Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಎಂದರೆ ಮತಾಂತರದ ರಾಯಭಾರಿ. ಯಾರೂ ಯೋಚನೆ ಮಾಡದಂತಹ ಜಾತಿಗಳನ್ನು ಅವರು ಸೃಷ್ಟಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂವಿಧಾನದಲ್ಲಿ ಇಲ್ಲದ ಜಾತಿಗಳನ್ನು ಸಿಎಂ ಸಿದ್ದರಾಮಯ್ಯ ಹುಟ್ಟುಹಾಕಿದ್ದಾರೆ. ಇಂತಹ ಜಾತಿ ಸಮೀಕ್ಷೆ ರದ್ದಾಗಲಿದೆ. ಈ ಸಮೀಕ್ಷೆ ಮೂಲಕ ಮತಾಂತರಕ್ಕೆ ಪ್ರೇರಣೆ ನೀಡಿ, ಹಿಂದೂಗಳನ್ನು ತುಳಿಯಲಾಗುತ್ತಿದೆ. ಏನೇ ಮಾಡಿದರೂ ಸಂವಿಧಾನದ ಪ್ರಕಾರ ಮಾಡಲಿ. ಮೀಸಲಾತಿಗೆ ಸಂಬಂಧಿಸಿದಂತೆ ಕೋರ್ಟ್ ಆದೇಶವಿದೆ. ಅದರ ಪ್ರಕಾರ ಕ್ರಮ ವಹಿಸಲಿ ಎಂದರು. ಸಿಎಂ ಸಿದ್ದರಾಮಯ್ಯ ಎಲ್ಲದರಲ್ಲೂ ಮುಸ್ಲಿಂ ಓಲೈಕೆ ಮಾಡುತ್ತಾರೆ. ಹಿಂದೂಗಳ ಮತ ಮಾತ್ರ ಬೇಕು. ಮತ ಸಿಕ್ಕ ನಂತರ ಹಿಂದೂ ಧರ್ಮದಲ್ಲಿ ಲೋಪವಿದೆ ಎಂದಿದ್ದಾರೆ. ಮುಸ್ಲಿಮರಲ್ಲಿ ಮಹಿಳೆಯರು ಮಸೀದಿಗೆ ಹೋಗುವಂತಿಲ್ಲ. ಇದು ಕೂಡ ತಪ್ಪೆಂದು ಅವರಿಗೆ ಅನ್ನಿಸಲಿಲ್ಲ. ಅಂದರೆ ಹಿಂದೂ ಧರ್ಮದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ. ಕೇವಲ ಹಿಂದೂ ಧರ್ಮವನ್ನು ಟಾರ್ಗೆಟ್ ಮಾಡುವ ಬದಲು ಬೇರೆ ಧರ್ಮಗಳ ಬಗ್ಗೆ ಕೂಡ ಮಾತಾಡಲಿ ಎಂದರು. ದಸರಾ ಹಬ್ಬವನ್ನು ನಾಡಹಬ್ಬ, ಹಿಂದೂಗಳ ಹಬ್ಬ ಎನ್ನುತ್ತಾರೆ.…
ಶಿವಮೊಗ್ಗ: ಜಿಲ್ಲೆಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಮಾರಕಾಸ್ತ್ರವನ್ನು ವ್ಯಕ್ತಿಯೊಬ್ಬರು ಪ್ರದರ್ಶಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಇದೀಗ ಇದು ವಿವಾದಕ್ಕೆ ಕಾರಣವಾಗಿದೆ. ಶಿವಮೊಗ್ಗ ನಗರದ ಅಮೀರ್ ಅಹ್ಮದ್ ವೃತ್ತದಲ್ಲಿ ಈ ಘಟನೆ ನಡೆದಿದೆ. ಈದ್ ಮಿಲಾದ್ ಮೆರವಣಿಗೆ ವೇಳೆ ಮಾರಕಾಸ್ತ್ರ ಪ್ರದರ್ಶಿಸಿದಂತೆ ನಿರ್ಬಂಧವಿದ್ದರೂ, ಈ ನಿರ್ಬಂಧ ಮೀರಿ ವ್ಯಕ್ತಿಯೊಬ್ಬ ಮಾರಕಾಸ್ತ್ರಗಳನ್ನು ಪ್ರದರ್ಶಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಆ ಬಗ್ಗೆ ಖಚಿತ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. https://kannadanewsnow.com/kannada/important-information-for-the-officials-and-staff-of-the-states-government-pu-college-district-deputy-directors-office/ https://kannadanewsnow.com/kannada/judge-shows-humanity-in-front-of-the-public-he-goes-to-the-elderly-man-and-gives-a-verdict-providing-relief-on-the-spot/
ಬೆಂಗಳೂರು: 2025-26 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ನೇಮಕವಾದ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪಾವತಿಸಲು ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ತುರ್ತು ಆದೇಶ ಹೊರಡಿಸಿದ್ದು, 2025-26 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವರ್ಷದ ಅಂತ್ಯದವರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಉಲ್ಲೇಖ 2 ರ ಪತ್ರದಲ್ಲಿ ಅನುಮತಿ ನೀಡಲಾಗಿದೆ. 2025-26 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ನೇಮಕವಾದ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಪಾವತಿಸಲು ಉಲ್ಲೇಖ (1) ರ ಪತ್ರದಲ್ಲಿ 2025-26 ನೇ ಸಾಲಿನ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಜೂನ್-2025 ರಿಂದ ಸೆಪ್ಟೆಂಬರ್-2025 ರವರೆಗೆ ರೂ. 20416.20 ಲಕ್ಷಗಳು ಸರ್ಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ಜೂನ್-2025…
ಕೊಪ್ಪಳ: ಒಳ ಮೀಸಲಾತಿ ಬಗ್ಗೆ ಮಾತನಾಡಲು ಬಿಜೆಪಿಗರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶಿವರಾಜ್.ಎಸ್. ತಂಗಡಗಿ ಅವರು ವಾಗ್ದಾಳಿ ನಡೆಸಿದ್ದಾರೆ. ಸೋಮವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾಜಿ ಸಚಿವರಾದ ಗೋವಿಂದ್ ಕಾರಜೋಳ ಹಾಗೂ ನಾರಾಯಣ ಸ್ವಾಮಿಯವರಿಗೆ ಒಳ ಮೀಸಲಾತಿ ಮತ್ತು ಪರಿಶಿಷ್ಟ ಜಾತಿ ಸಮುದಾಯದ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ. ಅವರು ಎಂದೂ ಕೂಡ ಈ ಸಮುದಾಯಗಳ ಬಗ್ಗೆ ಚಿಂತನೆ ಮಾಡಿದವರಲ್ಲ. ಕಾರಜೋಳ ಹಾಗೂ ನಾರಾಯಣಸ್ವಾಮಿಯವರು ಸಚಿವರಾಗಿದ್ದಾಗ ಏನು ಗೆಣಸು ಕೊರೆಯುತ್ತಿದ್ದಾರಾ? ಈಗ ಇಲ್ಲಸಲ್ಲದ ಆರೋಪ ಮಾಡುತ್ತಾರೆ. ಇವರಿಗೆ ನಾಚಿಕೆಯಾಗಬೇಕು ಎಂದು ಛೇಡಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿಯವರ ಬಗ್ಗೆ ಯಾವುದೇ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಲಿಲ್ಲ. ನಮ್ಮ ರಾಜ್ಯದ ಬಜೆಟ್ ನ ಒಟ್ಟು ಗಾತ್ರದಲ್ಲಿ ಶೇ.24.1ರಷ್ಟು ಹಣವನ್ನು ನಾವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಕೇಂದ್ರ ಸರ್ಕಾರ ಕೂಡ ತಮ್ಮ…
ಬೆಂಗಳೂರು: ಹಾಸನ ಗಣೇಶೋತ್ಸವ ದುರಂತದಲ್ಲಿ ಮಡಿದವರಿಗೆ ಹೆಚ್ಚಿನ ಪರಿಹಾರ ನೀಡುವಲ್ಲಿಯೂ ಸಿಎಂ ಸಿದ್ದರಾಮಯ್ಯ ತುಷ್ಟೀಕರಣ ರಾಜಕೀಯ ಮಾಡುತ್ತಿದ್ದು, ಹೆಚ್ಚಿನ ಪರಿಹಾರ ನೀಡಿದರೆ ಓಲೈಕೆ ರಾಜಕೀಯಕ್ಕೆ ಏನಾದರೂ ಧಕ್ಕೆಯಾಗುತ್ತದೆಯಾ ಎಂದು ಆಲೋಚನೆ ಮಾಡುತ್ತಿದ್ದಾರೆ. ಅವರಲ್ಲಿ ಮಾನವೀಯತೆ ಸತ್ತು ಹೋಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಆಂಗ್ಲ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಹಾಸನ ಗಣೇಶೋತ್ಸವ ಮೆರವಣಿಗೆಯಲ್ಲಿ ನಡೆದ ದುರಂತದಲ್ಲಿ ಜನರು ತಮ್ಮ ಕುಟುಂಬದವರ ಜೀವ ಕಳೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ಅವರಿಗೆ ದೊಡ್ಡ ಪ್ರಮಾಣದ ನಷ್ಟವುಂಟಾಗಿದೆ. ತಮ್ಮ ಕೂಟುಂಬದ ಆದಾಯ ತರುವ ವ್ಯಕ್ತಿಗಳನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಅವರು ಹೆಚ್ಚಿನ ಪರಿಹಾರ ಕೇಳುತ್ತಿದ್ದಾರೆ. ಅವರು ಭಿಕ್ಷೆ ಬೇಡುತ್ತಿಲ್ಲ. ಸರ್ಕಾರ ಮಾನವೀಯತೆಯ ಆಧಾರದಲ್ಲಿ ಅವರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಕೋಮು ಗಲಭೆಯಲ್ಲಿ ಮೃತರಾದವರಿಗೆ, ಪ್ರಚೋದನೆಯಲ್ಲಿ ಸಾವಿಗೀಡಾದವರಿಗೆ, ವೈನಾಡಿನ ದುರಂತಕ್ಕೆ ಈಗ ಹಿಮಾಚಲ ಪ್ರದೇಶಕ್ಕೆ ಹಣ ನೀಡಿದ್ದಾರೆ. ಹಾಸನದಲ್ಲಿ ಗಣೇಶ ಮೆರವಣೆಗೆಯ ಸಂದರ್ಭದಲ್ಲಿ ದುರಂತ…
ಬ್ರಾಹ್ಮಣರಿಗೆ ಭೋಜನ ಮಾಡಿಸಿದರೆ ಸಕಲ ದೇವತೆಗಳೂ ತೃಪ್ತ ರಾಗುತ್ತಾರೆ. ತುಂಬಾ ಜನ ಇದನ್ನು ಕೊಂಕು ಮಾತಾಗಿ ಉಪಯೋಗಿಸುತ್ತೀರಾ..! ಸರಿಯಾಗಿ ಅರ್ಥ ತಿಳಿದುಕೊಂಡು ಮಾತನಾಡುವುದು ಒಳಿತು.. TODAY ಯಾರೋ ಒಬ್ಬರು ದೇವಾಲಯದಲ್ಲಿ ಮಾತಾಡುತ್ತಿದ್ದನ್ನು ಕೇಳಿಸಿಕೊಂಡಿದಕ್ಕಾಗಿ ಹಾಕುತ್ತಿದ್ದೇನೆ..( ಬರೆದವರ ಹೆಸರು ಗೊತ್ತಿಲ್ಲ. ಅವರಿಗೆ ಧನ್ಯವಾದಗಳು) ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ…
ನವದೆಹಲಿ : ಆಧ್ಯಾತ್ಮಿಕ ಹಾಗೂ ಐತಿಹಾಸಿಕ ಪ್ರವಾಸಕ್ಕಾಗಿ, ಭಾರತೀಯ ರೈಲ್ವೆ ವಿಶೇಷ ಭಾರತ್ ಗೌರವ್ ಯಾತ್ರಾ ರೈಲುವನ್ನು ಪ್ರಾರಂಭಿಸಲಿದೆ. ಇದು ನಾಲ್ಕು ಜ್ಯೋತಿರ್ ಲಿಂಗ ಹಾಗೂ ಏಕತಾ ಪ್ರತಿಮೆಯನ್ನು ಒಳಗೊಂಡ ಒಂಬತ್ತು ದಿನಗಳ ಪ್ರವಾಸವಾಗಿದೆ. ಈ ರೈಲು ಯಾತ್ರೆಯಲ್ಲಿ ದೇಶದ ಅತ್ಯಂತ ಪವಿತ್ರ ದೇವಾಲಯಗಳು ಮತ್ತು ದೇಶದ ಅತಿ ಎತ್ತರದ ಆಧುನಿಕ ಸ್ಮಾರಕಗಳನ್ನು ನೋಡುವ ಅವಕಾಶ ದೊರೆಯುತ್ತದೆ. ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಈ ಪ್ರವಾಸದ ನಿರ್ವಹಣೆಯನ್ನು ವಹಿಸಿಕೊಂಡಿದೆ. ಈ ಯಾತ್ರೆಯು ಅಕ್ಟೋಬರ್ 25ರಂದು ಅಮೃತಸರದಿಂದ ಪ್ರಾರಂಭವಾಗಲಿದೆ. ಪ್ರಯಾಣಿಕರು ಜಲಂಧರ್, ಲೂಧಿಯಾನ, ಚಂಡೀಗಢ, ಅಂಬಾಲ, ಕುರುಕ್ಷೇತ್ರ, ಪಾಣಿಪತ್, ಸೋನಿಪತ್, ದೆಹಲಿ ಕ್ಯಾಂಟ್ ಮತ್ತು ರೇವಾರಿ ನಿಲ್ದಾಣಗಳಲ್ಲಿ ರೈಲು ಹತ್ತಬಹುದು. ಈ ಪ್ರವಾಸದಲ್ಲಿ ಮಹಾಕಾಳೇಶ್ವರ ಮತ್ತು ಓಂಕಾರೇಶ್ವರ (ಉಜ್ಜಯಿನಿ), ನಾಗೇಶ್ವರ (ದ್ವಾರಕಾ ಸಮೀಪ), ಮತ್ತು ಸೋಮನಾಥ್ (ವೇರಾವಲ್) ಜ್ಯೋತಿರ್ಲಿಂಗ ದೇವಾಲಯಗಳು, ದ್ವಾರಕಾಧೀಶ ದೇವಾಲಯ ಮತ್ತು ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯನ್ನು (Statue of Unity) ಸಂದರ್ಶಿಸಲಾಗುತ್ತದೆ. ಈ ವಿಶೇಷ ರೈಲಿನಲ್ಲಿ…
ಕೊಪ್ಪಳ: ದೇಶದಲ್ಲಿ ಜಾತಿ, ಧರ್ಮಗಳ ಬಗ್ಗೆ ಚರ್ಚೆಯಾಗದೇ ಅಭಿವೃದ್ಧಿಗಳ ಬಗ್ಗೆ ಚರ್ಚೆಗಳಾಗಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಅಭಿಪ್ರಾಯಪಟ್ಟರು. ಸೋಮವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ಟೀಕೆ ಟಿಪ್ಪಣೆಗಳಿಗೆ ಅವಕಾಶವಿದೆ. ಆದರೆ, ಇಂದು ವೈಯಕ್ತಿಕವಾಗಿ ಟೀಕೆ ಟಿಪ್ಪಣೆಗಳಾಗುತ್ತಿದ್ದು, ಅರ್ಥಗರ್ಭಿತ ಮತ್ತು ಸಾಮರಸ್ಯವಾದಂತಹ ಟೀಕೆ ಟಿಪ್ಪಣೆಗಳು ಆಗಬೇಕಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಅತ್ಯಂತ ಮಹತ್ವವಿದ್ದು, ಪ್ರತಿಯೊಬ್ಬರು ಹೆಚ್ಚಿನ ಪ್ರಮಾಣದಲ್ಲಿ ಶೇ.100 ರಷ್ಟು ಮತದಾನ ಮಾಡಿದಾಗ ನಾವು ಭಾರತ ಸಂವಿಧಾನಕ್ಕೆ ಗೌರವ ಕೊಟ್ಟಂತಾಗುತ್ತದೆ ಎಂದು ಹೇಳಿದರು. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಪ್ರತಿ ವರ್ಷ ಒಂದೊಂದು ಶೀರ್ಷಿಕೆಯಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದೆ. “ನನ್ನ ಮತ ನನ್ನ ಹಕ್ಕು” ಎಂಬ ಘೋಷವಾಕ್ಯದೊಂದಿಗೆ…
ಬೆಂಗಳೂರು: ನಗರದಲ್ಲಿ ಗೂಡ್ಸ್ ವಾಹನವೊಂದು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಗೂಡ್ಸ್ ವಾಹನ ಡಿಕ್ಕಿಯಾದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ತೋಟದ ರಸ್ತೆಯ ಸಣ್ಣಾಕ್ಕಿ ಬೈಲಿನಲ್ಲಿ ಈ ಅಪಘಾತ ಸಂಭವಿಸಿದೆ. ಗೂಡ್ಸ್ ವಾಹನ ಡಿಕ್ಕಿಯಾಗಿ ಶಶಾಂಕ್(12) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವೇಗವಾಗಿ ಬಂದು ಸೈಕಲ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಬಾಲಕ ಸಾವನ್ನಪ್ಪುತ್ತಿದ್ದಂತೆ ವಾಹನ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/rs-4000-crore-investment-from-japanese-companies-in-karnataka-minister-m-b-patil/ https://kannadanewsnow.com/kannada/big-news-dasara-inauguration-is-taking-place-according-to-the-mullas-opposition-leader-r-ashoks-statement/
ಬೆಂಗಳೂರು: ಕಳೆದ ವಾರ ತಾವು ಕೈಗೊಂಡ ಜಪಾನ್ ಭೇಟಿಯಿಂದಾಗಿ ಆ ದೇಶದ ವಿವಿಧ ಉದ್ಯಮಗಳು ರಾಜ್ಯದಲ್ಲಿ 4,000 ಕೋಟಿ ರೂ.ಗಳಿಗೂ ಹೆಚ್ಚು ಬಂಡವಾಳ ಹೂಡಿಕೆ ಮಾಡುವುದು ಖಾತ್ರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಅವರು ಸೋಮವಾರ ತಮ್ಮ ನಿವಾಸದಲ್ಲಿ ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು. ಹೂಡಿಕೆ ಆಕರ್ಷಿಸುವ ದೃಷ್ಟಿಯಿಂದ ಜಪಾನ್‌ಗೆ ಇದು ತಮ್ಮ ಎರಡನೇ ಭೇಟಿಯಾಗಿದೆ. ಜಪಾನಿನ ಉದ್ಯಮಗಳ ಪ್ರಮುಖರು ಸಾಂಪ್ರದಾಯಿಕ ಆಲೋಚನೆ ಉಳ್ಳವರಾಗಿದ್ದು, ಸಾಕಷ್ಟು ದೀರ್ಘವಾಗಿ ಯೋಚಿಸಿ ನಿರ್ಧಾರಕ್ಕೆ ಬರುತ್ತಾರೆ. ಇವತ್ತು ದೇಶದಲ್ಲಿರುವ ಜಪಾನಿ ಉದ್ದಿಮೆಗಳಲ್ಲಿ ಶೇಕಡ ೫೦ರಷ್ಟು ಕಂಪನಿಗಳು ಕರ್ನಾಟಕದಲ್ಲೇ ಇವೆ. ಹಿಂದೆ ತಾವು ಜಪಾನ್ ಮತ್ತು ದಕ್ಷಿಣ ಕೊರಿಯಾಗೆ ಭೇಟಿ ನೀಡಿದ್ದಾಗ 6,500 ಕೋಟಿ ರೂ. ಹೂಡಿಕೆಯನ್ನು ಸೆಳೆಯಲಾಗಿತ್ತು ಎಂದು ಅವರು ವಿವರಿಸಿದ್ದಾರೆ. ಈ ಸಲದ ಭೇಟಿಯಲ್ಲಿ ಹೋಂಡಾ ಮುಂತಾದ ಕಂಪನಿಗಳು ರಾಜ್ಯದಲ್ಲಿ ವಿಸ್ತರಣೆ, ಮುಕುಂದ್ ಸುಮಿ ಸ್ಟೀಲ್ಸ್ ಕಂಪನಿ ಜತೆ ಸಹಭಾಗಿತ್ವ ಮುಂತಾದ ವಿಚಾರ ಕುರಿತು…











