Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಳಗಾವಿ ಸುವರ್ಣಸೌಧ : ಪರವಾನಗಿ ಭೂ ಮಾಪಕರನ್ನು ಖಾಯಂಗೊಳಿಸುವುದು ಅಸಾಧ್ಯ. ಆದರೆ, ಅವರ ಮೇಲೆ ಸರ್ಕಾರಕ್ಕೆ ಸಹಾನುಭೂತಿ ಇದ್ದು, ಅವರ ಕಲ್ಯಾಣಕ್ಕೆ ಹಾಗೂ ಘನತೆಯ ಜೀವನಕ್ಕೆ ಉದಾರ ಮನಸ್ಸಿನೀಂದ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಮಂಗಳವಾರ ವಿಧಾನ ಪರಿಷತ್ನಲ್ಲಿ ಸದಸ್ಯರಾದ ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಪರವಾನಗಿ ಭೂ ಮಾಪಕರನ್ನು ಖಾಲಿ ಹುದ್ದೆಗಳನ್ನು ತುಂಬಿಸುವುದಕ್ಕಾಗಿ ಸರ್ಕಾರ ನೇಮಕ ಮಾಡಿಲ್ಲ. ಬದಲಾಗಿ ಗುತ್ತಿಗೆ ಆಧಾರದಲ್ಲಿ ಮಾತ್ರ ನೇಮಕ ಮಾಡಿಕೊಳ್ಳಲಾಗಿದೆ. ಸರ್ವೇ ಇಲಾಖೆಯಲ್ಲಿ ಖಾಲಿ ಹುದ್ದೆಗಳೇ ಇಲ್ಲದ ಮೇಲೆ ಗುತ್ತಿಗೆ ನೌಕರರನ್ನು ಖಾಯಂ ಮಾಡುವುದು ಹೇಗೆ..?” ಎಂದು ಮರು ಪ್ರಶ್ನೆ ಹಾಕಿದರು. “ಅಸಲಿಗೆ ಇಲಾಖೆಯಲ್ಲಿ 750 ಸರ್ಕಾರಿ ಹುದ್ದೆ ಖಾಲಿ ಇದೆ. ಆದರೆ, ಅದಕ್ಕೂ ಇದಕ್ಕೂ ಸಂಬಂಧವೇ ಇಲ್ಲ. ಏಕೆಂದರೆ ನಾವು ಗುತ್ತಿಗೆ ನೌಕರರನ್ನು ಖಾಯಂ ಮಾಡಲು ಮುಂದಾದರೆ ತುಂಬಾ ಪ್ರಚಲಿತದಲ್ಲಿರುವ ಉಮಾದೇವಿ ಪ್ರಕರಣ ಎದುರಾಗುತ್ತದೆ. ಈ ಪ್ರಕರಣದಲ್ಲಿ ಗುತ್ತಿಗೆ ನೌಕರರನ್ನು…

Read More

ಬೆಳಗಾವಿ ಸುವರ್ಣಸೌಧ : ಸರ್ಕಾರವೇ ಸ್ವಯಂ ಪ್ರೇರಿತವಾಗಿ ರೈತರ ಮನೆ ಬಾಗಿಲಿಗೆ ಹೋಗಿ ಅಭಿಯಾನ ಮಾದರಿಯಲ್ಲಿ ದರ್ಖಾಸ್ತು ಪೋಡಿ ಮಾಡಿಕೊಡುತ್ತಿದ್ದು, ಕನಿಷ್ಟ ದಾಖಲೆ ಇದ್ದರೂ ಪೋಡಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಧಾನ ಪರಿಷತ್ನಲ್ಲಿ ಮಂಗಳವಾರ ಸದಸ್ಯರಾದ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ ಕಳೆದ 5 ವರ್ಷದ ಸರ್ಕಾರದ ಅವಧಿಯಲ್ಲಿ 8,500 ದರ್ಖಾಸ್ತಿ ಪೋಡಿ ಆಗಿತ್ತು. ಆದರೆ, ನಾವು ಜನವರಿಯಿಂದ ಈ ಅಭಿಯಾನ ಆರಂಭಿಸಿದ ಮೇಲೆ ಡಿಸೆಂಬರ್ ಒಳಗೆ 1,55,000 ಪೋಡಿ ಮಾಡಿಕೊಟ್ಟಿದ್ದೇವೆ. ನಿಯಮದಲ್ಲಿ ಬದಲಾವಣೆ ತಂದು ಸರಳೀಕರಣಗೊಳಿಸಿ ದಾಖಲಾತಿಗಳ ಅವಶ್ಯಕತೆಯನ್ನೇ ಕಡಿಮೆ ಮಾಡಿ ರೈತರಿಗೆ ಪೋಡಿ ಮಾಡಿಕೊಟ್ಟಿದ್ದೇವೆ” ಎಂದು ಮಾಹಿತಿ ನೀಡಿದರು. “1,55,000 ಪ್ರಕರಣಗಳನ್ನು ಸರ್ವೇಗೆ ತೆಗೆದುಕೊಂಡಿದ್ದೇವೆ. ಇದಲ್ಲದೆ, 1,60,000 ಪ್ರಕರಣಗಳು ದಾಖಲಾತಿ ಕೊರತೆಯಿಂದಾಗಿ ಪೋಡಿ ಮಾಡಲು ಸಾಧ್ಯವಿಲ್ಲ ಎಂದು ಮಿಸ್ಸಿಂಗ್ ರೆಕಾರ್ಡ್ಸ್ ಕಮಿಟಿಗೆ ಕಳುಹಿಸಿದ್ದೇವೆ. ಅಲ್ಲೂ ಸಹ ಕೆಲವು ಸರಳೀಕೃತ ಮಾರ್ಗಸೂಚಿ ಹಾಕಿ ಕೊಟ್ಟಿದ್ದೇನೆ. ಯಾರ ಬಳಿ…

Read More

ಬೆಳಗಾವಿ ಸುವರ್ಣಸೌಧ: ನಾಳೆ ಸಾಗರ ಜಿಲ್ಲೆಗೆ ಒತ್ತಾಯಿಸಿ ಹೋರಾಟಗಾರರು ಸಾಗರ ಬಂದ್ ನಡೆಸುತ್ತಿದ್ದಾರೆ. ಅವರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ ಇರುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಈ ಕುರಿತು ಕೇಳಿದಂತ ಪ್ರಶ್ನೆಗೆ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಅವರು, ನಮ್ಮದೇ ಸರ್ಕಾರ ರಾಜ್ಯದಲ್ಲಿದೆ. ಜಿಲ್ಲೆ ಮಾಡುವುದಾದರೇ ಅದು ಮೊದಲು ಸಾಗರವನ್ನು ಮಾಡಬೇಕು. ಅದಕ್ಕಾಗಿ ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೂ ಪತ್ರ ಬರೆಯಲಾಗಿದೆ ಎಂದರು. ನಾಳೆ ಸಾಗರ ಜಿಲ್ಲಾ ಹೋರಾಟ ಸಮಿತಿಯಿಂದ ಸಾಗರ ಬಂದ್ ನಡೆಸಲಾಗುತ್ತಿದೆ. ಅವರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಸರ್ಕಾರದ ಮಟ್ಟದಲ್ಲಿ ಜಿಲ್ಲೆ ಮಾಡುವುದಕ್ಕೆ ಏನು ಬೇಕೋ ಅದರ ಸಹಕಾರವನ್ನು ನಾನು ನೀಡುತ್ತೇನೆ. ನಾಳೆಯ ಸಾಗರ ಬಂದ್ ಯಶಸ್ವಿಯಾಗಲಿ ಎಂಬುದಾಗಿ ತಿಳಿಸಿದರು. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/amid-sagar-bandh-tomorrow-shahi-garments-announces-holiday-for-employees/ https://kannadanewsnow.com/kannada/mla-gkb-demands-for-a-new-police-station-in-tumari-bakoda-sagar-in-the-house-home-minister-gives-this-reply/

Read More

ಮುಂಬೈ : ಜಿಯೋದಿಂದ “ಜಿಯೋ ಹ್ಯಾಪಿ ನ್ಯೂ ಇಯರ್ 2026 ಪ್ಲಾನ್ ಗಳು” ಘೋಷಣೆ ಮಾಡಲಾಗಿದೆ. ಇದರ ಮೂಲಕ ಜಿಯೋ ಸಿಮ್ ಬಳಸುವ ಗ್ರಾಹಕರಿಗೆ ಈ ಹಿಂದೆಂದೂ ದೊರೆಯದಂಥ ಬೆನಿಫಿಟ್ ಗಳು ಸಿಗುತ್ತವೆ. ಏನು ಆ ಹೊಸ ವರ್ಷದ ಪ್ಲಾನ್ ಗಳು ಎಂಬ ಮಾಹಿತಿ ಹೀಗಿದೆ: ಹೀರೋ ಆ್ಯನುಯಲ್ ರೀಚಾರ್ಜ್ 3599: ಈ ಪ್ಲಾನ್ ನಲ್ಲಿ ಗ್ರಾಹಕರಿಗೆ ಅನ್ ಲಿಮಿಟೆಡ್ 5ಜಿ, ದಿನಕ್ಕೆ 2.5 ಜಿಬಿ ಡೇಟಾ ದೊರೆಯುತ್ತದೆ. ಇನ್ನು ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗಳು ದೊರೆಯುತ್ತವೆ ಮತ್ತು ಪ್ರತಿ ದಿನ 100 ಎಸ್ಸೆಮ್ಮೆಸ್ ಉಚಿತವಾಗಿ ಸಿಗುತ್ತದೆ. ಈ ಪ್ಲಾನ್ ವ್ಯಾಲಿಡಿಟಿ 365 ದಿನ ಇರುತ್ತದೆ. ಈ ಪ್ಲಾನ್ ನಲ್ಲಿ ವಿಶೇಷ ಆಫರ್ ಸಹ ಒಂದು ಒಳಗೊಂಡಿದೆ. ಅದೇನೆಂದರೆ, 18 ತಿಂಗಳ ಉಚಿತ ಪ್ರೊ ಪ್ಲಾನ್ ‘ಗೂಗಲ್ ಜೆಮಿನಿ’ಯದು ಸಿಗುತ್ತದೆ. ಇದರ ಮೌಲ್ಯ 35,100 ರೂಪಾಯಿ ಆಗಿದೆ. ಆದರೆ ಇದು ಉಚಿತವಾಗಿಯೇ ಒಂದೂವರೆ ವರ್ಷದ ಅವಧಿಗೆ ಜಿಯೋ ಸಿಮ್ ಬಳಕೆ…

Read More

ಮಂಡ್ಯ : ಕಂದಾಯ ಇಲಾಖೆಯಿಂದ ನೀಡುವ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ನ್ಯಾಯಾಲಯದ ಪ್ರಮಾಣ ಪತ್ರ ಲಗತ್ತಿಸಬೇಕೆಂಬ ರಾಜ್ಯ ಸರ್ಕಾರದ ಆದೇಶವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಮದ್ದೂರು ತಾಲೂಕು ಕಛೇರಿಗೆ ಮುತ್ತಿಗೆ ಹಾಕಿ ಮಂಗಳವಾರ ಪ್ರತಿಭಟನೆ ನಡೆಸಿದರು. ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ನೇತೃತ್ವದಲ್ಲಿ ತಾಲೂಕು ಕಛೇರಿಗೆ ಆಗಮಿಸಿದ ಪದಾಧಿಕಾರಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ, ಸೋಮನಹಳ್ಳಿ ಅಂದಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣ ಪತ್ರ ಪಡೆಯಲು ರಾಜ್ಯ ಸರ್ಕಾರ ನ್ಯಾಯಾಲಯದ ಪ್ರಮಾಣ ಪತ್ರ ಲಗತ್ತಿಸಬೇಕೆಂದು ಆದೇಶ ಹೊರಡಿಸಿದೆ. ಆದರೆ, ಈ ಆದೇಶದಿಂದ ಜನಸಾಮಾನ್ಯರಿಗೆ 500 ರೂಪಾಯಿಗೂ ಹೆಚ್ಚು ಖರ್ಚಾಗಲಿದೆ. ಇದರಿಂದ ಜನ ಸಾಮಾನ್ಯರಿಗೆ ಸಾಕಷ್ಟು ಆರ್ಥಿಕವಾಗಿ ಹೊರೆಯಾಗಲಿದ್ದು, ಈ ಹಿಂದೆ ಇದ್ದಂತೆ ಕೆಲವು ದಾಖಲೆಗಳನ್ನು ನೀಡಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ…

Read More

ಮಳವಳ್ಳಿ: ಸುತ್ತೂರು ಮಠ ಸಮಾಜದ ಬಡ ವರ್ಗಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಕೇಂದ್ರ ಬೃಹತ್ ಉಕ್ಕು ಮತ್ತು ಬೃಹತ್ ಕೈಗಾರಿಕಾ ಇಲಾಖೆ ಸಚಿವರು ಹಾಗೂ ಮಂಡ್ಯ ಜಿಲ್ಲೆಯ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ ಅವರು ಹೇಳಿದರು. ಅವರು ಇಂದು ಶ್ರೀ ಶಿವರಾತ್ರಿಶ್ವರ ಶಿವಯೋಗಿ ಮಹಾಸ್ವಾಮೀಜಿಯವರ 1066 ನಾನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಳವಳ್ಳಿ ಏಷ್ಯಾ ಖಂಡಕ್ಕೆ ಮೊದಲು ವಿದ್ಯುತ್ ಕಲ್ಪಿಸಿದ ಮೊದಲ ಸ್ಥಳವಾಗಿದ್ದು ಮಳವಳ್ಳಿ ಅನೇಕ ಪ್ರಾಕೃತಿಕ ಸೌಂದರ್ಯವನ್ನು ಹೊಂದಿದೆ. ಕಳೆದ ಬಾರಿ ಸುತ್ತೂರು ಜಾತ್ರೆಗೆ ತೆರಳಿದ್ದಾಗ ಮಠದ ಸ್ವಾಮೀಜಿಗಳೊಂದಿಗೆ ನಮ್ಮ ಜಿಲ್ಲೆಯಲ್ಲಿ ಸುತ್ತೂರು ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವ ಮಾಡಲು ಮನವಿ ಸಲ್ಲಿಸಿದ್ದೆ ಎಂದು ಹೇಳಿದರು. ಸುತ್ತೂರು ಮಠಕ್ಕೂ ನಮ್ಮ ಕುಟುಂಬಕ್ಕೂ 1962 ರಿಂದಲೂ ನಂಟು ಇದೆ. ಮಾಜಿ ಪ್ರಧಾನಿ ಮಂತ್ರಿ ಹೆಚ್.ಡಿ ದೇವೆಗೌಡ ಅವರು ರಾಜಕೀಯ ಪ್ರವೇಶ ಮಾಡಿದಾಗಿನಿಂದಲ್ಲೂ ಸುತ್ತೂರು ಮಠದ ಆಶಿರ್ವಾದ ನಮ್ಮ ಕುಟುಂಬದ ಮೇಲೆ ಇದೆ. ನಮ್ಮ ತಂದೆ…

Read More

ಮಳವಳ್ಳಿ : “ಶ್ರೀ ಸುತ್ತೂರು ಮಠವು ಧರ್ಮನಿಷ್ಠೆ ಮತ್ತು ಸಕಾರಾತ್ಮಕ ಶಕ್ತಿಯ ತಾಣ ಮತ್ತು ದೇಶದ ಅತ್ಯಂತ ಪ್ರಸಿದ್ಧ ಮಠಗಳಲ್ಲಿ ಒಂದಾಗಿದೆ. ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿರುವ ಈ ಮಠವು ಸಾಮಾಜಿಕ ಮತ್ತು ಧಾರ್ಮಿಕ ಪ್ರಗತಿಯಲ್ಲಿ ಮಹತ್ವದ ಪಾತ್ರ ವಹಿಸಿದೆ” ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಆದಿ ಜಗದ್ ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿ ಮಹಾಸ್ವಾಮೀಜಿಯವರ 1066ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರೊಂದಿಗೆ ಭಾಗವಹಿಸಿ ಅವರು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. “ಆದಿ ಜಗದ್ ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಮಹಾಸ್ವಾಮಿಜಿ ಭಾರತೀಯ ಸಂತ ಪರಂಪರೆಯ ಪ್ರಕಾಶಮಾನವಾದ ಸ್ತಂಭವಾಗಿದ್ದರು. ಅವರ ಇಡೀ ಜೀವನವು ಕಠಿಣತೆ, ತ್ಯಾಗ, ಕರುಣೆ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಮೀಸಲಾಗಿತ್ತು. ಅವರ ಆಧ್ಯಾತ್ಮಿಕ ಅಭ್ಯಾಸದ ಮೂಲ ಉದ್ದೇಶ ಮಾನವರಲ್ಲಿ ಮಾನವೀಯತೆಯನ್ನು ಜಾಗೃತಗೊಳಿಸುವುದಾಗಿತ್ತು” ಎಂದರು. “ಶಿವಯೋಗ ಸಂಪ್ರದಾಯದ ಮೂಲಕ, ಅವರು ಆತ್ಮಸಾಕ್ಷಾತ್ಕಾರ, ಶಿಸ್ತು ಮತ್ತು ಸೇವೆಯನ್ನು ಸಾಮಾಜಿಕ…

Read More

ಮಂಡ್ಯ: ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ವಳವಳ್ಳಿಯಲ್ಲಿ ನಡೆಯುತ್ತಿರುವುದು ಮಳವಳ್ಳಿ ಜನತೆಯ ಭಾಗ್ಯ. ಮಳವಳ್ಳಿ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಕಾರ್ಯಕ್ರಮ ಇದಾಗಿದೆ. ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳು ಲೋಕ ಕಲ್ಯಾಣಕ್ಕಾಗಿ ಮಾಡಿದ ಕಾರ್ಯಗಳು ನಿರಂತರವಾಗಿ ನಡೆಯಬೇಕು ಎಂದು ಸುತ್ತೂರು ಜಗತ್ ಗುರು ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನಧೀಶರಾದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದರು. ಇಂದು ವಳವಳ್ಳಿಯಲ್ಲಿ ಆಯೋಜಿಸಲಾಗಿದ್ದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವ ನಾನ ಜಿಲ್ಲೆಗಳಲ್ಲಿ ನಡೆದುಕೊಂಡು ಬರುತ್ತಿದೆ. ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳು ಸಾವಿರಾರು ವರ್ಷಗಳ ಹಿಂದೆ ಎರಡು ರಾಜ ಮನೆತನಗಳ ನಡುವೆ ಇದಂತಹ ವೈಷಮ್ಯವನ್ನು ಹೋಗಲಾಡಿಸಿ ಸಮಾರಸ್ಯದ, ಪ್ರೀತಿಯ, ಸ್ನೇಹದ ಬೀಜವನ್ನು ಬಿತ್ತಿ ನಾಡಿಗೆ ಕಲ್ಯಾಣ ತಂದವರು ಎಂದು ಹೇಳಿದರು. ಅವರ ಹಾದಿಯಲ್ಲಿ ಬಂದಂತಹ ಎಲ್ಲಾ ಸುತ್ತೂರು…

Read More

ಮಂಡ್ಯ : ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ 66ನೇ ಜನ್ಮದಿನದ ಅಂಗವಾಗಿ ಮದ್ದೂರು ನಗರದ ವಿವಿಧ ದೇವಾಲಯಗಳ ಅರ್ಚಕರುಗಳು ಮಂಗಳವಾರ ಮಂತ್ರಾಕ್ಷತೆ ಮತ್ತು ಫಲ ತಾಂಬೂಲ ನೀಡಿ ಆಶೀರ್ವದಿಸಿದರು. ಹುಟ್ಟು ಹಬ್ಬದ ಅಂಗವಾಗಿ ಬೆಂಗಳೂರಿನಿಂದ ಮೈಸೂರಿನ ಶ್ರೀ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಕುಮಾರಸ್ವಾಮಿ ಅವರು ಮದ್ದೂರು ನಗರದ ಪ್ರವಾಸಿ ಮಂದಿರಕ್ಕೆ ಆಗಮಿಸುತ್ತಿದ್ದಂತೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಸಾವಿರಾರು ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಜೈಕಾರ ಹಾಕಿ ಬೃಹತ್ ಹೂವಿನ ಹಾರಗಳನ್ನು ಹಾಕಿ ಅದ್ದೂರಿಯಾಗಿ ಸ್ವಾಗತಿಸಿದರು‌‌. ಬಳಿಕ, ಸಚಿವ ಕುಮಾರಸ್ವಾಮಿ ಅವರಿಗೆ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇಗುಲದ ಪ್ರಧಾನ ಅರ್ಚಕ ಪ್ರದೀಪ ಆಚಾರ್ಯ, ಸಹ ಅರ್ಚಕ ಸುರೇಶ ಆಚಾರ್ಯ, ಶ್ರೀ ಉಗ್ರ ನರಸಿಂಹ ಸ್ವಾಮಿ ದೇಗುಲದ ಅರ್ಚಕ ಪ್ರಶಾಂತ್, ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ದೇಗುಲದ ಅರ್ಚಕ ರಾಘವೇಂದ್ರ ಅವರುಗಳ ತಂಡ ಕುಮಾರಸ್ವಾಮಿ ಅವರಿಗೆ ಶೇಷ ವಸ್ತ್ರ, ತೀರ್ಥ ಪ್ರಸಾದ…

Read More

ಬೆಳಗಾವಿ ಸುವರ್ಣಸೌಧ: ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು ರೂಪಿಸುವದರಿಂದ ತಡೆಗಟ್ಟಲು ಸಾಧ್ಯವಿಲ್ಲ. ಸಾಮಾಜಿಕ ಜಾಗೃತಿಯೂ ಬಹಳ ಮುಖ್ಯ. ಯಾಕೆಂದರೆ ಯಾರೂ ಒತ್ತಾಯ ಪೂರ್ವಕವಾಗಿ ಮಾಡಿಕೊಳ್ಳುತ್ತಿಲ್ಲ. ತಂತ್ರಜ್ಞಾನದ ಸಹಾಯವನ್ನೂ ಪಡೆದುಕೊಳ್ಳುತ್ತಿದ್ದಾರೆ. ಓರಲ್ ಔಷಧದ ಸೇವನೆಯಿಂದಲೂ ನಡೆಯುತ್ತಿದೆ. ಈಗಂತೂ ಅಲ್ಟ್ರಾಸೌಂಡ್ ಪೋರ್ಟೆಬಲ್ ಸ್ಕಾನಿಂಗ್ ಯಂತ್ರದಿಂದ ಅತ್ಯಂತ ಸಣ್ಣ ಸ್ಥಳದಲ್ಲಿಯೂ ಪರೀಕ್ಷೆ ನಡೆಸಬಹುದಾಗಿದೆ. ಪ್ರತಿ ಜಿಲ್ಲೆಯ ಡೇಟಾ ಪರಿಶೀಲನೆ ನಡೆಸಿ, ಹೆಚ್ಚು ಗಂಡುಮಕ್ಕಳು ಜನಿಸುವ ಆಸ್ಪತ್ರೆಗಳ ಮೇಲೆ ನಿಗಾ ಇಟ್ಟಿದ್ದೇವೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ಪ್ರಶ್ನೆ‌ಗೆ ಉತ್ತರಿಸಿದ ಅವರು, ಸಾಮಾಜಿಕ ಜಾಗೃತಿ ಮೂಡಿಸುತ್ತಿದ್ದೇವೆ. ಮಾಹಿತಿ ನೀಡಿದವರ ವಿವರ ಗೌಪ್ಯವಾಗಿಟ್ಟು ಬಹುಮಾನವನ್ನು ನೀಡುತ್ತಿದ್ದೇವೆ. ಪ್ರತಿ ಜಿಲ್ಲೆಗೂ ಒಬ್ಬ ನೋಡಲ್ ಅಧಿಕಾರಿ ನೇಮಕ ಮಾಡುತ್ತಿದ್ದೇವೆ. ಕಾನೂನು ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಗುಪ್ತ ಕಾರ್ಯಾಚರಣೆ ಸಹ ನಡೆಸುತ್ತಿದ್ದೇವೆ.…

Read More