Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಲಾಗಿದೆ. ಸಿಎಂ ಸಿದ್ಧರಾಮಯ್ಯ ಹೇಳಿದಂತೆ ಗೌರವಧನವನ್ನು ರೂ.1000 ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26 ನೇ ಸಾಲಿನ ಆಯವ್ಯಯ ಭಾಷಣದ ಖಂಡಿಕೆ 148 ರಲ್ಲಿ “ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು 1000 ರೂ. ಹೆಚ್ಚಿಸಲಾಗುವುದು” ಎಂದು ಘೋಷಿಸಲಾಗಿದೆ ಎಂದಿದ್ದಾರೆ. ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರಿಂದ ಸ್ವೀಕೃತವಾದ ಏಕಕಡತದಲ್ಲಿ ಆಶಾ ಕಾಯಕರ್ತೆಯು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಸ್ಥಳೀಯ ಸಮುದಾಯದಿಂದ ಗುರುತಿಸಿ, ಆಯ್ಕೆ ಮಾಡಲಾಗಿದ್ದು, ಅವರ ಗ್ರಾಮ/ಪ್ರದೇಶದ ವ್ಯಾಪ್ತಿಯಲ್ಲಿ ಸಮುದಾಯದ ಆರೋಗ್ಯ ಸ್ಥಿತಿಯ ಸುಧಾರಣೆಗೆ ಆರೋಗ್ಯ ಸೇವೆಗಳನ್ನು ಪಡೆಯಲು ಮತ್ತು ಆರೋಗ್ಯ ಆರೈಕೆ ಚಟುವಟಿಕೆಗಳು ಹಾಗೂ ನಡವಳಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪ್ರತಿ 1000 ಜನಸಂಖ್ಯೆಗೆ ಹಾಗೂ…
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿತ್ತು. ಈ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ-2 ( Second PUC Exam-2) ನಡೆದಿತ್ತು. ಇಂತಹ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವನ್ನು ಇಂದು ಸಂಜೆ 5 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 ಕಳೆದ ಏಪ್ರಿಲ್.24ರಿಂದ ಮೇ.8ರವರೆಗೆ ನಡೆದಿತ್ತು. ಈ ಪರೀಕ್ಷೆಗೆ 1.57 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇಂತಹ ಪರೀಕ್ಷೆಯ ಫಲಿತಾಂಶವನ್ನು ಇಂದು ಸಂಜೆ 5 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಶಾಲಾ ಪರೀಕ್ಷೆ ಮಂಡಳಿಯು ತಿಳಿಸಿದೆ. ಅಂದಹಾಗೇ ಎಂಜನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕೆ ನಡೆದಿದ್ದಂತ ಸಿಇಟಿ ಪರೀಕ್ಷೆಯ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡಲು ಸಿಇಟಿ ಫಲಿತಾಂಶಕ್ಕೆ ಮುನ್ನವೇ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎನ್ನಲಾಗುತ್ತಿದೆ. https://kannadanewsnow.com/kannada/do-you-know-what-causes-the-color-of-your-mobile-phones-back-cover-to-change/ https://kannadanewsnow.com/kannada/bharjangi-fame-actress-rukmini-vijay-kumars-bag-and-diamond-ring-were-stolen-by-a-cab-driver-who-has-been-arrested/
ಕತ್ತಲೆ ಆವರಿಸಿದಾಗ ದುಷ್ಟ ಶಕ್ತಿಗಳು ಹೆಚ್ಚು ಸಕ್ರಿಯವಾಗಿರುತ್ತವೆ ಎಂದು ಹೇಳಲಾಗುತ್ತದೆ. ಕತ್ತಲೆ ನಮ್ಮನ್ನು ಆವರಿಸುವ ಅಮಾವಾಸ್ಯೆಯ ದಿನದಂದು ದುಷ್ಟ ಶಕ್ತಿಗಳ ಪ್ರಭಾವವೂ ಹೆಚ್ಚಾಗಿರುತ್ತದೆ. ಈ ದುಷ್ಟ ಶಕ್ತಿಗಳಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಅಮಾವಾಸ್ಯೆಯಂದು ಪಿತೃ ಪೂಜೆ ಮತ್ತು ಕುಲದೇವತೆಗಳ ಪೂಜೆಯನ್ನು ಮಾಡಬೇಕೆಂದು ನಮ್ಮ ಪೂರ್ವಜರು ಹೇಳಿದ್ದಾರೆ. ಇದರ ಆಧಾರದ ಮೇಲೆ, ನಿಮ್ಮ ಮನೆಯಲ್ಲಿ ದುಷ್ಟಶಕ್ತಿಗಳಿಂದ ಯಾವುದೇ ಸಮಸ್ಯೆಗಳಿದ್ದರೆ, ಅಥವಾ ನಿಮ್ಮ ಮನೆಯಲ್ಲಿರುವ ಜನರು ದುಷ್ಟಶಕ್ತಿಗಳಿಂದ ಪ್ರಭಾವಿತರಾಗಿದ್ದರೆ, ಮುಂಬರುವ ಅಮಾವಾಸ್ಯೆಯಂದು ಹನುಮಂತನ ಈ ಶಕ್ತಿಶಾಲಿ ಮಂತ್ರವನ್ನು ಪಠಿಸಿ. ನಿಮ್ಮ ದುಃಖವು ಶೀಘ್ರದಲ್ಲೇ ನಿಮ್ಮನ್ನು ಬಿಟ್ಟು ಹೋಗುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ…
ನವದೆಹಲಿ: ಕೇಂದ್ರ ಸರಕಾರ ಪ್ರಾಯೋಜಿತ PM E-ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರದ ಬೃಹತ್ ಕೈಗಾರಿಕಾ ಸಚಿವಾಲಯವು ಸ್ವೀಕರಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ನಗರ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಪಡಿಸುವ ಅಗತ್ಯವನ್ನು ಉಲ್ಲೇಖಿಸಿ ಕರ್ನಾಟಕದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸಲ್ಲಿರುವ ಮನವಿಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನವದೆಹಲಿಯ ಸಚಿವಲಾಯದಲ್ಲಿ ತಮ್ಮನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ ಅವರ ಜತೆ ಕುಮಾರಸ್ವಾಮಿ ಅವರು ರಾಜ್ಯದ ನಗರ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಮಾತುಕತೆ ನಡೆಸಿದರು. ಅಲ್ಲದೆ; ಕರ್ನಾಟಕ ಸರಕಾರಕ್ಕೆ ಕೇಂದ್ರದಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ ಸಚಿವ ಕುಮಾರಸ್ವಾಮಿ ಅವರು; ವಿದ್ಯುತ್ ಚಾಲಿತ ಬಸ್ಸುಗಳ ಹಂಚಿಕೆ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದೆ ಮತ್ತು ಕರ್ನಾಟಕಕ್ಕೆ ಹಂತಹಂತವಾಗಿ ಮತ್ತು ಆದ್ಯತೆಯ ಮೇರೆಗೆ…
ಬೆಂಗಳೂರು: ‘ಆಪರೇಷನ್ ಸಿಂದೂರ’ದ ವಿಷಯದಲ್ಲಿ ಕಾಂಗ್ರೆಸ್ ನಾಯಕರಲ್ಲೇ ದ್ವಂದ್ವ ಕಾಣಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಕೆಲವು ನಾಯಕರು, ಸಚಿವರು ‘ಆಪರೇಷನ್ ಸಿಂದೂರ’ದ ಕುರಿತು ಅಪಸ್ವರ ಎತ್ತಿದ್ದಾರೆ. ಇನ್ನೂ ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ ಭಯೋತ್ಪಾದನೆಯನ್ನು ಕಿತ್ತು ಹಾಕಬೇಕು. ಯಾಕೆ ಯುದ್ಧ ನಿಲ್ಲಿಸಿದಿರಿ ಎಂದು ಪ್ರಶ್ನಿಸುತ್ತಿದ್ದಾರೆ. ಇನ್ನು ಕೆಲವರು ನಾಲ್ಕು ವಿಮಾನ ಹಾರಿ ಹೋಗಿದೆ; ಅದು ಹೀಗೆ ಹಾಗೆ ಎಂದು ಹೇಳಿದರೆ ಸಾಕೇ ಎಂದಿದ್ದಾರೆ ಎಂದು ಟೀಕಿಸಿದರು. ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಕೃಷ್ಣಬೈರೇಗೌಡ, ಕೋಲಾರದ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆಗಳನ್ನು ಗಮನಿಸಿದರೆ ‘ಆಪರೇಷನ್ ಸಿಂದೂರ’ದ ಕುರಿತು ಅಪಪ್ರಚಾರದ ಟಾಸ್ಕನ್ನೇ ಇವರಿಗೆ ಕೊಟ್ಟಂತೆ ಕಾಣುತ್ತಿದೆ. ಸೇನಾ ಕಾರ್ಯಾಚರಣೆ ವಿಷಯದಲ್ಲಿ ಕಾಂಗ್ರೆಸ್ ನಾಯಕರಲ್ಲೇ ದ್ವಂದ್ವ ಕಾಣುತ್ತಿದೆ ಎಂದು ಆಕ್ಷೇಪಿಸಿದರು. ‘ಆಪರೇಷನ್ ಸಿಂದೂರ’ದ ಬಗ್ಗೆ ಅಪಪ್ರಚಾರ ಮಾಡುತ್ತಿರುವುದೇಕೆ? ಒಂದು ಕಡೆ ಶಶಿ…
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರುಕ್ಮಿಣಿ ವಿಜಯ್ ಕುಮಾರ್ ಅವರ ಪಾರ್ಕಿಂಗ್ ಮಾಡಿದ್ದಂತ ಕಾರಿನಲ್ಲಿದ್ದಂತ ದುಬಾರಿ ಬೆಲೆ ಬಾಳುವ ಹ್ಯಾಂಡ್ ಬ್ಯಾಗ್, ಡೈಮಂಡ್ ರಿಂಗ್ ಕದ್ದಿದ್ದಂತ ಕಾರು ಚಾಲಕನನ್ನು ಬಂಧಿಸಲಾಗಿದೆ. ಮೇ.11ರಂದು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭಜರಂಗಿ ಖ್ಯಾತಿಯ ನಟಿ ರುಕ್ಮಿಣಿ ತೆರಳಿದ್ದರು. ಕಾರು ಪಾರ್ಕ್ ಮಾಡಿ ವಾಕಿಂಗ್ ಗೆ ಹೋಗುವಾಗ, ಲಾಕ್ ಮಾಡೋದು ಮರೆತಿದ್ದರು. ಇದನ್ನು ಗಮನಿಸಿದಂತ ಕ್ಯಾಬ್ ಚಾಲಕ ಮೊಹಮ್ಮದ್, ನಟಿ ರುಕ್ಮಿಣಿ ಕಾರಿನಲ್ಲಿದ್ದಂತ ದುಬಾರಿ ಬೆಲೆಯ ಹ್ಯಾಂಡ್ ಬ್ಯಾಗ್, ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದನು. ವಾಕಿಂಗ್ ಮುಗಿಸಿ ವಾಪಾಸ್ ಬಂದಾಗ ಕಾರಿನಲ್ಲಿದ್ದಂತ ವಸ್ತುಗಳು ಚಲ್ಲಾಪಿಲ್ಲಿಯಾಗಿ ಬಿದ್ದಿದ್ದು ಗಮನಿಸಿದಾಗ ಹ್ಯಾಂಡ್ ಬ್ಯಾಗ್, ಡೈಮಂಡ್ ರಿಂಗ್ ಕಳ್ಳತನವಾಗಿದ್ದು ಬೆಳಕಿಗೆ ಬಂದಿತ್ತು. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಈ ದೂರು ಆಧರಿಸಿ ಪಾರ್ಕಿಂಗ್ ಸ್ಥಳದಲ್ಲಿದ್ದಂತ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದ್ದರು. ಈ ವೇಳೆ ಮೊಹಮ್ಮದ್ ಕಳ್ಳತನ ಮಾಡಿದ್ದ ವಿಷಯ ತಿಳಿದು ಬಂದಿತ್ತು. ಈ ಹಿನ್ನಲೆಯಲ್ಲಿ ಆರೋಪಿ ಮೊಹಮ್ಮದ್…
ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಬೇಕರಿ ಅಂಗಡಿಗಳಿಗೆ ತಿನಿಸು ಸರಬರಾಜು ಮಾಡುವಂತ ವ್ಯಕ್ತಿಗೆ ದಾರಿಯಲ್ಲಿ ರೂ.6,500 ಹಣ ಸಿಕ್ಕಿದೆ. ಅದನ್ನು ಸಾಗರ ಟೌನ್ ಠಾಣೆಗೆ ತೆರಳಿ ಸಂಬಂಧಿಸಿದಂತವರಿಗೆ ತಲುಪಿಸುವಂತೆ ನೀಡಿದ್ದಾರೆ. ಈ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾನೆ. ಈ ಬಗ್ಗೆ ಕನ್ನಡ ನ್ಯೂಸ್ ನೌಗೆ ಮಾಹಿತಿ ಹಂಚಿಕೊಂಡ ಸಾಗರ ಟೌನ್ ಠಾಣೆ ಪಿಎಸ್ಐ ನಾಗರಾಜು ಅವರು, ಆರುಮುಖ ಎಂಬುವರು ಉಡುಪಿಯಿಂದ ಸಾಗರದ ವಿವಿಧ ಬೇಕರಿಗಳಿಗೆ ಬೇಕರಿ ತಿನಿಸು ಸರಬರಾಜು ಮಾಡುತ್ತಾರೆ. ಇಂದು ಮಾರಿಕಾಂಬಾ ದೇವಸ್ಥಾನದ ರಸ್ತೆಯ ಜೈಹಿಂದ್ ಸಮೀಪದ ದಾರಿಯಲ್ಲಿ ರೂ.6,500 ಹಣ ಸಿಕ್ಕಿದೆ. ಅದನ್ನು ಕಂಡು ಕೂಡಲೇ ಸಾಗರ ಟೌನ್ ಠಾಣೆಗೆ ತಂದು ಸಂಭವಿಸಿದವರಿಗೆ ನೀಡಲು ಮನವಿ ಮಾಡಿದ್ದಾರೆ ಎಂದರು. ಆರಮುಖ ನೀಡಿರುವಂತ ರೂ.6,500 ಸಾಗರ ಟೌನ್ ಠಾಣೆಯಲ್ಲಿ ಇರುತ್ತದೆ. ಸಾಗರ ನಗರ, ತಾಲ್ಲೂಕಿನ ಜನರು ಯಾರಾದರೂ ಕಳೆದುಕೊಂಡಿದ್ದರೇ ಸೂಕ್ತ ದಾಖಲೆ, ಮಾಹಿತಿ ಒದಗಿಸಿ ಪಡೆಯಬಹುದು ಎಂದು ತಿಳಿಸಿದ್ದಾರೆ. ಸೋ ಸಾಗರದ ಜನರು ಯಾರಾದರೂ ಮಾರಿಕಾಂಬಾ ರಸ್ತೆಯ ಜೈಹಿಂದ್ ಬೇಕರಿ ಸಮೀಪದಲ್ಲಿ ರೂ.6,500…
ಶ್ರೀನಗರ: ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗಿನ ಎನ್ಕೌಂಟರ್ನಲ್ಲಿ ಸಾವನ್ನಪ್ಪಿದ ಭಯೋತ್ಪಾದಕನ ವೀಡಿಯೊದಲ್ಲಿ, ಅವನ ತಾಯಿ ಶರಣಾಗುವಂತೆ ಬೇಡಿಕೊಳ್ಳುತ್ತಿರುವುದನ್ನು ಕಾಣಬಹುದು. ಭಯೋತ್ಪಾದಕ ಅಮೀರ್ ನಜೀರ್ ವಾನಿ ತನ್ನ ತಾಯಿಯೊಂದಿಗೆ ಮಾತನಾಡುವಾಗ ಎಕೆ -47 ಹಿಡಿದುಕೊಂಡಿರುವುದನ್ನು ಕಾಣಬಹುದು. ಅಂತಿಮ ವೀಡಿಯೊ ಕರೆಯಲ್ಲಿ, ಅಮೀರ್ನ ತಾಯಿ ಶರಣಾಗುವಂತೆ ಹೇಳಿದರು. ಆದರೆ ಅವನು ನಿರಾಕರಿಸಿದನು. ಸೈನ್ಯವು ಮುಂದೆ ಬರಲಿ, ನಂತರ ನಾನು ನೋಡುತ್ತೇನೆ ಎಂದು ಅವನು ಉತ್ತರಿಸಿದನು. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದ ನಾದಿರ್ ಗ್ರಾಮದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತರಾದ ಮೂವರು ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕರಲ್ಲಿ ಅಮೀರ್ ಕೂಡ ಒಬ್ಬ. ಎನ್ಕೌಂಟರ್ನಲ್ಲಿ ಹತರಾದ ಮೂವರು ಭಯೋತ್ಪಾದಕರನ್ನು ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಿವಾಸಿಗಳು. ಗುಂಡಿನ ಚಕಮಕಿ ಪ್ರಾರಂಭವಾಗುವ ಮೊದಲು ಅಮೀರ್ ಅವರು ಅಡಗಿಕೊಂಡಿದ್ದ ಮನೆಯಿಂದ ವೀಡಿಯೊ ಕರೆ ಮಾಡಿದರು.…
ಬೆಂಗಳೂರು: ರಾಜ್ಯದ ಅನಧಿಕೃತ ಕಟ್ಟಡ, ನಿವೇಶನಗಳಿಗೆ ಬಿ-ಖಾತಾ ವಿತರಣೆಗೆ ಸರ್ಕಾರ ನಿರ್ಧರಿಸಿತ್ತು. ಈ ಅವಧಿಯನ್ನು ಮೂರು ತಿಂಗಳು ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದೆ. ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ. https://twitter.com/KarnatakaVarthe/status/1922927883963494467 ಈ ಬಗ್ಗೆ ಬೆಂಗಳೂರಿನಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿರುವ ಅವರು, ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಂದರೆ, ಯಾವುದೇ ಪರವಾನಗಿ, ಭೂಪರಿವರ್ತನೆ ಮಾಡಿಸಿಕೊಳ್ಳದೇ, ನಕ್ಷೆ ಮಂಜೂರಾತಿ ಮಾಡಿಕೊಳ್ಳದೇ ಕಂದಾಯ ನಿವೇಶನಗಳಲ್ಲಿ ಕಟ್ಟಡಗಳನ್ನು ಕಟ್ಟಿಕೊಂಡಿದ್ದರೆ ಅಂತಹವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿ-ಖಾತ ನೀಡಿ ಸಕ್ರಮಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು ಎಂದಿದ್ದಾರೆ. ಇದರನ್ವಯ ನಾಗರಿಕರಿಗೆ ಒಂದು ಬಾರಿಯ ಅವಕಾಶವನ್ನು ನೀಡಲಾಗಿತ್ತು. ನಾಗರಿಕರು ನಿಗದಿತ ಶುಲ್ಕಗಳನ್ನು ಪಾವತಿ ಮಾಡಿ ತಮ್ಮ ಕಟ್ಟಡಗಳಿಗೆ ಬಿ-ಖಾತಾ ಪಡೆದುಕೊಳ್ಳಬಹುದಾಗಿದೆ. ಈ…
ಬಿಹಾರ: ಇಲ್ಲಿನ ದರ್ಭಾಂಗಾ ಜಿಲ್ಲೆಯ ಅಂಬೇಡ್ಕರ್ ಹಾಸ್ಟೆಲ್ನಲ್ಲಿ ಅನುಮತಿಯಿಲ್ಲದೆ ‘ಶಿಕ್ಷಾ, ನ್ಯಾಯ ಸಂವಾದ’ ಜನಸಂಪರ್ಕ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು 100ಕ್ಕೂ ಹೆಚ್ಚು ಪಕ್ಷದ ಕಾರ್ಯಕರ್ತರ ವಿರುದ್ಧ ಪೊಲೀಸರು ಗುರುವಾರ ಎರಡು ಎಫ್ಐಆರ್ಗಳನ್ನು ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂಬೇಡ್ಕರ್ ಹಾಸ್ಟೆಲ್ನಲ್ಲಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಕಾಂಗ್ರೆಸ್ನ ರಾಜ್ಯಾದ್ಯಂತ ಸಾರ್ವಜನಿಕ ಭಾಗವಹಿಸುವಿಕೆ ಅಭಿಯಾನದ ಭಾಗವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಇದಕ್ಕೂ ಮೊದಲು, ಜಿಲ್ಲಾಡಳಿತ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿ, ಪರ್ಯಾಯ ಸ್ಥಳವನ್ನು ಪ್ರಸ್ತಾಪಿಸಿತು. ಕಾಂಗ್ರೆಸ್ ಈ ಸಲಹೆಯನ್ನು ತಿರಸ್ಕರಿಸಿತು. ಇದು ಬಿಕ್ಕಟ್ಟಿಗೆ ಕಾರಣವಾಯಿತು. ಆಡಳಿತ ಮತ್ತು ಭದ್ರತಾ ಸಿಬ್ಬಂದಿಯ ಆಕ್ಷೇಪಣೆಗಳ ಹೊರತಾಗಿಯೂ, ರಾಹುಲ್ ಗಾಂಧಿ ಬೇರೆ ಮಾರ್ಗದ ಮೂಲಕ ಹಾಸ್ಟೆಲ್ ಆವರಣವನ್ನು ಪ್ರವೇಶಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ದರ್ಭಾಂಗಾ ಜಿಲ್ಲಾಡಳಿತವು “ಜಿಲ್ಲಾ ಕಲ್ಯಾಣ ಅಧಿಕಾರಿ (ಮ್ಯಾಜಿಸ್ಟೀರಿಯಲ್ ಅಧಿಕಾರ ಹೊಂದಿರುವವರು) ಲಹೇರಿಯಾಸರೈ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ ದೂರಿನ ಆಧಾರದ ಮೇಲೆ ಮೊದಲ ಎಫ್ಐಆರ್ ದಾಖಲಿಸಲಾಗಿದೆ. ಅಂಬೇಡ್ಕರ್ ಹಾಸ್ಟೆಲ್ನಲ್ಲಿ ಕಾರ್ಯಕ್ರಮಕ್ಕೆ…














