Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮಂಡ್ಯ ಜಿಲ್ಲೆಯ ಅಕ್ಕಿಹೆಬ್ಬಾಳಿನ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆ ಯು ಮೈಸೂರು-ತಾಳಗುಪ್ಪ ನಿಲ್ದಾಣಗಳ ನಡುವೆ ಸಂಚರಿಸುವ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲುಗಳಿಗೆ ಫೆ 11 ರಿಂದ 16, 2025 ರವರೆಗೆ ಅಕ್ಕಿಹೆಬ್ಬಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆ ಒದಗಿಸಲು ಅವಕಾಶ ಕಲ್ಪಿಸಿಲಾಗಿದೆ. ಅಕ್ಕಿಹೆಬ್ಬಾಳುವಿನಲ್ಲಿ ಈ ಕೆಳಗಿನ ವೇಳಾಪಟ್ಟಿಯಂತೆ ರೈಲುಗಳು ಒಂದು ನಿಮಿಷ ನಿಲುಗಡೆ ಹೊಂದಿರುತ್ತದೆ: 1. ರೈಲು ಸಂಖ್ಯೆ 16206 ಮೈಸೂರು-ತಾಳಗುಪ್ಪ ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲು ಅಕ್ಕಿಹೆಬ್ಬಾಳುವಿಗೆ ಬೆಳಗ್ಗೆ 06:55 ಕ್ಕೆ ಆಗಮಿಸಿ, 06:56 ಕ್ಕೆ ನಿರ್ಗಮಿಸಲಿದೆ. 2. ರೈಲು ಸಂಖ್ಯೆ 16205 ತಾಳಗುಪ್ಪ-ಮೈಸೂರು ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲು *ಅಕ್ಕಿಹೆಬ್ಬಾಳುವಿಗೆ ರಾತ್ರಿ 08:46ಕ್ಕೆ ಆಗಮಿಸಿ, 08:47 ಕ್ಕೆ* ಹೊರಡಲಿದೆ. ಪ್ರಯಾಣಿಕರು ಈ ತಾತ್ಕಾಲಿಕ ನಿಲುಗಡೆ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬೇಕು.
ಬೆಂಗಳೂರು: ಬಿ.ಜೆ.ಪಿ ಎಂದರೆ ಬುರುಡೆ ಜನರ ಪಕ್ಷ, ಅವರಿಗೆ ಬುರುಡೆಯಲ್ಲಿ ಮೆದುಳು ಇದೆಯೋ ಇಲ್ಲವೋ ಗೊತ್ತಿಲ್ಲ. ಬುರುಡೆ ಜನರೆಲ್ಲ ಕೂಡಿಕೊಂಡು ಪುಖಾಂನುಪುಂಖವಾಗಿ ಸುಳ್ಳನ್ನೇ ಸತ್ಯವೆಂದು ಬಿಂಬಿಸುವ ಬುರುಡೆ ಪಕ್ಷ ದವರೇ.. ಸಾರಿಗೆ ಸಂಸ್ಥೆಗಳು ಲೋನ್ ತೆಗೆದುಕೊಳ್ಳಬೇಕು ಯಾಕೆಂದರೆ, ತಮ್ಮ ಪಕ್ಷದ ದುರಾಡಳಿತದ ಅವಧಿಯಲ್ಲಿನ ರೂ.5900 ಕೋಟಿ ಸಾಲ ತೀರಿಸಬೇಕಾದ ಅನಿವಾರ್ಯತೆ ಇದೆಯಲ್ಲ ಅದಕ್ಕೆ ಎಂಬುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಸಾರಿಗೆ ಸಂಸ್ಥೆಗಳ ಆದಾಯ ವೃದ್ದಿಯಾಗಿದೆ ಎಂದೇ ನಾವು ಪದೇ ಪದೇ ಹೇಳುತ್ತಿರುವುದು. ಲಾಭ ಆಗಿದೆ ಎಂದು ನಾವು ಎಲ್ಲೂ ಹೇಳಿಲ್ಲ. ಆದಾಯ ಮತ್ತು ಲಾಭಕ್ಕೆ ವ್ಯತ್ಯಾಸ ತಿಳಿಯದ, ಸಾಮಾನ್ಯ ಗಣಿತವು ಬಾರದ ಅಜ್ಞಾನಿಗಳು ಬಿ.ಜೆ.ಪಿ ಅವರು ಎಂಬುದಾಗಿ ಕಿಡಿಕಾರಿದ್ದಾರೆ. ಯಡಿಯೂರಪ್ಪ ಮತ್ತು ಬೊಮ್ಮಾಯಿ ಅವರ ಆಡಳಿತದಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಮಾಡಿದ ಸಾಲ ರೂ 2 ಲಕ್ಷ ಕೋಟಿ ಅದರ ಬಗ್ಗೆ ಸ್ವಲ್ಪ ಗಮನಹರಿಸಿ ವಿಷಯ ಸಂಗ್ರಹಿಸಿ…
ನಮಸ್ಕಾರ ಬಂಧುಗಳೇ ನಾವು ನಿಮ್ಮ ಪಂಡಿತ್ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ಬಂಧುಗಳೇ ಬಹುತೇಕರು ಸಮಸ್ಯೆ ಬಂದಾಗ ಮಾತ್ರ ದೇವರ ಮೊರೆ ಹೋಗುತ್ತಾರೆ. ಅದರಲ್ಲೂ ತಮ್ಮ ಮಕ್ಕಳಿಗೆ ಸರಿಯಾದ ಶಿಕ್ಷಣ, ಉದ್ಯೋಗ, ಮದುವೆ ಇತ್ಯಾದಿಗಳು ಸಿಗದಿದ್ದರೆ ತಮ್ಮ ಪರಂಪರೆಯ ಬಗ್ಗೆ ಮಾತ್ರ ನೆನಪಿಸಿಕೊಳ್ಳುತ್ತಾರೆ. ಮೊದಲು ಕುಲದೇವತೆಗೆ ಸರಿಯಾಗಿ ಹರಕೆ ತೀರಿಸದ ಕಾರಣ ಈಗ ಸಂಕಷ್ಟ ಅನುಭವಿಸುತ್ತಿದ್ದೇವೆ ಎಂದು ಭಾವಿಸುವರು. ಆ ರೀತಿಯಲ್ಲಿ, ಒಬ್ಬರ ಕುಲದೇವತೆಗೆ ಸರಿಯಾದ ನೈತಿಕ ಋಣವನ್ನು ಪಾವತಿಸದಿರುವಾಗ ಉಂಟಾಗುವ ಅನನುಕೂಲತೆಯನ್ನು ಹೋಗಲಾಡಿಸಲು ಸರಳವಾದ ಪರಿಹಾರಗಳ ಬಗ್ಗೆ ನಾವು ಇಲ್ಲಿ ತಿಳಿಯಬಹುದು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ…
ಬೆಂಗಳೂರು: ಭಾರತೀಯ ರೈಲ್ವೆ ನಿಜವಾಗಿಯೂ ರಾಷ್ಟ್ರದ ಜೀವನಾಡಿಯಾಗಿದ್ದು, ವಾರ್ಷಿಕವಾಗಿ 600 ಕೋಟಿ ಪ್ರಯಾಣಿಕರನ್ನು ಸಾಗಿಸುತ್ತದೆ. ಇದು ಮಧ್ಯಮ ವರ್ಗದ ಜನರಿಗೆ ಅತ್ಯಂತ ಪ್ರಾಧಾನ್ಯದ ಪ್ರಯಾಣ ಮಾಧ್ಯಮವಾಗಿ ಉಳಿದಿದೆ, ವಿಶೇಷವಾಗಿ ಬಜೆಟ್ ಅಧಿವೇಶನದ ಸಮಯದಲ್ಲಿ ಪ್ರಮುಖ ಚರ್ಚೆಯ ವಿಷಯವಾಗುತ್ತದೆ. ಪ್ರಯಾಣಿಕರ ಸಾಗಣೆಯನ್ನು ಮೀರಿ, ರೈಲ್ವೆ ಸರಕು ಸಾಗಣೆಯು ಪ್ರಮುಖ ಜೀವನಾಡಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ದೇಶದ ಮೂಲಭೂತ ಅಭಿವೃದ್ಧಿಗೆ ಅಗತ್ಯವಾದ ಸರಕುಗಳನ್ನು ಸಾಗಿಸುವಲ್ಲಿ ರೈಲ್ವೆ ನಿರ್ಣಾಯಕ ಪಾತ್ರ ವಹಿಸುತ್ತದೆ. ಇದನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ, ತಮ್ಮ ವಿಕ್ಷಿತ ಭಾರತ ದೃಷ್ಟಿಕೋನದಲ್ಲಿ ಮೂಲಸೌಕರ್ಯದ ಮಹತ್ವವನ್ನು ನಿರಂತರವಾಗಿ ಒತ್ತಿಹೇಳಿದ್ದಾರೆ. ಈ ಮಹತ್ವಾಕಾಂಕ್ಷಿ ಗುರಿಯನ್ನು ಸಾಕಾರಗೊಳಿಸುವಲ್ಲಿ ರೈಲ್ವೆ ತನ್ನ ಮಹತ್ವದ ಪಾತ್ರ ವಹಿಸುತ್ತದೆ ಎಂಬುದು ಸ್ಪಷ್ಟ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿಶೀಲ ರಾಷ್ಟ್ರವಾಗಿ ರೂಪಿಸುವಲ್ಲಿ ಭಾರತೀಯ ರೈಲ್ವೆಯ ಪ್ರಮುಖ ಪಾತ್ರವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಮಂಡನೆಯಲ್ಲಿ ಪುನರುಚ್ಚರಿಸಿದರು. ಈ ಬದ್ಧತೆಯನ್ನು ಪ್ರತಿಧ್ವನಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಹೊಸ ಹೂಡಿಕೆಗಳು ರೈಲು ಪ್ರಯಾಣದಲ್ಲಿ ಕ್ರಾಂತಿ…
ರಾಯಚೂರು : ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ರಾಜ್ಯ ಸರ್ಕಾರ ಪತ್ರದ ಮೂಲಕ ಸ್ಪಷ್ಟ ಪಡಿಸಿದರೂ ಬಿಜೆಪಿ ಸರ್ಕಾರ ಮತ್ತೆ, ಮತ್ತೆ ಗೊಂದಲ ಸೃಷ್ಠಿಸುತ್ತಿದೆ. ಏಮ್ಸ್ ಮಂಜೂರಾತಿಗಾಗಿ 1000 ದಿನಗಳಿಂದ ನಡೆಯುತ್ತಿರುವ ಹೋರಾಟವನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಅವರು ಗಂಭೀರವಾಗಿ ಆರೋಪಿಸಿದ್ದಾರೆ. 1000 ದಿನ ಪೂರೈಸಿದ ಏಮ್ಸ್ ಹೋರಾಟದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. ಹಿಂದುಳಿದ ಭಾಗವಾದ ಕಲ್ಯಾಣ ಕರ್ನಾಟಕದ ಮಹತ್ವಾಕಾಂಕ್ಷಿ ಜಿಲ್ಲೆಯಾದ ರಾಯಚೂರಿನಲ್ಲಿಯೇ ಏಮ್ಸ್ ಸ್ಥಾಪಿಸಬೇಕೆಂದು ಈಗಾಗಲೇ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನಾಲ್ಕು ಬಾರಿ ಕೇಂದ್ರಕ್ಕೆ ಪತ್ರವನ್ನು ಬರೆದಿದ್ದಾರೆ. ಆದರೆ ಕೇಂದ್ರ ಸರ್ಕಾರ ಕಲ್ಯಾಣ ಕರ್ನಾಟಕ ವನ್ನು ಮರೆತು ಹೋರಾಟಗಾರರನ್ನು ಕಡೆಗಣಿಸುತ್ತಿರುವುದು ಖಂಡನೀಯವಾಗಿದೆ ಎಂದರು. ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ್ ಪ್ರಕಾಶ್ ಪಾಟೀಲ್ ಹಾಗೂ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮಂತ್ರಿಗಳಾದ ಬೋಸರಾಜು ಸೇರಿ ಈ ಭಾಗದ ಜನಪ್ರತಿನಿಧಿಗಳ ನಿಯೋಗ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕು…
ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ, ಅದೇ ರೀತಿ ಜೀವನದಲ್ಲೂ ಏರುಪೇರು ಆಗುತ್ತಲೇ ಇರುತ್ತದೆ. ಒಂದು ವೇಳೆ ತಂತ್ರ ಶಕ್ತಿಯಿಂದ ತೊಂದರೆ ಅನುಭವಿಸುತ್ತಿದ್ದರೆ ಅಥವಾ ಹಣದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ,ಶತ್ರುಗಳಿಂದ ನಿಮಗೆ ತೊಂದರೆಯಾಗುತ್ತಿದ್ದರೆ ,ಗಂಡ-ಹೆಂಡತಿ ನಡುವೆ ಯಾವುದಾದರೂ ವಿಚಾರಕ್ಕೆ ಯಾವಾಗಲೂ ಕಲಹ ಆಗುತ್ತಿದ್ದರೆ ನಾವು ಇಂದು ತಿಳಿಸಿಕೊಡುವ ಈ ಉಪಾಯವನ್ನು ಮಾಡಿದರೆ ಜೀವನವಿಡಿ ಸುಖ ಶಾಂತಿ ಹಾಗೂ ನೆಮ್ಮದಿಯಿಂದ ಜೀವನವನ್ನು ನಡೆಸಬಹುದು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ,…
ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಆನೆ ಚಲನ ವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಭವನದಲ್ಲಿಂದು ಕರ್ನಾಟಕ ಅರಣ್ಯ ಇಲಾಖೆ ಬೆಂಗಳೂರಿನ ಇನ್‌ಫಿಕ್ಷನ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ಜೊತೆಗೂಡಿ ಅಭಿವೃದ್ಧಿಪಡಿಸಿರುವ ವೆಚ್ಚದಕ್ಷ ಕರ್ನಾಟಕ-ಪರಿಶೋಧಿತ ಪತ್ತೆ ಸಾಧನ (ಕೆ.ಪಿ. ಟ್ರ್ಯಾಕರ್) ಎಂಬ ಹೆಸರಿನ ರೇಡಿಯೋ ಕಾಲರ್ ಗಳನ್ನು ಬಂಡೀಪುರ ಮತ್ತು ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶದ ಅಧಿಕಾರಿಗಳಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. 6395 ಆನೆಗಳನ್ನು ಹೊಂದಿರುವ ಕರ್ನಾಟಕ ದೇಶದಲ್ಲಿ ಆನೆಗಳ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿದೆ. ಆದರೆ ಆನೆಗಳ ಸಂಖ್ಯೆಗೆ ಅನುಗುಣವಾಗಿ ವನ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ. ಅಮೂಲ್ಯವಾದ ಜೀವ ಉಳಿಸಲು ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಸ್ಥಳೀಯರಿಗೆ ಮಾಹಿತಿ ನೀಡಲು ಸರ್ಕಾರ…
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಂಡ್ ಟೀಂ ವಿರುದ್ಧ ಬಿವೈ ವಿಜಯೇಂದ್ರ ಬಣ ಸಿಡಿದೆದ್ದಿದೆ. ಫೆಬ್ರವರಿ 12ರಂದು ಬೆಂಗಳೂರಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಈ ಸಭೆಯ ಬಳಿಕ ದೆಹಲಿಗೆ ತೆರಳಿ ಪಕ್ಷದಿಂದ ಉಚ್ಚಾಟನೆಗೆ ಆಗ್ರಹಿಸಲಿದೆ ಎನ್ನಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಅಂಡ್ ಟೀಂ ದೆಹಲಿಯಲ್ಲಿ ಬೀಡು ಬಿಟ್ಟು ವಾಗ್ದಾಳಿ ಕೂಡ ನಡೆಸುತ್ತಿದೆ. ಇದರಿಂದಾಗಿ ಬಿಜೆಪ ಪಕ್ಷದಲ್ಲಿ ಆತಂರೀಕ ಕಚ್ಚಾಟ ಬೀದಿಗೆ ಬಿದ್ದಂತೆ ಆಗಿದೆ. ಈ ಹಿನ್ನೆಲೆಯಲ್ಲಿ ಬಿವೈ ವಿಜಯೇಂದ್ರಗೆ ಬೆಂಬಲಿಸಲು ಮತ್ತೊಂದು ಟೀಮ್ ರೆಡಿಯಾಗಿದೆ. ಇದೇ ಫೆಬ್ರವರಿ 12ರಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿ ಯತ್ನಾಳ್ ನಡೆ ಬಗ್ಗೆ ಚರ್ಚಿಸಲು ತೀರ್ಮಾನಿಸಿದೆ ಎನ್ನಲಾಗಿದೆ. ಫೆಬ್ರವರಿ 12ರ ಸಭೆಯಲ್ಲಿ 100ಕ್ಕೂ ಹೆಚ್ಚು ಮಾಜಿ ಸಚಿವರು, ಶಾಸಕರು ಭಾಗಿಯಾಗೋ ಸಾಧ್ಯತೆ ಇದೆ. ಈ ಸಭೆಯಲ್ಲಿ ಯತ್ನಾಳ್ ಅಂಡ್ ಟೀಂ ಬಗ್ಗೆ ಚರ್ಚೆ ನಡೆಸಿ, ದೆಹಲಿಗೆ ತೆರಳಿ ಪಕ್ಷದಿಂದ ಉಚ್ಚಾಟನೆ ಮಾಡಲು ಆಗ್ರಹಿಸೋದಾಗಿ ತಿಳಿದು…
ಬೆಂಗಳೂರು: ನಗರದ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. ಬೆಂಗಳೂರಿನ ಕೋಣನಕುಂಟೆ ಬಳಿ ಇರುವಂತ ದಯಾನಂದ ಸಾಗರ್ ಕಾಲೇಜಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿ ಅಟಾಮಿಕ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿದ್ಯಾರ್ಥಿನಿ ಅನಾಮಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಹತ್ಯೆಯೋ ಎನ್ನುವುದು ತನಿಖೆಯಿಂದ ತಿಳಿಯಬೇಕು. ಸ್ಥಳದಲ್ಲಿ ಎರಡು ಪುಟಗಳ ಡೆತ್ ನೋಟ್ ಪತ್ತೆಯಾಗಿದೆ ಎನ್ನಲಾಗುತ್ತದೆ.
ಬೆಂಗಳೂರು: ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಬುಧವಾರ ಉತ್ತರಿಸಿದರು. ಕುಂಭಮೇಳದಲ್ಲಿ ಭಾಗವಹಿಸುತ್ತಿರುವ ಬಗ್ಗೆ ಆರ್.ಅಶೋಕ್ ಅವರು ಎಕ್ಸ್ ಖಾತೆಯಲ್ಲಿ ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, “ವಿರೋಧ ಪಕ್ಷದ ನಾಯಕ ಅಶೋಕ್ ಅವರ ಹೇಳಿಕೆಗೆ ಉತ್ತರಿಸಲು ನಾನು ಇಷ್ಟ ಪಡುವುದಿಲ್ಲ. ಯಾರು ಏನಾದರೂ ಹೇಳಿಕೊಳ್ಳಲಿ, ನಮ್ಮ ಧರ್ಮ, ನಮ್ಮ ಕರ್ಮ, ಆಚಾರ ವಿಚಾರ ಅನವಶ್ಯಕವಾಗಿ ಈ ವಿಚಾರಗಳನ್ನು ಎಳೆದಾಡಲು ನಾನು ಹೋಗುವುದಿಲ್ಲ. ನಮ್ಮ ಪಕ್ಷದ ನಾಯಕರು ಈ ವಿಚಾರವಾಗಿ ವಿಶಾಲಾರ್ಥದ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ. ಧರ್ಮ, ಆಚರಣೆ, ನಂಬಿಕೆಗಳು ರಾಜಕೀಯವಾಗಿ ಉಪಯೋಗಿಸಿಕೊಳ್ಳುವ ವಿಚಾರವಲ್ಲ” ಎಂದು ಹೇಳಿದರು. ನನ್ನ ವೈಯಕ್ತಿಕ ನಂಬಿಕೆ ವಿಚಾರವಾಗಿ ಮಾತನಾಡಲು ಯಾರಿಗೂ ಹಕ್ಕಿಲ್ಲ: “ಗಂಗೆಯಾಗಲಿ,…