Subscribe to Updates
Get the latest creative news from FooBar about art, design and business.
Author: kannadanewsnow09
ಅಮೇರಿಕಾ: ಒಪ್ಪಂದಕ್ಕೆ ಮಧ್ಯಸ್ಥಿಕೆ ವಹಿಸಿದ ಕೆಲವೇ ಗಂಟೆಗಳ ನಂತರ ಕ್ಷಿಪಣಿಗಳನ್ನು ಹಾರಿಸಲಾಗಿದ್ದು, ಇರಾನ್ ಮತ್ತು ಇಸ್ರೇಲ್ ಎರಡೂ ಕದನ ವಿರಾಮವನ್ನು ಉಲ್ಲಂಘಿಸಿವೆ ಎಂದು ಟ್ರಂಪ್ ಹೇಳಿದ್ದಾರೆ. ಜೂನ್ 24 ರ ಮಂಗಳವಾರ ಇಸ್ರೇಲ್, ಕದನ ವಿರಾಮ ಜಾರಿಯಲ್ಲಿದ್ದರೂ, ಇರಾನ್ ದೇಶದ ಉತ್ತರ ಪ್ರದೇಶದ ಕಡೆಗೆ ಕ್ಷಿಪಣಿಗಳನ್ನು ಹಾರಿಸಿದೆ ಎಂದು ಹೇಳಿದೆ. ಇಸ್ರೇಲ್ ರಕ್ಷಣಾ ಪಡೆ (IDF), X ನಲ್ಲಿ ಪೋಸ್ಟ್‌ನಲ್ಲಿ, “ಇರಾನ್‌ನಿಂದ ಕ್ಷಿಪಣಿ ಗುಂಡಿನ ದಾಳಿಯಿಂದಾಗಿ ಉತ್ತರ ಇಸ್ರೇಲ್‌ನಲ್ಲಿ ಸೈರನ್‌ಗಳು ಸದ್ದು ಮಾಡುತ್ತಿವೆ” ಎಂದು ಹೇಳಿದೆ. ರಕ್ಷಣಾ ಸಚಿವ ಇಸ್ರೇಲ್ ಕ್ಯಾಟ್ಜ್, “ಟೆಹ್ರಾನ್‌ನ ಹೃದಯಭಾಗದಲ್ಲಿರುವ ಆಡಳಿತ ಗುರಿಗಳ ಮೇಲೆ ತೀವ್ರವಾದ ದಾಳಿಗಳೊಂದಿಗೆ ಇರಾನ್ ಕದನ ವಿರಾಮದ ಉಲ್ಲಂಘನೆಗೆ ಬಲವಾಗಿ ಪ್ರತಿಕ್ರಿಯಿಸಲು” IDF ಗೆ ಸೂಚನೆ ನೀಡಿದ್ದೇನೆ ಎಂದು ಹೇಳುತ್ತಾರೆ. https://twitter.com/IDF/status/1937414143637639295 ಇಂದು ಮುಂಜಾನೆ, ಇಸ್ರೇಲ್ ಮತ್ತು ಇರಾನ್ ನಡುವಿನ ಕದನ ವಿರಾಮ ಈಗ ಜಾರಿಯಲ್ಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದರು. ಎರಡೂ ಕಡೆಯವರು ಅದನ್ನು ಉಲ್ಲಂಘಿಸದಂತೆ ಕೇಳಿಕೊಂಡರು. ಎರಡೂ…
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಲೂಟಿಯಲ್ಲಿ ತೊಡಗಿದೆ ಎಂದು ವಿಪಕ್ಷಗಳು ಹೇಳುತ್ತಿಲ್ಲ. ಬದಲಾಗಿ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ ಎಂದು ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಗಮನ ಸೆಳೆದರು. ಇದಕ್ಕೆ ಉತ್ತರಿಸಲು ಸರಕಾರಕ್ಕೆ ಸಾಧ್ಯ ಆಗುತ್ತಿಲ್ಲ ಎಂದು ಟೀಕಿಸಿದರು. ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಕರೆದು ಮಾತನಾಡುವೆ; ನಾನು ಭೇಟಿ ಮಾಡಿ ಮಾತನಾಡುವೆ. ಈ ರೀತಿಯ ಹಾರಿಕೆಯ ಉತ್ತರವನ್ನು ಮಾನ್ಯ ಮುಖ್ಯಮಂತ್ರಿಯವರು ಕೊಡಲು ಆರಂಭಿಸಿದ್ದಾರೆ ಎಂದು ಆಕ್ಷೇಪಿಸಿದರು. ಈಗ ಹಾರಿಕೆ ಉತ್ತರ ಕೊಟ್ಟರೆ ಸಾಧ್ಯವಿಲ್ಲ. ಮಿತಿ ಮೀರಿದ ಭ್ರಷ್ಟಾಚಾರವನ್ನು ಸಹಿಸಲಾಗದ ಕಾಂಗ್ರೆಸ್ಸಿಗರೂ ಇದ್ದಾರೆ. ಶಾಸಕ ಬಿ.ಆರ್.ಪಾಟೀಲ್ ಅವರ ಹೇಳಿಕೆ ಇರಬಹುದು; ಗೋಪಾಲಕೃಷ್ಣ ಅವರೂ ಒಂದೇ ಒಂದು ಚರಂಡಿ, ರಸ್ತೆ ಮಾಡಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಮಂತ್ರಿಗಳು ರಾಜೀನಾಮೆ ಕೊಡಬೇಕೆಂದು ಬೇಳೂರು ಗೋಪಾಲಕೃಷ್ಣ ಹೇಳಿದ್ದಾಗಿ ಗಮನ ಸೆಳೆದರು. ಅನುದಾನ ಸಿಗುತ್ತಿಲ್ಲವೆಂದು ರಾಜು ಕಾಗೆಯವರು ಹೇಳಿದ್ದಾರೆ. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಸರಕಾರದ ವಿರುದ್ಧ…
ನವದೆಹಲಿ: ಮಾವುಗಳ ದರ ಇಳಿಕೆಯ ಕಾರಣದಿಂದ ಬೆಳೆಗಾರರು ಸಂಕಷ್ಟಕ್ಕೆ ಈಡಾಗಿದ್ದರು. ಈ ಮಾವು ಬೆಳೆಗಾರರ ಬೆಂಬಲಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಿಂತಿದ್ದಾರೆ. ಈ ಸಂಬಂಧ ಕೇಂದ್ರ ಕೃಷಿ ಸಚಿವರಿಗೆ ಅವರು ಪತ್ರ ಬರೆದು, ರೈತರ ಸಮಸ್ಯೆಗೆ ಪರಿಹರಿಸುವಂತೆ ಮನವಿ ಮಾಡಿದ್ದಾರೆ. ಹೌದು ಮಾವು ಬೆಳೆಗಾರರ ಸಮಸ್ಯೆಯ ಸಂಬಂಧ ಹೆಚ್.ಡಿ ಕುಮಾರಸ್ವಾಮಿ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿನ ವಾತಾವರಣ, ಮಾವಿನ ಬೆಲೆ ಕುಸಿತದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಮಾವು ಬೆಳೆಗಾರರ ಸಮಸ್ಯೆ ಪರಿಹರಿಸಲು ಪತ್ರ ಬರೆದು ಸಮಸ್ಯೆಗೆ ನೆರವಾಗುವಂತೆ ಮನವಿ ಮಾಡಿದ್ದಾರೆ. ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮುಂತಾದ ಜಿಲ್ಲೆಗಳಲ್ಲಿ ಮಾವು ಬೆಳೆಗಾರರು ಸಂಕಷ್ಟದಲ್ಲಿ ಇದ್ದಾರೆ. ಭಾರೀ ಬೆಲೆ ಕುಸಿತದಿಂದ ಬೆಳಗಾರರು ಕಂಗಾಲಾಗಿದ್ದಾರೆ. ಕೂಡಲೇ ಅವರ ಸಂಕಷ್ಟಕ್ಕೆ ನೆರವಾಗಬೇಕು. ಮಾವು ಬೆಳೆಗಾರರಿಗೆ ಪರಿಹಾರ ನೀಡುವಂತೆ ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದಾರೆ. https://kannadanewsnow.com/kannada/bengaluru-residents-attention-tomorrow-there-will-be-a-power-outage-in-these-areas/ https://kannadanewsnow.com/kannada/minister-shivraj-tangadagi-inquired-about-the-health-of-dodderangegowda-announced-that-the-government-will-bear-the-medical-expenses/
ಬೆಂಗಳೂರು: ಆಡುಗೋಡಿ ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಜೂನ್ 25 ರ ಬುಧವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಪ್, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡ್ಯೆರಿ, ಫೋರಾಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾಡ್ðನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ರೆಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದವನ ಸ್ಲಮ್, ಲಾಲ್ ಜಿ ನಗರ, ಶಾಮಣ್ಣ ಗಾಡðನ್, ಎನ್ ಡಿ ರ್ ಐ, ಪೋಲಿಸ್ ವಸತಿ ಗೃಹಗಳು ಮತ್ತು ಸುತ್ತಮುತ್ತಲ ಪ್ರದೇಶಗಳು, ರಿಚ್ ಮಂಡ್ ಟೌನ್, ರಿಚ್ ಮಂಡ್ ಸರ್ಕಲ್ ನಲ್ಲಿ ಕರೆಂಟ್ ಇರೋದಿಲ್ಲ. ಜಾನ್ಸನ್ ಮಾಕೆðಟ್, ನಾರೀಸ್ ರಸ್ತೇ, ಅರಬ್ ಲ್ಯೇನ್, ವೆಲ್ಂಗ್ಟನ್ ಸ್ಡೀಟ್ ಕರ್ಲಿ ಸ್ಡೀಟ್, ಲಿಯೋನಾಡ್ð ಸ್ಡೀಟ್, ರಿನಿಯಸ್ ಸ್ಡೀಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ…
ಬೆಂಗಳೂರು : ಬಡವರಿಗೆ ಕೊಡುವ ಮನೆಗೆ ಹಣ ಪಡೆದು ಬದುಕುವ ದರಿದ್ರ ನನಗೆ ಬಂದಿಲ್ಲ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಬಡವರಿಗೆ ಮನೆ ಹಂಚಿಕೆ ಮಾಡಲು ನಾನು ಹಣ ಪಡೆದಿರುವುದು ಸಾಬೀತು ಮಾಡಿದರೆ ಬೇರೆಯವರು ಕೇಳುವುದು ಬೇಡ ನಾನೇ ಸ್ವಯಂ ಪ್ರೇರಿತವಾಗಿ ರಾಜೀನಾಮೆ ಕೊಡಲು ಸಿದ್ಧ ಎಂದು ಹೇಳಿದ್ದಾರೆ. ಬಡವರ ಮನೆಗೆ ಹಣ ಪಡೆಯುವುದು ಅಕ್ಷಮ್ಯ ಅಪರಾಧ. ಅದಕ್ಕೆ ನಮ್ಮ ಇಲಾಖೆ ಯಲ್ಲಿ ಅವಕಾಶ ಇಲ್ಲ. ಹಿರಿಯ ಶಾಸಕರಾದ ಬಿ. ಆರ್. ಪಾಟೀಲ್ ಅವರು ಮಾಡಿರುವ ಆರೋಪ ಸಂಬಂಧ ತನಿಖೆ ಗೆ ಆದೇಶಿಸಲಾಗುವುದು.ತನಿಖೆ ನಂತರ ಯಾರಾದರೂ ತಪ್ಪು ಮಾಡಿದ್ದರೆ ಕಠಿಣ ಕ್ರಮ ಕೈಗೊಳ್ಳ ಲಾಗುವುದು. ಬಿ. ಆರ್. ಪಾಟೀಲರ ಜತೆಯೂ ಮಾತನಾಡುತ್ತೇನೆ ಎಂದು ತಿಳಿಸಿದರು. ಬಿ. ಆರ್. ಪಾಟೀಲ್ ಅವರು ಸಹ ಸಚಿವರು ಹಣ ಪಡೆದಿದ್ದಾರೆ ಎಂದು ಹೇಳಿಲ್ಲ. ಅಧಿಕಾರಿಗಳ ಹೆಸರು ಸಹ ಹೇಳಿಲ್ಲ. ಪಂಚಾಯಿತಿಯಲ್ಲಿ ಯಾರಾದರೂ ಹಣ ಪಡೆದಿದ್ದರೆ ಮಾಹಿತಿ ಕೊಟ್ಟರೆ…
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಗ್ಲನೆಗಲ್ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಹಾಗೂ ವಿಧಾನಪರಿಷತ್ತಿನ ಮಾಜಿ ಸದಸ್ಯರಾದ ಪ್ರೊ. ದೊಡ್ಡ ರಂಗೇಗೌಡರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು. ಆಸ್ಪತ್ರೆಯ ವೈದ್ಯರಲ್ಲಿ ದೊಡ್ಡ ರಂಗೇಗೌಡರ ಆರೋಗ್ಯ ಪರಿಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಚಿವ ಶಿವರಾಜ ತಂಗಡಗಿ ಅವರು ಮುಖ್ಯಮಂತ್ರಿಗಳ ಆದೇಶದ ಅನುಸಾರ ಅವರ ವೈದ್ಯಕೀಯ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರದಿಂದಲೇ ಭರಿಸುವುದಾಗಿ ತಿಳಿಸಿದರು. ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯವನ್ನು ಒದಗಿಸಲು ಸೂಚಿಸಿದರು. ಪ್ರೊ.ದೊಡ್ಡ ರಂಗೇಗೌಡರ ಕುಟುಂಬ ಸದಸ್ಯರನ್ನು ಸಹ ಭೇಟಿ ಮಾಡಿದ ಸಚಿವ ಶಿವರಾಜ ತಂಗಡಗಿ ಅವರಿಗೆ ಧೈರ್ಯ ಹೇಳಿದರು. ಪ್ರೊ. ದೊಡ್ಡ ರಂಗೇಗೌಡರು ಕನ್ನಡ ಸಾಂಸ್ಕೃತಿಕ ಲೋಕದ ಆಸ್ತಿ. ಅವರ ಬಗ್ಗೆ ಅಪಾರವಾದ ಕಾಳಜಿ ಇದೆ. ಸರ್ಕಾರದಿಂದ ಅವರಿಗೆ ಎಲ್ಲ ರೀತಿಯ ನೆರವನ್ನು ನೀಡುವುದಾಗಿ…
ಬೆಂಗಳೂರು: ದೇಶದಲ್ಲಿ ಫಲವತ್ತತೆ ಸಮಸ್ಯೆ ಎದುರಿಸುತ್ತಿರುವವರಿಗಾಗಿ ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ವತಿಯಿಂದ ದೇಶದಲ್ಲೇ ಮೊದಲ ಬಾರಿಗೆ ಫಲವತ್ತತೆ ಕುರಿತು ಸಲಹೆ ನೀಡಲು ಉಚಿತ ಟೋಲ್-ಫ್ರೀ ದೂರವಾಣಿ ವ್ಯವಸ್ಥೆ ಕಲ್ಪಿಸಿದೆ. ಈ ಕುರಿತು ಮಾತನಾಡಿದ ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಭಿಷೇಕ್ ಅಗ್ರವಾಲ್, 1800 123 1515 ಈ ಟೋಲ್‌ಫ್ರೀ ಸಂಖ್ಯೆಯು ವಾರದ ದಿನಗಳಲ್ಲಿ 9 ರಿಂದ ಸಂಜೆ 6 ರವರೆಗೆ ಕಾರ್ಯನಿರ್ವಹಿಸಲಿದೆ, ಪ್ರಸ್ತುತ ಇಂಗ್ಲಿಷ್ ಹಾಗೂ ಹಿಂದೆ ಭಾಷೆಯಲ್ಲಿ ಈ ವ್ಯವಸ್ಥೆ ಇದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲೂ ಲಭ್ಯವಾಗುವಂತೆ ಮಾಡಲಾಗುವುದು ಎಂದರು. ಒತ್ತಡದ ಬದುಕಿನಿಂದಾಗಿ ಸಾಕಷ್ಟು ಜನರು ಇಂದು ಗರ್ಭಧಾರಣೆ ಸಮಸ್ಯೆ ಎದುರಿಸುತ್ತಿದ್ದಾರೆ. ಫಲವತ್ತತೆ ಹೊಂದದೇ ಇರಲು ಕಾರಣವೇನು ಎಂಬುದರ ಬಗ್ಗೆಯೂ ಸಾಕಷ್ಟು ಜನರಿಗೆ ಸ್ಪಷ್ಟತೆ ಇರುವುದಿಲ್ಲ ಅಷ್ಟೇ ಅಲ್ಲದೆ, ಸಾಕಷ್ಟು ಗೊಂದಲ ಹಾಗೂ ಹತಾಶೆ ಹೊಂದಿರುತ್ತಾರೆ. ಮುಂದೆ ಏನು ಮಾಡಬೇಕು ಎಂಬ ಅರಿವಿನ ಕೊರತೆಯಲ್ಲೂ ಇರುತ್ತಾರೆ. ಇವರಿಗಾಗಿಯೇ ಬಿರ್ಲಾ ಫರ್ಟಿಲಿಟಿ ದೇಶಾದ್ಯಂತ…
ಮಂಗಳವಾರ ದಕ್ಷಿಣ ಫಿಲಿಪೈನ್ಸ್‌ನ ಕೆಲವು ಭಾಗಗಳಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ದಾವೊ ದ್ವೀಪದ ಪೂರ್ವಕ್ಕೆ ಸುಮಾರು 374 ಕಿಲೋಮೀಟರ್ (232 ಮೈಲುಗಳು) ಆಳವಿಲ್ಲದ ಭೂಕಂಪ ಸಂಭವಿಸಿದೆ. ಯಾವುದೇ ಸಾವುನೋವುಗಳು ಅಥವಾ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ. X ನಲ್ಲಿನ ಪೋಸ್ಟ್‌ನಲ್ಲಿ, ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು X ನಲ್ಲಿನ ಭೂಕಂಪದ ವಿವರಗಳನ್ನು ಪೋಸ್ಟ್ ಮಾಡಿದೆ. ಅದು ಹೀಗೆ ಹೇಳಿದೆ, “EQ of M: 6.2, On: 24/06/2025 07:28:06 IST, Lat: 7.90 N, Long: 130.09 E, ಆಳ: 10 Km, ಸ್ಥಳ: ಫಿಲಿಪೈನ್ ದ್ವೀಪಗಳ ಪೂರ್ವ ಎಂದಿದೆ. https://twitter.com/NCS_Earthquake/status/1937332916121641417 ಭೂಕಂಪದ ಬಗ್ಗೆ ವರದಿ ಮಾಡಿರುವ ಫಿಲಿಪೈನ್ ಜ್ವಾಲಾಮುಖಿ ಮತ್ತು ಭೂಕಂಪಶಾಸ್ತ್ರ ಸಂಸ್ಥೆಯು ಯಾವುದೇ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಫಿಲಿಪೈನ್ಸ್ ಪೆಸಿಫಿಕ್ “ರಿಂಗ್ ಆಫ್ ಫೈರ್” ನಲ್ಲಿದೆ, ಇದು ಜಪಾನ್‌ನಿಂದ ಆಗ್ನೇಯ ಏಷ್ಯಾ ಮತ್ತು ಪೆಸಿಫಿಕ್ ಜಲಾನಯನ ಪ್ರದೇಶದಾದ್ಯಂತ ವ್ಯಾಪಿಸಿರುವ ತೀವ್ರವಾದ ಭೂಕಂಪನ ಚಟುವಟಿಕೆಯ ಒಂದು…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಇಸ್ರೋ ಲೇಔಟ್ ಉಪಕೇಂದ್ರ 220/66/11ಕೆವಿ ಸುಬ್ರಹ್ಮಣ್ಯಪುರ ಉಪಕೇಂದ್ರ ಮತ್ತು 66/11ಕೆವಿ ಭನಶಂಕರಿ ಉಪಕೇಂದ್ರ ಜಯನಗರ ವಿಭಾಗ ವ್ಯಾಪ್ತಿಯಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 24.06.2025 (ಮಂಗಳವಾರ) ರಂದು ಬೆಳಗ್ಗೆ 10:00 ಯಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂದ್, ಏರಿಯಾ ಕುಮಾರಸ್ವಾಮಿ ಲೇಔಟ್, ಇಳಯಸನಗರ, ವಿವೇಕಾನಂದ ಕಾಲೋನಿ, ಪ್ರಗತಿಪುರ, ಸರಬಂಡೆ ಪಾಳ್ಯ, ಫ್ರತಿಭಾ ಇಂಡಸ್ಟ್ರಿಯಲ್ ಏರಿಯಾ, ಸುಪ್ರೀಮ್ ಲೆದರ್ ಗಾರ್ಮೆಂಟ್ಸ್, ಚಂದ್ರ ನಗರ, ಕಾಶಿನಗರ, ವಿಕ್ರಮ ನಗರ, ನಂಜಪ್ಪ ಲೇಔಟ್, ಬಿಕಾಸಿಪುರ, ಟೀಚರ್ಸ್ ಕಾಲೋನಿ, JHBCS ಲೇಔಟ್, ಬೇಂದ್ರೇ ನಗರ, ಈಶ್ವರನಗರ, ಮಿನಿಯಾಜ್ ನಗರ, ಕನಕಾ ಲೇಔಟ್, ಕನಕನಗರ, ಗುಬ್ಬಾಲಾಳ, ಉತ್ತರಹಳ್ಳಿ ಭಾಗಶಃ, ಇಸ್ರೋ ಲೇಔಟ್ ಇಂದ್, ಆದರ್ಶ್ ಅಪಾರ್ಟ್ ಮೆಂಟ್ 1&2, ಮಂತ್ರಿಟ್ರಾನ್ ಕ್ವಿಲ್ ಅಪಾರ್ಟ್ಮೆಂಟ್ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. ಮಾರುತಿ ಲೇಔಟ್, ಭರತ ಲೇಔಟ್, ದೊಡ್ಡಕಲ್ಲಸಂದ್ರ ಇಂದ್,…
ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಇ-ಹಾಜರಾತಿ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಪ್ರಸಕ್ತ ಶೈಕ್ಷಣಿ ಸಾಲಿನಿಂದಲೇ ಇ-ಹಾಜರಾತಿ ಕಡ್ಡಾಯ ಜಾರಿಗೆ ಆದೇಶ ಮಾಡಿದೆ. ಇ-ಹಾಜರಾತಿಯು ಪ್ರತಿಯೊಬ್ಬ ವಿದ್ಯಾರ್ಥಿಯು ಶಾಲೆಗೆ ಬರುವುದನ್ನು ಖಾತರಿಪಡಿಸಲಿದೆ. ಇದರಿಂದ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಲಿ ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ ಹಾಗೂ ಸರ್ಕಾರದ ಅನುದಾನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಇ-ಹಾಜರಾತಿ ಕಡ್ಡಾಯಗೊಳಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಯೋಜನೆ ಅನುಷ್ಠಾನಗೊಳಿಸಲು ಅಗತ್ಯವಾದ ಕೃತಕ ಬುದ್ಧಿಮತ್ತೆ ಆಧಾರಿತ ಮೊಬೈಲ್ ಹಾಗೂ ಇತರೆ ಪರಿಕರಗಳನ್ನು ರಾಜ್ಯದ 52,686 ಶಾಲೆಗಳಲ್ಲಿ ಅಳವಡಿಸಲು ₹5 ಕೋಟಿ ಅನುದಾನ ನೀಡಲಾಗಿದೆ. https://twitter.com/KarnatakaVarthe/status/1937078343339589895 https://kannadanewsnow.com/kannada/aishwaryagowda-is-not-even-known-to-me-there-is-no-business-with-him-d-k-suresh-clarification/ https://kannadanewsnow.com/kannada/breaking-mla-raju-kage-said-he-may-resign-in-2-days-what-did-cm-siddaramaiah-say/













