Author: kannadanewsnow09

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜಕೀಯ ನಿವೃತ್ತಿಯಾಗಲಿದ್ದಾರೆ. ಅವರ ಮುಂದಿನ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ ಎಂಬುದಾಗಿ ಶಾಸಕ ಯತೀಂದ್ರ ತಿಳಿಸಿದ್ದರು. ಇಂತಹ ಪಕ್ಷಕ್ಕೆ ಮುಜುಗರ ಉಂಟು ಮಾಡುವಂತ ಹೇಳಿಕೆ ನೀಡಿದಂತ ಅವರ ವಿರುದ್ಧ ಶಿಸ್ತು ಕ್ರಮದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ಅಂತ ಮುಂದೆ ಓದಿ. ಈ ಕುರಿತು ಮಾಧ್ಯಮದವರು ಯತೀಂದ್ರ ಅವರ ಹೇಳಿಕೆ ಹಾಗೂ ಬೇರೆ ಶಾಸಕರ ವಿರುದ್ಧ ಕೈಗೊಳ್ಳುವ ಶಿಸ್ತು ಕ್ರಮ ಅವರ ವಿರುದ್ಧ ಯಾಕೆ ತೆಗೆದುಕೊಳ್ಳುತ್ತಿಲ್ಲ ಎಂದು ಕೇಳಿದಾಗ, “ಈ ಸಂದರ್ಭದಲ್ಲಿ ನಾನು ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸೂಕ್ತ ಸಮಯದಲ್ಲಿ ನಾನು ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು. ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 6 ಸಾವಿರ ಮತಗಳನ್ನು ತಿರುಚಲಾಗಿತ್ತು ಎಂದು ಎಸ್ಐಟಿ ದೃಢಪಡಿಸಿರುವ ಬಗ್ಗೆ ಕೇಳಿದಾಗ, “ಇದರಲ್ಲಿ ಯಾವುದೇ ಅನುಮಾನವಿಲ್ಲ. ದೂರವಾಣಿ ಸಂಖ್ಯೆಗಳ ಮೂಲಕ ಈ ಕೆಲಸ ಮಾಡಿದ್ದಾರೆ. ಈ ಬಗ್ಗೆ ಆ ಸಮಯದಲ್ಲೇ ಅಧಿಕಾರಿಗಳು ದೂರು ನೀಡಿದ್ದರು. ಈ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ”…

Read More

ಶಿವಮೊಗ್ಗ: ರಾಜ್ಯದಲ್ಲಿ ವಿನೂತನ ಪ್ರತಿಭಟನೆ ಎನ್ನುವಂತೆ, ಯೋಜನೆಯೊಂದನ್ನು ವಿರೋಧಿಸಿ ಜಾನುವಾರುಗಳ ಮೇಲೆ ದೀಪಾವಳಿ ಹಬ್ಬದ ಆಚರಣೆಯ ವೇಳೆಯಲ್ಲಿ ವಿರೋಧದ ಬರವಣಿಗೆ ಬರೆದು ಪ್ರತಿಭಟನೆ ನಡೆಸಲಾಗಿದೆ. ಅದೆಲ್ಲಿ ಅಂತ ಮುಂದೆ ಓದಿ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಶರಾವತಿ ಪಂಪ್ ಸ್ಟೋರೇಜ್ ಯೋಜನೆ ವಿರೋಧಿಸಿ ರೈತ ಮುಖಂಡ ದಿನೇಶ್ ಶಿರವಾಳ ನೇತೃತ್ವದಲ್ಲಿ ಕೆಲ ದಿನಗಳ ಹಿಂದೆ ಎಸಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಗೆ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದಂತ ವಿವಿಧ ಮುಖಂಡರು ಭಾಗಿಯಾಗಿ ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತ ಪಡಿಸಿದ್ದರು. ಈ ಪ್ರತಿಭಟನೆಯ ನಂತ್ರ ಶಿವಮೊಗ್ಗ ಜಿಲ್ಲಾ ರೈತ ಸಂಘದ ಅಧ್ಯಕ್ಷ ದಿನೇಶ್ ಶಿರವಾಳ ಅವರು ಅಕ್ಟೋಬರ್.29ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಮುಂದಿನ ನಡೆಯ ಬಗ್ಗೆ ವಿವಿಧ ಮಠಾಧೀಶರು, ಮುಖಂಡರ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದೆ. ಈ ಸಭೆಯಲ್ಲಿ ಶರಾವತಿ ಪಂಪ್ ಸ್ಟೋರೇಜ್ ವಿರೋಧದ ಮುಂದಿನ ನಡೆಯ ಬಗ್ಗೆ ನಿರ್ಧಾರ ಪ್ರಕಟಿಸುವುದಾಗಿಯೂ ತಿಳಿಸಿದ್ದರು. ಇದರ ನಡುವೆ ಮಲೆನಾಡಿನಲ್ಲಿ…

Read More

ನವದೆಹಲಿ: ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಐಟಿ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು, 2021 ಕ್ಕೆ ಕರಡು ತಿದ್ದುಪಡಿಗಳನ್ನು ಹೊರಡಿಸಿದೆ. ಇದು ವೇದಿಕೆಗಳು “ಸಂಶ್ಲೇಷಿತವಾಗಿ ರಚಿಸಲಾದ ವಿಷಯ”ವನ್ನು ಸ್ಪಷ್ಟವಾಗಿ ಗುರುತಿಸಲು ಮತ್ತು ಅದರ ರಚನೆಗೆ ಅನುಕೂಲವಾಗುವ ಸೇವೆಗಳಿಗೆ ಹೊಸ ತಾಂತ್ರಿಕ ಬಾಧ್ಯತೆಗಳನ್ನು ಪರಿಚಯಿಸಲು ಕಡ್ಡಾಯಗೊಳಿಸುತ್ತದೆ. ಪ್ರಸ್ತಾವಿತ ಬದಲಾವಣೆಗಳು “ಸಂಶ್ಲೇಷಿತವಾಗಿ ರಚಿಸಲಾದ ಮಾಹಿತಿ” ಯ ಸ್ಪಷ್ಟ ವ್ಯಾಖ್ಯಾನವನ್ನು ಪರಿಚಯಿಸುತ್ತವೆ ಮತ್ತು ವೇದಿಕೆಗಳು, ವಿಶೇಷವಾಗಿ ಪ್ರಮುಖ ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು (SSMI ಗಳು), ಮೆಟಾಡೇಟಾ ಮತ್ತು ಗೋಚರ ಅಥವಾ ಶ್ರವ್ಯ ಗುರುತುಗಳ ಮೂಲಕ ಅಂತಹ ವಿಷಯವನ್ನು ಲೇಬಲ್ ಮಾಡುವ ಅಗತ್ಯವಿದೆ. ಐಟಿ ನಿಯಮಗಳ ಅಡಿಯಲ್ಲಿ, SSMI ಗಳು ಭಾರತದಲ್ಲಿ 5 ಮಿಲಿಯನ್‌ಗಿಂತಲೂ ಹೆಚ್ಚು ನೋಂದಾಯಿತ ಬಳಕೆದಾರರನ್ನು ಹೊಂದಿರುವ ವೇದಿಕೆಗಳಾಗಿವೆ, ಉದಾಹರಣೆಗೆ ಫೇಸ್‌ಬುಕ್, ಯೂಟ್ಯೂಬ್, ಸ್ನ್ಯಾಪ್‌ಚಾಟ್, ಇತ್ಯಾದಿ. ಪ್ರಸ್ತಾವಿತ ನಿಯಮವು AI ವಿಷಯ ರಚನೆಯನ್ನು ಸುಗಮಗೊಳಿಸುವ ಸಾಮಾಜಿಕ ಮಾಧ್ಯಮ ವೇದಿಕೆಗಳು ಮಾಹಿತಿಯನ್ನು “ಶಾಶ್ವತ ಅನನ್ಯ ಮೆಟಾಡೇಟಾ ಅಥವಾ ಗುರುತಿಸುವಿಕೆಯೊಂದಿಗೆ…

Read More

ಧಾರವಾಡ: ರಾಜ್ಯ ಸರ್ಕಾರದಲ್ಲಿ ಸಿಎಂ ಬದಲಾವಣೆಯಾಗಲಿದೆ. ಆ ವಿಷಯವನ್ನು ಬೇರೆಡೆ ತಿರುಗಿಸಲು ಆರ್‌ಎಸ್‌ಎಸ್‌ ವಿಷಯವನ್ನು ತರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ, ಶಿಕ್ಷಣ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳಲ್ಲೂ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದ್ದು, ಖಾಲಿ ಡಬ್ಬ ಶಬ್ದ ಮಾಡುವಂತೆ ಮಾಡುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿ ಹಣ ಬಿಡುಗಡೆ ಮಾಡಿ, ಟೆಂಡರ್‌ ಮಾಡಿದ ಕಾಮಗಾರಿಗಳನ್ನು ಕಾಂಗ್ರೆಸ್‌ ನಾಯಕರು ಉದ್ಘಾಟಿಸುತ್ತಿದ್ದಾರೆ. ಆರ್ಥಿಕ ಇಲಾಖೆಯಲ್ಲಿ ಯಾವ ಯೋಜನೆಗೂ ಹಣವಿಲ್ಲ. ಬಜೆಟ್‌ನಲ್ಲಿ ಒಟ್ಟು ಅನುದಾನ 80 ಸಾವಿರ ಕೋಟಿ ರೂ. ಇದ್ದರೆ, ಗ್ಯಾರಂಟಿಗಳಿಗೆ 60-70 ಸಾವಿರ ಕೋಟಿ ರೂ. ಆಗುತ್ತದೆ. ಉಳಿದ 10 ಸಾವಿರ ಕೋಟಿ ರೂ. ನಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ಸಚಿವರ ಮನೆಯ ದುರಸ್ತಿ, ಕಾಂಗ್ರೆಸ್‌ ಸಮಾವೇಶಕ್ಕೆ, ಜಾತಿ ಗಣತಿಗೆ ಖರ್ಚು ಮಾಡುತ್ತಿದ್ದಾರೆ. ಈ ಸರ್ಕಾರ ಪಾಪರ್‌ ಆಗಿದೆ ಎಂದರು. ಮಾಧ್ಯಮಗಳಲ್ಲಿ ರಸ್ತೆ ಗುಂಡಿಗಳ ಬಗ್ಗೆ ಸುದ್ದಿ ಬರುತ್ತಿದೆ. ಆ ವಿಚಾರವನ್ನು ಬೇರೆ ಕಡೆ ತಿರುಗಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಆರ್‌ಎಸ್‌ಎಸ್‌…

Read More

ಬೆಂಗಳೂರು: ಬೆಂಗಳೂರು ಹಾಗೂ ಮುಂಬೈ ನಡುವೆ ಸೂಪರ್ ಫಾಸ್ಟ್ ಹೊಸ ರೈಲಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಮೂಲಕ ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಸಂಬಂಧ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪ್ರಹ್ಲಾದ್ ಜೋಶಿಯವರಿಗೆ ಪತ್ರ ಬರೆದು ತಿಳಿಸಿದ್ದಾರೆ. ಅದರಲ್ಲಿ ದಿನಾಂಕ 16-10-2025ರಂದು ಬೆಂಗಳೂರು ಮತ್ತು ಮುಂಬೈಗೆ ವಯಾ ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿಗೆ ಸಾರ್ವಜನಿಕರ ಅನುಕೂಲಕ್ಕಾಗಿ ರೈಲು ಬಿಡುವಂತೆ ಮನವಿ ಮಾಡಿದ್ದೀರಿ ಎಂದಿದ್ದಾರೆ. ನಿಮ್ಮ ಮನವಿಯನ್ನು ಪರಿಗಣಿಸಿ, ಬೆಂಗಳೂರು ಟು ಮುಂಬೈ ವಯಾ ದಾವಣಗೆರೆ, ಹುಬ್ಬಳ್ಳಿ ಮತ್ತು ಬೆಳಗಾವಿ ನಡುವೆ ನೂತನ ರೈಲು ಸಂಚಾರಕ್ಕೆ ಅನುಮೋದನೆ ನೀಡಿರುವುದಾಗಿ ತಿಳಿಸಿದ್ದಾರೆ. ಒಟ್ಟಾರೆಯಾಗಿ ಬೆಂಗಳೂರು ಮುಂಬಯಿ ನೂತನ ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ರೈಲ್ವೆ ಇಲಾಖೆ ಅನುಮೋದನೆಯನ್ನು ನೀಡಲಾಗಿದೆ. ತುಮಕೂರು, ದಾವಣಗೆರೆ,‌ ಹಾವೇರಿ,‌ ಹುಬ್ಬಳ್ಳಿ ಧಾರವಾಡ ಹಾಗೂ ಬೆಳಗಾವಿ ಮೂಲಕ ಮುಂಬಯಿಗೆ ನೂತನ ರೈಲು ತಲುಪಲಿದೆ. ಹೊಸ ರೈಲು ಸಂಚಾರದ ವೇಳಾಪಟ್ಟಿ ಶೀಘ್ರದಲ್ಲೇ ಬಿಡುಗಡೆಯನ್ನು ರೈಲ್ವೆ ಇಲಾಖೆ…

Read More

ಬೆಂಗಳೂರು: ಪ್ರಯಾಣಿಕರ ಅನುಕೂಲತೆ ಮತ್ತು ಡಿಜಿಟಲ್ ಪ್ರವೇಶವನ್ನು ಹೆಚ್ಚಿಸುವ ಪ್ರಮುಖ ಹೆಜ್ಜೆಯಾಗಿ, ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ನಿಲ್ದಾಣ ಸಂಚರಣೆಗೆ QR ಆಧಾರಿತ ವೆಬ್ ಅಪ್ಲಿಕೇಶನ್ “ನಮ್ಮ ನಕ್ಷೆ” ಅನ್ನು ವಿಭಾಗದಾದ್ಯಂತ 14 ನಿಲ್ದಾಣಗಳಿಗೆ ವಿಸ್ತರಿಸಿದೆ. ಆರಂಭದಲ್ಲಿ ಕೆಎಸ್ಆರ್ ಬೆಂಗಳೂರು ನಿಲ್ದಾಣದಲ್ಲಿ ಪ್ರಾರಂಭಿಸಲಾದ ನಮ್ಮ ನಕ್ಷೆ ಸೌಲಭ್ಯವು ಈಗ SMVT ಬೆಂಗಳೂರು, ಬಂಗಾರಪೇಟೆ ಜಂಕ್ಷನ್, ಕೆಂಗೇರಿ, ಕೃಷ್ಣರಾಜಪುರಂ, ಯಲಹಂಕ ಜಂಕ್ಷನ್, ಕರ್ಮೇಲಾರಾಮ್, ಹೊಸೂರು, ಹಿಂದೂಪುರ, ಮಂಡ್ಯ, ರಾಮನಗರ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ, ತುಮಕೂರು ಮತ್ತು ವೈಟ್‌ಫೀಲ್ಡ್ ನಿಲ್ದಾಣಗಳಲ್ಲಿ ಲಭ್ಯವಿದೆ. www.nammanakshe.com ನಲ್ಲಿ ಹೋಸ್ಟ್ ಮಾಡಲಾದ ವೆಬ್ ಆಧಾರಿತ ಅಪ್ಲಿಕೇಶನ್, ನಿಲ್ದಾಣದ ಆವರಣದಲ್ಲಿ ಪ್ರದರ್ಶಿಸಲಾದ QR ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಪ್ರವೇಶಿಸಬಹುದಾದ ಸಂವಾದಾತ್ಮಕ ಡಿಜಿಟಲ್ ನಕ್ಷೆಯ ಮೂಲಕ ನೈಜ-ಸಮಯದ, ನಿಲ್ದಾಣ-ನಿರ್ದಿಷ್ಟ ಸಂಚರಣೆ ಸಹಾಯವನ್ನು ಒದಗಿಸುತ್ತದೆ. ಪ್ರಯಾಣಿಕರು ಪ್ಲಾಟ್‌ಫಾರ್ಮ್‌ಗಳು, ನಿರ್ಗಮನಗಳು, ಪಾದಚಾರಿ ಮೇಲ್ಸೇತುವೆಗಳು, ಸಬ್‌ವೇಗಳು, ಕಾಯುವ ಸಭಾಂಗಣಗಳು, ವಿಶ್ರಾಂತಿ ಕೊಠಡಿಗಳು, ಲಿಫ್ಟ್‌ಗಳು, ಎಸ್ಕಲೇಟರ್‌ಗಳು, ರ‍್ಯಾಂಪ್‌ಗಳು, ಕುಡಿಯುವ ನೀರಿನ ಬಿಂದುಗಳು…

Read More

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಬೈಕ್, ಶಾಲಾ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುದ ಚಿಂತಾಮಣಿ ತಾಲ್ಲೂಕಿನ ಬುರುಡುಗುಂಟೆ ಬಳಿಯಲ್ಲಿ ಈ ಘಟನೆ ನಡೆದಿದೆ. ಶಾಲಾ ವಾಹನ ಬೈಕಿಗೆ ಡಿಕ್ಕಿಯಾದ ಪರಿಣಾಮ ಒಂದೇ ಬೈಕಿನಲ್ಲಿ ತೆರಳುತ್ತಿದ್ದಂತ ಮೂವರು ಮಕ್ಕಳು ಸೇರಿದಂತೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಶಿವಮೊಗ್ಗ: ಜಿಲ್ಲಾ ರೈತ ಸಂಘದ ಅಧ್ಯಕ್ಷ ದಿನೇಶ್ ಶಿರವಾಳ ದೀಪಾವಳಿ ಗೋಪೂಜೆ ಸಂದರ್ಭದಲ್ಲಿ ಸಾಗರದ ತಮ್ಮ ಮನೆಯ ಜಾನುವಾರುಗಳ ಮೇಲೆ ಶರಾವತಿ ಪಂಪ್ಡ್ ಸ್ಟೋರೇಜ್ ವಿರೋಧಿಸಿ ಹೇಳಿಕೆಗಳನ್ನು ಬರೆಯುವ ಮೂಲಕ ಗಮನ ಸೆಳೆದಿದ್ದಾರೆ. ಮಲೆನಾಡು ಭಾಗದಲ್ಲಿ ಗೋಪೂಜೆ ಸಂದರ್ಭದಲ್ಲಿ ಗೋವುಗಳನ್ನು ಶೃಂಗರಿಸುವುದು ನಡೆದುಕೊಂಡು ಬಂದ ಪದ್ದತಿಯಾಗಿದೆ. ದಿನೇಶ್ ಶಿರವಾಳ ಅವರು ತಮ್ಮ ಗೋವಿನ ಮೇಲೆ ಬಣ್ಣದ ಚಿತ್ತಾರದ ಬದಲು ಶರಾವತಿ ಉಳಿಸಿ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬೇಡ ಎಂಬಿತ್ಯಾದಿ ಘೋಷಣೆಗಳನ್ನು ಬರೆಯುವ ಮೂಲಕ ವಿಶೇಷ ರೀತಿಯಲ್ಲಿ ರಾಜ್ಯ ಸರ್ಕಾರದ ಪಂಪ್ಡ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವಂತ ಅವರು, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡಲು ಈಗಾಗಲೆ ರಾಜ್ಯ ಸರ್ಕಾರಕ್ಕೆ ರೈತ ಸಂಘದ ನೇತೃತ್ವದಲ್ಲಿ ೧೨ ದಿನಗಳ ನಿರಂತರ ಪ್ರತಿಭಟನೆ ನಡೆಸಿ ಒತ್ತಾಯ ಮಾಡಿದ್ದೇವೆ. ರಾಜ್ಯದ ಬೇರೆಬೇರೆ ಭಾಗಗಳಿಂದ ವಿವಿಧ ಮಠಾಧೀಶರು, ಚುನಾಯಿತ ಪ್ರತಿನಿಧಿಗಳು, ಪರಿಸರ ಹೋರಾಟಗಾರರು, ಬೆಂಬಲ ನೀಡಿದ್ದಾರೆ. ಯೋಜನೆ ಕೈಬಿಡುವವರೆಗೂ ಹೋರಾಟ ಒಂದಿಲ್ಲೊಂದು ರೀತಿಯಲ್ಲಿ…

Read More

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿಗಳ ಕುರ್ಚಿಯೂ ಖಾಲಿ ಇಲ್ಲ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯೂ ಖಾಲಿ ಇಲ್ಲ. ಈ ಬಗ್ಗೆ ಚರ್ಚೆಯೇ ಅಪ್ರಸ್ತುತ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ವಿಧಾನಪರಿಷತ್ ಸದಸ್ಯರಾದ ಯತೀಂದ್ರ ಅವರ ಮಾತುಗಳನ್ನು ಮುಖ್ಯಮಂತ್ರಿಗಳ ಧ್ವನಿ ಎಂಬಂತೆ ಬಿಂಬಿಸುವುದು ಸರಿಯಲ್ಲ. ಈಗಾಗಲೇ ಯತೀಂದ್ರ ಅವರೇ ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದು, ತಾವು ಏನೂ ಹೇಳುವ ಅಗತ್ಯವಿಲ್ಲ ಎಂದರು. ಯಾವುದೇ ಜಾತಿ, ಮತ, ಧರ್ಮದ ಆಧಾರದ ಮೇಲೆ ನಾಯಕತ್ವ ನಿರ್ಧಾರ ಆಗುವುದಿಲ್ಲ ಎಂದ ಈಶ್ವರ ಖಂಡ್ರೆ, ಪಕ್ಷ 2028ರಲ್ಲೂ ಮರಳಿ ಅಧಿಕಾರಕ್ಕೆ ಬರಲಿದ್ದು, ಆಗ ಪಕ್ಷದ ವರಿಷ್ಠರು, ಸೂಕ್ತ ಸಂದರ್ಭದಲ್ಲಿ, ಎಲ್ಲ ಜಾತಿ, ಸಮುದಾಯದವರ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳುತ್ತಾರೆ ಎಂದರು. ನವೆಂಬರ್ ಕ್ರಾಂತಿ ಎಂಬುದು ಸಂಪೂರ್ಣ ಭ್ರಾಂತಿ, ರಾಜ್ಯ ಸರ್ಕಾರ ಮುಖ್ಯಮಂತ್ರಿ…

Read More

ಬೆಂಗಳೂರು: ಐತಿಹಾಸಿಕ ಶಕ್ತಿ ದೇವತೆ ಹಾಸನಾಂಬೆ ಸನ್ನಿಧಿಯಲ್ಲಿ ಈ ವರ್ಷ ಸಾರ್ವಜನಿಕರ ದರ್ಶನದ ಸಂಖ್ಯೆ ಹೊಸ ದಾಖಲೆ ಬರೆದಿದೆ. ಕಳೆದ 13 ದಿನಗಳಲ್ಲಿ ಬರೋಬ್ಬರಿ 26 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಶಕ್ತಿ ದೇವತೆಯ ದರ್ಶನ ಪಡೆದಿದ್ದಾರೆ. ಈ ಭಾರಿ ಜನಸಾಗರಕ್ಕೆ ಮುಖ್ಯ ಕಾರಣ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ ಎಂದು ವಿಧಾನ ಪರಿಷತ್ ಶಾಸಕರು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು ಆಗಿರುವ ದಿನೇಶ್ ಗೂಳಿಗೌಡ ಬಣ್ಣಿಸಿದ್ದಾರೆ. ಮಹಿಳಾ ಭಕ್ತರು ಅಪಾರ-ಇದು ಶಕ್ತಿ ಯೋಜನೆ ಎಫೆಕ್ಟ್: ರಾಜ್ಯ ಸರ್ಕಾರವು ಘೋಷಿಸಿದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ‘ಶಕ್ತಿ’ ಯೋಜನೆ ಜಾರಿಯಾದ ನಂತರ, ರಾಜ್ಯದ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದು, ಇದು ಎಲ್ಲ ಧಾರ್ಮಿಕ ಕೇಂದ್ರಗಳ ಆದಾಯ ಮತ್ತು ಭಕ್ತರ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಿದೆ. ಇದಕ್ಕೆ ಈಗ ಹಾಸನಾಂಬೆಯ ದರ್ಶನವೇ ಸಾಕ್ಷಿ. ಪ್ರತಿ ವರ್ಷ ಹಾಸನಾಮಿ ದರ್ಶನಕ್ಕೆ ನಾಲ್ಕರಿಂದ ಐದು ಲಕ್ಷ ಜನರಷ್ಟೇ ಸೇರುತ್ತಿದ್ದರು. ಆದರೆ ರಾಜ್ಯ ಸರ್ಕಾರ ಉಚಿತವಾಗಿ…

Read More