Author: kannadanewsnow09

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-25 (ಕೆಸೆಟ್)ಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.24ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಪ್ರಸನ್ನ ತಿಳಿಸಿದ್ದಾರೆ. ಸೆ.25ರೊಳಗೆ ಶುಲ್ಕ ಪಾವತಿಸಬೇಕು. ಇದು ಕೊನೆ ವಿಸ್ತರಣೆಯಾಗಿದ್ದು ಪುನಃ ಅರ್ಜಿ ಸಲ್ಲಿಸಲು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್ ಸೀಟಿಗೆ ಆಪ್ಷನ್ಸ್ ಮರುಕ್ರಮಕ್ಕೆ ಸಮಯ ವಿಸ್ತರಣೆ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ಮರುಕ್ರಮಗೊಳಿಸಲು ಸೆ.19ರಂದು ಬೆಳಿಗ್ಗೆ 7 ಗಂಟೆವರೆಗೆ ಸಮಯ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ. https://kannadanewsnow.com/kannada/in-the-hindenburg-fraud-allegations-the-adani-group-has-received-a-clean-chit-from-sebi/ https://kannadanewsnow.com/kannada/good-news-good-news-for-pensioners-nps-rules-changed-from-1st-january-many-benefits/

Read More

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ಮರುಕ್ರಮಗೊಳಿಸಲು ಸೆ.19ರಂದು ಬೆಳಿಗ್ಗೆ 7 ಗಂಟೆವರೆಗೆ ಸಮಯ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ಕೆಸೆಟ್: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-25 (ಕೆಸೆಟ್)ಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.24ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಪ್ರಸನ್ನ ತಿಳಿಸಿದ್ದಾರೆ. ಸೆ.25ರೊಳಗೆ ಶುಲ್ಕ ಪಾವತಿಸಬೇಕು. ಇದು ಕೊನೆ ವಿಸ್ತರಣೆಯಾಗಿದ್ದು ಪುನಃ ಅರ್ಜಿ ಸಲ್ಲಿಸಲು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/in-the-hindenburg-fraud-allegations-the-adani-group-has-received-a-clean-chit-from-sebi/ https://kannadanewsnow.com/kannada/people-of-sagar-district-take-to-the-streets-for-the-struggle-the-awakened-sagar-district-proclaims-our-rights/

Read More

ಶಿವಮೊಗ್ಗ: ಸಾಗರ ಜಿಲ್ಲೆ ಹೋರಾಟಕ್ಕೆ ತಾಲ್ಲೂಕಿನ ಜನರು ಬೀದಿಗೆ ಇಳಿದಿದ್ದಾರೆ. ಸಾಗರ ನಗರಸಭೆಯಿಂದ ಸಾಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದಂತ ಸಾಗರ ಜಿಲ್ಲೆ ಹೋರಾಟವು, ಸಾಗರ ಜಿಲ್ಲೆ ನಮ್ಮ ಹಕ್ಕು ಘೋಷಣೆಯ ಮೂಲಕ ಮಾರ್ಧನಿಸುವಂತೆ ಮಾಡಿತು. ಈ ಮೂಲಕ ಸಾಗರ ಜಿಲ್ಲೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಲಾಯಿತು. ಇಂದು ಸಾಗರ ಜಿಲ್ಲೆ ಹೋರಾಟದ ರಣಕಹಳೆ ಮೊಳಗಿತು.  ಕೇಂದ್ರ ಸರ್ಕಾರದ ಜನಗಣತಿಯು 2026 ಎಪ್ರಿಲ್‌ 01ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಅದಕ್ಕಿಂತ 3ತಿಂಗಳು ಮುಂಚಿತವಾಗಿ ಹೊಸ ಜಿಲ್ಲೆ, ತಾಲೂಕು ರಚನೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪಿತ ಬದಲಾವಣೆಗಳಿದ್ದರೆ, 2025ರ ಡಿಸೆಂಬರ್‌ 31ರ ಒಳಗಾಗಿ ಮುಗಿಸಿಕೊಳ್ಳುವ ರಾಜ್ಯಗಳಿಗೆ ಕೇಂದ್ರಸರ್ಕಾರ ನಿರ್ದೇಶಿಸಿದೆ. ಈ  ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಿಸಬೇಕು ಎಂಬ ಹೋರಾಟಕ್ಕೆ ಮತ್ತೆ ಜೀವಕಳೆ ಬಂದಿದೆ. ಇಂದು ಸಾಗರದಲ್ಲಿ ನಾಗರೀಕರು, ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಬೀದಿಗಿಳಿದು ಮೆರವಣಿಗೆ ನಡೆಸಿದರು. ಆ ಬಳಿಕ ಸಾಗರ ನಗರಸಭೆಯ ರಂಗಮಂದಿರದಲ್ಲಿ ಸಭೆ ನಡೆಸಿ ಒತ್ತಾಯಿಸಿದರು. ಈ ವೇಳೆ ಮಾತನಾಡಿದಂತ ಸಾಗರ…

Read More

ಬೆಂಗಳೂರು : “ಆಳಂದ ಕ್ಷೇತ್ರದ ಮತ ಅಕ್ರಮದ ಬಗ್ಗೆ ಸಿಐಡಿ ತನಿಖೆಗೆ ಚುನಾವಣಾ ಆಯೋಗ ಸಹಕಾರ ನೀಡದಿರುವುದನ್ನು ನೋಡಿದರೆ, ಅವರೂ ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾರೆಂಬ ಅನುಮಾನ ಸಹಜವಾಗಿ ಮೂಡುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಶಿವಕುಮಾರ್ ಅವರು ಗುರುವಾರ ಮಾತನಾಡಿದರು. ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿರುವ ಬಗ್ಗೆ ನವದೆಹಲಿಯಲ್ಲಿ ರಾಹುಲ್ ಗಾಂಧಿ ಅವರು ಮಾಧ್ಯಮಗೋಷ್ಠಿ ನಡೆಸಿರುವ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಅವರು ಈ ಬಗ್ಗೆ ನಮ್ಮ ಬಳಿ ಸಂಪೂರ್ಣ ಮಾಹಿತಿ ಪಡೆದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಕೇವಲ ಆಳಂದ ವಿಧಾನಸಭಾ ಕ್ಷೇತ್ರ ಮಾತ್ರವಲ್ಲ, ಬೇರೆ ಕ್ಷೇತ್ರಗಳಲ್ಲೂ ಈ ರೀತಿ ಅಕ್ರಮಗಳು ನಡೆದಿವೆ” ಎಂದು ಆರೋಪಿಸಿದರು. “ಸುಮಾರು 6 ಸಾವಿರ ಮತಗಳನ್ನು ತೆಗೆದು ಹಾಕಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹಾಗೂ ಆಳಂದ ಶಾಸಕರು ದೂರು ನೀಡಿದ್ದರು. ಈ ಕುರಿತು ಪ್ರಕರಣವೂ ದಾಖಲಾಯಿತು. ಈ ಮಧ್ಯೆ ಚಿಲುಮೆ ಸಂಸ್ಥೆ ಅಕ್ರಮದ ವಿಚಾರವಾಗಿ ನಾವು ಹೋರಾಟ ಮಾಡಿ ಕೇಂದ್ರ ಚುನಾವಣಾ ಆಯೋಗವನ್ನು…

Read More

ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ, ಗುರುವಾರ ಭಾರತೀಯ ಭದ್ರತಾ ಮತ್ತು ವಿನಿಮಯ ಮಂಡಳಿ (ಸೆಬಿ) ಅದಾನಿ ಗುಂಪಿಗೆ ಕ್ಲೀನ್ ಚಿಟ್ ನೀಡಿದ್ದು, ಅಮೆರಿಕದ ಶಾರ್ಟ್-ಸೆಲ್ಲರ್ ಹಿಂಡೆನ್‌ಬರ್ಗ್ ರಿಸರ್ಚ್, ಗೌತಮ್ ಅದಾನಿ ಮತ್ತು ಅದಾನಿ ಪೋರ್ಟ್ಸ್ ಮತ್ತು ಅದಾನಿ ಪವರ್ ಸೇರಿದಂತೆ ಅವರ ಗುಂಪು ಕಂಪನಿಗಳ ವಿರುದ್ಧ ಮಾಡಿದ್ದ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳನ್ನು ತಳ್ಳಿಹಾಕಿದೆ.

Read More

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಮಹಾ ಎಡವಟ್ಟು ಮಾಡಲಾಗಿದೆ. 2 ಲಕ್ಷ ಹೊಸ ಜಾತಿಗಣತಿ ಕೈಪಿಡಿಯನ್ನು ಆಯೋಗವು ತಿಪ್ಪೆಗೆಸೆದಿದೆ ಎಂದು ತಿಳಿದು ಬಂದಿದೆ. ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಿಂದುಳಿದ ಆಯೋಗದಿಂದ ಸಲ್ಲಿಸಲಾಗಿದ್ದಂತ ವರದಿಯನ್ನು ಬಿಡುಗಡೆ ಮಾಡಿದ್ದರು. ಮೊನ್ನೆ ಮೊನ್ನೆಯಷ್ಟೇ ಕೈಪಿಡಿಯನ್ನು ಸಿಎಂ ಸಿದ್ಧರಾಮಯ್ಯ ಬಿಡುಗಡೆ ಮಾಡಿದ್ದರು. ಸಿಎಂ ಸಿದ್ಧರಾಮಯ್ಯ ಅವರು ಜಾತಿಗಣತಿ ಕೈಪಿಡಿಯನ್ನು ಬಿಡುಗಡೆ ಮಾಡಿದ್ದರು. ಈ ಕೈಪಿಡಿಯು ಸಮೀಕ್ಷೆ ವೇಳೆ ಶಿಕ್ಷಕರಿಗೆ ನೀಡಬೇಕಾಗಿತ್ತು. ಆದರೇ ಸರ್ವೆ ವೇಳೆ ಶಿಕ್ಷಕರಿಗೆ ನೀಡಬೇಕಾಗಿದ್ದಂತ ಕೈಪಿಡಿಯನ್ನು ಮೂಲೆಗುಂಪು ಮಾಡಲಾಗಿದೆ. ಕೈಪಿಡಿಯಲ್ಲಿ ಸಾಕಷ್ಟು ದೋಷ ಹಿನ್ನಲೆಯಲ್ಲಿ 2 ಲಕ್ಷ ಕೈಪಿಡಿ ಮೂಲೆಗೆ ಎಸೆಯಲಾಗಿದೆ. ಸುಮಾರು 1 ಕೋಟಿ ಹಣ ವ್ಯಯ ಮಾಡಿ ಈ ಕೈಪಿಡಿಯನ್ನು ತಯಾರಿಸಲಾಗಿತ್ತು. ಈಗ ಮತ್ತೆ ಹೊಸ ಕೈಪಿಡಿ ತಯಾರಿಕೆಗೆ ಆಯೋಗ ಮುಂದಾಗಿದೆ. https://kannadanewsnow.com/kannada/women-should-be-the-beneficiaries-of-the-guarantee-scheme-provided-by-the-congress-government-mlc-dinesh-guligowda/ https://kannadanewsnow.com/kannada/here-light-the-lamp-of-salvation-with-the-new-moon-and-prosper-with-the-blessings-of-the-ancestors/

Read More

ಬೆಂಗಳೂರು ಗ್ರಾಮಾಂತರ: 2023ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ವಾಗ್ದಾನದಂತೆ ಪಂಚಗ್ಯಾರಂಟಿ ಯೋಜನೆಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದೆ. ಕಳೆದ 21 ತಿಂಗಳಲ್ಲಿ ಪಂಚಗ್ಯಾರಂಟಿ ಯೋಜನೆಗಳಿಗಾಗಿ 98 ಸಾವಿರ ಕೋಟಿ ರೂ. ಹಣವನ್ನು ವ್ಯಯ ಮಾಡಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಅವರು ಹೇಳಿದರು. ದೇವನಹಳ್ಳಿ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯಗಾರ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಕೋರೋನಾದಿಂದ ಸಂಕಷ್ಟಕ್ಕೆ ಒಳಗಾಗಿದ್ದ ಮಹಿಳೆಯರಿಗೆ ಪಂಚ ಗ್ಯಾರಂಟಿಗಳು ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದವು ಎಂದರು. ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುತ್ತಾ ಬಂದಿದ್ದು ಇದುವರೆಗೆ 52 ಸಾವಿರ ಕೋಟಿ ರೂ. ಹಣವನ್ನು ನೀಡಿದ್ದರೆ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ನೀಡುವ ಮೂಲಕ 18,139 ಕೋಟಿ ರೂ.…

Read More

ಶಿವಮೊಗ್ಗ: ನಮ್ಮ ಸರ್ಕಾರ ರೈತರ ಪರವಾಗಿದೆ. ರೈತರ ಪರ ಒಲವಿರುವಂತ ಸರ್ಕಾರ ನಮ್ಮದಾಗಿದೆ. ಈ ರೈತರಿಗೆ ಸಾಲ ಸೌಲಭ್ಯ ಒದಗಿಸಲು ನಬಾರ್ಡ್ ನಿಂದ ಹಣ ಬಿಡುಗಡೆ ಮಾಡಬೇಕು ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದರು. ಇಂದು ತಾಳಗುಪ್ಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸರ್ವಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಡಿಸಿಸಿ ಬ್ಯಾಂಕ್ ಗಳಲ್ಲಿ ರಾಜಕೀಯ ಹಸ್ತಕ್ಷೇಪವಿರಬಾರದು. ಅವುಗಳು ರಾಜಕೀಯ ಹೊರತಾಗಿ ಇರಬೇಕು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಗಳು ರೈತರ ಏಳಿಗೆಗಾಗಿ ಕಟ್ಟಿರೋವಂತದ್ದು ಎಂಬುದಾಗಿ ಅಭಿಪ್ರಾಯ ಪಟ್ಟರು. ರೈತರ ಮೇಲೆ ನಂಬಿಕೆಯಿಂದ ಡಿಸಿಸಿ ಬ್ಯಾಂಕ್ ನಿಂದ ಸಾಲಸೌಲಭ್ಯ ನೀಡಲಾಗುತ್ತಿದೆ. ಅಷ್ಟೇ ರೈತರು ನಂಬಿಕೆಯನ್ನು ಉಳಿಸಿಕೊಂಡು ಮರುಪಾವತಿ ಕೂಡ ಮಾಡುತ್ತಿದ್ದಾರೆ. ರೈತರು ಕಟ್ಟುವಂತ ಮರುಪಾವತಿ ಸಾಲಗಳಿಂದಲೇ ಡಿಸಿಸಿ ಬ್ಯಾಂಕ್ ಗಳು ಇಷ್ಟು ದೊಡ್ಡ ಮಟ್ಟಕ್ಕೆ ರಾಜ್ಯದಲ್ಲಿ ಬೆಳೆಯಲು ಸಾಧ್ಯವಾಗಿದೆ. ರೈತರು ಸಾಲ ಮರುಪಾವತಿಸಿ ಎಂದರು. ಕೇಂದ್ರ ಸರ್ಕಾರದಿಂದ 200 ಕೋಟಿ ನಬಾರ್ಡ್ ಹಣ ಬಿಡುಗಡೆ ಆಗಬೇಕಿತ್ತು. ಆದರೇ…

Read More

ಬೆಂಗಳೂರು: ಕರ್ನಾಟಕಕ್ಕೆ ಪೂರೈಸಬೇಕಿದ್ದ 3.36 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರವನ್ನು ತ್ವರಿತವಾಗಿ ಪೂರೈಸುವಂತೆ ಸಂಸದರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಭಾರತವು ಕೃಷಿ ಪ್ರಧಾನ ದೇಶವಾಗಿದ್ದು, ರೈತರು ದೇಶದ ಆರ್ಥಿಕತೆಯ ಬೆನ್ನೆಲುಬು. ಕರ್ನಾಟಕದಲ್ಲಿ ಮುಂಗಾರು ಬೇಗ ಪ್ರಾರಂಭವಾಗಿದ್ದು ಸರಾಸರಿಗಿಂತ ಶೇ.3ರಷ್ಟು ಹೆಚ್ಚು ಮಳೆಯಾಗಿದ್ದರಿಂದ ಬಿತ್ತನೆ ನಿರೀಕ್ಷೆಗೂ ಮುಂಚೆ ಚಾಲನೆಯಾಗಿದೆ. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ 114.40 ಲಕ್ಷ ಹೆಕ್ಟೇರ್ ನಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. 160.68 ಲಕ್ಷ ಟನ್ ಆಹಾರಧಾನ್ಯಗಳು ಮತ್ತು ಎಣ್ಣೆಕಾಳುಗಳ ಉತ್ಪಾದನಾ ಗುರಿ ಹೊಂದಲಾಗಿದೆ. ಮುಂಗಾರು ಹಂಗಾಮಿಗೆ 82.50 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದ್ದು 81.85 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದೆ. ಮುಂಗಾರು ಹಂಗಾಮಿನಲ್ಲಿ 26.77 ಲಕ್ಷ ಮೆಟ್ರಿಕ್ ಟನ್ ವಿವಿಧ ರಸಾಯನಿಕ ರಸಗೊಬ್ಬರಗಳ ಬೇಡಿಕೆ ಅಂದಾಜಿಸಲಾಗಿದೆ. 3.36 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ಕೊರತೆ ಉಂಟಾಗಿದೆ. ರಾಜ್ಯಗಳಿಗೆ ಅಗತ್ಯವಿರುವ…

Read More

ಬೆಂಗಳೂರು: ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್‌ ನಾಯಕರು ಮಾಧ್ಯಮಗಳ ಮುಂದೆ ಮಾತಾಡುತ್ತಾರೆಯೇ ಹೊರತು ದಾಖಲೆಗಳನ್ನು ನೀಡಲ್ಲ. ಮಾಲೂರು ಕ್ಷೇತ್ರದಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಮೊದಲು ಮಾತಾಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಕಾಮನ್‌ಸೆನ್ಸ್‌ ಇಲ್ಲ. ಅವರ ಮಾತಿನಿಂದಲೇ ಅವರು ಇಡೀ ದೇಶದಲ್ಲಿ ಹೆಚ್ಚು ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಮಹದೇವಪುರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪ ಮಾಡಿ ಅದು ಸುಳ್ಳು ಎಂದು ಸಾಬೀತಾಗಿದೆ. ಈಗ ಅಳಂದ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಮಾಲೂರು ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿದೆ ಎಂದು ಸಾಬೀತಾಗಿದ್ದು, ಕಾಂಗ್ರೆಸ್‌ ಶಾಸಕರ ಸದಸ್ಯತ್ವವೇ ರದ್ದಾಗಿದೆ. ಇಲ್ಲಿ ನಮ್ಮ ಬಿಜೆಪಿ ಅಭ್ಯರ್ಥಿ ಅಫಿಡವಿಟ್‌ ನೀಡಿದ್ದರು. ಜಿಲ್ಲಾಧಿಕಾರಿ ತಪ್ಪು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದರ ಬಗ್ಗೆ ಯಾಕೆ ಮಾತಾಡುತ್ತಿಲ್ಲ? ಎಂದು ಪ್ರಶ್ನಿಸಿದರು. ಬಿಹಾರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಕಾಂಗ್ರೆಸ್‌ ನಾಯಕರಿಗೆ ಭ್ರಮನಿರಸನವಾಗಿದೆ. ಅದಕ್ಕಾಗಿ ಮೊದಲೇ ಆರೋಪ…

Read More