Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : “ವಿದ್ಯಾರ್ಥಿ, ಯುವ ಜನರಲ್ಲಿ ನಾಯಕತ್ವ ಗುಣವನ್ನು ಬೆಳೆಸಬೇಕಿದೆ. ಮತದಾನ, ಪ್ರಜಾಪ್ರಭುತ್ವದ ಮೌಲ್ಯವನ್ನು ಅರಿತುಕೊಳ್ಳಲು ‘ನನ್ನ ಮತ, ನನ್ನ ಹಕ್ಕು’ ಕಾರ್ಯಕ್ರಮ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಮತದಾನ ಮದ್ದುಗುಂಡಿಗಿಂತ ಬಲಾಢ್ಯ ಎನ್ನುವ ಮಾತಿದೆ. ಮಹಾರಾಜರು ಮನೆಯಲ್ಲಿ ಕುಳಿತಿದ್ದಾರೆ. ಮತದಾನದ ಹಕ್ಕಿನಿಂದ ಆಯ್ಕೆಯಾದವರು ಜನಸೇವೆ ಮಾಡುತ್ತಿದ್ದಾರೆ. ನಾನು, ಸಿದ್ದರಾಮಯ್ಯ ಅವರು ಸೇರಿದಂತೆ ಅನೇಕ ನಾಯಕರ ಉದಯವಾಗಿದ್ದೇ ಮತದಾನದ ಹಕ್ಕಿನಿಂದ. ಜನರ ಮತಗಳಿಂದ ನಾವು ಅಧಿಕಾರಕ್ಕೆ ಬಂದಿದ್ದೇವೆ. ಜವಾಬ್ದಾರಿಯುತ ಸ್ಥಾನಗಳನ್ನು ಅಲಂಕರಿಸಿದ್ದೇವೆ” ಎಂದರು. “ಅರ್ಜುನ ಕೃಷ್ಣನನ್ನು ಒಮ್ಮೆ ಕೇಳುತ್ತಾನೆ. ಎಲ್ಲರು ನಮ್ಮ ಮೇಲೆ ದಾಳಿ ಮಾಡುತ್ತಿದ್ದಾರೆ, ನಿಂದಿಸುತ್ತಿದ್ದಾರೆ, ಬಾಣಗಳನ್ನು ಪ್ರಯೋಗ ಮಾಡುತ್ತಿದ್ದಾರೆ. ಏನೂ ತೋಚದಾಗಿದೆ ಎಂದು. ಆಗ ಕೃಷ್ಣ ಹೇಳುತ್ತಾನೆ, ನಿನ್ನ ಮೇಲೆ ಎಷ್ಟೇ ದಾಳಿಯಾಗಬಹುದು, ಆದರೆ ಕಾಪಾಡುವುದಕ್ಕೆ ಯಾರಾದರೂ ಒಬ್ಬರು ಇದ್ದೇ ಇರುತ್ತಾರೆ ಎಂದು. ಅದೇ ರೀತಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತ ಹಾಗೂ…
ಮೈಸೂರು: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸುವ ಸಲುವಾಗಿ ನೈಋತ್ಯ ರೈಲ್ವೆಯು ಯಶವಂತಪುರ ಹಾಗೂ ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಮೂರು ಟ್ರಿಪ್ಗಳನ್ನು ಪೂರ್ಣಗೊಳಿಸಲಿದೆ. ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ಎಕ್ಸ್‌ಪ್ರೆಸ್ ವಿಶೇಷ ರೈಲು ಸೆಪ್ಟೆಂಬರ್ 19, 26 ಮತ್ತು ಅಕ್ಟೋಬರ್ 3 ರಂದು ರಾತ್ರಿ 10.30ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು, ಮರುದಿನ ಮುಂಜಾನೆ 4.15ಕ್ಕೆ ತಾಳಗುಪ್ಪ ತಲುಪಲಿದೆ. ಮತ್ತೊಂದೆಡೆ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಸೆಪ್ಟೆಂಬರ್ 20, 27 ಮತ್ತು ಅಕ್ಟೋಬರ್ 4 ರಂದು ತಾಳಗುಪ್ಪದಿಂದ ಬೆಳಗ್ಗೆ 10 ಗಂಟೆಗೆ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ. ಈ ವಿಶೇಷ ರೈಲು, ಎರಡೂ ಮಾರ್ಗದಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರಂ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ಈ ವಿಶೇಷ ರೈಲಿನಲ್ಲಿ ಒಟ್ಟು 20…
ನವದೆಹಲಿ: ಅಕ್ರಮ ಬೆಟ್ಟಿಂಗ್ ಆಪ್ ಪ್ರಕರಣದಲ್ಲಿ ಬಹುಭಾಷಾ ನಟಿ ಊರ್ವಶಿ ರೌಟೇಲಾಗೆ ಸಂಕಷ್ಟ ಎದುರಾಗಿದೆ. ಈ ಸಂಬಂಧ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ನೀಡಲಾಗಿದೆ. ಸೆಪ್ಟೆಂಬರ್.16ರಂದು ವಿಚಾರಣೆ ಹಾಜರಾಗುವಂತೆ ನಟಿ ಊರ್ವಶಿ ರೌಟೇಲಾಗೆ ಇಡಿ ನೀಡಿರುವಂತ ಸಮನ್ಸ್ ನಲ್ಲಿ ಸೂಚಿಸಲಾಗಿದೆ. ಮಾಡಿ ಸಂಸದೆ, ಬಂಗಾಳದ ನಟಿ ಮಿಮಿ ಚಕ್ರವರ್ತಿಗೂ ಇಡಿ ಸಮನ್ಸ್ ನೀಡಿದೆ. ನಾಳೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಗ್ರಾಮ ಸೇರಿದಂತೆ ಇತರೆ ಪ್ರದೇಶಗಳಲ್ಲಿ ಮೆಸ್ಕಾಂನಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರೆಂಟ್ ಇರೋದಿಲ್ಲ ಎಂದು ತಿಳಿಸಿದೆ. ಈ ಕುರಿತಂತೆ ಸೊರಬ ಮೆಸ್ಕಾ ಎಇಇ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 15.09.2025ರ ಇಂದು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಉಳವಿಯಿಂದ ವಿದ್ಯುತ್ ಸರಬರಾಜಾಗುವ ಕೆಳಕಂಡ 11 ಕೆವಿ ಫೀಡರ್‌ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದ್ದಾರೆ. ದಿನಾಂಕ: 15.09.2025ರ ಇಂದು 110/11 ಕೆವಿ ಉಳವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ನಡೆಸಲು ಉದ್ದೇಶಿಸಿರುವುದರಿಂದ, 110/11 ಕೆವಿ ಉಳವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಫ್1 ಬರಗಿ ಎನ್‌ಜೆವೈ, ಎಫ್2 ಕಾನಳ್ಳಿ, ಎಫ್-3 ಉಳವಿ, ಎಫ್4 ಹೊಸಬಾಳೆ ಮತ್ತು ಎಫ್-5 ದೂಗೂರು ಫೀಡರ್‌ಗಳ ವ್ಯಾಪ್ತಿಗೊಳಪಡುವ ಎಲ್ಲಾ ಗ್ರಾಮಗಳಿಗೆ ಬೆಳಗ್ಗೆ 10:00 ರಿಂದ ಸಂಜೆ 6:00 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ…
ಬೆಂಗಳೂರು: ರಾಜ್ಯದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸೋ ಕಾಲ ಸಮೀಪಿಸಿದೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲು ಸೆಪ್ಟೆಂಬರ್.16, 2025ರ ನಾಳೆ ಸಭೆಯನ್ನು ಸರ್ಕಾರ ಕರೆಯಲಾಗಿದೆ. ಈ ಕುರಿತಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸಭಾ ಸೂಚನ ಪತ್ರವನ್ನು ಹೊರಡಿಸಿದ್ದು, ಸರ್ಕಾರದ ಕಾರ್ಯದರ್ಶಿಗಳು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ದಿನಾಂಕ:16.09.2025ರ ನಾಳೆ ಮಧ್ಯಾಹ್ನ 3.00 ಗಂಟೆಗೆ ಕೊಠಡಿ ಸಂಖ್ಯೆ:331, 3ನೇ ಮಹಡಿ, ಬಹುಮಹಡಿಗಳ ಕಟ್ಟಡ ಇಲ್ಲಿ ಈ ಕೆಳಕಂಡ ವಿಷಯಗಳ ಕುರಿತು ಚರ್ಚಿಸಲು ಸಭೆಯನ್ನು ಏರ್ಪಡಿಸಲಾಗಿದೆ ಎಂದಿದ್ದಾರೆ. 1.ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಕುರಿತು. 2.Inclusion of Kuruba community of Bidar. Kalaburgi and Yadgiri districts in Karnataka as Synonym of Gonda community of Karnataka State. ಈ ಮೇಲ್ಕಂಡ ಸಭೆಗೆ ಅಗತ್ಯ ಮಾಹಿತಿ/ದಾಖಲೆಗಳೊಂದಿಗೆ ಹಾಜರಾಗುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಈ ಮೂಲಕ ರಾಜ್ಯ…
ಬೆಂಗಳೂರು: ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಇಂತಹ ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸ್ ಪಡೆಯುವ ಸುಳಿವನ್ನು ಸಿಎಂ ಸಿದ್ಧರಾಮಯ್ಯ ನೀಡಿದ್ರಾ ಎನ್ನುವಂತ ಚರ್ಚೆ ಶುರುವಾಗಿದೆ. ಬೆಂಗಳೂರಿನ ಶಿವಾಜಿನಗರದಲ್ಲಿನ ಕಾರ್ಯಕ್ರಮದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಾಸ್ ಪಡೆಯುವಂತೆ ಕ್ರೈಸ್ತ ಸಮುದಾಯದವರಿಂದ ಸಿಎಂ ಸಿದ್ಧರಾಮಯ್ಯಗೆ ಮನವಿ ಮಾಡಲಾಗಿತ್ತು. ಈ ಮನವಿಗೆ ಸಕಾರಾತ್ಮಕವಾಗಿಯೇ ಸಿಎಂ ಸಿದ್ಧರಾಮಯ್ಯ ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ಶನಿವಾರದಂದು ಮೈಸೂರಲ್ಲಿ ಮತಾಂತರ ಅವರವರ ಹಕ್ಕು ಆಗಿದೆ. ಅದನ್ನು ತಪ್ಪಿಸಲು ಆಗೋದಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಹೀಗಾಗಿ ಮುಂದಿನ ವಿಧಾನಮಂಡಲದ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಾಸ್ ಪಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಂದಹಾಗೇ ಕಳೆದ ವರ್ಷವೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಾಸ್ ಪಡೆಯುವ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೇ ವಿಧಾನ ಮಂಡಲದ ಅಧಿವೇಶನದಲ್ಲಿ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಬಿಲ್ ವಾಪಾಸ್ಸಿಗೆ ಬಿಲ್ ಮಂಡಿಸರಿಲ್ಲ ಎಂಬುದನ್ನು ಗಮನಿಸಬಹುದಾಗಿದೆ.
ಉತ್ತರಪ್ರದೇಶ: ಸಹ ಜೀವನದಲ್ಲಿ( Living Together) ಇದ್ದು, ನಾಲ್ಕು ವರ್ಷ ಒಪ್ಪಿತ ದೈಹಿಕ ಸಂಬಂಧ ಹೊಂದಿದ ಬಳಿಕ ಮದುವೆಯಾಗಲು ವ್ಯಕ್ತಿಯೊಬ್ಬ ನಿರಾಕರಿಸಿದ್ದಲ್ಲಿ ಅದು ಗಂಭೀರ ಅಪರಾಧ ಆಗುವುದಿಲ್ಲ ಎಂಬುದಾಗಿ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಹ ಜೀವನದಲ್ಲಿದ್ದಂತ ವ್ಯಕ್ತಿಯೊಬ್ಬನ ವಿರುದ್ಧ ತಾನು ನೀಡಿದ್ದಂತ ದೂರನ್ನು ಮಹೋಬಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ತಿರಸ್ಕರಿಸಿತ್ತು. ಕಳೆದ ವರ್ಷದ ಆಗಸ್ಟ್.17ರಂದು ಈ ತೀರ್ಪು ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಮಹಿಳೆ ಅಲಹಾಬಾದ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಅಲಹಾಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ಅರುಣಕುಮಾರ್ ಸಿಂಗ್ ದೇಶವಾಲ್ ಅವರಿದ್ದಂತ ನ್ಯಾಯಪೀಠವು, ಸರಿ-ತಪ್ಪುಗಳನ್ನು ನಿರ್ಧರಿಸಬಲ್ಲ ಸಾಮರ್ಥ ಇರುವ ವಯಸ್ಕರಿಬ್ಬರು ಹಲವು ವರ್ಷ ಸಹಜೀವನ ನಡೆಸುತ್ತಿದ್ದರೇ, ಅವರು ಅಂತಹ ಸಂಬಂಧವನ್ನು ಸ್ವಇಚ್ಛೆಯಿಂದ ಆಯ್ಕೆ ಮಾಡಿಕೊಂಡಂತೆ. ಅದರಿಂದ ಆಗುವ ಪರಿಣಾಮಗಳ ಕುರಿತು ಅವರಿಗೆ ಅರಿವೂ ಇರುತ್ತದೆ ಎಂದೇ ಊಹಿಸಬೇಕಾಗುತ್ತದೆ ಎಂಬುದಾಗಿ ಹೇಳಿದರು. ಸಹ ಜೀವನದ ಸಂಗಾತಿಯಾಗಿದ್ದಂತ ವ್ಯಕ್ತಿ ವಿರುದ್ಧ ಅತ್ಯಾಚಾರ ಆರೋಪ…
ಭಾರತೀಯ ನಾಗರಿಕರಿಗೆ ಆಧಾರ್ ಅತ್ಯಂತ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಸರ್ಕಾರಿ ಯೋಜನೆಗಳಿಂದ ಹಿಡಿದು ಬ್ಯಾಂಕಿಂಗ್ ಪ್ರಕ್ರಿಯೆಗಳವರೆಗೆ ಬಹು ಸೇವೆಗಳಲ್ಲಿ ಇದು ಅಗತ್ಯವಿದೆ. ನಿಮ್ಮ ಆಧಾರ್ ಕಾರ್ಡ್ ತುರ್ತಾಗಿ ಬೇಕಾಗಬಹುದು ಆದರೆ ನಿಮ್ಮ ಬಳಿ ಅದರ ಭೌತಿಕ ಪ್ರತಿ ಅಥವಾ ಉಳಿಸಿದ ಡಿಜಿಟಲ್ ಆವೃತ್ತಿ ಇಲ್ಲದಿರುವ ಸಂದರ್ಭಗಳಿವೆ. ಈ ಸವಾಲನ್ನು ಎದುರಿಸಲು, ಈಗ ಹೊಸ ಸೌಲಭ್ಯವು ಬಳಕೆದಾರರು ತಮ್ಮ ಆಧಾರ್ ಕಾರ್ಡ್ ಅನ್ನು ನೇರವಾಗಿ WhatsApp ಮೂಲಕ ಡೌನ್‌ಲೋಡ್ ಮಾಡಲು ಅನುಮತಿಸುತ್ತದೆ. ಅದು ಹೇಗೆ ಅಂತ ಮುಂದೆ ಓದಿ. WhatsApp ಮ್ಯಾಟರ್‌ಗಳಿಂದ ಆಧಾರ್ ಅನ್ನು ಏಕೆ ಡೌನ್‌ಲೋಡ್ ಮಾಡಿಕೊಳ್ಳಬೇಕು ಇತ್ತೀಚಿನವರೆಗೂ, ಆಧಾರ್ ಕಾರ್ಡ್‌ಗಳನ್ನು ಸಾಮಾನ್ಯವಾಗಿ UIDAI ವೆಬ್‌ಸೈಟ್, mAadhaar ಮೊಬೈಲ್ ಅಪ್ಲಿಕೇಶನ್ ಅಥವಾ DigiLocker ಮೂಲಕ ಡೌನ್‌ಲೋಡ್ ಮಾಡಲಾಗುತ್ತಿತ್ತು. ಈ ವಿಧಾನಗಳು ಮಾನ್ಯವಾಗಿಯೇ ಮುಂದುವರಿದರೂ, WhatsApp ಈಗ ಹೆಚ್ಚುವರಿ ಚಾನಲ್ ಆಗಿ ಕಾರ್ಯನಿರ್ವಹಿಸುತ್ತದೆ, ಪ್ರಕ್ರಿಯೆಯನ್ನು ಇನ್ನಷ್ಟು ಪ್ರವೇಶಿಸುವಂತೆ ಮಾಡುತ್ತದೆ. ಆಧಾರ್ ಕಾರ್ಡ್ ತಕ್ಷಣವೇ ಅಗತ್ಯವಿರುವಾಗ ಈ ವೈಶಿಷ್ಟ್ಯವು ವಿಶೇಷವಾಗಿ ಉಪಯುಕ್ತವಾಗಿದೆ ಆದರೆ ಇತರ…
ಶಾಶ್ವತ ಖಾತೆ ಸಂಖ್ಯೆ (Permanent Account Number -PAN) ಕಾರ್ಡ್ ಇನ್ನು ಮುಂದೆ ವಯಸ್ಕರಿಗೆ ಮಾತ್ರ ಸಾಧನವಲ್ಲ. ಇದು ಅಪ್ರಾಪ್ತ ವಯಸ್ಕರಿಗೂ ಪ್ರಮುಖ ಪಾತ್ರ ವಹಿಸುತ್ತದೆ. ಬ್ಯಾಂಕ್ ಖಾತೆ ತೆರೆಯಲು, ಮಗುವಿನ ಹೆಸರಿನಲ್ಲಿ ಹೂಡಿಕೆ ಮಾಡಲು ಅಥವಾ ತೆರಿಗೆ ಅವಶ್ಯಕತೆಗಳನ್ನು ಪೂರೈಸಲು, PAN ಕಾರ್ಡ್ ಹಣಕಾಸಿನ ಪ್ರಕ್ರಿಯೆಗಳನ್ನು ಸರಳಗೊಳಿಸುತ್ತದೆ ಮತ್ತು ನಿಯಮಗಳ ಅನುಸರಣೆಯನ್ನು ಖಚಿತಪಡಿಸುತ್ತದೆ. ಇದು ಮಗುವಿನ ಆರ್ಥಿಕ ಭವಿಷ್ಯಕ್ಕೆ ಅಡಿಪಾಯ ಹಾಕುತ್ತದೆ. ಪ್ಯಾನ್ ಕಾರ್ಡ್ ಅನ್ನು ಮೊದಲೇ ಪಡೆಯುವುದರಿಂದ ವಹಿವಾಟುಗಳನ್ನು ಸುಗಮಗೊಳಿಸಬಹುದು, ವಿದ್ಯಾರ್ಥಿವೇತನ ಪ್ರವೇಶವನ್ನು ಸುಗಮಗೊಳಿಸಬಹುದು ಮತ್ತು ಹೂಡಿಕೆಗಳನ್ನು ಸಕ್ರಿಯಗೊಳಿಸಬಹುದು. ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 160 ರ ಪ್ರಕಾರ ಆದಾಯ ತೆರಿಗೆ ಇಲಾಖೆಯು ಅಪ್ರಾಪ್ತ ವಯಸ್ಕರಿಗೆ PAN ಕಾರ್ಡ್ ಹೊಂದಲು ಅವಕಾಶ ನೀಡುತ್ತದೆ. ತೆರಿಗೆ ಉದ್ದೇಶಗಳಿಗಾಗಿ ಮಕ್ಕಳ ಗಳಿಕೆಯನ್ನು ಹೆಚ್ಚಾಗಿ ಪೋಷಕರ ಆದಾಯದೊಂದಿಗೆ ಸೇರಿಸಲಾಗಿದ್ದರೂ, ಕೆಲವು ಸಂದರ್ಭಗಳಲ್ಲಿ PAN ಹೊಂದಿರುವುದು ಅತ್ಯಗತ್ಯ: ಹೂಡಿಕೆಗಳು: ಮ್ಯೂಚುವಲ್ ಫಂಡ್‌ಗಳು, ಸ್ಟಾಕ್‌ಗಳು ಅಥವಾ ಇತರ ಸಾಧನಗಳಿಗೆ ಮಗುವನ್ನು ನಾಮಿನಿಯಾಗಿ ಪಟ್ಟಿ ಮಾಡಲು PAN…
ರಾಯಚೂರು: ವಿಷ ಸೇವಿಸಿ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ರಾಯಚೂರಲ್ಲಿ ನಡೆದಿದೆ. ಈ ಘಟನೆಯಲ್ಲಿ ಓರ್ವ ಯುವತಿ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಕೆ.ಇರಬಗೇರಾದಲ್ಲಿ ವಿಷ ಸೇವಿಸಿ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಲ್ಲಿ ಒಬ್ಬರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/refusing-marriage-after-cohabitation-is-not-a-crime-high-court-significant-ruling/ https://kannadanewsnow.com/kannada/a-person-is-losing-the-value-of-life-due-to-their-delusions-retired-justice-santosh-hegde/









