Author: kannadanewsnow09

ಕೋಲ್ಕತಾ: ಕೋಲ್ಕತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ಮತ್ತು ಕ್ರಮಗಳಲ್ಲಿ ದೊಡ್ಡ ಬೆಳವಣಿಗೆಯಲ್ಲಿ, ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಅವರ ಸದಸ್ಯತ್ವವನ್ನು ಅಮಾನತುಗೊಳಿಸಲಾಗಿದೆ. ಐಎಂಎ ಕಲ್ಕತ್ತಾ ಶಾಖೆಯ ಉಪಾಧ್ಯಕ್ಷ ಡಾ.ಸಂದೀಪ್ ಘೋಷ್ ಅವರ ಸದಸ್ಯತ್ವವನ್ನು ಅಮಾನತುಗೊಳಿಸಲು ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಷ್ಟ್ರೀಯ ಅಧ್ಯಕ್ಷ ಡಾ.ಆರ್.ವಿ.ಅಶೋಕನ್ ನೇತೃತ್ವದ ಶಿಸ್ತು ಸಮಿತಿ ಸರ್ವಾನುಮತದಿಂದ ನಿರ್ಧರಿಸಿದೆ. ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ನಿವಾಸಿಯ ಅತ್ಯಾಚಾರ ಮತ್ತು ಕೊಲೆ ಮತ್ತು ನಂತರದ ಬೆಳವಣಿಗೆಗಳನ್ನು ಸಮಿತಿಯು ಸ್ವಯಂಪ್ರೇರಿತವಾಗಿ ಪರಿಗಣಿಸಿದೆ ಎಂದು ಐಎಂಎ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. “ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಸಹಿ ಹಾಕಿದವರು ಸಂತ್ರಸ್ತೆಯ ಪೋಷಕರನ್ನು ಅವರ ಮನೆಯಲ್ಲಿ ಭೇಟಿ ಮಾಡಿದ್ದರು. ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಅವರು ನಿಮ್ಮ ವಿರುದ್ಧ ತಮ್ಮ ಕುಂದುಕೊರತೆಗಳನ್ನು ವ್ಯಕ್ತಪಡಿಸಿದ್ದರು ಮತ್ತು ಅವರೊಂದಿಗಿನ ನಿಮ್ಮ ವ್ಯವಹಾರಗಳಲ್ಲಿ ನೀವು ಹೊಂದಿರುವ ಜವಾಬ್ದಾರಿಗೆ ಸೂಕ್ತವಾದ ರೀತಿಯಲ್ಲಿ ಸಮಸ್ಯೆಯನ್ನು ನಿಭಾಯಿಸುವಲ್ಲಿ ಅನುಭೂತಿ ಮತ್ತು ಸೂಕ್ಷ್ಮತೆಯ ಕೊರತೆಯನ್ನು…

Read More

ಬೆಂಗಳೂರು: ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ-2024 ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಇನ್ ಪ್ಲಯೆನ್ಸರ್ ಗಳಿಗೂ ಸರ್ಕಾರಿ ಜಾಹೀರಾತು ನೀಡಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಎಲ್ಲಾ ಸ್ವರೂಪದ ಡಿಜಿಟಲ್ ಮಾಧ್ಯಮಗಳಲ್ಲಿ ಸರ್ಕಾರಿ ಜಾಹೀರಾತು ನೀಡಲು ಅನುಕೂಲ ಕಲ್ಪಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳ ಇನ್‌ಫ್ಲುಯೆನ್ಸರ್‌ಗಳಿಗೂ ಸರ್ಕಾರಿ ಜಾಹೀರಾತು ನೀಡಲು ಅವಕಾಶ ಮಾಡಿಕೊಡುವ ನೂತನ ಜಾಹೀರಾತು ನೀತಿಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ʼಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ–2024’ ಅನ್ನು ಜಾರಿ ಮಾಡಲಾಗಿದ್ದು, ಎಲ್ಲಾ ಸ್ವರೂಪದ ಡಿಜಿಟಲ್‌ ಮಾಧ್ಯಮಗಳಲ್ಲಿ ಸರ್ಕಾರಿ ಜಾಹೀರಾತು ನೀಡಲು ಇದು ಅನುವು ಮಾಡಿಕೊಡಲಿದೆ. ಬ್ರ್ಯಾಂಡ್ ರಾಯಭಾರಿಗಳು, ಪ್ರಾಯೋಜಿತ ಪೋಸ್ಟ್‌ಗಳು, ಅತಿಥಿ ಬ್ಲಾಗ್‌ಗಳು, ಕಂಟೆಂಟ್‌ ಸಹಯೋಗ, ವಿಷಯಾಧಾರಿತ ಅಭಿಯಾನ, ಕಾರ್ಯಕ್ರಮ ಪ್ರಚಾರ, ವಿಮರ್ಶೆ ಮತ್ತು ಹ್ಯಾಶ್‌ಟ್ಯಾಗ್‌ ಅಭಿಯಾನಗಳ ಸ್ವರೂಪದಲ್ಲಿ ಇನ್‌ಫ್ಲುಯೆನ್ಸರ್‌ಗಳಿಗೆ ಜಾಹೀರಾತು ನೀಡಲಾಗುತ್ತದೆ. ಯಾವುದಾದರೂ ಒಂದು ಸಾಮಾಜಿಕ ಜಾಲತಾಣಗಳಲ್ಲಿ ನಿಗದಿತ ಸಂಖ್ಯೆಯ ಫಾಲೋವರ್‌ಗಳನ್ನು ಹೊಂದಿರುವ ಇನ್‌ಫ್ಲುಯೆನ್ಸರ್‌ಗಳಿಗೆ ಸರ್ಕಾರಿ ಜಾಹೀರಾತು ದೊರೆಯಲಿದೆ. ಇನ್‌ಫ್ಲುಯೆನ್ಸರ್‌ಗಳಲ್ಲಿ ಮೂರು ವರ್ಗೀಕರಣ ಮಾಡಲಾಗಿದೆ. ಫಾಲೋವರ್‌ಗಳ ಸಂಖ್ಯೆ 1 ಲಕ್ಷದಿಂದ 5 ಲಕ್ಷದವರೆಗೆ…

Read More

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಅನ್ನು ಸಿಬಿಐಗೆ ಕೊಟ್ಟಿದ್ದನ್ನು ಹಿಂಪಡೆದ ಸರ್ಕಾರದ ನಿರ್ಧಾರ ಬಗ್ಗೆ ಹೈಕೋರ್ಟ್ ನಾಳೆ ತೀರ್ಪು ಪ್ರಕಟಿಸಲಿದೆ. ಈ ಮೂಲಕ ನಾಳೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯ ಭವಿಷ್ಯ ನಿರ್ಧಾರವಾಗಲಿದೆ. ರಾಜ್ಯ ಸರ್ಕಾರ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದಂತ ಆದೇಶವನ್ನು ಹಿಂಪಡೆಯಲಾಗಿತ್ತು. ಈ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್ ಗೆ ಪ್ರಶ್ನಿಸಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಇಂತಹ ಅರ್ಜಿಯ ವಿಚಾರಣೆ ನಡೆಸಿದ್ದಂತ ಹೈಕೋರ್ಟ್ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿತ್ತು. ನಾಳೆ ಸಿಬಿಐ ತನಿಖೆಯ ಭವಿಷ್ಯ ನಿರ್ಧಾರ ಕುರಿತಂತೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಿಂದ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ತೀರ್ಪು ಪ್ರಕಟಿಸಲಿದೆ. ಹೀಗಾಗಿ ಡಿಕೆ ಶಿವಕುಮಾರ್ ಗೆ…

Read More

ಬೆಂಗಳೂರು; ರಾಜ್ಯದ ಜನರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಸೌಲಭ್ಯ ಸಿಗುವಂತಾಗಬೇಕು. ಹೀಗಾಗಿ ರೋಬೋಟಿಕ್ ತಂತ್ರಜ್ಞಾನವನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಅಳವಡಿಸಲು ಕ್ರಮವಹಿಸಲಾಗುವುದು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. https://twitter.com/KarnatakaVarthe/status/1828749488430956921 ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ. ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ಸರ್ಕಾರದ ಗುರಿ ಎಂದು ನುಡಿದರು. ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟ ಮತ್ತು ಶುಚಿತ್ವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಬರಬೇಕು. ಆಗ ಮಾತ್ರ ಸರ್ಕಾರ ಕೊಡುವ ಅನುದಾನಕ್ಕೆ ಅರ್ಥ ಬರುತ್ತದೆ ಎಂದರು. ನಾನು ಸೇರಿ ಮಂತ್ರಿಗಳು, ರಾಜರಣಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಹೋಗುವುದಿಲ್ಲ. ಉಪ ಇದರಲ್ಲಿ ನಮ್ಮಗಳ ತಪ್ಪು ಕೂಡ ಇದೆ. ಆದರೆ ಖಾಸಗಿ ಆಸ್ಪತ್ರೆಗಳ ಗುಣಮಟ್ಟ ಮತ್ತು ಶುಚಿತ್ವ ಸರ್ಕಾರಿ ಆಸ್ಪತ್ರೆಗಳಲ್ಲೂ ಇರುವಂತೆ ನೋಡಿಕೊಳ್ಳಲು ಅಗತ್ಯ ಅನುದಾನ ಕೊಡುತ್ತಲೇ ಇದ್ದೇವೆ. ಆಸ್ಪತ್ರೆಯ ಆಡಳಿತ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ, ಸೇವೆ ಸಲ್ಲಿಸಿದರೆ ಇದು ಸಾಧ್ಯವಿದೆ ಎಂದರು. ಅಪಘಾತ ವಲಯಗಳ ಹತ್ತಿರದಲ್ಲೇ ಟ್ರಾಮಾ ಸೆಂಟರ್ ಗಳನ್ನು…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ಆಗಸ್ಟ್.31ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಗುವ ಫೀಡರ್ ಎ.ಎಫ್-03 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಇರುವುದರಿಂದ ಆ.31 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಈ ವ್ಯಾಪ್ತಿಗೆ ಬರುವ ಎಸ್.ವಿ. ಬಡಾವಣೆ ಎ,ಬಿ.ಎಫ್ ಬ್ಲಾಕ್, ಗುಡ್‌ಲಕ್ ಸರ್ಕಲ್, ಅಮ್ಮ ನಿಲಯ, ಸ್ನೇಹ ಅಪಾರ್ಟ್ಮೆಂಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ ಎಂದಿದೆ. ಎಂ.ಎಂ.ಎಸ್. ಲೇಔಟ್, ಬೋವಿ ಕಾಲೋನಿ, ವಿಜಯಲಕ್ಷಿö್ಮ ಲೇಔಟ್, ಸೋಮನಾಥ್ ಲೇಔಟ್, ಪುಷ್ಪಗಿರಿ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ. https://kannadanewsnow.com/kannada/bengaluru-new-bmtc-buses-to-ply-on-this-route/ https://kannadanewsnow.com/kannada/breaking-court-extends-actor-darshans-judicial-custody-till-september-9/

Read More

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೊಸದಾಗಿ ಬಿಎಂಟಿಸಿ ಸಾರಿಗೆ ಬಸ್ ಸೌಲಭ್ಯವನ್ನು ಆರಂಭಿಸಲಾಗುತ್ತಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಾಹಿತಿ ನೀಡಿದ್ದು, ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣ ರಹಿತ ಸೇವೆಯಲ್ಲಿ ನೂತನ ಮಾರ್ಗವನ್ನು ದಿನಾಂಕ  29.08.2024 ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ: ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸು/ ಸುತ್ತುವಳಿಗಳ ಸಂಖ್ಯೆ 251 ಕೃ.ರಾ. ಮಾರುಕಟ್ಟೆ ಶಿವಕೋಟೆ ಯಶವಂತಪುರ, ಜಾಲಹಳ್ಳಿ ಕ್ರಾಸ್‍, ಚಿಕ್ಕಬಾಣಾವರ, ಹೇಸರಘಟ್ಟ ಟಿ. ಬಿ. ಕ್ರಾಸ್‍, ಮುತ್ಕೂರು ಕ್ರಾಸ್. 1 ಬಸ್ಸು 08 ಸುತ್ತುವಳಿಗಳು ಸದರಿ ಮಾರ್ಗದ ವೇಳಾಪಟ್ಟಿ ವಿವರಗಳ ಈ ಕೆಳಗಿನಂತಿದೆ. ಕೃ.ರಾ. ಮಾರುಕಟ್ಟೆ/ಯಶವಂತಪುರ ಬಿಡುವ ವೇಳೆ 0600, 1410, 1710, 2030 ಶಿವಕೋಟೆ ಬಿಡುವ ವೇಳೆ 0425, 0740, 1555, 1850 https://kannadanewsnow.com/kannada/union-minister-hd-kumaraswamy-has-levelled-serious-allegations-against-mla-ganiga-ravi/…

Read More

ಮಂಡ್ಯ: ಇಲ್ಲಿನ ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ ಕುಮ್ಮಕ್ಕು ನೀಡಿ ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದರು ಎಂದು ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಅತ್ಯಂತ ಗಂಭೀರ ಆರೋಪ ಮಾಡಿದರು. ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ವಾಮಮಾರ್ಗದಲ್ಲಿ ಜೆಡಿಎಸ್ ಬಿಜೆಪಿ ಪಕ್ಷಗಳು ಅಧಿಕಾರ ಹಿಡಿದವು ಎಂದು ಶಾಸಕ ಗಣಿಗ ರವಿ ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಸಚಿವರು; ಶಾಸಕರ ಪ್ರಕಾರ ವಾಮಮಾರ್ಗದ ಅರ್ಥವೇನು? ಮತದಾನದ ವೇಳೆಯಲ್ಲಿಯೂ ಕಣ್ಸನ್ನೇ, ಕೈಸನ್ನೇ ಮೂಲಕ ನಮ್ಮ ಸದಸ್ಯರಿಗೆ ಹಣದ ಆಮೀಷ ಒಡ್ಡಿದ್ದು ವಾಮಮಾರ್ಗ ಅಲ್ಲದೆ ಮತ್ತೇನು? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು. ನನ್ನ ಜೀವನದಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತ ಹಾಕಲು ಬಂದಿದ್ದೇನೆ. ಕಳೆದ 20 ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆ ಗಮನಿಸಿ…

Read More

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಡಿಸ್ನಿಯ ಭಾರತೀಯ ಮಾಧ್ಯಮ ಸ್ವತ್ತುಗಳ ವಿಲೀನಕ್ಕೆ ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ಆಗಸ್ಟ್ 28 ರಂದು ಅನುಮೋದನೆ ನೀಡಿದೆ. “ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್, ವಯಾಕಾಮ್ 18 ಮೀಡಿಯಾ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ 18 ಮೀಡಿಯಾ ಲಿಮಿಟೆಡ್, ಸ್ಟಾರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಸ್ಟಾರ್ ಟೆಲಿವಿಷನ್ ಪ್ರೊಡಕ್ಷನ್ಸ್ ಲಿಮಿಟೆಡ್ ಒಳಗೊಂಡ ಪ್ರಸ್ತಾವಿತ ಸಂಯೋಜನೆಯನ್ನು ಸಿ -2024 / 05 / 1155 ಆಯೋಗ ಅನುಮೋದಿಸಿದೆ, ಇದು ಸ್ವಯಂಪ್ರೇರಿತ ಮಾರ್ಪಾಡುಗಳ ಅನುಸರಣೆಗೆ ಒಳಪಟ್ಟಿರುತ್ತದೆ” ಎಂದು ಸಿಸಿಐ ಎಕ್ಸ್ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ನಲ್ಲಿ ತಿಳಿಸಿದೆ. ಆರ್ಐಎಲ್ನ 47 ನೇ ವಾರ್ಷಿಕ ಸಾಮಾನ್ಯ ಸಭೆಗೆ ಒಂದು ದಿನ ಮುಂಚಿತವಾಗಿ ಸಿಸಿಐ ಪ್ರಕಟಣೆ ಬಂದಿದೆ. ಫೆಬ್ರವರಿ 2024 ರಲ್ಲಿ, ಆರ್ಐಎಲ್ ಅಂಗಸಂಸ್ಥೆ ವಯಾಕಾಮ್ 18 ಮತ್ತು ಡಿಸ್ನಿಯ ಭಾರತೀಯ ಘಟಕವಾದ ಸ್ಟಾರ್ ಇಂಡಿಯಾ ತಮ್ಮ ವ್ಯವಹಾರಗಳನ್ನು ವಿಲೀನಗೊಳಿಸಿ ಭಾರತದ ಅತಿದೊಡ್ಡ ಟಿವಿ ಮತ್ತು ಡಿಜಿಟಲ್ ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ಗಳಲ್ಲಿ ಒಂದನ್ನು ರಚಿಸುವುದಾಗಿ ಘೋಷಿಸಿದವು. ಒಪ್ಪಂದದ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ವಾದ-ಪ್ರತಿ ವಾದವನ್ನು ಆಲಿಸಿದಂತ ನ್ಯಾಯಾಲಯವು, ಅರ್ಜಿಯ ವಿಚಾರಣೆಯ ಬಳಿಕ ಆದೇಶವನ್ನು ಆಗಸ್ಟ್.31ಕ್ಕೆ ಕಾಯ್ದಿರಿಸಿದೆ. ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿರುವಂತ ಆರೋಪಿ ಪವಿತ್ರಾ ಗೌಡ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು. ಆರೋಪಿ ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲ ಟಾಮಿ ಸೆಬಾಸ್ಟಿನ್ ವಾದಿಸಿದರು. ಮೊದಲಿಗೆ ಅಪರಿಚಿತ ಆರೋಪಿಗಳೆಂದು ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತಂದರು. ರೇಣುಕಾಸ್ವಾಮಿ ಇನ್ ಸ್ಟಾಗ್ರಾಂನಲ್ಲಿ ಪವಿತ್ರಾ ಗೌಡಗೆ ಮೆಸೇಜ್ ಮಾಡಿದ್ದರು. ಎ3 ಆರೋಪಿ ಪವನ್ ಬಳಿಯಲ್ಲಿ ಇರುವಂತ ಪೋನ್ ನಂಬರ್ ತನ್ನದೆಂದು ಸಂದೇಶ ಕಳುಹಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದಂತ ಪವಿತ್ರಾ ಗೌಡ, ವಾಟ್ಸ್ ಆಪ್ ಮಾಡುವಂತೆ ಸೂಚಿಸಿದ್ದರು. ಕರೆ ಮಾಡಿದಾಗ ಪವಿತ್ರಾ ಗೌಡ ಪವನ್ ಮೊಬೈಲ್ ಸಂಖ್ಯೆಯಿಂದಲೇ…

Read More

ಬೆಂಗಳೂರು: ಶ್ವಾಸಕೋಶ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ ಮನೆಗೆ ಆಗಮಿಸಿದ್ದಾರೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು ಶ್ವಾಸಕೋಶದ ಸೊಂಕು‌ ನಿವಾರಣೆ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿದ್ದು, ಭಗವಂತನ ಕೃಪೆ ಮತ್ತು ವೈದ್ಯರ ಪರಿಶ್ರಮದಿಂದ ಎಸ್.ಎಂ.ಕೃಷ್ಣ ಅವರು ಗುಣಮುಖರಾಗಿದ್ದಾರೆ. ಆದರೆ ಎರಡು ವಾರಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದು ಯಾವುದೆ‌ ಸಾರ್ವಜನಿಕ ಭೇಟಿ ಮತ್ತು ‌ಕಾರ್ಯಕ್ರಮಗಳಿಗೆ ಪಾಲ್ಗೊಳ್ಳದಂತೆ ವೈದ್ಯರು‌ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಹಿತೈಷಿಗಳು, ಅಭಿಮಾನಿಗಳು ಕೆಲವು ದಿನಗಳ ಕಾಲ ಅವರನ್ನು ಭೇಟಿ ಮಾಡದಂತೆ ಕುಟುಂಬ ವರ್ಗದವರಿಗೆ ವೈದ್ಯರು ತಿಳಿಸಿದ್ದು ಹೀಗಾಗಿ ಯಾರೂ ಸಹ ಅನ್ಯತಃ ಭಾವಿಸದೇ ಹಿರಿಯ ಮುತ್ಸುದ್ದಿಎಸ್.ಎಂ.ಕೃಷ್ಣ. ಅವರು ವಿಶ್ರಾಂತಿ ಪಡೆಯಲು ಸಹಕರಿಸಬೇಕಾಗಿದೆ ಹಾಗೂ ಸಂಪೂರ್ಣವಾಗಿ ಗುಣಮುಖರಾದ ನಂತರ ಎಸ್.ಎಂ.ಕೃಷ್ಣ ಅವರೇ…

Read More