Author: kannadanewsnow09

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ವ್ಯವಸ್ಥೆ( UPS) ಆಯ್ಕೆ ಮಾಡಿಕೊಳ್ಳಲು ಸೆಪ್ಟೆಂಬರ್.30 ಕೊನೆಯ ದಿನವಾಗಿದೆ. ಅದರ ಒಳಗಾಗಿ ಪೂರ್ಣಗೊಳಿಸುವಂತೆ ಕೇಂದ್ರ ಹಣಕಾಸು ಸಚಿವಾಲಯ ಸೂಚಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಏಪ್ರಿಲ್.1ರಿಂದ ಕೇಂದ್ರ ಸರ್ಕಾರಿ ನೌಕರರಿಗೆ ಯುಪಿಎಸ್ ಆಯ್ಕೆಗಾಗಿ ಅವಕಾಶ ನೀಡಲಾಗಿದೆ. ಜುಲೈ.20ರವರೆಗೆ ಸುಮಾರು 31,555 ನೌಕರರು ಯುಪಿಎಸ್ ಆಯ್ಕೆ ಮಾಡಿಕೊಂಡಿದ್ದಾರೆ ಎಂದಿದೆ. ಕೇಂದ್ರ ಸರ್ಕಾರದ ಅರ್ಹ ನೌಕರರು ಕೊನೆಗಳಿಗೆಯಲ್ಲಿ ತರಾತುರಿಯಿಂದ ತಪ್ಪಿಸಿಕೊಳ್ಳದೇ ಆದಷ್ಟು ಬೇಗ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ. ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ(NPS) ಅನ್ನು ಆಯ್ಕೆ ಮಾಡಿದವರು ಸೆಪ್ಟೆಂಬರ್.30ರ ನಂತ್ರ ಮತ್ತೆ ಏಕೀಕೃತ ಪಿಂಚಣಿ ವ್ಯವಸ್ಥೆಗೆ ಬರಲಾಗದು ಎಂಬುದಾಗಿ ಖಡಕ್ ಆಗಿಯೇ ತಿಳಿಸಿದೆ.

Read More

ನವದೆಹಲಿ: ಬೆಂಗಳೂರಿನ ರಸ್ತೆಗಳ ದುಸ್ಥಿತಿಯ ಬಗ್ಗೆ ದನಿ ಎತ್ತಿರುವ ಉದ್ಯಮಿಗಳ ಪರ ನಿಂತಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ರಾಜ್ಯವನ್ನು ಬಿಟ್ಟು ಹೋಗುವುದು ಬೇಡ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು; “ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರಕಾರಕ್ಕೆ ಪಾಠ ಕಲಿಸುತ್ತೇವೆ. ನಿಮ್ಮ ಜತೆ ನಾವು, ಇಡೀ ಕರ್ನಾಟಕದ ಜನತೆ ಇದ್ದೇವೆ. ಹೋಗುತ್ತೇವೆ ಎನ್ನುವ ಮಾತನ್ನು ಮನಸ್ಸಿನಿಂದ ತೆಗೆದುಬಿಡಿ. ನಾವೆಲ್ಲರೂ ಸೇರಿ ಬೆಂಗಳೂರು ನಗರವನ್ನು ಬದಲಿಸೋಣ.We will Make Bengaluru Great Again ಎಂದು ಕಂಪನಿಗಳಿಗೆ ಕುಮಾರಸ್ವಾಮಿ ಅವರು ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು ಮತ್ತು ಕರ್ನಾಟಕ ಭ್ರಷ್ಟರ ಕೈಯ್ಯಲ್ಲಿ ಸಿಲುಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಎಂದು ಕೇಂದ್ರ ಸಚಿವರಾದ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಪನಿಗಳು…

Read More

ಮಂಡ್ಯ : ಕರಾವಳಿಯ ಕಿಚ್ಚನ್ನು ಮಂಡ್ಯದಲ್ಲಿ ಹಚ್ಚಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಶಾಸಕ ಕೆ.ಎಂ.ಉದಯ್ ಕೆಂಡಾಮಂಡಲರಾದರು. ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದಿರುವ ಗಲಭೆ ಹಾಗೂ ಶಾಂತಿ ಭಂಗ ಮಾಡಿರುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕ್ಷೇತ್ರದ ಜನತೆಗೆ ಅಭಯ ನೀಡಿದರು. ಮಗಳ ವಿದ್ಯಾಭ್ಯಾಸದ ದೃಷ್ಟಿಯಿಂದ ನಾನು ವಿದೇಶಕ್ಕೆ ಹೋಗಿದ್ದೆ. ಯಾವುದೇ ಮೋಜು ಮಸ್ತಿ ಮಾಡಲು ನಾನು ಹೋಗಿರಲಿಲ್ಲ. ಆ ಸಂಧರ್ಭದಲ್ಲಿ ಮದ್ದೂರು ಪಟ್ಟಣದಲ್ಲಿ ಹಿಂದೆಂದೂ ಸಹ ನಡೆಯಬಾರದಂತ ಒಂದು ಘಟನೆ ನಡೆದಿದೆ. ಈ ಘಟನೆ ನಡೆದ ಕ್ಷಣದಿಂದಲೂ ಪೊಲೀಸರ ಸಂಪರ್ಕದಲ್ಲಿದ್ದೆ. ಕ್ಷಣ ಕ್ಷಣಕ್ಕೂ ಮಾಹಿತಿ ಪಡೆದು ಸೂಚನೆ ನೀಡಿದ್ದೆ. ಪೋಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ತೀವ್ರ ಕಾರ್ಯಾಚರಣೆ ನಡೆಸಿದ ಪರಿಣಾಮ ಪರಿಸ್ಥಿತಿಯನ್ನು ಹತೋಟಿ ತಂದು ಶೀಘ್ರವಾಗಿ ಕಿಡಿಗೇಡಿಗಳನ್ನು ಬಂಧಿಸಿದ್ದಾರೆ ಎಂದರು. ಕಲ್ಲು ಹೊಡೆದು ಶಾಂತಿ…

Read More

ಮಂಡ್ಯ : ವಿಶ್ವಕರ್ಮ ಸಮುದಾಯವು ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ನಡೆದ ವಿಶ್ವಕರ್ಮರ ಜಯಂತಿ ಕಾರ್ಯಕ್ರಮದಲ್ಲಿ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು. ಭಾರತೀಯ ಸಂಸ್ಕೃತಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದ್ದು, ಅನೇಕ ಗುಡಿ, ದೇವಸ್ಥಾನ, ಪ್ರಾಚೀನ ಸ್ಮಾರಕಗಳ ನಿರ್ಮಾಣದಿಂದಾಗಿ ಸಮುದಾಯದ ಕಲೆ, ಸಂಸ್ಕೃತಿ ಇಂದಿನ ಪೀಳಿಗೆಗೆ ಪ್ರಸಿದ್ಧಿ ಪಡೆದಿವೆ. ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆಯ ಜೀವಂತಿಕೆಯ ಅಸ್ತಿತ್ವವನ್ನು ಇಂದಿಗೂ ಉಳಿಸಿರುವುದೇ ಸಾಕ್ಷಿ. ಲೋಕವನ್ನು ವೈಭವೀಕರಿಸುವ ಸಾಂಸ್ಕೃತಿಕ ಪರಂಪರೆ, ಕಲೆ ಮತ್ತು ವಾಸ್ತು ಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ ಎಂದರು. ವಿಶ್ವಕರ್ಮರ ಕೆತ್ತನೆ ಕಾರ್ಯಗಳ ಕಲೆಯು ಇಂದಿನ ಸಮಾಜಕ್ಕೆ ಕೊಡುಗೆ ನೀಡಿರುವುದನ್ನು ನಾವೆಲ್ಲರೂ ಸ್ಮರಿಸಬೇಕಾಗಿದೆ. ಕಲೆ ಮತ್ತು ವಾಸ್ತುಶಿಲ್ಪ…

Read More

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಚಾಲಕ ರಾಜೀವ್ ಬೀರಸಾಲ ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ್ದಾರೆ. ಇಂತಹ ಚಾಲಕನ ಸಾವಿಗೆ ಕಂಬನಿ ಮಿಡಿದಿರುವಂತ ರಾಮಲಿಂಗಾರೆಡ್ಡಿ, ಅವಲಂಬಿತರಿಗೆ ನೌಕರಿ, ಆರ್ಥಿಕ ನೆರವಿಗೆ ಸೂಚಿಸಿದ್ದಾರೆ. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ರಾಜೀವ್ ಬೀರಸಾಲ, ಚಾಲಕ- ಕಂ-ನಿರ್ವಾಹಕ ಬಿಲ್ಲೆ. ಸಂಖ್ಯೆ. 2469,ವಯಸ್ಸು-56 ವರ್ಷ, ಸೇವೆಗೆ ಸೇರಿದ ದಿನಾಂಕ: 23.02.2005, ಇವರು ಹರಿಹರ ಘಟಕದ ಅನುಸೂಚಿ ಸಂಖ್ಯೆ 47 BA (ರಾಜಹಂಸ )ಬೆಂಗಳೂರು – ದಾವಣಗೆರೆ ಮಾರ್ಗದಲ್ಲಿ ಕಾರ್ಯಚರಣೆಯಲ್ಲಿದ್ದಾಗ ನೆಲಮಂಗಲ ಟೋಲ್ ಹತ್ತಿರ ವಾಹನ ಚಾಲನೆ ಮಾಡುತ್ತಿದ್ದಾಗ ಹೃದಯಾಘಾತವಾಗಿರುತ್ತದೆ. ಆದರೂ ಬಸ್ಸಿನಲ್ಲಿರುವ ಪ್ರಯಾಣಿಕರನ್ನು ರಕ್ಷಿಸಿ, ಬಸ್ಸನ್ನು ಹೆದ್ದಾರಿಯ ಒಂದು ಬದಿಯಲ್ಲಿ ಪಕ್ಕಕ್ಕೆ ನಿಲ್ಲಿಸಿ, ಭಾರಿ ಅನಾಹುತ ತಪ್ಪಿಸಿದ್ದಾರೆ. ಈ ಮೂಲಕ ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿ ನೆಲಮಂಗಲ ಆಸ್ಪತ್ರೆಯಲ್ಲಿ ಮರಣ ಹೊಂದಿರುತ್ತಾರೆ ಎಂದಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮೃತ ಚಾಲಕರ ಆತ್ಮಕ್ಕೆ ಶಾಂತಿ…

Read More

ನಿತ್ಯ ಪಠಿಸುವ ಪ್ರಮುಖ ಶ್ಲೋಕ – ಮಂತ್ರಗಳು ದೈನಂದಿನ ಪ್ರಾರ್ಥನಾ ಶ್ಲೋಕಗಳು ಶ್ರೀ ಗಣಪತಿ ಶ್ಲೋಕ ಅಗಜಾನನ ಪದ್ಮಾರ್ಕಂ ಗಜಾನನಂ ಅಹರ್ನಿಶಂ | ಅನೇಕದಂ ತಂ ಭಕ್ತಾನಾಂ ಏಕದಂತಮುಪಾಸ್ಮಹೇ || ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಶ್ರೀ ಕೃಷ್ಣ ಶ್ಲೋಕ ವಸುದೇವಸುತಂ ದೇವಂ ಕಂಸ ಚಾಣೂರ ಮರ್ದನಂ | ದೇವಕೀ ಪರಮಾನಂದಂ ಕೃಷ್ಣಂ…

Read More

ಹಾಸನ: ಕುಗ್ರಾಮವಾದ ತಗಡೂರಿನಲ್ಲಿ ಪ್ರೌಢಶಾಲೆ ಪ್ರಾರಂಭವಾಗಿ 40 ವಸಂತಗಳು ತುಂಬುತ್ತಿರುವ ಹೊತ್ತಿನಲ್ಲಿ ಅಲ್ಲಿ ಕಲಿತು ಹೋದ ಹಳೆ ವಿದ್ಯಾರ್ಥಿಗಳೆಲ್ಲರೂ ಒಟ್ಟಾಗಿ ಸೇರಿ, ಇದೇ ಸೆ.19ರಂದು ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಇದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಓದಿದಂತ ಶಾಲೆ ಕೂಡ ಆಗಿದೆ. ಶಾಲೆಯಲ್ಲಿ ಪಾಠ ಹೇಳಿಕೊಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ಭದ್ರ ಅಡಿಪಾಯ ಹಾಕಿದ ಸುಮಾರು 30 ಶಿಕ್ಷಕರನ್ನು ಒಂದೇ ವೇದಿಕೆಯಲ್ಲಿ ಸನ್ಮಾನಿಸುವ ಮೂಲಕ ಗುರುವಂದನಾ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲು ಹಳೆ ವಿದ್ಯಾರ್ಥಿಗಳ ವೇದಿಕೆ ಸಂಘಟಿತವಾದ ಪ್ರಯತ್ನ ಮಾಡಿದೆ. ನಾನೂ ಈ ಶಾಲೆಯ ಹಳೆಯ ವಿದ್ಯಾರ್ಥಿ ಎನ್ನುವುದು ಹೆಮ್ಮೆ ಮತ್ತು ಹೆಗ್ಗಳಿಕೆ. ಇಂದು ಖಾಸಗಿ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ನಾ ಮುಂದು, ತಾ ಮುಂದು ಎಂದು ನಿತ್ಯವೂ ಒಂದೇ ಊರಿಗೆ ಆರೇಳು ಬಸ್‌ಗಳು ಬರುತ್ತವೆ. ಅಂದು ಪ್ರೌಢಶಾಲೆ ವಿದ್ಯಾಭ್ಯಾಸ ಪಡೆಯಲು ಆರೇಳು ಕಿ.ಮೀ. ದೂರದಲ್ಲಿರುವ ನುಗ್ಗೇಹಳ್ಳಿ, ಬಾಗೂರು ಅಥವಾ ಚಿಕ್ಕೋನಹಳ್ಳಿ ಗೇಟ್‌ಗೆ ಹೋಗಬೇಕಾದ…

Read More

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಚಾಲಕ ರಾಜೀವ್ ಬೀರಸಾಲ ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ್ದಾರೆ. ಇಂತಹ ಚಾಲಕನ ಸಾವಿಗೆ ಕಂಬನಿ ಮಿಡಿದಿರುವಂತ ರಾಮಲಿಂಗಾರೆಡ್ಡಿ, ಅವಲಂಬಿತರಿಗೆ ನೌಕರಿ, ಆರ್ಥಿಕ ನೆರವಿಗೆ ಸೂಚಿಸಿದ್ದಾರೆ. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ರಾಜೀವ್ ಬೀರಸಾಲ, ಚಾಲಕ- ಕಂ-ನಿರ್ವಾಹಕ ಬಿಲ್ಲೆ. ಸಂಖ್ಯೆ. 2469,ವಯಸ್ಸು-56 ವರ್ಷ, ಸೇವೆಗೆ ಸೇರಿದ ದಿನಾಂಕ: 23.02.2005, ಇವರು ಹರಿಹರ ಘಟಕದ ಅನುಸೂಚಿ ಸಂಖ್ಯೆ 47 BA (ರಾಜಹಂಸ )ಬೆಂಗಳೂರು – ದಾವಣಗೆರೆ ಮಾರ್ಗದಲ್ಲಿ ಕಾರ್ಯಚರಣೆಯಲ್ಲಿದ್ದಾಗ ನೆಲಮಂಗಲ ಟೋಲ್ ಹತ್ತಿರ ವಾಹನ ಚಾಲನೆ ಮಾಡುತ್ತಿದ್ದಾಗ ಹೃದಯಾಘಾತವಾಗಿರುತ್ತದೆ. ಆದರೂ ಬಸ್ಸಿನಲ್ಲಿರುವ ಪ್ರಯಾಣಿಕರನ್ನು ರಕ್ಷಿಸಿ, ಬಸ್ಸನ್ನು ಹೆದ್ದಾರಿಯ ಒಂದು ಬದಿಯಲ್ಲಿ ಪಕ್ಕಕ್ಕೆ ನಿಲ್ಲಿಸಿ, ಭಾರಿ ಅನಾಹುತ ತಪ್ಪಿಸಿದ್ದಾರೆ. ಈ ಮೂಲಕ ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿ ನೆಲಮಂಗಲ ಆಸ್ಪತ್ರೆಯಲ್ಲಿ ಮರಣ ಹೊಂದಿರುತ್ತಾರೆ ಎಂದಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮೃತ ಚಾಲಕರ ಆತ್ಮಕ್ಕೆ ಶಾಂತಿ…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದಂತ ಗುರುಕೃಷ್ಣ ಶಣೈ ಅವರನ್ನು ಎತ್ತಂಗಡಿ ಮಾಡಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆದೇಶಿಸಿದ್ದಾರೆ. ಈ ಕುರಿತು ಶಿವಮೊಗ್ಗ ಜಿಲ್ಲಾ ಪಂಚಾಯ್ತಿಯ ಸಿಇಓ ಆದೇಶ ಹೊರಡಿಸಿದ್ದು,  ಶಿವಪುಕಾಶ್.ಬಿ.ಎಲ್., ಸಹಾಯಕ ಕೃಷಿ ನಿರ್ದೇಶಕರು, ಸಾಗರ ಇವರಿಗೆ ಆಡಳಿತಾತ್ಮಕ ಹಿತ ದೃಷ್ಟಿಯಿಂದ ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದವರೆಗೆ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯಿತಿ, ಸಾಗರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ವಹಿಸಿ ಆದೇಶಿಸಿದ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ತಾಲ್ಲೂಕು ಪಂಚಾಯತ್, ಸಾಗರ ಹುದ್ದೆಯ ಪುಭಾರವನ್ನು ಗುರುಕೃಷ್ಣ ಎಂ ಶೆಣೈ, ಕಾರ್ಯನಿರ್ವಾಹಕ ಅಧಿಕಾರಿ(ಪ್ರಭಾರ) ಇವರಿಂದ ವಹಿಸಿಕೊಳ್ಳುವಂತೆ ಸೂಚಿಸಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

Read More

ಹುಬ್ಬಳ್ಳಿ: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಸೋಮವಾರದಂದು ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ‌ ಸರ್ಕಾರ ಸದಾ ಸಿದ್ದ. ಯಾವತ್ತೂ…

Read More