Author: kannadanewsnow09

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಪ್ರಮುಖ ರಸ್ತೆ ಸೇರಿದಂತೆ ಗ್ರಾಮೀಣ ಭಾಗದ ರಸ್ತೆಗಳಲ್ಲಿ ಗುಂಡಿಗಳದ್ದೇ ದರ್ಬಾರು ಹೆಚ್ಚಾಗಿದೆ. ವಾಹನ ಸವಾರರು ಓಡಾಡೋದಕ್ಕೆ ಕಷ್ಟವಾಗಿದೆ.  ರಾಜ್ಯದ ಜನರಿಗೆ ಆಸೆ, ಆಮೀಷದ ಬಲಿಯೊಡ್ಡಿ ಅಭಿವೃದ್ಧಿ ಶೂನ್ಯ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ವಿರೋಧಿ ನೀತಿ ಅನುಸರಿಸುತ್ತದೆ ಎಂದು ಬಿಜೆಪಿ ಮುಖಂಡ ಡಾ.ಜ್ಞಾನೇಶ್ ಆರೋಪಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ತಾಲ್ಲೂಕು ಬಿಜೆಪಿ ವತಿಯಿಂದ ಸಾಗರ, ಉಳವಿ ಮುಖ್ಯ ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಿಟ್ಟಿ ಯೋಜನೆಯಿಂದ ರಾಜ್ಯದ ಆರ್ಥಿಕತೆ ಹಳಿ ತಪ್ಪಿದೆ. ಖಜಾನೆಯಲ್ಲಿ ಹಣವಿಲ್ಲ. ಅಭಿವೃದ್ಧಿ ಕುಂಠಿತಗೊಂಡಿದೆ. ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಖಜಾನೆ ಲೂಟಿ ಮಾಡಿದೆ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದರು. ಕೇಂದ್ರದಲ್ಲೂ ಒಂದೊಮ್ಮೆ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದ್ದರೆ ಇವತ್ತಿನ ದೇಶ ಸ್ಥಿತಿ ಹೇಗಿರುತಿತ್ತು ಎನ್ನುವುದನ್ನು ಜನರು ಯೋಚಿಸಬೇಕಿದೆ ಎಂದರು. ರಸ್ತೆಯಲ್ಲಿ ಗುಂಡಿ‌ಗಳು ಬಿದ್ದು…

Read More

ಜಮ್ಮು: ಪ್ರಮುಖ ಪ್ರಗತಿಯಲ್ಲಿ, ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಭದ್ರತಾ ಸಂಸ್ಥೆಗಳು ಮೊದಲ ಆರೋಪಿಯನ್ನು ಬಂಧನವನ್ನು ಮಾಡಿವೆ. ಮಾಧ್ಯಮ ವರದಿಗಳ ಪ್ರಕಾರ, ಭಯೋತ್ಪಾದಕರಿಗೆ ಸಹಾಯ ಮಾಡಿದ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಮಹತ್ವದ ಪ್ರಗತಿಯೊಂದರಲ್ಲಿ, ಏಪ್ರಿಲ್ 22 ರ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾದ ಭಯೋತ್ಪಾದಕರಿಗೆ ಲಾಜಿಸ್ಟಿಕ್ಸ್ ಬೆಂಬಲ ನೀಡಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಜುಲೈನಲ್ಲಿ ನಡೆದ ಆಪರೇಷನ್ ಮಹಾದೇವ್ ಸಮಯದಲ್ಲಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳ ವಿಶ್ಲೇಷಣೆಯ ನಂತರ 26 ವರ್ಷದ ಮೊಹಮ್ಮದ್ ಯೂಸುಫ್ ಕಟಾರಿಯಾ ಎಂದು ಗುರುತಿಸಲ್ಪಟ್ಟ ವ್ಯಕ್ತಿಯನ್ನು ಬಂಧಿಸಲಾಗಿದೆ.

Read More

ಶಿವಮೊಗ್ಗ: ಕನ್ನಡದ ಹಿರಿಯ ಸಾಹಿತಿ, ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಡಾ.ಎಸ್ ಎಲ್ ಭೈರಪ್ಪ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕನ್ನಡ ಸಾಹಿತ್ಯ ಲೋಕದ ಅಪೂರ್ವ ಚೇತನ ಪದ್ಮಭೂಷಣ ಎಸ್. ಎಲ್. ಭೈರಪ್ಪ ಅವರ ಅಗಲಿಕೆ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ. ಪದ್ಮಭೂಷಣ ಗೌರವ ಪುರಸ್ಕೃತ ನಾಡಿನ ಖ್ಯಾತ ಸಾಹಿತಿ ಎಸ್​.ಎಲ್​. ಭೈರಪ್ಪ ಅವರು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ನೋವಾಗಿದೆ. ಅಗಲಿದ ಅವರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ನೀಡಲಿ. ಅವರ ಪುಸ್ತಕ ಓದುಗರಿಗೆ ಹಾಗೂ ಕುಟುಂಬ ಸದಸ್ಯರಿಗೆ ಈ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳುವ ಮೂಲಕ ಎಸ್ ಎಲ್ ಭೈರಪ್ಪ ಅವರ ನಿಧನಕ್ಕೆ ಸಂತಾಪವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಸೂಚಿಸಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/breaking-veteran-writer-sl-bhyrappa-is-no-more-sl-bhyrappa-is-no-more/…

Read More

ಇದು ಅಶ್ವಯುಜ ಮಾಸ. ಇಂದಿನ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಅಶ್ವಯುಜ ಮಾಸದ ಶಕ್ತಿಶಾಲಿ ಗುರುವಾರದಂದು ಮಾಡಬೇಕಾದ ಪೂಜೆಯ ಬಗ್ಗೆ ನಾವು ಕಲಿಯಲಿದ್ದೇವೆ. ಗುರುವಾರ ಗುರುವಿನ ದಿನ. ಕುಬೇರನ ದಿನ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ…

Read More

ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಪದ್ಮಭೂಷಣ ಪುರಸ್ಕೃತರು, ಹಿರಿಯ ಸಾಹಿತಿ ಡಾ.ಎಸ್ಎಲ್ ಭೈರಪ್ಪ ಅವರು ಇಂದು ನಿಧನರಾದ ವಿಷಯವನ್ನು ರಾಜ್ಯ ಸರ್ಕಾರವು ತೀವ್ರ ಸಂತಾಪವನ್ನು ಪ್ರಕಟಿಸಿದೆ ಎಂದಿದೆ. ಹಿರಿಯ ಸಾಹಿತಿ ಹಾಗೂ ಪದ್ಮಭೂಷಣ ಪುರಸ್ಕೃತ ಡಾ.ಎಸ್ಎಲ್ ಭೈರಪ್ಪ ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶಿಸಿದೆ. https://kannadanewsnow.com/kannada/breaking-veteran-writer-sl-bhyrappa-is-no-more-sl-bhyrappa-is-no-more/ https://kannadanewsnow.com/kannada/bjp-protests-demanding-closure-of-road-pothole-in-sagar/

Read More

ಬೆಂಗಳೂರು: ಅತ್ಯಾಚಾರ ಪ್ರಕರಣ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮತ್ತೊಬ್ಬ ನ್ಯಾಯಾಧೀಶರ ನ್ಯಾಯಪೀಠಕ್ಕೆ ಪ್ರಕರಣ ವರ್ಗಾವಣೆ ಕೋರಿದ್ದಂತ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದೆ. ಇಂದು ಅತ್ಯಾಚಾರ ಕೇಸ್ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂಐ ಅರುಣ್ ಅವರಿದ್ದಂತ ನ್ಯಾಯಪೀಠವು ವಜಾಗೊಳಿಸಿದೆ. ಬೇರೆ ನ್ಯಾಯಾಧೀಶರಿರುವ ಕೋರ್ಟ್ ಗೆ ವರ್ಗಾವಣೆಯನ್ನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಸಹ ಅರ್ಜಿ ವಜಾಗೊಳಿಸಿತ್ತು.

Read More

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ. ಆದರೇವ ಅವರು ಬಾಲ್ಯದಲ್ಲಿ ಕಡು ಕಷ್ಟ ಅನುಭವಿಸಿದ್ದರು. ತಮ್ಮ ಒಪ್ಪೊತ್ತಿನ ಊಟ, ಶಿಕ್ಷಣಕ್ಕಾಗಿ ತಿಂಗಳಿಗೆ 5 ರೂಪಾಯಿ ಸಂಬಳಕ್ಕೆ ಸಿನಿಮಾ ಟಾಕೀಸ್ ನಲ್ಲಿ ಗೇಟ್ ಕೀಪರ್ ಆಗಿಯೂ ಕೆಲಸ ಮಾಡಿದ್ದರು. ಸಾಹಿತಿ ಎಸ್ ಎಲ್ ಭೈರಪ್ಪ ಅವರು ಬಾಲ್ಯದಲ್ಲೇ ಮಾರಕ ಪ್ಲೇಗ್ ರೋಗಕ್ಕೆ ಅಣ್ಣ-ತಂಗಿ, ಅಕ್ಕ, ತಾಯಿ, ತಮ್ಮನನ್ನು ಕಳೆದುಕೊಂಡರು. ಇದು ಅವರ ಬದುಕಿಗೆ ಬಹುದೊಡ್ಡ ಆಘಾತವನ್ನೇ ನೀಡಿತು. ಆ ಸಂದರ್ಭದಲ್ಲಿ ಅಕ್ಷರಶಃ ನಲುಗಿ ಹೋಗಿದ್ದರು. ಅಲ್ಲದೇ ಬೀದಿಗೆ ಕೂಡ ಬಿದ್ದಿದ್ದರು. ಹೀಗಾಗಿ ತಮ್ಮ ಆರಂಭದ ಶಿಕ್ಷಣವನ್ನು ಸೋದರ ಮಾವನ ಆಶ್ರಯದಲ್ಲಿ ಕಲಿತರು. ಸೋದರ ಮಾವನ ಆಶ್ರಯದಿಂದ ಪ್ರಾಥಮಿಕ ಶಾಲಾ ಶಿಕ್ಷಣ ಆರಂಭಿಸಿದಂತ ಅವರು, ಆ ಬಳಿಕ ನುಗ್ಗೆಹಳ್ಳಿಗೆ ಬಂದು ಸ್ವಾಮಿ ಮೇಷ್ಟ್ರು ಮತ್ತು ಶ್ರೀನಿವಾಸ ಅಯ್ಯಂಗರ್ ಅವರಿಂದ ಶಿಕ್ಷಣ ಮುಂದುವರೆಸುವಂತೆ ಆಯ್ತು. ಇದರ ಮಧ್ಯೆ ಸ್ವಾಮಿ ಮೇಷ್ಟ್ರು ಗೊರೂರಿಗೆ ವರ್ಗಾವಣೆಯಾದಾಗ ವಿಧಿಯಿಲ್ಲದೇ ಎಸ್ ಎಲ್ ಭೈರಪ್ಪ…

Read More

ಮಂಡ್ಯ : ಒಂದು ಕಾಲದಲ್ಲಿ ರೈತರು ಬೇಸಾಯ ಮಾಡುವ ಮುಂಚೆ ಕಲ್ಯಾಣಿಯ ನೀರನ್ನು ಹಾಕಿ ಪೂಜೆ ಸಲ್ಲಿಸಿದರೆ ಉತ್ತಮ ಇಳುವರಿ ಬರುತ್ತದೆ ಎಂಬ ನಂಬಿಕೆ ಬೇರೂರಿತ್ತು. ಅನಾರೋಗ್ಯಕ್ಕಿಡಾದವರು ಕಲ್ಯಾಣಿಯ ನೀರನ್ನು ಕುಡಿದರೆ ಗುಣಮುಖರಾಗುತ್ತಾರೆ ಎಂಬ ನಂಬಿಕೆಯೂ ಇತ್ತು. ಇಂತಹ ಧಾರ್ಮಿಕ ಶ್ರದ್ಧಾ ಕೇಂದ್ರ ಹಾಗೂ ಕುಡಿಯುವ ನೀರಿನ ಮೂಲವಾಗಿದ್ದ ಕಲ್ಯಾಣಿ ಕಾಲಕ್ರಮೇಣ ನಿರ್ಲಕ್ಷ್ಯಕ್ಕೆ ಒ‌ಳಗಾಗಿ ಜೀವ ಜಲ ಇದ್ದರೂ ಕಸ, ಕಡ್ಡಿಗಳಿಂದ ಹೂಳು ತುಂಬಿ ತ್ಯಾಜ್ಯ ರಾಶಿಯಲ್ಲಿ ಬಹುತೇಕ ಮುಚ್ಚಿ ಹೋಗಿದ್ದವು. ಇದಕ್ಕೆಲ್ಲ ನರೇಗಾ ಯೋಜನೆ ಮತ್ತು ಕೃಷ್ಣೇಗೌಡ ಚಾರಿಟಬಲ್ ಟ್ರಸ್ಟ್ ತಿಲಾಂಜಲಿ ಇಟ್ಟಿದ್ದು, ಕಲ್ಯಾಣಿಗೆ ಹೊಸ ಕಳೆ ಬಂದು ಇತಿಹಾಸದ ಮೇಲೆ ಹೊಸ ಬೆಳಕು ಚೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಮದ್ದೂರು ತಾಲೂಕಿನ ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಗನಹಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆ ಮತ್ತು ಕೃಷ್ಣೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ಅಭಿವೃದ್ಧಿ ಪಡಿಸಿರುವ ಕಲ್ಯಾಣಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೀಣಾ ಹಾಗೂ ಟ್ರಸ್ಟ್ ನ ಅಧ್ಯಕ್ಷ ನಂದೀಶ್ ಗೌಡ ಅವರು ಬುಧವಾರ ಲೋಕಾರ್ಪಣೆ…

Read More

ನವದೆಹಲಿ: ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಸಂತಾಪ ಸೂಚಿಸಿದ್ದಾರೆ. ಇಂದು ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕನ್ನಡ ಸಾಹಿತ್ಯದ ಅತ್ಯುನ್ನತ ವ್ಯಕ್ತಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಎಸ್. ಎಲ್. ಭೈರಪ್ಪ ಅವರ ನಿಧನದಿಂದ ತೀವ್ರ ದುಃಖವಾಗಿದೆ ಎಂದಿದ್ದಾರೆ. ಅವರು ಸಾಹಿತ್ಯ, ತತ್ವಶಾಸ್ತ್ರ, ಸಂಸ್ಕೃತಿ ಮತ್ತು ಬೌದ್ಧಿಕ ವಿಚಾರಣಾ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಅವರು ತಮ್ಮ ಕೃತಿಗಳ ಮೂಲಕ ಕನ್ನಡ ಸಾಹಿತ್ಯವನ್ನು ರಾಷ್ಟ್ರೀಯ ಮತ್ತು ಜಾಗತಿಕ ಪ್ರಾಮುಖ್ಯತೆಗೆ ತಂದರು ಮತ್ತು ಅದರ ಸಾಂಸ್ಕೃತಿಕ ಬೇರುಗಳಿಗೆ ನಿಷ್ಠರಾಗಿದ್ದರು ಎಂದು ಹೇಳಿದ್ದಾರೆ. ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಪರಂಪರೆ ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ. ಅವರ ಕುಟುಂಬ, ಅಭಿಮಾನಿಗಳು ಮತ್ತು ಅಸಂಖ್ಯಾತ ಓದುಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. https://twitter.com/rashtrapatibhvn/status/1970817291450237123 https://kannadanewsnow.com/kannada/bjp-protests-demanding-closure-of-road-pothole-in-sagar/ https://kannadanewsnow.com/kannada/breaking-veteran-writer-sl-bhyrappa-is-no-more-sl-bhyrappa-is-no-more/

Read More

ಶಿವಮೊಗ್ಗ: ಸಾಗರ ತಾಲ್ಲೂಕಿನಲ್ಲಿ ರಸ್ತೆಗಳು ಹಾಳಾಗಿವೆ. ಸಾಗರ ಪಟ್ಟಣ ಸೇರಿದಂತೆ ವಿವಿಧೆಡೆ ರಸ್ತೆಯಲ್ಲಿ ಗುಂಡಿಗಳು ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ. ಈ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಸಾಗರ ತಾಲ್ಲೂಕು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ನಿಂಬೆಹಣ್ಣಿನ ಸರ್ಕಲ್ ನಲ್ಲಿ ಸಾಗರ ನಗರ, ಗ್ರಾಮಾಂತರ ಮಂಡಲದ ಬಿಜೆಪಿಯಿಂದ ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಸಾಗರ ತಾಲ್ಲೂಕಿನ ಬಿಜೆಪಿ ಮುಖಂಡರು ನಿಂಬೆಹಣ್ಣಿನ ಸರ್ಕಲ್ ನಲ್ಲೇ ಧರಣಿ ಕುಳಿತು ಪ್ರತಿಭಟನೆ ನಡೆಸುವ ಮೂಲಕ ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದಂತ ಸಾಗರ ಗ್ರಾಮಾಂತರ ಮಂಡಲದ ಬಿಜೆಪಿ ಅಧ್ಯಕ್ಷ ದೇವೇಂದ್ರಪ್ಪ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗ್ಯಾರಂಟಿ ಭಾಗ್ಯಗಗಳ ನಡುವೆ ಅಭಿವೃದ್ಧಿ ಭಾಗ್ಯ ಕುಂಠಿತವಾಗಿದೆ. ಬೆಲೆ ಏರಿಕೆಯ ಬರೆ ಜನಸಾಮಾನ್ಯರಿಗೆ ಬಿದ್ದಿದೆ. ಗ್ಯಾರಂಟಿಯನ್ನೂ ಕೊಡಿ, ಜೊತೆ ಜೊತೆಗೆ ಅಭಿವೃದ್ಧಿಗೂ ಒತ್ತು ನೀಡಿ. ರಸ್ತೆ ಗುಂಡಿಗಳನ್ನು ಈ ಕೂಡಲೇ ಮುಚ್ಚುವ ಕೆಲಸವನ್ನು ಮಾಡಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿ…

Read More