Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ತುಟ್ಟಿಭತ್ಯೆ ದರಗಳನ್ನು ಪರಿಷ್ಕರಿಸಿ ಸರ್ಕಾರ ಅಧಿಕೃತ ಆದೇಶ ಮಾಡಿದೆ. ತುಟ್ಟಿಭತ್ಯೆ ದರವನ್ನು ಶೇ.12.25ರಿಂದ 14.25ರಷ್ಟು ಪರಿಷ್ಕರಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಿಡಿಸಿದ್ದು, 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 12.25 ರಿಂದ ಶೇಕಡ 14.25 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದಿದೆ. ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, (ಅ) 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ, (ಆ) 2024ರ ಕರ್ನಾಟಕ ನಾಗರಿಕ ಸೇವಾ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕೋಲಾರ, ವಿಜಯನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಿಸಿ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀನೆ ಮಾಡಲು ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದಿದ್ದಾರೆ. ಕೋಲಾರ ಜಿಲ್ಲೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಐಎಎಸ್ ಅಧಿಕಾರಿ ತುಳಸಿ ಮದ್ದಿನೇನಿ ಅವರನ್ನು ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇನ್ನೂ ವಿಜಯನಗರ ಜಿಲ್ಲೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಕೆ.ಜಿ ಜಗದೀಶ್ ಅವರನ್ನು, ದಕ್ಷಿಣ ಕನ್ನಡ ಜಿಲ್ಲೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…
ಬೆಂಗಳೂರು: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ʼಗ್ರಾಮಾಭಿವೃದ್ಧಿಯ ಹೊಸ ಹಾದಿ-ಯುಕ್ತಧಾರʼ ಮಾರ್ಗಸೂಚಿಗಳನ್ನು ಅನುಸರಿಸಿ 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಸಂಬಂಧ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಮಾರ್ಗದರ್ಶನ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅಕುಶಲ ಕೆಲಸಕ್ಕೆ ಬೇಡಿಕೆ ಸಲ್ಲಿಸುವ ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ವರ್ಷದಲ್ಲಿ 100 ದಿನಗಳ ಅಕುಶಲ ಕೆಲಸ ಖಾತ್ರಿ ಪಡಿಸುತ್ತದೆ. ಕೂಲಿಕಾರರಿಗೆ ಸಕಾಲದಲ್ಲಿ ಅಕುಶಲ ಕೆಲಸ ಒದಗಿಸುವುದರೊಂದಿಗೆ ಬಹುಬಾಳಿಕೆ ಆಸ್ತಿಗಳನ್ನು ಸೃಜಿಸಲಾಗುತ್ತದೆ. ಹೀಗೆ ಸೃಜಿಸುವ ಆಸ್ತಿಗಳನ್ನು ಪ್ರತಿ ವರ್ಷ ಅಕ್ಟೋಬರ್ ಮಾಹೆಯಿಂದ ನವೆಂಬರ್ ಮಾಹೆವರೆಗೆ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಕಾರ್ಮಿಕ ಆಯವ್ಯಯವನ್ನು ಸಿದ್ಧಪಡಿಸಲಾಗುತ್ತಿತ್ತು. ಈ ಬಾರಿ 2026-27ನೆ ಆರ್ಥಿಕ ಸಾಲಿನ ಕಾರ್ಮಿಕ ಆಯವ್ಯಯವನ್ನು ವೈಜ್ಞಾನಿಕವಾಗಿ ಸಿದ್ದಪಡಿಸಲು ʼಯುಕ್ತಧಾರʼ ತಂತ್ರಾಂಶವನ್ನು ಜಾರಿಗೊಳಿಸಲಾಗಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ. ಪರೀಕ್ಷಾರ್ಥ ತಾಲ್ಲೂಕಿಗೊಂದು ಗ್ರಾಮ ಪಂಚಾಯತಿಯಲ್ಲಿ ಈಗಾಗಲೆ ತಂತ್ರಾಂಶದಡಿ ಆಯವ್ಯಯವನ್ನು ಸಿದ್ದಪಡಿಸಲಾಗಿತ್ತು, ಕಾರ್ಮಿಕ ಆಯವ್ಯಯವನ್ನು ಸಿದ್ದಪಡಿಸಲು ಎಲ್ಲಾ…
ಬೆಂಗಳೂರು: ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತರನ್ನಾಗಿ ಮೂವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಈ ಮೂಲಕ ಮಾಹಿತಿ ಹಕ್ಕು ಕಾಯ್ದೆಯಡಿ ಕೆಲಸಕ್ಕೆ ಚುರುಕು ನೀಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದ್ದು, ಮಾಹಿತಿ ಹಕ್ಕು ಕಾಯ್ದೆ, 2005 (2005 ರ ಕೇಂದ್ರ ಕಾಯ್ದೆ 22) ರ ಸೆಕ್ಷನ್ 15 ರ ಉಪವಿಭಾಗ (3) ರ ಅಡಿಯಲ್ಲಿ ನನಗೆ ನೀಡಲಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕದ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್, ನಾನು ಈ ಕೆಳಗಿನ ವ್ಯಕ್ತಿಗಳನ್ನು ಕರ್ನಾಟಕ ಮಾಹಿತಿ ಆಯೋಗದಲ್ಲಿ ರಾಜ್ಯ ಮಾಹಿತಿ ಆಯುಕ್ತರನ್ನಾಗಿ ನೇಮಿಸುತ್ತೇನೆ ಎಂದಿದೆ. 1. ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ, ರಾಜ್ಯ ಮಾಹಿತಿ ಆಯುಕ್ತರು, ಬೆಂಗಳೂರು ಪೀಠ 2. ಬಿ.ವೆಂಕಟ್ ಸಿಂಗ್, ರಾಜ್ಯ ಮಾಹಿತಿ ಆಯುಕ್ತರು, ಕಲಬುರ್ಗಿ ಪೀಠ 3. ಡಾ.ಮಹೇಶ್ ವಾಲ್ವೇಕರ್, ರಾಜ್ಯ ಮಾಹಿತಿ ಆಯುಕ್ತರು, ಬೆಂಗಳೂರು ಪೀಠ ರಾಜ್ಯ ಮಾಹಿತಿ ಆಯುಕ್ತರ ಕಚೇರಿಯ ನಿಯಮಗಳು ಮತ್ತು ಷರತ್ತುಗಳು ಮಾಹಿತಿ ಹಕ್ಕು ಕಾಯ್ದೆ 2005 ರ ಸೆಕ್ಷನ್…
ಬೆಂಗಳೂರು : “ನವೆಂಬರ್ 1 ನೇ ತಾರೀಕಿನಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯಕ್ಕೆ ಸರ್ಕಾರ ತೀರ್ಮಾನ ಮಾಡಿದೆ. ಇದು ಬೆಂಗಳೂರಿನ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗವಾಗುತ್ತದೆ. ಇದೊಂದು ಕ್ರಾಂತಿಕಾರಕ ತೀರ್ಮಾನ. ಆಸ್ತಿ ಶುದ್ಧೀಕರಣಕ್ಕೆ ನಾಂದಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ ಲೈನ್ ವ್ಯವಸ್ಥೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ರವರು ವಿಧಾನಸೌಧದಲ್ಲಿ ಬುಧವಾರ ಚಾಲನೆ ನೀಡಿ, ಮಾತನಾಡಿದರು. “2 ಸಾವಿರ ಚ.ಮೀ. ವಿಸ್ತೀರ್ಣದ ಆಸ್ತಿಗಳು ಈ ಕಾರ್ಯಕ್ರಮದ ವ್ಯಾಪ್ತಿಗೆ ಬರುತ್ತವೆ. 2 ಸಾವಿರ ಚದರ ಮೀಟರ್ ಗಿಂತ ಹೆಚ್ಚು ವಿಸ್ತೀರ್ಣದ ಆಸ್ತಿಗಳಿಗೆ ಕ್ಯಾಡ್ ಡ್ರಾಯಿಂಗ್ ಸೇರಿದಂತೆ ಇತರೇ ದಾಖಲೆಗಳನ್ನು ನೀಡಬೇಕಾಗುತ್ತದೆ. ನವೆಂಬರ್ 1 ರಿಂದ ಪ್ರಾರಂಭವಾಗುವ ಈ ಅಭಿಯಾನ 100 ದಿನಗಳ ನಡೆಯಲಿದೆ. 500 ರೂಪಾಯಿ ಅರ್ಜಿ…
SHOCKING: ಒಬ್ಬನೇ ವ್ಯಕ್ತಿಯಿಂದ 476 RTI ಅರ್ಜಿ: ಅರ್ಜಿ ಸಲ್ಲಿಕೆಗೆ ನಿರ್ಬಂಧಿಸಿದ ಆದೇಶಕ್ಕೆ ತಡೆಗೆ ಹೈಕೋರ್ಟ್ ನಕಾರ
ಬೆಂಗಳೂರು: ಒಬ್ಬನೇ ವ್ಯಕ್ತಿಯಿಂದ ಬರೋಬ್ಬರಿ 476 ಮಾಹಿತಿ ಹಕ್ಕು ಅರ್ಜಿಗಳನ್ನು ಹಾಕಿದ್ದರು. ಹೀಗಾಗಿ ಮಾಹಿತಿ ಹಕ್ಕು ಆಯೋಗವು ಮತ್ತೆ ಅರ್ಜಿ ಸಲ್ಲಿಸದಂತೆ ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧವನ್ನು ತೆರವಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿ ವಿಚಾರಣೆ ನಡೆಸಿದಂತ ಹೈಕೋರ್ಟ್ ನಿರ್ಬಂಧಕ್ಕೆ ತಡೆ ನೀಡಲು ನಕಾರ ವ್ಯಕ್ತಪಡಿಸಿದೆ. ಕೆ.ದೇವಪ್ರಸಾದ್ ಎಂಬುವರು ಹೈಕೋರ್ಟ್ ಗೆ ಮಾಹಿತಿ ಹಕ್ಕು ಆಯೋಗದಿಂದ ಅರ್ಜಿ ಸಲ್ಲಿಸಲು ನಿರ್ಬಂಧ ವಿಧಿಸಿದೆ. 476 ಆರ್ ಟಿ ಐ ಅರ್ಜಿ ಸಲ್ಲಿಸಿದ್ದ ಕಾರಣಕ್ಕೆ ಮತ್ತೆ ಅರ್ಜಿ ಸಲ್ಲಿಸದಂತೆ ನಿರ್ಬಂಧ ವಿಧಿಸಲಾಗಿದೆ. ಮಾಹಿತಿ ಹಕ್ಕು ಆಯೋಗದ ಈ ನಿರ್ಬಂಧಕ್ಕೆ ತಡೆ ನೀಡುವಂತೆ ಹೈಕೋರ್ಟ್ ತಡೆ ನೀಡುವಂತೆ ಕೋರಿದ್ದರು. ಒಬ್ಬನೇ ವ್ಯಕ್ತಿಯಿಂದ ಆರ್ ಟಿ ಐ ಅಡಿಯಲ್ಲಿ 476 ಅರ್ಜಿ ಸಲ್ಲಿಸಿದ್ದರ ಬಗ್ಗೆ ಹೈಕೋರ್ಟ್ ಅಚ್ಚರಿಯನ್ನು ವ್ಯಕ್ತಪಡಿಸಿತು. ಅಲ್ಲದೇ ಆರ್ ಟಿ ಐ ಅರ್ಜಿ ಸಲ್ಲಿಸದಂತೆ ನಿರ್ಬಂಧಿಸಿದ್ದ ಮಾಹಿತಿ ಹಕ್ಕು ಆಯೋಗದ ಆದೇಶಕ್ಕೆ ತಡೆ ನೀಡಲು ನಕಾರ ವ್ಯಕ್ತಪಡಿಸಿತು. ಅಂದಹಾಗೇ ಕೆ.ದೇವಪ್ರಸಾದ್ ಆರ್ ಟಿ…
ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಿವಮೊಗ್ಗ ಮತ್ತು ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಹಾಗೂ ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕೇಂದ್ರ ಹಾಗೂ ಜಿಲ್ಲೆಯ ಸರ್ಕಾರೇತರ ಸಂಘ ಸಂಸ್ಥೆಗಳು ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಹೆಚ್.ಐ.ವಿ ನಿಯಂತ್ರಣಕ್ಕಾಗಿ ತೀವ್ರಗೊಳಿಸಿದ ಪ್ರಚಾರಾಂದೋಲನದ ಅಂಗವಾಗಿ ದಿನಾಂಕ 14-10-25 ಎಂದು ಏರ್ಪಡಿಸಲಾಗಿದ್ದ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಡಿಹೆಚ್‌ಓ ಡಾ. ನಟರಾಜ್ ಕೆ ಎಸ್ ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ, 2030 ಕ್ಕೆ ಹೆಚ್.ಐ.ವಿ ಮುಕ್ತ ಭಾರತವನ್ನು ನಿರ್ಮಿಸಲು ಕಾರ್ಯ ಚಟುವಟಕೆಗಳನ್ನು ಕೈಗೊಳ್ಳಲಾಗುತ್ತಿದೆ. ಹೊಸದಾಗಿ ಹೆಚ್‌ಐವಿ ಸೋಂಕಿಗೆ ತುತ್ತಾಗುವುದನ್ನು ಸೊನ್ನೆಗೆ ತರುವುದು, ಹೆಚ್.ಐ.ವಿ ಯಿಂದ ಆಗುವ ಮರಣಗಳನ್ನು ಸೊನ್ನೆಗೆ ತರುವುದು ಹಾಗೂ ಹೆಚ್.ಐ.ವಿ ಯಿಂದಾಗುವ ತಾರತಮ್ಯ, ಕಳಂಕವನ್ನು ಸೊನ್ನೆಗೆ ತರುವ ನಿಟ್ಟಿನಲ್ಲಿ 95-95-95 ರ ಗುರಿಯನ್ನು ಹೊಂದಿದ್ದು ಪ್ರತಿಯೊಬ್ಬರು ತಮ್ಮ ಹೆಚ್. ಐ. ವಿ ಸ್ಥಿತಿಯನ್ನು ತಿಳಿದಿರಬೇಕು ಹಾಗೂ…
ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು. ಅವರು ಇಂದು ಮೈಸೂರು ಏರ್ ಪೋರ್ಟ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ತಮಿಳುನಾಡಿನಲ್ಲಿ ಆರ್.ಎಸ್.ಎಸ್. ನಿಷೇಧದ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಲಾಗಿದೆ. ತಮಿಳುನಾಡಿನಲ್ಲಿ ಯಾವ ರೀತಿ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಅದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ ಅವರು ಪ್ರಿಯಾಂಕ ಖರ್ಗೆಯವರಿಗೆ ರಕ್ಷಣೆ ಒದಗಿಸಲಾಗುವುದು ಎಂದರು. ಬೆದರಿಕೆಗೆ ಹೆದರುವುದಿಲ್ಲ ದುಷ್ಟ ಶಕ್ತಿಗಳು ಯಾವಾಗಲೂ ಇಂಥದ್ದೇ ಕೆಲಸ ಮಾಡುವುದು. ಬೆದರಿಕೆಗಳಿಗೆ ಪ್ರಿಯಾಂಕ ಅವರು…
ಕೊಚ್ಚಿ: ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಬುಧವಾರ ಬೆಳಿಗ್ಗೆ ಕೇರಳದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು ಮತ್ತು ಕೇರಳದ ಕೂತಟ್ಟುಕುಲಂನಲ್ಲಿರುವ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯ ಮೂಲಗಳ ಪ್ರಕಾರ, ಬುಧವಾರ ಬೆಳಗಿನ ನಡಿಗೆಯ ಸಮಯದಲ್ಲಿ ಒಡಿಂಗಾ ಕುಸಿದು ಬಿದ್ದರು. “ಅವರು ಬೆಳಗಿನ ನಡಿಗೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ದೇವ ಮಾತಾ ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ಬೆಳಿಗ್ಗೆ 9:52 ಕ್ಕೆ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು” ಎಂದು ಅವರು ಚಿಕಿತ್ಸೆ ಪಡೆಯುತ್ತಿದ್ದ ಶ್ರೀಧರೀಯಂ ಆಯುರ್ವೇದ ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರ ಮಗಳು, ಸಹೋದರಿ ಮತ್ತು ವೈಯಕ್ತಿಕ ವೈದ್ಯರೊಂದಿಗೆ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಸುಮಾರು ಒಂದು ವಾರದ ಹಿಂದೆ ಆಸ್ಪತ್ರೆಗೆ ಆಗಮಿಸಿದ್ದರು. “ಅವರು ಬಹು ಕಾಯಿಲೆಗಳಿಂದ ಬಳಲುತ್ತಿದ್ದರು ಮತ್ತು ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ನಂತರ ಅವರು ಚಿಕಿತ್ಸೆ ಪಡೆಯಲು ಇಲ್ಲಿಗೆ ಬಂದರು. ಮೃತದೇಹವನ್ನು ದೇವ ಮಾತಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ನಾವು ವಿದೇಶಾಂಗ ಸಚಿವಾಲಯ ಮತ್ತು ಕೀನ್ಯಾ…
ಮೈಸೂರು: ರಾಜ್ಯದ ಸರ್ಕಾರಿ ಜಾಗದಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘಟನೆಯ ಚಟುವಟಿಕೆ ನಿಷೇಧ ಬಹುತೇಕ ಖಚಿತವಾಗಿದೆ. ಈ ಸುಳಿವನ್ನು ಸ್ವತಹ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದುಷ್ಟ ಶಕ್ತಿಗಳು ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕುತ್ತಿವೆ. ಆ ಬೆದರಿಕೆಗೆ ಪ್ರಿಯಾಂಕ್ ಖರ್ಗೆ ಜಗ್ಗಲ್ಲ, ನಾವು ಸಹ ಜಗ್ಗಲ್ಲ. ಪ್ರಿಯಾಂಕ್ ಖರ್ಗೆ ಬರೆದಿರುವಂತ ಪತ್ರದಲ್ಲಿ ತಪ್ಪೇನಿದೆ ಹೇಳಿ ಎಂದು ಪ್ರಶ್ನಿಸಿದರು. ತಮಿಳುನಾಡಿನಲ್ಲಿ ಸರ್ಕಾರಿ ಜಾಗದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿಷೇಧಿಸಲಾಗಿದೆ. ತಮಿಳುನಾಡಿದಂತೆ ಕರ್ನಾಟಕದಲ್ಲಿ ಜಾರಿ ಮಾಡಿ ಎಂದು ಹೇಳಿದ್ದಾರೆ. ನಾವು ಪ್ರಿಯಾಂಕ್ ಖರ್ಗೆ ಪತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ. ತಮಿಳುನಾಡಿನಿಂದ ಆ ಆದೇಶದ ವರದಿಯನ್ನು ತರಿಸಿಕೊಳ್ಳುತ್ತಿದ್ದೇವೆ. ಈ ಬಗ್ಗೆ ಗಮನಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೇಳಿದ್ದೇನೆ. ಸಿಎಸ್ ಪರಿಶೀಲಿಸಿದ ಬಳಿಕ ಕ್ರಮ ತೆಗೆದುಕೊಳ್ಳುತ್ತೇವೆ ಎಂಬುದಾಗಿ ತಿಳಿಸಿದರು. ಬಿಜೆಪಿಯವರು ಯಾವಾಗಲೂ ಧಮ್ ಇದ್ರೆ ಬ್ಯಾನ್ ಮಾಡಿ ಎಂದು ಹೇಳುತ್ತಾರೆ. ಕಳೆದ ಚುನಾವಣೆ ಆ ರೀತಿ ಹೇಳಿದ್ದರು. ನಂತ್ರ ಏನಾಯ್ತು…














