Author: kannadanewsnow09

ನವದೆಹಲಿ: ಇಂದು ದೆಹಲಿಯ CWMA ಕಚೇರಿಯಲ್ಲಿ ಕಾವೇರಿ ನದಿ ನೀರು ಹರಿವಿನ ವಿಚಾರವಾಗಿ ಮಹತ್ವದ 33ನೇ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ ಸಿಡಬ್ಲ್ಯೂ ಎಂಎ ಎರಡೂ ರಾಜ್ಯಗಳಿಗೆ ಜಲಾಶಯಗಳಲ್ಲಿ ನೀರನ್ನು ಸಂಗ್ರಹಿಸಿ ಇಟ್ಟುಕೊಳ್ಳಿ ಎಂಬುದಾಗಿ ಸಲಹೆ ಮಾಡಿದೆ. ಹೀಗಿದೆ ದಿನಾಂಕ: 22.08.2024 ರಂದು ಜರುಗಿದ CWMA 33ನೇ ಸಭೆಯ ಚರ್ಚೆಯ ಸಾರಾಂಶ 1. ಕರ್ನಾಟಕವು CWMA ಮುಂದೆ ಈ ಕೆಳಕಂಡ ಅಂಶಗಳನ್ನು ಸಲ್ಲಿಸಿತು: i) ದಿನಾಂಕ 21.08.2024 ರಂತೆ ನಿಗದಿಪಡಿಸಿದ ನೀರಿನ ಹರಿವಾದ 71.56 ಟಿಎಂಸಿ ಗೆ ಬದಲಾಗಿ ಬಿಳಿಗುಂಡ್ಲುವಿನಲ್ಲಿ 170.851 ಟಿಎಂಸಿ ನೀರು ಹರಿದಿರುತ್ತದೆ. ii) ಬಿಳಿಗುಂಡ್ಲುವಿನಲ್ಲಿ ಹರಿದ ಹೆಚ್ಚುವರಿ ನೀರಿನ ಪ್ರಮಾಣವನ್ನು ಮುಂಬರುವ ತಿಂಗಳುಗಳಲ್ಲಿ ಕರ್ನಾಟಕ ರಾಜ್ಯವು ಹರಿಸಬೇಕಾದ ನೀರಿನ ಮೊತ್ತಕ್ಕೆ ಜಮೆ ಮಾಡಿಕೊಳ್ಳತಕ್ಕದ್ದು. 2. ತಮಿಳುನಾಡು ರಾಜ್ಯವು ಈ ಕೆಳಕಂಡ ಅಂಶಗಳನ್ನು ಸಲ್ಲಿಸಿತು: i) ಬಿಳಿಗುಂಡ್ಲುವಿನಲ್ಲಿ ನಿಗದಿತ ಪ್ರಮಾಣಕ್ಕಿಂತ ವಾಸ್ತವವಾಗಿ ಹರಿದ ಹೆಚ್ಚುವರಿ ನೀರಿನ ಪ್ರಮಾಣವು, ಕರ್ನಾಟಕದ ಜಲಾಶಯಗಳಿಗೆ ಹರಿದು ಬಂದ ಹೆಚ್ಚುವರಿ ಒಳಹರಿವಿನ ಪ್ರಮಾಣದ…

Read More

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐನಿಂದ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿತ್ತು. ಆದರೆ ಸಿಬಿಐನವರು ತನಿಖೆಯನ್ನು ನಿಲ್ಲಿಸದೆ ಮುಂದುವರೆಸಿದ್ದಾರೆ. ನೂರಕ್ಕೂ ಹೆಚ್ಚು ನನ್ನ ಸ್ನೇಹಿತರು, ಕುಟುಂಬಸ್ಥರಿಗೆ ತುಂಬಾ ಕಿರುಕುಳ ನೀಡುತ್ತಿದ್ದಾರೆ. ಇದೇ ಕೆಲಸವನ್ನು ಲೋಕಾಯುಕ್ತ ಕೂಡ ಮುಂದುವರೆಸಿದೆ, ಅವರಿಂದಲೂ ಕಿರುಕುಳ ಆಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಲೋಕಾಯುಕ್ತ ವಿಚಾರಣೆ ನಂತರ ಲೋಕಾಯುಕ್ತ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು “ಲೋಕಾಯುಕ್ತ ಕಳೆದ ಆರು ತಿಂಗಳಿನಿಂದ ತನಿಖೆ ಮಾಡುತ್ತಿದೆ. ಎರಡು ಗಂಟೆಗಳಿಗೂ ಹೆಚ್ಚು ಕಾಲ ನನ್ನನ್ನು ವಿಚಾರಣೆ ಮಾಡಿದರು. ಇವರಿಗಿಂತ ಸಿಬಿಐನವರೇ ಪರವಾಗಿಲ್ಲ. ಲೋಕಾಯುಕ್ತದವರು ವಿಚಿತ್ರ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸಿಬಿಐನವರೇ ಇನ್ನು ನನಗೆ ಪ್ರಶ್ನೆಗಳನ್ನೇ ಕೇಳಿಲ್ಲ, ಒಂದು ದಿನವೂ ವಿಚಾರಣೆಗೆ ಕರೆಯಲಿಲ್ಲ. ಆದರೆ ಲೋಕಾಯುಕ್ತದವರು ಸಹ ಹಿಂಸೆ ಕೊಡುತ್ತಿದ್ದಾರೆ” ಎಂದರು. “ಲೋಕಾಯುಕ್ತದ ಪ್ರಶ್ನೆಗಳಿಗೆ ಉತ್ತರಗಳನ್ನು ಕೊಟ್ಟಿದ್ದೇನೆ. ಒಂದಷ್ಟು ವಿಚಾರಗಳಲ್ಲಿ ಸ್ಪಷ್ಟನೆ ಪಡೆದುಕೊಳ್ಳಲು ಪ್ರಶ್ನೆಗಳನ್ನು ಕೇಳಿದ್ದು,ಇದಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಇರುವ ಪೂರಕವಾದ ದಾಖಲೆಗಳನ್ನು…

Read More

ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯಪಾಲರಿಗೆ ಬಾಕಿ ಇರುವಂತ ಪ್ರಾಸಿಕ್ಯೂಷನ್ ಗಳಿಗೆ ಅನುಮತಿ ನೀಡುವ ಬಗ್ಗೆ ಸಲಹೆ ನೀಡುವಂತ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಯಿತು. ಇದಲ್ಲದೇ ಇನ್ನುಳಿದ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್ ಮುಂದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು, ಆಗಸ್ಟ್.1 ರಂದು ಕ್ಯಾಬಿನೆಟ್ ಸಭೆ ನಡೆದಿತ್ತು. ಆ ಸಭೆಯಲ್ಲಿ ಖಂಡನಾ ನಿರ್ಣಯ ತೆಗೆದುಕೊಳ್ಳಲಾಗಿತ್ತು. ರಾಜ್ಯಪಾಲರಿಗೆ ಖಂಡನಾ ನಿರ್ಣಯ ಕಳಿಸಿದ್ದೆವು. ಅಂದು ತೆಗೆದುಕೊಂಡಿದ್ದ ನಿರ್ಣಯ ದೃಢೀಕರಿಸಲಾಗಿದೆ. ಇಂದಿನ ಕ್ಯಾಬಿನೆಟ್ ನಲ್ಲಿ ದೃಡೀಕರಣ ಮಾಡಿದ್ದೇವೆ. ಇಂದು 35 ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ ಎಂದರು. ರಾಜ್ಯಪಾಲರ ಎದುರು ಹಲವು ಪ್ರಕರಣಗಳಿವೆ. ಪ್ರಾಸಿಕ್ಯೂಶನ್‌ಗಾಗಿ ಅಲ್ಲಿ ಪೆಂಡಿಂಗ್ ಇವೆ. ಲೋಕಾಯುಕ್ತ ವರದಿಗಳು ಅಲ್ಲಿವೆ. ಮಾಧ್ಯಮದ ಮೂಲಕ ಹಲವು ಮಾಹಿತಿ ಲಭ್ಯವಾಗಿವೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಲ್ಲಿಸಿದ ಅರ್ಜಿ…

Read More

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಗಿಂಕ ಕಿರುಕುಳ ನೀಡಿದ ಸಂಬಂಧ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಕೇಸಲ್ಲಿ ಅವರನ್ನು ಬಂಧಿಸದಂತೆ ಹೈಕೋರ್ಟ್ ಈ ಹಿಂದೆ ತಡೆಯಾಜ್ಞೆ ನೀಡಿತ್ತು. ಇಂದು ಮತ್ತೆ ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಿಸಿದೆ. ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ರಿಲೀಫ್ ನೀಡಲಾಗಿದೆ. ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣದ ಬಂಧಿಸದಂತೆ ನೀಡಲಾಗಿದ್ದಂತ ತಡೆಯಾಜ್ಞೆಯನ್ನು ರದ್ದುಗೊಳಿಸುವ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನು ಒಳಗೊಂಡಂತ ನ್ಯಾಯಪೀಠವು ವಿಚಾರಣೆ ಕೈಗೆತ್ತಿಕೊಂಡಿತು. ಇಂತಹ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್.30ಕ್ಕೆ ವಿಸ್ತರಿಸಿ, ಮಧ್ಯಂತರ ತಡೆಯಾಜ್ಞೆಯನ್ನು ಬಂಧಿಸದಂತೆ ವಿಸ್ತರಿಸಿ ಆದೇಶಿಸಿದರು. ಅಂದಹಾಗೇ ಬಿಎಸ್ ವೈ ವಿರುದ್ಧದ ಪೋಕ್ಸೋ ಕೇಸ್ ಸಂಬಂಧ ಸಿಐಡಿ ತನಿಖೆ ನಡೆಸಿ, ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಿತ್ತು. ಈ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಂಧನದ ಭೀತಿ ಎದುರಾಗಿತ್ತು. ಈ…

Read More

ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಎನ್ನುವಂತೆ ಸುರಂಗ ಮಾರ್ಗವನ್ನು ನಿರ್ಮಿಸುವಂತ ಕಾಮಗಾರಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು, 250 ಅಡಿ ಸ್ಕೈಡೆಕ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. 500 ಕೋಟಿ ಅಂದಾಜು ಮೊತ್ತಕ್ಕೆ ಒಪ್ಪಿಗೆ ನೀಡಲಾಗಿದೆ ಎಂದರು. ಬೆಂಗಳೂರಿನಲ್ಲಿ ಎಲ್ ಇಡಿ ದೀಪಗಳ ಅಳವಡಿಕೆಗೆ ಒಪ್ಪಿಗೆ ನೀಡಲಾಗಿದೆ. 684 ಕೋಟಿ ವೆಚ್ಚಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಬೆಂಗಳೂರು ಟನಲ್ ರಸ್ತೆ ನಿರ್ಮಾಣಕ್ಕೆ ಸಮ್ಮತಿ ನೀಡಲಾಗಿದೆ. ಎಸ್ಟೀಮ್ ಮಾಲ್ ನಿಂದ ಸಿಲ್ಕ್ ಬೋರ್ಡ್ ವರೆಗೆ ಟನಲ್ ನಿರ್ಮಾಣವಾಗಲಿದೆ. ಇದನ್ನು 12690 ಕೋಟಿ ವೆಚ್ಚದಲ್ಲಿ ಸುರಂಗ ನಿರ್ಮಾಣ ಮಾಡಲಾಗುತ್ತಿದೆ ಎಂದರು. https://kannadanewsnow.com/kannada/breaking-another-victim-of-bike-wheeling-madness-in-the-state-priest-dies-without-treatment/ https://kannadanewsnow.com/kannada/we-will-not-rest-till-siddaramaiah-resigns-bjp-mlc-chalavadi-narayanasamy/

Read More

ಬೆಂಗಳೂರು: ರಾಜನನ್ನು ರಾಜನ ರೀತಿ ನೋಡೋಕೆ ಇಷ್ಟ. ಆದರೇ ಎನ್ನುತ್ತಲೇ ನಟಿ ರಚಿತಾ ರಾಮ್ ಅವರು ಜೈಲಲ್ಲಿ ನಟ ದರ್ಶನ್ ಸ್ಥಿತಿ ಕಂಡು ಕಣ್ಣೀರಿಟ್ಟರು. ಈ ಮೂಲಕ ಭಾವುಕರಾದರು. ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ನಟಿ ರಚಿತಾ ರಾಮ್ ತೆರಳಿ, ನಟ ದರ್ಶನ್ ಭೇಟಿಯಾದರು. ಅವರ ಆರೋಗ್ಯ ವಿಚಾರಿಸಿ, ಮಾತನಾಡಿಕೊಂಡ ಬಂತ ನಂದ್ರ, ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ನಟಿ ರಚಿತಾ ರಾಮ್ ಎಂಬುದಾಗಿ ಗುರುತಿಸಿಕೊಳ್ಳಲು ನಟ ದರ್ಶನ್ ಕಾರಣ. ಅವರು ಅಂದು ಅವರ ಬ್ಯಾನರ್ ಅಡಿಯಲ್ಲಿ ನನಗೆ ಅವಕಾಶ ನೀಡದೇ ಇದ್ದಿದ್ದರೇ, ಒಂದು ಮಾತು ನೋ ಎಂದಿದ್ದರೇ ನಾನು ಹೀಗೆ ನಟಿಯಾಗಲು ಸಾಧ್ಯವಾಗುತ್ತಿರಲಿಲ್ಲ ಎಂದರು. ನಾನು ದರ್ಶನ್ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದೆ. ಅವರು ಆರೋಗ್ಯವಾಗಿದ್ದಾರೆ. ನಾನು ಅವರ ಸ್ಥಿತಿಯನ್ನು ಕಂಡು ಭಾವುಕರಾದಂತ ವೇಳೆಯಲ್ಲಿ ನಟ ದರ್ಶನ್ ಅವರೇ ನನ್ನನ್ನು ಸಮಾಧಾನಿಸಿದರು. ನನಗೆ ಕಾನೂನಿನ ಮೇಲೆ ನಂಬಿಕೆ ಇದೆ. ನಟ ದರ್ಶನ್ ಆದಷ್ಟು ಬೇಗ ಹೊರಗೆ ಬರ್ತಾರೆ ಅಂತ…

Read More

ಬೆಂಗಳೂರು :ಸಿದ್ದರಾಮಯ್ಯ ರಾಜೀನಾಮೆ ಕೇಳಲು ಎಚ್. ಡಿ. ಕುಮಾರಸ್ವಾಮಿ ಗೆ ನೈತಿಕತೆ ಇಲ್ಲ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಾಗ್ದಾಳಿ ನಡೆಸಿದ್ದಾರೆ. ಸುದ್ಧಿಗಾರರ ಜತೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆ ಆಧಾರದ ಮೇಲೆ ಅಕ್ರಮ ನಡೆದಿರುವುದು ಸಾಬೀತು ನಂತರ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂ ಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಎಸ್ಐಟಿ ಮನವಿ ಮಾಡಿ ಹತ್ತು ತಿಂಗಳು ಕಳೆದಿದೆ. ನಿಜವಾಗಿಯೂ ರಾಜೀನಾಮೆ ನೀಡಬೇಕಿರುವುದು ಕುಮಾರಸ್ವಾಮಿ ಎಂದು ತಿಳಿಸಿದರು. ಸಿದ್ದರಾಮಯ್ಯ ವಿರುದ್ಧ ನೀಡಿರುವುದು ಖಾಸಗಿ ದೂರು. ಎಫ್ ಐ ಆರ್ ಆಗಿಲ್ಲ, ತನಿಖೆ ನಡೆದಿಲ್ಲ. ಆದರೆ ದೂರು ನೀಡಿದ ದಿನವೇ ನೋಟಿಸ್ ನೀಡಿರುವುದು ಎಷ್ಟು ಸರಿ. ತನಿಖೆಯಲ್ಲಿ ಅಕ್ರಮ ಸಾಬೀತು ಪ್ರಕರಣ ದಲ್ಲಿ ಕುಮಾರಸ್ವಾಮಿ ವಿರುದ್ಧ ಮೊದಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕಿತ್ತು. ನೈತಿಕತೆ ಹೊತ್ತು ಕುಮಾರಸ್ವಾಮಿ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು. ನೂರು ಸಿದ್ದರಾಮಯ್ಯ ಬಂದರೂ ಏನೂ ಮಾಡಲಾಗದು ಎಂದು ಕುಮಾರಸ್ವಾಮಿ ಹೇಳುತ್ತಾರೆ. ಅವರು…

Read More

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಬಿಎಂಟಿಸಿಯಿಂದ ಹೊಸ ಮಾರ್ಗದಲ್ಲಿ ಬಸ್ ಸಂಚಾರ ಆರಂಭಿಸಲಾಗಿದೆ. ಹೊಸ ಮಾರ್ಗದಲ್ಲಿ ದಿನಾಂಕ 26-08-2024ರಿಂದ ಬಿಎಂಟಿಸಿ ಬಸ್ ಸಂಚಾರ ಆರಂಭಗೊಳ್ಳಲಿದೆ. ಈ ಬಗ್ಗೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಗರದ ಪ್ರಮುಖ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ, ಯಶವಂತಪುರ ರೈಲ್ವೆ ನಿಲ್ದಾಣದಿಂದ ಯಶವಂತಪುರ ಬಸ್‌ ನಿಲ್ದಾಣ, ದಂಡು ರೈಲ್ವೆ ನಿಲ್ದಾಣ, ಈಸ್ಟ್‌ ರೈಲ್ವೆ ನಿಲ್ದಾಣ ಹಾಗೂ ಮಾರುತಿ ಸೇವಾ ನಗರ ಮಾರ್ಗವಾಗಿ ಸರ್‌ ಎಂ.ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣಕ್ಕೆ ನೂತನ ಮಾರ್ಗ ಸಂಖ್ಯೆ 300-ಆರ್‌ ಅನ್ನು ದಿನಾಂಕ: 26.08.2024 ರಿಂದ ಪರಿಚಯಿಸುತ್ತಿದ್ದು ವಿವರ ಕೆಳಕಂಡಂತಿದೆ : ಮಾರ್ಗ ಸಂಖ್ಯೆ : 300-ಆರ್ ಬಿಡುವ ವೇಳೆ ಯಶವಂತಪುರ ರೈಲ್ವೆ ನಿಲ್ದಾಣ ಸರ್‌ ಎಂ.ವಿಶ್ವೇಶ್ವರಯ್ಯ…

Read More

ಶಿವಮೊಗ್ಗ : ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲವು 2024ರ ಜುಲೈ ತಿಂಗಳಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಶಿಕ್ಷೆ ಮತ್ತು ಭೂ ಕಬಳಿಕೆಯಾದ ಜಮೀನನ್ನು ಸರ್ಕಾರಕ್ಕೆ ವಾಪಸ್ಸು ಪಡೆಯಲು ಅದೇಶ ನೀಡಿರುತ್ತದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಭದ್ರಾಪುರ ಗ್ರಾಮದ ಸರ್ವೆ ನಂ. 19ರ ಸರ್ಕಾರಿ ಜಮೀನಿನನ್ನು ಅದೇ ಗ್ರಾಮದ ಚನ್ನಯ್ಯ ಬಿನ್ ವೀರಯ್ಯ ಎಂಬುವವರು 25 ಗುಂಟೆ ಜಮೀನು ಹಾಗೂ ಬಸಪ್ಪ ಬಿನ್ ಲೇಟ್ ಅಯ್ಯಣ್ಣ ಎಂಬುವವರು 36 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುತ್ತಾರೆ ಎಂಬ ಗ್ರಾಮಸ್ಥರ ದೂರಿನನ್ವಯ ಶಿಕಾರಿಪುರ ತಹಶೀಲ್ದಾರ್ ನೀಡಿ ದೂರನ್ನು ಪರಿಗಣಿಸಿ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು. ತನಿಖೆ ಪೂರ್ಣಗೊಳಿಸಿ ಆರೋಪಿತರ ವಿರುದ್ಧ ಕ.ಭೂ.ಕಂ. ಅಧಿನಿಯಮದಡಿ ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಈ ಪ್ರಕರಣವನ್ನು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಸ್ವೀಕರಿಸಿ ಸಂಪೂರ್ಣ ಸಾಕ್ಷ್ಯ ವಿಚಾರಣೆಯನ್ನು ನಡೆಸಿದ ನಂತರ ಆರೋಪಿತರು ಸರ್ಕಾರಿ ಜಮೀನನ್ನು ಭೂ ಕಬಳಿಕೆ…

Read More

ಬೆಂಗಳೂರು: ರಾಜ್ಯಪಾಲರು ಬುಲೆಟ್ ಪ್ರೂಫ್ ಕಾರಿನಲ್ಲಿ ಓಡಾಡಲು ಕಾಂಗ್ರೆಸ್ ಕಾರಣ ಎನ್ನುವ ಬಗ್ಗೆ ಕೇಳಿದಾಗ “ಬಿಜೆಪಿ, ದಳದ ಕಿಡಿಗೇಡಿಗಳು ಕಲ್ಲು ಹೊಡಯಬಹುದು ಎನ್ನುವ ಕಾರಣಕ್ಕೆ ಪೊಲೀಸ್ ಅವರು ರಕ್ಷಣೆಗಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾನೂನು ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿ, ದಳ ಪ್ರಯತ್ನಿಸುತ್ತಿದೆ ಎನ್ನುವ ಮಾಹಿತಿ ನಮಗಿದೆ. ನಮಗೆ ರಾಜ್ಯಪಾಲರ ಮೇಲೆ ಗೌರವವಿದೆ. ಆದ ಕಾರಣ ಅವರಿಗೆ ರಕ್ಷಣೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಎಂದರು. ವಿಧಾನಸೌಧದ ಆವರಣದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ, 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ” ಅಭಿಯಾನಕ್ಕೆ ಚಾಲನೆ ನೀಡಿ ಶಿವಕುಮಾರ್ ಅವರು ಮಾತನಾಡಿದರು. ಕಾಂಗ್ರೆಸ್ ರಾಜ್ಯಪಾಲರಿಗೆ ಅವಮಾನಿಸಿದ್ದನ್ನು ವಿರೋಧಿಸಿ ಬಿಜೆಪಿಯವರ ಪ್ರತಿಭಟನೆ ಬಗ್ಗೆ ಕೇಳಿದಾಗ “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನನ್ನನ್ನು, ನಿಮ್ಮನ್ನು ಯಾರನ್ನು ಬೇಕಾದರೂ ಟೀಕೆ ಮಾಡಬಹುದು. ಯಾರಿಗೆ ಯಾವ ಗೌರವ ಕೊಡಬೇಕೋ ಅದನ್ನು ಖಂಡಿತ ಕೊಡಲೇಬೇಕು. ಘನವೆತ್ತ ರಾಜ್ಯಪಾಲರಿಗೆ ನಾವು ಖಂಡಿತಾ ಗೌರವ ನೀಡುತ್ತೇವೆ” ಎಂದು…

Read More