Author: kannadanewsnow09

ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಖಾಸಗಿ ಬಡಾವಣೆಗಳ ನಕ್ಷೆ ಅನುಮೋದನೆಗೆ ಸರ್ಕಾರದ ಸಹಮತಿ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಎಲ್ಲ ನಗರಾಭಿವೃದ್ಧಿ ಪ್ರಾಧಿಕಾರಗಳ ಮತ್ತು ನಗರ ಯೋಜನಾ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಬರುವ ಖಾಸಗಿ ಬಡಾವಣೆಗಳ ನಕ್ಷೆ ಅನುಮೋದನೆಗೆ ಇನ್ಮುಂದೆ ಸರ್ಕಾರದ ಸಹಮತಿ ಕಡ್ಡಾಯ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1896889394457637113 https://kannadanewsnow.com/kannada/even-the-blind-deserve-to-be-judges-supreme-court/ https://kannadanewsnow.com/kannada/good-news-for-women-grihalakshmi-money-will-be-deposited-in-the-accounts-of-those-who-applied-in-october-november/

Read More

ನವದೆಹಲಿ: ಅಂಧರು ಕೂಡ ಜಿಲ್ಲಾ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರಾಗಲು ಅರ್ಹತೆ ಹೊಂದಿದ್ದಾರೆ. ಅಂಗವೈಕಲ್ಯದ ಕಾರಣ ನೀಡಿ ಅವರಿಗೆ ಹುದ್ದೆ ನಿರಾಕರಿಸುವಂತಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಸಂಬಂಧ ದೃಷ್ಟಿ ಮಾಂದ್ಯ ಮಗನ ನೇಮಕಾತಿಗೆ ಅಡ್ಡಿಯಾದ ಮಧ್ಯಪ್ರದೇಶದ ನಿಬಂಧನೆಯೊಂದನ್ನು ಪ್ರಶ್ನಿಸಿ ತಾಯಿಯೊಬ್ಬಳು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದರು. ಈ ಪತ್ರದ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ದ್ವಿಸದಸ್ಯ ನ್ಯಾಯಪೀಠವು, ಅಂಗವಿಕಲರು ನ್ಯಾಯಾಂಗ ಸೇವೆಯ ನೇಮಕಾತಿ ವೇಳೆ ಯಾವುದೇ ತಾರತಮ್ಯ ಎದುರಿಸಬಾರದು. ಅಂಥವರನ್ನು ಒಳಗೊಂಡ ಚೌಕಟ್ಟನ್ನು ಒದಗಿಸಲು ರಾಜ್ಯಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿತು. ಅಲ್ಲದೇ ಮಧ್ಯಪ್ರದೇಶದಲ್ಲಿರುವ ನಿಯಮವನ್ನು ರದ್ದುಗೊಳಿಸುವಂತೆ ಆದೇಶಿಸಿತು. https://kannadanewsnow.com/kannada/tremors-felt-in-several-parts-of-dakshina-kannada-district/ https://kannadanewsnow.com/kannada/big-shock-for-ola-employees-1000-employees-to-be-sacked/

Read More

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದೆ. ಹೀಗಾಗಿ ಜನರು ಮನೆಯಿಂದ ಹೊರ ಓಡಿ ಬಂದು ಕೆಲ ಕಾಲ ಬೀದಿಯಲ್ಲೇ ಆತಂಕದಲ್ಲಿ ಕಳೆಯುವಂತೆ ಆಯ್ತು ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುಮಾರು ಐದು ಗ್ರಾಮಗಳಲ್ಲಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದೆ. ಕೆಲ ಕಾಲ ಭೂಮಿ ಕಂಪಿಸಿದ್ದರಿಂದಾಗಿ ಜನರು ಭಯ ಭೀತರಾದರು ಎಂಬುದಾಗಿ ಹೇಳಲಾಗುತ್ತಿದೆ. ಆದರೇ ಪುತ್ತೂರು ವ್ಯಾಪ್ತಿಯ ಕಲ್ಲು ಕ್ವಾರಿಯಲ್ಲಿ ಸಂಗ್ರಹಿಸಿಟ್ಟಿದ್ದಂತ ಜಿಲೆಟಿನ್ ಕಡ್ಡಿಗಳು ಸ್ಪೋಟಗೊಂಡ ಪರಿಣಾಮ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/under-this-scheme-of-post-office-you-will-get-an-insurance-cover-of-rs-10-lakh-if-you-pay-a-premium-of-just-rs-500/ https://kannadanewsnow.com/kannada/big-shock-for-ola-employees-1000-employees-to-be-sacked/

Read More

ಮುಂಬೈ: ವೆಚ್ಚವನ್ನು ಪರಿಶೀಲಿಸಲು ಮತ್ತು ನಷ್ಟವನ್ನು ತಡೆಯಲು ಸ್ಟಾರ್ಟ್ ಅಪ್ ಪ್ರಯತ್ನಿಸುತ್ತಿರುವುದರಿಂದ ಓಲಾ ಎಲೆಕ್ಟ್ರಿಕ್ ಹಲವಾರು ಉದ್ಯೋಗಗಳನ್ನು ಕಡಿತಗೊಳಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ಕ್ರಮದಿಂದ ಪೂರೈಕೆ, ವಿತರಣೆ ಮತ್ತು ಗ್ರಾಹಕ ಸಂಬಂಧಗಳು ಸೇರಿದಂತೆ ವಿವಿಧ ಇಲಾಖೆಗಳ 1,000 ಕ್ಕೂ ಹೆಚ್ಚು ಉದ್ಯೋಗಿಗಳು ಮತ್ತು ಗುತ್ತಿಗೆ ಕಾರ್ಮಿಕರ ಮೇಲೆ ಪರಿಣಾಮ ಬೀರಿದೆ. ಬಾಧಿತ ಉದ್ಯೋಗಗಳ ಸಂಖ್ಯೆಯ ಬಗ್ಗೆ ಕಂಪನಿಯು ಪ್ರತಿಕ್ರಿಯಿಸಲಿಲ್ಲ. ಆದರೆ ಅದು ಪುನರ್ರಚನೆ ಕಾರ್ಯವನ್ನು ಕೈಗೊಂಡಿದೆ ಮತ್ತು ಕೆಲವು ಪ್ರಕ್ರಿಯೆಗಳನ್ನು ಸ್ವಯಂಚಾಲಿತಗೊಳಿಸಿದೆ, ಇದರ ಪರಿಣಾಮವಾಗಿ ಪುನರುಕ್ತಿಗಳು ಉಂಟಾಗುತ್ತವೆ ಎಂದು ಹೇಳಿದರು. ಇದೇ ರೀತಿಯ ಪುನರ್ರಚನೆ ಚಾಲನೆಯಲ್ಲಿ ಸಂಸ್ಥೆಯು 500 ಉದ್ಯೋಗಿಗಳನ್ನು ಕೈಬಿಟ್ಟ ನಾಲ್ಕು ತಿಂಗಳ ನಂತರ ಹೊಸ ವಜಾಗೊಳಿಸಲಾಗಿದೆ. ಕಳೆದ ವರ್ಷ ಷೇರು ಮಾರುಕಟ್ಟೆಯಲ್ಲಿ ಪಟ್ಟಿ ಮಾಡಲಾದ ಓಲಾ ಎಲೆಕ್ಟ್ರಿಕ್, ಡಿಸೆಂಬರ್ ತ್ರೈಮಾಸಿಕದಲ್ಲಿ ಅದರ ಏಕೀಕೃತ ನಷ್ಟವು ಹಿಂದಿನ ವರ್ಷದ 376 ಕೋಟಿ ರೂ.ಗಳಿಂದ 564 ಕೋಟಿ ರೂ.ಗೆ ವಿಸ್ತರಿಸಿದೆ. “ಉತ್ತಮ ಉತ್ಪಾದಕತೆಗಾಗಿ ಅನಗತ್ಯ ಪಾತ್ರಗಳನ್ನು ತೆಗೆದುಹಾಕುವಾಗ ಸುಧಾರಿತ ಮಾರ್ಜಿನ್ಗಳು,…

Read More

ಬೆಂಗಳೂರು: ಸೇವೆಯಿದಂದ ವಜಾಗೊಂಡ ಉದ್ಯೋಗಿ ಕೂಡ ವಿಶೇಷ ರಜೆಗಳ ನಗದೀಕರಣಕ್ಕೆ ಅರ್ಹರಾಗಿರುತ್ತಾರೆ ಎಂಬುದಾಗಿ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ. ಈ ಸಂಬಂಧ ವಿಶೇಷ ರಜೆ ನಗದೀಕರಣ ನಿರಾಕರಿಸಿದ್ದ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕು ಕಂಪ್ಲಿಯ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಕ್ರಮವನ್ನು ಪ್ರಶ್ನಿಸಿ ಬ್ಯಾಂಕಿನ ಮಾಜಿ ಸಹಾಯಕ ವ್ಯವಸ್ಥಾಪಕ ಜಿ.ಲಿಂಗನಗೌಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಲಿಂಗನಗೌಡ ಅವರ ಅರ್ಜಿಯನ್ನು ಪುರಸ್ಕರಿಸಿದ್ದಂತ ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ನ್ಯಾಯಪೀಠವು, ಸೇವೆಯಿಂದ ವಜಾಗೊಂಡ ಉದ್ಯೋಗಿ ಕೂಡ ವಿಶೇಷ ರಜೆಗಳ ನಗದೀಕರಣಕ್ಕೆ ಅರ್ಹರಾಗಿರುತ್ತಾರೆ ಎಂಬುದಾಗಿ ತೀರ್ಪು ನೀಡಿದ್ದಾರೆ. ಇನ್ನೂ ಅರ್ಜಿದಾರರು ತಮ್ಮ ಸೇವಾವಧಿಯಲ್ಲಿ ಸಂಗ್ರಹಿಸಿರುವ 220 ದಿನಗಳ ವಿಶೇಷ ರಜೆಗೆ ಅರ್ಹರು ಎಂಬುದಾಗಿಯೂ ನ್ಯಾಯಪೀಠ ತಿಳಿಸಿದೆ. ಅಲ್ಲದೇ ರಜೆಯ ನಗದೀಕರಣ ಕಾನೂನಿನಡಿ ಮಾತ್ರವಲ್ಲದೇ ಸಂವಿಧಾನದ ಅಡಿಯಲ್ಲಿಯೂ ಉದ್ಯೋಗಿಯೊಬ್ಬನ ಹಕ್ಕು ಎಂಬುದಾಗಿ ಅಭಿಪ್ರಾಯ ಪಟ್ಟಿದೆ. https://kannadanewsnow.com/kannada/those-who-are-protesting-in-the-name-of-new-university-should-get-money-from-centre-dk-shivakumar/ https://kannadanewsnow.com/kannada/under-this-scheme-of-post-office-you-will-get-an-insurance-cover-of-rs-10-lakh-if-you-pay-a-premium-of-just-rs-500/

Read More

ನವದೆಹಲಿ: ಭವಿಷ್ಯಕ್ಕಾಗಿ ಉಳಿತಾಯ ಮಾಡುವುದು ಎಷ್ಟು ಅಗತ್ಯವೋ, ಅನಿರೀಕ್ಷಿತ ಘಟನೆಯ ಸಂದರ್ಭದಲ್ಲಿ ಕುಟುಂಬಕ್ಕೆ ಆರ್ಥಿಕ ಭದ್ರತೆಯನ್ನ ಒದಗಿಸುವ ಆರೋಗ್ಯ ಮತ್ತು ಅಪಘಾತ ವಿಮೆಯೂ ಅಗತ್ಯವಾಗಿದೆ. ಅನಿರೀಕ್ಷಿತವಾಗಿ ಏನಾದರೂ ಸಂಭವಿಸಿದರೆ ಮತ್ತು ಮನೆಯ ಮುಖ್ಯಸ್ಥರು ಮೃತಪಟ್ಟರೆ, ಕುಟುಂಬವು ರಸ್ತೆಗೆ ಬೀಳಬೇಕಾಗುತ್ತದೆ. ಅಂತಹ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಅಪಘಾತ ವಿಮೆ ನಿಮಗೆ ಸಹಾಯ ಮಾಡುತ್ತದೆ. ಆದಾಗ್ಯೂ, ಹೆಚ್ಚಿನ ಜನರು ಈ ವಿಮೆಯನ್ನ ತೆಗೆದುಕೊಳ್ಳಲು ಸಿದ್ಧರಿಲ್ಲ. ಪ್ರೀಮಿಯಂ ಹೆಚ್ಚಿರುವ ಕಾರಣದಿಂದ ಹಿಂದೆ ಸರೆಯುತ್ತಾರೆ. ಅಂತಹ ಜನರಿಗಾಗಿ ಅಂಚೆ ಇಲಾಖೆ ಆಫರ್ ನೀಡುತ್ತಿದೆ. ಅತ್ಯಂತ ಕಡಿಮೆ ಪ್ರೀಮಿಯಂನಲ್ಲಿ ವಿಮಾ ಸೌಲಭ್ಯವನ್ನ ನೀಡಲಾಗುತ್ತದೆ. ಅದ್ರಂತೆ, ಖಾಸಗಿ ವಿಮಾ ಕಂಪನಿಗಳ ಸಹಭಾಗಿತ್ವದಲ್ಲಿ ವಿಮಾ ಸೌಲಭ್ಯವನ್ನ ನೀಡಲಾಗುತ್ತದೆ. ವಾರ್ಷಿಕ 520 ರೂ.ಗಳೊಂದಿಗೆ 10 ಲಕ್ಷ ರೂ.ಗಳ ವಿಮಾ ರಕ್ಷಣೆ.! ಅಂಚೆ ಕಚೇರಿ ನೀಡುವ ಅಪಘಾತ ವಿಮೆಯಲ್ಲಿ ಇದು ಅತ್ಯುತ್ತಮ ಯೋಜನೆಯಾಗಿದೆ. ದಿನಕ್ಕೆ ಕೇವಲ 1.5 ರೂ.ಗಳನ್ನ ಪಾವತಿಸುವ ಮೂಲಕ ನೀವು 10 ಲಕ್ಷ ರೂ.ಗಳ ವ್ಯಾಪ್ತಿಯನ್ನು ಪಡೆಯಬಹುದು. ಟಾಟಾ ಎಐಜಿ ಸಹಯೋಗದೊಂದಿಗೆ ಅಂಚೆ…

Read More

ಬೆಂಗಳೂರು: “ನೂತನ ವಿಶ್ವವಿದ್ಯಾಲಯಕ್ಕಾಗಿ ಹೋರಾಟ ಮಾಡುತ್ತಿರುವವರು, ಆ ವಿವಿಗಾಗಿ ಎಷ್ಟು ಹಣ ಕೊಟ್ಟಿದ್ದಾರೆ ಎಂದು ಹೇಳಬೇಕು. ಈ ವಿವಿಗೆ ಕೇಂದ್ರ ಸರ್ಕಾರದಿಂದ ನೂರಾರು ಕೋಟಿ ಅನುದಾನ ಕೊಡಿಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಬೆಂಗಳೂರು ವಿವಿ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ನೂತನ 9 ವಿವಿಗಳ ಮುಚ್ಚುವ ಬಗ್ಗೆ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ ಎಂದು ಕೇಳಿದಾಗ, “ಯಾವುದೇ ವಿವಿ ಮುಚ್ಚುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಈ ವಿವಿಗಳಿಗಾಗಿ ಬಿಜೆಪಿ ಸರ್ಕಾರ ಕೇವಲ 2 ಕೋಟಿ ಹಣವಿಟ್ಟಿತ್ತು. 2 ಕೋಟಿ ಹಣದಲ್ಲಿ ವಿವಿ ಸ್ಥಾಪನೆ ಮಾಡಲು ಆಗುವುದಿಲ್ಲ. ಇದಕ್ಕೆ ನೂರಾರು ಎಕರೆ ಜಾಗ ಬೇಕು. ಬೆಂಗಳೂರು ವಿವಿ ಮಾಡುವಾಗ ಹೇಗೆ 1,200 ಎಕರೆ ಜಮೀನು ಇಟ್ಟು ಸ್ಥಾಪಿಸಿದ್ದರೋ, ಅದೇ ರೀತಿ ಇದರಲ್ಲಿ ಅರ್ಧದಷ್ಟು ಜಾಗವನ್ನಾದರೂ ಮೀಸಲಿಡಬೇಕು” ಎಂದು ತಿಳಿಸಿದರು. “ಕೇವಲ ಹೆಸರಿಗಾಗಿ ವಿವಿ ಮಾಡಲು ಆಗುವುದಿಲ್ಲ. 20-30 ಕಾಲೇಜುಗಳಿಗೆ ಒಂದು ವಿವಿ ಮಾಡಲು ಸಾಧ್ಯವಿಲ್ಲ.…

Read More

ಬೆಂಗಳೂರು: ನಮ್ಮ ತಲೆಯ ಮೇಲೆ ಹಿಂದಿನ ಬಿಜೆಪಿ ಸರ್ಕಾರವು ಗುತ್ತಿಗೆದಾರರ 30,000 ಕೋಟಿ ಬಾಕಿ ಬಿಲ್ ಹೊರೆಯನ್ನು ಹೊರಿಸಿ ಹೋಗಿದೆ. ಇದಕ್ಕೆ ಹೊಣೆ ಯಾರು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದವರು ಬಜೆಟ್‌ ನಲ್ಲಿ ಅನುದಾದ ಇಡದೆ ಬೇಕಾಬಿಟ್ಟಿ ಟೆಂಡರ್‌ ಕರೆದು, ಕೆಲಸ ಆರಂಭಿಸಿ, ಗುತ್ತಿಗೆದಾರರಿಗೆ ಬಿಲ್‌ ಹಣ ನೀಡದೆ ಸುಮಾರು ರೂ.30,000 ಕೋಟಿ ಬಾಕಿ ಮೊತ್ತವನ್ನು ನಮ್ಮ ಸರ್ಕಾರದ ತಲೆಯ ಮೇಲೆ ಹೊರಿಸಿ ಹೋಗಿದ್ದಾರೆ. ಇದಕ್ಕೆ ಯಾರು ಹೊಣೆ? ಎಂದು ಕೇಳಿದ್ದಾರೆ. https://twitter.com/CMofKarnataka/status/1896538610884923590 https://kannadanewsnow.com/kannada/i-cant-speak-with-colour-i-have-spoken-the-word-rudely-in-the-village-language-dk-shivakumar/ https://kannadanewsnow.com/kannada/for-students-belonging-to-backward-classes-the-deadline-for-applying-for-fee-waiver-facility-has-been-extended/

Read More

ಮಡಿಕೇರಿ : 2023-24 ನೇ ಸಾಲಿನಲ್ಲಿ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಮತ್ತು ಪ್ರವರ್ಗ-1 ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ತಡವಾಗಿ ಪ್ರಾರಂಭವಾದ ಕೋರ್ಸುಗಳು ಮತ್ತು ಹಿಂದಿನ ಶೈಕ್ಷಣಿಕ ವರ್ಷದ ಫಲಿತಾಂಶ ನೀಡದ ಕೋರ್ಸುಗಳ ಅರ್ಜಿ ಸಲ್ಲಿಸದಿರುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ ಶುಲ್ಕವಿನಾಯ್ತಿ ಸೌಲಭ್ಯಕ್ಕಾಗಿ” ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 15 ರವರೆಗೆ ವಿಸ್ತರಿಸಲಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ https://bcwd.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಗಾಗಿ ಇಲಾಖೆಯ ವೆಬ್‍ಸೈಟ್ postmatrichelp@karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ 8050770005 ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ: 08272-295628 ಸಂಪರ್ಕಿಸಬಹುದು. ಎಂದು ಹಿಂದುಳಿದ…

Read More

ಬೆಂಗಳೂರು : “ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ. ನನಗೂ ಚಿತ್ರರಂಗ ಉಳಿಯಬೇಕು ಎನ್ನುವ ಆಸೆಯಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. “ಚಿತ್ರರಂಗದ ಬಗ್ಗೆ ನಿಮ್ಮ ಮಾತುಗಳು ಒರಟಾಗಿವೆ ಎನ್ನುವ ಬಿಜೆಪಿ, ಚಿತ್ರರಂಗದವರ ಟೀಕೆಯ ಬಗ್ಗೆ ಕೇಳಿದಾಗ, “ನನಗೆ ಬಣ್ಣ ಕಟ್ಟಿ ಮಾತನಾಡಲು ಬರುವುದಿಲ್ಲ. ನಾನು ನೇರವಾಗಿ ಹೇಳುತ್ತೇನೆ. ನೀವು (ಮಾಧ್ಯಮದವರು), ಅವರು ಬಂಡೆ ಎಂದು ಕರೆಯುತ್ತಾರೆ. ಹಾಗಾದರೆ ನಾನು ಬಂಡೆಯೇ? ನಾನು ಬಂಡೆಯಂತೇ ಕಾಣುತ್ತೇನೆಯೇ? ಕಲ್ಲು ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಇದು ನನ್ನ ಮಾತಿನ ಶೈಲಿ. ಶೈಲಿ ಸರಿ ಇಲ್ಲದಿದ್ದರೆ ಸರಿಪಡಿಸಿಕೊಳ್ಳುತ್ತೇನೆ, ಆದರೆ ಸತ್ಯ ಹೇಳಿದ್ದೇನೆ” ಎಂದರು. ಹುಬ್ಬಳ್ಳಿಗೆ ಏಕೆ ಹೋದರು; ಬೆಂಗಳೂರಿಗೆ ನೀರು ತರುವ ಹೋರಾಟವಿದು…

Read More