ ಕಲಾಂ ವಸತಿ ಶಾಲೆ/ ಕಾಲೇಜು, ಕ್ಯಾತೆ ಗ್ರಾಮ ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, ಕೊಡಗು ಜಿಲ್ಲೆ ಇಲ್ಲಿನ ಶಾಲಾ ವಿಭಾಗಕ್ಕೆ ಹಾಗೂ ಕಾಲೇಜು ವಿಭಾಗಕ್ಕೆ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ, 02 ಕೊನೆಯ ದಿನವಾಗಿದೆ. ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುವುದು. ಶಾಲಾ ವಿಭಾಗ (ವೇತನ ಶ್ರೇಣೆ ರೂ 16,650, ಕಂಪ್ಯೂಟರ್ ಶಿಕ್ಷಕರು. ವಿದ್ಯಾರ್ಹತೆ ಬಿ.ಸಿ.ಎ, 01 ಹುದ್ದೆ, ಕಾಲೇಜು ವಿಭಾಗ (ವೇತನ ಶ್ರೇಣೆ – ರೂ 18.150). ಭೌತಶಾಸ್ತ್ರ (01 ಹುದ್ದೆ) ಮತ್ತು ರಸಾಯನಶಾಸ್ತ್ರ ಉಪನ್ಯಾಸಕರು(01 ಹುದ್ದೆ) ವಿದ್ಯಾರ್ಹತೆ ಎಂಎಸ್‍ಸಿ ಅಥವಾ ಬಿ.ಎಡ್ ಆಗಿರಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಅಲ್ಪಸಂಖ್ಯಾಂತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್‍ಎಂಸಿ. ಕಾಲೇಜು ಹತ್ತಿರ, ಮಡಿಕೇರಿ ಕಚೇರಿ ದೂರವಾಣಿ ಸಂಖ್ಯೆ 08272-225528, 96861386888 ಮತ್ತು ಪ್ರಾಂಶುಪಾಲರು ಡಾ.ಎ.ಪಿ.ಜೆ ಅಜ್ದುಲ್ ಕಲಾಂ ವಸತಿ ಶಾಲೆ,…
ಧಾರವಾಡ: 2025-26 ನೇ ಸಾಲಿನ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ (ಖ-WಃಅIS) ಯೋಜನೆಯನ್ನು ಜಿಲ್ಲೆಯ ರೈತರಿಗೆ ಸರ್ಕಾರವು ಘೋಷಿಸಿದೆ. ಹಸಿಮೆಣಸಿನಕಾಯಿ ಬೆಳೆಗೆ ಧಾರವಾಡ, ಅಮ್ಮಿನಬಾವಿ ಗರಗ, ದುಮ್ಮವಾಡ ಹಾಗೂ ಛಬ್ಬಿ ಹೋಬಳಿಗಳ ಆಯ್ದ ಗ್ರಾಮ ಪಂಚಾಯತಗಳು ಹಾಗೂ ಮಾವು ಬೆಳೆಗೆ ಅಮ್ಮಿನಭಾವಿ, ಧಾರವಾಡ, ಗರಗ, ಅಳ್ನಾವರ, ಹುಬ್ಬಳ್ಳಿ, ಛಬ್ಬಿ, ಕಲಘಟಗಿ, ತ.ಹೊನ್ನಳ್ಳಿ, ದುಮ್ಮವಾಡ, ಕುಂದಗೋಳ ಹಾಗೂ ಸಂಶಿ ಹೋಬಳಿಗಳ ಆಯ್ದ ಗ್ರಾಮ ಪಂಚಾಯತಗಳನ್ನು ಈ ವಿಮೆ ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ. ಧಾರವಾಡ ಜಿಲ್ಲೆಗೆ ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿಯು ಆಯ್ಕೆಯಾಗಿದ್ದು, ವಿಮೆ ಕಂತಿಗೆ ಸಂಬಂಧಪಟ್ಟಂತೆ ಹಸಿಮೆಣಸಿನಕಾಯಿ ಬೆಳೆಗೆ ರೂ. 6745 ಪ್ರತಿ ಹೆಕ್ಟೇರ್‍ಗೆ ಹಾಗೂ ಮಾವು ಬೆಳೆಗೆ ರೂ. 4000 ಪ್ರತಿ ಹೆಕ್ಟೇರ್‍ಗೆ ರೈತರು ತಮ್ಮ ವಿಮೆ ಕಂತಿನ ಮೊತ್ತವನ್ನು ಪಾವತಿಸಬೇಕಾಗಿರುತ್ತದೆ. ಅಗಸ್ಟ್ 31, 2025 ರೊಳಗಾಗಿ ವಿಮಾ ಕಂತು ಪಾವತಿಸಬೇಕು. ಸದರಿ ಯೋಜನೆ ಅಡಿ ನೋಂದಾಯಿಸಿಕೊಳ್ಳಲು ಎಫ್‍ಐಡಿ ಹೊಂದಿರುವುದು ಕಡ್ಡಾಯ. ಹೆಚ್ಚಿನ ಮಾಹಿತಿಗಾಗಿ ಧಾರವಾಡ, ಹುಬ್ಬಳ್ಳಿ,…
ಧಾರವಾಡ: ಹುಬ್ಬಳ್ಳಿಯ ನಿವಾಸಿ ರಾಕೇಶ ಮೆನಸಿಣಕಾಯಿ ಮೈಸೂರು ಎನ್ನುವವರು ದಿ:13/03/2022 ರಂದು ರೂ.98,000 ಪಾವತಿಸಿ ಇಲೆಕ್ಟ್ರೀಕ್ ಸ್ಕೂಟರನ್ನು ಎದುರುದಾರರಿಂದ ಖರೀದಿಸಿದ್ದರು. ವಾಹನವು ಬ್ಯಾಟರಿಯ ಮೇಲೆ 5 ವರ್ಷದ ವಾರಂಟಿಯನ್ನು ಹೊಂದಿತ್ತು. ದೂರುದಾರರು ಎದುರುದಾರರ ಹೇಳಿಕೆಯಂತೆ ವಾಹನವನ್ನು ಉಪಯೋಗಿಸುತ್ತಿದ್ದು ನಂತರ ಒಮ್ಮಿಂದೊಮ್ಮೆಲೆ ರಸ್ತೆಯ ಮದ್ಯ ನಿಲ್ಲಲು ಪ್ರಾರಂಭಿಸಿತು. ಅಲ್ಲದೇ ಎದುರುದಾರರು ಹೇಳಿದಷ್ಟು ಮೈಲೇಜನ್ನೂ ಸಹ ವಾಹನವು ಕೊಡುತ್ತಿರಲಿಲ್ಲ. ಈ ವಿಷಯವನ್ನು ದೂರುದಾರರು ಎದುರುದಾರರಿಗೆ ತಿಳಿಸಿದಾಗ ಅವರು ಅದನ್ನು ಸರಿಪಡಿಸಿಕೊಟ್ಟಿರಲಿಲ್ಲ. ಅಲ್ಲದೇ 1ನೇ ಎದುರುದಾರರು ತಮ್ಮ ಮಳಿಗೆಯನ್ನು ಶಾಶ್ವತವಾಗಿ ಮುಚ್ಚಿರುತ್ತಾರೆ. ಇದರಿಂದ ದೂರುದಾರರಿಗೆ ವಾಹನವನ್ನು ರಿಪೇರಿ ಮಾಡಿಸಲು ಕಷ್ಟವಾಗಿರುತ್ತದೆ. ಎದುರುದಾರರ ಇಂತಹ ನಡವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಹೇಳಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರುದಾರರು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದಿ: 20/09/2024 ರಂದು ದೂರನ್ನು ಸಲ್ಲಿಸಿದ್ದರು. ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ ಹಾಗೂ ವಿಶಾಲಾಕ್ಷಿ. ಅ.…
ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ ಅರ್ಧ ಶತಮಾನ ಎಂಬ ವಿಷಯದ ಬಗ್ಗೆ ಮೂರು ದಿನಗಳ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಶಿಬಿರವು ಸೆಪ್ಟಂಬರ್‌ನಲ್ಲಿ ನಡೆಯಲಿದ್ದು, ರಾಜ್ಯದ ಎಲ್ಲಾ ಭಾಗದ 20 ರಿಂದ 50 ವರ್ಷದ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜು.20 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ https://sahithyaacademy.karnataka.gov.in ಗೆ ಭೇಟಿ ನೀಡಿ ಅರ್ಜಿ ನಮೂನೆ ಹಾಗೂ ವಿವರ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಜೆ.ಸಿ ರಸ್ತೆಯ ಕನ್ನಡ ಭವನದ 2ನೇ ಮಹಡಿಯ ಕರ್ನಾಟಕ ಸಾಹಿತ್ಯ ಅಕಾಡೆಮಿ ಕಚೇರಿ ಅಥವಾ ದೂ.080-22211730, 29601730, 22106460 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟಾçರ್ ಕರಿಯಪ್ಪ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/heavy-rain-backdrop-tomorrow-dc-has-announced-a-holiday-for-schools-in-5-taluks-of-chikkamagaluru-district/ https://kannadanewsnow.com/kannada/these-7-benefits-will-come-if-pf-is-deducted-from-your-salary-every-month/
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಮಳೆಗಾಯುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಿ ಡಿಸಿ ಆದೇಶಿಸಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಜಿಲ್ಲೆಯ ಕೊಪ್ಪ, ಮೂಡಿಗೆರೆ, ಕಳಸ, ಶೃಂಗೇರಿ ಮತ್ತು ನರಸಿಂಹರಾಜಪುರ ತಾಲ್ಲೂಕಿನಲ್ಲಿ ತೀವ್ರವಾಗಿ ಮಳೆಯಾಗುತ್ತಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ದಿನಾಂಕ 27-06-2025ರ ನಾಳೆ ರಜೆ ನೀಡಲಾಗಿದೆ ಎಂದಿದ್ದಾರೆ. ನಾಳೆ ಕೊಪ್ಪ, ಕಳಸ, ಮೂಡಿಗೆರೆ, ಶೃಂಗೇರಿ, ನರಸಿಂಹರಾಜಪುರ ತಾಲ್ಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಇರಲಿದೆ. ಎಲ್ಲಾ ಶಾಲೆಗಳು ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿ ನಿರ್ವಹಿಸಲು ಸೂಚಿಸಿದ್ದಾರೆ. https://kannadanewsnow.com/kannada/invitation-to-apply-for-guest-lecturer-and-non-teaching-positions/ https://kannadanewsnow.com/kannada/these-7-benefits-will-come-if-pf-is-deducted-from-your-salary-every-month/
ಬಳ್ಳಾರಿ : ನಗರದ ಕಂಟೋನ್‌ಮೆAಟ್‌ನ ಐಶ್ವರ್ಯ ಕಾಲೋನಿಯ(ಐಟಿಐ ಕ್ಯಾಂಪಸ್) ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ (ಜಿಟಿಟಿಸಿ) ಸಂಸ್ಥೆಯಲ್ಲಿ ಅತಿಥಿ ಬೋಧಕ, ಬೋಧಕೇತರ ಹುದ್ದೆಗಳ ನೇಮಕಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೆಕ್ಯಾನಿಕಲ್, ಎಲೆಕ್ಟಾçನಿಕ್ಸ್, ಎಲೆಕ್ಟಿçಕಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಬಿಇ (ಬಿಟೆಕ್) ಅಥವಾ ಡಿಪ್ಲೋಮಾ ಅನುಭವವಿರುವ ತಲಾ ಒಬ್ಬ ಅತಿಥಿ ಬೋಧಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಟಿಟಿಸಿಯ ಪ್ರಾಂಶುಪಾಲರ ಕಚೇರಿ ಅಥವಾ ಮೊ.9972320076, 9620057086 ಗೆ ಸಂಪರ್ಕಿಬಹುದು ಎಂದು ಸಂಸ್ಥೆಯ ಪ್ರಾಂಶುಪಾಲ ಮುತ್ತಣ್ಣ ಧರ್ಮಂತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/development-of-urdu-schools-on-the-kps-model-in-karnataka-minister-zameer-ahmed/ https://kannadanewsnow.com/kannada/these-7-benefits-will-come-if-pf-is-deducted-from-your-salary-every-month/
12 ವರ್ಷಗಳ ನಂತರ ಗುರು ಮಿಥುನ ರಾಶಿಯಲ್ಲಿ ಉದಯಿಸುತ್ತಿದ್ದಾನೆ. ಗುರುವಿನ ಉದಯವು ಮಿಥುನ ಮತ್ತು ಧನು ರಾಶಿ ಸೇರಿದಂತೆ 5 ರಾಶಿಚಕ್ರ ಚಿಹ್ನೆಗಳಿಗೆ ಅದೃಷ್ಟವನ್ನು ತರುತ್ತದೆ. ಈ ರಾಶಿಚಕ್ರ ಚಿಹ್ನೆಗಳ ವ್ಯವಹಾರವು ವೇಗಗೊಳ್ಳುತ್ತದೆ ಮತ್ತು ಇವರ ಉದ್ಯೋಗದಲ್ಲಿ ಹೊಸ ಅವಕಾಶಗಳ ಸಾಧ್ಯತೆ ಹೆಚ್ಚಾಗುತ್ತದೆ. ವಾಸ್ತವವಾಗಿ, ಗುರುವು ತನ್ನ ಸ್ನೇಹಿತ ಬುಧನ ರಾಶಿಯಾದ ಮಿಥುನ ರಾಶಿಯಲ್ಲಿ ಸಾಗುವಾಗ ಉದಯಿಸುತ್ತಿದ್ದಾನೆ. ಶುಭ ಸ್ಥಿತಿಯಲ್ಲಿರುವ ಗುರು ಗ್ರಹದ ಉದಯವು ಬಹಳ ಪ್ರಭಾವಶಾಲಿ ಎಂದು ಪರಿಗಣಿಸಲಾಗಿದೆ. ಆದ್ದರಿಂದ ಗುರುವಿನ ಉದಯದೊಂದಿಗೆ ಯಾವ 5 ರಾಶಿಗಳಿಗೆ ಶುಭವಾಗಲಿದೆ ಎಂಬುದು ಇಲ್ಲಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ…
ಬೆಂಗಳೂರು: ರಾಜ್ಯದಲ್ಲಿ ಕೆಪಿಎಸ್ ಮಾದರಿಯಲ್ಲೇ ಉರ್ದು ಶಾಲೆಗಳನ್ನು ಅಭಿವೃದ್ಧಿ ಮಾಡುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಅಲ್ಪಸಂಖ್ಯಾತರ ಬಾಹುಳ್ಯದ ಪ್ರದೇಶಗಳಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಮಾದರಿಯಲ್ಲಿ 100 ಉರ್ದು ಶಾಲೆಗಳನ್ನು ಅಭಿವೃದ್ಧಿಪಡಿಸಲು ಬಜೆಟ್‌ನಲ್ಲಿ 500 ಕೋಟಿ ರೂ. ಮೀಸಲಿಡಲಾಗಿದೆ. ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಜೊತೆ ಸೇರಿ ಸರ್ವೇ ಮಾಡಿ ಅಗತ್ಯವಿರುವ ಕಡೆ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. https://twitter.com/KarnatakaVarthe/status/1938214553671843900












