Subscribe to Updates
Get the latest creative news from FooBar about art, design and business.
Author: kannadanewsnow09
ಹಾನಗಲ್ : “ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ಭಾನುವಾರ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಮಾಜಿ ಸಿಎಂ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. 2013 ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್ ಗಳಿಗೆ ನೀಡುವ ತ್ರೀ ಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು” ಎಂದು ಹೇಳಿದರು. “665.75 ಕೋಟಿ ಹಣವನ್ನು ನಿಮ್ಮ ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತಿದ್ದೇವೆ. 418 ಕೋಟಿ ವೆಚ್ಚದಲ್ಲಿ ಬಾಳಂಬೀಡು ಹಾಗೂ ಇತರೇ 72 ಗ್ರಾಮಗಳ 162 ಕೆರೆಗಳು.…
ಲಂಡನ್: ಪಾಕಿಸ್ತಾನದ ಇಬ್ಬರು ಪತ್ರಕರ್ತರಾದ ಸಫೀನಾ ಖಾನ್ ಮತ್ತು ಅಸಾದ್ ಅಲಿ ಮಲಿಕ್ ಲಂಡನ್ನ ಉಪಾಹಾರ ಗೃಹದಲ್ಲಿ ಪರಸ್ಪರ ನಿಂದಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಎಆರ್ವೈ ನ್ಯೂಸ್ ಮತ್ತು ಹಮ್ ನ್ಯೂಸ್ನ ಇತರ ಪತ್ರಕರ್ತರೊಂದಿಗೆ ಮಲಿಕ್ ತನ್ನ ಮೇಲೆ ಸಾಮೂಹಿಕ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ ಎಂದು ಖಾನ್ ಆರೋಪಿಸಿದ್ದಾರೆ. ನಿಯೋ ನ್ಯೂಸ್ನಲ್ಲಿ ಕೆಲಸ ಮಾಡುವ ಮತ್ತು ಲಂಡನ್ನ ಪಾಕಿಸ್ತಾನ್ ಪ್ರೆಸ್ ಕ್ಲಬ್ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಖಾನ್, ಯುಕೆ ಪೊಲೀಸರನ್ನು ಟ್ಯಾಗ್ ಮಾಡುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ತನಗೆ ಏನಾದರೂ ಸಂಭವಿಸಿದರೆ, ಎಆರ್ವೈ ನ್ಯೂಸ್ ವರದಿಗಾರ ಫರೀದ್ ಮತ್ತು ಹಮ್ ನ್ಯೂಸ್ ಪತ್ರಕರ್ತ ರಫೀಕ್ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಲಂಡನ್ ಮೂಲದ ಪತ್ರಕರ್ತೆ ಹೇಳಿದ್ದಾರೆ. ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪ್ರಧಾನ ಕಾರ್ಯದರ್ಶಿ ಸಲ್ಮಾನ್ ಅಕ್ರಮ್ ರಾಜಾ ಅವರ ಮಾಧ್ಯಮ ಪ್ರಸಾರದ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಸಲ್ಮಾನ್ ಅಕ್ರಮ್ ರಾಜಾ ಅವರ ಪ್ರಸಾರದ…
ಹಾವೇರಿ: “ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ಭಾನುವಾರ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಮಾಜಿ ಸಿಎಂ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. 2013 ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್ ಗಳಿಗೆ ನೀಡುವ ತ್ರೀ ಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು” ಎಂದು ಹೇಳಿದರು. “665.75 ಕೋಟಿ ಹಣವನ್ನು ನಿಮ್ಮ ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತಿದ್ದೇವೆ. 418 ಕೋಟಿ ವೆಚ್ಚದಲ್ಲಿ ಬಾಳಂಬೀಡು ಹಾಗೂ ಇತರೇ 72 ಗ್ರಾಮಗಳ 162 ಕೆರೆಗಳು. 116…
ಹಾಸನ: ನಾನು ಟೈಂ ಬರ್ಲಿ ಅಂತ ಕಾಯ್ತಾ ಇದ್ದೀನಿ. ಎಲ್ಲವನ್ನೂ ಬಡ್ಡಿ ಸಮೇತ ತೀರಿಸದೇ ಹೋದ್ರೆ ನಾನು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಮಗನೇ ಅಲ್ಲ ಎಂಬುದಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಗುಡುಗಿದ್ದಾರೆ. ಜಿಲ್ಲೆಯ ದ್ಯಾಪಲಾಪುರ ಗ್ರಾಮದಲ್ಲಿ ನಡೆದಂತ ಶ್ರೀ ಆಂಜನೇಯ ಸ್ವಾಮಿ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಕೆಲವರು ಹೇಳುತ್ತಿದ್ದಾರೆ. ರೇವಣ್ಣ, ದೇವೇಗೌಡರದ್ದು ಮುಗೀತು ಅಂತ. ಆದರೇ ಈ ಜಿಲ್ಲೆಯ ಜನರಿಗೆ ಗೊತ್ತು, ದೇವೇಗೌಡ ಅವರ ಕೊಡುಗೆ ಏನು ಅಂತ ಎಂಬುದಾಗಿ ಹೇಳಿದರು. ಹಾಸನದಲ್ಲಿ ರೈಲ್ವೆ ಯೋಜನೆ, ಇಂಜಿನಿಯರಿಂಗ್ ಕಾಲೇಜು, ಮೆಡಿಕಲ್ ಕಾಲೇಜು, ನರ್ಸಿಂಗ್ ಕಾಲೇಜು ಮಾಡಿದ್ದು ಯಾರು.? ಕುಮಾರಸ್ವಾಮಿ ಅವರು ಹಾಸನ ಜಿಲ್ಲೆಯ ಶಿಕ್ಷಣಕ್ಕೆ ಐದು ಸಾವಿರ ಕೋಟಿ ಕೊಟ್ಟಿದ್ರು ಎಂಬುದಾಗಿ ತಿಳಿಸಿದರು. ಕೆಲವು ಅಧಿಕಾರಿಗಳು ರೇವಣ್ಣ ಹಾಗೂ ದೇವೇಗೌಡರದ್ದು ಮುಗೀತು ಎಂದು ತಿಳಿದುಕೊಂಡಿದ್ದಾರೆ. ಈ ಜಿಲ್ಲೆ ಲೂಟಿಕೋರರ ಕೈ ಸೇರಿದೆ. ನಾನು ಇಲ್ಲೇ ಇರ್ತೀನಿ. ಇದೆಲ್ಲ ಎಷ್ಟು ದಿನ ಇರುತ್ತೋ ಕಾದು…
ನವದೆಹಲಿ: ಇಸ್ರೇಲ್ ರಾಜಧಾನಿಯ ವಿಮಾನ ನಿಲ್ದಾಣದ ಬಳಿ ಕ್ಷಿಪಣಿ ದಾಳಿ ನಡೆದ ಕಾರಣ ದೆಹಲಿಯಿಂದ ಟೆಲ್ ಅವೀವ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಭಾನುವಾರ ಅಬುಧಾಬಿಗೆ ತಿರುಗಿಸಲಾಯಿತು ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ. ಎಎಫ್‌ಪಿ ಪ್ರಕಾರ, ಟೆಲ್ ಅವೀವ್‌ನ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ವಿಮಾನದ ಮಾರ್ಗ ಬದಲಾವಣೆಯನ್ನು ದೃಢಪಡಿಸಿದ್ದಾರೆ. ವಿಮಾನವು ಟೆಲ್ ಅವೀವ್‌ನಲ್ಲಿ ಇಳಿಯುವ ಒಂದು ಗಂಟೆಗಿಂತ ಕಡಿಮೆ ಸಮಯ ಮೊದಲು ದಾಳಿ ನಡೆದಿದೆ ಎಂದು ಪಿಟಿಐ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಬೋಯಿಂಗ್ 787 ವಿಮಾನದೊಂದಿಗೆ ಕಾರ್ಯನಿರ್ವಹಿಸುತ್ತಿದ್ದ ಏರ್ ಇಂಡಿಯಾ ವಿಮಾನ AI139 ದೆಹಲಿಗೆ ಹಿಂತಿರುಗಲಿದೆ ಎಂದು ಮೂಲಗಳು ತಿಳಿಸಿವೆ. ವಿಮಾನ ಟ್ರ್ಯಾಕಿಂಗ್ ವೆಬ್‌ಸೈಟ್ Flightradar24.com ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಅಧಿಕಾರಿಗಳು ಅಬುಧಾಬಿಗೆ ತಿರುಗಿಸಲು ನಿರ್ಧರಿಸಿದಾಗ ಏರ್ ಇಂಡಿಯಾ ವಿಮಾನವು ಜೋರ್ಡಾನ್ ವಾಯುಪ್ರದೇಶದಲ್ಲಿತ್ತು. ಟೆಲ್ ಅವೀವ್‌ನಿಂದ ದೆಹಲಿಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಭಾನುವಾರ ರದ್ದುಗೊಳಿಸಲಾಗಿದೆ. ಏರ್ ಇಂಡಿಯಾದಿಂದ ಹೇಳಿಕೆಗಾಗಿ ಕಾಯಲಾಗುತ್ತಿತ್ತು. ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿ ಟೆಲ್ ಅವೀವ್ ವಿಮಾನ…
ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕರು ಸುಳ್ಳು ಹೇಳುತ್ತಿದ್ದು, ಅವರು ತಮ್ಮ ಮಾತನ್ನು ಸಾಬೀತುಪಡಿಸಿದರೆ ನಾನು ವಿರೋಧ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡುವುದಲ್ಲದೆ, ರಾಜಕೀಯದಿಂದ ನಿವೃತ್ತಿ ಘೋಷಿಸುತ್ತೇನೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸವಾಲು ಹಾಕಿದ್ದಾರೆ. ಬಿಜೆಪಿ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಯರಾಮ್ ರಮೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಪ್ರಿಯಾಂಕ ಖರ್ಗೆ ಅವರು, ಚುನಾವಣೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರರನ್ನು ಕಾಂಗ್ರೆಸ್ ಸೋಲಿಸಿಲ್ಲ. ಬಾಬಾಸಾಹೇಬರನ್ನು ಸೋಲಿಸಿದ್ದು ಕಮ್ಯುನಿಸ್ಟ್ ಪಕ್ಷದ ಡಾಂಗೆ ಮತ್ತು ಆರ್‍ಎಸ್‍ಎಸ್‍ನ ಸಾವರ್ಕರ್ ಎಂದು ಹೇಳಿದ್ದಾರೆ. ಈ ನಾಲ್ವರು ಮುಖಂಡರು ತಮ್ಮ ಮಾತನ್ನು ಸಾಬೀತುಪಡಿಸಿದರೆ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯದಿಂದ ನಿವೃತ್ತಿ ಘೋಷಿಸಲು ಸಿದ್ಧ ಎಂದು ಪ್ರಕಟಿಸಿದರು. ಕಾಂಗ್ರೆಸ್ ನಾಯಕರು ಬಾಬಾಸಾಹೇಬ್ ಅಂಬೇಡ್ಕರ್ ರವರ ಸೋಲಿನ ಸಂಬಂಧ ತಮ್ಮ ಮಾತನ್ನು ಸಾಬೀತುಪಡಿಸಿದರೆ ನನ್ನ ಸ್ವಂತ ವೇತನದಲ್ಲಿ ಒಂದು ಲಕ್ಷದ ಒಂದು ರೂಪಾಯಿಯನ್ನು ಬಹುಮಾನವಾಗಿ ನೀಡುತ್ತೇನೆ. ಒಂದು ವೇಳೆ…
ಮೈಸೂರು: ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿರುವಂತ ಖ್ಯಾತ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ನಿಷೇಧಿಸುವಂತೆ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ಅವರನ್ನು ನಿಷೇಧಿಸಬೇಕು. ಕನ್ನಡ ಪ್ರತಿಭೆಗಳಿಗೆ ಚಿತ್ರ ಗಾಯನದಲ್ಲಿ ಅವಕಾಶ ಕೊಡಬೇಕು. ಅನ್ಯ ಭಾಷೆಯ ಗಾಯಕರನ್ನು ಹಾಡಿಸುವುದನ್ನು ನಿಲ್ಲಿಸಬೇಕು. ನಿರ್ಮಾಪಕರು ಸೋನು ನಿಗಮ್ ಗೆ ಅವಕಾಶ ನೀಡಬಾರದು ಎಂಬುದಾಗಿ ಒತ್ತಾಯಿಸಿದರು. ಕನ್ನಡ ಚಿತ್ರರಂಗದ ನಟರು ಸೋನು ಹಾಡಿಗೆ ಬಾಯಾಡಿಸುವುದನ್ನು ನಿಲ್ಲಿಸಬೇಕು. ಕೂಡಲೇ ಸೋನು ನಿಗಮ್ ಕನ್ನಡಿಗರ ಕ್ಷಮೆಯಾಚಿಸಬೇಕು. ಪೊಲೀಸರು ಸೋನು ನಿಗಮ್ ಬಂಧಿಸಿ ಜೈಲಿಗೆ ಕಳುಬಿಸಬೇಕು ಎಂಬುದಾಗಿ ವಾಟಾಲ್ ನಾಗರಾಜ್ ಆಗ್ರಹಿಸದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಜೆಡಿಎಸ್ ವಾಗ್ಧಾಳಿ ನಡೆಸಿದೆ. ಸಿದ್ಧರಾಮಯ್ಯನವರು ಎಂದರೇ ಹಾಗೆಯೇ, ದೇಹವೂಂದು, ನಾಲಿಗೆ ಎರಡು ಎಂಬುದಾಗಿ ಕಿಡಿಕಾರಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್ ಪಕ್ಷವು, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಗರಡಿಯಲ್ಲೇ ಬೆಳೆದು ರಾಜಕೀಯ ಬದುಕು ಕಟ್ಟಿಕೊಂಡ ಸಿದ್ಧರಾಮಯ್ಯನವರು ಇಬ್ಬಗೆಯ ನೀತಿ ಬಗ್ಗೆ ಆಣಿಮುತ್ತು ಉದುರಿಸಿದ್ದಾರೆ. ಆಣಿಮುತ್ತು ಉದುರಿಸುವ ಭರದಲ್ಲಿ ತಾವೇನು? ತಮ್ಮ ನಿಜಬಣ್ಣವೇನು ಎಂಬುದನ್ನು ಮತ್ತೊಮ್ಮೆ ಲೋಕಾರ್ಪಿತ ಮಾಡಿದ್ದಾರೆ. ಸಿದ್ದರಾಮಯ್ಯನವರು ಎಂದರೆ ಹಾಗೆಯೇ.. ದೇಹವೊಂದು, ನಾಲಿಗೆ ಎರಡು ಎಂಬುದಾಗಿ ಹೇಳಿದೆ. ದೇವೇಗೌಡರು ಸಕ್ರಿಯ ರಾಜಕಾರಣದಲ್ಲಿದ್ದಾರೆ. ಅವರ ಬಗ್ಗೆ ಸಿದ್ದರಾಮಯ್ಯನವರು ಸಹಜ, ಸಕಾರಾತ್ಮಕ ಟೀಕೆ ಮಾಡಲಿ. ಬೇಡ ಎಂದವರು ಯಾರು? ಆದರೆ, ಅದೇ ನಿತ್ಯಕೃಷಿ ಎಂಬಂತೆ ನಿರಂತರವಾಗಿ ರಾಜಕೀಯ ಜನ್ಮಕೊಟ್ಟ ಮೇರು ನಾಯಕನ ಬಗ್ಗೆಯೇ ವಿಷಕಾರುವುದು ಎಷ್ಟು ಸರಿ? ಎಂದು ಪ್ರಶ್ನಿಸಿದೆ. ಸಿದ್ದರಾಮಯ್ಯನವರು ಜನತಾ ಪರಿವಾರದಲ್ಲಿದ್ದಾಗ ಇಂದಿರಾ ಗಾಂಧಿ ಅವರ ಬಗ್ಗೆ ಉದುರಿಸಿದ್ದ ಭಾರೀ ಭಾರೀ ಆಣಿಮುತ್ತುಗಳನ್ನು ಜೀರ್ಣಿಸಿಕೊಳ್ಳಲು ಕಾಂಗ್ರೆಸ್ ನಾಯಕರಿಂದ ಸಾಧ್ಯವಿದೆಯಾ? ಎಂದು…
ನವದೆಹಲಿ: ಚೆನಾಬ್ ನದಿಯ ಬಾಗ್ಲಿಹಾರ್ ಅಣೆಕಟ್ಟಿನ ಮೂಲಕ ನೀರಿನ ಹರಿವನ್ನು ಭಾರತ ಸ್ಥಗಿತಗೊಳಿಸಿದೆ ಮತ್ತು ಝೀಲಂ ನದಿಯ ಕಿಶನ್ಗಂಗಾ ಅಣೆಕಟ್ಟಿನಲ್ಲಿ ಇದೇ ರೀತಿಯ ಕ್ರಮಗಳನ್ನು ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಪಹಲ್ಗಾಮ್ ದಾಳಿಗೆ ಕುಮ್ಮಕ್ಕು ನೀಡಿದಂತ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಶಾಕ್ ನೀಡಿದ್ದಾರೆ. ಈ ಜಲವಿದ್ಯುತ್ ಅಣೆಕಟ್ಟುಗಳು – ಜಮ್ಮುವಿನ ರಂಬನ್ನ ಬಾಗ್ಲಿಹಾರ್ ಮತ್ತು ಉತ್ತರ ಕಾಶ್ಮೀರದ ಕಿಶನ್ಗಂಗಾ – ನೀರು ಬಿಡುಗಡೆಯ ಸಮಯವನ್ನು ನಿಯಂತ್ರಿಸುವ ಸಾಮರ್ಥ್ಯವನ್ನು ಭಾರತಕ್ಕೆ ನೀಡುತ್ತವೆ ಎಂದು ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ ದಶಕಗಳಷ್ಟು ಹಳೆಯ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ನಿರ್ಧಾರ ಮಾಡಿತ್ತು. ವಿಶ್ವ ಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ಸಿಂಧೂ ಜಲ ಒಪ್ಪಂದವು 1960 ರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಸಿಂಧೂ ನದಿ ಮತ್ತು ಅದರ ಉಪನದಿಗಳ ಬಳಕೆಯನ್ನು ನಿಯಂತ್ರಿಸುತ್ತಿದೆ. ಬಾಗ್ಲಿಹಾರ್ ಅಣೆಕಟ್ಟು ಉಭಯ ನೆರೆಹೊರೆಯವರ ನಡುವಿನ ದೀರ್ಘಕಾಲದ…
ಕಲಬುರ್ಗಿ: ಸಿಇಟಿ ಪರೀಕ್ಷೆಯ ವೇಳೆಯಲ್ಲಿ ಜನಿವಾರ ತೆಗೆಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಆ ಬಳಿಕ ರೈಲ್ವೆ ನೇಮಕಾತಿ ಪರೀಕ್ಷೆ ಮಾರ್ಗಸೂಚಿಯಲ್ಲೂ ಜನಿವಾರ, ತಾಳಿ, ಬಳೆ ತೆಗೆಸುವಂತೆ ಮಾಡಿದ್ದಂತ ಆದೇಶ ವಿವಾದಕ್ಕೆ ಕಾರಣವಾಗಿತ್ತು. ಇದೀಗ ನೀಟ್ ಪರೀಕ್ಷೆಯಲ್ಲೂ ಜನಿವಾರವನ್ನು ಅಧಿಕಾರಿಗಳು ತೆಗೆಸಿರೋದಾಗಿ ತಿಳಿದು ಬಂದಿದೆ. ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ನೀಟ್ ಪರೀಕ್ಷೆಗೆ ತೆರಳಿದ್ದಂತ ಶ್ರೀಪಾದ್ ಪಾಟೀಲ್ ಎಂಬುವರ ಜನಿವಾರವನ್ನು ಅಧಿಕಾರಿಗಳು ತೆಗೆಸಿದ್ದಾಗಿ ಆರೋಪ ಕೇಳಿ ಬಂದಿದೆ. ನೀಟ್ ಅಭ್ಯರ್ಥಿ ಶ್ರೀಪಾದ್ ಪಾಟೀಲ್ ಅವರಿಗೆ ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಜನಿವಾರ ತೆಗೆಯುವಂತೆ ಸೂಚಿಸಿದ್ದಾರೆ. ಅಧಿಕಾರಿಗಳ ಸೂಚನೆಯಂತೆ ಜನಿವಾರ ತೆಗೆದು ಪರೀಕ್ಷಾ ಕೇಂದ್ರಕ್ಕೆ ಶ್ರೀಪಾದ್ ಪಾಟೀಲ್ ತೆರೆಳಿದ್ದಾರೆ. ಈ ಮೂಲಕ ಜನಿವಾರ ತೆಗೆದು ನೀಟ್ ಪರೀಕ್ಷೆಯನ್ನು ಅಭ್ಯರ್ಥಿ ಶ್ರೀಪಾದ್ ಪಾಟೀಲ್ ಬರೆದಿರುವುದಾಗಿ ತಿಳಿದು ಬಂದಿದೆ.