Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಚಿತ್ರದುರ್ಗ: ರಾಜ್ಯದಲ್ಲಿ ಗ್ರಾಮೀಣ ಭಾಗದ ಜನರಿಗೂ ಗುಣಮಟ್ಟದ ಚಿಕಿತ್ಸೆ ಸಿಗುವಂತ ಕೆಲಸವನ್ನು ಸರ್ಕಾರ ಮಾಡುತ್ತಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಇಂದು ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರಿನಲ್ಲಿ ಸಮುದಾಯ ಆರೋಗ್ಯ ಕೇಂದ್ರ ಮತ್ತು ಸಿಬ್ಬಂದಿ ವಸತಿ ಗೃಹ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಸುಸಜ್ಜಿತ ಕಟ್ಟಡ ನಿರ್ಮಿಸಿ 30 ಹಾಸಿಗೆ ಸಾಮರ್ಥ್ಯದ, ಅಧುನಿಕ ಸೌಲಭ್ಯ ಹೊಂದಿರುವ ಆಸ್ಪತ್ರೆ ಉದ್ಘಾಟನೆಗೊಂಡಿದೆ. ಈ ಭಾಗದ ಜನರು ಇದರ ಉಪಯೋಗ ಪಡೆದು ಕೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಅರೋಗ್ಯ ಸೌಲಭ್ಯಗಳು ಸರಿಯಾಗಿ ಸಿಗಬೇಕು. ಸರಿಯಾದ ರೀತಿಯಲ್ಲಿ ತಪಾಸಣೆ, ಅಗತ್ಯ ಇರುವವರಿಗೆ ಸರಿಯಾದ ಚಿಕಿತ್ಸೆ ನೀಡುವುದು ಇಂದಿನ ಅಗತ್ಯವಾಗಿದೆ. ಅದನ್ನೂ ಆರೋಗ್ಯ ಇಲಾಖೆ ವಿವಿಧ ಯೋಜನೆಗಳ ಮೂಲಕ ಮಾಡುತ್ತಿದೆ. ಸ್ವಾತಂತ್ರ್ಯ ಬಂದಾಗ ನಮ್ಮ ದೇಶದ ಜನರ ಸರಾಸರಿ ಆಯುಷ್ಯ 32-33 ವರ್ಷ ಇತ್ತು. ಈಗ ಅದು 70 ವರ್ಷಕ್ಕೆ ಏರಿಕೆಯಾಗಿದೆ. ಇದರಿಂದ ಆರೋಗ್ಯ ಕ್ಷೇತ್ರ ತನ್ನ ವ್ಯಾಪ್ತಿ,ಯೋಜನೆಗಳನ್ನು ವಿಸ್ತರಸಿಕೊಳ್ಳಬೇಕಾಗುತ್ತದೆ ಎಂದರು. ಸರ್ಕಾರಿ ಆಸ್ಪತ್ರೆಗಳಲ್ಲಿಯೂ…
ಶಿವಮೊಗ್ಗ: ಡಿ.25ರಿಂದ 27ರವರೆಗೆ ಅಯ್ಯಪ್ಪಸ್ವಾಮಿ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ಸಾಗರದ ಅಯ್ಯಪ್ಪಸ್ವಾಮಿ ದೀಪೋತ್ಸವ ಅಂಗವಾಗಿ ಮೊದಲ ಬಾರಿಗೆ ಡಿ. 25 ರಿಂದ ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ಅಯ್ಯಪ್ಪಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಆರ್. ಚಂದ್ರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಡಿ. 25ರಂದು ಬೆಳಿಗ್ಗೆ 8 ಗಂಟೆಗೆ ಪಿ.ಆರ್.ರವೀಂದ್ರನ್ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಿದ್ದಾರೆ ಎಂದರು. ಸoಜೆ 5.30ಕ್ಕೆ ಮಾಲೆಧರಿಸಿದ ಸ್ವಾಮಿಗಳಿಂದ ಅಯ್ಯಪ್ಪಸ್ವಾಮಿ ದೇವಸ್ಥಾನದಿಂದ ನಡೆಯುವ ರಾಜಬೀದಿ ಮೆರವಣಿಗೆಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಚಾಲನೆ ನೀಡಲಿದ್ದು, ರಾಜು ಗುರುಸ್ವಾಮಿ ನೇತೃತ್ವ ವಹಿಸಲಿದ್ದಾರೆ. ಸಂಜೆ 6ಕ್ಕೆ ಮುರುಘಾಮಠದ ಡಾ. ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮಿಗಳು ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮಹಾಗಣಪತಿ ದೇವಸ್ಥಾನ ಸಮಿತಿ ಅಧ್ಯಕ್ಷ ಟಿ.ವಿ.ಪಾಂಡುರoಗ ಉಪಸ್ಥಿತರಿರುವರು ಎಂದು ಹೇಳಿದರು. ಡಿ.26ರಂದು ಸಂಜೆ ೫ಕ್ಕೆ ಅಯ್ಯಪ್ಪಸ್ವಾಮಿ ದೇವಾಲಯ ನವ ನಿರ್ಮಾಣ ಕಾರ್ಯಯೋಜನೆ ಉದ್ಘಾಟನೆ ನಡೆಯಲಿದ್ದು…
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹಳದಿ ಮಾರ್ಗದಲ್ಲಿ 6ನೇ ಮೆಟ್ರೋ ರೈಲನ್ನು 23ನೇ ಡಿಸೆಂಬರ್ 2025ರಿಂದ (ಮಂಗಳವಾರ) ಪ್ರಯಾಣಿಕರ ಸೇವೆಗೆ ಪ್ರಾರಂಭಿಸಲಾಗುತ್ತಿದೆ. ಈ ರೈಲಿನ ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಜನದಟ್ಟನೆಯ ಅವಧಿಯಲ್ಲಿ ಮೆಟ್ರೋ ಸೇವೆಗಳು ಪ್ರಸ್ತುತ ಇರುವ 15 ನಿಮಿಷಗಳ ಅಂತರದ ಬದಲು 13 ನಿಮಿಷಗಳ ಅವಧಿಯಲ್ಲಿ ಸಂಚರಿಸಲಿವೆ. ಭಾನುವಾರಗಳಂದು ಪೀಕ್ ಅವಧಿಯ ಸೇವಾ ಅವಧಿ 15 ನಿಮಿಷಗಳಾಗಿಯೇ ಮುಂದುವರಿಯಲಿದೆ. ಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ನಿಲ್ದಾಣಗಳ ಎರಡೂ ಟರ್ಮಿನಲ್‌ಗಳಿಂದ ಮೊದಲ ಹಾಗೂ ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಮೇಲ್ಕಂಡ ಬದಲಾವಣೆಗಳನ್ನು ಗಮನಿಸಿ, ಮೆಟ್ರೋ ಸೇವೆಗಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದೆ. https://kannadanewsnow.com/kannada/sagara-government-pre-graduate-college-golden-jubilee-celebrations-tomorrow-mlas-review-preparations/ https://kannadanewsnow.com/kannada/big-news-rbis-big-shock-for-those-taking-loans-against-gold-from-now-on-60-loan-for-10-grams-of-gold/
ಶಿವಮೊಗ್ಗ : ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವದಲ್ಲಿ ಎಲ್ಲರೂ ಪಾಲ್ಗೊಂಡು ಇದೊಂದು ಅವಿಸ್ಮರಣೀಯ ಕಾರ್ಯವಾಗಿಸಿ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ಡಿ.23ರ ನಾಳೆ, 24ರ ನಾಡಿದ್ದು ನಡೆಯಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮದ ಪೂರ್ವಸಿದ್ದತೆಯನ್ನು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದಂತ ಅವರು, ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಪೂರ್ಣ ಕಟ್ಟಡಕ್ಕೆ ಸುಣ್ಣಬಣ್ಣ ಮಾಡಲಾಗಿದ್ದು ಖಾಸಗಿ ಕಾಲೇಜಿಗಿಂತ ಸುಂದರವಾಗಿ ಕಾಲೇಜು ಕಂಗೊಳಿಸುತ್ತಿದೆ. ಕಾಲೇಜಿಗೆ ಹೆಚ್ಚುವರಿ 5 ಕೊಠಡಿಗಳನ್ನು 95 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಶೌಚಾಲಯದ ಜೊತೆಗೆ ಸಣ್ಣಪುಟ್ಟ ರಿಪೇರಿ ಕೆಲಸವನ್ನು ನಿರ್ವಹಿಸಿದೆ. ಒಟ್ಟಾರೆ ರಾಜ್ಯ ಹೊರರಾಜ್ಯಗಳಿಂದ ಹಳೇಯ ವಿದ್ಯಾರ್ಥಿಗಳು ಎರಡು ದಿನಗಳ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ತಾವು ಓದಿದ ಕಾಲೇಜಿನ ಬಗ್ಗೆ ಅವರಿಗೆ ಗೌರವ ಭಾವನೆ ಮೂಡಬೇಕು. ಅಂತಹ ವಾತಾವರಣ ಸೃಷ್ಟಿಸಿದೆ ಎಂದು ಹೇಳಿದರು. ನಾನು ಈ ಕಾಲೇಜಿನ…
ಬೆಂಗಳೂರು: ಎಐಸಿಸಿ ಅಧ್ಯಕ್ಷರ ಅಸ್ಪಷ್ಟ ಹೇಳಿಕೆಯ ಬಳಿಕ ರಾಜ್ಯ ಕಾಂಗ್ರೆಸ್ಸಿನಲ್ಲಿ ನಾಯಕತ್ವ ವಿಚಾರ ಮತ್ತಷ್ಟು ತಾರಕಕ್ಕೆ ಹೋಗಲಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಈ ಸರಕಾರ ರಾಜ್ಯವನ್ನು ಈಗಾಗಲೇ ಸರ್ವನಾಶದ ಅಂಚಿಗೆ ತೆಗೆದುಕೊಂಡು ಹೋಗಿದೆ. ಕೇವಲ ಲೂಟಿ ಮಾಡುವುದನ್ನು ಇವತ್ತು ಸಚಿವರು ಮಾಡುತ್ತಿದ್ದಾರೆ. ಒಬ್ಬರು ಭೂಕಳ್ಳತನ ಮಾಡುತ್ತಿದ್ದರೆ, ಮತ್ತೊಬ್ಬರು ಗ್ಯಾರಂಟಿ ಕಳ್ಳತನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅನೇಕ ಸಚಿವರು ಲೂಟಿ ಕೆಲಸದಲ್ಲಿ ತೊಡಗಿದ್ದಾರೆ ಎಂದು ದೂರಿದರು. ರಾಜ್ಯ ಪ್ರವಾಸ ಮಾಡುವ ಪರಿಸ್ಥಿತಿಯಲ್ಲಿ ಸಚಿವರು ಇಲ್ಲ. ಅವರವರ ಸ್ವಂತ ಉಸ್ತುವಾರಿ ಜಿಲ್ಲೆಗೂ ಪಿಕ್ನಿಕ್‍ನಂತೆ ಪ್ರವಾಸ ಹೋಗುತ್ತಾರೆಯೇ ಹೊರತು ಅಲ್ಲಿ ಯಾರೂ ವಾಸವಿಲ್ಲ. ಜನರು ಇವರ ಕೆಲಸ ನೋಡಿ ಕುಪಿತರಾಗಿದ್ದಾರೆ. ಈ ಸರಕಾರವು ಜನವಿರೋಧಿಯಾಗಿ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು. ಇಂಥ ಜನವಿರೋಧಿ ವಿಚಾರಗಳನ್ನು ಬಿಜೆಪಿ, ಜನರ ಮುಂದೆ ಎಳೆಎಳೆಯಾಗಿ ಬಿಚ್ಚಿಡಲಿದೆ ಎಂದು ತಿಳಿಸಿದರು.…
ಮಂಡ್ಯ : ಜಿಲ್ಲೆಯಲ್ಲಿ ಕೃಷಿ ಮತ್ತು ಹೈನುಗಾರಿಕೆಯೇ ಪ್ರಮುಖ ವೃತ್ತಿಯಾಗಿದ್ದು, ಹಲವಾರು ಕುಟುಂಬಗಳು ಹೈನುಗಾರಿಕೆಯ ಮೂಲಕ ಬದುಕು ಕಟ್ಟಿಕೊಂಡಿದ್ದಾರೆ. ಹೀಗಾಗಿ, ರಾಸುಗಳ ಆರೋಗ್ಯದ ದೃಷ್ಟಿಯಿಂದ ಕ್ಷೇತ್ರದಲ್ಲಿ ಪಶು ಆಸ್ಪತ್ರೆಗಳನ್ನು ಹೆಚ್ಚಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ಸೋಮವಾರ ಹೇಳಿದರು. ಮದ್ದೂರು ತಾಲೂಕಿನ ವಳಗೆರೆಹಳ್ಳಿಯಲ್ಲಿ ನೂತನ ಪಶು ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೃಷಿ ಮತ್ತು ಹೈನುಗಾರಿಕೆಯೇ ಪ್ರಮುಖವಾಗಿದೆ. ಹಲವು ಕುಟುಂಬಗಳ ನಿರ್ವಹಣೆಗೆ ಹೈನುಗಾರಿಕೆಯಿಂದಲೇ ಆರ್ಥಿಕಾಭಿವೃದ್ದಿ ಸಾಧ್ಯವಾಗುತ್ತಿದೆ. ಹೀಗಾಗಿ, ರಾಸುಗಳಿಗೆ ತೊಂದರೆಯಾದಲ್ಲಿ ಕುಟುಂಬದ ಆಧಾರವೇ ಕಳಚಿ ಬಿದ್ದಾಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಸತತ ಪ್ರಯತ್ನ ಮಾಡಿದ್ದರ ಫಲವಾಗಿ ಬೇರೆ ಗ್ರಾಮಕ್ಕೆ ಮಂಜೂರಾಗಿದ್ದ ಆಸ್ಪತ್ರೆಯನ್ನು ವಳಗೆರೆಹಳ್ಳಿ ಗ್ರಾಮದಲ್ಲಿ ನೂತನ ಪಶು ಆಸ್ಪತ್ರೆಯ ಕಟ್ಟಡವನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದರಿಂದ ವಳಗೆರೆಹಳ್ಳಿ, ಸೊಳ್ಳೆಪುರ, ರಾಂಪುರ ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರಿಗೆ ಅನುಕೂಲವಾಗುತ್ತದೆ. ವೈದ್ಯಕೀಯ ಸೇವೆ ರಾಸುಗಳಿಗೆ ತ್ವರಿತವಾಗಿ ದೊರೆಯುವಂತಾಗಲು ಉಪಯುಕ್ತವಾಗಿದೆ ಎಂದರು. ವಳಗೆರೆಹಳ್ಳಿ, ಸೊಳ್ಳೆಪುರ ಹಾಗೂ…
ಮಂಡ್ಯ : ಮದ್ದೂರು ನಗರದಲ್ಲಿ ನಿರ್ಮಾಣವಾಗುತ್ತಿರುವ ಕಾಂಗ್ರೆಸ್ ಭವನಕ್ಕೆ ಪಕ್ಷದ ಎಲ್ಲಾ ಕಾರ್ಯಕರ್ತರು ಮತ್ತು ಮುಖಂಡರು ತನು, ಮನ, ಧನ ನೆರವು ನೀಡಬೇಕೆಂದು ಶಾಸಕ ಕೆ.ಎಂ.ಉದಯ್ ಕರೆ ನೀಡಿದರು. ಕದಲೂರು ಗ್ರಾಮದ ಶಾಸಕರ ನಿವಾಸದಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ ಅವರೊಂದಿಗೆ ತೆರಳಿದ ಸುರೇಶ್ ಕಂಠಿ ನಗರದಲ್ಲಿ ನಿರ್ಮಾಣವಾಗುತ್ತಿರುವ ಕಾಂಗ್ರೆಸ್ ಭವನಕ್ಕೆ 1 ಲಕ್ಷ ರೂ ದೇಣಿಗೆಯನ್ನು ಶಾಸಕ ಕೆ.ಎಂ.ಉದಯ್ ಅವರಿಗೆ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಗರದಲ್ಲಿ ಹಲವಾರು ವರ್ಷಗಳಿಂದ ಕಾಂಗ್ರೆಸ್ ಕಛೇರಿಗೆ ಸ್ವಂತ ಕಟ್ಟಡವಿಲ್ಲದೆ ಬಾಡಿಗೆ ಕಟ್ಟಡದಲ್ಲಿ ಇತ್ತು. ಹೀಗಾಗಿ ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ರಾಜ್ಯಾದ್ಯಂತ ಕಾಂಗ್ರೆಸ್ ಭವನಗಳನ್ನು ನಿರ್ಮಾಣ ಮಾಡಬೇಕೆಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕರೆ ನೀಡಿದ್ದಾರೆ. ಹೀಗಾಗಿ ಪ್ರವಾಸಿ ಮಂದಿರದ ಬಳಿಯ ನನ್ನ ಸ್ವಂತ ನಿವೇಶನವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನೋಂದಣಿ ಮಾಡಿಸಿದ್ದು, ಮಾಜಿ ಸಂಸದರಾದ ಡಿ.ಕೆ.ಸುರೇಶ್ ಅವರು ಕೂಡ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ.…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ರಾಮೇಶ್ವರಂ ಕೆಫೆ ಮಳಿಗೆಯಲ್ಲಿ ಸಂಬಂಧಿಸಿದ ದೂರಿನ ಕುರಿತು ಇತ್ತೀಚೆಗೆ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕೆಲವು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿ ಕುರಿತ ಸ್ಪಷ್ಟನೆ ಇದಾಗಿದೆ. ರಾಮೇಶ್ವರಂ ಕೆಫೆಯ ಪ್ರವರ್ತಕರು ಸಲ್ಲಿಸಿದ ಕ್ರಿಮಿನಲ್ ಅರ್ಜಿಯನ್ನು ಆಲಿಸಿದ ಕರ್ನಾಟಕದ ಗೌರವಾನ್ವಿತ ಹೈಕೋರ್ಟ್, ಬೆಂಗಳೂರು ನಗರದ ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 59/2025 ರ ನೋಂದಣಿಗೆ ಅನುಗುಣವಾಗಿ ಮುಂದಿನ ವಿಚಾರಣೆಯ ದಿನಾಂಕದವರೆಗೆ ತಡೆಯಾಜ್ಞೆ ನೀಡಿದೆ. ನ್ಯಾಯಾಲಯವು ರಾಜ್ಯ ಸೇರಿದಂತೆ ಸಂಬಂಧಪಟ್ಟ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡುವಂತೆಯೂ ನಿರ್ದೇಶಿಸಿದೆ. ನ್ಯಾಯಾಲಯದ ವಿಚಾರಣೆಯಲ್ಲಿ ದಾಖಲಾಗಿರುವಂತೆ, ಪ್ರವರ್ತಕರ ವಿರುದ್ಧ ಮಾಡಲಾದ ಆರೋಪಗಳು ಸುಳ್ಳು, ಪ್ರತೀಕಾರದ ಸ್ವರೂಪದ್ದಾಗಿದ್ದು, ಆರೋಪಿಸಲಾದ ಅಪರಾಧಗಳ ಅಗತ್ಯ ಅಂಶಗಳನ್ನು ಬಹಿರಂಗಪಡಿಸುವಂತಿಲ್ಲ ಎಂಬ ಸಲ್ಲಿಕೆಗಳನ್ನು ಗೌರವಾನ್ವಿತ ನ್ಯಾಯಾಲಯವು ಗಮನಿಸಿದೆ. ಈ ವಿಷಯಕ್ಕೆ ವಿವರವಾದ ಪರಿಗಣನೆಯ ಅಗತ್ಯವಿದೆ ಎಂದು ನ್ಯಾಯಾಲಯವು ಉಲ್ಲೇಖಿಸಿದ್ದು, ಅದರ ನಂತರ ಮಧ್ಯಂತರ ತಡೆಯಾಜ್ಞೆ ನೀಡಿದೆ. ರಾಮೇಶ್ವರಂ ಕೆಫೆಯು ಕೆಲವು ವ್ಯಕ್ತಿಗಳು ಮತ್ತು ಸಾಮಾಜಿಕ ಮಾಧ್ಯಮಗಳು ಉದ್ದೇಶಪೂರ್ವಕವಾಗಿ…
ಜರ್ಮನಿ: ಪಪುವಾ ನ್ಯೂಗಿನಿಯಾದಲ್ಲಿ ಸೋಮವಾರ, ಡಿಸೆಂಬರ್ 22, 2025 ರಂದು GMT ಸುಮಾರು 10:31:28 ಕ್ಕೆ ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಮಾಹಿತಿಯನ್ನು GFZ ಜರ್ಮನ್ ಭೂವಿಜ್ಞಾನ ಸಂಶೋಧನಾ ಕೇಂದ್ರವು ಹಂಚಿಕೊಂಡಿದೆ. ಭೂಕಂಪದ ಕೇಂದ್ರಬಿಂದುವು 108.8 ಕಿಲೋಮೀಟರ್ ಆಳದಲ್ಲಿದೆ ಎಂದು ವರದಿಯಾಗಿದೆ, ಪ್ರಾಥಮಿಕ ನಿರ್ದೇಶಾಂಕಗಳು ಅದನ್ನು 5.78 ಡಿಗ್ರಿ ದಕ್ಷಿಣ ಅಕ್ಷಾಂಶ ಮತ್ತು 145.50 ಡಿಗ್ರಿ ಪೂರ್ವ ರೇಖಾಂಶದಲ್ಲಿ ಇರಿಸಿದೆ ಎಂದು ಕ್ಸಿನ್ಹುವಾವನ್ನು ಉಲ್ಲೇಖಿಸಿ ನ್ಯೂಸ್.ಆಜ್ ವರದಿ ಮಾಡಿದೆ. ಸ್ಥಳೀಯ ಅಧಿಕಾರಿಗಳು ಸಂಭಾವ್ಯ ಪರಿಣಾಮಗಳು ಮತ್ತು ಈ ಬಲವಾದ ಭೂಕಂಪದ ನಂತರ ಸಂಭವಿಸಬಹುದಾದ ಯಾವುದೇ ಸಂಭಾವ್ಯ ನಂತರದ ಆಘಾತಗಳ ಮೌಲ್ಯಮಾಪನವನ್ನು ಪ್ರಾರಂಭಿಸಿದ್ದಾರೆ. ಪಪುವಾ ನ್ಯೂಗಿನಿಯಾದಲ್ಲಿ ಗೊರೊಕಾದ ಈಶಾನ್ಯಕ್ಕೆ 26 ಮೈಲುಗಳಷ್ಟು ದೂರದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (USGS) ದೃಢಪಡಿಸಿದೆ.
ಬೆಂಗಳೂರು: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ಎಸ್ಎಂವಿಟಿ ಬೆಂಗಳೂರು ಮತ್ತು ಕೊಲ್ಲಂ ನಡುವೆ ಒಂದು ಟ್ರಿಪ್ ವಿಶೇಷ ರೈಲು ಕಾರ್ಯಾಚರಣೆ ಮಾಡಲಾಗುವುದು. ರೈಲು ಸಂಖ್ಯೆ 06573/06574 ಎಸ್ಎಂವಿಟಿ ಬೆಂಗಳೂರು-ಕೊಲ್ಲಂ-ಎಸ್ಎಂವಿಟಿ ಬೆಂಗಳೂರು ಎಕ್ಸ್’ಪ್ರೆಸ್ ವಿಶೇಷ (ಒಂದು ಟ್ರಿಪ್): ರೈಲು ಸಂಖ್ಯೆ 06573 (ಎಸ್ಎಂವಿಟಿ ಬೆಂಗಳೂರು – ಕೊಲ್ಲಂ): ಡಿಸೆಂಬರ್ 25ರಂದು ಮಧ್ಯಾಹ್ನ 3 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 6:30ಕ್ಕೆ ಕೊಲ್ಲಂ ತಲುಪಲಿದೆ. ಇದೆ ರೈಲು (06574) ಡಿಸೆಂಬರ್ 26ರಂದು ಬೆಳಿಗ್ಗೆ 10:30ಕ್ಕೆ ಕೊಲ್ಲಂನಿಂದ ಹೊರಟು, ಮರುದಿನ ಮುಂಜಾನೆ 03:30ಕ್ಕೆ ಎಸ್ಎಂವಿಟಿ ಬೆಂಗಳೂರಿಗೆ ಆಗಮಿಸಲಿದೆ. ಈ ವಿಶೇಷ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಪೊದನೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಾಸ್ಸೆರಿ, ತಿರುವಲ್ಲಾ, ಚೆಂಗನ್ನೂರು, ಮಾವೇಲಿಕರ ಮತ್ತು ಕಾಯಂಕುಲಂ ನಿಲ್ದಾಣಗಳಲ್ಲಿ ನಿಲ್ಲಲಿದೆ. ಈ ರೈಲು ಒಟ್ಟು 22 ಬೋಗಿಗಳನ್ನು ಹೊಂದಿರಲಿದ್ದು, ಇದರಲ್ಲಿ 20 ಸ್ಲೀಪರ್ ಕ್ಲಾಸ್ ಬೋಗಿಗಳು ಮತ್ತು 2 ಎಸ್ಎಲ್ಆರ್/ಡಿ…














