Author: kannadanewsnow09

ಬೆಂಗಳೂರು: ಇಂದು ಐತಿಹಾಸಿಕ ಬೆಂಗಳೂರು ದ್ರೌಪದಮ್ಮ ಕರಗ ಶಕ್ತ್ಯೋತ್ಸವ ಮಧ್ಯರಾತ್ರಿ ನಡೆಯಲಿದೆ. ಇದಕ್ಕಾಗಿ ತಿಗಳರಪೇಟೆ, ಚಿಕ್ಕಪೇಟೆ, ಕಾರ್ಪೋರೇಷನ್ ಸೇರಿದಂತೆ ಹಳಏ ಬೆಂಗಳೂರು ಪ್ರದೇಶವನ್ನು ಸಿಂಗಾರಗೊಳಿಸಲಾಗಿದೆ. ಪ್ರತಿ ವರ್ಷ ಚೈತ್ರ ಮಾಸದಂದು ನಡೆಯಲಿರುವಂ ಬೆಂಗಳೂರು ಕರಗ ಶಕ್ತ್ಯೋತ್ಸವವು ಮಂಗಳವಾರ ಮಧ್ಯರಾತ್ರಿ 12.30ರಿಂದ ಆರಂಭಗೊಳ್ಳಲಿದೆ. ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಆರಂಭವಾಗುವ ಕರಗ ಮೆರವಣಿಗೆ, ನಗರದ ವಿವಿಧ ಬಡಾವಣೆಗಳಿಗೆ ತೆರಳಿ, ಬುಧವಾರ ಮುಂಜಾನೆ ವಾಪಾಸ್ಸು ಧರ್ಮರಾಯನ ಸ್ವಾಮಿ ದೇವಸ್ಥಾನಕ್ಕೆ ಬಂದು ಸೇರಲಿದೆ. ಕರಗೋತ್ಸವಕ್ಕಾಗಿ ಕರಗ ವ್ಯವಸ್ಥಾಪನಾ ಸಮಿತಿ, ಬಿಬಿಎಂಪಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಬಾರಿಯ ಕರಗಕ್ಕೆ 8 ಲಕ್ಷಕ್ಕೂ ಹೆಚ್ಚಿನ ಭಕ್ತರು ಪಾಲ್ಗೊಳ್ಳೋ ನಿರೀಕ್ಷೆಯಿದೆ. ಹೀಗಿದೆ ಕರಗ ಸಾಗುವ ಮಾರ್ಗ ಮೊದಲಿಗೆ ಧರ್ಮರಾಯ ಸ್ವಾಮಿ ದೇವಸ್ಥಾನ ಪ್ರದಕ್ಷಿಣೆ ಹಾಕಿ, ದ್ರೌಪದಮ್ಮ ಕರಗ ಹೊರಡಲಿದೆ. ಅಲ್ಲಿಂದ ಕುಂಬಾರಪೇಟೆ ರಸ್ತೆ ಮೂಲಕ ಸಾಗಿ, ರಾಜ ಮಾರುಕಟ್ಟೆ ವೃತ್ತ, ಕೆ ಆರ್ ಮಾರುಕಟ್ಟೆ ವೃತ್ತದ ಮೂಲಕ ಸಾಗಲಿದೆ. ನಂತ್ರ ಕೋಟೆ ಆಂಜನೇಯ ಸ್ವಾಮಿ ದೇವಾಲಯಕ್ಕೆ ತೆರಳಿ, ಪೂಜೆ…

Read More

ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಚುನಾವಣೆ-2024ರ ಸಂಬಂಧ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾದಿ ವ್ಯಾಪ್ತಿಯಲ್ಲಿ 3 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರಲಿದ್ದು, ಆಯಾ ಲೋಕಸಭಾ ಕ್ಷೇತ್ರಗಳಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾದ ಮತದಾರರಿಗಾಗಿ(Voters on Election duty) ಮತದಾನ ಸೌಲಭ್ಯ ಕೇಂದ್ರ(Voter Facilitation Centre-VFC) ಸ್ಥಾಪಿಸಲಾಗಿದ್ದು, ದಿನಾಂಕ: 25-04-2024 ರವರೆಗೆ ಮತದಾನ ಮಾಡಲು ಅವಕಾಶ ನೀಡಲಾಗಿದೆ. ತರಬೇತಿಯ ವೇಳೆ ನಮೂನೆ 12ರ ಮೂಲಕ ಕೊರಿಕೆ ಸಲ್ಲಿಸಿದ್ದ ಹಾಗೂ ಎರಡನೇ ಹಂತದ ಮತದಾನವಿರುವ ಜಿಲ್ಲಾ ಚುನಾವಣಾಧಿಕಗಳು ಅನುಮೋದಿಸಿರುವ ಚುನಾವಣಾ ಕರ್ತವ್ಯದಲ್ಲಿ ನಿರತರಾದ ಮತದಾರರಿಗೆ ದಿನಾಂಕ: 22-04-2024 ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಇನ್ನೂ ಮೂರು ದಿನಗಳ ಕಾಲ ಮತದಾನ ಸೌಲಭ್ಯ ಕೇಂದ್ರಗಳಿಗೆ ತೆರಳಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಮನೆಗೆ ಅಂಚೆ ಮೂಲಕ ಅಂಚೆ ಮತಪತ್ರಗಳನ್ನು ಕಳುಹಿಸುವುದಿಲ್ಲ, ಖುದ್ದಾಗಿ ಮತದಾನ ಸೇವಾ ಕೆಂದ್ರಗಳಿಗೆ ತೆರಳಿ ಮತ ಚಲಾಯಿಸಬೇಕು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಂಚೆ ಮತ ಪತ್ರಗಳನ್ನು ಅಂಚೆ ಮೂಲಕ…

Read More

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ‌ಖರ್ಗೆಯವರು ನೀಡುವ ಗ್ಯಾರೆಂಟಿ ಕಾರ್ಡ್ ಗಳಿಗೆ ಯಾವುದೇ ಬೆಲೆ ಇಲ್ಲ. ಕಾಂಗ್ರೆಸ್ ನವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಚುನಾವಣೆ ಮುಗಿದ ಮೇಲ ಅವರು ಮನೆಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಹಾವೇರಿ ವಿಧಾನಸಭಾ ಕ್ಚೇತ್ರದ ಅಗಡಿ, ಕಾಟೇನಹಳ್ಳಿ, ಕಳ್ಳಿಹಾಳ, ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಹುಂಡೇನಹಳ್ಳಿ,ಮೋಟೆಬೆನ್ನೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದರು. ಮಲ್ಲಿಕಾರ್ಜುನ ಖರ್ಗೆಯವರು ಕೊಡುವ ಗ್ಯಾರೆಂಟಿಗೆ ಯಾವ ಕಿಮ್ಮತ್ತಿದೆ. ಅವರು ಯಾರು ಗ್ಯಾರೆಂಟಿ ಕೊಡಲಿಕ್ಕೆ? ಚುನಾವಣೆ ಆದ ಮೇಲೆ ಅವರು ಅಧಿಕಾರಕ್ಕೆ ಬರುವುದಿಲ್ಲ. ಅವರೂ ಮನೆಗೆ ಹೋಗುತ್ತಾರೆ. ಕಾಂಗ್ರೆಸ್ ನವರು ಸ್ಪರ್ಧೆ ಮಾಡಿರುವುದೇ 200 ಸ್ಥಾನಗಳಲ್ಲಿ ಲೋಕಸಭೆಯಲ್ಲಿ ಬಹುಮತಕ್ಕೆ 272 ಸ್ಥಾನಗಳು ಬೇಕು. ಹೀಗಾಗಿ ಕಾಂಗ್ರೆಸ್ ಕೊಡುವ ಗ್ಯಾರೆಂಟಿ ಕಾರ್ಡ್ ಗಳಿಗೆ ಕಿಮ್ಮತ್ತಿಲ್ಲ. ಅವುಗಳನ್ನು ಹರಿದು ಹಾಕಿ ಎಂದು ಹೇಳಿದರು. ಈ ಚುನಾವಣೆಯಲ್ಲಿ ಪಂಚಾಯತಿ ಮೇಂಬರ್, ಎಂಎಲ್ ಎ…

Read More

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವರಿಷ್ಠರ ಮನವೊಲಿಕೆಗೂ ಬಗ್ಗದೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಕಣಕ್ಕೆ ಇಳಿದಿದ್ದರು. ಇದೀಗ ಅವರಿಗೆ ಬಿಜೆಪಿ ಶಾಕ್ ನೀಡಿದೆ. ಅದೇ ಬಿಜೆಪಿ ಪಕ್ಷದಿಂದ 6 ವರ್ಷ ಉಚ್ಛಾಟನೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಇಂದು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ ಎಂಬುದಾಗಿ ಕೆ.ಎಸ್ ಈಶ್ವರಪ್ಪಗೆ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿದಂ ಉಚ್ಚಾಟಿಸಲಾಗಿದೆ ಎಂದಿದ್ದಾರೆ.

Read More

ಬೆಂಗಳೂರು: ಹುಬ್ಬಳ್ಳಿಯಲ್ಲಿ ಮುಸ್ಲೀಂ ಯುವಕನಿಂದ ನೇಹಾ ಹಿರೇಮಠ ಬರ್ಬರವಾಗಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸೋದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದರು. ಅಲ್ಲದೇ ವಿಶೇಷ ನ್ಯಾಯಾಲಯ ಸ್ಥಾಪಿಸಿ ವಿಚಾರಣೆ ನಡೆಸೋದಾಗಿ ತಿಳಿಸಿದ್ದರು. ಅದರಂತೆ ರಾಜ್ಯ ಸರ್ಕಾರ ನೇಹಾ ಹತ್ಯೆ ಪ್ರಕರಣದ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಿ ಆದೇಶಿಸಿದೆ. ಈ ಕುರಿತಂತೆ ಸಚಿವ ಹೆಚ್.ಕೆ ಪಾಟೀಲ್ ಅವರು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಕುಮಾರಿ ನೇಹಾ ಹಿರೇಮಠ ಅವರ ಹೀನಾಯ ಹತ್ಯೆ ಪ್ರಕರಮದಲ್ಲಿ ಕರ್ನಾಟಕ ಸರ್ಕಾರವು ಪ್ರಕರಣದಲ್ಲಿ ದಾಖಲಾಗಿರುವ ಎಫ್ಐಆರ್ ವರದಿಯ ಆಧಾರದ ಮೇಲೆ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಜೊತೆಗೆ ಚರ್ಚಿಸಿದ್ದೇನೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲು ಸರ್ಕಾರವು ಉದ್ದೇಶಿಸಿದೆ. ಸರ್ವೋಚ್ಛ ನ್ಯಾಯಾಲಯವು ಮಹಿಳೆಯರ ವಿರುದ್ಧದ ಹೀನಾಯ ಅಪರಾಧ ಪ್ರಕರಣಗಳಲ್ಲಿ ನೀಡಿರುವ ಮಾರ್ಗದರ್ಶನಗಳನ್ನು ಕೂಲಕುಂಷವಾಗಿ…

Read More

ಕಲಬುರ್ಗಿ: ರಾಜ್ಯ ಸರ್ಕಾರ ಜನ ಪರ ಐದು ಗ್ಯಾರೆಂಟಿ ಯೋಜನೆಗಳು ಬಿಜೆಪಿಯವರಿಗೆ ಅಪಥ್ಯವಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಪಾದಿಸಿದರು. ಕಲಬುರಗಿ ನಗರದ ಸುಂದರ ನಗರದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರವಾಗಿ ಮತಯಾಚನೆ ಮಾಡಿ ಅವರು ಮಾತನಾಡುತ್ತಿದ್ದರು. ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಬಿಜೆಪಿ ಓ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಮೂದಲಿಸುತ್ತಿದೆ. ಅವರಿಗೆ ಜನರು ಆರ್ಥಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ದಿ ಹೊಂದುವುದು ಬೇಕಿಲ್ಲ. ಯಾವುದೇ ಅಭಿವೃದ್ದಿ ಮಾಡದ ಉಮೇಶ್ ಜಾಧವ್ ಅವರು ಈ ಸಲ ಚುನಾವಣೆ ನಿಂತಿದ್ದಾರೆ ಅವರ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ನಿಂತಿದ್ದಾರೆ. ಕಲಬುರಗಿ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು. ರೈತರಿಗೆ ಬೆಂಬಲ ಬೆಲೆ, ಯುವಕರಿಗೆ ತರಬೇತಿ, ಕೇಂದ್ರದ ಮೂವತ್ತು ಲಕ್ಷ ಹುದ್ದೆ ಹಾಗೂ ರಾಜ್ಯದ ಎರಡುವರೆ ಲಕ್ಷ…

Read More

ಬೆಳಗಾವಿ: ದಿನೇ ದಿನೇ ಕೋಮುಸೌಹಾರ್ದತೆಯನ್ನು ಕೆಡಿಸುವಂತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಜಿಲ್ಲೆಯಲ್ಲಿ ಇಂದು ಮಹಿಳೆಯೊಬ್ಬರನ್ನು ಮುಸ್ಲೀಂ ಮತಾಂತರಕ್ಕೆ ಯತ್ನಿಸಿದಂತ ಘಟನೆ ನಡೆದಿದೆ. ಅಲ್ಲದೇ ಈ ಸಂಬಂಧ ದೂರು ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ ಮುಸ್ಲೀಂ ಮತಾಂತರಕ್ಕೆ ಮಹಿಳೆಯೊಬ್ಬರನ್ನು ಯತ್ನಿಸಿದಂತ ಘಟನೆ ನಡೆದಿದೆ. ವಿಷಯ ತಿಳಿದು ಮಹಿಳೆಯ ನಿವಾಸಕ್ಕೆ ಬಿಜೆಪಿ ಮುಖಂಡರು ಭೇಟಿ ನೀಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್, ಮಾಜಿ ಶಾಸಕ ಸಂಜಯ್ ಪಾಟೀಲ್, ವಿರೂಪಾಕ್ಷ ಮಾಮನಿ ಸೇರಿದಂತೆ ಸ್ಛಳೀಯ ನಾಯಕರು ಭೇಟಿ ನೀಡಿ, ಸಂತ್ರಸ್ತ ಮಹಿಳೆಗೆ ಧೈರ್ಯ ತುಂಬಿ, ಸಾಂತ್ವಾನ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಮಹಿಳೆಯ ಕುಟುಂಬಸ್ಥರು ತಮಗೆ ಜೀವ ಭಯವಿದೆ. ರಕ್ಷಣೆ ಕೊಡಿಸುವಂತೆ ಕೋರಿ ಕೊಂಡಿದೆ. ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ. https://kannadanewsnow.com/kannada/muslim-population-is-decreasing-in-islamic-countries-and-increasing-rapidly-in-india-bommai/ https://kannadanewsnow.com/kannada/lok-sabha-elections-how-to-download-voter-slip-on-mobile-heres-the-information/

Read More

ಹಾವೇರಿ: ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿ ಕಾಲೇಜು ಯುವತಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಹಾವೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಿಂದ ಮುಸ್ಲಿಮರನ್ನು ಓಡಿಸಲು ಹುನ್ನಾರ ನಡೆದಿದೆ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇಡೀ ಜಗತ್ತಿನಲ್ಲಿ ಎಲ್ಲಾದರೂ ಮುಸ್ಲಿಂಮರು ಸುರಕ್ಷತೆಯಿಂದ ಇದ್ದರೆ ಅದು ಭಾರತದಲ್ಲಿ ಮಾತ್ರ. ಇದನ್ನು ಮೊದಲು ಡಿ.ಕೆ. ಶಿವಕುಮಾರ್ ಅರ್ಥ ಮಾಡಿಕೊಳ್ಳಲಿ‌. ಅವರ ಜನಸಂಖ್ಯೆ ಅತಿ ವೇಗವಾಗಿ ಬೆಳೆಯುತ್ತಿರುವುದು ಭಾರತ ದೇಶದಲ್ಲಿ ಮಾತ್ರ. ಇಸ್ಲಾಂ ದೇಶದಲ್ಲಿ ಇವರ ಜನಸಂಖ್ಯೆ ಕಡಿಮೆ ಆಗುತ್ತಿದೆ. ಡಿ.ಕೆ. ಶಿವಕುಮಾರ್ ಅವರು ಓಟಿನ ರಾಜಕಾರಣಕ್ಕಾಗಿ ತುಷ್ಟಿಕರಣಕ್ಕಾಗಿ ಹಾಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದರು. ಇನ್ನು ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಮಾಡ್ತಿದೆ ಎಂಬ ವಿಧಾನ ಪರಿಷತ್ ಸದಸ್ಯ ಬಿ…

Read More

ಬೆಂಗಳೂರು: ವಾಮಮರ್ಗದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಅಕ್ರಮಗಳನ್ನು ಎಸಗುತ್ತಿದೆ ಎಂದು ಜೆಡಿಎಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು ಸಹಿ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಮತದಾರರಿಗೆ ಹಂಚಲಾಗುತ್ತಿದೆ. ಈ ಮೂಲಕ ಮುಗ್ಧ ಮತದಾರರಿಗೆ ಆಮಿಷ ಒಡ್ಡಿ ಅವರನ್ನು ವಂಚಿಸಲಾಗುತ್ತಿದೆ ಎಂದು ಜೆಡಿಎಸ್ ಆರೋಪ ಮಾಡಿದೆ. ಮಾಜಿ ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಹಿರಿಯ ಮುಖಂಡ ಆರ್.ಪ್ರಕಾಶ್ ಅವರಿದ್ದ ನಾಯಕರ ನಿಯೋಗ ಕೇಂದ್ರೀಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ವಿರುದ್ಧ ದೂರು ನೀಡಿದೆ. ಪಾರದರ್ಶಕವಾಗಿ, ನಿರ್ಭೀತಿ, ಭ್ರಷ್ಟಾಚಾರ ರಹಿತವಾಗಿ ನಡೆಯಬೇಕಿದ್ದ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡುಗಳನ್ನು ಹಂಚುವ ಮೂಲಕ ಕಲುಷಿತಗೊಳಿಸಿ ಅಕ್ರಮ ನಡೆಸುತ್ತಿದೆ. ನ್ಯಾಯ ಪತ್ರ ಹೆಸರಿನಲ್ಲಿ ಐದು ಗ್ಯಾರಂಟಿ ಕಾರ್ಡುಗಳ ಮೇಲೆ ಸಹಿ ಮಾಡಿ ಮತದಾರರಿಗೆ ಹಂಚಿಕೆ ಮಾಡುತ್ತಿರುವುದು ಚುನಾವಣಾ ನೀತಿ…

Read More

ಬೆಂಗಳೂರು: ಬರ ಪರಿಹಾರದ ವಿಚಾರದಲ್ಲಿ ಕರ್ನಾಟಕವನ್ನ ಕಡೆಗಣಿಸಿದ್ದ ಕೇಂದ್ರ ಸರ್ಕಾರಕ್ಕೆ ಸುಪ್ರೀ ಕೋರ್ಟ್ ತೀರ್ಪಿನಿಂದ ತೀವ್ರ ಮುಖಭಂಗವಾಗಿದೆ ಎಂದು ಸರ್ಕಾರದ ಮುಖ್ಯ ವಕ್ತಾರರಾಗಿರುವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರಿಗೆ ಪ್ರತಿಕ್ತಿಯಿಸಿದ ಅವರು, ಇದು ಕರ್ನಾಟಕದ ನ್ಯಾಯಯುತ ಹೋರಾಟಕ್ಕೆ ಸಂದಿರುವ ಜಯ ಎಂದರು. ಒಂದು ರಾಜ್ಯ ಸುಪ್ರೀಂ ಕೋರ್ಟ್ ಮೂಲಕ ಬರ ಪರಿಹಾರ ಪಡೆಯುವ ಪರಿಸ್ಥಿತಿ ನಿರ್ಮಾಣಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಹೊಣೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ನಿಯಮಗಳನ್ನ ರಚಿಸಲಾಗಿದೆ. ಆದರೆ ಕೇಂದ್ರ ತಮಗಿಷ್ಟಬಂದಂತೆ ಬೇಕಾಬಿಟ್ಟಿಯಾಗಿ ನಡೆದುಕೊಳ್ತು. ಮೂರು ಬಾರಿ ರಾಜ್ಯದ ಬರ ಪರಿಸ್ಥಿತಿ ಕುರಿತು ವರದಿ ನೀಡಿದ್ವಿ. ಆದರೆ ಕೇಂದ್ರ ಸರ್ಕಾರ ಸ್ಪಂದಿಸಲಿಲ್ಲ. ಅನಿವಾರ್ಯವಾಗಿ ಕರ್ನಾಟಕ ಸರ್ಕಾರದ ಕಾನೂನು ಹೋರಾಟಕ್ಕೆ ಇಳಿಯಬೇಕಾಯಿತು. ಕೇಂದ್ರ ಸರ್ಕಾರದ ವಿರುದ್ಧ ಸಂಘರ್ಷಕ್ಕಿಳಿಯುವ ಉದ್ದೇಶದಿಂದ ನಾವು ಕೋರ್ಟ್ ಮೊರೆ ಹೋಗಿರಲಿಲ್ಲ. ಕರ್ನಾಟಕದ ರೈತರು ಜನಸಾಮಾನ್ಯರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾನೂನಾತ್ಮಕವಾಗಿ ಸಿಗಬೇಕಾದ ಪರಿಹಾರಕ್ಕಾಗಿ ನಾವು ಕೋರ್ಟ್ ಗೆ ಹೋಗಿದ್ವಿ. ರಾಜ್ಯ…

Read More