Subscribe to Updates
Get the latest creative news from FooBar about art, design and business.
Author: kannadanewsnow09
ಧಾರವಾಡ: ಕರ್ನಾಟಕ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವದರಿಂದ ಮುಖ್ಯ ಮಂತ್ರಿಗಳ ಸೂಚನೆಯಂತೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ನೊಂದವರು ದೂರವಾಣಿ ಸಂಖ್ಯೆ 0836-2445508 ಅಥವಾ ಟೋಲ ಪ್ರೀ ನಂ: 1077 ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೈಕ್ರೋಫೈನಾನ್ಸ್ ಕಂಪನಿಗಳಿಂದ ಆಗುತ್ತಿರುವ ಕಿರುಕುಳಕ್ಕೆ ಸಂಬಂಧಿಸಿದಂತೆ ಸಹಾಯವಾಣಿ ಕೇಂದ್ರಗಳಲ್ಲಿ ಕರೆಗಳನ್ನು ಸ್ವೀಕರಿಸಲು ವಾರದ ಏಳು ದಿನಗಳಲ್ಲಿ ಹಗಲು ರಾತ್ರಿ ಪಾಳೆಯಲ್ಲಿ (ಮೂರು ಶಿಫ್ಟ್ನಲ್ಲಿ) ಅಧಿಕಾರಿಗಳು ಕಾರ್ಯನಿರ್ವಹಿಸುತ್ತಾರೆ. ಸಿಬ್ಬಂದಿಯವರು ನಿಗದಿತ ಸಮಯದಲ್ಲಿ ಸಹಾಯವಾಣಿ ಕೇಂದ್ರದಲ್ಲಿ ಹಾಜರಿದ್ದು, ದೂರವಾಣಿಯ ಮೂಲಕ ಸ್ವೀಕರಿಸುವ ಎಲ್ಲ ದೂರು ಮತ್ತು ಮಾಹಿತಿಗಳನ್ನು ಕಾರ್ಯಾಲಯದಲ್ಲಿ ನಿರ್ವಹಣೆ ಮಾಡಿದ ವಹಿಯಲ್ಲಿ ದಾಖಲಿಸಿ, ದೂರಿನ ಸಮಸ್ಯೆ ಅಂಶಗಳ ಬಗ್ಗೆ ಆಯಾ ತಾಲೂಕಿನ ತಹಶೀಲ್ದಾರರಿಗೆ ಮತ್ತು ಪೆÇಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡುವರು.…
ಶಿವಮೊಗ್ಗ : ನಗರದ ಗಾಂಧಿಬಜಾರ್ನ ಸೊಪ್ಪಿನ ಮಾರುಕಟ್ಟೆ ಬಳಿ ವಿದ್ಯುತ್ ಪರಿಕರಗಳ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.3ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಫೆ.3ರಂದು ಈ ಪ್ರದೇಶಗಳಲ್ಲಿ ಪವರ್ ಕಟ್ ಗಾಂಧಿಬಜಾರ್, ಬಿ.ಹೆಚ್.ರಸ್ತೆ, ಭರಮಪ್ಪನಗರ, ಉಪ್ಪಾರಕೇರಿ, ಹರಳೆಣ್ಣೆಕೇರಿ, ಕಸ್ತೂರಿ ಬಾ ರಸ್ತೆ. ಎಂ.ಕೆ.ಕೆ.ರಸ್ತೆ, ನಾಗಪ್ಪ ಕೇರಿ, ಸಾವರ್ಕರ್ನಗರ, ಎಲೆರೇವಣ್ಣಕೇರಿ, ಮೀನು ಮಾರುಕಟ್ಟೆ, ಯಾಲಕಪ್ಪಕೇರಿ, ಲಷ್ಕರ್ ಮೊಹಲ್ಲಾ, ಆನವೇರಪ್ಪಕೇರಿ, ಧರ್ಮರಾಯನಕೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ವ್ಯಾಪ್ತಿಯಲ್ಲಿ ಫೆ.03 ರಂದು ಬೆಳಗ್ಗೆ 09.00 ಘಂಟೆಯಿಂದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ. https://kannadanewsnow.com/kannada/good-news-for-shimul-milk-producers-milk-procurement-price-hiked-by-rs-2/ https://kannadanewsnow.com/kannada/breaking-court-allows-darshan-to-stay-in-mysuru-till-feb-10/
ಶಿವಮೊಗ್ಗ : ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟವು ತನ್ನ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಹಾಲು ಖರೀದಿ ದರವನ್ನು ಕಾಲಕಾಲಕ್ಕೆ ಪರಿಷ್ಕರಿಸುತ್ತಿದ್ದು, ಬೇಸಿಗೆ ಹಂಗಾಮಿನಲ್ಲಿ ಹೈನುರಾಸುಗಳ ನಿರ್ವಹಣಾ ವೆಚ್ಚ ಅಧಿಕಾರವಾಗುವುದರಿಂದ ಉತ್ಪಾದನಾ ವೆಚ್ಚ ಹೆಚ್ಚಳವಾಗಿ ಲಾಭಾಂಶ ಕಡಿಮೆ ಆಗುವುದರಿಮದ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಿ, ಉತ್ತೇಜಿಸುವ ಸಲುವಾಗಿ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲು ಖರೀದಿ ದರವನ್ನು ಪ್ರತಿ ಲೀಟರ್ ಗೆ ರೂ. 2.00 ಹೆಚ್ಚಿಸಿ ಪರಿಷ್ಕರಿಸಲು ಒಕ್ಕೂಟದ ಅಧ್ಯಕ್ಷ ಹೆಚ್.ಎನ್. ವಿದ್ಯಾಧರರವರ ಅದ್ಯಕ್ಷತೆಯಲ್ಲಿ ಜ.31 ರಂದು ನಡೆದ ಒಕ್ಕೂಟದ 453ನೇ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಿದೆ. ಒಕ್ಕೂಟದಿಂದ ಸಂಘಗಳಿಗೆ ಪ್ರಸ್ತುತ ಎಫ್ಎಟಿ 4.0%, ಎಸ್ಎನ್ಎಫ್ 8.50% ಇರುವ ಪ್ರತಿ ಕೆ.ಜಿ.ಹಾಲಿಗೆ 32.09 ರೂ. ಪರಿಷ್ಕೃತ ದರ 34.18 ರೂ. ಸಂಘದಿಂದ ಉತ್ಪಾದಕರಿಗೆ ಪ್ರಸ್ತುತ ಎಫ್ಎಟಿ4.0%, ಎಸ್ಎನ್ಎಫ್ 8.50% ಇರುವ ಪ್ರತಿ ಲೀ. ಹಾಲಿಗೆ 30.13 ರೂ. ಪರಿಷ್ಕೃತ ದರ…
ಕುಬೇರನು ಸಂಪತ್ತಿನ ಅಧಿಪತಿ. ಕಾರಣ ಅವರಿಗೆ ಸಂಘ ನೀತಿ ಮತ್ತು ಪದುಮ ನೀತಿ ಇದೆ. ಮತ್ತು ಅವನು ಶಿವನಿಂದ ಪಡೆದ ವರದಿಂದಲೇ ಅವನು ಸಂಪತ್ತಿನ ಅಧಿಪತಿ. ಆತನ ಕೃಪೆಯನ್ನು ಪರಿಪೂರ್ಣವಾಗಿ ಪಡೆದವರ ಜೀವನದಲ್ಲಿ ಎಂದೂ ಹಣದ ಕೊರತೆ ಇರುವುದಿಲ್ಲ. ಅಂತಹ ವಿಶೇಷ ದೇವತೆಯಾಗಬಲ್ಲವನು ಭಗವಂತ ಕುಬೇರ. ಅಂತಹ ಭಗವಂತ ಕುಬೇರನ ಕೃಪೆಗೆ ಪಾತ್ರರಾಗಲು ಮತ್ತು ಆರ್ಥಿಕ ಮುಗ್ಗಟ್ಟಿನ ಪರಿಹಾರಕ್ಕೆ ಹಚ್ಚಬೇಕಾದ ದೀಪದ ಬಗ್ಗೆ ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಗದು ಬಿಕ್ಕಟ್ಟು ಪರಿಹರಿಸಲು ಕುಬೇರ…
ಬೆಂಗಳೂರು: ಕಲ್ಯಾಣ ಕರ್ನಾಟಕದ ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ವಿಶೇಷ ಹೊಂದಾಣಿಕೆ ಅನುದಾನ, ಮೇಕೆದಾಟು ಯೋಜನೆಗೆ ಅನುಮೋದನೆ ಮತ್ತು 15 ನೇ ಹಣಕಾಸು ಆಯೋಗದ ಶಿಫಾರಸು ಮಾಡಿದ 11,495 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಕರ್ನಾಟಕ ಸರ್ಕಾರ ನಿರೀಕ್ಷಿಸಿದೆ. ಕಳೆದ ತಿಂಗಳು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ (ಯುಟಿ) ಹಣಕಾಸು ಸಚಿವರನ್ನು ಭೇಟಿಯಾಗಿ ಫೆಬ್ರವರಿ 1 ರಂದು ಮಂಡಿಸಲಿರುವ 2025-26 ರ ಕೇಂದ್ರ ಬಜೆಟ್ಗಾಗಿ ಅವರ ಬೇಡಿಕೆಗಳನ್ನು ಮುಂದಿಡಲಾಗಿತ್ತು. ಬರಪೀಡಿತ ಮಧ್ಯ ಕರ್ನಾಟಕಕ್ಕೆ ನೀರು ಒದಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ ನಲ್ಲಿ ಭರವಸೆ ನೀಡಿದ್ದ 5,300 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಮತ್ತು ಕಲ್ಯಾಣ ಕರ್ನಾಟಕದ ಹಿಂದುಳಿದ ಪ್ರದೇಶ ಮತ್ತು ಜಾಗತಿಕ ಪರಿಸರ ಸೂಕ್ಷ್ಮ ಪಶ್ಚಿಮ ಘಟ್ಟಗಳ ಅಭಿವೃದ್ಧಿಗೆ ವಿಶೇಷ ಹೊಂದಾಣಿಕೆ ಅನುದಾನವನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಪರವಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು…
ನವದೆಹಲಿ: ದೆಹಲಿ ಚುನಾವಣೆಗೆ ಕೇವಲ ಐದು ದಿನಗಳ ಮೊದಲು ಆಮ್ ಆದ್ಮಿ ಪಕ್ಷದ (ಎಎಪಿ) 7 ಹಾಲಿ ಶಾಸಕರು ರಾಜೀನಾಮೆ ನೀಡಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಗೆ ಫೆಬ್ರವರಿ 5 ರಂದು ಮತದಾನ ನಡೆಯಲಿದೆ. ಇದಕ್ಕೂ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ಏಳು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಭ್ರಷ್ಟಾಚಾರದ ಆರೋಪಗಳನ್ನು ಉಲ್ಲೇಖಿಸಿ ಮೆಹ್ರೌಲಿಯ ಶಾಸಕ ನರೇಶ್ ಯಾದವ್ ಅವರು ಮೊದಲು ರಾಜೀನಾಮೆ ನೀಡಿದರು. ಇದರ ಬೆನ್ನಲ್ಲೇ ಇನ್ನೂ ಏಳು ಶಾಸಕರು ಪಕ್ಷ ತೊರೆಯುವುದಾಗಿ ಘೋಷಿಸಿದ್ದಾರೆ. ಇದರಲ್ಲಿ ಜನಕ್ಪುರಿಯ ರಾಜೇಶ್ ರಿಷಿ, ಪಾಲಂನ ಭಾವನಾ ಗೌರ್, ಬಿಜ್ವಾಸನ್ನ ಬಿಎಸ್ ಜೂನ್, ಆದರ್ಶ್ ನಗರದ ಪವನ್ ಶರ್ಮಾ, ಕಸ್ತೂರ್ಬಾ ನಗರದ ಮದನ್ಲಾಲ್ ಮತ್ತು ತ್ರಿಲೋಕ್ಪುರಿಯ ರೋಹಿತ್ ಮಹಾರೋಲಿಯಾ ಸೇರಿದ್ದಾರೆ. ಈ ಚುನಾವಣೆಯಲ್ಲಿ ತಮ್ಮ ಟಿಕೆಟ್ ಕಡಿತದ ಬಗ್ಗೆ ಎಲ್ಲಾ ಶಾಸಕರು ಅಸಮಾಧಾನ ಹೊಂದಿದ್ದರು. ಈ 7 ಶಾಸಕರು ರಾಜೀನಾಮೆ ಪಾಲಂ- ಭಾವನಾ ಗೌಡ್ ಬಿಜ್ವಾಸನ್- ಬಿಎಸ್ ಜೂನ್ ಆದರ್ಶ್ ನಗರ- ಪವನ್ ಶರ್ಮಾ…
ಬೆಂಗಳೂರು: 220/66/11 kV ಎಸ್ಆರ್ಎಸ್ ಪೀಣ್ಯ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 02.02.2025 ರಂದು ಬೆಳಗ್ಗೆ 09:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಫೆ.2ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ( Power Cut ) ಗೃಹಲಕ್ಷ್ಮಿ-ಅಪಾರ್ಟ್ಮೆಂಟ್, ಎಸ್ಎಂ ರಸ್ತೆ, ಜಲ್ಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್ಟಿಟಿಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡವಣೆ, ಕೆಜಿ ಲೇಔಟ್, ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ ಪೀಣ್ಯ 4…
ಚಿಕ್ಕಬಳ್ಳಾಪುರ: ಜಿಲ್ಲಿಯೆಲ್ಲಿ ಗ್ರಾಮಪಂಚಾಯ್ತಿ ಅಧ್ಯಕ್ಷನನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿ ಚರಂಡಿಯಲ್ಲಿ ಬಿಸಾಕಿ ಹೋಗಿರುವಂತ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಮರಸನಹಳ್ಳಿಯ ಹಾರೋಬಂಡೆ ಗ್ರಾಮದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷನ ಪುತ್ರನನ್ನು ಬರ್ಬರವಾಗಿ ಕೊಲೆ ಮಾಡಿ ಚರಂಡಿಗೆ ಬಿಸಾಕಿ ದುಷಅಕರ್ಮಿಗಳು ಪರಾರಿಯಾಗಿದ್ದಾರೆ. ಹಾರೋಬಂಡೆ ಗ್ರಾಮದ 30 ವರ್ಷದ ಮಾರುತೇಶ್ ಎಂಬಾತನನ್ನು ಕೊಲೆ ಮಾಡಿ, ಚರಂಡಿಯಲ್ಲಿ ಬಿಸಾಕಿ ಹೋಗಿದ್ದಾರೆ. ಪಾಳು ಬಿದ್ದ ಬಡಾವಣೆಯೊಂದರ ಚರಂಡಿಯಲ್ಲಿ ಮಾರುತೇಶ್ ಶವಪತ್ತೆಯಾಗಿದೆ. ಪ್ಲಂಬರ್ ಹಾಗೂ ಎಲೆಕ್ಟ್ರಿಕ್ ಕೆಲಸವನ್ನು ಮಾರುತೇಶ್ ಮಾಡುತ್ತಿದ್ದರು. ಕುಡಿದ ಅಮಲಿನಲ್ಲಿ ಜೊತೆಗಾರರೇ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲೇ ಬೈಕ್ ಹಾಗೂ ಮದ್ಯದ ಬಾಟಲಿ ಪತ್ತೆಯಾಗಿದೆ. ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಅಂದಹಾಗೇ ಕಳೆದ ಮೂರು ದಿನಗಳ ಹಿಂದೆ ಮಾರುತೇಶ್ ನಾಪತ್ತೆಯಾಗಿದ್ದರು. ಇಂದು ಅವರು ಕೊಲೆಯಾದಂತ ಸ್ಥಿತಿಯಲ್ಲಿ ಹಾರೋಬಂಡೆ ಗ್ರಾಮದ ಬಳಿಯ ಪಾಳು ಬಿದ್ದ ಬಡಾವಣೆಯೊಂದರ ಚರಂಡಿಯಲ್ಲಿ ಪತ್ತೆಯಾಗಿದ್ದಾರೆ. https://kannadanewsnow.com/kannada/breaking-court-allows-darshan-to-stay-in-mysuru-till-feb-10/ https://kannadanewsnow.com/kannada/tomorrows-kmf-employees-strike-postponed-no-disruption-in-supply-of-nandini-products/
ನವದೆಹಲಿ: ಪ್ರತಿ ಮತಗಟ್ಟೆಗೆ ಗರಿಷ್ಠ ಮತದಾರರ ಸಂಖ್ಯೆಯನ್ನು 1,200 ರಿಂದ 1,500 ಕ್ಕೆ ಹೆಚ್ಚಿಸುವ ನಿರ್ಧಾರದ ವಿರುದ್ಧ ಅರ್ಜಿಗಳು ಬಾಕಿ ಇರುವಾಗ ಮತದಾನದ ವೀಡಿಯೊ ತುಣುಕುಗಳನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶವನ್ನು ಹೊರಡಿಸಿದ್ದು, ಇಂದು ಪ್ರಕಾಶ್ ಸಿಂಗ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯಿಸಲು ಭಾರತದ ಚುನಾವಣಾ ಆಯೋಗದ (Election Commission of India – ECI) ವಕೀಲರು ಸಮಯ ಕೋರಿದ್ದಾರೆ. ಪ್ರತಿ ಕ್ಷೇತ್ರದಲ್ಲಿ ಪ್ರತಿ ಮತಗಟ್ಟೆಗೆ ಮತದಾರರ ಸಂಖ್ಯೆಯನ್ನು ಹೆಚ್ಚಿಸಲು 2024 ರ ಆಗಸ್ಟ್ನಲ್ಲಿ ಸಮಿತಿಯ ಸಂವಹನಗಳನ್ನು ಸಿಂಗ್ ಪ್ರಶ್ನಿಸಿದ್ದಾರೆ. “ಪ್ರತಿವಾದಿ ಸಂಖ್ಯೆ 1 ರ ಪರವಾಗಿ ಹಾಜರಾದ ವಕೀಲರು ಅಫಿಡವಿಟ್ ಸಲ್ಲಿಸಲು ಹೆಚ್ಚಿನ ಸಮಯವನ್ನು ಕೋರುತ್ತಾರೆ. ಇಂದಿನಿಂದ ಮೂರು ವಾರಗಳಲ್ಲಿ ಅಫಿಡವಿಟ್ ಸಲ್ಲಿಸಲಿ. ಸಿಸಿಟಿವಿ ರೆಕಾರ್ಡಿಂಗ್ಗಳನ್ನು ನಿರ್ವಹಿಸುವಂತೆ ಪ್ರತಿವಾದಿ ಸಂಖ್ಯೆ 1 ಗೆ…
ಕೊಡಗು : ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ತೆರಿಗೆ ಪಾಲನ್ನು ಪಡೆಯಲು ನಿರಂತರವಾಗಿ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಾಳೆ ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಕಿವುಡಾಗಿದೆ. ಕೇಂದ್ರ ಸರ್ಕಾರದಿಂದ ನಿರೀಕ್ಷೆ ಮಾಡುವುದೇ ಇಲ್ಲ ಎಂದೇನಿಲ್ಲ. ನಿರೀಕ್ಷೆ ಮಾಡಿದರೂ ಅವು ಹುಸಿಯಾಗುತ್ತಿವೆ ಎಂದು ಹೇಳಿದ್ದೇನೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರಕ್ಕೆ ತೆರಿಗೆ ಕೊಡುತ್ತೇವೆ. ದೆಹಲಿಗೆ ಹೋಗಿ ತೆರಿಗೆ ಹಂಚಿಕೆಯಲ್ಲಿ ಕಡಿಮೆ ಅನುದಾನ ಬರುತ್ತಿದೆ, ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯಕ್ಕೆ ಅನುದಾನ ಕಡಿಮೆಯಾಗಿದೆ, ಕೇಂದ್ರದಿಂದ ಅನುದಾನ ಬರುತ್ತಿಲ್ಲ ಎಂದು ಶಾಸಕರು , ಸಂಸದರು, ಸಚಿವರು ದೆಹಲಿಯಲ್ಲಿಯೇ ಪ್ರತಿಭಟನೆ ಮಾಡಿದೆವು. ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ ನೀಡುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು. ಇಂದಿನವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ ಎಂದರು. ಕಾಮಗಾರಿಗೆ ಅನುದಾನ ನೀಡಿ ಶೀಘ್ರಗತಿಯಲ್ಲಿ ಪೂರ್ಣ ಒಂಭತ್ತು ವರ್ಷಗಳ…