Author: kannadanewsnow09

ಬೆಂಗಳೂರು : “ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಗಳನ್ನು ಪಾವತಿ ಮಾಡಲಾಗುವುದು. ಸಣ್ಣ, ಸಣ್ಣ ಬಿಲ್ ಗಳನ್ನು ಪಾವತಿ ಮಾಡುವುದಾಗಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ ಆಶ್ವಾಸನೆ ನೀಡಿದ್ದು, ಹಣ ಬಂದ ತಕ್ಷಣ ಪಾವತಿ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಗುತ್ತಿಗೆದಾರರ ಬಿಲ್ ಬಾಕಿ ವಿಚಾರ ಹಾಗೂ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಭೇಟಿ ಬಗ್ಗೆ ಕೇಳಿದಾಗ, “ಬಿಜೆಪಿ ಕಾಲದಲ್ಲಿ ಅವರು ನನ್ನ ಇಲಾಖೆಯೊಂದರಲ್ಲಿಯೇ ರೂ.1.20 ಲಕ್ಷ ಕೋಟಿ ಮೊತ್ತದ ಕಾಮಗಾರಿಗಳಿಗೆ ಆದೇಶ ನೀಡಿ ಹೋಗಿದ್ದು ಕೆಲಸ ನಡೆಯುತ್ತಿದೆ. ಪ್ರಸ್ತುತ ರೂ.6 ಸಾವಿರ ಕೋಟಿಯಷ್ಟು ಮಾತ್ರ ಬಿಲ್ ನೀಡಲು ಅವಕಾಶವಿದೆ. ಕೇಂದ್ರದಿಂದ 5,300 ಕೋಟಿ ಕೊಡುತ್ತೇವೆ ಎಂದು ಹೇಳಿ ಕೊಟ್ಟಿಲ್ಲ. ಗುತ್ತಿಗೆದಾರರು ಅವರ ನೋವನ್ನು ಹೇಳಿಕೊಂಡಿದ್ದಾರೆ” ಎಂದರು. ಖರ್ಗೆ ಅವರನ್ನು ಭೇಟಿ ಮಾಡದೆ ಬಿಜೆಪಿ ಕಚೇರಿಗೆ ಹೋಗಲೇ? ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ವಿಚಾರ ಕೇಳಿದಾಗ, “ನಾನು…

Read More

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.06 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಗಜಾನನ ಗ್ಯಾರೇಜ್, ಪೀಲೆ ಫ್ಯಾಕ್ಟರಿ, ಸವಾಯಿಪಾಳ್ಯ, ಕುರುಬರ ಪಾಳ್ಯ, ಇಲಿಯಾಜ್‌ನಗರ 1 ರಿಂದ 4ನೇ ಅಡ್ಡರಸ್ತೆ, 100 ಅಡಿರಸ್ತೆ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. https://kannadanewsnow.com/kannada/chandragutti-sri-renukamba-devi-fair-from-march-5-to-10-ban-on-naked-service/ https://kannadanewsnow.com/kannada/good-news-for-women-grihalakshmi-money-will-be-deposited-in-the-accounts-of-those-who-applied-in-october-november/

Read More

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಮ್ಮ ದೇವೆ ಜಾತ್ರೆಯು ಮಾರ್ಚ್ 05 ರಿಂದ 10 ರವರೆಗೆ ನಡೆಯಲಿದ್ದು, ವರದಾ ನದಿಯಲ್ಲಿ ಧಾರ್ಮಿಕ ಸ್ನಾನ ಮಾಡುವುದು, ದೇವರಿಗೆ ಮುಡಿಕೊಡುವುದು, ಪಡ್ಲಿಗಿ ತುಂಬಿಸುವುದು ಮತ್ತು “ಬೆತ್ತಲೆ ಸೇವೆ” ಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆರವರು ಆದೇಶ ಹೊರಡಿಸಿದ್ದಾರೆ. ಈ ನಿಷೇಧಾಜ್ಞೆಯು ಶ್ರೀರೇಣುಕಮ್ಮ ದೇವಿಯ ರಥೋತ್ಸವ ಹಾಗೂ ಇತರೆ ಪೂಜಾ ಕಾರ್ಯಗಳು ಮತ್ತು ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. https://kannadanewsnow.com/kannada/state-cabinet-meeting-scheduled-for-march-5/ https://kannadanewsnow.com/kannada/good-news-for-women-grihalakshmi-money-will-be-deposited-in-the-accounts-of-those-who-applied-in-october-november/

Read More

ಬೆಂಗಳೂರು: ಮಾರ್ಚ್.5ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿಪಡಿಸಲಾಗಿದೆ. ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಮಾರ್ಚ್.5ರಂದು ನಡೆಯಲಿದೆ. ಈ ಬಗ್ಗೆ ಸರ್ಕಾರದ ಅಪರ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 05-03-2025ರಂದು ಸಂಜೆ 7 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ ಎಂದಿದ್ದಾರೆ. ಮಾ.5ರಂದು ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೆಲ ಮಸೂದೆಗಳಿಗೆ ಒಪ್ಪಿಗೆ ಕೂಡ ಸೂಚಿಸಲಾಗುತ್ತಿದೆ ಎನ್ನಲಾಗುತ್ತಿದೆ. ಅಲ್ಲದೇ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಅನುದಾನ ಒದಗಿಸೋದಕ್ಕೆ ಒಪ್ಪಿಗೆ ನೀಡಲಿದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/shocking-female-staff-members-beat-officer-by-collar-for-sending-obscene-message-video-goes-viral-watch-video/ https://kannadanewsnow.com/kannada/good-news-for-women-grihalakshmi-money-will-be-deposited-in-the-accounts-of-those-who-applied-in-october-november/

Read More

ಬಳ್ಳಾರಿ : ಲಿಡ್‌ಕರ್ ವತಿಯಿಂದ ನಗರದ ಬುಡಾ ಕಾಂಪ್ಲೆಕ್ಸ್ ನ ಶಾಪ್ ನಂ.24 ರ ಲಿಡ್‌ಕರ್ ಲೆದರ್ ಎಂಪೋರಿಯಮ್ ಮಳಿಗೆಯಲ್ಲಿ ಲಿಡ್‌ಕರ್ ನ ಎಲ್ಲಾ ಚರ್ಮವಸ್ತುಗಳನ್ನು ಶೇ.20 ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಲಿಡ್‌ಕರ್ ನ ಜಿಲ್ಲಾ ವ್ಯವಸ್ಥಾಪಕ ಟಿ.ಸಂಜೀವಪ್ಪ ಅವರು ತಿಳಿಸಿದ್ದಾರೆ. ಮಾ.03 ರಿಂದ 23 ರವರೆಗೆ (21 ದಿನ) ಎಲ್ಲಾ ಚರ್ಮವಸ್ತುಗಳಿಗೂ ಶೇ.20 ರಷ್ಟು ರಿಯಾಯಿತಿ ನೀಡಲಾಗುವುದು. ಸಾರ್ವಜನಿಕರು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರ ವರೆಗೆ ಮತ್ತು ಸಂಜೆ 4 ರಿಂದ 8 ಗಂಟೆಯವರೆಗೆ ಭೇಟಿ ನೀಡಬಹುದು. ಮಾಹಿತಿಗಾಗಿ ದೂ.08392271741, ಮೊ.7676591259 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/no-case-of-chicken-flu-reported-in-dharwad-district-dr-ravi-saligowda/ https://kannadanewsnow.com/kannada/good-news-for-cancer-patients-vaccine-research-to-cure-the-disease/

Read More

ಹಾಂಗ್ ಕಾಂಗ್ ವಿಜ್ಞಾನಿಗಳು ಕ್ಯಾನ್ಸರ್ ಗುಣಪಡಿಸುವ ಕಾರ್-ಟಿ ಚುಚ್ಚುಮದ್ದಿನ ಬಗ್ಗೆ ಬಹಿರಂಗಪಡಿಸಿದ್ದಾರೆ. ನವೆಂಬರ್ 2024 ರಲ್ಲಿ, ಐದು ಕ್ಯಾನ್ಸರ್ ರೋಗಿಗಳಿಗೆ ಸಿಎಆರ್-ಟಿ ಚುಚ್ಚುಮದ್ದನ್ನು ನೀಡಲಾಯಿತು. ಈ ಚಿಕಿತ್ಸೆಯನ್ನು ಪಡೆದ ಈ ಎಲ್ಲಾ ರೋಗಿಗಳು ಕ್ರಮೇಣ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹಾಂಗ್ ಕಾಂಗ್ ವಿಜ್ಞಾನಿಗಳು ಹೇಳುತ್ತಾರೆ. ಈ ಚುಚ್ಚುಮದ್ದನ್ನು ತೆಗೆದುಕೊಂಡ ಬಲಿಪಶುಗಳ ಪ್ರತಿಕ್ರಿಯೆಗಳು ಬಹಿರಂಗಗೊಂಡವು. ಇದಲ್ಲದೆ, ಈ ರೋಗಿಗಳು ಚೇತರಿಸಿಕೊಂಡ ರೀತಿಯನ್ನು ನೋಡಿದ ನಂತರ, ಈ ಸಿಎಆರ್-ಟಿ ಚುಚ್ಚುಮದ್ದಿನ ಬೇಡಿಕೆ ಜಾಗತಿಕವಾಗಿ ಹೆಚ್ಚಾಗುವ ಸಾಧ್ಯತೆಯಿದೆ. ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಪ್ರಕಾರ, ಅಕ್ಟೋಬರ್ 2024 ರಲ್ಲಿ ಹಾಂಗ್ ಕಾಂಗ್ನ ಚೀನೀ ವಿಶ್ವವಿದ್ಯಾಲಯದಲ್ಲಿ ಐದು ಕ್ಯಾನ್ಸರ್ ರೋಗಿಗಳಿಗೆ ಚುಚ್ಚುಮದ್ದನ್ನು ನೀಡಲಾಯಿತು. ಈ ಚುಚ್ಚುಮದ್ದನ್ನು ಪಡೆದ ರೋಗಿಗಳಲ್ಲಿ ಒಬ್ಬರಿಗೆ 73 ವರ್ಷ, ಇನ್ನೊಬ್ಬರಿಗೆ 71 ವರ್ಷ, ಮೂರನೆಯವರಿಗೆ 67 ವರ್ಷ ಮತ್ತು ನಾಲ್ಕನೆಯವರಿಗೆ 15 ವರ್ಷ ವಯಸ್ಸಾಗಿತ್ತು. ಐದನೇ ವ್ಯಕ್ತಿಗೆ 5 ವರ್ಷ. ಫೆಬ್ರವರಿ ವೇಳೆಗೆ ಈ ರೋಗಿಗಳು ಕ್ಯಾನ್ಸರ್ ನಿಂದ ಸಾಕಷ್ಟು ಪರಿಹಾರವನ್ನು ಪಡೆದಿದ್ದಾರೆ ಎಂದು…

Read More

ಧಾರವಾಡ : ಜಿಲ್ಲೆಯಲ್ಲಿ ಕೋಳಿ ಶೀತ ಜ್ವರದ ಬಗ್ಗೆ ಯಾವುದೇ ಪ್ರಕರಣಗಳು ವರದಿ ಆಗಿರುವದಿಲ್ಲ. ಕೋಳಿಗಳಲ್ಲಿ ಮತ್ತು ಇತರೆ ಪಕ್ಷಿಗಳಲ್ಲಿ ಅಸಹಜ ಸಾವು ಕಂಡು ಬಂದಲ್ಲಿ ತಕ್ಷಣ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕೆಂದು ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಡಾ.ರವಿ ಸಾಲಿಗೌಡರ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಈಗಾಗಲೇ ಕೋಳಿ ಶೀತ ಜ್ವರ ಕಂಡುಬಂದಿರುತ್ತದೆ. ಇದು ಪಕ್ಷಿಗಳಲ್ಲಿನ ಮಾರಣಾಂತಿಕ ಕಾಯಿಲೆಯಾಗಿದ್ದು, ಶೇ.50ರಷ್ಟು ಕೋಳಿಗಳು ಸಾಯುವ ಸಂಭವ ಇರುತ್ತದೆ. ಇದು ಇನ್ಫ್ಲೂಯನ್ಸ ವೈರಸ್ (ಹೆಚ್ 5 ಎನ್ 1) ಸೋಂಕು. ಕೋಳಿಗಳಿಂದ ಮನುಷ್ಯರಿಗೆ ಈ ವೈರಸ್ ಹರಡುವ ಸಂಭವ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಕೋಳಿ ಮತ್ತು ಮೊಟ್ಟೆಯನ್ನು ಸೇವಿಸಲು ಯಾವುದೇ ನಿಬರ್ಂಧ ಇರುವುದಿಲ್ಲ. ಆದರೆ ಮೊಟ್ಟೆ ಮತ್ತು ಕೋಳಿ ಮಾಂಸವನ್ನು ಚೆನ್ನಾಗಿ ಬೇಯಿಸಿ ಆಹಾರವಾಗಿ ಉಪಯೋಗಿಸಬಹುದು ಎಂದಿದ್ದಾರೆ. ನಮ್ಮ ಭಾರತೀಯ ಅಡಿಗೆ ಪದ್ಧತಿಯಲ್ಲಿ ಈ ವೈರಸ್…

Read More

ಧಾರವಾಡ : ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ, ವೇತನ ಪತ್ರ, ಬ್ಯಾಂಕ್ ಸ್ಟೇಟ್‌ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು. ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು. ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು…

Read More

ಬೆಂಗಳೂರು: ಜಯನಗರ ಕ್ಷೇತ್ರದ ಕಾಂಗ್ರೆಸ್ ಮಾಜಿ ಸಚಿವೆ ಸೌಮ್ಯ ರೆಡ್ಡಿ ಅವರ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನೀಡಿದ್ದಂತ ತೀರ್ಪು ಪ್ರಶ್ನಿಸಿ ಶಾಸಕ ಸಿ.ಕೆ ರಾಮಮೂರ್ತಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂತಹ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ, ಬಿಗ್ ಶಾಕ್ ನೀಡಿದೆ. ಹೀಗಾಗಿ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿಗೆ ಸಂಕಷ್ಟ ಎದುರಾದಂತೆ ಆಗಿದೆ. ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಅವರ ಶಾಸಕ ಸ್ಥಾನ ಅಸಿಂಧುಗೊಳಿಸುವಂತ ಕೋರಿ ಮಾಜಿ ಶಾಸಕಿ ಸೌಮ್ಯಾರೆಡ್ಡಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಹೈಕೋರ್ಟ್ ನ್ಯಾಯಪೀಠವು ಡಿವಿಡಿ ಸೇರಿದಂತೆ 10 ದಾಖಲೆಗಳನ್ನು ಹಾಜರುಪಡಿಸುವಂತೆ ಸೂಚಿಸಿತ್ತು. ಫೆಬ್ರವರಿ.14ರವರೆಗೆ ಡಿವಿಡಿ ಸೇರಿದಂತೆ ಇತರೆ ದಾಖಲೆ ಸಲ್ಲಿಸಲು ಸೌಮ್ಯಾರೆಡ್ಡಿ ಅವರಿಗೆ ಹೈಕೋರ್ಟ್ ಅವಕಾಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಶಾಸಕ ಸಿ.ಕೆ ರಾಮಮೂರ್ತಿ ಸುಪ್ರೀಂ ಕೋರ್ಟ್ ಗೆ…

Read More

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿದೆ. ಈ ಸಮಯದಲ್ಲಿ ನೀವು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಸ್ವಲ್ಪ ಎಚ್ಚರ ತಪ್ಪಿದರೂ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಲು ಶುರುಮಾಡುತ್ತದೆ. ಈ ಕಾರಣಕ್ಕಾಗಿ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿ ಇರುವುದು ಒಳ್ಳೆಯದು.  ಕಾರ್ಮಿಕ ವರ್ಗಕ್ಕೆ ಸಲಹೆಗಳು ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಲೋಟ ಅಥವಾ ಅಧಕ್ಕಿಂತ ಹೆಚ್ಚು ನೀರು ಕುಡಿಯಬೇಕು. ನೆರಳಿನಲ್ಲಿ ಕೆಲಸ ನಿರ್ವಹಿಸಲು ಅನುಕೂಲವಾಗುವಂತೆ ತಾತ್ಕಾಲಿಕ ಶೆಡ್ ಗಳನ್ನು ನಿರ್ಮಿಸಿರಬೇಕು. ಹೊರಾಂಗಣ ಚಟುವಟಿಕೆಗಳಲ್ಲಿ ಕೆಲಸಗಾರರಿಗೆ ಪ್ರತಿ ಗಂಟೆಗೆ 5 ನಿಮಿಷಗಳ ಬಿಡುವು ನೀಡಬೇಕು. ಸೂರ್ಯನ ಕಿರಣಗಳು ನೇರವಾಗಿ ಮೈಮೇಲೆ ಬೀಳದಂತೆ ಕೆಲಸಾಗರರು ಎಚ್ಚರವಹಿಸಬೇಕು. ಶ್ರಮದಾಯಕ, ಹೊರಾಂಗಣ ಚಟುವಟಿಕೆಗಳನ್ನು ಬೆಳಿಗ್ಗೆ ಅಥವಾ ಸಂಜೆಯ ಸಮಯದಲ್ಲಿ ನಿರ್ವಹಿಸುವಂತೆ ವೇಳಾಪಟ್ಟಿಯನ್ನು ಸಿದ್ಧಗೊಳಿಸಬೇಕು. ಗರ್ಭಿಣಿಯರು, ನಿಗದಿತ ಅನಾರೋಗ್ಯ ಸಮಸ್ಯೆಗೆ ಔಷಧೋಪಚಾರ ಪಡೆಯುತ್ತಿರುವವರು ಬಿಸಿಲಿನಲ್ಲಿ ಕಾರ್ಯನಿರ್ವಹಿಸುವ ಮೊದಲು ವೈದ್ಯರ ಸಲಹೆ ಪಡೆಯಬೇಕು. https://twitter.com/KarnatakaVarthe/status/1896547816555848124 ಬಿಸಿಲ ಬೇಗೆಗೆ ದೇಹದ…

Read More