Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಎಂಎಲ್ಸಿ ರವಿಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜುಲೈ.8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚಿಸಿದೆ. ಇಂದು ಸಿಎಸ್ ಶಾಲಿನಿ ರಜನೀಶ್ ವಿರುದ್ಧದ ಅವಹೇಳನಕಾರಿ ಪ್ರಕರಣ ಸಂಬಂಧ ಹೈಕೋರ್ಟ್ ಗೆ ಪ್ರಕರಣ ರದ್ದುಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಪೀಠವು ನಡೆಸಿತು. ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಜುಲೈ.8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶಿಸಿದೆ. ಇನ್ನೂ ಸಿಎಸ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣದ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್ ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ಗೆ ಸೂಚಿಸಿದೆ. ಈ ಮೂಲಕ ಹೈಕೋರ್ಟ್ ರವಿಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ. https://kannadanewsnow.com/kannada/good-news-for-state-transport-bus-passengers-the-ticket-price-roundup-system-will-soon-be-abolished/ https://kannadanewsnow.com/kannada/cuet-ug-result-2025-declared/
ಬೆಂಗಳೂರು: ಮಹದೇವಪುರ ವಲಯದ ಎ.ಇ.ಸಿ.ಎಸ್ ಲೇಔಟ್ ನಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ಅನಧಿಕೃತವಾಗಿ ನಿರ್ಮಿಸಿದ ಕಟ್ಟಡ ವ್ಯತ್ತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ಮಹದೇವಪುರ ವಲಯ ಆಯುಕ್ತರಾದ ರಮೇಶ್ ಅವರು ತಿಳಿಸಿದರು. ಮಹದೇವಪುರ ವಲಯ ಎ.ಇ.ಸಿ.ಎಸ್ ಲೇಔಟ್, ಸಿ-ಬ್ಲಾಕ್ 1ನೇ ಮುಖ್ಯ ರಸ್ತೆಯಲ್ಲಿ ಬರುವ ಸೈಟ್ ಸಂ. 735 ರ ಸ್ವತ್ತಿನ ಮಾಲೀಕರಾದ ಭಾಸ್ಕರ್ ಎಂಬುವವರು 38 X 59 ಚ.ಅ (11.80 X 18.10ಮೀ) ಸೈಟ್ ನಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ಅನಧಿಕೃತವಾಗಿ ನೆಲಮಾಳಿಗೆ + ನೆಲ ಸೇರಿದಂತೆ 6 ಅಂತಸ್ತು ಕಟ್ಟಡ ನಿರ್ಮಾಣ ಮಾಡಿರುತ್ತಾರೆ. ಮುಂದುವರಿದು, ಸ್ವತ್ತಿನ ಮಾಲೀಕರಿಗೆ ಕಟ್ಟಡದ ಮಾಲೀಕರಿಗೆ ಈಗಾಗಲೇ ಬಿಬಿಎಂಪಿ 2020 ಕಾಯ್ದೆಯಡಿ ತಾತ್ಕಾಲಿಕ ಆದೇಶ ಹಾಗೂ ಸ್ಥಿರಿಕರಣ ಆದೇಶದ ನೋಟೀಸ್‌ಗಳನ್ನು ಜಾರಿ ಮಾಡಲಾಗಿರುತ್ತದೆ. ಆದರೂ ಸಹಾ ಕಟ್ಟಡ ನಿರ್ಮಾಣ ಕಾರ್ಯ ನಿಲ್ಲಿಸದ ಪರಿಣಾಮ, ಇಂದು ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಲಾಗಿರುತ್ತದೆ. ಹೆಚ್ಚುವರಿಯಾಗಿ ನಿರ್ಮಿಸಿರುವ 2 ಮಹಡಿಗಳನ್ನು ಮೂರು ಕೊರೆಯುವ ಯಂತ್ರಗಳು ಹಾಗೂ…
ಬೆಂಗಳೂರು: ರಾಜ್ಯಾದ್ಯಂತ 4134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ತೆರೆಯುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಬಿಳಿಮಲೆ, ಸಂವಹನಕ್ಕಾಗಿ ತಾಯ್ನುಡಿಯನ್ನು ಹೊರತಾದ ಯಾವುದೇ ಭಾಷೆಗಳನ್ನು ಕಲಿಯುವುದು ತಪ್ಪಲ್ಲವೆನ್ನುತ್ತಲೇ, ಅಂತಹ ಪ್ರಯತ್ನಗಳು ನಮ್ಮ ಮಾತೃಭಾಷೆಯನ್ನೇ ಮೂಲೆಗುಂಪಾಗಿಸುವ ಕಾರ್ಯಕ್ಕೆ ಪ್ರಾಧಿಕಾರ ಸಾಕ್ಷಿಯಾಗಬಯಸುವುದಿಲ್ಲ ಎಂದು ಹೇಳಿದ್ದಾರೆ. ನಾಡಿನ ಅಭಿವೃದ್ಧಿ ಎನ್ನುವುದು ಸಂಪೂರ್ಣವಾಗಿ ಅಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ಅವಲಂಬಿಸಿದೆ. ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಸಾಂಸ್ಕೃತಿಕ ಬದುಕಿಗೆ ಕಲಿಕಾ ವ್ಯವಸ್ಥೆಯೇ ನಿರ್ಣಾಯಕ ಪಾತ್ರವನ್ನು ಹೊಂದಿರುತ್ತದೆ. ವಿಶ್ವದ್ಯಾಂತ ನಡೆಸಿರುವ ಅಧ್ಯಯನಗಳಲ್ಲಿ ಪ್ರಾರಂಭಿಕವಾಗಿ ತಾಯ್ನುಡಿಯನ್ನು ಪ್ರಭುತ್ವದ ಮಟ್ಟಕ್ಕೆ ಕಲಿಸುವುದೇ ಜ್ಞಾನಾರ್ಜನೆಯ ದೃಷ್ಠಿಯಿಂದ ಬುನಾದಿ ಎಂಬುದನ್ನು ನಿರೂಪಿಸಿವೆ ಎಂದಿರುವ ಬಿಳಿಮಲೆ, ತಾಯ್ನುಡಿಯು ಅನನ್ಯತೆ, ಸಾಂಸ್ಕೃತಿಕ ಗುರುತು, ಸ್ವಾಭಿಮಾನ,…
ಬೆಂಗಳೂರು, ಜು3: ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಶಿಫಾರಸು ಮಾಡಿದ್ದಾರೆ. ಉನ್ನತ ಮಟ್ಟದ ವಿಚಾರಣಾ ಸಮಿತಿಯ ಪ್ರಾಥಮಿಕ ವರದಿ ಸ್ವೀಕರಿಸಿ, ಪರಾಮರ್ಶಿಸಿದ ಸಚಿವರು, ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಮೇಲ್ನೋಟಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಈ ಶಿಫಾರಸು ಮಾಡಿದ್ದಾರೆ. ವೇತನ ಪಾವತಿಸದಿರುವುದೂ ಕರ್ತವ್ಯಲೋಪ: ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿ ಮಾಡಲು ಏಪ್ರಿಲ್ ತಿಂಗಳಾಂತ್ಯಕ್ಕೇ ಹಣ ಬಿಡುಗಡೆಯಾಗಿದ್ದರೂ, ಜೂನ್ ತಿಂಗಳವರೆಗೆ ವೇತನ ಪಾವತಿಸದಿರುವುದು ಡಿಸಿಎಫ್ ಚಕ್ರಪಾಣಿ ಅವರ ಮೂಲಭೂತ ಕರ್ತವ್ಯ ಲೋಪವಾಗಿದ್ದು, ಇದು ಗಸ್ತು ಕಾರ್ಯಕ್ಕೆ ಹಿನ್ನಡೆ ಉಂಟು ಮಾಡಿದೆ ಈ ಸಂಬಂಧ ಡಿಸಿಎಫ್ ಚಕ್ರಪಾಣಿ ಅಮಾನತಿಗೆ ಶಿಫಾರಸು ಮಾಡಿ, ಇಲಾಖಾ ವಿಚಾರಣೆ ಮಾಡಲು ಶಿಫಾರಸು ಮಾಡಿದ್ದಾರೆ.…
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ಸುಗಳಲ್ಲಿ ಸಂಚರಿಸುವಂತ ಪ್ರಯಾಣಿಕರಿಗೆ ಕೆಲವೊಂದು ಬಸ್ಸುಗಳಲ್ಲಿ ಟಿಕೆಟ್ ದರದಲ್ಲಿ ರೌಂಡಪ್ ಎನ್ನುವ ಹೆಚ್ಚುವರಿ ಹಣವನ್ನು ವಸೂಲಿ ಮಾಡುತ್ತಿರುವಂತ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವಂತ ಸಾರಿಗೆ ನಿಗಮವು ರೌಂಡಪ್ ವ್ಯವಸ್ಥೆಯನ್ನು ರದ್ದುಗೊಳಿಸುವಂತ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಆದೇಶ ಹೊರಡಿಸಿದ್ದು, ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ 774/2016 ದಿನಾಂಕ 03-03-2016 ರಲ್ಲಿ ಪ್ರತಿಷ್ಠಿತ ಸಾರಿಗೆಗೆ ಅವತಾರ್ ಕೌಂಟರ್‌ಗಳಲ್ಲಿ ಮತ್ತು ಇಟಿಎಂ ಯಂತ್ರಗಳಲ್ಲಿ ಚಿಲ್ಲರೆ ಸಮಸ್ಯೆಯಿಂದ ಪ್ರಯಾಣದರವನ್ನು ರೌಂಡ್ ಆಫ್ (Round-off) ಮಾಡಲು ಆದೇಶಿಸಲಾಗಿದೆ ಎಂದಿದೆ. ಪ್ರಸ್ತುತ, ಸಾರ್ವಜನಿಕ ಪ್ರಯಾಣಿಕರು ಟಿಕೇಟ್ ಕಾಯ್ದಿರಿಸಲು ಕೌಂಟರ್‌ಗಳಲ್ಲಿ POS ಯಂತ್ರಗಳನ್ನು ಹಾಗೂ ಇಟಿಎಂ ಯಂತ್ರಗಳಲ್ಲಿ UPI ವ್ಯವಸ್ಥೆ ಒದಗಿಸಿರುವುದರಿಂದ ಪ್ರಯಾಣದರವನ್ನು ರೌಂಡ್ ಆಫ್ (Round-off) ಮಾಡುವ ಅವಶ್ಯಕತೆಯಿಲ್ಲದಿರುವುದರಿಂದ, ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ 774/2016 ದಿನಾಂಕ 03-03-2016 ನ್ನು ಹಿಂಪಡೆಯಲಾಗಿದೆ ಎಂಬುದಾಗಿ ತಿಳಿಸಿದೆ. ಉಲ್ಲೇಖ-01 ರಲ್ಲಿನ ಸಾಮಾನ್ಯ…
ಶಿವಮೊಗ್ಗ: ಹಸಿರುಮಕ್ಕಿ ಸೇತುವೆ ನಿರ್ಮಾಣದಿಂದ ಮದ್ಯ ಕರ್ನಾಟಕ (ದಕ್ಷಿಣ ಒಳನಾಡಿಗೆ), ಉತ್ತರ ಕರ್ನಾಟಕದಿಂದ ಕರಾವಳಿ ಭಾಗಕ್ಕೆ ಸಂಪರ್ಕ ಸಾಧ್ಯ ವಾಗಲಿದೆ. ಮಂಗಳೂರು ಪಟ್ಟಣ, ಮಂಗಳೂರು ಬಂದರು, ಕುಂದಾಪುರ ಪಟ್ಟಣಗಳಿಗೆ ಸಹ ಸಮೀಪವಾಗಲಿದೆ. ಸಾಗರ ತಾಲ್ಲೂಕಿನಿಂದ ಕೊಲ್ಲೂರು, ಉಡುಪಿ ಮುಂತಾದ ಯಾತ್ರಾಸ್ಥಳಗಳಿಗೆ ತೆರಳುವ ಪ್ರವಾಸಿಗರಿಗೆ ಅನುಕೂಲವಾಗಲಿದೆ ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಸಚಿವ ಮಧು ಬಂಗಾರಪ್ಪ ಜೊತೆಗೂಡಿ ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪದ ಹಸಿರು ಮಕ್ಕಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದರು. ಮಳೆಗಾಲದಲ್ಲಿ ತೊಂದರೆ ಇಲ್ಲದ ರೀತಿಯಲ್ಲಿ ಪಿಲ್ಲರ್ ಮೇಲೆತ್ತುತ್ತಿದ್ದಾರೆ. ಕೊಲ್ಲೂರಿಗೆ ಬಹಳ ಹತ್ತಿರದ ಮಾರ್ಗವಾಗಿದೆ. ಸಿಗಂಧೂರು ಸೇತುವೆ ಬೇಗ ಆಗಲಿ. ಇದು ಆಗಬಾರದು ಎನ್ನುವ ಉದ್ದೇಶದಿಂದ ರಾಘವೇಂದ್ರ, ಹಾಲಪ್ಪನವರು ತಡ ಮಾಡಿದ್ದಾರೆ. ಹಸಿರುಮಕ್ಕಿ ಸೇತುವೆ ಬಗ್ಗೆ ಒಂಚೂರು ಗಮನ ಹರಿಸಲಿಲ್ಲ. ಹೀಗಾಗಿಯೇ ಕಾಮಗಾರಿ ತಡವಾಗುತ್ತಿದೆ. ಈಗಾಗಲೇ ಕಾಮಗಾರಿ ಮುಕ್ತಾಯದ ಡೆಡ್ ಲೈನ್ ಕೊಟ್ಟಿದ್ದಾರೆ. ಮೇ ಒಳಗೆ ಹಸಿರುಮಕ್ಕಿ ಸೇತುವೆ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ ಎಂದರು. https://youtu.be/5h2Zl-YYnKE…
ಬೆಂಗಳೂರು: ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಟಿಕೆಟ್ ದರದಲ್ಲಿನ ರೌಂಡಪ್ ವ್ಯವಸ್ಥೆಯನ್ನು ಶೀಘ್ರವೇ ರದ್ದುಪಡಿಸಲಾಗುತ್ತಿದೆ. ಹೀಗಾಗಿ ಹೆಚ್ಚುವರಿ ರೌಂಡಪ್ ಹಣ ಪ್ರಯಾಣಿಕರಿಗೆ ಉಳಿದಂತೆ ಆಗಲಿದೆ. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರೌಂಡಪ್ ವ್ಯವಸ್ಥೆಯು ಪ್ರತಿಷ್ಟಿತ ಸಾರಿಗೆಗಳಲ್ಲಿ ( Premium Service buses 400 ಬಸ್ಸುಗಳಲ್ಲಿ ಮಾತ್ರ) ಜಾರಿಯಲ್ಲಿದ್ದು, ಅದರಲ್ಲೂ ETM ಮತ್ತು ಅವತಾರ್ ಕೌಂಟರ್ ಗಳಲ್ಲಿ ಪಡೆಯುವ ಟಿಕೇಟ್ ಗೆ ಮಾತ್ರ ಈ ವ್ಯವಸ್ಥೆ ಜಾರಿಯಲ್ಲಿತ್ತು. ಅಂದರೆ ಉದಾ: ಪ್ರಯಾಣ ದರ ರೂ.101 ರಿಂದ 105 ರವರೆಗೂ ಇದ್ದಲ್ಲಿ ರೂ.100 ಪ್ರಯಾಣಿಕರಿಂದ ಪಡೆಯಲಾಗುತ್ತದೆ ಅದೇ ರೀತಿ ರೂ.106 ರಿಂದ ರೂ.109 ಇದ್ದಲ್ಲಿ ಪ್ರಯಾಣಿಕರಿಂದ ರೂ.110 ಪಡೆಯಲಾಗುತ್ತಿತ್ತು ಎಂದಿದೆ. ಈಗ ನಿಗಮದಲ್ಲಿ UPI ಯಶಸ್ವಿ ಅನುಷ್ಟಾನವಾಗಿರುವುದರಿಂದ ರೌಡಂಪ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲು ಈಗಾಗಲೇ ತೀರ್ಮಾನ ಕೈಗೊಳ್ಳಲಾಗಿದ್ದು, ತಂತ್ರಾಂಶದಲ್ಲಿ ಈ ಸಂಬಂಧ ಬದಲಾವಣೆ ಮಾಡುವ ಕ್ರಮ ಪ್ರಗತಿಯಲ್ಲಿರುತ್ತದೆ ಎಂದು ತಿಳಿಸಿದೆ. ಹೀಗಾಗಿ ಶೀಘ್ರವೇ…
ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಇಂದು ಜುಲೈ 4, 2025 ರಂದು ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಯ ಪದವಿಪೂರ್ವ (CUET UG) ಫಲಿತಾಂಶಗಳನ್ನು ಪ್ರಕಟಿಸಿದೆ. ಪ್ರವೇಶ ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು ಮತ್ತು ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಅಧಿಕೃತ ವೆಬ್‌ಸೈಟ್: cuet.nta.nic.in ನಲ್ಲಿ ಅಂಕಪಟ್ಟಿಗಳನ್ನು ಡೌನ್‌ಲೋಡ್ ಮಾಡಬಹುದು. CUET UG ಫಲಿತಾಂಶ 2025 ಜೊತೆಗೆ, ಸಂಸ್ಥೆಯು ನೋಂದಾಯಿತ ವಿದ್ಯಾರ್ಥಿಗಳ ಸಂಖ್ಯೆ, ಹಾಜರಾದವರು, ಉತ್ತೀರ್ಣರು, ಒಟ್ಟಾರೆ ಉತ್ತೀರ್ಣ ದರ ಮತ್ತು ಟಾಪರ್‌ಗಳ ಪಟ್ಟಿಯಂತಹ ಪ್ರಮುಖ ಅಂಕಿಅಂಶಗಳನ್ನು ಬಿಡುಗಡೆ ಮಾಡುತ್ತದೆ. CUET ಫಲಿತಾಂಶ 2025 ಅನ್ನು ಈ ರೀತಿ ಚೆಕ್ ಮಾಡಿ ಅಭ್ಯರ್ಥಿಗಳು ಅಂಕಪಟ್ಟಿಯನ್ನು ಪ್ರವೇಶಿಸಲು ನೀಡಿರುವ ಸೂಚನೆಗಳನ್ನು ಅನುಸರಿಸಬಹುದು: ಹಂತ 1: ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: cuet.nta.nic.in ಹಂತ 2: ಮುಖಪುಟದಲ್ಲಿ, CUET UG 2025 ಅಂಕಪಟ್ಟಿ ಲಿಂಕ್ ಅನ್ನು ನೋಡಿ ಮತ್ತು ಅದರ ಮೇಲೆ ಕ್ಲಿಕ್ ಮಾಡಿ ಹಂತ 3: ಅರ್ಜಿ ಸಂಖ್ಯೆ ಮತ್ತು ಪಾಸ್‌ವರ್ಡ್…
ಶಿವಮೊಗ್ಗ: ಹಸಿರುಮಕ್ಕಿ ಸೇತುವೆ ನಿರ್ಮಾಣದಿಂದಾಗಿ ಈ ಭಾಗದ ಜನರ ಕನಸು ನನಸಾಗುತ್ತಿದೆ. ಶೇ.80ರಷ್ಟು ಕೆಲಸ ಆಗಿದ್ದು ಮೇ ತಿಂಗಳ ವೇಳೆಗೆ ಸೇತುವೆ ಲೋಕಾರ್ಪಣೆಗೊಳ್ಳಲಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಶುಕ್ರವಾರ ಸಾಗರ ತಾಲ್ಲೂಕಿನ ಹಸುರುಮಕ್ಕಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಣೆ ಮಾಡಿ ಅವರು ಮಾತನಾಡಿದರು. ಸಾಗರ ತಾಲ್ಲೂಕಿನ ಹಸಿರುಮಕ್ಕಿಯಲ್ಲಿ ರಾಜ್ಯ ಸರ್ಕಾರದಿಂದ ರೂ. 125.67 ಕೋಟಿ ಮೊತ್ತದಲ್ಲಿ ಹಸಿರುಮಕ್ಕಿ ಸೇತುವೆ ಕಾಮಗಾರಿ ಕೈಗೊಳ್ಳಲಾಗಿದೆ. 1.115 ಕಿ ಲೋ ಮೀಟರ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಹಸಿರುಮಕ್ಕಿ ಕಡೆ 345 ಮೀ ,ಕೊಲ್ಲೂರು ಕಡೆ 165 ಮೀ ಕಾಮಗಾರಿ ನಡೆಯುತ್ತಿದೆ. ಸೇತುವೆ ಅಗಲ ೮.೫೦ ಮೀ(ದ್ವಿಪಥ ಸಂಚಾರ), 34 ತಳಪಾಯಗಳಿವೆ. ಈಗ ಶೇ. 80 ಕಾಮಗಾರಿ ಪೂರ್ಣಗೊಂಡಿದೆ. ರೂ. 25 ಕೋಟಿ ಹಣ ಬಿಡುಗಡೆ ಬಾಕಿ ಇದೆ ಎಂದರು. ನಮ್ಮ ಸರ್ಕಾರ ಬಂದ ಮೇಲೆ ಕ್ಷಿಪ್ರಗತಿಯಲ್ಲಿ, ಗುಣಮಟ್ಟದ ಕಾಮಗಾರಿ ನಡೆಯುತ್ತಿದ್ದು, ಹಣದ ಕೊರತೆ ಇಲ್ಲ.…
ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಬಸ್ ಪಾಸ್ ಅನ್ನು ಈಗ ಅರೆಕಾಲಿಕ, ಸಂಪಾದಕರಿಗೂ ಮುಖ್ಯಸ್ಥರ ಶಿಫಾರಸ್ಸು ಪತ್ರ ನೀಡಿದ್ರೆ ವಿತರಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಕುರಿತಂತೆ ತಿದ್ದುಪಡಿ ಆದೇಶವನ್ನು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದಾರೆ. ಅದರಲ್ಲಿ ಪೂರ್ಣಾವಧಿ, ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ನೇಮಕಾತಿ ಪತ್ರ, ಸಂಪಾದಕರ, ಮುಖ್ಯಸ್ಥರ ಶಿಫಾರಸ್ಸು ಪತ್ರ, ಸಂಸ್ಥೆಯಿಂದ ಪಡೆಯುತ್ತಿರುವ ಲೈನೇಜ್, ಸಂಭಾವನೆ ಪಡೆಯುತ್ತಿರುವ ಬಗ್ಗೆ ಕಳೆದ 11 ತಿಂಗಳ ಅವಧಿಯ ಬ್ಯಾಂಕ್ ಖಾತೆಯ ವಿವರಗಳು, ಸಂಬಂಧಿತ ದಾಖಲೆಗಳನ್ನು ಒದಗಿಸಲು ಅವಕಾಶ ನೀಡಿದೆ. ಅಂದಹಾಗೆ ಈ ಮೊದಲು ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಲು ಪೂರ್ಣಾವಧಿಯ ಪತ್ರಕರ್ತರು ಆಗಿರಬೇಕು ಎಂಬುದಾಗಿ ಷರತ್ತು ವಿಧಿಸಲಾಗಿತ್ತು. ಈ ನಿಯಮದ ಕಾರಣ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೈತಪ್ಪುವ ಆತಂಕ ಎದುರಾಗಿತ್ತು. ಏಕೆಂದರೆ…